Author: admin

ಹರಿದ್ವಾರ್: ಲಕ್ಸರ್ ತೆಹಸಿಲ್‌ ನ ಇಸ್ಮಾಯಿಲ್‌ ಪುರ ಗ್ರಾಮದ ಪಕ್ಕದ ಹೊಲದಲ್ಲಿ ಬರೋಬ್ಬರಿ 13 ಅಡಿ ಉದ್ದದ ಪತ್ತೆಯಾಗಿದೆ. ಈ ಹೆಬ್ಬಾವನ್ನು ನೋಡಿದ ಗ್ರಾಮಸ್ಥರು ಏಕಾಏಕಿ ಬೆಚ್ಚಿಬಿದ್ದಿದ್ದಾರೆ. ಹೆಬ್ಬಾವನ್ನು ನೋಡಿದ ಕೂಡಲೇ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಸಿಬ್ಬಂದಿ ಬರೋಬ್ಬರಿ 13 ಅಡಿ ಉದ್ದದ ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ. ಇನ್ನು, ಈ ಹೆಬ್ಬಾವಿನ ತೂಕ ಸುಮಾರು 1.25 ಕ್ವಿಂಟಾಲ್ ಆಗಿದ್ದು, ಅರಣ್ಯ ಸಿಬ್ಬಂದಿ ಹೆಬ್ಬಾವನ್ನು ರಕ್ಷಿಸಲು ಸಾಕಷ್ಟು ಸಮಯ ತೆಗೆದುಕೊಂಡಿದ್ದಾರಂತೆ. ಬಳಿಕ ಗ್ರಾಮಸ್ಥರ ಸಹಾಯದಿಂದ ಅರಣ್ಯ ಸಿಬ್ಬಂದಿ ಹೆಬ್ಬಾವನ್ನು ಯಶಸ್ವಿಯಾಗಿ ರಕ್ಷಿಸಿ ಮೀಸಲು ಅರಣ್ಯ ಪ್ರದೇಶದಲ್ಲಿ ಬಿಟ್ಟು ಬಂದಿದ್ದಾರಂತೆ. ಇನ್ನು, ದಿನದಿಂದ ದಿನಕ್ಕೆ ಬಿರು ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವುದರಿಂದ ಕಾಡು ಪ್ರಾಣಿಗಳು ನೀರು ಅರಸಿ ಮನುಷ್ಯರು ವಾಸಿಸುವ ಪ್ರದೇಶಗಳಿಗೆ ಬರುತ್ತಿವೆ. ಹೀಗಾಗಿ ಜನರು ಭಯ ಪಡುವಂತ ಸ್ಥಿತಿ ನಿರ್ಮಾಣಗೊಂಡಿದೆ. ಸದ್ಯ ಹೆಬ್ಬಾವನ್ನು ರಕ್ಷಣೆ ಮಾಡುತ್ತಿರೋ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ…

Read More

ಇತ್ತೀಚೆಗೆ ಮೊಬೈಲ್ ಫೋನ್ ಪ್ರಾಣಕ್ಕಿಂತಲೂ ಹೆಚ್ಚಿನ ಬೆಲೆ ಇದೆ ಅನ್ನುವ ರೀತಿ, ಫೋನ್ ಬಳಸದಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಲಿಖಿತಾ(18) ನೇಣಿಗೆ ಶರಣಾದ ವಿದ್ಯಾರ್ಥಿಯಾಗಿದ್ದಾರೆ. ಸುಧಾ ಮತ್ತು ನಾರಾಯಣ ದಂಪತಿಯ ಪುತ್ರಿಯಾದ ಮೃತ ಲಿಖಿತಾ, ಪ್ಯಾರಾಮೆಡಿಕಲ್‌ ವ್ಯಾಸಂಗ ಮಾಡುತ್ತಿದ್ದರು. ಹೆತ್ತವರನ್ನ ಸಾಕುವ ಕನಸು ಕಂಡಿದ್ದ ಸುಧಾ ಹಾಗೂ ನಾರಾಯಣ ಅವರ ಮುದ್ದಿನ ಮಗಳು ಲಿಖಿತಾ ಒಳ್ಳೆಯ ವಿದ್ಯಾಬ್ಯಾಸ ಮಾಡುತ್ತಿದ್ದಳು. ಓದಿನಲ್ಲಿಯೂ ಮುಂದೆ ಇದ್ದ ಲಿಖಿತಾ, ಇತ್ತೀಚಿಗೆ ಫೋನಿನ ಗೀಳು ಹತ್ತಿಸಿಕೊಂಡಿದ್ದಳಂತೆ. ಯಾವಾಗಲೂ ಫೋನಿನಲ್ಲಿ ಮಾತನಾಡಿತ್ತಿದ್ದ ಆಕೆ, ಚಾಟಿಂಗ್, ಸ್ನ್ಯಾಪ್, ಇನ್ಸ್ಟಾ, ಫೇಸ್‌ಬುಕ್ ಎಂದು ಫೋನ್‌‌ನಲ್ಲಿ ಬ್ಯುಸಿ ಇರುತ್ತಿದ್ದಳು. ಇದನ್ನ ಗಮನಿಸಿದ್ದ ಲಿಖಿತಾ ತಂದೆ ನಾರಯಣ್ ಬೆಳಿಗ್ಗೆ ಬೈದು ಬುದ್ದಿ ಹೇಳಿದ್ದಾರೆ. ಈ ಹಿನ್ನಲೆ ಯುವತಿ ರೂಂ ಸೇರಿದ್ದರು. ಬಳಿಕ ಎರಡು ಗಂಟೆ ನಂತರ ರೂಂ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಪ್ಯಾನ್​…

Read More

ತುಮಕೂರು: ಜಿಲ್ಲೆಯ ವಿವಿಧಡೆ ಇಂದು ಸಂಜೆ ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮಳೆಯಿಂದ ರೈತಾಪಿ ವರ್ಗ ಸಂತಸ ಗೊಂಡಿದೆ. ಆಲಿಕಲ್ಲು ಸಹಿತ  ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿತ್ತು. ಅನೇಕ ದಿನಗಳಿಂದ ಮಳೆಗಾಗಿ ಕಾಯುತ್ತಿದ್ದ ಜನರು ಸುರಿದ ಮಳೆಯಿಂದ ಸಂತಸಗೊಂಡರು. ಜಿಲ್ಲೆಯ ಚಿಕ್ಕನಾಯಕನಹಳ್ಳಿ, ತಿಪಟೂರು ಭಾಗದಲ್ಲಿ ಹಾಗೂ ಕುಣಿಗಲ್ ತಾಲೂಕಿನಲ್ಲಿ ಉತ್ತಮ ಮಳೆಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ತುಮಕೂರು: ಬರ ಪರಿಸ್ಥಿತಿಯಿಂದ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿ ಕಂಗಾಲಾಗಿರುವ ಹಿನ್ನೆಲೆಯಲ್ಲಿ ಮುಂದಿನ 2 ತಿಂಗಳವರೆಗೂ ರೈತರಿಂದ ಸಾಲ ವಸೂಲಾತಿ ಮಾಡುವಂತಿಲ್ಲವೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬ್ಯಾಂಕು, ಮೈಕ್ರೋ ಫೈನಾನ್ಸ್ ಕಂಪನಿ, ಖಾಸಗಿ ಲೇವಾದೇವಿಗಾರರು ಹಾಗೂ ಸಾಲದಾತರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ರಾತ್ರಿ ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ತುರ್ತಾಗಿ ವಿಡಿಯೋ ಕಾರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು ಮಳೆ ಬಾರದೆ ಈಗಾಗಲೇ ರೈತರು ಸಂಕಷ್ಟದಲ್ಲಿದ್ದಾರೆ. ಸಂಕಷ್ಟದಿಂದ ಹೊರಬರಲು ಮಾಡಿರುವ ಸಾಲ ತೀರಿಸಲಾಗದೆ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಬೆಳೆಯಿಲ್ಲದೆ ಕಂಗೆಟ್ಟಿರುವ ಇಂತಹ ಪರಿಸ್ಥಿತಿಯಲ್ಲಿ ಸಾಲ ಮರುಪಾವತಿ ಮಾಡಬೇಕೆಂದು ಯಾವುದೇ ಬ್ಯಾಂಕು, ಮೈಕ್ರೋ ಫೈನಾನ್ಸ್ ಕಂಪನಿಗಳು ರೈತರಿಗೆ ಕಿರುಕುಳ ನೀಡಬಾರದು. ಸಾಲ ವಸೂಲಿಗಾಗಿ ರೈತರಿಗೆ ತೊಂದರೆ ಕೊಡುವುದು ಕಂಡು ಬಂದರೆ ಅಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು. 1,32,332ರ ರೈತರಿಗೆ ಬರ ಪರಿಹಾರ:…

Read More

ನವದೆಹಲಿ: ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಮೇ 14ರವರೆಗೆ ವಿಸ್ತರಿಸಲಾಗಿದೆ. ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ.ಕವಿತಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳು ಮಾಡಲು ಪ್ರಯತ್ನಿಸಬಹುದು ಎನ್ನುವ ಕಾರಣಕ್ಕೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ. ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ಕೆ.ಕವಿತಾ ಅವರನ್ನು ಮಂಗಳವಾರ ಕೋರ್ಟ್​ ಎದುರು ಹಾಜರುಪಡಿಸಲಾಯಿತು. ಸಿಬಿಐ, , ಜಾರಿ ನಿರ್ದೇಶನಾಲಯವು ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ನ್ಯಾಯಾಂಗ ಬಂಧನ ಅವಧಿಯನ್ನು ಆದೇಶ ಹೊರಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಕೊರಟಗೆರೆ ತಾಲೂಕಿನ ಅರಸಪುರ ಹಾಗೂ ಬಿಡಿ ಪುರ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಬರುವ ಬಿಳೇ ಕಲ್ಲಹಳ್ಳಿ, ಭಕ್ತರಹಳ್ಳಿ, ಕಾಶಪುರ ಗ್ರಾಮಗಳಲ್ಲಿ ನಾಲಕ್ಕು ಹೆಚ್ಚು ಕೋಳಿ ಫಾರಂಗಳ ನ್ನುಅನಧಿಕೃತವಾಗಿ ನಡೆಸುತಿದ್ದು, ಕೋಳಿ ಫಾರಂನಿಂದ ಬರುವ ನೈರ್ಮಲ್ಯದ ಕೊರತೆಯಿಂದ ಗ್ರಾಮಸ್ಥರು ನೆಮ್ಮದಿಯ ಜೀವನ ನಡೆಸಲು ಕಷ್ಟಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ಜನರು ಕುಡಿಯೋ ನೀರಿನಲ್ಲೂ ತಿನ್ನುವ ಅನ್ನದಲ್ಲೂ ನೊಣಗಳು ಹಾರಡುತ್ತಿದೆ. ಡೈರಿಗೆ ತೆಗೆದುಕೊಂಡು ಹೋಗುವ ಹಾಲಿನ ಮೇಲು ಇಂಡು ಇಂಡು ನೊಣಗಳು ತುಂಬಿ ತುಳುಕುತ್ತಿದೆ. ಹಿರಿಯರು, ಮಕ್ಕಳನ್ನು ಮನೆಯಲ್ಲಿ ಮಲಗಲು ಕಷ್ಟಪಡುವ ಪರಿಸ್ಥಿತಿ ಉಂಟಾಗಿದೆ. ಬಿಳೇ ಕಲ್ಲಹಳ್ಳಿ ಗ್ರಾಮದ ಸಮೀಪವಿರುವ ನಲ್ಲಪ್ಪ ಕೋಳಿ ಫಾರಂ ನ್ನು ಅನಧಿಕೃತವಾಗಿ ನಡೆಸುತ್ತಿದ್ದಾರೆ. ಈ ಕೋಳಿ ಫಾರಂನಲ್ಲಿ ಸರಿಯಾದ ರೀತಿಯ ನೈರ್ಮಲ್ಯದ ವ್ಯವಸ್ಥೆಗಳಿಲ್ಲದೆ ನಡೆಯುತ್ತಿವೆ.ಇಲ್ಲಿ ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸಲಾಗಿಲ್ಲ. ಕೋಳಿ ಫಾರಂ ನಡೆಸಲು ಮಾಲೀಕ ನಲ್ಲಪ್ಪ ಅಗ್ನಿಶಾಮಕ ದಳದ ಪರ್ಮಿಷನ್, ಸ್ಥಳೀಯ ಗ್ರಾಮ ಪಂಚಾಯಿತಿ ಪರ್ಮಿಷನ್, ಪಶು ಇಲಾಖೆಯ ಪರ್ಮಿಷನ್ ಹಾಗೂ ಹೈನುಗಾರಿಕೆಗೆ ಬೇಕಾದ ಯಾವ ರೀತಿಯ ಅನುಮತಿಯನ್ನು…

Read More

ಚಿಕ್ಕಬಳ್ಳಾಪುರ: ಕಲ್ಲು ಕೂಚ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ ಕಂಬಗಳಡಿ ಸಿಲುಕಿಕೊಂಡು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಚಿಕ್ಕಬಳ್ಳಾಪುರ-ಗೌರಿಬಿದನೂರು ಮಾರ್ಗದ ಕಣಿವೆ ಬಳಿ ನಡೆದಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಕೋಲಾರದ ಮಾಲೂರಿನ ಚಿಕ್ಕತಿರುಪತಿಯಿಂದ ಮಂಚೇನಹಳ್ಳಿಗೆ ಬರುತ್ತಿದ್ದ ಕ್ಯಾಂಟರ್ ಲಾರಿ ಚಾಲಕನ‌ ನಿಯಂತ್ರಣ ತಪ್ಪಿ‌ ಪಲ್ಟಿಯಾಗಿದೆ. ಕ್ಯಾಂಟರ್ ‌ನ ಹಿಂಬದಿಯಲ್ಲಿ ಸಾಗಿಸಲಾಗುತ್ತಿದ್ದ ಕಲ್ಲಿನ ಕಂಬಗಳ ಮೇಲೆ ಕುಳಿತಿದ್ದ ಕೂಲಿ ಕಾರ್ಮಿಕರು, ಈ ಕಲ್ಲುಗಳಡಿ ಸಿಲುಕಿಕೊಂಡು ದಾರುಣವಾಗಿ ಸಾವಿಗೀಡಾದರು. 108 ಸಿಬ್ಬಂದಿ ಮುಷ್ಕರದ ಹಿನ್ನೆಲೆಯಲ್ಲಿ ಕರೆ ಕಳುಹಿಸಿದರೂ ಆಂಬ್ಯುಲೆನ್ಸ್ ಸಮಯಕ್ಕೆ ಸರಿಯಾಗಿ ಬರಲಿಲ್ಲ. ಆಂಬ್ಯುಲೆನ್ಸ್ ಬಂದಿದ್ದರೆ ಜೀವಗಳನ್ನು ಉಳಿಸಬಹುದಾಗಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಸ್ಥಳಕ್ಕೆ‌ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಸಿದ್ಧರಬೆಟ್ಟದ ಶ್ರೀ ಬಾಳೆಹೊನ್ನೂರು ಖಾಸಾ ಶಾಖಾ ಮಠದ 18ನೇ ವರ್ಷದ ವಾರ್ಷಿಕೋತ್ಸವದ ಸಮಾರಂಭವು ಜೂನ್ 9 ರಂದು ಸಿದ್ದರಬೆಟ್ಟದಲ್ಲಿ ನಡೆಯಲಿದೆ. ಜೂನ್ 9 ರಂದು ನಡೆಯಲಿರುವ ಈ ವಾರ್ಷಿಕೋತ್ಸವವು ಭಕ್ತಾದಿಗಳ ಸಹಕಾರದಿಂದ ಕಳೆದ 17 ವರ್ಷಗಳಿಂದ ಬಹಳ ಚೆನ್ನಾಗಿ ನಡೆದುಕೊಂಡು ಬರುತ್ತಿದೆ. ಶ್ರೀ ಮಠದಲ್ಲಿ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶ್ರೀ ಮಠದಲ್ಲಿ ವಿದ್ಯಾಬ್ಯಾಸ ಮಾಡಿದ ವಿದ್ಯಾರ್ಥಿಗಳು ಬೇರೆ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಭಕ್ತರ ಮನಸ್ಸಿಗೂ ಶ್ರೀಮಠಕ್ಕು ಬಹಳ ಅವಿನಾಭಾವ ಸಂಬಂಧ ಇದೆ. ಸುಧಾ ಮೂರ್ತಿ ಅವರ ಸಲಹೆ ಮೇರೆಗೆ 18 ವರ್ಷಗಳ ಹಿಂದೆ ಈ ಸಾಮೂಹಿಕ ವಿವಾಹವನ್ನು ಪ್ರಾರಂಭ ಮಾಡಿದ್ದೇವೆ. ಅಲ್ಲಿನಿಂದ ಇಲ್ಲಿಯವರೆಗೂ ಶ್ರೀ ಮಠದಲ್ಲಿ ಸುಮಾರು 800ಕ್ಕೂ ಹೆಚ್ಚು ಸಾಮೂಹಿಕ ವಿವಾಹಗಳು ನಡೆದಿವೆ. ಇದರಿಂದ ಬಡವರಿಗೆ ಬಹಳ ಅನುಕೂಲ ಆಗಿದೆ. ಹಾಗೆಯೇ ಉನ್ನತ ಮಟ್ಟದ ವ್ಯಾಸಂಗ ಮಾಡುತ್ತಿರುವರಿಗೆ ವಿಷೇಶ ಪ್ರಶಸ್ತಿ ಶ್ರೀ ಮಠವು ಪ್ರತಿ ವರ್ಷ ನೀಡುತ್ತಾ ಬಂದಿದ್ದು, ಶ್ರೀ ಬಾಳೆಹೊನ್ನೂರು ಖಾಸಾ ಶಾಖಾ…

Read More

ಕಾಸರಗೋಡು: ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಕುಂಜತ್ತೂರು ಬಳಿ ಆ್ಯಂಬುಲೆನ್ಸ್​ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೃತರನ್ನು ಶ್ರೀನಾಥ, ಶರತ್ ಮೆನನ್ ಎಂದು ಗುರುತಿಸಲಾಗಿದೆ. ಮೃತರು ಕೇರಳದ ತ್ರಿಶೂರು ಜಿಲ್ಲೆ ಗುರುವಾಯೂರು ನಿವಾಸಿಗಳು ಎಂದು ತಿಳಿದುಬಂದಿದೆ. ಕಾಸರಗೋಡಿನಿಂದ ಮಂಗಳೂರಿಗೆ ಆ್ಯಂಬುಲೆನ್ಸ್​ನಲ್ಲಿ ರೋಗಿ ಕರೆದೊಯ್ಯಲಾಗುತ್ತಿತ್ತು. ಮಂಗಳೂರು ಕಡೆಯಿಂದ ಮಂಜೇಶ್ವರದತ್ತ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮಂಡ್ಯ: ಬಿರುಗಾಳಿ ಸಹಿತ ಸುರಿದ ಮಳೆಗೆ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಡ್ಯದಲ್ಲಿನಡೆದಿದೆ. ಮಂಡ್ಯ ನಗರದ ಆಸ್ಪತ್ರೆಯೊಂದರ ಬಳಿ ಈ ಘಟನೆ ಜರುಗಿದೆ. ಮಂಡ್ಯ ತಾಲೂಕಿನ ಜಿ. ಬೊಮ್ಮನಹಳ್ಳಿ ಗ್ರಾಮದ ಕಾರ್ತಿಕ್(27) ಮೃತ ಯುವಕನಾಗಿದ್ದಾನೆ. ಕಾರ್ತಿಕ್ ಸೋಮವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದ ತಂದೆಯ ಆರೋಗ್ಯ ವಿಚಾರಿಸಿ ವಾಪಾಸ್ಸಾಗುತ್ತಿದ್ದ ವೇಳೆ ಬಿರುಗಾಳಿ ಸಹಿತ ಮಳೆ ಬಂದ ಹಿನ್ನೆಲೆ ಬೈಕ್ ನಿಲ್ಲಿಸಿ ಸ್ನೇಹಿತನ ಕಾರು ಹತ್ತಿ ಕುಳಿತಿದ್ದ. ಈ ವೇಳೆ ಮರದ ಕೆಳಗೆ ಕಾರು ನಿಲ್ಲಿಸಿದ್ದರಿಂದ ಬಿರುಗಾಳಿಗೆ ಕಾರಿನ ಮೇಲೆಯೇ ಮರ ಬಿದ್ದಿದೆ. ಇದರಿಂದ ಸ್ಥಳದಲ್ಲೇ ಕಾರ್ತಿಕ್ ಸಾವನ್ನಪ್ಪಿದ್ದು, ಕಾರಿನ ಹೊರಗಡೆ ನಿಂತಿದ್ದ ಸ್ನೇಹಿತ ಪ್ರಾಣಾಪಾಯಾದಿಂದ ಪಾರಾಗಿದ್ದಾನೆ. ಈ ಸಂಬಂಧ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More