Subscribe to Updates
Get the latest creative news from FooBar about art, design and business.
- ಎಸ್ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
- ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
- ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
- ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
- ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
- ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
Author: admin
ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಈರಪ್ಪ ಕುರಿ(55) ಮೃತ ವ್ಯಕ್ತಿಯಾಗಿದ್ದಾರೆ. ವಿಂಡ್ ಪವರ್ ಕಂಪನಿ ನಿರ್ಲಕ್ಷ್ಯದಿಂದಲೇ ವ್ಯಕ್ತಿ ಸಾವನ್ನಪ್ಪಿದ್ದಾರೆ ಅಂತ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಮೇಕೆಗಳನ್ನು ಮೇಯಿಸಲು ಹೋದಾಗ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕುಕನೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನೆಲಮಂಗಲ: ನೆಲಮಂಗಲ ತಾಲೂಕಿನ ವಾಜರಹಳ್ಳಿಯಲ್ಲಿ ಬಿರುಗಾಳಿ ರಭಸಕ್ಕೆ ಕಬ್ಬಿಣದ ಗೇಟ್ ಮುರಿದು ಬಿದ್ದು ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಯಲ್ಲಮ್ಮ (7) ಮೃತ ಬಾಲಕಿಯಾಗಿದ್ದಾರೆ. ನಿನ್ನೆ ಸಂಜೆ ಮನೆಯ ಅಂಗಳದಲ್ಲಿದ್ದ ಗೇಟ್ ಮೇಲೆ ಹತ್ತಿ ಬಾಲಕಿ ಯಲ್ಲಮ್ಮ ಆಟವಾಡುತ್ತಿದ್ದಳು. ಈ ವೇಳೆ ದಿಢೀರನೆ ಗೇಟ್ ಮುರಿದಿದ್ದು, ಬಾಲಕಿ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಈ ಸಂಬಂಧ ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೊಡಗು: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಗ್ರಾಮಕ್ಕೆ ಕೀರ್ತಿ ತಂದಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಓಂಕಾರಾಪ್ಪ ಕೊಲೆ ಆರೋಪಿಯಾಗಿದ್ದರೆ, ಮೀನಾ ಮೃತ ವಿದ್ಯಾರ್ಥಿನಿಯಾಗಿದ್ದಾರೆ. ಆರೋಪಿ ಓಂಕಾರಪ್ಪ ಸಾಯಂಕಾಲ ಸಮಯದಲ್ಲಿ ಮೀನಾಳನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಮಚ್ಚಿನಿಂದ ವಿದ್ಯಾರ್ಥಿನಿಯ ತಲೆ ಕತ್ತರಿಸಿ ರುಂಡ-ಮುಂಡ ಬೇರ್ಪಡಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಓಂಕಾರಪ್ಪನೊಂದಿಗೆ ಮೀನಾಳ ನಿಶ್ಚಿತಾರ್ಥ ನಿನ್ನೆ ಫಿಕ್ಸ್ ಮಾಡಲಾಗಿತ್ತು. ಬಾಲ್ಯವಿವಾಹದ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ನಿಶ್ಚಿತಾರ್ಥ ನಿಲ್ಲಿಸಿದ್ದಾರೆ. ಬಳಿಕ ಎರಡೂ ಕುಟುಂಬದವರು ತಮ್ಮ ತಮ್ಮ ಮನೆಗೆ ತೆರಳಿದ್ದಾರೆ. ಇದೇ ಸಿಟ್ಟಿನಲ್ಲಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ನಡೆದ ಸ್ಥಳಕ್ಕೆ ಶ್ವಾನ ದಳ, ವಿಧಿ ವಿಜ್ಞಾನ ತಂಡ ಭೇಟಿ ನೀಡಿದೆ. ಹಾಗೂ ಕೊಡಗು ಹೆಚ್ಚುವರಿ ಎಸ್ಪಿ ಸುಂದರ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಿಂದ ಅನತಿ ದೂರದಲ್ಲಿ ಮಚ್ಚು ಪತ್ತೆಯಾಗಿದೆ.…
ತುಮಕೂರು: ಹೇಮಾವತಿ ನದಿ ನೀರನ್ನು ಹೇಮಾವತಿ ಲಿಂಕ್ ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ಮೂಲಕ, ಮಾಗಡಿ ತಾಲೂಕಿಗೆ ನಡೆಯುತ್ತಿರುವ ಕಾಮಗಾರಿ ಅಲ್ಲಿನ ಇಂಜಿನಿಯರಿಗೆ, ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ ದೂರವಾಣಿ ಮೂಲಕ ಸೂಚನೆ ನೀಡಿದ ಘಟನೆ ನಡೆದಿದೆ. ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ತಕ್ಷಣ ನಿಲ್ಲಿಸುವಂತೆ ಅಲ್ಲಿದ್ದ ಇಂಜಿನಿಯರಿಗೆ ಅವಾಜ್ ಹಾಕಿದರು. ಅಲ್ಲದೆ ತಮ್ಮ ವಿರುದ್ಧ ಪ್ರಕರಣ ದಾಖಲಿಸುವಂತೆಯೂ ಸವಾಲು ಹಾಕಿದರು. ಇದೆಲ್ಲವೂ ನಡೆದದ್ದು ಕೆನಾಲ್ ಕಾಮಗಾರಿ ಕುರಿತು ವಿರೋಧ ವ್ಯಕ್ತಪಡಿಸಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ. ಅಲ್ಲದೆ ತುರುವೇಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸಿ ಎಸ್ ಪು ರ ಗ್ರಾಮದ ಬಳಿ ಕೆಲಸ ಮಾಡದಂತೆ ಹೇಮಾವತಿ ಜಲಾನಯನ ಅಭಿವೃದ್ಧಿ ಇಲಾಖೆ ಇಂಜಿನಿಯರಿಗೆ ಸೂಚನೆ ನೀಡಿದರು. ಇಲಾಖೆಯ ಎಂಡಿಗೆ ನೆನ್ನೆ ದೂರವಾಣಿ ಮೂಲಕ ಕೆಲಸ ನಿಲ್ಲಿಸುವಂತೆ ಸೂಚನೆ ನೀಡಿದ್ದೇನೆ ಎಂದು ಇಂಜಿನಿಯರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದರು. ಮರ್ಯಾದೆಯಿಂದ ಹೇಳುತ್ತಿದ್ದೇನೆ ತಕ್ಷಣ ಕೆಲಸ ನಿಲ್ಲಿಸು ಇಲ್ಲದಿದ್ದರೆ ನಾನೇ ಬಂದು ಕೆಲಸ ನಿಲ್ಲಿಸುತ್ತೇನೆ ಎಂದು…
ಮೈಸೂರು: ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ, ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರ ಳನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು, ಈ ವಸತಿ ಶಾಲೆಗಳ ಇನ್ನಷ್ಟು ಮಕ್ಕಳು ರ್ಯಾಂಕ್ ಪಡೆಯಬೇಕು, ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕೆಂದು ಆಶಿಸಿದರು. ಅವರು ಇಂದು ಮೈಸೂರಿನಲ್ಲಿ ಬಸವ ಜಯಂತಿ ಅಂಗವಾಗಿ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅಂಕಿತಾಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪನೆಯ ಉದ್ದೇಶವೇ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕೂಡ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬುದಾಗಿದೆ. 1994 ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ಹೆಂಡದಂಗಡಿ, ಸಾರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು ಎಂಬುದು ದಲಿತ ಹೋರಾಟದ, ದಲಿತ ಸಂಘರ್ಷ ಸಮಿತಿಯವರ ಘೋಷಣೆಯಾಗಿತ್ತು. ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಕಾರಣ ಮತ್ತು ನಾನು ಕೂಡ ಗ್ರಾಮೀಣ ಪ್ರದೇಶದಿಂದ ಬಂದವನಾದ್ದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ…
ಸಾರ್ವತ್ರಿಕ ಚುನಾವಣೆ ನಡೆಯುತ್ತಿರುವ ನಡುವೆ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮದನ್ ಬಿ. ಲೋಕುರ್, ಉಚ್ಚ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಾಧೀಶ ಎ.ಪಿ. ಶಾಹ್ ಹಾಗೂ ಹಿರಿಯ ಪತ್ರಕರ್ತ ಎನ್. ರಾಮ್ ಅವರು ಹಾಲಿ ಲೋಕಸಭೆ ಚುನಾವಣೆ ಕುರಿತು ಬಹಿರಂಗ ಚರ್ಚೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಿದ್ದಾರೆ. ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ಈ ಮೂವರು, ‘‘ದೇಶದಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಭಾರತದ ನಾಗರಿಕರಾಗಿ ನಾವು ನಿಮಗೆ ಈ ಪತ್ರ ಬರೆಯುತ್ತಿದ್ದೇವೆ. ನಾವು ನಂಬುವ ಪಕ್ಷಪಾತ ರಹಿತ ಹಾಗೂ ಪ್ರತಿಯೊಬ್ಬ ನಾಗರಿಕನ ಹಿತದೃಷ್ಟಿಯ ಪ್ರಸ್ತಾವದೊಂದಿಗೆ ನಾವು ನಿಮ್ಮನ್ನು ಸಂಪರ್ಕಿಸಿದ್ದೇವೆ’’ ಎಂದಿದ್ದಾರೆ. ನಾವು ಎರಡೂ ಕಡೆಯಿಂದ ಆರೋಪಗಳು ಹಾಗೂ ಸವಾಲುಗಳನ್ನು ಮಾತ್ರ ಕೇಳಿದ್ದೇವೆ. ಯಾವುದೇ ಅರ್ಥಪೂರ್ಣ ಪ್ರತಿಕ್ರಿಯೆಯನ್ನು ಕೇಳಿಲ್ಲ. ನಮಗೆ ತಿಳಿದಿರುವಂತೆ ಇಂದಿನ ಡಿಜಿಟಲ್ ಜಗತ್ತು ತಪ್ಪು ಮಾಹಿತಿ, ತಪ್ಪು ನಿರೂಪಣೆಯ ಪ್ರವೃತ್ತಿಯನ್ನು ಒಳಗೊಂಡಿದೆ. ಈ…
ಕನ್ನಡ ಸಿನಿಮಾ ಕಿರಿಕ್ ಪಾರ್ಟಿ ಮೂಲಕ ಸಿನಿಮಾರಂಗಕ್ಕೆ ಕಾಲಿಟ್ಟ ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಪ್ಯಾನ್ ಇಂಡಿಯಾ ನಟಿಯಾಗಿದ್ದಾರೆ. ತೆಲುಗು ತಮಿಳು ಬಳಿಕ ಬಾಲಿವುಡ್ ಅಂಗಳಕ್ಕೆ ಕಾಲಿಟ್ಟಿದ್ದಾರೆ. ರಣಬೀರ್ ಕಪೂರ್ ಜೊತೆಗಿನ ಅನಿಮಲ್ ಸಿನಿಮಾ ಸಕ್ಸಸ್ ಬಳಿಕ ಮತ್ತಷ್ಟು ಅವಕಾಶಗಳು ಬರುತ್ತಿದ್ದು, ಬಾಲಿವುಡ್ ಭಾಯ್‌ಜಾನ್ ಎಂದು ಕರೆಸಿಕೊಳ್ಳುವ ನಟ ಸಲ್ಮಾನ್ ಖಾನ್ ಜೊತೆ ನಟಿಸಲಿದ್ದಾರೆ. ಎ ಆರ್ ಮುರುಗದಾಸ್ ನಿರ್ದೇಶನದ ಮುಂದಿನ ಬಹುನಿರೀಕ್ಷಿತ ‘ಸಿಕಂದರ್’ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಸಾಜಿದ್ ನಾಡಿಯಾಡ್ವಾಲಾ ನಿರ್ಮಾಣದ ಈ ಚಿತ್ರಕ್ಕೆ ನಟಿ ರಶ್ಮಿಕಾ ಮಂದಣ್ಣ ಕೂಡ ಸೇರಿಕೊಂಡಿದ್ದಾರೆ. ಈ ಚಿತ್ರವು ಮುಂದಿನ ಈದ್ ಹಬ್ಬಕ್ಕೆ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಅನಿಮಲ್ ಚಿತ್ರದ ಯಶಸ್ಸಿನ ನಂತರ, ರಶ್ಮಿಕಾ ಮಂದಣ್ಣ ಹೊಸ ಹಿಂದಿ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಎ.ಆರ್. ಮುರುಗದಾಸ್ ಆಕ್ಷನ್ ಚಿತ್ರ ಸಿಕಂದರ್‌ನಲ್ಲಿ ಅವರು ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಎದುರು ಜೋಡಿಯಾಗಲಿದ್ದಾರೆ. ಜನಪ್ರಿಯ ಕನ್ನಡ, ತಮಿಳು ಮತ್ತು ತೆಲುಗು ನಟಿ ರಶ್ಮಿಕಾ ಮಂದಣ್ಣ 2022 ರಲ್ಲಿ ಅಮಿತಾಬ್…
ವಿಸ್ವ ಬಸವ ಜಯಂತಿ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಗನ್ ಹೌಸ್ ಬಸವೇಶ್ವರ ವೃತ್ತದಲ್ಲಿನ ಬಸವೇಶ್ವರರ ಪುತ್ಥಳಿಗೆ ಪುಷ್ಪಾರ್ಚಿಸಿ ಮಾಲಾರ್ಪಣೆ ಮಾಡಿದರು. ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಸಚಿವ ಹೆಚ್.ಸಿ. ಮಹದೇವಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಶಾಸಕ ಹರೀಶ್ ಗೌಡ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಅವರು ಅಭಿಮಾನಿಗಳು ನೀಡಿದ ಎಳನೀರು ಸವಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮೈಸೂರು: ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತಿಯ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವ ಕುರಿತಾಗಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸ ನಂಬಿಕೆ ಇದೆ. ಅವರು ಕಾನೂನು ರೀತಿಯ ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದರು. ಬಿಜೆಪಿಯವರು ಯಾವತ್ತೂ ಸಿಬಿಐಗೆ ಒಂದು ಪ್ರಕರಣವಾದರೂ ಕೊಟ್ಟಿದ್ದಾರಾ? ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಪ್ರಕರಣ, ಲಾಟರಿ ಪ್ರಕರಣ, ಸಚಿವರಾದ ಕೆ.ಜೆ. ಜಾರ್ಜ್ ಅವರ ಮೇಲಿನ ಆರೋಪ, ಪರೇಶ್ ಮೇಸ್ತ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಯಿತು. ಈ ಪ್ರಕರಣಗಳಲ್ಲಿ ಯಾರಿಗಾದರೂ ಶಿಕ್ಷೆಯಾಗಿದೆಯೇ ಎಂದು ಪ್ರಶ್ನಿಸಿದರು. ಹಿಂದೆ ಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ.…
ತುಮಕೂರು: ಬಿಸಿಲಿನ ತಾಪಮಾನಕ್ಕೆ ಎಲ್ಲೆಂದರಲ್ಲಿ ಹಾವುಗಳು ಪ್ರತ್ಯಕ್ಷವಾಗುತ್ತಿದ್ದು ಇದು ತುಮಕೂರು ಜನರಿಗೆ ಆತಂಕ ಸೃಷ್ಟಿಸಿದೆ. ಒಂದೇ ದಿನಕ್ಕೆ 12 ಹಾವುಗಳನ್ನು ಉರಗ ತಜ್ಞರು ರಕ್ಷಣೆ ಮಾಡಿದ್ದಾರೆ. ತುಮಕೂರು ಬಿಸಿಲಿನ ತಾಪಮಾನಕ್ಕೆ ಹಾವುಗಳು ಮನೆಯೊಳಗೆ, ಕಾರು, ಬೈಕ್ ಒಳಗೆ ಬಂದು ಸೇರಿಕೊಳ್ಳುತ್ತವೆ. ತುಮಕೂರಿನ ವರಂಗಲ್ ಫೌಂಡೇಶನ್ ವನ್ಯಜೀವಿ ಜಾಗೃತ ಹಾಗೂ ಉರಗ ರಕ್ಷಣಾ ಸಂಸ್ಥೆಯ ಉರಗ ತಜ್ಞ ದಿಲೀಪ್ ಅವರು ಒಂದೇ ದಿನಕ್ಕೆ 12 ಹಾವುಗಳನ್ನು ರಕ್ಷಣೆ ಮಾಡಿ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ತುಮಕೂರು ಹೊರವಲಯದ ಹೊನ್ನುಡ್ಕೆ ಹ್ಯಾಂಡ್ ಪೋಸ್ಟ್ ನಲ್ಲಿ ಮಾಯರಂಗಯ್ಯ ಎಂಬುವವರ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಆಕ್ಟಿವಾ ಸ್ಕೂಟಿ ಒಳಗಡೆ ನಾಗರಹಾವು ಸೇರಿಕೊಂಡಿತ್ತು. ಅದನ್ನು ಕಂಡು ಭಯ ಬೀತರಾದ ರಂಗಯ್ಯನವರು ತುಮಕೂರಿನ ವರಂಗಲ್ ಫೌಂಡೇಶನ್ ವನ್ಯಜೀವಿ ಹಾಗೂ ಊರಗ ರಕ್ಷಣಾ ಸಂಸ್ಥೆಗೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದ ಉರಗ ತಜ್ಞ ದಿಲೀಪ್ ಅರ್ಧ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಒಳಗೆ ಸೇರಿದ್ದ ನಾಗರಹಾವನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಸಮೀಪದ…