Subscribe to Updates
Get the latest creative news from FooBar about art, design and business.
- ಎಸ್ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
- ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
- ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
- ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
- ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
- ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
Author: admin
ಪಾವಗಡ: ಪ್ರಸಕ್ತ ಸಾಲಿಗೆ ಎಸ್ ಎಸ್ ಎಲ್ ಸಿ, ಸಿಬಿಎಸ್ ಸಿ ಪರೀಕ್ಷೆ ಫಲಿಶಾಂಶ ಪ್ರಕಟವಾಗಿದ್ದು ಸತತ ಮೂರನೇ ಭಾರಿಗೆ ಪಟ್ಡಣದ ಪ್ರತಿಷ್ಟಿತ ಶ್ರೀ ಶಾಲಾ ಇಂಟರ್ ನ್ಯಾಷನಲ್ ಸ್ಕೂಲ್ ಗೆ ಶೇ. ನೂರರಷ್ಟು ಫಲಿತಾಂಶ ಲಭ್ಯವಾಗಿದೆ. ಪಟ್ಟಣದ ಚಳ್ಳಕೆರೆ ರಸ್ತೆ ಮಾರ್ಗದ ಪಕ್ಕದಲ್ಲಿರುವ ಶ್ರೀ ಶಾಲಾ ಇಂಟರ್ ನ್ಯಾಷನಲ್ ಸ್ಕೂಲ್ ಗೆ ಈ ಭಾರಿಯು ಶೇ. 100ರಷ್ಟು ಫಲಿತಾಂಶ ಲಭಿಸಿದೆ. ಜೆ.ಆಕರ್ಷಣಿ ಶೇ.90, ಹಾಗೂ ದ್ವಿತೀಯ ಸ್ಥಾನ ಶಾಲಿನಿ ಶೇ.86.6 ಹಾಗೂ ತೃತೀಯ ಸ್ಥಾನ ದೀಕ್ಷಿತ್ ಶೇ.88.2ರಷ್ಟು ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ನಗರದ ಪ್ರತಿಷ್ಟಿತ ಶಾಲೆಯಾದ ಶ್ರೀ ಶಾಲಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಪ್ರಸಕ್ತ ಸಾಲಿಗೆ 36 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 8ಮಂದಿ ಡಿಸ್ಟೆಂಕ್ಷನ್ 20ಮಂದಿ ಪ್ರಥಮ ಶ್ರೇಣಿ ಹಾಗೂ 8ಮಂದಿ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಮೂರನೇ ಭಾರಿಗೂ ಸಿಬಿಎಸ್ ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಶಾಲೆಗೆ ಲಭಿಸಿದೆ. ತಾಲೂಕಿನಲ್ಲಿಯೇ…
ತಮಿಳುನಾಡು: ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರು ಅಪ್ರಾಪ್ತರು ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ. ಇಬ್ಬರು ಬಾಲಕಿಯರು 13 ಮತ್ತು 17 ವರ್ಷ ವಯಸ್ಸಿನವರಾಗಿದ್ದು, 17 ವರ್ಷದ ಬಾಲಕಿ ಗರ್ಭಿಣಿಯಾಗಿದ್ದು, ಆಕೆಯ ಸಂಬಂಧಿಕರಿಗೆ ಮಾಹಿತಿ ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಬಾಲಕಿ ಶಾಲೆಯನ್ನು ತೊರೆದು ಕೆಲಸಕ್ಕಾಗಿ ಹುಡುಕುತ್ತಿದ್ದಾಗ 15 ವರ್ಷದ ಬಾಲಕ ಅವಳೊಂದಿಗೆ ಸ್ನೇಹ ಬೆಳೆಸಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಆಕೆಗೆ ಕೆಲಸ ಕೊಡಿಸುವ ನೆಪದಲ್ಲಿ, 15 ವರ್ಷದ ಬಾಲಕ ಆಕೆಯನ್ನು ತನ್ನ ಇಬ್ಬರು ಸ್ನೇಹಿತರ ಬಳಿ ಕರೆದೊಯ್ದಿದ್ದಾನೆ, ಅವರು ಜನವರಿಯಿಂದ ಅನೇಕ ಬಾರಿ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ. ಬಾಲಕರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಸಾಲ ತೀರಿಸಲು ಮನೆ ಮಾಲಕಿಯನ್ನೇ ಹತ್ಯೆ ಮಾಡಿದ್ದ ಯುವತಿಯನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಮೋನಿಕಾ (24) ಬಂಧಿತ ಆರೋಪಿಯಾಗಿದ್ದಾರೆ. ಘಟನೆಯ ಹಿನ್ನಲೆ: ಮೇ 10 ರಂದು ಕೆಂಗೇರಿ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಒಂಟಿ ಮಹಿಳೆಯ ಕೊಲೆ ನಡೆದಿತ್ತು. ಕಂಪನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡಿದ್ದ ಮೋನಿಕಾ ಮೂಲತಃ ಕೋಲಾರ ಜಿಲ್ಲೆಯವಳಾಗಿದ್ದು, ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಗುರುಮೂರ್ತಿ ಎಂಬುವರ ಮನೆಯಲ್ಲಿ ಮೂರು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದಳು. ಈ ವೇಳೆ ಆಕೆ ಪ್ರಿಯಕರನನ್ನೇ ತನ್ನ ಗಂಡ ಎಂದು ಹೇಳಿ ಬಾಡಿಗೆ ಮನೆ ಗಿಟ್ಟಿಸಿದ್ದಳು. ಆದರೆ ಒಬ್ಬಂಟಿಯಾಗಿ ವಾಸವಿದ್ದ ಮೋನಿಕಾ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ. ಇತ್ತ ಮೋನಿಕಾ ಶೋಕಿಗಾಗಿ ವಿಪರೀತ ಕೈಸಾಲ ಮಾಡಿಕೊಂಡಿದ್ದಳು. ಜೊತೆ ಪ್ರಿಯಕರನಿಗೆ ಟಾಟಾ ಏಸ್ ವಾಹನ ಖರೀದಿಸಲು ಹಣ ಬೇಕಾಗಿತ್ತು. ಹೀಗಾಗಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಮೋನಿಕಾ ಕಣ್ಣು ಬಿದ್ದಿತ್ತು. ದಿವ್ಯ ಪತಿ ಗುರುಮೂರ್ತಿ…
ನವದೆಹಲಿ: 370 ನೇ ವಿಧಿಯನ್ನ ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಮತದಾನದ ಶೇಕಡಾವಾರು ಫಲಿತಾಂಶಗಳನ್ನ ತೋರಿಸುತ್ತಿದೆ ಮತ್ತು ಪ್ರಜಾಪ್ರಭುತ್ವದಲ್ಲಿ ಜನರ ನಂಬಿಕೆಯನ್ನ ಹೆಚ್ಚಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸಾರ್ವತ್ರಿಕ ಚುನಾವಣೆಯ 4ನೇ ಹಂತದ ಮತದಾನ ನಡೆದ ಶ್ರೀನಗರ ಲೋಕಸಭಾ ಕ್ಷೇತ್ರದಲ್ಲಿ ಸುಮಾರು 38 ಪ್ರತಿಶತದಷ್ಟು ಮತದಾನ ದಾಖಲಾದ ಒಂದು ದಿನದ ನಂತರ ಗೃಹ ಸಚಿವರ ಹೇಳಿಕೆ ಬಂದಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಶ್ರೀನಗರದಲ್ಲಿ ಶೇ.14.43, 2014ರಲ್ಲಿ ಶೇ.25.86, 2009ರಲ್ಲಿ ಶೇ.25.55 ಹಾಗೂ 2004ರಲ್ಲಿ ಶೇ.18.57ರಷ್ಟು ಮತದಾನವಾಗಿತ್ತು. “370 ನೇ ವಿಧಿಯನ್ನು ರದ್ದುಗೊಳಿಸುವ ಮೋದಿ ಸರ್ಕಾರದ ನಿರ್ಧಾರವು ಮತದಾನದ ಶೇಕಡಾವಾರು ಫಲಿತಾಂಶಗಳನ್ನ ತೋರಿಸುತ್ತಿದೆ. ಇದು ಪ್ರಜಾಪ್ರಭುತ್ವದಲ್ಲಿ ಜನರ ನಂಬಿಕೆಯನ್ನ ಹೆಚ್ಚಿಸಿದೆ ಮತ್ತು ಅದರ ಬೇರುಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಆಳವಾಗಿವೆ” ಎಂದು ಅವರು ಬರೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಬೆಂಗಳೂರು: ಪರೀಕ್ಷೆಗೆ ತಡವಾಗಿ ಬಂದಿದ್ದಕ್ಕೆ ಪೇಪರ್ ಬರೆಯಲು ಅನುಮತಿ ಸಿಗದ ಕಾರಣ ಮನನೊಂದ ಇಂಜಿನಿಯರಿಂಗ್ ವಿದ್ಯಾರ್ಥಿ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕರಸಾಲ ರಾಹುಲ್(21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ. ಎಲೆಕ್ಟ್ರಾನಿಕ್ ಸಿಟಿಯ ಪಿಇಎಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ 5ನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದ ಈತನಿಗೆ ತಡವಾಗಿ ಬಂದ ಹಿನ್ನೆಲೆ ಪರೀಕ್ಷಗೆ ಕೂರಲು ಅನುಮತಿ ನೀಡದೇ ನಿಂದಿಸಿದ್ದು ಕಾಲೇಜಿನಿಂದ ಹೊರಹಾಕಿದ್ದಾರೆ ಎನ್ನಲಾಗಿದೆ. ಇದರಿಂದ ಮನನೊಂದ ಯುವಕ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಕಾಲೇಜು ಆಡಳಿತ ಮಂಡಳಿ ಅವರ ವಿರುದ್ಧ ಪೋಷಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಾಲಿವುಡ್ನ ಖ್ಯಾತ ನಟ ಟೊವಿನೋ ಥಾಮಸ್ ಮತ್ತು ನಿರ್ದೇಶಕ ಸನಲ್ ಕುಮಾರ್ ಶಶಿಧರನ್ ನಡುವಿನ ಜಗಳ ದಿನಕ್ಕೊಂದು ರೀತಿಯಲ್ಲಿ ತಿರುವು ಪಡೆದುಕೊಳ್ಳುತ್ತಿದೆ. ಸನಲ್ ಕುಮಾರ್ ಶಶಿಧರನ್ ನಿರ್ದೇಶನದಲ್ಲಿ ‘ವಳಕ್ಕು’ ಸಿನಿಮಾ ಮೂಡಿಬಂದಿದ್ದು, ಚಿತ್ರದ ಪ್ರಮುಖ ಪಾತ್ರದಲ್ಲಿ ಟೊವಿನೋ ಥಾಮಸ್ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಟೊವಿನೋ ಬಂಡವಾಳ ಕೂಡ ಹೂಡಿದ್ದಾರೆ. ಸಿನಿಮಾದ ಬಿಡುಗಡೆಗೆ ಸಂಬಂಧಿಸಿದಂತೆ ಟೊವಿನೋ ಥಾಮಸ್ ಮೂಗು ತೂರಿಸುತ್ತಿದ್ದಾರೆ ಎಂದು ಈ ಮೊದಲು ಸನಲ್ ಕುಮಾರ್ ಶಶಿಧರನ್ ಆರೋಪಿಸಿದ್ದರು. ಈ ಸಿನಿಮಾ ಸಿದ್ಧವಾಗಿ ಬಹಳ ಸಮಯ ಕಳೆದಿದೆ. ಆದರೆ ಹೀರೋ ಮತ್ತು ನಿರ್ದೇಶಕನ ನಡುವೆ ಕೆಲವು ವಿಚಾರಗಳು ಇತ್ಯರ್ಥ ಆಗದ ಕಾರಣ ಇದರ ಬಿಡುಗಡೆ ತಡವಾಗಿದೆ. ಇದರಿಂದ ನಿರ್ದೇಶಕ ಸನಲ್ ಕುಮಾರ್ ಶಶಿಧರನ್ ರೋಸಿ ಹೋಗಿದ್ದಾರೆ. ಆದರೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗುವುದಕ್ಕೂ ಮುನ್ನವೇ ಆನ್ ಲೈನ್ ನಲ್ಲಿ ಈ ಸಿನಿಮಾವನ್ನು ಸನಲ್ ಕುಮಾರ್ ಶಶಿಧರನ್ ಲೀಕ್ ಮಾಡಿದ್ದಾರೆ. ‘ವಳಕ್ಕು’ ಸಿನಿಮಾದ ಬಿಡುಗಡೆ ವಿಚಾರವಾಗಿ ಟೊವಿನೋ ಥಾಮಸ್ ಮತ್ತು ಸನಲ್ ಕುಮಾರ್ ಶಶಿಧರನ್ ನಡುವೆ…
ಚಿಕ್ಕಮಗಳೂರು ಹದಿನೈದು ಮೆಟ್ರಿಕ್ ಟನ್ ಗಿಂತ ಅಧಿಕ ಬಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ಜಿಲ್ಲೆಯಲ್ಲಿ ನಿಷೇಧಿಸುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಶಾಸಕ ಎಚ್ ಡಿ ತಮ್ಮಯ್ಯ ಅವರನ್ನು ಒತ್ತಾಯಿಸಿದೆ. ಶಾಸಕರನ್ನು ನಗರದಲ್ಲಿ ಮಂಗಳವಾರ ಭೇಟಿ ಮಾಡಿದ ಸಂಘಟನೆಯ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು. ೧೫ ಮೆಟ್ರಿ ಟನ್ ಗಿಂತ ಅಧಿಕ ಭಾರ ಹೊತ್ತ ವಾಹನಗಳು ಹಲವಾರು ವರ್ಷಗಳಿಂದ ಜಿಲ್ಲೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿವೆ ಇದರಿಂದಾಗಿ ರಸ್ತೆಗಳು ಗುಂಡಿ ಬಿದ್ದು ಸಾರ್ವಜನಿಕರು ಮತ್ತು ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿದೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಆರೋಪಿಸಿದರು. ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ತಡೆಗಟ್ಟುವಂತೆ ಹಲವು ಬಾರಿ ಸಂಬಂಧಪಟ್ಟ ಇಲಾಖೆಗಳಿಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಈ ಸಂಬಂಧ ಜಿಲ್ಲಾಧಿಕಾರಿಗಳೂ ಸಹ ವಾಹನ ತಡೆಗಟ್ಟುವಂತೆ ಆದೇಶ ನೀಡಿದ್ದಾರೆ ಎಂದು ತಿಳಿಸಿದರು. ರಾಜ್ಯ ಉಚ್ಚ ನ್ಯಾಯಾಲಯ ಸಹ ೧೫ ಮೆಟ್ರಿಕ್ ಟನ್ ಗಿಂತ ಅಧಿಕ ಭಾರ ಹೊತ್ತು…
ಬೆಂಗಳೂರು: ವಾಹನ ಚಾಲಕರಿಗೆ ಟ್ರಾಫಿಕ್ ಪೊಲೀಸರು ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ಆ ಮೂಲಕ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೆಚ್ಚಾಗುತ್ತಿರುವ ಅಪಘಾತ ಪ್ರಕರಣಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ. ಇನ್ನು ಮುಂದೆ ಪ್ರತಿ ಗಂಟೆಗೆ 80 ಕಿಲೋಮೀಟರ್ ವೇಗದಲ್ಲಿ ಮಾತ್ರ ವಿಮಾನ ನಿಲ್ದಾಣ ರಸ್ತೆಯಲ್ಲಿ ವಾಹನ ಚಾಲನೆ ಮಾಡಬೇಕು. ಒಂದು ವೇಳೆ ಮೀತಿ ಮೀರಿದರೆ ಓವರ್ ಸ್ಪೀಡ್. ಕಳೆದ ಆರು ತಿಂಗಳಿಂದ ಹೆಚ್ಚಾಗಿ ಈ ರಸ್ತೆಯಲ್ಲಿ ಅಪಘಾತ ಪ್ರಕರಣಗಳು ಓವರ್ ಸ್ಪೀಡ್ ನಿಂದ ದಾಖಲಾಗಿರುತ್ತದೆ. ಅತಿ ವೇಗವಾಗಿ ಚಾಲನೆ ಮಾಡುತ್ತಿರುವ ವಾಹನಗಳಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿದೆ ಎಂದು ತಿಳಿದುಬಂದಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಸ್ವಯಂ ಚಾಲಿತವಾಗಿ ಪತ್ತೆ ಚ್ಚುವ 8 ಸ್ಪೀಡೋ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಕೆಆರ್ ಪುರದ ಹೆಬ್ಬಾಳ ಮೇಲ್ಸೇತುವೆಯ ರ‍್ಯಾಂಪ್ ಅಪ್ ಮುಚ್ಚುವ ಕಾಮಗಾರಿ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಮೇ 14ರಿಂದ ಹೆಬ್ಬಾಳ ಫ್ಲೈಓವರ್ ಮೇಲೆ ಪ್ರಯಾಣಿಕರ ಸಂಚಾರವನ್ನು ನಿರ್ಬಂಧಿಸಲಾಗಿದೆ. ಹೆಬ್ಬಾಳ ಮೇಲ್ಸೇತುವೆಯನ್ನು…
ಇತ್ತೀಚಿನ ದಿನಗಳಲ್ಲಿ ವೃತ್ತಿಜೀವನ, ತಡವಾಗಿ ಮದುವೆ ಮತ್ತು ಲೇಟ್ ಬೇಬಿ ಪ್ಲಾನಿಂಗ್ ಸಾಮಾನ್ಯವಾಗುತ್ತಿದೆ, ಅಂತಹ ಪರಿಸ್ಥಿತಿಯಲ್ಲಿ, ಮಹಿಳೆಯರು ತುಂಬಾ ವಯಸ್ಸಾದಾಗ ಮಗುವನ್ನು ಯೋಜಿಸುತ್ತಾರೆ. ಇದರಿಂದಾಗಿ ಗರ್ಭಪಾತದ ಪ್ರಕರಣಗಳು ಮೊದಲಿಗಿಂತ ಹೆಚ್ಚಾಗಿ ಮಹಿಳೆಯರಲ್ಲಿ ಕಂಡುಬರುತ್ತವೆ . ಇದಲ್ಲದೆ, ಮಹಿಳೆಯರಲ್ಲಿ ಗರ್ಭಪಾತದ ಅಪಾಯವು ಹೆಚ್ಚಾಗಲು ಹಲವು ಕಾರಣಗಳಿವೆ. ವಯಸ್ಸು ಹೆಚ್ಚಾದಂತೆ ಮಹಿಳೆಯರಲ್ಲಿ ಅನೇಕ ಸಮಸ್ಯೆಗಳು ಉದ್ಭವಿಸಲು ಪ್ರಾರಂಭಿಸುತ್ತವೆ. ಅದರಲ್ಲಿ ಗರ್ಭಾಶಯದಲ್ಲಿ ಕಡಿಮೆ ಮೊಟ್ಟೆಗಳು ಮತ್ತು ಕಳಪೆ ಗುಣಮಟ್ಟದ ಮೊಟ್ಟೆಗಳು ಉತ್ಪತ್ತಿಯಾಗುತ್ತವೆ. ನೀವು 30-35 ವರ್ಷ ವಯಸ್ಸಿನ ನಂತರ ಮಗುವನ್ನು ಹೊಂದುವ ಬಗ್ಗೆ ಯೋಚಿಸಿದಾಗ, ನೀವು ಮಗುವನ್ನು ಹೊಂದುವಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತೀರಿ, ಅವುಗಳಲ್ಲಿ ಒಂದು ಸಾಮಾನ್ಯವಾಗಿದೆ ಗರ್ಭಧರಿಸುವಲ್ಲಿ ತೊಂದರೆ ಮತ್ತು ನೀವು ಗರ್ಭಧರಿಸಿದರೆ ಗರ್ಭಪಾತದ ಸಮಸ್ಯೆ ಕಂಡುಬರುತ್ತದೆ. ಆದ್ದರಿಂದ, 25 ರಿಂದ 30 ವರ್ಷ ವಯಸ್ಸಿನವರು ಮಕ್ಕಳನ್ನು ಹೊಂದಲು ಉತ್ತಮ ವಯಸ್ಸು ಎಂದು ಪರಿಗಣಿಸಲಾಗುತ್ತದೆ. ಅನೇಕ ಹಾರ್ಮೋನುಗಳ ಸಮಸ್ಯೆಗಳು ಗರ್ಭಪಾತದ ಅಪಾಯವನ್ನು ಹೆಚ್ಚಿಸುತ್ತವೆ. ಅನೇಕ ರೀತಿಯ ಹಾರ್ಮೋನುಗಳು ಗರ್ಭಧಾರಣೆಯ ಮೇಲೆ ಪರಿಣಾಮ ಬೀರುತ್ತವೆ, ಆದ್ದರಿಂದ…
ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಅವರ ವಿಚ್ಛೇದಿತ ಪತ್ನಿ ಮೆಲಿಂದಾ ಫ್ರೆಂಚ್ ಗೇಟ್ಸ್ ಅವರು ಗೇಟ್ಸ್ ಫೌಂಡೇಶನ್ ಗೆ ರಾಜೀನಾಮೆ ನೀಡಿದ್ದಾರೆ. ಬಿಲ್ ಗೇಟ್ಸ್ ಜೊತೆ ವಿಚ್ಛೇದನ ಪಡೆದ ಮೂರು ವರ್ಷದ ಬಳಿಕ ಮಿಲಿಂಡಾ ಫ್ರೆಂಚ್ ಗೇಟ್ಸ್ ಅವರು ಬಿಲ್ ಆ್ಯಂಡ್ ಮಿಲಿಂಡಾ ಗೇಟ್ಸ್ ಫೌಂಡೇಷನ್ ನ ಸಹ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಿದ್ದಾರೆ. ವಿಶ್ವದ ಬಿಲಿಯನೇರ್ ಉದ್ಯಮಿ ಬಿಲ್ ಗೇಟ್ಸ್ 20 ವರ್ಷಗಳ ಹಿಂದೆ ಪತ್ನಿ ಮಿಲಿಂಡಾ ಜೊತೆ ಸೇರಿ ವಿಶ್ವದ ಅತೀ ದೊಡ್ಡ ಸಾಮಾಜಿಕ ಸೇವಾ ಸಂಸ್ಥೆ ಸ್ಥಾಪಿಸಿದ್ದರು. ಈ ಮೂಲಕ ವಿವಿಧ ದೇಶಗಳಲ್ಲಿ ಸಾಮಾಜಿಕ ಕಾರ್ಯ ನಿರ್ವಹಿಸಿದ್ದಾರೆ. “ಬಿಲ್ ಮತ್ತು ನಾನು ಒಟ್ಟಾಗಿ ನಿರ್ಮಿಸಿದ ಸಂಸ್ಥೆಯ ಬಗ್ಗೆ ನನಗೆ ಹೆಮ್ಮೆ ಇದೆ. ಇದರೊಂದಿಗೆ ನಾವು ಜಗತ್ತಿನೆಲ್ಲೆಡೆ ಅಸಾಮಾನತೆ ಪರಿಹಾರ ಸೇರಿದಂತೆ ಹಲವು ಅದ್ಭುತ ಕೆಲಸಗಳನ್ನು ಮಾಡಿದ್ದೇವೆ” ಎಂದು ಮಿಲಿಂಡಾ ತಿಳಿಸಿದ್ದಾರೆ. ಇದೇ ವೇಳೆ, ಫೌಂಡೇಷನ್ ಸಿಇಒ ಮಾರ್ಕ್ ಸುಜಾಮ್ಯಾನ್ ಅವರನ್ನು ಶ್ಲಾಘಿಸಿದ್ದಾರೆ. ಮಿಲಿಂಡಾ ರಾಜೀನಾಮೆಗೆ ಪ್ರತಿಕ್ರಿಯಿಸಿರುವ ಬಿಲ್ ಗೇಟ್ಸ್,…