Subscribe to Updates
Get the latest creative news from FooBar about art, design and business.
- ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
- ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
- ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
- ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
- ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ
- ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ
Author: admin
ತುಮಕೂರು: ಜಿಲ್ಲೆಯ ಶಿರಾ ಪಟ್ಟಣದ ವಾಸವಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹರ್ಷಿತ ಎಂಬ ವಿದ್ಯಾರ್ಥಿನಿ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿನಿ ಹರ್ಷಿತ 625 ಅಂಕಗಳಿಗೆ 624 ಅಂಕಗಳನ್ನು ಪಡೆದಿದ್ದು, ಇವರು ಮಂಜುಳಾ ಮತ್ತು ಮಂಜುನಾಥ್ ದಂಪತಿಯ ಪುತ್ರಿಯಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನವದೆಹಲಿ:ಕ್ಯಾಬಿನ್ ಸಿಬ್ಬಂದಿ ಏಕಾಏಕಿ ‘ಸಾಮೂಹಿಕ ಅನಾರೋಗ್ಯ ರಜೆ’ ಹಾಕಿ ಕೆಲಸಕ್ಕೆ ಗೈರಾದ ಹಿನ್ನೆಲೆ 90ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಿಗೆ ಕಾರಣಕರ್ತರು ಎನ್ನಲಾದ ಸುಮಾರು 25 ಕ್ಯಾಬಿನ್ ಸಿಬ್ಬಂದಿಗಳನ್ನು ಏರ್ ಇಂಡಿಯಾ ಸಂಸ್ಥೆ ವಜಾಗೊಳಿಸಿದೆ ಎಂದು ಏರ್ ಲೈನ್ ಮೂಲಗಳು ತಿಳಿಸಿವೆ. ಕ್ಯಾಬಿನ್ ಸಿಬ್ಬಂದಿಯ ಲಭ್ಯತೆಯಿಲ್ಲದ ಕಾರಣ ಏರ್ ಇಂಡಿಯಾ ಸಂಸ್ಥೆ ಕನಿಷ್ಠ 60 ವಿಮಾನ ಯಾನಗಳನ್ನು ರದ್ದುಗೊಳಿಸಿದೆ ಎಂದು ಮೂಲಗಳು ತಿಳಿಸಿವೆ ಮತ್ತು ಕ್ಯಾಬಿನ್ ಸಿಬ್ಬಂದಿಯ ಒಂದು ವಿಭಾಗದಿಂದ ಸಾಮೂಹಿಕ ರಜೆಗಳು ಪ್ರಯಾಣಿಕರಿಗೆ ಅಪಾರ ಅನಾನುಕೂಲತೆಯನ್ನು ಉಂಟುಮಾಡಿದೆ. ಟಾಟಾ ಗ್ರೂಪ್ ಒಡೆತನದ ವಿಮಾನಯಾನ ಸಂಸ್ಥೆಯು ಉಳಿದ ಕ್ಯಾಬಿನ್ ಸಿಬ್ಬಂದಿಗಳಿಗೆ ಇಂದು ಸಂಜೆ 4 ಗಂಟೆಯೊಳಗೆ ಮತ್ತೆ ಕರ್ತವ್ಯಕ್ಕೆ ಹಾಜರಾಗಬೇಕು ಇಲ್ಲದಿದ್ದರೆ ನಿಮನ್ನು ವಜಾಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಶಿವಮೊಗ್ಗ: ಈ ಚುನಾವಣೆಯಲ್ಲಿ ಸಂಸದ, ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರಿಂದ ಷಡ್ಯಂತ್ರ ನಡೆದಿದೆ. ವಾಮಾಚಾರ, ಸಭೆ ನಡೆಸಲು ಬಿಡದೆ ಇರುವ ಕೆಲಸ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಿರುಚಿದ ವೀಡಿಯೋ ಮಾಡಿದ್ದಾರೆ. ನನ್ನ ಪರವಾಗಿ ಬಿಜೆಪಿಗೆ ಮತ ಹಾಕಿ ಎನ್ನುವ ರೀತಿಯಲ್ಲಿ ಸುದ್ದಿ ಹಬ್ಬಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ ಹೋರಾಟ ಮಾಡುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಡಿಸಿ, ಎಸ್ಪಿಗೆ ನಾನು ದೂರು ನೀಡಿದ್ದೇನೆ. ಈ ಸುಳ್ಳು ಸುದ್ದಿಯಿಂದ ನನಗೆ ಅನೇಕ ವೋಟ್ ಅನ್ಯಾಯ ಆಗಿದೆ. ನನಗೆ ಮತ ನೀಡಲು ಬಂದವರಿಗೆ ಗೊಂದಲವಾಗಿದೆ. ಸುಳ್ಳು ಸುದ್ದಿಯಿಂದ ನನಗೆ ಮತದಾನ ಕಡಿಮೆಯಾಗಿದೆ. ಇದು ರಾಘವೇಂದ್ರ ಅವರ ಕುತಂತ್ರ, ಷಡ್ಯಂತ್ರ. ತಕ್ಷಣ ಸಂಸದ ರಾಘವೇಂದ್ರ ಅವರನ್ನು ಬಂಧಿಸಬೇಕು. ಒಂದು ವಾರ ಗಡುವು ನೀಡುತ್ತೇನೆ. 15 ನೇ ತಾರೀಖಿನೊಳಗೆ ಕ್ರಮ ಕೈಗೊಳ್ಳದೆ ಹೋದರೆ ಹೋರಾಟ ಮಾಡುತ್ತೇವೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು, ರಾಘವೇಂದ್ರ…
ಡೆಹ್ರಾಡೂನ್: ಉತ್ತರಾಖಂಡದ ಕಾಡ್ಗಿಚ್ಚಿಗೆ ಐವರು ಪ್ರಾಣ ಕಳೆದುಕೊಂಡಿದ್ದು, 1,300 ಹೆಕ್ಟೇರ್ ಪ್ರದೇಶಕ್ಕೆ ಹಾನಿಯಾಗಿದೆ ಎಂದು ಅರಣ್ಯ ಪಡೆ ಮುಖ್ಯಸ್ಥ ಧನಂಜಯ್ ಮೋಹನ್ ತಿಳಿಸಿದ್ದಾರೆ. ಬೆಂಕಿ ನಿಯಂತ್ರಣದಲ್ಲಿದೆ ಎಂದು ಅವರು ದೃಢಪಡಿಸಿದರು. ಸದ್ಯ ಕಾಡ್ಗಿಚ್ಚಿನ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ಇರುವ ಸ್ಥಳಕ್ಕೆ ಸಮಯಕ್ಕೆ ಸರಿಯಾಗಿ ತಲುಪುತ್ತಿದ್ದಾರೆ. ಕಾಡ್ಗಿಚ್ಚಿಗೆ ಸಂಬಂಧಿಸಿದಂತೆ ಈವರೆಗೆ 388 ಪ್ರಕರಣಗಳು ದಾಖಲಾಗಿದ್ದು, 60 ಪ್ರಕರಣಗಳನ್ನು ಹೆಸರಿಸಲಾಗಿದೆ. 5 ಜನರು ಪ್ರಾಣ ಕಳೆದುಕೊಂಡಿದ್ದಾರೆ, ಅವರಲ್ಲಿ 4 ಜನರು ನೇಪಾಳ ಮೂಲದವರು ಮತ್ತು ಅಲ್ಮೋರಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಇನ್ನೊಬ್ಬರು ಪೌರಿಯಲ್ಲಿ ಪ್ರಾಣ ಕಳೆದುಕೊಂಡ ವೃದ್ಧ ಮಹಿಳೆ” ಎಂದು ಧನಂಜಯ್ ಮೋಹನ್ ತಿಳಿಸಿದ್ದಾರೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಬುಧವಾರ ಕಾಡ್ಗಿಚ್ಚು ತಡೆಗಟ್ಟಲು ತೆಗೆದುಕೊಳ್ಳುತ್ತಿರುವ ಕ್ರಮಗಳು ಮತ್ತು ಮುಂಬರುವ ಮಳೆಗಾಲಕ್ಕೆ ಸಂಬಂಧಿಸಿದ ಸಿದ್ಧತೆಗಳನ್ನು ಪರಿಶೀಲಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಸಂಚಾರಿ ಪೊಲೀಸರು ಬೈಕ್ ಸ್ಟಂಟ್ ಮಾಡುವವರ ಮೇಲೆ ಕಣ್ಣಿಡಲು ಹೊಸ ಪ್ರಯೋಗ ಮಾಡುತ್ತಿದ್ದಾರೆ. ಬೆಂಗಳೂರು ನಗರದಲ್ಲಿ 121 ದಿನದಲ್ಲಿ 191 ಬೈಕ್ ವ್ಹೀಲಿಂಗ್ ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 27 ಅಪ್ರಾಪ್ತರು ಸೇರಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸರು ಶೀಘ್ರವೇ ಆನ್ ಲೈನ್ ಮೂಲಕವೇ ಕಾರ್ಯಾಚರಣೆ ಮಾಡಲಿದ್ದಾರೆ. ಈ ಅಭಿಯಾನದ ಭಾಗವಾಗಿ ಜನರು ತಮ್ಮ ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಮಾಡುವ, ಬೈಕ್ ಸ್ಟಂಟ್ ಮಾಡುವವರ ಕುರಿತು ದೂರು ನೀಡಬಹುದು. ಪೊಲೀಸರು ಇಂತಹ ಅಪಾಯಕಾರಿ ಸ್ಟಂಟ್ ಮಾಡುವವರನ್ನು ಪತ್ತೆ ಹಚ್ಚಿ ಕೇಸು ದಾಖಲು ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಬೈಕ್ ವ್ಹೀಲಿಂಗ್, ಸ್ಟಂಟ್ ಮಾಡುವವರು ಅವುಗಳ ಚಿತ್ರ, ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುತ್ತಾರೆ. ಆದ್ದರಿಂದ ಸಂಚಾರಿ ಪೊಲೀಸರ ತಂಡ ವಿಶೇಷವಾಗಿ ಸಾಮಾಜಿಕ ಜಾಲತಾಣದ ಮೇಲೆ ಕಣ್ಣಿಡಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 …
ನೆಲಮಂಗಲ: ಬೆಂ.ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾ. ಬೆಟ್ಟಹಳ್ಳಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಫೇಲ್ ಆಗುವ ಭಯದಿಂದ ವಿಧ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ. ಮಂಡಿಗೆರೆ ಸರ್ಕಾರಿ ಶಾಲೆ ವಿದ್ಯಾರ್ಥಿ ಚಂದನ್ ಗೌಡ(16) ನಾಪತ್ತೆಯಾಗಿರುವ ವಿಧ್ಯಾರ್ಥಿಯಾಗಿದ್ದಾನೆ. ಈ ವಿಧ್ಯಾರ್ಥಿಯು ಬೈರನಾಯಕನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದು, ಮಗನ ಫೋಟೋ ಹಿಡಿದು ಪೋಷಕರು ಹುಡುಕಾಟ ನಡೆಸುತ್ತಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಇಂದು 2023-24ನೇ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ಸಿ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದ್ದು, ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ ಅಂಕ ಪಡೆದುಕೊಂಡು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಒಟ್ಟು 7 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ. ಎಸ್ಎಸ್ಎಲ್ ಸಿ ಫಲಿತಾಂಶ ಟಾಪರ್ ಅಂಕಿತಾ ಕೊನ್ನೂರು ಪಿಯುಸಿಯಲ್ಲಿ ವಿಜ್ಞಾನ ವಿಭಾಗ ತೆಗೆದುಕೊಂಡು, ಭವಿಷ್ಯದಲ್ಲಿ ಐಎಎಸ್ ಮಾಡುವ ಕನಸು ಹೊಂದಿದ್ದಾರಂತೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಚಾರವಾಗಿ ಜೆಡಿಎಸ್ ಡಿ.ಕೆ.ಶಿವಕುಮಾರ್ ವಿರುದ್ಧ ನೇರ ಆರೋಪ ಮಾಡುತ್ತಿದೆ. ಈ ನಡುವೆ ಶಾಸಕ ಎಸ್.ಆರ್. ಶ್ರೀನಿವಾಸ್ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಪೆನ್ ಡ್ರೈವ್ ಹಂಚಿದ್ದಾರೆ ಎಂದು ಯಾವ ಆ್ಯಂಗಲ್ ನಲ್ಲಿ ಹೇಳ್ತಾರೆ. ಜನತಾದಳದ ಮೇಲೆ ಬಂದಿರುವ ಆಪಾದನೆಯಿಂದ ಪಾರಾಗಲು ಈ ರೀತಿ ಡ್ರಾಮ ಸೃಷ್ಟಿ ಮಾಡಿದ್ದಾರೆ ಎಂದು ಆರೋಪಿಸಿದರು. ದೇವರಾಜೇಗೌಡರು ಆರು ತಿಂಗಳ ಹಿಂದೆಯೇ ಕುಮಾರಸ್ವಾಮಿ ಹಾಗೂ ದೇವೇಗೌಡರನ್ನ ಭೇಟಿ ಮಾಡಿದ್ದಾರೆ. ಇನ್ನು ಅಮಿತ್ ಷಾ ಗೆ ಸೇರಿ ಎಲ್ಲರಿಗೂ ಕಳಿಸಿರುವುದಾಗಿ ಅವರೇ ಹೇಳಿದ್ದಾರೆ. ಅದೇ ಮನುಷ್ಯ ಈಗ ಡಿ.ಕೆ. ಶಿವಕುಮಾರ್ ಹೆಸರು ಹೇಳ್ತಿದ್ದಾರೆ ಎಂದರು. ಕೇಸ್ ನ ಡೈವರ್ಟ್ ಮಾಡೋಕೆ ಇವರು ಮಾಡುತ್ತಿರುವ ನಾಟಕ ಇದಾಗಿದ್ದು, ಕುಮಾರಸ್ವಾಮಿ ಸೃಷ್ಟಿ ಮಾಡಿರುವ ಬಯಲು ನಾಟಕ ಎಂದರು. ಕುಮಾರಸ್ವಾಮಿಗೆ ಏನಾದರೂ ಮಾನ ಮರ್ಯಾದೆ ಇದ್ದರೇ, ಅವರ ಮಗ ಮಾಡಿರುವ ಕೃತ್ಯ ಖಂಡಿಸಿ ಪಕ್ಷದಿಂದ ಅಮಾನತು…
ನವದೆಹಲಿ: ಅದಾನಿ ಮತ್ತು ಅಂಬಾನಿಯಿಂದ ಕಾಂಗ್ರೆಸ್ ಹಣ ಪಡೆದಿದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಆರೋಪಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಈ ಬಗ್ಗೆ ಸಿಬಿಐ ಅಥವಾ ಇಡಿ ತನಿಖೆಯನ್ನು ಪ್ರಾರಂಭಿಸುವಂತೆ ಪ್ರಧಾನಿ ಮೋದಿಗೆ ಸವಾಲು ಹಾಕಿದ್ದಾರೆ. ಉದ್ಯಮಿಗಳು ಟೆಂಪೋದಲ್ಲಿ ಹಣವನ್ನು ಕಳುಹಿಸುವ ಬಗ್ಗೆ ಪ್ರಧಾನಿ ಮೋದಿಯವರ ಹೇಳಿಕೆಗಳು ಅವರ ವೈಯಕ್ತಿಕ ಅನುಭವವನ್ನು ಆಧರಿಸಿವೆಯೇ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದರು. “ಬಿಜೆಪಿಯ ಭ್ರಷ್ಟಾಚಾರದ ವೇಗದ ಚಾಲಕ ಮತ್ತು ಸಹಾಯಕ ಯಾರು ಎಂದು ದೇಶಕ್ಕೆ ತಿಳಿದಿದೆ” ಎಂದು ಅವರು ಹಿಂದಿಯಲ್ಲಿ ಪೋಸ್ಟ್ ಮಾಡಿ ಪ್ರಧಾನಿ ಮೋದಿಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮೊದಲ ದಿನ ಊಟ ಹಾಗೂ ನಿದ್ದೆಯಿಲ್ಲದೆ ಕಳೆದಿದ್ದಾರೆ. ಸೆಂಟ್ರಲ್ ಜೈಲಿನ ಕ್ವಾರಂಟೈನ್ ಸೆಲ್ ನಲ್ಲಿ ಒಂದು ರಾತ್ರಿ ಕಾಲ ಕಳೆದಿರುವ ರೇವಣ್ಣ, ಕಳೆದ ರಾತ್ರಿ ನೀಡಿದ್ದ ಮುದ್ದೆ, ಚಪಾತಿ, ರೈಸ್, ಸಾಂಬಾರ್ ತಡವಾಗಿ ಸೇವಿಸಿದ್ದಾರೆ. ಇತರೆ ಕೈದಿಗಳಂತೆ ಜೈಲಿನಲ್ಲಿ ನೀಡುವ ಊಟವನ್ನೇ ಅವರು ಸೇವಿಸಿದ್ದಾರೆ. ರಾತ್ರಿ ತಡವಾಗಿ ಊಟ ಮಾಡಿ ಮೌನಕ್ಕೆ ಶರಣಾಗಿದ್ದರು. ರಾತ್ರಿ 1 ಗಂಟೆಯವರೆಗೆ ನಿದ್ರೆ ಮಾಡದೆ ಏಕಾಂಗಿಯಾಗಿ ತಮಗೆ ಬಂದೊಗಿದ ಪರಿಸ್ಥಿತಿಯ ಬಗ್ಗೆ ಸಂಕಟ ಅನುಭಸುತ್ತಿದ್ದರು. ಸುಮಾರು ಹೊತ್ತಿನ ನಂತರ ಜೈಲಿನ ಕೊಠಡಿಯಲ್ಲಿ ನಿದ್ರೆಗೆ ಜಾರಿದರು ಎಂದು ಜೈಲಿನ ಮೂಲಗಳು ತಿಳಿಸಿವೆ. ರೇವಣ್ಣ ಆರೋಗ್ಯ ಸರಿ ಇಲ್ಲದ ಕಾರಣ ರಾತ್ರಿ ಜೈಲಾಧಿ ಕಾರಿಗಳು ಅವರ ಮೇಲೆ ಹೆಚ್ಚು ನಿಗಾ ಇಟ್ಟಿದ್ದರು. ರೇವಣ್ಣ ಇದ್ದ ಕೊಠಡಿ ಬಳಿ ಓರ್ವ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು. ಇಂದು ಬೆಳಗ್ಗೆ 5.30ಕ್ಕೆ ನಿದ್ರೆಯಿಂದ ಎದಿದ್ದಾರೆ. ನಂತರ ಎದ್ದು…