Subscribe to Updates
Get the latest creative news from FooBar about art, design and business.
- ಎಸ್ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
- ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
- ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
- ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
- ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
- ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
Author: admin
ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಜರುಗಿದೆ. ಇದಕ್ಕೆ ಅವರು ಕೂಡ ಆಗಮಿಸಿದ್ದರು. ಈ ವೇಳೆ ದೇವಸ್ಥಾನದ ಸಮಿತಿಯ ವತಿಯಿಂದ ಗೌರವಿಸಲಾಗಿದೆ. ಇತ್ತೀಚೆಗೆ ನಟಿ ಶಿಲ್ಪಾ ಶೆಟ್ಟಿ ಅವರು ಕರ್ನಾಟಕಕ್ಕೆ ಆಗಮಿಸಿ ಕೋಲವನ್ನು ವೀಕ್ಷಿಸಿದ್ದರು. ಈ ಫೋಟೋಗಳು ವೈರಲ್ ಆಗಿದ್ದವು. ಈಗ ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಣಜಾರುಗೆ ಭೇಟಿ ನೀಡಿದ್ದಾರೆ. ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಜರುಗಿದೆ. ಇದಕ್ಕೆ ಅವರು ಕೂಡ ಆಗಮಿಸಿದ್ದರು. ಈ ವೇಳೆ ಅವರು ಬ್ರಹ್ಮಕಲಶೋತ್ಸವ ಸಭಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಪೂಜಾ ಹೆಗ್ಡೆಯನ್ನು ದೇವಸ್ಥಾನದ ಸಮಿತಿಯ ಸದಸ್ಯರು ಗೌರವಿಸಿದ್ದಾರೆ. ಅಭಿಮಾನಿಯೊರ್ವ ಪೂಜಾ ಹೆಗ್ಡೆಯ ಭಾವಚಿತ್ರವನ್ನು ರಚಿಸಿದ್ದ. ಇದನ್ನು ಸನ್ಮಾನ ಸಂದರ್ಭದಲ್ಲಿ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಸಕಾಲಕ್ಕೆ ಮಳೆ ಬಾರದ ಹಿನ್ನೆಲೆ ಇಳುವರಿ ಕಡಿಮೆ ಆಗಿ ಮೆಣಸಿನಕಾಯಿ ಬೆಲೆ ಗಗನಕ್ಕೇರಿದೆ. ಈ ಮೂಲಕ ಗ್ರಾಹಕರು ಕಂಗಾಲಾಗಿದ್ದಾರೆ. ಬಿಸಿಲಿನ ತೀವ್ರತೆಯಿಂದ ತರಕಾರಿ ದರವೂ ಹೆಚ್ಚಳವಾಗತೊಡಗಿದೆ. ತರಕಾರಿ ಬೆಳೆಯ ಮೇಲೆ ಗರಿಷ್ಠ ತಾಪಮಾನ ವ್ಯತಿರಿಕ್ತ ಪರಿಣಾಮ ಬೀರುತ್ತಿರುವ ಹಿನ್ನೆಲೆ ಪೂರೈಕೆ ಕಡಿಮೆಯಾಗಿದೆ. ಇದರಿಂದಾಗಿ ಸಹಜವಾಗಿ ತರಕಾರಿ ಬೆಲೆ ಏರಿಕೆ ಕಂಡಿದೆ. ಇನ್ನು ಬೀನ್ಸ್, ಗೆಡ್ಡೆಕೋಸು, ಬೀಟ್ರೂಟ್, ಹೀರೇಕಾಯಿ ಎಲ್ಲದರ ದರವೂ ಏರಿಕೆ ಆಗಿದೆ. ಅದರ ಜೊತೆ ಹಸಿ ಮೆಣಸಿನಕಾಯಿ ರೇಟ್ ಸಹ ಹೆಚ್ಚಳವಾಗಿದೆ. ಕಳೆದ ವಾರ 60 ರಿಂ 80 ರೂಪಾಯಿ ಇದ್ದ ಮೆಣಸಿನಕಾಯಿ ಬೆಲೆ, ಈ ವಾರ ದುಬಾರಿಯಾಗಿದೆ. 120 ರೂಪಾಯಿ ತಲುಪಿದೆ. ಕೊಳ್ಳುವಾಗಲೇ ಗ್ರಾಹಕರಿಗೆ ಖಾರವಾಗಿದೆ. ಇದೇ ರೀತಿ ರಾಜ್ಯದಲ್ಲಿ ಬಿಸಿಲು ಮುಂದುವರೆದರೆ ತರಕಾರಿ ರೇಟ್ ಇನ್ನೂ ಹೆಚ್ಚಳವಾಗಲಿದೆ. ಸದ್ಯ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಬೀನ್ಸ್ ಬೆಲೆಯು ಕೆಜಿಗೆ 250 ರೂಪಾಯಿಯ ಗಡಿ ದಾಟಿದೆ. ಉಳಿದ ತರಕಾರಿಗಳ ಬೆಲೆಯೂ ಹೆಚ್ಚಾಗಿದೆ. ಇನ್ನು ಬೆಂಗಳೂರಲ್ಲಿ ಸದ್ಯ…
ಭಾರತೀಯ ಸಮೂಹ ಮಾಧ್ಯಮ ಮತ್ತು ಸಂಶೋಧನಾ ಸಂಸ್ಥೆ (ಐಎಂಎಸ್‌ಆರ್) ನೀಡುವ ‘ರೋಹಿತ್ ರಾಜಣ್ಣ ಪತ್ರಿಕೋದ್ಯಮ ಪ್ರಶಸ್ತಿ’ಗೆ ‘ಪ್ರಜಾವಾಣಿ’ಯ ಚಿಕ್ಕಮಗಳೂರು ಜಿಲ್ಲಾ ವರದಿಗಾರ ಎಸ್.ಕೆ. ವಿಜಯಕುಮಾರ್ ಆಯ್ಕೆ ಆಗಿದ್ದಾರೆ. ಇವರು ಹಾಸನ ಜಿಲ್ಲೆಯವರು. ‘ಬೂದಿಯಾಗದ ಕೆಂಡ’ ಇವರ ಪ್ರಕಟಿತ ಕೃತಿಯಾಗಿದ್ದು, ಇದರಲ್ಲಿನ ‘ಅನ್ನಕ್ಕಾಗಿ ರಾತ್ರಿಯಿಡೀ ಕಾದದ್ದು’ ಲೇಖನವು ಮೈಸೂರು ವಿಶ್ವವಿದ್ಯಾಲಯದ ಬಿ.ಎ. ನಾಲ್ಕನೆ ಸೆಮಿಸ್ಟರ್ ಪಠ್ಯವಾಗಿದೆ. ರೋಹಿತ್ ರಾಜಣ್ಣ ಅವರು ‘ವಿಜಯ ಟೈಮ್ಸ್’ ಮತ್ತು ಟೈಮ್ಸ್ ಆಫ್ ಇಂಡಿಯಾ’ದಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದರು. ಅಕಾಲಿಕವಾಗಿ ನಿಧನರಾದ ಮಗನ ಸ್ಮರಣಾರ್ಥ ಅವರ ತಂದೆ ರಾಜಣ್ಣ ಅವರು ರೋಹಿತ್ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಿದ್ದಾರೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಎಚ್.ಆರ್. ಶ್ರೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನರೇಂದ್ರ ಮೋದಿ ನಮ್ಮ ಪಕ್ಷವನ್ನ ಮುಗಿಸಲು ನಿಂತಿದ್ದಾರೆ. ಈ ಚುನಾವಣೆಯಲ್ಲಿ ಮೋದಿ ಗೆದ್ದರೇ ಎಲ್ಲಾ ವಿಪಕ್ಷಗಳ ನಾಯಕರನ್ನ ಜೈಲಿಗೆ ಕಳುಹಿಸ್ತಾರೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆರೋಪಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಅಮ್ ಆದ್ಮಿ ಪಕ್ಷವನ್ನ ನಿರ್ನಾಮ ಮಾಡಲು ಬಿಜೆಪಿ ಯತ್ನಿಸುತ್ತಿದೆ. ಮೋದಿ ಅವರ ಉದ್ದೇಶ ಒನ್ ನೇಷನ್ ಒನ್ ಲೀಡರ್. ಅವರೊಬ್ಬರೇ ಲೀಡರ್ ಆಗಿ ಇರಬೇಕೆಂಬುದು ಅವರ ಉದ್ದೇಶ. ವಿಪಕ್ಷ ನಾಯಕರನ್ನ ಜೈಲಿಗೆ ಕಳುಹಿಸುವುದು ಮೋದಿ ಉದ್ದೇಶ. ನಮ್ಮ ಪಕ್ಷವನ್ನ ಮುಗಿಸಲು ಬಿಜೆಪಿಗರು ನಿಂತಿದ್ದಾರೆ. ಈ ಚುನಾವಣೆಯಲ್ಲಿ ಮೋದಿ ಗೆದ್ದರೇ ಎಲ್ಲಾ ವಿಪಕ್ಷನಾಯಕರನ್ನೂ ಜೈಲಿಗೆ ಕಳಿಸುತ್ತಾರೆ. ಈಗಾಗಲೇ ನಮ್ಮ ಪಕ್ಷದ ನಾಲ್ವರನ್ನ ಜೈಲಿಗೆ ಕಳುಹಿಸಿದ್ದಾರೆ ಮೋದಿಗೆ ನಮ್ಮ ಪಕ್ಷ ಎಂದ್ರೆ ಕ್ರಶ್. ನಾನು ಹೊರಬರುತ್ತೇನೆ ಎಂದು ಊಹಿಸಿರಲಿಲ್ಲ. ನನಗೆ ಜಾಮೀನು ಸಿಗುವ ನಿರೀಕ್ಷೆ ಇರಲಿಲ್ಲ ಎಂದು ಅರವಿಂದ ಕೇಜ್ರಿವಾಲ್ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋಗಳ ಪೆನ್ ಡ್ರೈವ್ ಪ್ರಕರಣ ರಾಷ್ಟ್ರವ್ಯಾಪ್ತಿ ಸದ್ದು ಮಾಡುತ್ತಿದ್ದಂತೆ ಇದೀಗ ರಾಜ್ಯದ ಇತರೆಡೆಗಳಲ್ಲೂ ಇರುವ ‘ಹೈ ಪ್ರೊಫೈಲ್’ ವ್ಯಕ್ತಿಗಳಿಗೆ ‘ಪೆನ್ ಡ್ರೈವ್’ ನಡುಕ ಶುರುವಾಗಿದೆ ಎಂದು ಹೇಳಲಾಗುತ್ತಿದೆ. ಕೆಲಸ, ಹಣ, ಶಿಕ್ಷಣ, ಅಧಿಕಾರದ ಆಮಿಷ ತೋರಿಸಿ ಕೆಲವರು ಯುವತಿಯರನ್ನು ದುರ್ಬಳಕ್ಕೆ ಮಾಡಿಕೊಂಡಿದ್ದಾರೆ. ಇಂತಹ ವ್ಯಕ್ತಿಗಳು ಸಮಾಜದ ಎದುರು ಮಾಮೂಲಿಗಳಂತೆ ಜೀವನ ನಡೆಸುತ್ತಿದ್ದಾರೆ. ಅಂತಹವರ ಪ್ರಕರಣಗಳು ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಗಳ ಬೆನ್ನಲ್ಲೇ ಸದ್ದು ಮಾಡುತ್ತಿದೆ. ಕೆಲವಷ್ಟು ಪೆನ್ ಡ್ರೈವ್ ಪ್ರಕರಣಗಳು ನಡೆದಿದ್ದು ಅಂತಹ ಪ್ರಕರಣಗಳು ಕೂಡ ಮುಂದಿನ ದಿನಗಳಲ್ಲಿ ಹೊರಬಂದರೂ ಅಚ್ಚರಿ ಇಲ್ಲ ಎನ್ನಲಾಗುತ್ತಿದೆ. ಸದ್ಯ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಐಟಿ ತನಿಖೆ ಬಿರುಸುಗೊಂಡಿದೆ. ಆದರೆ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ತನಿಖೆಗೆ ಸಹಕಾರ ನೀಡುತ್ತಿಲ್ಲ. ಈತನ ವಿರುದ್ಧ ಹಲವು ನೋಟಿಸ್ ಗಳನ್ನು ನೀಡಲಾಗಿದೆ. ಭಾರತಕ್ಕೆ ಕರೆತಂದು ವಿಚಾರಣೆ ನಡೆಸುವುದು ಯಾವಾಗ ಎನ್ನುವುದು ಇನ್ನೂ ಗೊಂದಲವಾಗಿಯೇ ಉಳಿದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ಹುಬ್ಬಳ್ಳಿ: ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ತೀವ್ರ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗಲೇ ಎಚ್ಚೆತ್ತುಕೊಂಡು ಪರ್ಯಾಯ ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಹಿಂದೂಗಳ ಜನಸಂಖ್ಯೆ ಕ್ಷಿಣಿಸುತ್ತಿರುವ ಬಗ್ಗೆ ತಕ್ಷಣಕ್ಕೆ ಯಾವುದೇ ನಿರ್ಧಾರಕ್ಕೆ ಬರಲಾಗುವುದಿಲ್ಲ. ಆದರೆ ಸಮಗ್ರ ಅಧ್ಯಯನ ನಡೆಸಬೇಕಿದೆ ಎಂದರು. ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾದಂತೆ ಕಾಲಕ್ರಮೇಣ ಪ್ರಜಾಪ್ರಭುತ್ವವೇ ಬದಲಾಗುವ ಸ್ಥಿತಿ ಎದುರಾಗಲಿದೆ. ಅಲ್ಲದೇ, ಜಾತ್ಯತೀತವಾಗಿ ಉಳಿಯುವುದಿಲ್ಲ ಎಂದು ಜೋಶಿ ತೀವ್ರ ಆತಂಕ ವ್ಯಕ್ತಪಡಿಸಿದರು. ಜಗತ್ತಿನಲ್ಲೇ ಏಕೈಕ ಜಾತ್ಯತೀತ ರಾಷ್ಟ್ರ ಭಾರತ. ಪಕ್ಕಾ ಜಾತ್ಯತೀತ ದೇಶವಾಗಿದೆ. ಜಾತ್ಯತೀತತೆ ಎನ್ನುವುದು ಭಾರತೀಯರ ರಕ್ತ, ಸ್ವಭಾವದಲ್ಲೇ ಬಂದಿದೆ. ಮುಂದೊಂದು ದಿನ ಇದಕ್ಕೆ ಧಕ್ಕೆ ಉಂಟಾಗಬಹುದು ಎಂದರು. ಭಾರತ ವಿವಿಧತೆಯಲ್ಲಿ ಏಕತೆ ಕಂಡ ದೇಶವಾಗಿದೆ. ನಾನಾ ಧರ್ಮ, ಸಂಸ್ಕೃತಿ ಆಚರಣೆಗೆ ಮುಕ್ತ ಅವಕಾಶ ಕೊಟ್ಟ ರಾಷ್ಟ್ರ. ಈ ಪರಂಪರೆಯೆ ಮುಂದುವರಿಯಬೇಕು ಎಂದು…
ಮೈಸೂರು: ವಿಪಕ್ಷಗಳು ನನ್ನನ್ನು ಸಮಾಧಿ ಮಾಡಲು ಮುಂದಾಗಿವೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ. ಸೋಲುವ ಭಯದಿಂದ ಮೋದಿ ಮಾತನಾಡುತ್ತಿದ್ದಾರೆ ಎಂದರು. ಮೈಸೂರಿನಲ್ಲಿ ಮಾತನಾಡಿದ ಅವರು, ಮೋದಿ 10 ವರ್ಷ ಬಡವರ ಪರ ಕೆಲಸ ಮಾಡಿಲ್ಲ. ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದರು. ದೇಶದ ಪ್ರಧಾನ ಮಂತ್ರಿಯನ್ನು ಸೋಲಿಸಬೇಕು ಎಂಬುದು ವಿರೋಧ ಪಕ್ಷಗಳ ಬಯಕೆಯಾಗಿದೆ. ಸೋಲುವ ಭಯದಿಂದಾಗಿ ಪ್ರಧಾನಿ ಹತಾಶೆಯಿಂದ ಮಾತನಾಡುತ್ತಿದ್ದಾರೆ’ ಎಂದು ಹೇಳಿದರು ‘ಈ ಪ್ರಧಾನಿ ಸುಳ್ಳಿನ ಸರದಾರ ಎಂಬುದು ಎಲ್ಲರಿಗೂ ಗೊತ್ತಿದೆ. ಅವರ ಬಣ್ಣ ದೇಶದ ಜನರ ಮುಂದೆ ಬಯಲಾಗಿದೆ. ಈ ಹತಾಶೆಯಲ್ಲಿ ಈ ರೀತಿ ಮಾತನಾಡುತ್ತಿದ್ದಾರೆ. ಅವರ ಭಾವನಾತ್ಮಕ ಮಾತುಗಳು ಜನರಿಗೆ ಗೊತ್ತಿವೆ. ಮೇಲಕ್ಕೆ ಏರಿದವರು ಕೆಳಗೆ ಇಳಿಯಲೇ ಬೇಕು’ ಎಂದರು. ‘ರೈತರ ಸಾಲ ಮನ್ನಾ ಮಾಡಬೇಕು’ ಎಂಬ ಬಿ.ಎಸ್. ಯಡಿಯೂರಪ್ಪ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಅವರು, ‘ಸಾಲ ಮನ್ನಾ ಮಾಡಿ ಎಂದು ಹಿಂದೆ ಕೇಳಿದಾಗ…
ದೊಡ್ಡಬಳ್ಳಾಪುರ: ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹೇಮಂತ್ ಕುಮಾರ್( 27) ಕೊಲೆಯಾದ ದುರ್ದೈವಿಯಾಗಿದ್ದಾರೆ. ಹಣಕಾಸಿನ ವಿಚಾರಕ್ಕೆ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ನಡುರಸ್ತೆಯಲ್ಲಿ ಮಿಟ್ಟೆ ಅಲಿಯಾಸ್ ನರಸಿಂಹಮೂರ್ತಿ ಗ್ಯಾಂಗ್ ನಿಂದ ಹೇಮಂತ್ ಮೇಲೆ ಮಾರಕಾಸ್ತ್ರಗಳಿಂದ ಕುತ್ತಿಗೆ, ಎದೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಮೃತ ಹೇಮಂತ್ ಮೇಲೆ 10ಕ್ಕೂ ಹೆಚ್ಚು ಯುವಕರಿಂದ ಈ ದಾಳಿ ನಡೆದಿದ್ದು, ಕೊಲೆ ಮಾಡಿ ರಸ್ತೆ ಬದಿಯಲ್ಲಿ ಮೃತದೇಹ ಎಸೆದು ಎಸ್ಕೇಪ್ ಆಗಿದ್ದಾರೆ. ಸ್ಥಳೀಯರು ವಾಕಿಂಗ್ ಮಾಡುವಾಗ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ರಕ್ತಸಿಕ್ತವಾಗಿ ಬಿದ್ದಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ನಗರದ ಟಿಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾರ್ ಗೆ ನುಗ್ಗಿದ ಇಬ್ಬರು ಕಳ್ಳರು ಬಾರ್ ನಲ್ಲಿದ್ದ ಹಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಕಳೆದ ರಾತ್ರಿ 2.30ರ ಸುಮಾರಿಗೆ ಟಿಸಿಪಾಳ್ಯದ ಬಳಿ ಇರುವ ಭಾಗ್ಯ ಬಾರ್ ಗೆ ಎಂಟ್ರಿಕೊಟ್ಟು ಇಬ್ಬರು ಕಳ್ಳರು ತಮ್ಮ ಕೈಚಳಕವನ್ನು ತೋರಿದ್ದಾರೆ. ಕಳ್ಳತನಕ್ಕೂ ಮುನ್ನ ತಮ್ಮ ಗುರುತು ಪತ್ತೆಯಾಗಬಾರದು ಎಂದು ತಲೆಗೆ ಹೆಲ್ಮೆಟ್ ಧರಿಸಿ ಬಂದು ಬಾರ್ ಶೆಟರ್ ಮುರಿದು ಬಾರ್ ಕ್ಯಾಶ್ ಕೌಂಟರ್ ನಲ್ಲಿದ್ದ 60 ಸಾವಿರ ಹಣವನ್ನು ಕದ್ದಿದ್ದಾರೆ ಇದೇ ವೇಳೆ ಬಾರ್ ನಲ್ಲಿದ್ದ ಸಿಸಿಟಿವಿಯ ಡಿವಿಆರ್ ಸಮೇತ ಕಳ್ಳರು ಪರಾರಿಯಾಗಿದ್ದಾರೆ. ದೃಶ್ಯಗಳು ಸಿಸಿಟಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಕೆ ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಂಡ್ಯ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಿಖಿಲ್(16) ನೇಣಿಗೆ ಶರಣಾದ ವಿದ್ಯಾರ್ಥಿಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನಿಖಿಲ್, ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 3 ವಿಷಯದಲ್ಲಿ ಫೇಲ್ ಆಗಿದ್ದರು. ಇದರಿಂದ ಮನನೊಂದು ಹೊಲಕ್ಕೆ ತೆರಳಿ ಮರವೊಂದಕ್ಕೆ ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296