Subscribe to Updates
Get the latest creative news from FooBar about art, design and business.
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
- ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ
- ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ
- ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ
- ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ
- ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವುದಕ್ಕೆ ಕೇಂದ್ರದ ಪ್ರಯತ್ನ: ಡಾ.ಜಿ.ಪರಮೇಶ್ವರ
- ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
Author: admin
ಮುಂಬೈ: ಮಹಾರಾಷ್ಟ್ರದ 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ ಸೇವಿಸಿ ತೀವ್ರ ಆಸ್ವಸ್ಥಗೊಂಡ ಸಾವನ್ನಪ್ಪಿದ ಘಟನೆ ನಡೆದಿದೆ. ಇದಲ್ಲದೇ ಆತನೊಂದಿಗೆ ಶವರ್ಮಾ ತಿಂದಿದ್ದ ಐವರು ತೀವ್ರ ಅಸ್ವಸ್ಥರಾಗಿದ್ದಾರೆ. ಪ್ರಥಮೇಶ್ ಭೋಕ್ಸೆ(19) ಮೃತ ಯುವಕನಾಗಿದ್ದಾನೆ. ಹಾಳಾದ ಕೋಳಿ ಬಳಸಿದ್ದಕ್ಕಾಗಿ ಚಿಕನ್ ಷವರ್ಮಾ ಅಂಗಡಿ ನಡೆಸುತ್ತಿದ್ದ ಇಬ್ಬರು ಆರೋಪಿಗಳ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ಡಿಸಿಪಿ ರಜಪೂತ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಜಿಲ್ಲೆಯ ತಿಪಟೂರು ತಾಲ್ಲೂಕಿನ ಅರಳಗುಪ್ಪೆಯಲ್ಲಿ ಸಾಲಬಾಧೆಯಿಂದ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇತ್ತೀಚೆಗೆ ನಡೆದಿತ್ತು. ಭಾಗ್ಯಮ್ಮ(50) ಮೃತರಾಗಿದ್ದಾರೆ. ಭಾಗ್ಯಮ್ಮ ಮೈಕ್ರೋ ಫೈನಾನ್ಸ್ ಕಂಪೆನಿಯಲ್ಲಿ 5 ಲಕ್ಷ ಸಾಲ ಪಡೆದಿದ್ದರು. ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ತೀವ್ರ ಬರಗಾಲ ಹಿನ್ನೆಲೆಯಲ್ಲಿ ಹಣ ಕಟ್ಟಲು ಸಾಧ್ಯವಾಗದೇ ಅವರು ಆತ್ಮಹತ್ಯೆ ದಾರಿ ತುಳಿದಿದ್ದಾರೆ. ಈ ಕುರಿತು ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಹಾವೇರಿ: ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಶುರುವಾದ ಜಗಳ ಸಹೋದರನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ನಾಗರಾಜ ಕೋಟಿಗಾಳರ(36) ಸಾವನ್ನಪ್ಪಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಆಸ್ತಿ ಮಾರಾಟದ ವಿಚಾರಕ್ಕೆ ಅಣ್ಣ ತಮ್ಮಂದಿರ ನಡುವೆ ಜಗಳವಾಗಿತ್ತು. ಈ ಘಟನೆಯಿಂದ ನಾಗರಾಜ ಬೇಸತ್ತಿದ್ದು, ಸಾಲ ತೀರಿಸಲಾಗದೆ ಸಾಲದ ಸುಳಿಗೆ ಸಿಲುಕಿದ್ದ ನಾಗರಾಜ ನೇಣು ಹಾಕಿಕೊಂಡಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಒಳಗಡೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಸಿಕ್ಕಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ರಾಣೆಬೇನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ರಾಜ್ಯದ ಬಿಜೆಪಿ ನಾಯಕರೇ, ನಿಮಗೆ ಮಾನ-ಮರ್ಯಾದೆ ಎನ್ನುವುದೇನಾದರೂ ಇದ್ದರೆ ಮೊದಲು ಜನರನ್ನು ತಪ್ಪುದಾರಿಗೆಳೆಯುವ ಈ ಹೇಳಿಕೆಯನ್ನು ವಾಪಸು ಪಡೆಯುವಂತೆ ಸಿಎಂ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯದ ನವಾಜ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಎದೆಬಡಿದುಕೊಳ್ಳೀರಲ್ಲಾ? ಎಂದು ಪ್ರಶ್ನಿಸಿದ್ದಾರೆ. ನಿಮ್ಮದೇ ಪಕ್ಷದ ಸರ್ಕಾರ 2020 ಮತ್ತು 2022ರ ಸಾಲಿನಲ್ಲಿ ಇದೇ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು? ಎಂದು ಕೇಳಿದ್ದಾರೆ. ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ…
ಬೆಂಗಳೂರು: ವೈಟ್ ಫೀಲ್ಡ್ ಭಾಗದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲು ಸಿದ್ಧವಾಗಿರುವ ರಾಧಾಕೃಷ್ಣ ದೇವರ ಕಲ್ಲಿನ ವಿಗ್ರಹ ಕೆತ್ತನೆ ಕಾರ್ಯವನ್ನು ರಾಮಲಲ್ಲಾ ಕೆತ್ತನೆಯ ಶಿಲ್ಪಿ ಅರುಣ್ ಯೋಗಿರಾಜ್ ಕೈಗೆತ್ತಿಗೊಂಡಿದ್ದಾರೆ. ಮಹದೇವಪುರ ಕ್ಷೇತ್ರದ ವೈಟ್ ಫೀಲ್ಡ್ ನ ನಲ್ಲೂರುಹಳ್ಳಿ ಬೋರ್ ವೇಲ್ ರಸ್ತೆಯಲ್ಲಿ ಇ ಎಲ್ ವಿ ಗ್ರೂಪ್ ವತಿಯಿಂದ ನಿರ್ಮಿಸಿರುವ ರಾಧಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿದರು. ನಂತರ ಮಾತನಾಡಿದ ಅವರು. ಹೊಯ್ಸಳ ಮತ್ತು ಮೈಸೂರು ಶೈಲಿಯಲ್ಲಿ ರಾಧಕೃಷ್ಣನ ವಿಗ್ರಹ ಕೆತ್ತನೆ ಕಾರ್ಯವನ್ನು ಪ್ರಾರಂಭಿಸುವ ಮೊದಲು ಶಿಲೆ ನಿರ್ಮಾಣಕ್ಕೆ ಬೇಕಾದ ಅಳತೆ ಪಡೆಯಲು ಬಂದಿರುವುದಾಗಿ ತಿಳಿಸಿದರು. ಅಳತೆ ಪಡೆದ ನಂತರ, ಚಿತ್ರ ರಚಿಸಿ, ವಿಗ್ರಹ ನಿರ್ಮಾಣದ ಕೆಲಸ ಪ್ರಾರಂಭ ಮಾಡಲಾಗುವುದು, ಕೃಷ್ಣ ಜನ್ಮಾಷ್ಟಮಿಗೆ ವಿಗ್ರಹದ ಬೇಡಿಕೆಯಿದ್ದು, ಬಹಳಷ್ಟು ಕೆಲಸದ ಒತ್ತಡ ಇರುವುದರಿಂದ ಆದಷ್ಟು ಬೇಗನೇ ಶಿಲೆ ಕೆಲಸ ಪೂರ್ಣಗೊಳಿಸುವುದಾಗಿ ಹೇಳಿದರು. ಇನ್ನೂ ಇ.ಎಲ್.ವಿ. ಭಾಸ್ಕರ್ ಅವರು ಮಾತನಾಡಿ ಅಯೋಧ್ಯೆಯ ರಾಮ ನಿರ್ಮಾಣದಂತಹ ಸುಂದರ ದೇವರ ಶಿಲೆ ಕೆತ್ತನೆ ಮಾಡಿದಂತೆ, ನಮ್ಮ ಭಾಗದಲ್ಲಿಯೂ ಸಹ ರಾಧಕೃಷ್ಣನ ಮೂರ್ತಿಯ…
ನವದೆಹಲಿ: ನೋಯ್ಡಾದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾಹ್ ಖಾನ್ ಪುತ್ರ ಪೆಟ್ರೋಲ್ ಪಂಪ್ ಒಂದರ ಕಾರ್ಮಿಕರ ಮೇಲೆ ವಿನಾಕಾರಣ ಹಲ್ಲೆಗೈದಿರುವ ಘಟನೆ ನಡೆದಿದೆ. ಶಾಸಕನ ಪುತ್ರ ಕ್ಷುಲ್ಲಕ ಕಾರಣಕ್ಕಾಗಿ ಪೆಟ್ರೋಲ್ ಪಂಪ್ ಸಿಬ್ಬಂದಿಯೊಡನೆ ಜಗಳ ತೆಗೆದು ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಶಾಸಕನ ಪುತ್ರನನ್ನು ತಡೆಯಲು ಬಂದವರ ಮೇಲೂ ಸಹ ಹಲ್ಲೆ ನಡೆಸಲಾಗಿದೆ. ನೋಯ್ಡಾದ ಎಡಿಸಿಪಿ ಮಣೀಶ್ ಮಿಶ್ರಾ ಘಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ್ದು, ಆರೋಪಿಗಳ ವಿರುದ್ದ ದೂರು ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮತದಾನ ಪ್ರಕ್ರಿಯೆ ಮುಗಿದ ಬಳಿಕ ರಾತ್ರಿ 11ಗಂಟೆಗೆ ವಾಪಾಸಾಗುತ್ತಿದ್ದ ವೇಳೆ ಬಸ್ಸಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಘಟನೆ ಬೀತುಲ್ ಜಿಲ್ಲೆಯಾ ಗೋಲಾ ಗ್ರಾಮದಲ್ಲಿ ನಡೆದಿದೆ. ಬಸ್ ನಲ್ಲಿ ಆರು ಜನ ಸಿಬ್ಬಂದಿ ಮತ್ತು ಆರು ಇವಿಎಂ ಯಂತ್ರಗಳು ಇದ್ದವು. ನಾಲ್ಕು ಇವಿಎಂ ಯಂತ್ರಗಳು ಹಾನಿಗೊಳಗಾಗಿದ್ದು, ಎರಡು ಇವಿಎಂಗಳು ಸುರಕ್ಷಿತವಾಗಿದೆ ಎಂದು ಜಿಲ್ಲಾಧಿಕಾರಿ ಸೂರ್ಯವಂಶಿ ಹೇಳಿದ್ದಾರೆ. ಇನ್ನು ಈ ಘಟನೆಯಿಂದ ಮತ ಎಣಿಕೆ ಮೇಲೆ ಏನಾದರೂ ಪ್ರಭಾವ ಬೀರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಘಟನೆ ಬಗ್ಗೆ ಈಗಾಗಲೇ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಾಗಿದೆ. ಅವರು ಆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಒಂದು ವೇಳೆ ಮರು ಮತದಾನದ ಅವಶ್ಯಕತೆ ಇದ್ದಲ್ಲಿ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚಿಕ್ಕಬಳ್ಳಾಪುರ: ಕುಡಿದ ಅಮಲಿನಲ್ಲಿ ಮಹಿಳೆಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಸೀಗಲಹಳ್ಳಿ ಗ್ರಾಮದ ಆಲುವೇಲಮ್ಮ (45) ಮೃತ ದುರ್ದೈವಿಯಾಗಿದ್ದಾರೆ. ಆಲುವೇಲಮ್ಮ, ರಾಮಾಂಜಿನಮ್ಮ, ಸಂಜೀವಪ್ಪ ಎಂಬವರು ಜೊತೆಯಾಗಿ ಕೂಲಿ ಕೆಲಸಕ್ಕೆ ಹೋಗಿದ್ದಾರೆ. ಮೂವರು ಕುಡಿದು ಜಮೀನಿನಲ್ಲೇ ಜಗಳವಾಡಿಕೊಂಡಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿದ್ದು, ಆಲುವೇಲಮ್ಮಳ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲುವೇಲಮ್ಮಳ ಜೊತೆ ಇದ್ದ ರಾಮಾಂಜಿನಮ್ಮ, ಸಂಜೀವಪ್ಪ ಎಂವರನ್ನು ಪೊಲೀಸರು ಬಂಧಿಸಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಸಿಂಗನಲ್ಲೂರು ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಿಂಗನಲ್ಲೂರು ಗ್ರಾಮದ ಶ್ರೀಧರ್(44) ಮೃತರಾಗಿದ್ದಾರೆ. ಬಾಳೆಹಣ್ಣು ವ್ಯಾಪಾರಿಯಾಗಿದ್ದ ಮೃತ ಶ್ರೀಧರ್ ಇಂದು ಬೆಳಗ್ಗೆ ಕಾಮಗೆರೆ ಗ್ರಾಮದಿಂದ ಸ್ವಗ್ರಾಮಕ್ಕೆ ವಾಪಸಾಗುತ್ತಿದ್ದಾಗ, ಈ ವೇಳೆ ಯಮನಂತೆ ಬಂದ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಬಸ್ ನಡಿ ಸಿಲುಕಿ ಬೈಕ್ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಹನೂರು ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಾಯಚೂರು: ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ರಾಯಚೂರು ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ. ಜೇಗರ್ ಕಲ್ ಮಲ್ಲಾಪೂರು ಗ್ರಾಮದ ವಿನಾಯಕ(10) ಮೃತ ಬಾಲಕನಾಗಿದ್ದಾನೆ. ಮೃತ ಬಾಲಕ ಮಂಗಳವಾರ ಕುಟುಂಬಸ್ಥರೊಂದಿಗೆ ಈಜು ಕಲಿಯಲು ಪಕ್ಕದೂರು ಹೆಂಬೆರಾಳದ ಹಳ್ಳಕ್ಕೆ ಹೋಗಿದ್ದ. ನೀರಿನ ಆಳ ಹೆಚ್ಚಿದ್ದ ಕಡೆ ವಿನಾಯಕ ಈಜಲು ತೆರಳಿದ್ದು, ಈಜು ಬಾರದ ಹಿನ್ನೆಲೆ ಜಲ ಸಮಾಧಿಯಾಗಿದ್ದಾನೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296