Subscribe to Updates
Get the latest creative news from FooBar about art, design and business.
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
- ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ
- ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
- ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ
- ಮಧುಗಿರಿ: ರಾಜಣ್ಣ, ಜಮೀರ್ ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ
Author: admin
ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮ ಸಮೀಪದ ಕಾರಂಜಾ ಜಲಾಶಯ ಕಾಲುವೆಯಲ್ಲಿ ಬಿದ್ದು ತಂದೆ–ಮಗ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ನಡೆದಿದೆ. ಮೃತರನ್ನು ಹಳ್ಳಿಖೇಡ್ (ಬಿ) ಗ್ರಾಮ ನಿವಾಸಿಗಳಾದ ವಿಶ್ವನಾಥ್ (ಇಸಪ್ಪ) ಹೊಸಮನಿ (53), ಅವರ ಮಗ ಅಂಬರೀಶ್ ಹೊಸಮನಿ (23) ಎಂದು ಗುರುತಿಸಲಾಗಿದೆ. ಬೀದರನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುವಾಗ ಅಂಬರೀಶ್ ಕೈಕಾಲು ತೊಳೆಯಲು ಕಾಲುವೆಗೆ ಇಳಿದಿದ್ದಾನೆ. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಮಗನನ್ನು ರಕ್ಷಿಸಲು ತಂದೆ ವಿಶ್ವನಾಥ್ ಕೂಡ ಕಾಲುವೆಗೆ ಇಳಿದಾಗ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಧನ್ನೂರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹಗಳನ್ನು ಹಳ್ಳಿಖೇಡ(ಬಿ) ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಭಾಲ್ಕಿ ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಕೆಲ ದಿನಗಳಿಂದ ಗಂಭೀರ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡದ ಕಿರುತೆರೆ ನಟಿ ರಶ್ಮಿ ಲೀಲಾ ಸೋಮವಾರ ನಿಧನರಾಗಿದ್ದಾರೆ. ಶ್ವಾಸಕೋಶದ ಕಾಯಿಲೆಯಾದ ಪಲ್ಮನರಿ ಫೈಬ್ರೋಸಿಸ್‌ನಿಂದ ಬಳಲುತ್ತಿದ್ದ ಅವರಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕೆಲ ದಿನಗಳ ಹಿಂದಷ್ಟೇ ಸೂಕ್ತ ದಾನಿಗಳು ಬಂದ ಹಿನ್ನಲೆಯಲ್ಲಿ ಶ್ವಾಸಕೋಶದ ಟ್ರಾನ್ಸ್ ಪ್ಲಾಂಟ್ ಕೂಡ ಮಾಡಲಾಗಿತ್ತು ಎನ್ನಲಾಗಿದೆ. ಆ ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಿರುತೆರೆ ನಟಿ ರಶ್ಮಿ ಲೀಲಾಗೆ ಚಿಕಿತ್ಸೆ ಮುಂದುವರೆದಿತ್ತು. ಆದರೇ ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಸುದ್ದಿಯನ್ನು ಅವರ ಪತಿ ಸಾರಕ್ಕಿ ಮಂಜು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇಂದು ಬೆಳಗ್ಗೆ ಒಂದು ಪೋಸ್ಟ್ ಮಾಡಿದ್ದ ಸಾರಕ್ಕಿ ಮಂಜು, ಹೃದಯದ ಬಡಿತ ತೀವ್ರ ಇಳಿಮುಖ ಆಗುತ್ತಿದೆ. ಕೊನೆಯ ಬಾರಿಗೆ ಒಂದು ಸಲ, ಒಂದೇ ಒಂದು ಸಲ ಈ ನನ್ನ ಜೀವ ಉಳಿದು ಬಿಡಲಿ. ಉಳಿಸಿಕೊಡಲೆಂದು ನಿಮ್ಮ ಇಷ್ಟ ದೇವರನ್ನು ಪ್ರಾರ್ಥಿಸಿ ಬಿಡಿ ಎಂದು ಪೋಸ್ಟ್ ಹಾಕಿದ್ದರು. ಬಳಿಕ ನಮ್ಮ ಪ್ರಾಣ…
ಬೆಂಗಳೂರು: ಭಾರತದ ಪ್ರಮುಖ ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಜೈನ್ (ಡೀಮ್ಡ್ –ಟು–ಬಿ) ವಿಶ್ವವಿದ್ಯಾಲಯವು “ಸಾಮಾಜಿಕ ಮೌಲ್ಯಗಳ ಕುಸಿತ ಮತ್ತು ಅದರ ಪರಿಣಾಮಗಳು” ಎಂಬ ವಿಷಯದ ಮೇಲೆ ಸಮ್ಮೇಳನವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಭಾರತದ ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಸಮಕಾಲೀನ ಸಮಾಜದಲ್ಲಿ ನೈತಿಕ ಮೌಲ್ಯಗಳ ಅಗತ್ಯತೆ ಕುರಿತು ಮಾತನಾಡಿದ ಅವರು, ಲಾಲಸೆ ಮತ್ತು ಕುಸಿಯುತ್ತಿರುವ ನೈತಿಕತೆಯ ಪರಿಣಾಮಗಳ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಅವರು “ಇಂದಿನ ಸಮಾಜದ ಅನೇಕ ಸಮಸ್ಯೆಗಳ ಮೂಲ ಕಾರಣ ನಿಯಂತ್ರಣವಿಲ್ಲದ ಲಾಲಸೆ. ಲಾಲಸೆಗೆ ಮಿತಿ ಇಲ್ಲದಾಗ ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ” ಎಂದು ಹೇಳಿದರು. ಸಮಾಜದ ಆದ್ಯತೆಗಳು ಮತ್ತು ಮೌಲ್ಯಗಳಲ್ಲಿ ಆಗುತ್ತಿರುವ ಬದಲಾವಣೆಯನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು, ಪ್ರಾಮಾಣಿಕತೆಗೆ ಇಂದಿನ ಸಮಾಜದಲ್ಲಿ ಗೌರವ ಕಡಿಮೆಯಾಗಿರುವುದನ್ನು ಉಲ್ಲೇಖಿಸಿದರು. ಹಾಗೂ “ಒಮ್ಮೆ ಸಮಾಜವು ಪ್ರಾಮಾಣಿಕತೆಯನ್ನು ಗೌರವಿಸುತ್ತಿತ್ತು ಮತ್ತು ತಪ್ಪು ಮಾಡಿದವರನ್ನು ಕಠಿಣ ನೈತಿಕ ಮೌಲ್ಯಗಳ ಮೂಲಕ…
ಗುಬ್ಬಿ, : ನಮಗೆ ಎಲ್ಲದಕ್ಕಿಂತಲೂ ಮುಖ್ಯವಾದದ್ದು ಆರೋಗ್ಯ, ಆರೋಗ್ಯದ ಮೇಲೆ ಪರಿಣಾಮ ಬೀರದಂತೆ ಪ್ರತಿಯೊಬ್ಬರು ಜಾಗೃತಿ ವಹಿಸಬೇಕು ಎಂದು ನೆರಳು ಸೇವಾ ಟ್ರಸ್ಟ್ ನ ಅಧ್ಯಕ್ಷ ಜಗದೀಶ್ ತಿಳಿಸಿದರು. ತಾಲ್ಲೂಕಿನ ಸಿ.ಎಸ್.ಪುರ ಸಂತೆ ಮೈದಾನದಲ್ಲಿ ನೆರಳು ಸೇವಾ ಟ್ರಸ್ಟ್ ನ ಒಂದನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನೆರಳು ಸೇವಾ ಟ್ರಸ್ಟ್ ಹಾಗೂ ಶ್ರೀ ದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಸಹಯೋಗದೊಂದಿಗೆ ನಡೆದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು ಮನುಷ್ಯ ಉದ್ಯೋಗ ಮತ್ತು ದುಡಿಮೆಯ ಒತ್ತಡದ ಜೀವನದಲ್ಲಿ ಆರೋಗ್ಯದ ಮೇಲಿನ ಕಾಳಜಿಯನ್ನೇ ಮರೆತುಬಿಡುತ್ತಾನೆ. ಇದರಿಂದ ಆರೋಗ್ಯ ಹದಗೆಡುತ್ತದೆ. ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಆರೋಗ್ಯವಂತ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು. ಕಳೆದ ಒಂದು ವರ್ಷದಿಂದ ನೆರಳು ಸೇವಾ ಟ್ರಸ್ಟ್ ವತಿಯಿಂದ ಶಾಲಾ ಮಕ್ಕಳಿಗೆ ಬ್ಯಾಗು, ಪುಸ್ತಕ, ಲೇಖನ ಸಾಮಗ್ರಿಗಳು. ಪರಿಸರದ ಬಗ್ಗೆ ಜಾಗೃತಿ ಸೇರಿದಂತೆ ಮುಂತಾದ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುತ್ತಾ ಬರುತ್ತಿದೆ. ಮುಂದಿನ…
ತುಮಕೂರು: ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಜನವರಿ 9ರಂದು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್ ನ್ನು ಲಾಂಚ್ ಮಾಡಲಾಗಿದೆ. ಮಹಿಳಾ ಉದ್ಯಮಿಗಳ ನೋಂದಣಿ ಕಾರ್ಯ ಕೈಗೊಳ್ಳಲು ಮಹಿಳಾ ಉದ್ಯಮಿಗಳು ಮಾಹಿತಿ ನೀಡಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಮನವಿ ಮಾಡಿದ್ದಾರೆ. ತರಬೇತಿ ಪಡೆದು ಸ್ವ–ಉದ್ಯೋಗ ನಡೆಸುತ್ತಿರುವ ಮಹಿಳೆಯರು, ನಿಗಮದಿಂದ ವಿವಿಧ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆದು ಉತ್ತಮ ಉತ್ಪನ್ನಗಳ ತಯಾರು ಮಾಡುತ್ತಿರುವ ಮಹಿಳಾ ಫಲಾನುಭವಿಗಳು, ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರೆ ಯಶಸ್ವಿ ಮಹಿಳಾ ಉದ್ಯಮಿಗಳು ತಾವು ತಯಾರಿಸುವ ಉತ್ಪನ್ನಗಳ ಮಾಹಿತಿಯನ್ನು ಜರೂರಾಗಿ ಜಿಲ್ಲೆಯ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು–572101 ಇಲ್ಲಿ ಮಹಿಳಾ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಿ ನೀಡಬೇಕೆಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಬೇಲೂರು: ಮಕ್ಕಳು ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಬೇಕು ಎಂದು ಸಂಹಿತ ಟಿನಿ ಕಿಡ್ ಶಾಲೆಯ ಸಂಸ್ಥಾಪಕ ಅಧ್ಯಕ್ಷ ಕೆ. ಎಸ್. ಹರೀಶ್ ಹೇಳಿದರು. ಗ್ರಾಮದ ಶ್ರವಣ್ ಪಟೇಲ್ ಕಲ್ಯಾಣ ಮಂಟಪದಲ್ಲಿ ಸಂಹಿತ ಟಿನಿ ಕಿಡ್ ಶಾಲೆಯ ಜಾಂಬೂರಿ ಎರಡನೇ ವರ್ಷದ ಯುಕೆಜಿ ಪದವಿ ಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಶಾಲೆಯ ಆವರಣಕ್ಕೆ ಬಂದಾಗ ಪುಟ್ಟ ಪುಟ್ಟ ಮಕ್ಕಳು ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸುತ್ತಿದ್ದರೆ ನಾವು ಸಹ ಮಕ್ಕಳ ಜೊತೆಗೆ ಒಂದಾಗುತ್ತೇವೆ. ಪುಟ್ಟ ಮಕ್ಕಳ ಪೋಷಕರು ಸಹಕಾರದಿಂದ ಈ ಶಾಲೆಯು ಇಷ್ಟರ ಮಟ್ಟಿಗೆ ಬೆಳೆಯಲು ಸಹಕಾರಿಯಾಗಿದೆ. ಇನ್ನು ಹೆಚ್ಚಿನ ರೀತಿಯಲ್ಲಿ ಮಕ್ಕಳ ಆಟ ಪಾಠ ವ್ಯಾಸಂಗಕ್ಕೆ ಬೇಕಾಗುವ ಸೌಲಭ್ಯವನ್ನು ನೀಡುತ್ತೇವೆ ಎಂದರು. ಸಂಸ್ಥೆಯ ಕಾರ್ಯದರ್ಶಿ ಸಿ.ಆರ್. ಲಾವಣ್ಯ ಮಾತನಾಡುತ್ತಾ, ಈ ಸಂಸ್ಥೆಯು ಅಭಿವೃದ್ಧಿ ಹೊಂದಬೇಕಾದರೆ ಮಕ್ಕಳ ಜ್ಞಾನ, ವಿದ್ಯಾರ್ಜನೆ ಅತಿ ಮುಖ್ಯವಾಗಿದೆ. ಅದಕ್ಕೆ ನಮ್ಮ ಶಿಕ್ಷಕ ವೃಂದದವರು ಮಕ್ಕಳ ವ್ಯಾಸಂಗದ ಕಡೆ ಹೆಚ್ಚಿಗೆ ಗಮನ ಹರಿಸಿ ಅವರ ಮುಂದಿನ ವ್ಯಾಸಂಗದ…
ತುಮಕೂರು: ಮಕ್ಕಳಲ್ಲಿ ಆಹಾರದ ಮಹತ್ವ ತಿಳಿಸಲು, ಬಳಕೆಯಲ್ಲಿರುವ ವಿಭಿನ್ನ ಸಂಸ್ಕೃತಿಯ ಆಹಾರ ಪರಿಚಯಿಸಿ ಅಭಿರುಚಿ ಬೆಳೆಸಲು, ಆಹಾರ ತಯಾರಿಕೆಯಲ್ಲಿ ಆಸಕ್ತಿ ರೂಪಿಸಲು ನಗರದ ಶಿಲಾಗೇಟ್ ನ ಹಿಂದೂಸ್ತಾನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಮಕ್ಕಳ ಆಹಾರ ಮೇಳ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಮಕ್ಕಳು ತಾವೇ ತಯಾರಿಸಿದ ವಿವಿಧ ರುಚಿಯ ಚಾಟ್ಸ್, ಸ್ನಾಕ್ಸ್ ಮತ್ತಿತರ ಆರೋಗ್ಯಕರ ತಿಂಡಿಗಳನ್ನು ಮೇಳದಲ್ಲಿ ಆಕರ್ಷಕವಾಗಿ ಪ್ರದರ್ಶಿಸಿ, ಮಾರಾಟ ಮಾಡಿ ಗಮನ ಸೆಳೆದರು. ತಮ್ಮ ಮಕ್ಕಳು ಸಿದ್ದಪಡಿಸಿದ ಆಹಾರವನ್ನು ಮುಗಿಬಿದ್ದು ಖರೀದಿಸಿದ ಪೋಷಕರು, ಸವಿದು ಸಂಭ್ರಮಿಸಿದರು. ಈ ವೇಳೆ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕಿ ಜಮಾನಿ ಜಾನ್ ಸುಲ್ತಾನಾ, ನಮ್ಮಲ್ಲಿನ ಆಹಾರ ಪದ್ಧತಿ, ಅಭಿರುಚಿ ವಿಭಿನ್ನವಾಗಿದೆ. ಇಂತಹ ಆಹಾರ ಸಂಸ್ಕೃತಿಯ ವಿಭಿನ್ನತೆಯಲ್ಲಿ ಏಕತೆ ಎನ್ನುವಂತೆ ಮಕ್ಕಳು ತಮ್ಮ ಅಭಿರುಚಿಯ ಆಹಾರವನ್ನು ಇತರರಿಗೂ ಪರಿಚಯಿಸಲು, ಮಕ್ಕಳಲ್ಲಿ ಆಹಾರ ತಯಾರಿಕೆ ಬಗ್ಗೆ ಆಸಕ್ತಿ ಮೂಡಿಸಲು ಈ ಮೇಳ ಸಹಕಾರಿಯಾಗಿದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿ ಬೆಳೆಸಿದರೆ ಅವರಲ್ಲಿ ಕ್ರಿಯಾಶೀಲತೆ, ಆಲೋಚನಾ ಶಕ್ತಿ…
ಚಿಕ್ಕನಾಯಕನಹಳ್ಳಿ: ಹೊಯ್ಸಳಕಟ್ಟೆ ಸಮೀಪ ಬೋರನಕಣಿವೆ ಶ್ರೀ ಸಾಯಿಧಾಮದ ಆವರಣದಲ್ಲಿ ಭಾನುವಾರ ಮಹಾ ಶಿವರಾತ್ರಿ ಅಂಗವಾಗಿ ನರ್ಮದೋದ್ಭವ ಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಮುಂಜಾನೆ 4 ಗಂಟೆಯಿಂದ 5 ಗಂಟೆಯ ಬ್ರಾಹ್ಮಿ ಲಗ್ನದಲ್ಲಿ ಶ್ರೀ ನರ್ಮದೇಶ್ವರ ಲಿಂಗ ಪ್ರತಿಷ್ಠಾಪನೆ, ನೇತ್ರೋನ್ಮೀಲನ, ಪ್ರಾಣಪ್ರತಿಷ್ಠೆ, ನಿರೀಕ್ಷನ, ಕಲಾಕರ್ಷಣೆ ಸಹಿತ ಕಲಾವ್ಯಾಸ ಹೋಮ, ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಸೇವಾಕಾರ್ಯಗಳು ನಡೆದವು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ದಂಪತಿ ಭೇಟಿ ನೀಡಿ, ಡಾ.ರಾಜ್‌ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ದಂಪತಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಿದರು. ನಂತರ 108 ಪುಣ್ಯನದಿಗಳ ತೀರ್ಥಗಳಿಂದ ಕಣಿವೆ ಶಂಕರನಿಗೆ ಅಭಿಷೇಕ ಪೂಜೆ ನೆರವೇರಿಸಿದರು. ಸಿದ್ದಗಂಗಾ ಮಠದ ಕಿರಿಯ ಶ್ರೀಗಳು ಶ್ರೀ ಶಿವ ಸಿದ್ದೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಕಣಿವೆ ಶಂಕರನ ಪುಣ್ಯಾಭಿಷೇಕ ಮಂಗಳ ಕಾರ್ಯ ನಡೆಯಿತು. ಮಹಾಶಿವರಾತ್ರಿ ಆಚರಣೆ ಹಾಗೂ ಕಣಿವೆ ಶಂಕರನ ಅಭಿಷೇಕ ಕಾರ್ಯಕ್ರಮಗಳಿಗೆ ಶಿರಾ ಕ್ಷೇತ್ರದ ಶಾಸಕ ಟಿ.ಬಿ.ಜಯಚಂದ್ರ ದಂಪತಿ ಚಾಲನೆ ನೀಡಿದರು. ಉಪಲೋಕಾಯುಕ್ತ…
ಸರಗೂರು: ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ಸ್ವಾಮಿಗೆ ಪವಿತ್ರ ಗಂಗಾ ಜಲದಿಂದ ಅಭಿಷೇಕ ಮತ್ತು ರುದ್ರಾಭಿಷೇಕ ಹಾಗೂ ಸಹಸ್ರ ಬಿಲ್ವಾರ್ಚನೆ ವಿಶೇಷ ಪೂಜೆ ನಡೆಸಲಾಯಿತು. ತಾಲೂಕಿನ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹಾಗೂ ಬಂಡಿಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಬರುವ ಶ್ರೀಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಅರ್ಚಕರು ನುಸುಕಿನ ವೇಳೆಯಲ್ಲಿ ಮಾದೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ ಮಾಡಿ ಗಂದಾಭಿಷೇಕ, ಪುಷ್ಷಭಿಷೇಕ, ಮಹಾ ಮಂಗಳಾರತಿ ಸೇವೆಯನ್ನು ನೆರವೇರಿಸಿದ ಬಳಿಕ ಭಕ್ತರ ಧರ್ಶನಕ್ಕೆ ಅನುವು ಮಾಡಿಕೊಡಲಾಯಿತು. ಮಹದೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಮಜ್ಜನದ ಬಾವಿ ಬಳಿ ಬಿಂದಿಗೆಗಳನ್ನು ಒಂದೆಡೆ ಇರಿಸಿ, ಜೊತೆಯಲ್ಲಿ ಎಳನೀರನ್ನು ಒಂದೆಡೆ ಇರಿಸಿ, ಮಂತ್ರ ಘೋಷ ಸಮೇತ ಪೂಜೆ ನೆರವೇರಿಸಿದರು. ನಂತರ ಮಜ್ಜನರ ಬಾವಿಗೆ ಗಂಗಾ ಪೂಜೆ ನೆರವೇರಿಸಿ, 101 ಬಿಂದಿಗೆಗೂ ಜಲ ತುಂಬಿಸಿದರು. ಬಳಿಕ ಅಲ್ಲಿಂದ ಛತ್ರಿ ಚಾಮರಗಳನ್ನು ಒಳಗೊಂಡು, ಮಂಗಳ…
ತುಮಕೂರು: ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಜಾತ್ರೆ ಪ್ರಯುಕ್ತ ಮಠದಲ್ಲಿ ನಡೆದಿರುವ ಮೂರು ದಿನಗಳ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿಷ್ಠಿತ ತಂಡಗಳು ಪಾಲ್ಗೊಂಡವು. ಸಿದ್ಧಗಂಗಾ ಜಾತ್ರೆಯ ವಿವಿಧ ಆಚರಣೆ, ಕಾರ್ಯಕ್ರಮಗಳ ಜೊತೆಗೆ ಕಬಡ್ಡಿ ಜಾತ್ರೆಯೂ ಮಠಕ್ಕೆ ಬರುವ ಸಹಸ್ರಾರು ಭಕ್ತರನ್ನು ಆಕರ್ಷಿಸಿ ಸಂಭ್ರಮ ಹೆಚ್ಚಿಸಿದೆ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಕಾರದಲ್ಲಿ ಸಿದ್ಧಗಂಗಾ ಸ್ಪೋರ್ಟ್ಸ್ ಅಸೋಸಿಯೇಷನ್ ಈ ಪಂದ್ಯಾವಳಿ ಆಯೋಜಿಸಿದೆ. ಮೊದಲ ದಿನ ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ ಕಬಡ್ಡಿ ಜಾತ್ರೆಗೆ ಚಾಲನೆ ನೀಡಿ ಶುಭ ಕೋರಿದರು. 20 ಪುರುಷ ಹಾಗೂ 4 ಮಹಿಳಾ ತಂಡಗಳು ಕಬಡ್ಡಿ ಪಂದ್ಯಾವಳಿಯಲ್ಲಿ ಸೆಣಸಾಟ ನಡೆಸಲಿವೆ. ಅಂತರಾಷ್ಟ್ರೀಯ ಗುಣಮಟ್ಟದ ಅಂಕಣದಲ್ಲಿ ನಡೆದಿರುವ ಕಬಡ್ಡಿ ಪಂದ್ಯಾವಳಿಯನ್ನು ಪ್ರತಿದಿನ ಸಾವಿರಾರು ಕ್ರೀಡಾಭಿಮಾನಿಗಳು ವೀಕ್ಷಿಸಿ ಸಂಭ್ರಮಿಸುತ್ತಿದ್ದಾರೆ. ಪಂದ್ಯಗಳ ರೋಚಕತೆಯನ್ನು ಕಣ್ತುಂಬಿಕೊಳ್ಳಲು ಪ್ರೇಕ್ಷಕರ ಅನುಕೂಲಕ್ಕಾಗಿ ವ್ಯವಸ್ಥಿತ ಗ್ಯಾಲರಿ ಸಿದ್ಧಪಡಿಸಲಾಗಿದೆ. ಎರಡನೇ ದಿನವಾದ ಶನಿವಾರ ಸಿದ್ಧಗಂಗಾ ಸ್ಪೋರ್ಟ್ಸ್ ಅಸೋಸಿಯೇಷನ್‌ನಿಂದ ಹಿರಿಯ ಕಬಡ್ಡಿ ಆಟಗಾರರಾದ ಮುನಿರಾಜು ಹಾಗೂ ನಟರಾಜು ಅವರಿಗೆ…