Subscribe to Updates
Get the latest creative news from FooBar about art, design and business.
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
- ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ
- ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ
- ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ
- ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ
- ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವುದಕ್ಕೆ ಕೇಂದ್ರದ ಪ್ರಯತ್ನ: ಡಾ.ಜಿ.ಪರಮೇಶ್ವರ
- ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
Author: admin
ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೋಲಾಹಲ ಸೃಷ್ಟಿಸಿದ ಘಟನೆಯಲ್ಲಿ ಹೆಚ್.ಡಿ. ರೇವಣ್ಣ ಬಂಧನವಾಗಿದೆ. ಇದರ ಬೆನ್ನಲ್ಲೇ ಮಗ ಪ್ರಜ್ವಲ್ ಕೂಡ ಶರಣಾಗಲು ರೆಡಿಯಾಗಿದ್ದಾರೆ ಎನ್ನಲಾಗಿದೆ. ಅಪ್ಪನ ಅರೆಸ್ಟ್ ಬೆನ್ನಲ್ಲೇ ದುಬೈ ನಲ್ಲಿರುವ ಪ್ರಜ್ವಲ್ ರೇವಣ್ಣ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಾಧ್ಯತೆ ಇದೆ. ಇತ್ತ ಎಸ್ಐಟಿ(SIT) ತಂಡ ವಿಮಾನ ನಿಲ್ದಾಣದಲ್ಲೇ ಬಂಧಿಸಲು ತಯಾರಿ ನಡೆಸಿದೆ. ಹೆಚ್.ಡಿ. ರೇವಣ್ಣ ಬಂಧನವಾಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಕುಸಿದು ಹೋಗಿದ್ದು, ಇನ್ನು ಹೆಚ್ಚು ಸತಾಯಿಸಿದರೆ ಉಳಿಗಾಲವಿಲ್ಲ ಎಂದು ಸರೆಂಡರ್ ಆಗುವ ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ. ವೀಡಿಯೋ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಪ್ರಜ್ವಲ್ ರೇವಣ್ಣ ಹಾಗೂ ಹೆಚ್.ಡಿ. ರೇವಣ್ಣ ಕುಟುಂಬಕ್ಕೆ ಸಂಕಷ್ಟಗಳು ಹೆಚ್ಚಾಗುತ್ತಿದೆ. ರೇವಣ್ಣ ಸಲ್ಲಿಸಿದ ಜಾಮೀನು ಅರ್ಜಿ ಕೂಡ ವಜಾ ಆಗಿದ್ದು, ಬಚಾವ್ ಆಗುವ ದಾರಿಗಳು ಸದ್ಯಕ್ಕೆ ಮುಚ್ಚಿದ್ದು, ಸರೆಂಡರ್ ಆಗುವ ಮಾರ್ಗವೊಂದೇ ಉಳಿದಿದೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಕಳೆದ ಎರಡು ದಿನಗಳಿಂದ ರಾಜ್ಯದ ಹಲವಡೆ ಉಷ್ಣಾಂಶ ಇದ್ದು, ಈ ಮಧ್ಯೆ ಅಲ್ಲಲ್ಲಿ ಮಳೆ ಹನಿ ಬಿದ್ದ ಘಟನೆಗಳು ವರದಿಯಾಗಿವೆ. ಕೆಲವೆಡೆ ಮಾತ್ರ ಸಣ್ಣ ಪ್ರಮಾಣದ ಮಳೆಯಾಗಿದೆ. ಅದನ್ನು ಬಿಟ್ಟರೆ ಬಹುತೇಕ ಜಿಲ್ಲೆಗಳಲ್ಲಿ ಬಿರುಬಿಸಿಲಿನ ವಾತಾವರಣವೇ. ಇದರ ನಡುವೆ ಇನ್ನೂ ಕೆಲವೇ ಹೊತ್ತಿನಲ್ಲಿ ಈ ಜಿಲ್ಲೆಗಳಿಗೆ ಮಳೆರಾಯ ತಂಪೆರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲಿನ ಬೆಂದಿದ್ದ ರಾಜ್ಯ ರಾಜಧಾನಿ ಕಳೆದ ಎರಡು ದಿನಗಳಿಂದ ಸಂಜೆ ಹೊತ್ತಿಗೆ ಮಳೆರಾಯನ ಕೃಪೆಯಿಂದ ತಂಪಾಗಿದೆ. ಇನ್ನು ನಿನ್ನೆ ನಗರದಲ್ಲಿ ಮಧ್ಯಾಹ್ನದ ವೇಳೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿತ್ತು. ಆದರೆ ಸ್ವಲ್ಪ ಹೊತ್ತಿನಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಬಂದಿದೆ. ಅರ್ಧ ಗಂಟೆ ಭರಪೂರ ಮಳೆ ಸುರಿದಿದೆ. ಅಷ್ಟೇ ಅಲ್ಲದೆ, ಇನ್ನೂ ಕೆಲವೇ ಹೊತ್ತಿನಲ್ಲಿ ಗಡಿಜಿಲ್ಲೆ ಚಾಮರಾಜನಗರ, ಕೋಲಾರ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಮಳೆರಾಯ ಕಾಲಿಡಲಿದ್ದಾನೆ ಎಂದು ಬೆಂಗಳೂರು ಹವಾಮಾನ ಕಚೇರಿ ತನ್ನ ಅಧಿಕೃತ ಟ್ವೀಟ್ ಮೂಲಕ ಮಾಹಿತಿ ರವಾನಿಸಿದೆ. ಇನ್ನು…
ಮೂರು ದಿನಗಳ ಹಿಂದೆ ವೊರ್ಸೆಸ್ಟರ್ ಶೈರ್ ಪರವಾಗಿ 66 ರನ್ ಗೆ 6 ವಿಕೆಟ್ ಪಡೆದು ಅಸಾಮಾನ್ಯ ಬೌಲಿಂಗ್ ಪ್ರದರ್ಶನ ತೋರಿದ್ದ ಇಂಗ್ಲೆಂಡ್ ಉದಯೋನ್ಮುಖ ಆಟಗಾರ, 20 ವರ್ಷದ ಜೋಶ್ ಬೇಕರ್ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಬುಧವಾರ ಪಂದ್ಯವನ್ನಾಡಿದ ಬಳಿಕ ಬೇಕರ್ ಯಾವುದೇ ಸಂಪರ್ಕಕ್ಕೆ ಸಿಗಲಿಲ್ಲ. ಫೋನ್ ಮಾಡಿದರೂ ಕೂಡ ರಿಸೀವ್ ಮಾಡಿರಲಿಲ್ಲ. ಬಳಿಕ ಅವರು ತಮ್ಮ ಸ್ನೇಹಿತನ ಮನೆಯಲ್ಲಿ ಮೃತರಾಗಿ ಪತ್ತೆಯಾಗಿದ್ದಾರೆ. ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇವರ ಸಾವಿಗೆ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ, ಐಸಿಸಿ ಸೇರಿ ಅನೇಕ ಮಾಜಿ ಮತ್ತು ಹಾಲಿ ಕ್ರಿಕೆಟಿಗರು ಕಂಬನಿ ಮಿಡಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ 22 ಪಂದ್ಯ ಆಡಿರುವ ಜೋಶ್ 43 ವಿಕೆಟ್ ಪಡೆದಿದ್ದಾರೆ. ಬ್ಯಾಟಿಂಗ್ನಲ್ಲಿ 411 ರನ್ ಗಳಿಸಿದ್ದಾರೆ. 84ಕ್ಕೆ 5 ವಿಕೆಟ್ ಉತ್ತಮ ವೈಯಕ್ತಿಕ ಸಾಧನೆಯಾಗಿದೆ. ಲಿಸ್ಟ್ ಎ ಕ್ರಿಕೆಟ್ನಲ್ಲಿ 17 ಪಂದ್ಯಗಳಿಂದ 24 ವಿಕೆಟ್, ಟಿ20 ಕ್ರಿಕೆಟ್ ನಲ್ಲಿ 8…
ಲೈಂಗಿಕ ಹಗರಣಗಳ ಭಾರೀ ಸುಳಿಗೆ ಸಿಲುಕಿಕೊಂಡು ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಪಟ್ಟಂತೆ ತನಿಖೆಯನ್ನು ಕೈಗೆತ್ತಿಕೊಂಡಿರುವ SIT ಇದೀಗ ‘ಬ್ಲೂ ಕಾರ್ನರ್’ ನೋಟಿಸ್ ಅನ್ನು ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದೆ. ಸದ್ಯ SIT ಮೇಲೆ ಈ ಪ್ರಕರಣವನ್ನು ಭೇದಿಸುವಂತಹ ಬಹು ದೊಡ್ಡ ಜವಾಬ್ದಾರಿ ಇದೆ. ಬೆನ್ನಲ್ಲೇ ಸರ್ಕಾರದ ಕಡೆಯಿಂದಲೂ ಒತ್ತಡವಿದೆ. ಸದ್ಯ ಸಂತ್ರಸ್ತ ಮಹಿಳೆಯರು ಒಬ್ಬೊಬ್ಬರಾಗಿಯೇ ತನಿಖೆಗೆ ಸಹಕಾರ ನೀಡುತ್ತಿರುವುದರಿಂದ ಒಂದಷ್ಟು ಕಡೆ ಮಾಹಿತಿಯ ಸಂಗ್ರಹಗಳು ಕೂಡ ನಡೆಯುತ್ತಿದೆ. ಈ ನಡುವೆ ಹೊಳೆನರಸೀಪುರದಲ್ಲಿರುವ ರೇವಣ್ಣ ಅವರ ಮನೆಗೆ ಸಂತ್ರಸ್ತೆಯರಲ್ಲಿ ಒಬ್ಬರಾಗಿರುವ ಮಹಿಳೆಯನ್ನು ಕರೆದುಕೊಂಡು ಹೋಗಿ ಮಾಹಿತಿಯನ್ನ ಕಲೆ ಹಾಕುವಂತಹ ಕೆಲಸ ಕೂಡ ನಡೆಯುತ್ತಿದೆ. ಅಪರಾಧ ಪ್ರಕರಣದಲ್ಲಿ ಬೇಕಾಗಿರುವವರ ಮಾಹಿತಿ ಪಡೆಯಲು ಇಂಟರ್ ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗುತ್ತದೆ. ಇಂಟರ್ ಪೋಲ್ ಅಪರಾಧಿ ಯಾವ ದೇಶಕ್ಕೆ ಸೇರಿದವನು ಮತ್ತು ಯಾವ ದೇಶದಲ್ಲಿ ಇದ್ದಾನೆಯೋ ಆ ದೇಶಗಳಿಗೆ ಮಾತ್ರ ನೋಟಿಸ್ ನೀಡುತ್ತದೆ. ಬ್ಲೂ ಕಾರ್ನರ್ ನೋಟಿಸ್ ಜಾರಿಯಾದ…
ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರನ್ನು SIT ಅಧಿಕಾರಿಗಳು ಶನಿವಾರ ಸಂಜೆ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಹೆಚ್.ಡಿ.ದೇವೇಗೌಡರ ಮನೆಯಿಂದ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ದಾಖಲಾದ ಅಪಹರಣ, ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣರನ್ನು ಎಸ್ಐಟಿ ವಶಕ್ಕೆ ಪಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಯುವಕನೊಬ್ಬ ಕೀಮಾ ಎಂಬ ಹೊಸ ಫ್ಲೇವರ್ ನ ದೋಸೆ ಮಾಡುವ ಮೂಲಕ ತಿಂಗಳಿಗೆ 50 ಸಾವಿರ ರೂ. ಗಳಿಸುತ್ತಿದ್ದಾನೆ. ಕೀಮಾ ದೋಸೆ ಕೇವಲ 80 ರೂ. ರುಚಿಯೂ ಕೂಡ ಸೂಪರ್ ಆಗಿದೆ. ಆಹಾರ ಪ್ರಿಯರು ದೋಸೆ ತಿನ್ನಲು ಆಸಕ್ತಿ ತೋರುತ್ತಿದ್ದಾರೆ. ಕಳೆದ ಆರು ತಿಂಗಳಿಂದ ನವೀನ್ ಅವರು ಸಾರ್ವಜನಿಕರಿಗೆ ಕೀಮಾ ದೋಸೆಯನ್ನು ಪರಿಚಯಿಸುವ ಮೂಲಕ ತಿಂಗಳಿಗೆ ರೂ.50 ಸಾವಿರ ಗಳಿಸುತ್ತಿದ್ದಾರೆ. ನವೀನ್ ಅವರು ನಿಜಾಮಾಬಾದ್ ಜಿಲ್ಲಾ ಕೇಂದ್ರದಲ್ಲಿರುವ ಪ್ರಗತಿನಗರ ಎಂಡಾಲ ಟವರ್‌ನಲ್ಲಿ ತಿರುಮಲ ಟಿಫಿನ್‌ಗಳನ್ನು ಆರಂಭಿಸಿದರು. ಆರು ತಿಂಗಳ ಹಿಂದೆ ಟಿಫಿನ್ ಸೆಂಟರ್ ತೆರೆಯಲಾಗಿದೆ. ಆದರೆ ಕೀಮಾ ಎರಡು ತಿಂಗಳಿಗೆ ಗ್ರಾಹಕರಿಗೆ ದೋಸೆ ಪರಿಚಯಿಸಿದರು. ಇದರಿಂದಾಗಿ ಗ್ರಾಹಕರು ಕೀಮಾ ದೋಸೆ ತಿನ್ನಲು ಆಸಕ್ತಿ ತೋರುತ್ತಿದ್ದಾರೆ. ಕೀಮಾ ದೋಸೆ 80 ರೂಪಾಯಿಗೆ ನೀಡಲಾಗುತ್ತಿದ್ದು, ಒಮ್ಮೆ ಟ್ರೈ ಮಾಡಿದವರು ಮತ್ತೊಮ್ಮೆ ಪ್ರಯತ್ನಿಸಲು ಬರುತ್ತಿದ್ದಾರೆ. ಕೀಮಾ ದೋಸೆಗೆ ಬೇಡಿಕೆ ಹೆಚ್ಚಿದೆ ಎನ್ನುತ್ತಾರೆ ನವೀನ್. ನನಗೆ ಸ್ವಲ್ಪ ವ್ಯಾಪಾರ ಮಾಡುವ ಐಡಿಯಾ ಬಂತು. ಸಣ್ಣ ಹೂಡಿಕೆಯೊಂದಿಗೆ ಟಿಫಿನ್…
ಬೆಂಗಳೂರಿನ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಏಪ್ರಿಲ್ 23 ರಂದು ಗಂಭೀರವಾದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಅವರ ಎಸ್ ಯುವಿ ಮೂರು ಬಾರಿ ಪಲ್ಟಿ ಹೊಡೆದಿದೆ ಎಂದು ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿಯನ್ನು ತಡವಾಗಿ ಹಂಚಿಕೊಂಡಿದ್ದಾರೆ. ಆಮ್ ಆದ್ಮಿ ಪಕ್ಷದ(ಎಎಪಿ) ರಾಜ್ಯ ಘಟಕದ ಮಾಜಿ ಉಪಾಧ್ಯಕ್ಷರೂ ಆಗಿದ್ದ ಬೆಂಗಳೂರಿನ ಮಾಜಿ ಪೋಲೀಸ್ ಅಧಿಕಾರಿ, ಸದ್ಯ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಗಂಭೀರ ಅಪಘಾತದಲ್ಲಿ ಅವರ ಪಕ್ಕೆಲುಬುಗಳು ಮುರಿದಿದ್ದು, ಬೆನ್ನು ಮೂಳೆ ಮತ್ತು ಅಂಗಾಲಿಗೆ ಗಾಯಗಳಾಗಿವೆ ಎಂದು ಹೇಳಿದ್ದಾರೆ. ಭಾಸ್ಕರ್ ರಾವ್ ಟೊಯೊಟಾ ಇನ್ನೋವಾ ಹೈಬ್ರಿಡ್ ಹೈಕ್ರಾಸ್ ನಲ್ಲಿ ಇತರ ಮೂವರೊಂದಿಗೆ ಆಂಧ್ರಪ್ರದೇಶದ ಅನಂತಪುರ ಮತ್ತು ಕದ್ರಿ ನಡುವೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಯಿಂದಾಗಿ ಕಾರು ಮೂರು ಬಾರಿ ಪಲ್ಟಿ ಹೊಡೆದಿದೆ. ಸೀಟ್ ಬೆಲ್ಟ್ ಮತ್ತು ಕಾರಿನ ಏರ್ ಬ್ಯಾಗ್ ಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರಿನಲ್ಲಿದ್ದ ವೆಂಕಿ ಎನ್ನುವವರು ತೀವ್ರವಾಗಿ ಗಾಯಗೊಂಡು…
ಪೆಟ್ರೋಲ್ ಹಾಕಿಸಲು ಬಂಕ್ ಗೆ ಬಂದ ಯುವತಿ ಮಾಡಿದ್ದೇನು ಗೊತ್ತಾ..?: ಯುವತಿ ವಿರುದ್ಧ ದೂರು ದಾಖಲು ಮಾಡಿ ಎಂದ ನೆಟ್ಟಿಗರು
ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗೋ ವೀಡಿಯೋಗಳು ಒಮ್ಮೊಮ್ಮೆ ನಮಗೆ ನಿಜಕ್ಕೂ ಆಘಾತ ಉಂಟುಮಾಡುತ್ತದೆ. ಅಂತೆಯೇ ಇದೀಗ ಇಂತದ್ದೇ ಒಂದು ವಿಡಿಯೋ ವೈರಲ್ ಆಗಿದ್ದು ಪೆಟ್ರೋಲ್ ಹಾಕಿಸಲು ಬಂಕ್ ಗೆ ಬಂದ ಯುವತಿಯೊಬ್ಬಳು ಸ್ಕೂಟರ್ ನಿಂದ ಇಳಿದು ಪ್ಯಾಂಟ್ ಬಿಚ್ಚಿ ತೋರಿಸಿದ್ದಾಳೆ. ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗ್ತಿದೆ. ಎಂದಿನಂತೆ ಪೆಟ್ರೋಲ್ ಪಂಪ್ ನಲ್ಲಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದ ಸಮಯದಲ್ಲಿ ಸ್ಕೂಟರ್ ಮೂಲಕ ಇಬ್ಬರು ಯುವತಿಯರು ಆಗಮಿಸಿದ್ದಾರೆ. ಆಗ ಒಬ್ಬಳು ಹುಡುಗಿ ಏಕಾಏಕಿ ಸ್ಕೂಟರ್ ನಿಂದ ಇಳಿದು ಪೆಟ್ರೋಲ್ ಹಾಕುತ್ತಿದ್ದ ಸಿಬ್ಬಂದಿ ಬಳಿ ಪ್ಯಾಂಟ್ ಬಿಚ್ಚಿ ಖಾಸಗಿ ಅಂಗ ತೋರಿಸುವ ಪ್ರಯತ್ನ ಮಾಡಿದ್ದಾಳೆ. ಈ ಘಟನೆ ವೀಡಿಯೋ ಭಾರಿ ವೈರಲ್ ಆಗಿದ್ದು, ಯುವತಿಯ ಅಸಭ್ಯ ವರ್ತನೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಈ ಘಟನೆ ಎಲ್ಲಿ ನಡೆದಿದೆ ಎಂದು ತಿಳಿದುಬಂದಿಲ್ಲ. ಆದರೆ ಪೆಟ್ರೋಲ್ ಪಂಪ್ ನ ಸಿಸಿಟಿವಿ(CCTV)ಯಲ್ಲಿ ಈ ದೃಶ್ಯ ದಾಖಲಾಗಿದೆ. ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. ಯುವತಿ…
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು ಪೆನ್ ಡ್ರೈವ್, ಸಿಡಿ ವಿಶ್ವವಿದ್ಯಾಲಯವನ್ನೇ ತೆರೆದಿದ್ದಾರೆ. ಡಿಕೆಗೆ ಎದುರಾಳಿಗಳನ್ನು ಹೇಗೆ ಬಗ್ಗು ಬಡಿಯಬೇಕು ಎಂದು ಗೊತ್ತಿದೆ. ಕೆಲವರಿಗೆ ಬೆದರಿಕೆಯ ಅಸ್ತ್ರ, ಕೆಲವರಿಗೆ ಸಿಡಿ ಅಸ್ತ್ರ ಬಳಸುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜು ಗೌಡ ವಾಗ್ದಾಳಿ ನಡೆಸಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿ, “ಡಿಕೆ ಶಿವಕುಮಾರ್ ಹೀಗೆ ಮಾಡಿಯೇ ಮಾಜಿ ಸಚಿವ ರಮೇಶ ಜಾರಕಿಹೊಳಿಯವರ ಸಿಡಿ ತಯಾರಿಸಿ ಮನೆಗೆ ಕಳುಹಿಸಿದ್ದಾರೆ. ಸಮಯ ಬಂದಾಗ ಎದುರಾಳಿಗೆ ಏನೆಲ್ಲಾ ಕೊಡಬೇಕೋ ಅದನ್ನು ಡಿಕೆ ಶಿವಕುಮಾರ್ ಕೊಡುತ್ತಾರೆ. ಈಗ ಪ್ರಜ್ವಲ್, ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಅಸ್ತ್ರ ಪ್ರಯೋಗಿಸಿದ್ದಾರೆ ” ಎಂದು ಆರೋಪಿಸಿದ್ದಾರೆ. ಡಿಕೆ ಶಿವಕುಮಾರ ಸಿಡಿ ಮಾಡೋದ್ರಲ್ಲಿ ಎಕ್ಸ್‌ಪರ್ಟ್. ಇಂತಹವರನ್ನು ಪಕ್ಕದಲ್ಲಿ ಕರೆದುಕೊಂಡು ಯಾರೂ ಓಡಾಡಬೇಡಿ. ಸಿದ್ದರಾಮಯ್ಯ ಸರ್, ನೀವು ಕೂಡಾ ಹುಷಾರಾಗಿರಿ” ಎಂದು ಡಿ.ಕೆ. ಶಿವಕುಮಾರ್ ವಿರುದ್ಧ ರಾಜು ಗೌಡ…
ಬಿಗ್ ಬಾಸ್ ಒಟಿಟಿ ವಿನ್ನರ್ ಎಲ್ವಿಶ್ ಯಾದವ್ ವಿರುದ್ಧ ಅಕ್ರಮವಾಗಿ ಹಣ ಸಾಗಾಣಿಕೆ ವಿಚಾರವಾಗಿ, ಜಾರಿ ನಿರ್ದೇಶನಾಲಯವು ಕೇಸ್ ದಾಖಲಿಸಿದೆ. ಅಕ್ರಮ ಹಣ ವರ್ಗಾವಣೆ ಕುರಿತಂತೆ ಉತ್ತರ ಪ್ರದೇಶದ ಗೌತಮ್ ಬುದ್ಧನಗರ ಜಿಲ್ಲೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ದಾಖಲಾದ ಎಫ್.ಐ.ಆರ್ ಮತ್ತು ಜಾರ್ಜ್ ಶೀಟ್ ಗಳ ಆಧಾರದಲ್ಲಿ ಇಡಿ ಪ್ರಕರಣವನ್ನು ದಾಖಲಿಸಿಕೊಂಡಿದೆ. ಈ ಹಿಂದೆ ಎಲ್ವಿಶ್ ಪಾರ್ಟಿಯೊಂದರಲ್ಲಿ ಹಾವಿನ ವಿಷ ಬಳಸಿದ ಪ್ರಕರಣದಲ್ಲಿ ನೋಯ್ಡಾ ಪೊಲೀಸರು ಬಂಧಿಸಿದ್ದರು. ರೇವ್ ಪಾರ್ಟಿಗಳಲ್ಲಿ ಹಾವಿನ ವಿಷವನ್ನು ಪೂರೈಸಲು ಅವರು ಭಾರಿ ಮೊತ್ತದ ಹಣವನ್ನು ಸಂಗ್ರಹಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದರು. ಪೊಲೀಸರು ಸಲ್ಲಿಸಿದ್ದ ಜಾರ್ಜ್ ಶೀಟ್ ನಲ್ಲಿ ಅಕ್ರಮ ಹಣದ ಕುರಿತಂತೆ ಉಲ್ಲೇಖವಾಗಿತ್ತು. ಹಾಗಾಗಿ ಈ ಪ್ರಕರಣಕ್ಕೆ ಇಡಿ ಎಂಟ್ರಿ ಕೊಟ್ಟಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296