Subscribe to Updates
Get the latest creative news from FooBar about art, design and business.
- ಎಸ್ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
- ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
- ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
- ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
- ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
- ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
Author: admin
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ, ಜಿಂದಾಲ್ ಅಲ್ಯುಮಿನಿಯಂ ಕಾರ್ಖಾನೆಯಲ್ಲಿ ಎಲ್ ಪಿಜಿ ಅನಿಲ ಸೋರಿಕೆಯಿಂದ ಬೆಂಕಿ ತಗುಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ ಘಟನೆ ಜರುಗಿದೆ. 23 ವರ್ಷದ ಕಾರ್ಮಿಕ ತೋಸಿಫ್ ಖಾನ್ ಮೃತ ವ್ಯಕ್ತಿ ಎನ್ನಲಾಗಿದೆ. ಘಟನೆ ಹಿನ್ನಲೆ ಪ್ರೊಡಕ್ಷನ್ ಇನ್ ಚಾರ್ಜ್ ಅಮಿತ್ ಸರ್ಕಾರ್, ಸುರಕ್ಷತೆ ಅಧಿಕಾರಿ ಬಂಗಾರು ಸೇರಿದಂತೆ ಜಿಂದಾಲ್ ಫ್ಯಾಕ್ಟರಿಯ ಮುಖ್ಯಸ್ಥರು ಮತ್ತು ಆಡಳಿತ ವರ್ಗದವರು, ಜವಾಬ್ದಾರಿಯುತ ಅಧಿಕಾರಿಯನ್ನು ನೇಮಿಸದೇ ಕಾರ್ಮಿಕರಿಗೆ ಸುರಕ್ಷತಾ ಉಪಕರಣಗಳನ್ನು ನೀಡದೇ ನಿರ್ಲಕ್ಷ ತೋರಿದ್ದು, ಇದರಿಂದ ಇವರ ವಿರುದ್ಧ ಕಲಂ 304(ಎ) ಐಪಿಸಿ ಅಡಿ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಗ್ರಾಮ ಪಂಚಾಯತಿ ಸಿಬ್ಬಂದಿಯ ಕಿಸ್ಸಿಂಗ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಘಟನೆ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ರಾಮಸಾಗರದಲ್ಲಿ ನಡೆದಿದೆ. ಪಂಚಾಯಿತಿ ಕಾರ್ಯಾಲಯದಲ್ಲಿಯೇ ಕಿಸ್ ಮಾಡುತ್ತಾ ಫೋಟೋಗಳನ್ನು ತೆಗೆದುಕೊಂಡಿದ್ದಾರೆ. ಈಗ ಈ ಫೋಟೋಗಳು ವೈರಲ್ ಆಗಿದ್ದು, ಮಹಿಳೆಯಿಂದ ಲೈಂಗಿಕ ಕಿರುಕುಳದ ಕೇಸ್ ದಾಖಲಾಗಿದೆ. ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ವಿರುದ್ಧ ಲೈಂಗಿಕ ಕಿರುಕುಳ, ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಗೆ ಮುಜುಗರ, ಖಾಸಗಿ ಕ್ಷಣಗಳ ಫೋಟೋ ಹಂಚಿಕೆ ಹಾಗೂ ಬೆದರಿಕೆ ಒಡ್ಡಿದ್ದಾರೆಂದು ಕೋಲಾರ ಜಿಲ್ಲೆ ಬೇತಮಂಗಲ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದಾರೆ. ಅರ್ಜುನ್ ಹರಿಕೃಷ್ಣ ಗ್ರಾಮ ಪಂಚಾಯಿತಿ ಕಾರ್ಯಾಲಯದ ಮೊದಲ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಯ ಬಳಿ ಹೋಗಿ ಕಾಮದಾಟವಾಡಿದ್ದಾನೆ. ಅದನ್ನು ವಿರೋಧ ಮಾಡಿದ್ದಕ್ಕೆ ನಿನ್ನ ಗಂಡನಿಗೆ ಗ್ರಾಮ ಪಂಚಾಯಿತಿಯಲ್ಲಿ ಜಲಗಾರ ಕೆಲಸ ಕೊಡಿಸುತ್ತೇನೆ. ಜೊತೆಗೆ, ನಿಮಗೆ ವಾಸಕ್ಕೆಂದು ಪಂಚಾಯಿತಿಯಿಂದ ಉಚಿತ ಸರ್ಕಾರಿ ಮನೆ ಕಟ್ಟಿಸಿಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದಾನೆ ಎನ್ನಲಾಗಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ…
ನಾಯಿಯೊಂದು 5 ತಿಂಗಳ ಮಗುವನ್ನು ಕಚ್ಚಿ ಕೊಂದಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಾಂಡೂರಿನಲ್ಲಿ ಮೇ.14 ರಂದು ನಡೆದಿದೆ. ಬಾಬುಸಾಯಿ ಎಂಬ ಮಗುವನ್ನು ಪೋಷಕರು ಕೆಲಸಕ್ಕೆ ಹೋಗುವ ವೇಳೆ ಮನೆಯಲ್ಲಿ ಮಲಗಿಸಿದ್ದರು. ಯಾರ ಗಮನಕ್ಕೂ ಬಾರದಂತೆ ಒಳ ಪ್ರವೇಶಿಸಿದ ನಾಯಿ ದಾಳಿ ಮಾಡಿ ಕೊಲೆ ಮಾಡಿದೆ. ಮಗುವಿನ ತಂದೆ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ. ಕೆಲಸದ ಸ್ಥಳದಲ್ಲಿದ್ದ ಸಾಕು ನಾಯಿ ಅದು ಎಂದು ಸ್ಥಳೀಯ ನಿವಾಸಿಗಳು ಹೇಳಿದರೆ, ಜಾಗದ ಮಾಲೀಕರು ಬೀದಿ ನಾಯಿ ಎಂದು ಹೇಳಿದ್ದಾರೆ. ಕಳೆದ ತಿಂಗಳು ಬೀದಿ ನಾಯಿಗಳ ದಾಳಿಯಲ್ಲಿ ಕನಿಷ್ಠ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು. 2022 ರಿಂದ 2023 ರವರೆಗೆ ನಾಯಿ ಕಡಿತದ ಘಟನೆಗಳು ವರ್ಷದಿಂದ ವರ್ಷಕ್ಕೆ ಶೇಕಡಾ 26.5 ರಷ್ಟು ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಳೆದ ಡಿಸೆಂಬರ್ ನಲ್ಲಿ ವರದಿ ಮಾಡಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಬೆಳಗಾವಿ: ಬೆಂಕಿಯ ಕೆನ್ನಾಲಿಗೆಗೆ ಸುಮಾರು 1 ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿದೆ ಎನ್ನಲಾಗಿದ್ದು , ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಮುಂಜಾನೆಯ ವೇಳೆ ಎಲ್ಲರೂ ಕೆಲಸಕ್ಕೆಂದು ಹೊರಗಡೆ ಹೋದ ಸಂದರ್ಭದಲ್ಲಿ ನಿನ್ನೆ ಮದ್ಯಾಹ್ನ12.30ರಿಂದ ೧ಘಂಟೆ ನಡುವೆ ಗುಡಿಸಲಿಗೆ ಬೆಂಕಿ ಬಿದ್ದಿದ್ದು, ಮನೆಯಲ್ಲಿ ಯಾರೂ ಇಲ್ಲದೆ ಈದ್ದ ಪರಿಣಾಮ ಯಾವುದೇ ರೀತಿಯ ಜೀವ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಬೆಂಕಿ ಕೆನ್ನಾಲಿಗೆಗೆ ಸಿಲುಕಿ 5 ಆಡು, 8 ಕೋಳಿ, 2 ಮೋಟಾರ್ ಸೈಕಲ್, ಒಡವೆಗಳು, ಬಂಗಾರ, ಬೆಳ್ಳಿ, ವಸ್ತ್ರಗಳು ಹೀಗೆ ಹಲವಾರು ದಿನ ಬಳಕೆಯ ವಸ್ತುಗಳು ಸುಟ್ಟಿರುವದರಿಂದ ಇಡಿ ಕುಟುಂಬ ತೊಟ್ಟ ಬಟ್ಟೆಯಲ್ಲೇ ಬೀದಿಪಾಲಾದಂತೆ ಆಗಿದೆ. ಬೆಂಕಿ ಅವಘಡದಲ್ಲಿ 20 ಲಕ್ಷಕ್ಕೂ ಅಧಿಕ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಹಮ್ಜಾಅಲಿ ಆದಮಸಾಬ ಬಾಳೊಬಾ ಇವರಿಗೆ ಸೇರಿದ ಗುಡಿಸಲಿಗೆ ಬೆಂಕಿ ತಗುಲಿರುವ ಕಾರಣ ಏನೆಂಬುದು ನಿಖರವಾಗಿ ತಿಳಿದು ಬಂದಿಲ್ಲ. ಇನ್ನು ಪ್ರಕರಣ ಕುರಿತು ಅಥಣಿ ಪೊಲೀಸ್…
ವಾರಣಾಸಿ: ನಾಮಪತ್ರ ಸಲ್ಲಿಸಲು ಅವಕಾಶ ನೀಡುತ್ತಿಲ್ಲ. ಸುಮ್ಮನೆ ಕಾಯುವಂತೆ ಹೇಳಿ, ಬಳಿಕ ಸಮಯ ಮುಗಿದಿದೆ ಇನ್ನು ಹೊರಡಿ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಕತ್ತು ಹಿಸುಕುವ ಕೆಲಸ ಎಂದು ಕಾಮಿಡಿಯನ್ ಶ್ಯಾಮ್ ರಂಗೀಲಾ ಆರೋಪಿಸಿದ್ದಾರೆ. ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಫರ್ಧಿಸಲು ಇಚ್ಛಿಸಿರುವ ಅವರು ನಾಮಪತ್ರ ಸಲ್ಲಿಸಲು ತಮಗೆ ಅವಕಾಶ ಸಿಗದಿರುವ ಕುರಿತು ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ತಮ್ಮ ಯೂಟ್ಯೂಬ್ ಚಾನೆಲ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ವೀಡಿಯೊ ಹಂಚಿಕೊಂಡಿರುವ ಅವರು, “ಯಾರ ನಾಮಪತ್ರ ಪಡೆಯಬೇಕು, ಯಾರದ್ದು ಪಡೆಯಬಾರದು ಎಂದು ಮೊದಲೇ ತೀರ್ಮಾನವಾದ ಹಾಗಿದೆ. ಕೆಲವು ಅಭ್ಯರ್ಥಿಗಳಂತೂ ಕಾದೂ ಕಾದು ಸುಸ್ತಾಗಿ ಕಣ್ಣೀರು ಹಾಕುತಿದ್ದರು. ಯಾರೇ ಏನೇ ಪ್ರತಿಕ್ರಿಯೆ ನೀಡಿದರೂ, ಅಧಿಕಾರಿಗಳು ಸುಮ್ಮನೆ ಮುಗುಳ್ನಗುತ್ತಿದ್ದರು” ಎಂದು ಹೇಳಿದರು. ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಲು ಅವಕಾಶ ಸಿಕ್ಕಿದರೆ ಅದೇ ನನ್ನ ಗೆಲುವು. ಮೋದಿ ಭಕ್ತರ ಮತಗಳು ನಮಗೆ ಬೇಡ. ಮತ ಯಂತ್ರದಲ್ಲಿ ಹೆಸರು ಬಂದರೆ ಸಾಕು. ಅದರೆ ಅದಕ್ಕೇ ಇಲ್ಲಿ ಅವಕಾಶ…
ಮನೆಮುಂದೆ ಆಟವಾಡುತ್ತಿದ್ದ ಮಕ್ಕಳು ಇದ್ದಕ್ಕಿದಂತೆ ಕಾಣೆಯಾಗಿದ್ದು, ೩ ಮಕ್ಕಳ ಮೃತದೇಹ ಪತ್ತೆಯಾಗಿರುವ ಘಟನೆ ವಿಜಯಪುರದಲ್ಲಿ ವರದಿಯಾಗಿದೆ. ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ನೀರಿನಲ್ಲಿ ಮುಳುಗಿ ಮೂವರು ಮಕ್ಕಳ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಮೂವರು ಮಕ್ಕಳು ವಿಜಯಪುರ ನಗರದ ಚಾಬಕಸಾಬ್ ದರ್ಗಾ ಬಳಿಯ ಮನೆಯಿಂದ ಕಾಣೆಯಾಗಿದ್ದರು. ಮೂವರು ಮಕ್ಕಳು ಬೇಸಿಗೆ ರಜೆಗೆಂದು ಮಾವನ ಮನೆಗೆ ಬಂದಿದ್ದರು. ಇದೀಗ ದುರಂತದಲ್ಲಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಗದಗ ಮೂಲದ ಅನುಷ್ಕಾ ಅನಿಲ್ ದಹಿಂಡೆ(9), ವಿಜಯ್ ಅನಿಲ್ ದಹಿಂಡೆ( 7), ಹಾಗೂ ವಿಜಯಪುರದ ಮಿಹಿರ್ ಶ್ರೀಕಾಂತ ಜಾನಗೌಳಿ(7) ಮೃತ ಮಕ್ಕಳು ಎಮದು ಗುರುತಿಸಲಾಗಿದೆ. ಮಕ್ಕಳು ಬಹಳ ಸಮಯವಾದರೂ ಮನೆಗೆ ಬಾರದ ಕಾರಣ ಮನೆಯವರು ಹುಡುಕಾಟ ನಡೆಸಿದ್ದಾರೆ. ಸಾಯಂಕಾಲ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲು ಮಾಡಿದ್ದರು. ನಿನ್ನೆಯಿಂದಲೇ ಕುಟುಂಬಸ್ಥರು ಪೊಲೀಸರು ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದರು. ಆದರೆ ನೆನ್ನೆ ಮದ್ಯಾಹ್ನದ ವೇಳೆ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ನೀರಲ್ಲಿ ಮೂವರು ಮೃತರಾಗಿ ಪತ್ತೆಯಾಗಿದ್ದಾರೆ. ಮಹಾನಗರ…
ಪಾವಗಡ: ತಾಲ್ಲೂಕಿನ ಭೂಪುರು ತಾಂಡದಲ್ಲಿ ಸಂತ ಶ್ರೀ ಸೇವಾಲಾಲ್ ಮಹರಾಜ್ ರವರ 285ನೇ ಜಯಂತೋತ್ಸವವನ್ನು ಲಂಬಾಣಿ ಜನಾಂಗದಿಂದ ಸೋಮವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಿಗ್ಗೆ ವಿಶೇಷ ಪೂಜೆ ನೆರವೇರಿಸಿದ ನಂತರ ಸಮುದಾಯದ ಹಿರಿಯರು ಸೇರಿ, ಅಗ್ನಿಗುಂಡಕ್ಕೆ ವಿವಿದ ವಸ್ತುಗಳನ್ನು ಸಮರ್ಪಿಸುವ ಮೂಲಕ ಬೋಗ್ ಆಚರಣೆ ನೆರವೇರಿಸಿದರು. ನಂತರ ಸಂಜೆ ಸಂತ ಸೇವಾಲಾಲ್ ರ ಭಾವಚಿತ್ರ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಲಂಬಾಣಿ ಮಹಿಳೆಯರು ಸಾಂಪ್ರದಾಯಿಕ ನೃತ್ಯ ಮಾಡಿದರೆ, ಯುವಜನತೆ ವಾದ್ಯಗಳ ತಾಳಕ್ಕೆ ತಕ್ಕಂತೆ ಕುಣಿದು ಸಂತಸ ಹಂಚಿಕೊಂಡರು. ವರದಿ: ನಂದೀಶ್ ನಾಯ್ಕ ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ಸುರಿಯುತ್ತಿರುವ ಮಳೆಯಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಕಲ್ಪತರುನಾಡಲ್ಲಿ ತಡರಾತ್ರಿ ಗಾಳಿ ಸಹಿತ ವರುಣನ ಅಬ್ಬರಕ್ಕೆ ಹೈ ಟೆನ್ಶನ್ ವೈರ್ ಕಡಿದು ಬಿದ್ದು, ಕೆಲಕಾಲ ಜನರಲ್ಲಿ ಗಾಬರಿ ಹುಟ್ಟಿಸಿತ್ತು. ನಂತರ ಯಾವುದೇ ರೀತಿಯ ಪ್ರಾಣಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಲಕ್ಲಿಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದಲ್ಲಿ ಹಾದುಹೋಗಿರುವ ವಿದ್ಯುತ್ ಲೈನ್ ಮನೆಗಳ ಮೇಲೆ ತುಂಡಾಗಿ ಬಿದ್ದಿದೆ. ವಿದ್ಯುತ್ ನಿಂತುಹೋಗಿತ್ತು. ಅದೃಷ್ಟವಶಾತ್ ಯಾವುದೇ ಹಾನಿಯಾಗಿಲ್ಲ. ತುಮಕೂರು ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ, ಮರಗಳು ಧರೆಗುರುಳಿದ್ದು, ಕಟ್ಟಡಗಳ ಮೇಲೆ ಹಾನಿ ಉಂಟು ಮಾಡಿವೆ. ತುಮಕೂರು ನಗರದ ಕುವೆಂಪು ನಗರದಲ್ಲಿ ಮನೆಯ ಮೇಲೆ ಬಿದ್ದ ತೆಂಗಿನ ಮರದಿಂದ ಕಟ್ಟಡದ ಒಂದು ಭಾಗ ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಕುವೆಂಪು ನಗರದ ಫಸ್ಟ್ ಬ್ಲಾಕ್, 5 ನೇ ಮುಖ್ಯ ರಸ್ತೆಯಲ್ಲಿ ಇರುವ ನಿರಂಜನ ಎನ್ನುವವರಿಗೆ ಸೇರಿದ ಮನೆ…
ಮೈಸೂರು: ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ, ಪ್ರತಿಕ್ರಿಯೆ ನೀಡಿದ ಅವರು, “ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ” ಎಂದರು. ಉತ್ತಮ ವಾತಾವರಣ: ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆಯಿತು ಎಂದರು. ಪರಿಣಾಮ ಬೀರುವುದಿಲ್ಲ: ಮೈತ್ರಿ ಪರಿಣಾಮ ಚುನಾವಣೆಯ ಮೇಲೆ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಲೋಕಸಭೆ ಚುನಾವಣೆಯಲ್ಲಿಯೂ ಕೆಡಿಎಎ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು. ಸಾಧನೆಗಳ ತುಲನೆ ಮಾಡುವ ಶಕ್ತಿ ಮತದಾರರಿಗಿದೆ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಚುನಾವಣೆಯ ಮೇಲೆ…
ತುರುವೇಕೆರೆ: ತುರುವೇಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಸಿ.ಎಸ್.ಪುರ ಹೋಬಳಿಯ ಡಿ ರಾಂಪುರದಲ್ಲಿ ನಡೆಸುತ್ತಿರುವ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ವಿರೋಧಿಸಿ, ಇದೇ ಮೇ 16 ರಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಹೋರಾಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ರೈತರು, ನಾಗರೀಕರು, ವಿಚಾರವಂತರು, ಚಿಂತಕರು, ಬುದ್ಧಿಜೀವಿಗಳು ಭಾಗವಹಿಸಬೇಕು ಎಂದು, ತುರುವೇಕೆರೆ ಕ್ಷೇತ್ರದ ಶಾಸಕ ಎಂ.ಟಿ.ಕೃಷ್ಣಪ್ಪ ಮನವಿ ಮಾಡಿದರು. ತಮ್ಮ ಗೃಹ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಎಂ.ಟಿ. ಕೃಷ್ಣಪ್ಪ, ಟಿ ಬಿ ಸಿ ನಾಲೆಯಿಂದ ಏಳರಿಂದ ಎಂಟು ಅಡಿ ಆಳದಲ್ಲಿ ಕೊಳವೆಗಳ ಮುಖಾಂತರ ರಾಮನಗರಕ್ಕೆ ನೀರನ್ನು ಕೊಂಡೊಯ್ಯುತ್ತಿದ್ದು, ಸಹಜವಾಗಿ ಎಲ್ಲಾ ನೀರು ಗ್ರಾವಿಟಿಯ ಮೂಲಕ ಹರಿದರೆ ಮುಖ್ಯವಾಗಿ ತುರುವೇಕೆರೆ ತಾಲೂಕಿನ ಕಸಬಾ, ದಂಡಿನ ಶಿವರ, ಸಂಪಿಗೆ, ಗುಬ್ಬಿ ತಾಲೂಕಿನ ಸಿಎಸ್ ಪುರ ಹೋಬಳಿಯ ಭಾಗದ ಜನರಿಗೆ ಒಂದು ಹನಿ ನೀರು ಕೂಡ ಸಿಗುವುದಿಲ್ಲ. ಇದರಿಂದ ತಾಲೂಕಿನ ಯಾವ ಕೆರೆ ಕಟ್ಟೆಗಳಾಗಲಿ ತುರುವೇಕೆರೆ ಪಟ್ಟಣದ ವಾಸಿಗಳಿಗೆ ಕುಡಿಯುವ ನೀರನ್ನು ಪೂರೈಸುವ…