Author: admin

ಇಸ್ರೇಲ್‌-ಹಮಾಸ್‌‍ ಸಂಘರ್ಷಕ್ಕೆ ವಿಶ್ವಸಂಸ್ಥೆಯಲ್ಲಿ ಕೆಲಸ ಮಾಡುವ ಭಾರತೀಯ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ. ಇಸ್ರೇಲ್-ಹಮಾಸ್‌ ಸಂಘರ್ಷ ಆರಂಭಗೊಂಡ ನಂತರ ವಿಶ್ವ ಸಂಸ್ಥೆಯ ಅಂತರರಾಷ್ಟ್ರೀಯ ಸಿಬ್ಬಂದಿಯೊಬ್ಬರು ಬಲಿಯಾದ ಮೊದಲ ಘಟನೆ ಇದಾಗಿದೆ. ಮೃತ ವ್ಯಕ್ತಿ ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತಾ ವಿಭಾಗದ ಸದಸ್ಯರಾಗಿದ್ದರು. ಜೊತೆಗೆ ಭಾರತೀಯ ಸೇನೆಯ ಮಾಜಿ ಸಿಬ್ಬಂದಿಯಾಗಿದ್ದರು ಎಂದು ತಿಳಿದುಬಂದಿದ್ದರೂ, ಅವರ ಗುರುತನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ ಎಂದು ಮೂಲಗಳು ತಿಳಿಸಿವೆ. ರಫಾದಲ್ಲಿ ಭಾರತೀಯ ವ್ಯಕ್ತಿಯ ಜೊತೆಗಿದ್ದ ಇನ್ನೊಬ್ಬ ವಿಶ್ವ ಸಂಸ್ಥೆಯ ಸಿಬ್ಬಂದಿ ಗಾಯಗೊಂಡಿದ್ದರು. ಅವರು ರಫಾದಲ್ಲಿರುವ ಯುರೋಪಿಯನ್‌ ಆಸ್ಪತ್ರೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿತ್ತು. ವಿಶ್ವಸಂಸ್ಥೆ ಸಿಬ್ಬಂದಿ ಮೇಲಿನ ಎಲ್ಲಾ ದಾಳಿಗಳನ್ನು ಗುಟೆರಸ್‌‍ ಖಂಡಿಸಿದ್ದಾರೆ ಮತ್ತು ಸಂಪೂರ್ಣ ತನಿಖೆಗೆ ಕರೆ ನೀಡಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿಯ ಉಪ ವಕ್ತಾರ ಫರ್ಹಾನ್‌ ಹಕ್‌ ಅವರು ಹೇಳಿಕೆ ನೀಡಿದ್ದಾರೆ. ವಿಶ್ವಸಂಸ್ಥೆ ವಾಹನವನ್ನು ಗಾಜಾದಲ್ಲಿ ಹೊಡೆದುರುಳಿಸಲಾಯಿತು, ನಮ ಸಹೋದ್ಯೋಗಿಗಳಲ್ಲಿ ಒಬ್ಬರು ಸಾವನ್ನಪ್ಪಿ ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಎಕ್ಸ್ ನಲ್ಲಿ ಗುಟೆರೆಸ್‌‍ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ತೋಟಗಾರಿಕೆ ಇಲಾಖೆಯಿಂದ ಮೇ 13ರಿಂದ ಮೇ 21ರ ವರೆಗೆ ಕೊಪ್ಪಳ ನಗರದ ಎಲ್.ಐ.ಸಿ ಆಫೀಸ್ ಹತ್ತಿರವಿರುವ ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಕೃಷ್ಣ ಸಿ.ಉಕ್ಕುಂದ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ತೋಟಗಾರಿಕೆ ಇಲಾಖೆವತಿಯಿಂದ 8ನೇ ವರ್ಷದ ಮಾವು ಮೇಳವನ್ನು ಮೇ 13 ರಿಂದ ಮೇ 21ರ ವರೆಗೆ ತೋಟಗಾರಿಕೆ ಇಲಾಖೆ (ಜಿಪಂ) ಕೊಪ್ಪಳ ಕಛೇರಿಯ ಆವರಣದಲ್ಲಿ ಆಯೋಜಿಸಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೇ 5000 ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ತಳಿಯ ಮಾವಿನ ಹಣ್ಣಿನ ಬೆಳೆಗಳನ್ನು ಬೆಳೆಯುತ್ತಿದ್ದು, ಇವುಗಳಲ್ಲಿ ಮುಖ್ಯವಾಗಿ ಕೇಸರ್ ತಳಿಯು…

Read More

ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಹಾಗೂ ದ್ವಿತೀಯ ರ್ಯಾಂಕ್ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ. ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿದರು. ಮಂಗಳವಾರ ತಮ್ಮ ಸರಕಾರಿ ನಿವಾಸ ಕಾವೇರಿಗೆ ಇಬ್ಬರೂ ವಿದ್ಯಾರ್ಥಿಗಳನ್ನು ಆಹ್ವಾನಿಸಿ ಸನ್ಮಾನಿಸಿದ ಮುಖ್ಯಮಂತ್ರಿ, ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಮುಂದಿನ ವಿದ್ಯಾಭ್ಯಾಸ ಯಶಸ್ವಿಯಾಗಿ ಸಾಗಲಿ ಎಂದು ಹಾರೈಸಿದರು. ಅಲ್ಲದೆ, ವಿದ್ಯಾರ್ಥಿಗಳ ಪೋಷಕರನ್ನು ಅಭಿನಂದಿಸಿದರು. ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್‍ಗೆ 3 ಲಕ್ಷ ರೂ.ಗಳ ನೆರವನ್ನು ಘೋಷಿಸಿದ ಮುಖ್ಯಮಂತ್ರಿ, ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆ ನನ್ನ ಕಲ್ಪನೆ. 1994ರಲ್ಲಿ ಉಪ…

Read More

ಬೆಂಗಳೂರು: ಸರಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ಹಣ ಪಡೆದು ವಂಚಿಸುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಇಲ್ಲಿನ ವಿಜಯನಗರ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಬೆಂಗಳೂರಿನ ಸಿಐಡಿ ಘಟಕದಲ್ಲಿ ಸೆಕ್ಷನ್ ಸೂಪರಿಂಟೆಂಡೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಅನಿತಾ ಬಿ.ಎಸ್. ಹಾಗೂ ರಾಮಚಂದ್ರ ಭಟ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಚಿಕ್ಕಮಗಳೂರಿನ ಕಲ್ಯಾಣನಗರದ ನಿವಾಸಿ ಸುನಿಲ್ ಎಂಬುವವರು ವಿಜಯನಗರ ಠಾಣೆಗೆ ದೂರು ನೀಡಿದ್ದರು. 2021ರಲ್ಲಿ ಸ್ನೇಹಿತರೊಬ್ಬರ ಮೂಲಕ ಸುನಿಲ್ ಅವರಿಗೆ ರಾಮಚಂದ್ರ ಭಟ್ ಪರಿಚಯವಾಗಿತ್ತು. ‘ತನಗೆ ಬೆಂಗಳೂರಿನ ಸಿಐಡಿ ಘಟಕ ಸೆಕ್ಷನ್ ಸೂಪರಿಂಟೆಂಡೆಂಟ್ ಆಗಿರುವ ಅನಿತಾ ಎಂಬುವವರ ಪರಿಚಯವಿದೆ. ಅವರಿಗೆ ಕೆಪಿಎಸ್‍ ಸಿ ಹಾಗೂ ಸರಕಾರದ ಉನ್ನತ ಹುದ್ದೆಯಲ್ಲಿರುವ ಹಲವು ಪ್ರಭಾವಿ ವ್ಯಕ್ತಿಗಳ ಸಂಪರ್ಕವಿದ್ದು, ನಿಮಗೆ ಸರಕಾರಿ ಕೆಲಸ ಕೊಡಿಸುತ್ತೇನೆ’ ಎಂದು ರಾಮಚಂದ್ರ ಭಟ್ ನಂಬಿಸಿದ್ದ. ಪ್ರತಿಯಾಗಿ ಅನಿತಾ ಅವರು ಕೇಳಿದಷ್ಟು ಹಣ ಹೊಂದಿಸಿ ಕೊಡಬೇಕೆಂದು ತಿಳಿಸಿದ್ದ ಎನ್ನಲಾಗಿದೆ. ಬಳಿಕ ಅನಿತಾಳನ್ನು ಸಿಐಡಿ ಕಚೇರಿಯಲ್ಲೇ ಸುನಿಲ್‍ ಗೆ ಭೇಟಿ…

Read More

ಒಂದು ವಾರದ ಹಿಂದೆ ದಕ್ಷಿಣ ಆಫ್ರಿಕಾದ ಕರಾವಳಿಯ ಜಾರ್ಜ್ ನಗರದಲ್ಲಿ ನಿರ್ಮಾಣ ಹಂತದ ಅಪಾರ್ಟ್‌ಮೆಂಟ್ ಕಟ್ಟಡ ಕುಸಿದುಬಿದ್ದ ಘಟನೆಯಲ್ಲಿ, ಸಾವಿನ ಸಂಖ್ಯೆ 32ಕ್ಕೆ ಏರಿಕೆ ಆಗಿದೆ. ಅವಶೇಷಗಳಡಿ ಬದುಕುಳಿದವರನ್ನು ಹುಡುಕುವ ಪ್ರಯತ್ನ ನಿರಂತರವಾಗಿ ನಡೆಯುತ್ತಿವೆ ಎಂದು ಸಿಬ್ಬಂದಿಗಳು ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕನೊಬ್ಬನನ್ನು ರಕ್ಷಿಸಲಾಗಿದೆ. ಈತ ಆಹಾರ, ನೀರಿಲ್ಲದೆ ಆರು ದಿನಗಳ ಕಾಲ ಅವಶೇಷಗಳಡಿ ಸಿಲುಕಿದ್ದ. ರಕ್ಷಣಾ ಸಿಬ್ಬಂದಿ ಈ ಕಾರ್ಮಿಕನನ್ನು ಜೀವಂತವಾಗಿ ಹೊರತಂದಾಗ ಅಲ್ಲಿ ನೆರೆದಿದ್ದವರ ಕಣ್ಣಾಲಿಗಳು ತೇವಗೊಂಡಿದ್ದವು. ಆರು ದಿನಗಳ ಬಳಿಕ ಬದುಕುಳಿದ ವ್ಯಕ್ತಿಯ ಹೆಸರು ಗಬ್ರಿಯೇಲ್ ಗುವಾಂಬೆ (32). ಸದ್ಯ ಈತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅವಶೇಷಗಳಡಿ ಇನ್ನೂ ಹಲವರು ಬದುಕಿರುವ ಸಾಧ್ಯತೆ ಇದ್ದು, ಕಾರ್ಯಾಚರಣೆ ತೀವ್ರಗೊಂಡಿದೆ. ಸಾವಿನ ಸಂಖ್ಯೆಯೂ ಹೆಚ್ಚುತ್ತಲೇ ಇದೆ. ಸೋಮವಾರ 11 ಶವಗಳನ್ನು ಹೊರತೆಗೆಯಲಾಗಿದ್ದು, ಇನ್ನೂ 20 ಕಾರ್ಮಿಕರು ಕಾಣೆಯಾಗಿದ್ದಾರೆ. ಮೇ 6ರಂದು ಕಟ್ಟಡ ಕುಸಿದು ಬಿದ್ದಿದ್ದು, 600ಕ್ಕೂ ಹೆಚ್ಚು ತುರ್ತು…

Read More

ತಿಪಟೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಾಂತ್ರಿಕತೆ ಮತ್ತು ಆಧುನಿಕ ಯುಗದಲ್ಲಿನ ಸವಾಲುಗಳನ್ನು ಮೆಟ್ಟಿ ನಿಲ್ಲುವುದು ಅನಿವಾರ್ಯ ಎಂದು, ತಿಪಟೂರು ನಗರದ ಟ್ಯಾಗೋರ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಾಕ್ಟರ್ ಆರ್.ವಿ. ಅನಿಲ್ ತಿಳಿಸಿದರು. ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಟ್ಯಾಗೋರ್ ಶಿಕ್ಷಣ ಸಂಸ್ಥೆಯಿಂದ ಶೇಖಡ ನೂರರಷ್ಟು ಫಲಿತಾಂಶ ಬಂದಿದ್ದು, ಸಮಸ್ಯೆ 53 ವರ್ಷಗಳಿಂದ ನಗರ ಪ್ರದೇಶದಲ್ಲಿ ತಾಲೂಕಿನ ಮಕ್ಕಳ ಮನಸ್ಥಿತಿ ಮತ್ತು ಬಾಲಕರ ಆರ್ಥಿಕ ಸ್ಥಿತಿಗತಿ ಅರಿತುಕೊಂಡು, ನಗರ ಪ್ರದೇಶದ ಮಕ್ಕಳಿಗೆ ಸರಿಸಮಾನವಾದ ಶಿಕ್ಷಣವನ್ನು ಕೊಡುವ ನಿಟ್ಟಿನಲ್ಲಿ ಟ್ಯಾಗೋರ್ ವಿದ್ಯಾಸಂಸ್ಥೆ, ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ತಾಂತ್ರಿಕ ವಿಭಾಗದ ಮುಖ್ಯಸ್ಥ ಎಂ.ಜೆ. ಶ್ರೀಕಾಂತ್, ಪ್ರಧಾನ ಕಾರ್ಯದರ್ಶಿ ಕೆ. ಶಶಿಕಲಾ ಮತ್ತಿತರರು ಭಾಗವಹಿಸಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ:…

Read More

ನವದೆಹಲಿ: ಕ್ಯಾನ್ಸರ್‌ ರೋಗಿಗಳಿಗೆ ಝೈಡಸ್‌ ಕಂಪನಿ ಭರ್ಜರಿ ಶುಭ ಸುದ್ದಿ ನೀಡಿದೆ.  72 ಲಕ್ಷ ರೂ. ತಗಲುತ್ತಿದ್ದ ಔಷಧಿ ಇನ್ನು ಕೇವಲ 3 ಲಕ್ಷ ರೂ.ಗಳಿಗೆ ಲಭ್ಯವಾಗಲಿದೆ ಎಂದು ಝೈಡಸ್‌ ಲೈಫ್‌ ಸೈನ್ಸಸ್‌ ಔಷಧ ಕಂಪನಿ ಮಾಹಿತಿ ನೀಡಿದೆ. ಔಷಧ ತಯಾರಿಸಿದ್ದ ಮೂಲ ಕಂಪನಿಯ ಪೇಟೆಂಟ್‌ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಮೂಲ ಔಷದಧ ಜೆನೆರಿಕ್‌ ಮಾದರಿ ಬಿಡುಗಡೆ ಮಾಡಲಾಗಿದೆ ಎಂದು ಝೈಡಸ್‌ ಕಂಪನಿ ನೀಡಿದೆ. ಭಾರತದಲ್ಲಿ ಪ್ರತಿ ವರ್ಷ 14 ಲಕ್ಷ ಜನರಲ್ಲಿ ಕ್ಯಾನ್ಸರ್‌ ಪತ್ತೆಯಾಗುತ್ತದೆ. ಈ ಪೈಕಿ 2.75 ಲಕ್ಷ ಜನರು ಸ್ತನ, ಗರ್ಭಕೋಶ, ಮೇಜೋಜೀರಕ ಗ್ರಂಥಿಯ ಕ್ಯಾನ್ಸರ್‌ಗೆ ತುತ್ತಾಗುತ್ತಾರೆ. ಇದನ್ನು ಗುಣಪಡಿಸಲು ಓಲಾ ಪರಿಬ್‌ ಅನ್ನು ಬಳಸಲಾಗುತ್ತದೆ. ಒಂದು ವರ್ಷದ ಚಿಕಿತ್ಸೆಗೆ ಇದುವರೆಗೂ 75 ಲಕ್ಷ ರೂ.ಗಳನ್ನು ಔಷಧಕ್ಕಾಗಿ ವ್ಯಯಿಸಬೇಕಿತ್ತು. ಆದರೆ ಅದೇ ಔಷಧಿ ಇನ್ನು ಕೇವಲ 3 ಲಕ್ಷ ರೂ.ಗೆ ಸಿಗಲಿದೆ ಎಂದು ಕಂಪನಿ ಮಾಹಿತಿ ನೀಡಿದೆ. ಟಾಟಾ ಇನ್‌ಸ್ಟಿಟ್ಯೂಟ್‌ ನಿಂದ 100 ರೂಪಾಯಿಯ ಮಾತ್ರೆ: ಒಮ್ಮೆ…

Read More

ತೆಲುಗು ಚಿತ್ರರಂಗದ ಸ್ಟಾರ್ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಆಂಧ್ರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಪೀಠಾಪುರಂ‌ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದಾರೆ. ಜನಸೇನಾ ಪಕ್ಷದ ಸಂಸ್ಥಾಪಕರೂ ಆಗಿರುವ ಪವನ್ ಕಲ್ಯಾಣ್ ಕಳೆದ ಕೆಲ ವರ್ಷದಿಂದಲೂ ಆಂಧ್ರದ ಆಡಳಿತ ಪಕ್ಷ ವೈಸಿಪಿ ವಿರುದ್ಧ ಹೋರಾಟ ‌ನಡೆಸುತ್ತಿದ್ದು, ಪಕ್ಷವನ್ನು ಅಧಿಕಾರದಿಂದ ಇಳಿಸಲೇಬೇಕೆಂಬ ಹಠ ತೊಟ್ಟಿದ್ದಾರೆ. ಅಂತೆಯೇ ಪವನ್ ಕಲ್ಯಾಣ್ ಪರವಾಗಿ ರಾಮ್ ಚರಣ್ ತೇಜ ಸೇರಿದಂತೆ ಇನ್ನೂ ಕೆಲವು ಸೆಲೆಬ್ರಿಟಿಗಳು ಪೀಠಾಪುರಂ ಗೆ ತೆರಳಿ ಪ್ರಚಾರ ಸಹ ಮಾಡಿದ್ದಾರೆ. ಆದರೆ ಮೆಗಾಸ್ಟಾರ್ ಕುಟುಂಬಕ್ಕೆ ಸೇರಿದ ಅಲ್ಲು ಅರ್ಜುನ್ ಮಾತ್ರ, ಪವನ್ ರ ಎದುರಾಳಿ ಪಕ್ಷವಾದ ವೈಸಿಪಿ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿದ್ದರು. ಇದು ಮೆಗಾಸ್ಟಾರ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ತಮ್ಮ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ಎದುರಾದ ಬೆನ್ನಲ್ಲೆ ಇದೀಗ ಅಲ್ಲು ಅರ್ಜುನ್ ಸ್ಪಷ್ಟನೆ ನೀಡಿದ್ದಾರೆ. ‘ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸಂಭಂಧಿಸಿದ ವ್ಯಕ್ತಿಯಲ್ಲ. ರಾಜಕೀಯ ಪಕ್ಷಗಳ ವಿಷಯದಲ್ಲಿ ನಾನು ತಟಸ್ಥ. ಚಿಕ್ಕಪ್ಪ ಪವನ್ ಕ್ಯಲ್ಯಾಣ್…

Read More

ಚಾಮರಾಜನಗರ: ಒಂದು ಕಡೆ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದರೆ, ಮತ್ತೊಂದೆಡೆ ಮಳೆಗಾಗಿ ಮಕ್ಕಳಿಂದ ಬಸವನ ಪೂಜೆ ಮಾಡಲಾಗಿದೆ.  ಮಳೆಗಾಗಿ ಪ್ರಾರ್ಥಿಸಿದ ರಾಮಸಮುದ್ರ ಗ್ರಾಮದ ಪುಟಾಣಿ ಮಕ್ಕಳಿಂದ ಬಸವನ ಮೆರವಣಿಗೆ ನಡೆದಿದೆ. ಗಡಿ ಜಿಲ್ಲೆ ಚಾಮರಾಜನಗರದ ರಾಮಸಮುದ್ರ ಬಡಾವಣೆಯಲ್ಲಿ ಮಂಗಳವಾರ ಸಂಜೆ 4 ಗಂಟೆ ವೇಳೆಯಲ್ಲಿ ಪುಟಾಣಿ ಮಕ್ಕಳಿಂದ ಬಸವನ ಪೂಜೆಗೈದು ಮಳೆಗಾಗಿ ಪ್ರಾರ್ಥಿಸಿದರು. ಚಾಮರಾಜನಗರ ಜಿಲ್ಲೆಯ ಹಲವೆಡೆ ಮಳೆ ಸುರಿದರೂ‌ಕೂಡ ರಾಮಸಮುದ್ರ, ಸುತ್ತಾಮುತ್ತಾ ಮಳೆ ಮಾಯವಾಗಿದ್ದು, ಮಳೆ ಇಲ್ಲದೆ ಬರದಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಹೀಗಾಗಿ ಮಳೆಗಾಗಿ ಜನತೆ ಬಸವಣ ಮೊರೆ ಹೋಗಿದ್ದಾರೆ. ಮಳೆಯಾಗದಿದ್ರೆ ಮಕ್ಕಳು ಬಸವನ ಮರದ ಮೂರ್ತಿಗೆ ಪೂಜೆ ಸಲ್ಲಿಸಿ ಮನೆಮನೆಗೆ ತೆರಳಿ ನೀರು ಹಾಕಿಸಿಕೊಂಡರೆ ಮಳೆ ಸುರಿಯುತ್ತೆ ಎಂಬುದು ಹಿರಿಯರ ನಂಬಿಕೆ. ಬಸವನ ಮೂರ್ತಿಗೆ ಅಲಂಕಾರ ಮಾಡಿ ರಾಮಸಮುದ್ರದ ಬಸವೇಶ್ವರ ದೇವಸ್ಥಾನದಲ್ಲಿ ಪುಟಾಣಿ ಮಕ್ಕಳು ಪೂಜೆ ಸಲ್ಲಿಸಿದ್ದಾರೆ. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಮಳೆಗಾಗಿ ಪುಟಾಣಿಗಳು ಪ್ರಾರ್ಥಿಸಿದರು. ಇಡೀ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದ್ದರೆ,…

Read More

ಬೆಂಗಳೂರು: ಬಿಟ್ ಕಾಯಿನ್ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‍ಐಟಿ) ಅಧಿಕಾರಿಗಳು ಹಿರಿಯ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರಿಗೆ ಎರಡನೇ ಬಾರಿ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರುವುದಾಗಿ ವರದಿಯಾಗಿದೆ. ಪ್ರಕರಣದ ಈ ಹಿಂದಿನ ತನಿಖಾಧಿಕಾರಿಯಾಗಿರುವ ಸಂದೀಪ್ ಪಾಟೀಲ್ ಅವರಿಗೆ ಎರಡನೇ ಬಾರಿ ನೋಟಿಸ್ ನೀಡಲಾಗಿದ್ದು, ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ನೋಟಿಸ್‍ ನಲ್ಲಿ ತಿಳಿಸಲಾಗಿದೆ ಎಂದು ಎಸ್‍ಐಟಿ ಮೂಲಗಳು ತಿಳಿಸಿವೆ. ತನಿಖೆಯ ಭಾಗವಾಗಿ ಈ ಹಿಂದೆಯೂ ವಿಚಾರಣೆಗೆ ಹಾಜರಾಗುವಂತೆ ಸಂದೀಪ್ ಪಾಟೀಲ್ ಅವರಿಗೆ ನೋಟಿಸ್ ನೀಡಲಾಗಿತ್ತು. ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹಾಗೂ ಎಸ್‍ಐಟಿ ಮುಖ್ಯಸ್ಥರಾಗಿರುವ ಮನೀಶ್ ಕರ್ಬಿಕರ್ ನೇತೃತ್ವದಲ್ಲಿ ನಡೆದ ವಿಚಾರಣೆಗೆ ಹಾಜರಾಗಿದ್ದ ಸಂದೀಪ್ ಪಾಟೀಲ್ ‘ತಮ್ಮ ಅವಧಿಯಲ್ಲಿ ಬಿಟ್‍ಕಾಯಿನ್ ಪ್ರಕರಣದ ತನಿಖೆಯಲ್ಲಿ ಲೋಪದೋಷಗಳು, ತಾಂತ್ರಿಕ ತೊಂದರೆಗಳಾಗಿಲ್ಲ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶ್ರೀಕೃಷ್ಣ ಯಾನೆ ಶ್ರೀಕಿಯ ಹೇಳಿಕೆ ಆಧರಿಸಿ ಬಿಟ್‍ ಕಾಯಿನ್‍ ಗಳನ್ನು ವಶಕ್ಕೆ ಪಡೆದುಕೊಂಡು, ಸರಕಾರದ ಸುಪರ್ದಿಗೆ ಅಂದೇ ನೀಡಲಾಗಿದೆ. ಆದರೆ ಪ್ರಸ್ತುತ…

Read More