Author: admin

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಿಂದ ಸತತ ಮೂರನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, 2014 ಮತ್ತು 2019ರಲ್ಲಿ ಇಲ್ಲಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ ಸತತ ಮೂರನೇ ಬಾರಿಗೆ ಪ್ರಧಾನಿ ಮೋದಿಯವರು ಇದೇ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದರಿಂದ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಹೀಗಾಗಿ ಮೋದಿಯವರ ನಾಮನಿರ್ದೇಶನಕ್ಕೆ ಬಿಜೆಪಿ ಭರ್ಜರಿ ತಯಾರಿ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿಯವರು ನಾಮಪತ್ರ ಸಲ್ಲಿಸುವ ವೇಳೆ ಸುಮಾರು ಹನ್ನೆರಡು ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದ್ದು, ಇದಲ್ಲದೇ ಬಿಜೆಪಿ ಮತ್ತು ಎನ್‌ ಡಿಎಯ ಹಲವು ನಾಯಕರು ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ಮೋದಿಯವರ ನಾಮನಿರ್ದೇಶನಕ್ಕೆ ಯಾವ ವಿವಿಐಪಿ ಸಾಕ್ಷಿಯಾಗುತ್ತಾರೆ ಅನ್ನೋದರ ವಿವರ ಇಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಮಪತ್ರ ಸಲ್ಲಿಕೆ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಹಾರ ಸಿಎಂ ನಿತೀಶ್ ಕುಮಾರ್, ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ರಾಜಸ್ಥಾನ ಸಿಎಂ ಭಜನ್ಲಾಲ್ ಶರ್ಮಾ, ಮಹಾರಾಷ್ಟ್ರ ಸಿಎಂ…

Read More

ಚಿಕ್ಕಮಗಳೂರು: ಇಂದು ಬೆಳಿಗ್ಗೆ ಚಾರ್ಮಡಿ ಘಾಟ್​ ನಲ್ಲಿ ತೆರಳುತ್ತಿದ್ದ ಜನರಿಗೆ ಗಜರಾಜನ ದರ್ಶನವಾಗಿದೆ. ಚಾರ್ಮಡಿ ಘಾಟ್ ​​ನ ರಸ್ತೆ ಮಧ್ಯೆದಲ್ಲಿ ಒಂಟಿ ಸಲಗ ಸೊಂಡಿಲಿನಲ್ಲಿ ಮರದ ದಿಂಬಿ ಹಿಡಿದು ನಿಂತಿದ್ದನು. ಗಜರಾಜನ ಈ ಅವತಾರ ಕಂಡು ಜನರು ವಾಹನಗಳನ್ನು ಸೈಡ್​ ಅಲ್ಲಿ ಪಾರ್ಕ್​​ ಮಾಡಿ, ಮೊಬೈಲ್ ​ನಲ್ಲಿ ಆನೆಯ ಆರ್ಭಟವನ್ನು ಸೆರೆ ಹಿಡಿದಿದ್ದಾರೆ. ಈ ಒಂಟಿ ಸಲಗಕ್ಕೆ ಒಂಟಿ ಸಲಗಕ್ಕೆ ಮದವೇರಿರುವ ಶಂಕೆ ವ್ಯಕ್ತವಾಗಿದೆ. ರಸ್ತೆ ಮಧ್ಯೆದಲ್ಲಿ ಒಂಟಿ ಸಲಗ ನಿಂತಿದ್ದರಿಂದ ಚಾರ್ಮಾಡಿ ಘಾಟ್ ​ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇನ್ನು ಈ ಒಂಟಿ ಸಲಗ ಹಗಲು-ರಾತ್ರಿ ಎನ್ನದೆ ಉಪಟಳ ನೀಡುತ್ತಿದೆ. ಆದರೂ ಕೂಡ ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಶಿಡ್ಲಘಟ್ಟ: ಆಹಾರ ಅರಸಿ ಗ್ರಾಮ ದತ್ತ ಬಂದಿದ್ದ ಜಿಂಕೆಯನ್ನು ಬೀದಿ ನಾಯಿಗಳು ಕಚ್ಚಿ ಸಾಯಿಸಿವೆ. ತಾಲೂಕಿನ ಗಾಂಡ್ಲಚಿಂತೆ ಗ್ರಾಮದಲ್ಲಿ ಘಟನೆ ನಡೆದಿದ್ದು, ತಾಲ್ಲೂಕು ವಲಯ ಅರಣ್ಯಾಧಿಕಾರಿ ಸುಧಾಕರ್ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ್ದಾರೆ. ಗುಂಪಾಗಿ ದಾಳಿ ನಡೆಸಿರುವ ಬೀದಿ ನಾಯಿಗಳ ದಾಳಿಗೆ ತುತ್ತಾಗಿರುವ ಜಿಂಕೆ ರಕ್ತ ಸ್ರಾವದಲ್ಲಿ ನರಳುತ್ತಿರುವುದನ್ನು ಕಂಡು ಗ್ರಾಮಸ್ಥರು ಬೀದಿ ನಾಯಿಗಳನ್ನು ಚದುರಿಸಿದ್ದಾರೆ. ಚಿಕಿತ್ಸೆಗಾಗಿ ದಿಬ್ಬೂರಹಳ್ಳಿಯ ಪಶು ಚಿಕಿತ್ಸಾಲಯಕ್ಕೆ ರವಾನಿಸಿದರು ಫಲಕಾರಿಯಾಗದೆ ಜಿಂಕೆ ಪ್ರಾಣ ಕಳೆದುಕೊಂಡಿದೆ. ಗಾಂಡ್ಲ ಚಿಂತೆ ಹಾಗೂ ಸುತ್ತಮುತ್ತಲ ಗ್ರಾಮಗಳ ಹೊರವಲಯದ ಬೆಟ್ಟ ಗುಡ್ಡಗಳನ್ನು ಆವಾಸಸ್ಥಾನ ಮಾಡಿಕೊಂಡಿರುವ ಜಿಂಕೆಗಳು ಆಹಾರ ನೀರು ಅರಸಿ ಆಗಾಗ್ಗೆ ಗ್ರಾಮಗಳ ಕಡೆ ಬರುವುದುಂಟು. ಈ ಸಂದರ್ಭದಲ್ಲಿ ಉಪವಲಯ ಅರಣ್ಯಾಧಿಕಾರಿ ಜಯಚಂದ್ರ ಸಿಬ್ಬಂದಿಗಳಾದ ಸಂದೀಪ್ ಲೋಕೇಶ್ ನರಸಿಂಹಪ್ಪ ನಾಗರಾಜು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಸುರಿದು ಹಲವು ಅವಾಂತರಗಳು ಸೃಷ್ಟಿಯಾಗ್ತಿದೆ. ಒಂದೆಡೆ ಮಳೆಗೆ ಮರಗಳು ಬಿದ್ದು ಸಮಸ್ಯೆಯಾದ್ರೆ ಮತ್ತೊಂದೆಡೆ ಅಂಡರ್ ​ಪಾಸ್, ರಸ್ತೆ ಒಂದಷ್ಟು ಕಡೆ ಮಳೆನೀರು ನುಗ್ಗಿ ಜನರು ಸಂಕಷ್ಟ ಅನುಭವಿಸಿದ್ದಾರೆ. ಬೆಂಗಳೂರಿನ ಕೆಲ ಏರಿಯಾಗಳಲ್ಲಿ ಹೆಚ್ಚು ಮಳೆಯಾಗಿದ್ದು, ಇದುವರೆಗೆ ಸುಮಾರು 150 ಕಡೆ ನೀರು ನಿಂತು ಸಮಸ್ಯೆಯಾಗಿದೆ. ಬೆಂಗಳೂರಲ್ಲಿ ಮತ್ತೆ ವರುಣ ದೇವ ಅಬ್ಬರಿಸಿದ್ದಾನೆ. ಸಂಜೆವರೆಗೆ ಸಾಮಾನ್ಯವಾಗಿದ್ದ ಬೆಂಗಳೂರಿನ ವಾತಾವರಣ ರಾತ್ರಿ ಸಂಪೂರ್ಣ ಬದಲಾಗಿದೆ. ನಗರದ ಬಹುತೇಕ ಭಾಗದಲ್ಲಿ ಮಳೆ ಅಬ್ಬರಿಸಿದೆ. ಪ್ರಮುಖ ರಸ್ತೆಗಳಲ್ಲಿ ನೀರು ನಿಂತಿದ್ದು, ಟ್ರಾಫಿಕ್ ಜಾಮ್ ಉಂಟಾಗಿ, ಬೈಕ್ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ನೃಪತುಂಗ ರಸ್ತೆಯಲ್ಲಿ ಸುಮಾರು ರಾತ್ರಿ 11:45ಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮುಂದೆ ಬೃಹತ್ ಮರದ ಕೊಂಬೆ ಧರೆಗುರುಳಿದೆ. ಪರಿಣಾಮ ಕೆಆರ್ ವೃತ್ತದಿಂದ ಸುಮಾರು 5 ಕಿಲೋ ಮೀಟರ್ ವರೆಗೂ ಟ್ರಾಫಿಕ್​ ಜಾಮ್ ಆಗಿ ವಾಹನ ಸವಾರರ ಪರದಾಡಿದ್ದಾರೆ. ಇನ್ನೂ ಟ್ರಾಫಿಕ್​ನಲ್ಲಿ…

Read More

ಈತನ ಜೊತೆ ಜಸ್ಟ್ ಫೋಟೋ ಕ್ಲಿಕ್ಕಿಸಿಕೊಳ್ಳಲು ಜನ ಮುಗಿಬೀಳ್ತಾರಂತೆ. ಹೌದು, ಈತನ ಜೊತೆ ಫೋಟೋ ತೆಗೆದುಕೊಳ್ಳಲು ಮೊದಲು ಈತನಿಗೆ ಲಕ್ಷಾಂತರ ರೂಪಾಯಿ ನೀಡಬೇಕಂತೆ. ಆದರೂ ಕೆಲವು ಸ್ಟಾರ್‌ ಗಳು ಹಣ ಪಾವತಿಸಿ ಈತನ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಾರೆ. ಈತ ಬೇರೆ ಯಾರೂ ಅಲ್ಲ. ಬಾಲಿವುಡ್‌ ಸ್ಟಾರ್‌ ಗಳಷ್ಟೇ ಫೇಮಸ್‌ ಆಗಿರುವ ಓರಿ. ಓರಿ ಎಂದು ಕರೆಯಲ್ಪಡುವ ಈ ಯುವಕನ ಹೆಸರು ಓರ್ಹನ್ ಅವತ್ರಮಣಿ. ಸದ್ಯ ಗಂಟೆ ಗಂಟೆಗೂ ಲಕ್ಷಾಂತರ ರೂಪಾಯಿ ಗಳಿಸುವ ಓರಿ ತಮ್ಮ ಗಳಿಕೆಯ ಬಗ್ಗೆ ಇತ್ತೀಚಿಗೆ ಮಾತನಾಡಿದ್ದಾರೆ. ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಫೇಮಸ್ ಆಗಿರುವ ಓರಿ (Orry) ಸೆಲೆಬ್ರೆಟಿಗಳ ಖಾಸಗಿ ಕಾರ್ಯಕ್ರಮಗಳಿಗೆ ಭಾಗಿ ಆದರೆ ಒಂದು ಇವೆಂಟ್‌ ಗೆ ಲಕ್ಷಾಂತರ ರೂಪಾಯಿ ಗಳಿಸುತ್ತಾರೆ. ಓರಿ ಪ್ರಕಾರ, ನಾನು ಒಂದು ಫೋಟೋ ಕೇಳಿದರೆ 25 ಲಕ್ಷ ರೂಪಾಯಿ ಚಾರ್ಜ್ ಮಾಡುತ್ತೇನೆ. ನಾನಾಗೇ ಬಂದು ಫೋಟೋ ಕ್ಲಿಕ್ಕಿಸಿಕೊಂಡರೆ ನೋ ಚಾರ್ಜ್. ಯಾರಾದರೂ ಬಂದು ಟಚ್ ಮಾಡುವಂತೆ ಕೇಳಿದರೆ 20…

Read More

ಮನೆಮುಂದೆ ಆಟವಾಡುತ್ತಿದ್ದ ಮಕ್ಕಳು ಇದ್ದಕ್ಕಿದಂತೆ ಕಾಣೆಯಾಗಿದ್ದ  3 ಮಕ್ಕಳ ಮೃತದೇಹ ಪತ್ತೆಯಾಗಿರುವ ಘಟನೆ ವಿಜಯಪುರದಲ್ಲಿ ವರದಿಯಾಗಿದೆ. ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ನೀರಿನಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೂವರು ಮಕ್ಕಳು ವಿಜಯಪುರ ನಗರದ ಚಾಬಕಸಾಬ್ ದರ್ಗಾ ಬಳಿಯ ಮನೆಯಿಂದ ಕಾಣೆಯಾಗಿದ್ದರು. ಮೂವರು ಮಕ್ಕಳು ಬೇಸಿಗೆ ರಜೆಗೆಂದು ಮಾವನ ಮನೆಗೆ ಬಂದಿದ್ದರು. ಇದೀಗ ದುರಂತದಲ್ಲಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಗದಗ ಮೂಲದ ಅನುಷ್ಕಾ ಅನಿಲ್ ದಹಿಂಡೆ (9) ವಿಜಯ್ ಅನಿಲ್ ದಹಿಂಡೆ ( 7) ಹಾಗೂ ವಿಜಯಪುರದ ಮಿಹಿರ್ ಶ್ರೀಕಾಂತ ಜಾನಗೌಳಿ (7) ಮೃತ ಮಕ್ಕಳು ಎಂದು ಗುರುತಿಸಲಾಗಿದೆ. ಮಕ್ಕಳು ಬಹಳ ಸಮಯವಾದರೂ ಮನೆಗೆ ಬಾರದ ಕಾರಣ ಮನೆಯವರು ಹುಡುಕಾಟ ನಡೆಸಿದ್ದಾರೆ. ಸಾಯಂಕಾಲ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲು ಮಾಡಿದ್ದರು. ನಿನ್ನೆಯಿಂದಲೇ ಕುಟುಂಬಸ್ಥರು ಪೊಲೀಸರು ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದರು. ಆದರೆ ನೆನ್ನೆ ಮದ್ಯಾಹ್ನದ ವೇಳೆ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ನೀರಲ್ಲಿ ಮೂವರ ಮೃತದೇಹ…

Read More

ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನದಲ್ಲಿದ್ದ ಮಾಜಿ ಸಚಿವ ಹೆಚ್‌.ಡಿ.ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರಿದ್ದ ಪೀಠ 5 ಲಕ್ಷ ಬಾಂಡ್‌, ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ ಬೆಳಗ್ಗೆಯಿಂದ ಸಂಜೆಯವರೆಗೆ ಕೋರ್ಟ್‌ ಸುಧೀರ್ಘವಾಗಿ ವಿಚಾರಣೆ ನಡೆಯಿತು. ರೇವಣ್ಣ ಪರ ವಕೀಲರಾದ ನಾಗೇಶ್‌ ಹಾಗೂ ಎಸ್‌ಐಟಿ ಪರ ವಕೀಲರಾದ (ಎಸ್‌ಪಿಪಿ) ಜಯ್ನಾ ಕೊಠಾರಿ ಹಾಗೂ ಅಶೋಕ್‌ ನಾಯ್ಕ್‌ ಸರ್ಕಾರದ ಪರವಾಗಿ ವಾದಿಸಿದರು. ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ಹಾಗೂ  ಸಾಕ್ಷ್ಯಾಧಾರ ನಾಶಪಡಿಸಬಾರದು, ಮಂಡ್ಯ ಜಿಲ್ಲೆಯ ಕೆ.ಆರ್.ನಗರ ತಾಲೂಕು ಪ್ರವೇಶಿಸುವಂತಿಲ್ಲ,  ಎಸ್‌ ಐಟಿ ತನಿಖೆಗೆ ಸಹಕರಿಸಬೇಕು ಎಂಬ ಷರತ್ತುಗಳೊಂದಿಗೆ ರೇವಣ್ಣಗೆ ಜಾಮೀನು ಮಂಜೂರು ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಮೊಹಮ್ಮದಿ ಮದೀನಾ ಮಸೀದಿ ಮೌಲ್ವಿ ಮೊಹಮ್ಮದ್​ ತಾಹಿರ್​ನನ್ನು ವಿದ್ಯಾರ್ಥಿಗಳು ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಅಜ್ಮೀರದಲ್ಲಿ ನಡೆದಿದೆ. ಮೌಲ್ವಿ ಕಳೆದ 4 ವರ್ಷಗಳಿಂದ ತಮ್ಮ ಮೇಲೆ ನಿರಂತರ ಅತ್ಯಾಚಾರವೆಸಗುತ್ತಿದ್ದರು ಹೀಗಾಗಿ ನಾವೇ ಅವರನ್ನು ಕೊಲೆ ಮಾಡಿದ್ದೇವೆ ಎಂದು ವಿದ್ಯಾರ್ಥಿಗಳು ಪೊಲೀಸರ ಒಪ್ಪಿಕೊಂಡಿದ್ದಾರೆ. ರಾಜಸ್ಥಾನದ ಅಜ್ಮೀರ್‌ ನಲ್ಲಿ ಮೌಲಾನಾ ಹತ್ಯೆ ಆರೋಪದ ಮೇಲೆ ಆರು ಅಪ್ರಾಪ್ತ ಬಾಲಕರನ್ನು ಬಂಧಿಸಲಾಗಿದೆ. ಮೌಲಾನಾ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಮೌಲಾನಾ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅತ್ಯಾಚಾರವೆಸಗುತ್ತಿದ್ದರು ಎಂದು ಆರೋಪಿಸಲಾಗಿದೆ. ಇದರಿಂದ ಬೇಸರಗೊಂಡ ಮಕ್ಕಳು ಆತನನ್ನು ಕೊಲ್ಲುವ ಪ್ಲಾನ್ ಮಾಡಿದ್ದಾರೆ. ಈ ಘಟನೆ ಏಪ್ರಿಲ್ 26 ರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೂವತ್ತು ವರ್ಷದ ಮೌಲಾನಾ ಮೊಹಮ್ಮದ್ ತಾಹಿರ್ ಎಂಬಾತನನ್ನು ವಿದ್ಯಾರ್ಥಿಗಳು ಹೊಡೆದು ಕೊಂದಿದ್ದಾರೆ. ಮೌಲಾನಾ ಮೊಬೈಲ್ ನಲ್ಲಿ ಮಕ್ಕಳಿಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ ಬಳಿಕ ಅತ್ಯಾಚಾರ ಎಸಗುತ್ತಿದ್ದರು. ಕಳೆದ ನಾಲ್ಕು ವರ್ಷಗಳಿಂದ ಇದನ್ನೇ ಮಾಡುತ್ತಿದ್ದರು. ಇದರಿಂದ ಮನನೊಂದ…

Read More

ನದಿಗೆ ಸ್ನಾನಕ್ಕೆ ತೆರಳಿದ್ದ ವ್ಯಕ್ತಿಯನ್ನು ಕೊಂದು ಹಾಕಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಬಳಿ ದೂಧಗಂಗಾ ನದಿಯಲ್ಲಿ ನಡೆದಿದೆ. ಮಹಾದೇವ ಪುನ್ನಪ್ಪ ಖುರೆ (72) ಎಂಬುವರು ಮೊಸಳೆ ಬಾಯಿಗೆ ಸಿಲುಕಿ, ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ಮಹಾದೇವ ಪುನ್ನಪ್ಪ ಖುರೆಯವರಿಗೆ ಈಜಲು ಬರುತ್ತಿರಲಿಲ್ಲ. ಹೀಗಾಗಿ ನದಿ (River) ದಡದಲ್ಲಿ ಕುಳಿತು ಸ್ನಾನ ಮಾಡುತ್ತಿದ್ದರು ಎನ್ನಲಾಗಿದೆ. ಸ್ನಾನ ಮಾಡುತ್ತಿದ್ದ ಸಂಧರ್ಭದಲ್ಲಿ ಮಹಾದೇವ ಖುರೆಯನ್ನು ಮೊಸಳೆ ಎಳೆದುಕೊಂಡು ಹೋಗಿ ತೀವ್ರವಾಗಿ ಗಾಯಮಾಡಿದೆ. ಪರಿಣಾಮ ಮಹಾದೇವ ಖುರೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ನದಿಯಲ್ಲಿ ಶವ ಕಂಡ ಬಳಿಕ ಸ್ಥಳೀಯರು ಶವವನ್ನ ಹೊರತೆಗೆದಿದ್ದು ಮರೋಣತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಲಾಗಿದೆ.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜ್ಯುಕೇಶನ್ (CBSE) 12ನೇ ತರಗತಿ ಫಲಿತಾಂಶ ಪ್ರಕಟಗೊಂಡಿದೆ. ಇಂದು ಪ್ರಕಟಗೊಂಡಿರುವ ಫಲಿತಾಂಶದಲ್ಲಿ ಒಟ್ಟು ಶೇ. 87.98 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಒಟ್ಟು 16,33,730 ಮಂದಿ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 16,21,224 ಮಂದಿ ಪರೀಕ್ಷೆ ಬರೆದಿದ್ದಾರೆ. 14,26,420 ಮಂದಿ ಉತ್ತೀರ್ಣರಾಗಿದ್ದಾರೆ. ಬೆಂಗಳೂರಿನಲ್ಲಿ (Bangalore CBSE 12th Results 2024) ಫಲಿತಾಂಶದ ಪ್ರಮಾಣ ಶೇ.96.95ರಷ್ಟಿದೆ ಎಂದು ವರದಿಯಾಗಿದೆ. ವಿದ್ಯಾರ್ಥಿಗಳು ತಮ್ಮ CBSE ತರಗತಿ 12 ಫಲಿತಾಂಶ 2024 ಅನ್ನು cbse.gov.in ನಲ್ಲಿ ಅಧಿಕೃತ CBSE ವೆಬ್‌ಸೈಟ್ ಮೂಲಕ ಪರಿಶೀಲಿಸಬಹುದು. ಹೆಚ್ಚುವರಿಯಾಗಿ, cbse.nic.in, cbseresults.nic.in ಮತ್ತು results.cbse.nic.in ನಲ್ಲಿ ಫಲಿತಾಂಶಗಳನ್ನು ಪಡೆಯಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More