Author: admin

ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12 ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಕಲರ್ಸ್ ಕನ್ನಡ ವಾಹಿನಿಯು ಈ ಬಾರಿಯ ಸೀಸನ್‌ ನ ಪ್ರೋಮೋವನ್ನು ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 28ರಂದು ಗ್ರಾಂಡ್ ಓಪನಿಂಗ್‌ನೊಂದಿಗೆ ಶೋ ಆರಂಭವಾಗಲಿದೆ. ಸೆಪ್ಟೆಂಬರ್ 29 ರಿಂದ ಪ್ರತಿದಿನ ಪ್ರಸಾರವಾಗಲಿದೆ. ಕನ್ನಡ ಚಿತ್ರರಂಗದ ಸೂಪರ್‌ ಸ್ಟಾರ್ ಕಿಚ್ಚ ಸುದೀಪ್ ಈ ಬಾರಿಯೂ ನಿರೂಪಕರಾಗಿದ್ದಾರೆ ಕಲರ್ಸ್ ಕನ್ನಡ ವಾಹಿನಿಯು ಬಿಡುಗಡೆ ಮಾಡಿರುವ ಪ್ರೋಮೋದಲ್ಲಿ ಸುದೀಪ್‌ ಆಕರ್ಷಕ ಎಂಟ್ರಿ ನೀಡಿದ್ದಾರೆ. ನಾನು ರೆಡಿ ಅಂದಿದ್ದಾರೆ. ಹೊಸ ಸೆಟ್ ರೆಡಿ, ಹೊಸ ಕಂಟೆಸ್ಟೆಂಟ್ ರೆಡಿ, 7 ಕೋಟಿ ಕನ್ನಡಿಗರೂ ರೆಡಿ… ನೀವು?” ಎಂಬ ವಾಯ್ಸ್‌ಓವರ್‌ನೊಂದಿಗೆ ಸುದೀಪ್‌ ಅವರು ಕೂಡ “ರೆಡಿ!” ಎಂಬ ವಾಕ್ಯವು ಪ್ರೋಮೋದಲ್ಲಿ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಯಾದಗಿರಿ: ಒಂದೇ ಕುಟುಂಬದ ಇಬ್ಬರು ಸಹೋದರರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ನಡೆದಿದೆ. ಮೃತರನ್ನು ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಎಂದು ಗುರುತಿಸಲಾಗಿದೆ. ಕೆಂಭಾವಿ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ತಮ್ಮ ಇರ್ಫಾನ್‌ ಗೆ ಎದೆನೋವು ಕಾಣಿಸಿಕೊಂಡು ಹೃದಯಾಘಾತವಾದ ಸುದ್ದಿ ತಿಳಿದ ಕೂಡಲೇ ಅಣ್ಣ ಶಂಶೋದ್ದೀನ್‌ ಗೂ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಇಬ್ಬರನ್ನೂ ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಮೈಸೂರು: ಬಿಜೆಪಿಯ “ಧರ್ಮಸ್ಥಳ ಚಲೋ” ರ್ಯಾಲಿ “ರಾಜಕೀಯ ಲಾಭಕ್ಕಾಗಿ” ಎಂದು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದರಿಂದ ವಿರೋಧ ಪಕ್ಷಕ್ಕೆ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಸೋಮವಾರ ಹೇಳಿದ್ದು ಹೇಳಿದ್ದಾರೆ. ಧರ್ಮಸ್ಥಳ ಮತ್ತು ಚಾಮುಂಡಿ ಬೆಟ್ಟದ ವಿಷಯದಲ್ಲಿ ಬಿಜೆಪಿಯ ನಡವಳಿಕೆ “ಬೂಟಾಟಿಕೆ” ಎಂದು ಕರೆದ ಮುಖ್ಯಮಂತ್ರಿ, ಅವರು ಮಾಡುತ್ತಿರುವ “ಬೂಟಾಟಿಕೆ”ಯಿಂದ ಹಿಂದೂಗಳು ತಮ್ಮೊಂದಿಗೆ ಬರುತ್ತಾರೆ ಎಂದು ಭಾವಿಸಿದ್ದಾರೆ. ಆದರೆ ಅದು ತಪ್ಪು ಎಂದು ತಿರುಗೇಟು ನೀಡಿದರು. ಧರ್ಮಸ್ಥಳದ ವಿರುದ್ಧ ಪಿತೂರಿ ಮತ್ತು ಅಪಪ್ರಚಾರ ಖಂಡಿಸಿ ಬಿಜೆಪಿ ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜಕೀಯವಾಗಿ ಯಾತ್ರೆ ಕೈಗೊಂಡಿದೆ. ಅವರಿಗೆ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಆದರೆ ಅದು ಸಿಗುವುದಿಲ್ಲ. ಏಕೆಂದರೆ ಧರ್ಮಸ್ಥಳದ ಬಗ್ಗೆ ನಮಗೆ ಅಪಾರವಾದ ಗೌರವವಿದೆ. ಎಸ್ಐಟಿ ರಚಿಸಿದಾಗ ವಿರೋಧ ಮಾಡದೆ ಇದ್ದವರು, ನಂತರದಲ್ಲಿ ಏನೂ ಸಿಗುವುದಿಲ್ಲ ಎಂದು ತಿಳಿದು ವಿರೋಧಿಸುತ್ತಿದ್ದಾರೆ. ಇದು ಢೋಂಗಿತನ ಎಂದು ವಾಗ್ದಾಳಿ ನಡೆಸಿದರು. ಇನ್ನು ಚಾಮುಂಡಿ…

Read More

ರಾಮನಗರ: ಕೆ.ಎನ್.ರಾಜಣ್ಣ ಬಿಜೆಪಿಗೆ ಹೋಗಲು ಅರ್ಜಿ ಹಾಕಿದ್ದಾರೆ ಎಂದು ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಎನ್.ರಾಜಣ್ಣರನ್ನ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಲು ಒತ್ತಡ ಹೇರುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ನನಗಿರುವ ಮಾಹಿತಿ ಪ್ರಕಾರ ಕೆ.ಎನ್.ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿದ್ದಾರೆ. ಹೈಕಮಾಂಡ್ ವಿರುದ್ಧ ಮಾತನಾಡಿದ್ದಕ್ಕೆ ಅವರು ವಜಾ ಆಗಿದ್ದಾರೆ. ಹೀಗಾಗಿ ಬೇರೆ ಪಕ್ಷಕ್ಕೆ ಹೋಗುವ ಮುನ್ನ ನಮ್ಮ ಮೇಲೆ ಗೂಬೆ ಕೂರಿಸುವ ಕೆಲಸ ಮಾಡ್ತಿದ್ದಾರೆ ಎಂದರು. ದೆಹಲಿಯಲ್ಲಿ ಸಮಾವೇಶ ಮಾಡ್ತಾರಂತೆ ಮಾಡಲಿ. ಕೆ.ಎನ್.ರಾಜಣ್ಣ ಬಿಜೆಪಿಗೆ ಹೋಗ್ತಿದ್ದಾರೋ? ಇಲ್ವೋ? ಅಂತ ಅವರನ್ನೇ ಕೇಳಿ. ಅವರ ಬ್ರೈನ್ ಮ್ಯಾಪಿಂಗ್ ಮಾಡಿಸಿದ್ರೆ ಎಲ್ಲಾ ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

 ರಾತ್ರಿ ವೇಳೆಯಲ್ಲಿ ರಾಜ್ಯ ಹೆದ್ದಾರಿಗೆ ಸುರಿದ ಮಣ್ಣು ರಸ್ತೆಗೆ ಮಣ್ಣು ಸುರಿದ್ದಿದ್ದರಿಂದ ಅಪಘಾತ ಸಂಭವಿಸಿ 3 ಜನರಿಗೆ ಗಾಯ ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಅಕ್ರಮವಾಗಿ ರಾತ್ರಿ ವೇಳೆಯಲ್ಲಿ ರಾಜ್ಯ ಹೆದ್ದಾರಿಗೆ ಸುರಿದ ಮಣ್ಣಿನಿಂದ ಅಪಘಾತ ಸಂಭವಿಸಿ 3 ಜನ ಗಾಯಾಳು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾದ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಕಸಬಾ ಹೋಬಳಿಯ ಹಂಚಿಹಳ್ಳಿ ಗ್ರಾ.ಪಂ ವ್ಯಾಪ್ತಿಯ ಜಿ.ನಾಗೇನಹಳ್ಳಿ ಸಮೀಪ ಇರುವ ವಿಶಾಲ್ ನ್ಯಾಚರಲ್ ಫುಡ್ ಪ್ರಾಡೆಕ್ಟ್ ಇಂಡಿಯಾ ಪ್ರವೇಟ್ ಲಿಮಿಟೆಡ್‌ ನ ವ್ಯವಸ್ಥಾಪಕ ಕ್ರಮವಾಗಿ ರಾತ್ರೋರಾತ್ರಿ ಮಣ್ಣು ಸಾಗಾಣಿಕೆ ಮಾಡುವ ಸಂದರ್ಭದಲ್ಲಿ ಟಿಪ್ಪರ್ ಲಾರಿ ಒಳಗೆ ಹೋಗದೇ ಕೊರಟಗೆರೆ ಬೆಂಗಳೂರು ರಸ್ತೆಯ ರಾಜ್ಯ ಹೆದ್ದಾರಿಯ ಮಧ್ಯ ಭಾಗದಲ್ಲಿ ಸುರಿದು ಹೋಗಿದ್ದಾರೆ. ಮಧುಗಿರಿ ತಾಲೂಕಿನ ಕತ್ತಿರಾಜನಹಳ್ಳಿ ಗ್ರಾಮದ ಸಿದ್ದೇಶ್, ಕಮಲ, ಹೇಮಂತ್ ಎನ್ನವವರ ಸ್ಕೂಟಿ ವಾಹನದಲ್ಲಿ ಬೆಂಗಳೂರು ಮಾರ್ಗವಾಗಿ ಆಗಮಿಸುತ್ತಿದ್ದರು, ರಸ್ತೆ ಮಧ್ಯೆ ಸುರಿದ ಮಣ್ಣು ಕಣ್ಣಿಗೆ ಕಾಣದೆ ಮಣ್ಣಿನ ಮೇಲೆ ಹಾರಿ…

Read More

ಕೊರಟಗೆರೆ: ಪಟ್ಟಣದ ಕೆಪಿಟಿಸಿಲ್ ಕಾಲೋನಿಯಲ್ಲಿ ಬೆಸ್ಕಾಂ ಇಲಾಖೆ ವತಿಯಿಂದ ಆಯೋಜಿಸಲಾದ 48ನೇ ವರ್ಷದ ವಿದ್ಯುತ್ ಗಣಪತಿ ವಿಸರ್ಜನಾ ಕಾರ್ಯಕ್ರಮವು ಇಲಾಖೆಯ ಎಇಇ ಪ್ರಸನ್ನಕುಮಾರ್ ಅನುಪಸ್ಥಿತಿ ಮತ್ತು ಬೆಸ್ಕಾಂ ನೌಕರರ ಸಂಘದ ಪದಾಧಿಕಾರಿಗಳ ನೇತೃತ್ವದಲ್ಲಿ ಸೋಮವಾರ ಯಶಸ್ವಿಗೊಂಡಿತ್ತು. ಬೆಸ್ಕಾಂ ನೌಕರರ ಸಂಘ ಅಧ್ಯಕ್ಷ ಎಚ್.ಕೃಷ್ಣಮೂರ್ತಿ ಮಾತನಾಡಿ, 48 ವರ್ಷಗಳಿಂದ ಉತ್ತಮ ಮಟ್ಟದಲ್ಲಿ ವಿದ್ಯುತ್‌ ಗಣಪತಿಯ ವಿಸರ್ಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿದ್ದೇವೆ. ತಾಲ್ಲೂಕಿನ ಬೆಸ್ಕಾಂ ಎಲ್ಲಾ ಶಾಖೆಯ ಸಿಬ್ಬಂದಿಗಳಿಂದ ವಿಜೃಂಭಣೆಯ ಆಚರಣೆ ಮಾಡಲಾಗಿದೆ ಎಂದು ಹೇಳಿದರು. ಕಾರ್ಯದರ್ಶಿ ನಟರಾಜು ಕೆ.ವಿ ಮಾತನಾಡಿ, 1976ರಲ್ಲಿ ಎಇಇ ಪುಟ್ಟಶಾಮಯ್ಯನವರು ಮೊದಲಿಗೆ ಸ್ಥಾಪಿಸಿದ್ದು, 2 ವರ್ಷದ ನಂತರ ವಿದ್ಯುತ್ ಗಣಪತಿ ದೇವಾಲಯ ನಿರ್ಮಾಣಗೊಂಡಿತ್ತು. 48 ವರ್ಷಗಳ ಕಾಲ ನಿರಂತರ ಪೂಜೆ ನಡೆದುಕೊಂಡು ಬಂದಿದೆ. ನಗರದ ವಿದ್ಯುತ್ ಗ್ರಾಹಕರಿಗೆ ಮತ್ತು ನೌಕರರಿಗೆ ವಿದ್ಯುತ್ ಸುರಕ್ಷತೆ ನೀಡಿ ಗಣಪತಿಯು ಕಾಪಾಡಿಕೊಂಡು ಹೋಗುತ್ತಿದೆ. ವಿಶಿಷ್ಠ ರೀತಿಯಲ್ಲಿ ಗೌರಿ–ಗಣೇಶ ಹಬ್ಬವನ್ನು ಪ್ರತಿವರ್ಷ ಆಚರಿಸಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು. ಕಿರಿಯ ಇಂಜಿನಿಯರ್ ಹೆಚ್.ಸಿ ಮಲ್ಲಯ್ಯ ಮಾತನಾಡಿ,…

Read More

ವರದಿ : ಮಂಜುಸ್ವಾಮಿ ಎಂ ಎನ್ ಕೊರಟಗೆರೆ : ಪೂರ್ವಜರು ಕಾಪಾಡಿಕೊಂಡು ಬಂದಂತಹ ಸಂಪ್ರದಾಯ, ಆಚಾರ ವಿಚಾರಗಳನ್ನು ಇಂದಿನ ಯುವ ಪೀಳಿಗೆ ಮುಂದುವರೆಸಬೇಕಿದೆ. ಇಲ್ಲವಾದರೆ ಮನುಕುಲ ಅಂತ್ಯ ಕಟ್ಟಿಟ್ಟಬುತ್ತಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ತಾಲ್ಲೂಕಿನ ಕೋಳಾಲ ಹೋಬಳಿ ಎಲೆರಾಂಪುರ ಗ್ರಾ.ಪಂ. ವ್ಯಾಪ್ತಿಯ ಕರಿದುಗ್ಗನಹಳ್ಳಿ ಮತ್ತು ಹನುಮಂತಯ್ಯನ ಪಾಳ್ಯದ ಗ್ರಾಮ ದೇವತೆ ಶ್ರೀ ದೊಡ್ಡಮ್ಮದೇವಿ ಸ್ಥಿರಬಿಂಬ ಪ್ರತಿಷ್ಠಾಪನಾ ಕುಂಭಾಭಿಷೇಕ ಮಹೋತ್ಸವ ಹಾಗೂ ಶ್ರೀ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವಿಕ ಪೂಜೆ ಸಲ್ಲಿಸಿ ಕಾರ್ಯಕ್ರಮ ಉದ್ಧೇಶಿಸಿ ಮಾತನಾಡಿದರು. ಮನುಷ್ಯನಲ್ಲಿ ಹಣ ಮತ್ತು ಎಲ್ಲಾ ರೀತಿಯ ಸೌಲಭ್ಯ ಇದ್ದ ಮಾತ್ರಕ್ಕೆ ದೇವಾಲಯ ನಿರ್ಮಿಸಲು ಸಾಧ್ಯವಿಲ್ಲ, ಅದಕ್ಕೆ ದೇವಿಯ ಅನುಗ್ರಹ ಕೂಡ ಬೇಕಿದೆ. ನನ್ನ ತಾಯಿ ಕಲಿಸಿದ ಸಂಸ್ಕೃತಿ, ಸಂಪ್ರದಾಯದಿಂದ ಇಂದು ಉನ್ನತ ಸ್ಥಾನದಲ್ಲಿದ್ದೇನೆ. ಉದ್ಯಮಿ ನಿಲೇಶ್ ಮತ್ತು ಶಶಿಧರ್ ದುಬೈನಲ್ಲಿದ್ದರೂ ಉದ್ಯಮದ ಜೊತೆಗೆ ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡುತ್ತಾ ಸಂಸ್ಕೃತಿ, ಆಚರಣೆಯನ್ನು ಮರೆಯದಿರುವುದು ಖುಷಿಯ ವಿಚಾರ ಎಂದು…

Read More

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 57ನೇ ಸೆಷನ್ಸ್​ ನ್ಯಾಯಾಲಯ ವಜಾಗೊಳಿಸಿದೆ. ತನ್ನಿಂದ ರೇಣುಕಾ ಸ್ವಾಮಿ ನಿಧನ ಹೊಂದಿಲ್ಲ, ತಾನು ಮಹಿಳೆ ಹಾಗೂ ಸಿಂಗಲ್ ಮದರ್ ಆಗಿದ್ದು, ಮಗಳ ಆರೈಕೆ ಮಾಡಬೇಕು, ಇನ್ನಿತರೆ ಕಾರಣಗಳನ್ನು ಪವಿತ್ರಾ ಗೌಡ ನೀಡಿದ್ದರು. ಆದರೆ ಯಾವುದೇ ಕಾರಣವನ್ನು ನ್ಯಾಯಾಲಯ ಪರಿಗಣಿಸಿಲ್ಲ. ಪವಿತ್ರಾ ಅವರ ಜಾಮೀನು ಅರ್ಜಿಯನ್ನು ಕೆಳಹಂತದ ನ್ಯಾಯಾಲಯ ರದ್ದು ಮಾಡಿದೆ. ಪವಿತ್ರಾ ಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ 57ನೇ ಸೆಷನ್ಸ್​ ನ್ಯಾಯಾಲಯದಲ್ಲಿ ನಡೆದಿತ್ತು, ನ್ಯಾಯಾಧೀಶ ಐಪಿ ನಾಯಕ್ ಅವರು ವಿಚಾರಣೆ ನಡೆಸಿ ಅರ್ಜಿಯನ್ನು ವಜಾ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ ಅಂತ ಧರ್ಮಸ್ಥಳ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್,  ಪ್ರಸ್ತುತ ಎಸ್‌ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ, ಈಗ ನಾಟಕ ಮಾಡುತ್ತಿರುವವರು ಅವರೇ ಎಂದು ಅವರು ಹೇಳಿದರು. ಎನ್‌ ಐಎ ತನಿಖೆಗೆ ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಕೇಳಿದಾಗ ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು ಬಿಜೆಪಿಯವರು ಎಂದೂ ಬಾಯಿ ಬಿಚ್ಚಲಿಲ್ಲ. ಬಿಜೆಪಿಯ ಮೂಲ ಕಾರ್ಯಕರ್ತರೇ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಬೇಕು ಎಂದು ಮಾಡಿರುವ ಕೆಲಸವಿದು ಎಂದು ನೇರವಾಗಿ ಆರೋಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಧರ್ಮಸ್ಥಳ: ಮೋದಿ ಸರ್ಕಾರ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಇದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಸೋಮವಾರ ಹೇಳಿದರು. ಧರ್ಮಸ್ಥಳ ಚಲೋʼ ಹಾಗೂ ಸಮಾಜ ಜಾಗೃತಿ ಬೃಹತ್‌ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಧರ್ಮಸ್ಥಳಕ್ಕೆ ಕೇವಲ ಒಂದೇ ಒಂದು ವರ್ಗದವರು ಬರುವುದಿಲ್ಲ. ಎಲ್ಲಾ ವರ್ಗದವರೂ ಬರುತ್ತಾರೆ. ಅದರಲ್ಲೂ ಅತ್ಯಂತ ಹಿಂದುಳಿದ ವರ್ಗದವರು ಬಂದು ಅಣ್ಣಪ್ಪ ಸ್ವಾಮಿಗೆ ನಮಸ್ಕಾರ ಹಾಕಿ, ಮಂಜುನಾಥೇಶ್ವರನಿಗೆ ಮುಡಿ ಕೊಟ್ಟು ಹೋಗುವ ಸಂಪ್ರದಾಯ ತಲತಲಾಂತರದಿಂದ ಬೆಳೆದು ಬಂದಿದೆ. ಆದರೆ, ಇಂದು ಬುರುಡೆ ಪ್ರಕರಣದ ನೆಪದಲ್ಲಿ ಹಿಂದೂ ಸಮಾಜವನ್ನೇ ಒಡೆಯುವ ಷಡ್ಯಂತರ ಧರ್ಮಸ್ಥಳ ಪ್ರಕರಣದಲ್ಲಿ ಅಡಗಿದೆ ಎಂದು ಹಿಂದೂಗಳನ್ನು ಎಚ್ಚರಿಸಿದರು. ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿಯ ಪ್ರಭಾವ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹಿಂದೂಗಳಲ್ಲಿ ಕ್ಷೇತ್ರದ ಮೇಲೆ ಇರುವ ಧಾರ್ಮಿಕ ನಂಬಿಕೆ ಮತ್ತು ಶ್ರದ್ಧೆ ಕಡಿಮೆ ಮಾಡುವ ಸಂಚು ಇದಾಗಿದೆ. ಅಲ್ಲದೇ, ಹಿಂದೂ ಸಮಾಜವನ್ನು ಒಡೆಯುವ ಷಡ್ಯಂತ್ರ ನಡೆಸಿದ್ದಾರೆ ಎಂದು…

Read More