Author: admin

ಮೈಸೂರು: ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯುತ್ತೆ. ಮೈತ್ರಿಗೆ ಯಾವುದೇ ಭಂಗವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಇರುತ್ತದೆ. ಜೆಡಿಎಸ್‌ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು 4 ಸ್ಥಾನದಲ್ಲಿ ಸ್ಪರ್ಧೆ ಮಾಡುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ. ಇಂದು ಸಂಜೆ ನಡ್ಡಾರವರು ಬಿಡುಗಡೆ ಮಾಡಲಿದ್ದಾರೆ ಎಂದರು. ನರೇಂದ್ರ ಮೋದಿಯವರು 400ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಪ್ರಧಾನಿಯಾಗುತ್ತಾರೆ. ಸೂರ್ಯ-ಚಂದ್ರ ಇರೋದು ಎಷ್ಟು ಸತ್ಯವೋ ಇದು ಅಷ್ಟೇ ಸತ್ಯ. ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಮೋದಿಯವರು ಈಗಲೇ ಚಿಂತೆ ಮಾಡಿದ್ದಾರೆ. ನಾವು ರಾಜ್ಯದಲ್ಲಿ ಕನಿಷ್ಠ 24-25 ಸ್ಥಾನ ಗೆಲ್ಲುತ್ತೇವೆ. ಕಾಂಗ್ರೆಸ್‌ನವರು ಏನೇ ಹೇಳಿದರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್‌ ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ? ವಿಧಾನಸಭಾ ಚುನಾವಣೆಯಲ್ಲಿ ಬೇರೆ ಚರ್ಚೆಯಾಗಬಹುದು. ಆದರೆ ಮೋದಿಯವರು ಪ್ರಧಾನಿಯಾಗಬೇಕು ಎಂಬುದು ಎಲ್ಲರ ಅಭಿಪ್ರಾಯ ಎಂದು ಹೇಳಿದರು. ರಾಜ್ಯದಲ್ಲಿ ಭೀಕರ…

Read More

ಕೋಲಾರ: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎಳೆಸಂದ್ರ ಬಳಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಗುಲ್ಲಹಳ್ಳಿ ಗ್ರಾನದ (25) ಮಧು ಮೃತ ದುರ್ದೈವಿಯಾಗಿದ್ದಾರೆ. ಕಾಮಸಮುದ್ರದಿಂದ ಬೂದಿಕೋಟೆ ಕಡೆ ಬರುತ್ತಿದ್ದ ಲಾರಿಯು ವೇಗವಾಗಿ ಬಂದು ಬೈಕ್‌ ಡಿಕ್ಕಿ ಹೊಡೆದಿದೆ. ಬಳಿಕ ಚಾಲಕ ಲಾರಿ ನಿಲ್ಲಿಸದೇ ಪರಾರಿಯಾಗಿದ್ದಾನೆ. ಬೂದಿಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು ಗ್ರಾಮಾಂತರ: ಹೆದ್ದಾರಿಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಯನಗುಂಟೆ ಗ್ರಾಮದ ಕೃಷ್ಣಪ್ಪ(70) ಮೃತ ಬೈಕ್ ಸವಾರ. ಹೊಸಕೋಟೆಯಿಂದ ಗ್ರಾಮದ ಕಡೆ ಬೈಕ್ ಸವಾರ ಬರುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜು ಗುಜ್ಜಾಗಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಸಂಜಯ್ ನಗರದ ನಿವಾಸದಲ್ಲಿ ಕೆಎಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಚೈತ್ರಾಗೌಡ ಮೃತ ಮಹಿಳೆಯಾಗಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿದ್ದರು. ಮನೆಯಲ್ಲಿ ಫ್ಯಾನ್ ಗೆ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಆಗಿದ್ದು, ಮನೆಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಇನ್ನು ಸಾವಿಗೆ ಕಾರಣ ಏನು ಎಂಬುದು ನಿಖರವಾಗಿ ತಿಳಿದುಬಂದಿಲ್ಲ.  ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತೆಲುಗಿನ ಖ್ಯಾತ ನಟ ನಂದಮೂರಿ ಕಲ್ಯಾಣ್ ರಾಮ್ ನಟನೆಯ ಹೊಸ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದ ಸೆಟ್​ಗೆ ಬೆಂಕಿ ಬಿದ್ದಿದ್ದು ಸುಮಾರು ನಾಲ್ಕು ಕೋಟಿ ರೂಪಾಯಿ ನಷ್ಟವಾಗಿದೆ. ಘಟನೆಯಲ್ಲಿ ಯಾವುದೇ ಗಾಯ ಅಥವಾ ಜೀವಹಾನಿ ಸಂಭವಿಸಿಲ್ಲ ಎಂದು ಚಿತ್ರತಂಡ ತಿಳಿಸಿದೆ. ಶಾರ್ಟ್ ಸರ್ಕ್ಯೂಟ್ ​ನಿಂದಾಗಿ ಈ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದ್ದು, ಸೆಟ್​ ಗೆ ಬೆಂಕಿ ಬಿದ್ದಾಗ ಶೂಟಿಂಗ್ ನಡೆಯುತ್ತಿರಲಿಲ್ಲವಾದ್ದರಿಂದ ಯಾವುದೇ ಹಾನಿಯಾಗಿಲ್ಲ. ನಂದಮೂರಿ ಕಲ್ಯಾಣ್ ರಾಮ್ ಅವರು ಕ್ರೈಂ ಥ್ರಿಲ್ಲರ್ ಕತೆಯುಳ್ಳ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ಕಲ್ಯಾಣ್ ರಾಮ್ ಸಿಬಿಐ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಆಕ್ಷನ್ ದೃಶ್ಯಗಳ ಚಿತ್ರೀಕರಣ ಹಾಗೂ ಕೆಲವು ಕಚೇರಿ ದೃಶ್ಯಗಳ ಚಿತ್ರೀಕರಣವನ್ನು ಚಿತ್ರತಂಡ ಸೆಟ್ ​ನಲ್ಲಿ ಮಾಡುತ್ತಿತ್ತು. ಇದಕ್ಕಾಗಿ ಹೈದರಾಬಾದ್ ಹೊರವಲಯದಲ್ಲಿ ಒಂದೇ ಜಾಗದಲ್ಲಿ ಬೇರೆ ಬೇರೆ ಸೆಟ್​ ಗಳನ್ನು ನಿರ್ಮಾಣ ಮಾಡಲಾಗಿತ್ತು. ಸೆಟ್ ನಿರ್ಮಾಣಕ್ಕೆ ಸುಮಾರು 4 ಕೋಟಿ ಖರ್ಚು ಮಾಡಲಾಗಿತ್ತು ಎನ್ನಲಾಗುತ್ತಿದೆ. ಈಗ ಆ ಬೃಹತ್ ಸೆಟ್​ ಬೆಂಕಿಗೆ ಆಹುತಿಯಾಗಿದೆ. ಸೆಟ್…

Read More

ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್​ ಕೇಜ್ರಿವಾಲ್ ​​ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಲಾಗಿದೆ.  ಹಾಗೂ ಜೂನ್​​ ಎರಡಕ್ಕೆ ಶರಣಾಗುವಂತೆ ತಿಳಿಸಿದೆ. ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​​​ ಅವರಿಗೆ ಮದ್ಯಂತಾರ ಜಾಮೀನು ನೀಡುವ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್​​​ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ ಎಂದು ಹೇಳಲಾಗಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಕುರಿತು ಸುಪ್ರೀಂ ಕೋರ್ಟ್ ಇಂದು ತನ್ನ ಆದೇಶವನ್ನು ನೀಡಿದ್ದು, ಜೂನ್ 1 ರವರೆಗೆ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಚುನಾವಣಾ ಪ್ರಚಾರಕ್ಕಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ಹೊರಬರಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನಕಲಿ ಶಿವಸೇನೆಯವರು ನನ್ನನ್ನು ಮಣ್ಣಿನಲ್ಲಿ ಹೂತು ಹಾಕುವ ಕನಸುಕಾಣುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್​ ಒಂದೆಡೆ ಪ್ರಧಾನಿ ಮೋದಿ ನಿಮ್ಮನ್ನು ಸಮಾಧಿ ಮಾಡುತ್ತಾರೆ ಎಂದು ಹೇಳಿಕೆ ನೀಡುತ್ತಾರೆ ಇನ್ನೊಂದೆಡೆ ನಕಲಿ ಶಿವಸೇನೆಯವರು ನನ್ನನ್ನು ಜೀವಂತ ಸಮಾಧಿ ಮಾಡುವ ಬಗ್ಗೆ ಮಾತನಾಡುತ್ತಿದೆ. ಮೋದಿಯನ್ನು ಮಣ್ಣಿನಲ್ಲಿ ಹೂತು ಹಾಕುವ ಕನಸುಕಾಣುತ್ತಿದ್ದಾರೆ ಎಂದರು. ನಕಲಿ ಶಿವಸೇನೆಯ ರಾಜಕೀಯ ಭವಿಷ್ಯ ನೆಲಕಚ್ಚಿದೆ. ದೇಶದ ತಾಯಂದಿರು ಮತ್ತು ಸಹೋದರಿಯರು ಮೋದಿಯನ್ನು ರಕ್ಷಿಸುತ್ತಾರೆ ಎಂದು ಅವರಿಗೆ ತಿಳಿದಿಲ್ಲ. ಶಿವಸೇನೆಯ ನಕಲಿ ಸದಸ್ಯರು ಬಾಂಬ್ ಸ್ಫೋಟದ ಅಪರಾಧಿಗಳನ್ನು ಪ್ರಚಾರಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ. ಮೇವು ಹಗರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಬಿಹಾರದಲ್ಲಿ ತಿರುಗಾಡುತ್ತಿದ್ದಾರೆ ಎಂದರು. ಈ ಜನರು ಬಾಳಾಸಾಹೇಬ್ ಠಾಕ್ರೆ ಅವರನ್ನು ನೋಯಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ಹೇಳಿದರು. ನಾನು ಕಾಂಗ್ರೆಸ್​ ನಂತಹ ರಾಜಮನೆತನದಂತಹ ದೊಡ್ಡ ಕುಟುಂಬದಿಂದ ಬಂದವನಲ್ಲ, ನಾನು ಬಡತನದಲ್ಲಿ ಬೆಳೆದೆ. ನೀವು ಎಷ್ಟು ಕಷ್ಟ ಅನುಭವಿಸಿದ್ದೀರಿ ಎಂಬುದು ನನಗೆ…

Read More

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ್ರೆ ಇಬ್ಬರು ಹೆಂಡತಿಯರು ಇದ್ದವರಿಗೆ 2 ಲಕ್ಷ ನೆರವು ನೀಡಲಾಗುತ್ತದೆ ಎಂದು ಕಾಂಗ್ರೆಸ್​ ನಾಯಕ ಕಾಂತಿಲಾಲ್ ಹೇಳಿದ್ದಾರೆ. ನರೇಂದ್ರ ದಾಭೋಲ್ಕರ್ ಹತ್ಯೆ ಕೇಸ್:11 ವರ್ಷಗಳ ನಂತರ ತೀರ್ಪು ನೀಡಿದ ಕೋರ್ಟ್!. ಪಕ್ಷವು ಅಧಿಕಾರಕ್ಕೆ ಬಂದರೆ ಪಕ್ಷದ ಮಹಾಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ವಾರ್ಷಿಕ 1 ಲಕ್ಷ ರೂ. ನೀಡಲಾಗುವುದು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರತಿಯೊಬ್ಬ ಮಹಿಳೆಯ ಖಾತೆಗೆ 1 ಲಕ್ಷ ರೂ. ಜಮಾ ಮಾಡಲಾಗುವುದು. ನಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದ್ದು, ಇಬ್ಬರು ಪತ್ನಿಯರಿರುವವರಿಗೆ 2 ಲಕ್ಷ ರೂಪಾಯಿ ನೀಡಲಾಗುವುದು ಎಂದರು. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಮತ್ತು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಜಿತು ಪಟ್ವಾರಿ ಅವರ ಸಮ್ಮುಖದಲ್ಲಿ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ. ಕಾಂಗ್ರೆಸ್ ‌ನ ಪ್ರಣಾಳಿಕೆಯಂತೆ ಮಹಿಳೆಯರು ಬಡತನ ರೇಖೆಗಿಂತ ಕೆಳಗಿರುವ ವಿಭಾಗದಿಂದ ಹೊರಬರುವವರೆಗೆ ಮಹಾಲಕ್ಷ್ಮಿ ಯೋಜನೆಯಡಿ ತಿಂಗಳಿಗೆ 8,500 ರೂ. ನೀಡಲಾಗುವುದು. ಹಿಂದಿನ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೊಗ್ರೆಸ್ಸಿವ್ ಅಲಯನ್ಸ್…

Read More

ಬಸವಣ್ಣನವರು ರಚಿಸಿದ ವಚನಗಳು ಸಮಾಜದಲ್ಲಿನ ಅಸಮಾನತೆ, ಜಾತಿಯತೆಯನ್ನು ತೊಡೆದು ಹಾಕಲು ಪ್ರೇರಕವಾಗಿದ್ದು, ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡ ಮುನ್ನಡೆಯಬೇಕು ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದರು. ಚಿಕ್ಕಮಗಳೂರು ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಶ್ವಗುರು ಬಸವೇಶ್ವರ ಜಯಂತಿ ಕಾರ್ಯಕ್ರಮದ ಅಂಗವಾಗಿ ಶುಕ್ರವಾರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ಮೂಢನಂಬಿಕೆ, ಕಂದಾಚಾರ, ಸಮಾಜದ ಲೋಪ ದೋಶಗಳನ್ನು ತಿದ್ದುವ ಮೂಲಕ ಅಂದಿನ ಶರಣ ಸಮುದಾಯದ ನೇತೃತ್ವ ವಹಿಸಿದ ಬಸವಣ್ಣನವರ ಕೊಡುಗೆ ಅನನ್ಯವಾದುದು. ಸ್ತ್ರೀ ಅಸಮಾನತೆ ಯನ್ನು ಖಂಡಿಸಿ ಸ್ತ್ರೀಯರಿಗೂ ಸಮಾತೆಗೆ ಪ್ರೇರೇಪಿಸಿದರು ಎಂದು ತಿಳಿಸಿದರು. ಬಸವಣ್ಣನವರ ವಚನಗಳು ಸಮಾಜದ ಶುದ್ದಿಯ ಆಂದೋಲನಕ್ಕೆ ಪ್ರೇರಣೆಯಾಗಿವೆ. ಪ್ರಜಾಪ್ರಭುತ್ವ ಮಾದರಿ ವ್ಯವಸ್ಥೆಯ ಮೂಲವಾದ ಅನುಭವ ಮಂಟಪ ಸ್ಥಾಪಿಸಿ ಜನಸಾಮಾನ್ಯರೆಲ್ಲರೂ ವರ್ಣ, ವರ್ಗ ಭೇಧವಿಲ್ಲದೆ ಒಂದೆಡೆ ಸೇರಿ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಮಾನತೆಯ ಸಂಸ್ಕೃತಿಗೆ ಮುನ್ನುಡಿ ಬರೆದವರು ಎಂದರು. ಬಸವಣ್ಣನವರ ತತ್ತ್ವ ಸಿದ್ದಾಂತಗಳು ಇಂದು ಹೆಚ್ಚು ಪ್ರಸ್ತುತವಾಗಿವೆ. ೧೨ನೇ ಶತಮಾನದಲ್ಲಿಯೇ ಬಸವಣ್ಣನವರು ಜಾತಿ ವ್ಯವಸ್ಥೆ, ಮಹಿಳೆಯರ ಸಮಾನತೆಗಾಗಿ ಹೋರಾಡಿದ…

Read More

ನರೇಂದ್ರ ದಾಭೋಲ್ಕರ್ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ 11 ವರ್ಷಗಳ ನಂತರ ನ್ಯಾಯಾಲಯ ತೀರ್ಪು ನೀಡಿದೆ. ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಮೂವರು ಖುಲಾಸೆಗೊಂಡಿದೆ. ಸಚಿನ್ ಅಂದುರೆ ಮತ್ತು ಶರದ್ ಕಲಾಸ್ಕರ್ ಅವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮಹಾರಾಷ್ಟ್ರ ಅಂಧಶ್ರದ್ಧ ನಿರ್ಮೂಲನ ಸಮಿತಿಯ ಮುಖ್ಯಸ್ಥ ನರೇಂದ್ರ ದಾಭೋಲ್ಕರ್ ಅವರನ್ನು 20 ಆಗಸ್ಟ್ 2013 ರಂದು ಪುಣೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪುಣೆಯಲ್ಲಿ ದಾಭೋಲ್ಕರ್ ಹತ್ಯೆಯ ನಂತರ, ಫೆಬ್ರವರಿ 2015 ರಲ್ಲಿ ಗೋವಿಂದ್ ಪನ್ಸಾರೆ ಮತ್ತು ಅದೇ ವರ್ಷ ಆಗಸ್ಟ್ ನಲ್ಲಿ ಕೊಲ್ಲಾಪುರದಲ್ಲಿ ಎಂಎಂ ಕಲಬುರ್ಗಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇದಲ್ಲದೆ, ಗೌರಿ ಲಂಕೇಶ್ ಅವರನ್ನು ಸೆಪ್ಟೆಂಬರ್ 2017 ರಲ್ಲಿ ಬೆಂಗಳೂರಿನ ತಮ್ಮ ಮನೆಯ ಹೊರಗೆ ಗುಂಡಿಕ್ಕಿ ಕೊಲ್ಲಲಾಗಿತ್ತು. ಬಾಂಬೆ ಹೈಕೋರ್ಟಿನ ಆದೇಶದ ನಂತರ 2014 ರಲ್ಲಿ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಸಿಬಿಐ) ತನಿಖೆಯನ್ನು ವಹಿಸಿಕೊಂಡಿತು ಮತ್ತು ಜೂನ್ 2016 ರಲ್ಲಿ ಹಿಂದೂ ಬಲಪಂಥೀಯ ಸಂಘಟನೆಯಾದ ಸನಾತನ ಸಂಸ್ಥೆಗೆ…

Read More