Subscribe to Updates
Get the latest creative news from FooBar about art, design and business.
- ಹಿಂದೂಗಳ ಮೇಲಿನ ದೌರ್ಜನ್ಯ ಸಹಿಸಲ್ಲ: ಬಾಂಗ್ಲಾ ವಿರುದ್ಧ ಗುಡುಗಿದ ದೊಡ್ಡಹಳ್ಳಿ ಅಶೋಕ್
- ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ: ಪದಾಧಿಕಾರಿಗಳ ಆಯ್ಕೆ
- ತುಮಕೂರು | ಅದ್ದೂರಿ ಕನ್ನಡ ರಾಜ್ಯೋತ್ಸವ, ಉಚಿತ ಆರೋಗ್ಯ ತಪಾಸಣಾ ಶಿಬಿರ
- ಡಿ.29ರಿಂದ ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ: ಏನೇನು ಕಾರ್ಯಕ್ರಮಗಳು ಇರಲಿವೆ?
- ತುರುವೇಕೆರೆ: ಡಿ.30: ಸಂಪಿಗೆಯಲ್ಲಿ ವೈಕುಂಠ ಏಕಾದಶಿ ಮಹೋತ್ಸವ
- ಕುಣಿಗಲ್: ಡಿ.29ರಿಂದ ವೆಂಕಟರಮಣ ಸ್ವಾಮಿ ಪೂಜೋತ್ಸವ
- ತುರುವೇಕೆರೆ: ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ತೀರ್ಮಾನ
- ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ
Author: admin
ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಅನು, ಪುಷ್ಕರ್ ಕುಮಾರ್ (25 ) ಹಾಗು ಜ್ಯೋತಿಕುಮಾರಿ (22) ದಂಪತಿಯ ಪುತ್ರಿ ಅನು ಮೃತ ಮಗು. ನೇಪಾಳ ಮೂಲದ ದಂಪತಿ ಕಳೆದ 8 ವರ್ಷಗಳಿಂದ ಇಲ್ಲೇ ವಾಸಮಾಡುತ್ತಿದ್ದರು. ದಂಪತಿ ಮನೆಯಲ್ಲಿ ಮಗು ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಮಗು ಸಾವನ್ನಪ್ಪಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ವಿಜಯಪುರ: ಮುಸ್ಲಿಂ ಯುವತಿಯರನ್ನು ಮದುವೆಯಾದರೆ ಹಿಂದೂ ಯುವಕರಿಗೆ 5 ಲಕ್ಷ ರೂ. ನೀಡುವುದಾಗಿ ಘೋಷಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ರಿಲೀಫ್ ಸಿಕ್ಕಿದೆ. ಈ ಬಗ್ಗೆ ಕಲಬುರಗಿ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದ್ದು, ಯತ್ನಾಳ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ. ಕೊಪ್ಪಳದಲ್ಲಿ ಯತ್ನಾಳ್ ನೀಡಿದ್ದ ಈ ಹೇಳಿಕೆಗೆ ಸಂಬಂಧಿಸಿದಂತೆ ವಿಜಯಪುರ, ಕಲಬುರ್ಗಿ ಹಾಗೂ ಕೊಪ್ಪಳದಲ್ಲಿ ದೂರುಗಳು ದಾಖಲಾಗಿದ್ದವು. ವಿಜಯಪುರ, ಕಲಬುರಗಿಯಲ್ಲಿ ದಾಖಲಾಗಿದ್ದ ದೂರುಗಳನ್ನು ಪೊಲೀಸ್ ಇಲಾಖೆ ಕೊಪ್ಪಳಕ್ಕೆ ವರ್ಗಾಯಿಸಿತ್ತು. ಈ ದೂರುಗಳ ರದ್ದತಿ ಕೋರಿ ಕಲಬುರಗಿ ವಿಭಾಗೀಯ ಪೀಠಕ್ಕೆ ಯತ್ನಾಳ್ ಅರ್ಜಿ ಸಲ್ಲಿಸಿದ್ದರು. ಯತ್ನಾಳ್ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ನ್ಯಾಯಮೂರ್ತಿ ಎಂಐ ಅರುಣ್ ಅವರ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಆರ್‌ಎಂಸಿ ಯಾರ್ಡ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರ್.ಆರ್.ನಗರ ಶಾಸಕ ಮುನಿರತ್ನ ಅವರಿಗೆ ವಿಶೇಷ ತನಿಖಾ ದಳ (ಎಸ್ ಐಟಿ) ಕ್ಲೀನ್ ಚಿಟ್ ನೀಡಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಎಸ್‌ಐಟಿಯು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ. ಈ ವರದಿಯು ಶಾಸಕನಿಗೆ ಬಿಗ್ ರಿಲೀಫ್ ನೀಡಿದೆ. ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ, ಈ ಪ್ರಕರಣದಲ್ಲಿ, ಮಹಿಳೆಯೊಬ್ಬರು ಶಾಸಕ ಮುನಿರತ್ನ ಸೇರಿದಂತೆ ಕೆಲವರ ವಿರುದ್ಧ ಸಾಮೂಹಿಕ ಅತ್ಯಾಚಾರದ ಆರೋಪ ಮಾಡಿದ್ದರು. ಆರೋಪಿಗಳು ತನ್ನನ್ನು ನಿದ್ರೆ ಮಾತ್ರೆಗಳನ್ನು ಸೇವಿಸುವಂತೆ ಒತ್ತಾಯಿಸಿ, ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಆರ್ ಎಂಸಿ ಯಾರ್ಡ್ ಪೊಲೀಸರು ಎಫ್ ಐಆರ್ ದಾಖಲಿಸಿ, ತನಿಖೆಯನ್ನು ಎಸ್‌ಐಟಿಗೆ ವಹಿಸಿದ್ದರು. ಆದರೆ, ತನಿಖೆಯ ಸಂದರ್ಭದಲ್ಲಿ ಆರೋಪಗಳಿಗೆ ಸಾಕ್ಷ್ಯಾಧಾರ ದೊರೆಯದಿರುವುದು ಈಗ ಬೆಳಕಿಗೆ ಬಂದಿದೆ. ಎಸ್‌ಐಟಿಯ ತನಿಖೆಯು ಆರೋಪಿತ ಮಹಿಳೆಯ ದೂರಿನ ವಿಶ್ವಾಸಾರ್ಹತೆಯನ್ನು ಪರಿಶೀಲಿಸಿದೆ. ತನಿಖೆಯಲ್ಲಿ, ಮಹಿಳೆಯು ತಾನು ನಿದ್ರೆ ಮಾತ್ರೆ ಸೇವಿಸಿದ್ದೇನೆ ಎಂದು ಹೇಳಿಕೆ ನೀಡಿದ್ದರು. ಇದರ…
ಬೆಂಗಳೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕಾಗಿ ಅವರ ಪತ್ನಿ ಭಾರತಿ ವಿಷ್ಣುವರ್ಧನ್ ಮತ್ತು ಅಳಿಯ ನಟ ಅನಿರುದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನ ಕೆಂಗೇರಿ ರಿಂಗ್ ರೋಡ್‌ನಲ್ಲಿರುವ ಅಭಿಮಾನ್ ಸ್ಟುಡಿಯೋದಲ್ಲಿ 10 ಗುಂಟೆ ಜಾಗವನ್ನು ವಿಷ್ಣುವರ್ಧನ್ ಸ್ಮಾರಕಕ್ಕಾಗಿ ಮೀಸಲಿಡುವಂತೆ ಅವರು ಕೋರಿದ್ದಾರೆ. ಈ ಭೇಟಿಯು ಕಾವೇರಿ ನಿವಾಸದಲ್ಲಿ ನಡೆದಿದ್ದು, ಅಭಿಮಾನಿಗಳ ಬಹುದಿನದ ಬೇಡಿಕೆಯು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು ಅಂತ ಕಾರ್ಯಕರ್ತರು ಹೇಳೋದ್ರಲ್ಲಿ ಅರ್ಥ ಇದೆ. ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ ಅಂತಾ ನಾನೂ ಹೇಳಿದ್ದೇನೆ ಎಂದು ಕುಣಿಗಲ್ ಶಾಸಕ ರಂಗನಾಥ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರದಲ್ಲಿ ಗೊಂದಲ ಆಗುವ ಹೇಳಿಕೆ ಕೊಡಬಾರದು. ಕೆಲವು ವಿಚಾರದಲ್ಲಿ ನನಗೂ ಅಸಮಾಧಾನ ಇದೆ. ಆದರೆ ತುಮಕೂರು ವಿಚಾರದಲ್ಲಿ ನಾನು ಹೋಗಿ ಕೂತು, ನಾಲ್ಕು ಗೋಡೆ ಮಧ್ಯೆ ಬಗೆಹರಿಸಿಕೊಳ್ತೇನೆ ಎಂದಿದ್ದಾರೆ. ರಾಜಣ್ಣನವರು ನಮ್ಮ ಜಿಲ್ಲೆಯ ಹಿರಿಯ ನಾಯಕರು. ಅವರು ಬೇರೆ ಪಾರ್ಟಿಗೆ ಹೋಗಿ ಬಂದಿರಬಹುದು. ಆದ್ರೆ ಬಿಜೆಪಿಗೆ ಹೋಗೋ ನಿರ್ಧಾರ ಮಾಡಲ್ಲ. ಆ ವಿಚಾರದಲ್ಲಿ ಮಾತಾಡುವಷ್ಟು ನಾನು ದೊಡ್ಡವನಲ್ಲ ಎಂದು ಹೇಳಿದ್ದಾರೆ. ಹೈಕಮಾಂಡ್ ವಿರುದ್ಧ ಮಾತಾಡಿದ್ದಕ್ಕೆ ವಜಾ ಮಾಡಿದ್ದಾರೆ. ಹೈಕಮಾಂಡ್ ನವರೇ ಮಂತ್ರಿ ಮಾಡಿದ್ದಾರೆ. ರಾಜೇಂದ್ರ ಅವರು ದೊಡ್ಡ ರಾಜಕಾರಣಿ. ಅವರ ಬಗ್ಗೆ ಮಾತಾಡುವಷ್ಟು ದೊಡ್ಡವನಲ್ಲ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ತುಮಕೂರು: ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್ ಪಕ್ಷ ಬಿಡಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಮಧುಗಿರಿಯ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಪಾರ್ಟಿ ನನಗೆ ಏನೂ ಮೋಸ ಮಾಡಿಲ್ಲ. ಯಾವ ಕಾರಣಕ್ಕೂ ನಾನು ಕಾಂಗ್ರೆಸ್ ಬಿಡಲ್ಲ. ಜನರು ನನಗೆ ಕಾಂಗ್ರೆಸ್, ಬಿಜೆಪಿ ಅಥವಾ ಇಂಡಿಪೆಂಡೆಂಟ್ ನಿಂತರೂ ಮತ ಹಾಕುತ್ತಾರೆ. ರಾಹುಲ್ ಗಾಂಧಿ ಮತಗಳ್ಳತನ ಹೋರಾಟವನ್ನು ನಾನು ಬೆಂಬಲಿಸುತ್ತೇನೆ. ಸಿದ್ದರಾಮಯ್ಯ ನೇತೃತ್ವ ಇರೋವರೆಗೂ ನನ್ನ ಭವಿಷ್ಯಕ್ಕೆ ತೊಂದರೆ ಇಲ್ಲ ಎಂದು ರಾಜಣ್ಣ ಹೇಳಿದರು. ಅನ್ನಭಾಗ್ಯ ಕಾರ್ಯಕ್ರಮ ನನಗೆ ಬಹಳ ಪ್ರೀತಿಯ ಯೋಜನೆ. ಸಿದ್ದರಾಮಯ್ಯ ಅವರು ಅನ್ನಭಾಗ್ಯ ಕಾರ್ಯಕ್ರಮದಿಂದ ನನಗೆ ಅಚ್ಚುಮೆಚ್ಚು. ಅದಕ್ಕೆ ನಾನು ಅವರನ್ನು ಹೆಚ್ಚು ಪ್ರೀತಿ ಮಾಡುತ್ತೇನೆ. ಹಸಿವಿನ ಪಿಡುಗು ತೊಡೆದು ಹಾಕಿದ್ದು ಮಾನ್ಯ ಸಿದ್ದರಾಮಯ್ಯ. ಉಳಿದ ಸಿಎಂಗಳಿಗೆ ಮನಸ್ಥಿತಿ ಇರಲಿಲ್ಲ. ಹಾಗಾಗಿ ಅವರು ಅನ್ನಭಾಗ್ಯದಂತಹ ಕಾರ್ಯಕ್ರಮ ತಂದಿಲ್ಲ. ಸಿದ್ದರಾಮಯ್ಯನವರು ಅವರ ಮನೆಯಿಂದ ತಂದು ಕೊಟ್ಟಿಲ್ಲ ನಿಜ. ಆದರೆ ಬೇರೆ ಸಿಎಂಗಳು ಯಾಕೆ ಕೊಟ್ಟಿಲ್ಲ. ಮಧುಗಿರಿ ತಾಲೂಕಿನಲ್ಲಿ ಅನ್ನಭಾಗ್ಯ ಕಾರ್ಯಕ್ರಮ…
ಬೀದರ್: ಔರಾದ್ ತಾಲ್ಲೂಕು ಆರೋಗ್ಯ ಅಧಿಕಾರಿ ವಿರುದ್ಧದ ದೂರಿನ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಸೂಚಿಸಿದ್ದಾರೆ. ಸಚಿವರ ಸೂಚನೆ ಮೇರೆಗೆ ಅವರ ಆಪ್ತ ಕಾರ್ಯದರ್ಶಿ ಕೆ.ಎ.ಹಿದಾಯತ್ತುಲ್ಲ ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ ಎಂದು ಔರಾದ್‍ನ ಸುಭಾಷ್ ಚಂದ್ರ ಬೋಸ್ ಯುವಕ ಸಂಘದ ಅಧ್ಯಕ್ಷ ರತ್ನದೀಪ್ ಕಸ್ತೂರೆ ಹಾಗೂ ಎ. ಐ. ಸಿ. ಸಿ ರಾಷ್ಟ್ರೀಯ ಕಿಸಾನ್ ಸೆಲನ್ ಜಂಟಿ ಸಂಯೋಜಕರಾದ ಜಾನಸನ್ ಘೋಡೆ ತಿಳಿಸಿದ್ದಾರೆ. ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಗಾಯತ್ರಿದೇವಿ ಅವರು 18 ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇತರ ಹುದ್ದೆಗಳ ಪ್ರಭಾರ ಹೊಂದಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲೇ ಖಾಸಗಿ ಆಸ್ಪತ್ರೆ ನಡೆಸುತ್ತಿದ್ದಾರೆ. ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಅವರನ್ನು ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಬೇಕು ಎಂದು ರತ್ನದೀಪ ಕಸ್ತೂರೆ ಹಾಗೂ ಜಾನಸನ್ ಘೋಡೆ ಅವರು ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್…
ಕೋಲಾರ: ಕರ್ನಾಟಕದ ಬಾಡಿ ಬಿಲ್ಡರ್ ಅಮೆರಿಕದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸುರೇಶ್ ಕುಮಾರ್ (42) ಎಂಬ ಖ್ಯಾತ ಬಾಡಿ ಬಿಲ್ಡರ್ ಮೃತ ದುರ್ದೈವಿ. ತಮ್ಮ ಕುಟುಂಬವನ್ನು ಅಮೆರಿಕಕ್ಕೆ ಕರೆದೊಯ್ದಿದ್ದ ಸುರೇಶ್, ಕೆಲಸದ ನಿಮಿತ್ತ ಫ್ಲೋರಿಡಾದಿಂದ ಟೆಕ್ಸಾಸ್ ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕೋಲಾರದ ಗಾಂಧಿನಗರದ ಚಲಪತಿ ಮತ್ತು ಮುನಿಯಮ್ಮ ದಂಪತಿಯ ಪುತ್ರನಾಗಿದ್ದ ಸುರೇಶ್, ತಮ್ಮ ವೃತ್ತಿಜೀವನದಲ್ಲಿ ದೇಹದಾರ್ಢ್ಯ, ರೂಪದರ್ಶನ ಮತ್ತು ಫಿಸಿಯೋಥೆರಪಿಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದರು. ಸುರೇಶ್ ಕುಮಾರ್ ಅವರು ಫ್ಲೋರಿಡಾದಿಂದ ಟೆಕ್ಸಾಸ್‌ಗೆ ಕಾರಿನಲ್ಲಿ ತೆರಳುತ್ತಿದ್ದಾಗ ರಸ್ತೆ ಅಪಘಾತ ಸಂಭವಿಸಿದೆ. ಈ ಭೀಕರ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಮೂರು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದರೂ, ತೀವ್ರವಾದ ಗಾಯಗಳಿಂದಾಗಿ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಕೊನೆಗೆ ಸುರೇಶ್ ಕುಮಾರ್ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ವಿಜಯಪುರ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ವಿದ್ಯುತ್ ಹರಿದು ಯುವಕನೊರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ನಗರದ ಗಾಂಧಿ ಚೌಕ್ ವೃತ್ತದ ಬಳಿ ನಡೆದಿದೆ. ಮೃತ ಯುವಕನನ್ನು ಶುಭಂ ಸಂಕಪಾಲ (21) ಎಂದು ಗುರುತಿಸಲಾಗಿದೆ. ಇವರು ವಿಜಯಪುರದ ಡೋಬಲೆ ಗಲ್ಲಿ ನಿವಾಸಿಯಾಗಿದ್ದರು. ಗಾಯಗೊಂಡವರಾದ ಪ್ರಭಾಕರ ಜಂಗಲೆ (22) ಮತ್ತು ಲಖನ್ ಚವ್ಹಾಣ (28) ರವರಿಗೆ ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಗಾಂಧಿ ಚೌಕ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಡಿವೈಎಸ್ ಪಿ ಬಸವರಾಜ ಯಲಿಗಾರ ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಉತ್ತರ ಕನ್ನಡ: ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ಆಸ್ಪತ್ರೆಯ ಕೊರತೆಯ ಬಗ್ಗೆ ಪ್ರಶ್ನೆ ಕೇಳಿದ ಪತ್ರಕರ್ತೆಗೆ ಕಾಂಗ್ರೆಸ್ ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವಹೇಳನಾಕಾರಿ ಪದ ಬಳಕೆ ಮಾಡಿರುವ ಘಟನೆ ವರದಿಯಾಗಿದೆ. ಗ್ಯಾರೆಂಟಿ ನ್ಯೂಸ್ ನ ಮಹಿಳಾ ಪ್ರಧಾನ ಸಂಪಾದಕಿ ರಾಧಾ ಹಿರೇಗೌಡರ್ ಅವರು ಆಸ್ಪತ್ರೆಗೆ ಬಗ್ಗೆ ಪ್ರಶ್ನೆ ಕೇಳಿದ ವೇಳೆ “ನಿನ್ನ ಹೆರಿಗೆಗೆ ಆಸ್ಪತ್ರೆ ಮಾಡಿಸೋಣ, ಚಿಂತಿಸಬೇಡ” ಎಂದು ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾಗಿದೆ. ಜೋಯಿಡಾ ತಾಲೂಕು ಉತ್ತರ ಕನ್ನಡದ ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು, ಇಲ್ಲಿ ಉತ್ತಮ ಆಸ್ಪತ್ರೆಯ ಕೊರತೆಯಿಂದ ಸಾರ್ವಜನಿಕರು ದಶಕಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ನಿಮ್ಮ ಕಾಲಾವಧಿಯಲ್ಲಿ ಜಿಲ್ಲೆಗೆ ಒಂದು ಉತ್ತಮ ಆಸ್ಪತ್ರೆ ನಿರ್ಮಿಸಿಕೊಡಿ ಎಂದು ಮನವಿ ಮಾಡಿದ ವೇಳೆ ಸ್ಪಂದಿಸುವ ಬದಲು, ಉದ್ಧಟತನದ ಮಾತುಗಳನ್ನಾಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC