Subscribe to Updates
Get the latest creative news from FooBar about art, design and business.
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
- ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ
- ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ
- ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ
- ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ
- ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವುದಕ್ಕೆ ಕೇಂದ್ರದ ಪ್ರಯತ್ನ: ಡಾ.ಜಿ.ಪರಮೇಶ್ವರ
- ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
Author: admin
ಹಾಸನ: ಸಂತ್ರಸ್ತ ಮಹಿಳೆಯನ್ನ ಮನೆಯೊಳಗೆ ಕರೆದೊಯ್ದ ವಿಶೇಷ ತನಿಖಾ ತಂಡ, ಮನೆಯೊಳಗೆ ಅಡುಗೆ ಮನೆ, ಬೆಡ್ ರೂಂ ಹಾಗೂ ಸ್ಟೋರ್ ರೂಂನಲ್ಲಿ ಮಹಜರ್ ನಡೆಸಿದ್ದಾರೆ. ಮನೆಯಲ್ಲಿ ಭವಾನಿ ರೇವಣ್ಣ ಇಲ್ಲದ ವೇಳೆ, ಈ ಮೂರು ಕಡೆ ದೌರ್ಜನ್ಯ ನಡೆಸಿದ್ದ ಬಗ್ಗೆ ಸಂತ್ರಸ್ಥೆ ಆರೋಪ ಮಾಡಿದ್ದಾರೆ. ಹಾಗಾಗಿ ಮನೆಯೊಳಗೆ, ವಿವಿಧ ಕಡೆ ಸಂತ್ರಸ್ತ ಮಹಿಳೆಯಿಂದ ಮಾಹಿತಿ ಪಡೆದು, ತನಿಖಾ ತಂಡ ಸ್ಥಳ ಮಹಜರ್ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಪ್ರಕರಣದ ಸಂಬಂಧ ಇದುವರೆಗಿನ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿಯವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದು, ಲುಕ್ ಔಟ್ ನೋಟಿಸ್ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು. ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ಧಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಸಹಿಸಲಾಗದು ಎಂದು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಸೂಕ್ತ ಕ್ರಮಗಳೊಂದಿಗೆ ಬಂಧನಕ್ಕೆ ಮುಂದಾಗುತ್ತೇವೆ. ಸಿಬಿಐ ಬ್ಲೂಕಾರ್ನರ್ ನೋಟಿಸ್ ಹೊರಡಿಸುವ ಸಾಧ್ಯತೆ ಇದ್ದು ತನಿಖೆಗೆ ವೇಗ ಸಿಗಲಿದೆ. ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಬಂಧಿಸಿ ಕರೆ ತರುವುದಾಗಿ ಅಧಿಕಾರಿಗಳು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಚಾಮರಾಜನಗರ: ಇವಿಎಂ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿದ್ದ ಗ್ರಾಮಸ್ಥರು ಪೊಲೀಸರ ಭಯದಿಂದ ತಲೆಮರೆಸಿಕೊಂಡಿದ್ದಾರೆ. ಗ್ರಾಮಸ್ಥರು ಮನೆಗಳಿಗೆ ಬೀಗ ಹಾಕಿ ಹೋಗಿದ್ದರಿಂದ ಕಟ್ಟಿ ಹಾಕಿದ ಎರಡು ಎಮ್ಮೆಗಳು ಸ್ಥಳದಲ್ಲೇ ಸಾವಪ್ಪಿದ್ದು, ನೀರು ಹಾಗೂ ಮೇವು ಕೊಡುವವರು ಇಲ್ಲದೆ ಎಮ್ಮೆಗಳು ಧಾರುಣವಾಗಿ ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ಘಟನೆ ನಡೆದ ದಿನದಿಂದ ಮೇವು, ನೀರಿಲ್ಲದೆ ಕಟ್ಟಿ ಹಾಕಿದ ಸ್ಥಳದಲ್ಲೇ ಮೂಕ ಪ್ರಾಣಿಗಳು ಪ್ರಾಣ ಬಿಟ್ಟಿವೆ. ಇರುವ ಬೆರಳೆಣಿಕೆಯಷ್ಟು ಜನರೂ ಕೂಡ ಊಟಕ್ಕೂ ಪರದಾಟ ನಡೆಸುತ್ತಿದ್ದಾರೆ. ಈಗಾಗಲೇ 200ಕ್ಕೂ ಹೆಚ್ಚು ಜನರ ವಿರುದ್ದ ವಿವಿಧ ಪ್ರಕರಣಗಳು ದಾಖಲಾಗಿವೆ. ಈ ವರೆಗೆ 33 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಿಯೊ ಗ್ರಾಂಡೆ ಡೊ ಸುಲ್: ಬ್ರೆಜಿಲ್ ನ ದಕ್ಷಿಣ ರಾಜ್ಯ ರಿಯೊ ಗ್ರಾಂಡೆ ಡೊ ಸುಲ್ ನಲ್ಲಿ ಭಾರೀ ಮಳೆ ಮತ್ತು ಮಣ್ಣಿನ ಕುಸಿತದ ಪರಿಣಾಮ 37 ಮಂದಿ ಸಾವನ್ನಪ್ಪಿದ್ದಾರೆ. ಜೊತೆಗೆ 74 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ದುರಂತದ ಹವಾಮಾನ ಘಟನೆಯ ನಂತರ ಈ ಪ್ರದೇಶದಲ್ಲಿ ಗವರ್ನರ್ ಎಡ್ವರ್ಡೊ ಲೀಟ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಕುಸಿದ ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಸಹಾಯ ಮಾಡಲು 626 ಸೈನಿಕರ ಜೊತೆಗೆ 12 ವಿಮಾನಗಳು, 45 ವಾಹನಗಳು ಮತ್ತು 12 ದೋಣಿಗಳನ್ನು ನಿಯೋಜಿಸಲಾಗಿದೆ. ಫೆಡರಲ್ ಸಹಾಯವನ್ನು ಈಗಾಗಲೇ ಸಜ್ಜುಗೊಳಿಸಲಾಗಿದೆ. ರಸ್ತೆಗಳನ್ನು ತೆರವುಗೊಳಿಸುವುದು, ಆಹಾರ, ನೀರು ಮತ್ತು ಹಾಸಿಗೆಗಳಂತಹ ಅಗತ್ಯ ಸಾಮಗ್ರಿಗಳನ್ನು ವಿತರಿಸುವುದು ಮತ್ತು ಸ್ಥಳಾಂತರಗೊಂಡ ವ್ಯಕ್ತಿಗಳಿಗೆ ಆಶ್ರಯವನ್ನು ಸ್ಥಾಪಿಸುವ ಕೆಲಸ ಮಾಡಲಾಗುತ್ತಿದೆ. ರಾಜ್ಯದ ಪ್ರಮುಖ ಗೈಬಾ ನದಿಯು ಆತಂಕಕಾರಿ ಮಟ್ಟವನ್ನು ತಲುಪುವ ಸಾಧ್ಯತೆ ಇದೆ. ಇದರಿಂದ…
ಬೆಂಗಳೂರಿನಲ್ಲಿ ನೆನ್ನೆ ಸಿಡಿಲು ಸಮೇತ ದೊಡ್ಡ ಮಳೆ ಬಿದ್ದಿದೆ. ಈ ಸಂದರ್ಭ ಸಿಡಿಲು ಬಡಿದು ಮಹಿಳೆ ಹಾಗೂ 20 ಕ್ಕೂ ಹೆಚ್ಚು ಮೇಕೆಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಹೊಸಕೋಟೆ ತಾಲೂಕಿನ ಗಣಗಲು ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಆ ಗ್ರಾಮದ ರತ್ಮಮ್ಮ ಸಿಡಿಲಿಗೆ ಬಲಿಯಾದ ಮಹಿಳೆ. ಬೆಂಗಳೂರು ಮತ್ತು ಸುತ್ತಮುತ್ತ ದಿಢೀರ್ ಮಳೆ ಶುರುವಾಗಿದ್ದು, ಹೊಸಕೋಟೆ ತಾಲೂಕಿನ ಗಣಗಲು ಗ್ರಾಮದಲ್ಲಿ ಬೇವಿನ ಮರದಡಿ ಮೇಕೆಗಳ ಜೊತೆ ನಿಂತಿದ್ದಾಗ ಜೋರಾಗಿ ಸಿಡಿಲು ಬಡಿದಿದೆ. ಆಗ ರತ್ನಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ ಅಲ್ಲಿದ್ದ ಮೇಕೆಗಳು ಕೂಡ ಸಿಡಿಲಿಗೆ ಬಲಿಯಾಗಿವೆ. ಗ್ರಾಮದಲ್ಲಿ ಗಾಳಿ ಮಳೆಯ ಆರ್ಭಟ ಜೋರಾಗಿದ್ದು ಮಳೆ ಅಲ್ಲಲ್ಲಿ ಮುಂದುವರೆದಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಅಪ್ರಾಪ್ತೆ ಹಿಂದೂ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ಸದ್ದಾಂ ಹುಸೇನ್ ಬಂಧಿತ ಆರೋಪಿ. ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೊಟ್ಟೆ ನೋವು ಹಿನ್ನೆಲೆ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ತಪಾಸಣೆ ವೇಳೆ ಅಪ್ರಾಪ್ತೆ ಗರ್ಭಿಣಿಯಾಗಿರುವುದು ದೃಢವಾಗಿದೆ. ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ. ಮುಸ್ಲಿಂ ಯುವಕನ ವಿರುದ್ಧ ಅಪ್ರಾಪ್ತೆ ಪೋಷಕರು ದೂರು ನೀಡಿದ್ದಾರೆ. ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ದೂರು ದಾಖಲಿಸಿರುವುದಾಗಿ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರಿಂದ ಅಧಿಕೃತ ಮಾಹಿತಿ ನೀಡಲಾಗಿದೆ. ಪ್ರತಿಭಟನೆ ಕಾವು ಜೋರಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸ್ ಇಲಾಖೆ ಎಸಿಪಿ ಶಿವಪ್ರಕಾಶ್ ನಾಯ್ಕ್ ಸಮ್ಮುಖದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಈ ವೇಳೆ ಆರೋಪಿ ಬಂಧನಕ್ಕೆ ಆಗ್ರಹಿಸಿ ನವನಗರ ಠಾಣೆ ಮುಂದೆ ಹಿಂದೂಪರ ಸಂಘಟನೆ ಮತ್ತು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲಾಗಿದೆ. ಪ್ರತಿಭಟನೆ ಹಿನ್ನಲೆ ನವನಗರ ಠಾಣೆಗೆ ಕಾನೂನು ಸುವ್ಯವಸ್ಥೆ…
ಉಂಡ ಮನೆಗೆ ಕನ್ನ ಹಾಕಿದ್ದ ಚಾಲಕಿ ಕಳ್ಳಿಯನ್ನು ಜೆಪಿನಗರ ಪೊಲೀಸರು ಬಂಧಿಸಿದ್ದಾರೆ. ಮಂಜುಳಾ (38) ಬಂಧಿತ ಆರೋಪಿಯಾಗಿದ್ದು, ರೇಖಾ ಕಿರಣ್ ಎಂಬುವವರ ಮನೆಯಲ್ಲಿ 8 ವರ್ಷದಿಂದ ಕೆಲಸ ಮಾಡಿಕೊಂಡಿದ್ದಳು. ಮನೆಯಲ್ಲಿ ಸಾಕಷ್ಟು ಚಿನ್ನಾಭರಣ ಇದ್ದ ಬಗ್ಗೆ ಹಾಗೂ ಬೀರು ಕೀ ಸಹ ಎಲ್ಲಿ ಇಟ್ಟಿರ್ತಾರೆ ಎಂಬುದನ್ನು ಅರಿತಿದ್ದಳು. ಕಳೆದ ಮಾರ್ಚ್ ತಿಂಗಳಲ್ಲಿ ಮನೆಯವರು ಹೊರಗೆ ಹೋಗುವುದನ್ನು ಕಾದು ಕುಳಿತಿದ್ದ ಮಂಜುಳಾ, ಮನೆ ಬೀರುವಿನಲ್ಲಿದ್ದ 34 ಲಕ್ಷ ಮೌಲ್ಯದ ಚಿನ್ನ, ವಜ್ರದ ಆಭರಣದ ಜೊತೆ ಒಂದು ಲಕ್ಷ ಕ್ಯಾಶ್ ಎಗರಿಸಿದ್ದಳು. ಕಳ್ಳತನ ಮಾಡಿದ್ದ ಆಭರಣಗಳನ್ನು ತನ್ನೂರು ಹೆಚ್ ಡಿ ಕೋಟೆಯಲ್ಲಿ ಇಟ್ಟಿದ್ದಳು. ನಂತರ ರೇಖಾ ಕಿರಣ್ ಮನೆಯಲ್ಲಿಯೇ ಕೆಲಸ ಮುಂದುವರೆಸಿದ್ದಳು. ರೇಖಾ ಕಿರಣ್ ಕಳ್ಳತನದ ಬಗ್ಗೆ ಪ್ರಶ್ನೆ ಮಾಡಿದಾಗ ಏನೂ ಗೊತ್ತಿಲ್ಲದಂತೆ ಡ್ರಾಮಾ ಮಾಡಿದ್ದಳು. ಆದ್ದರಿಂದ ಮನೆಯೊಡತಿ ಅನುಮಾನಗೊಂಡು ಜೆಪಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರ ತನಿಖೆ ವೇಳೆ ಮಂಜುಳಾ ಕಳ್ಳಾಟ ಬಯಲಾಗಿದ್ದು, ಸದ್ಯ ಆರೋಪಿಯಿಂದ 34 ಲಕ್ಷ ಮೌಲ್ಯದ ಚಿನ್ನ,…
ವಾಹನ ಚಲಾವಣೆ, ರಸ್ತೆ ನಿಯಮಗಳ ಕುರಿತು ಆಗಾಗ ಹೊಸ ನಿಯಮಗಳನ್ನು ಜಾರಿಗೆ ತರುವ ಸಾರಿಗೆ ಇಲಾಖೆಯು ಇದೀಗ ಡ್ರೈವಿಂಗ್ ಲೈಸೆನ್ಸ್ (DL) ಹಾಗೂ RC ಬಗ್ಗೆ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ. ಈ ಹೊಸ ನಿಯಮ ಹೊಸದಾಗಿ ಲೈಸೆನ್ಸ್ ಮಾಡಿಸುವವರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಇದುವರೆಗೂ ನೀವು ಡ್ರೈವಿಂಗ್ ಲೈಸೆನ್ಸ್ ಬೇಕು ಅಂದರೆ RTO ನಲ್ಲಿ ಕ್ಯೂ ನಿಂತು ಟೆಸ್ಟ್ ಡ್ರೈವ್ ನೀಡಿ ಪಡೆದುಕೊಳ್ಳಬೇಕಿತ್ತು. ಅದರಿಗ ಸರ್ಕಾರ ಈ ನಿಯಮದಲ್ಲಿ ಕೆಲ ಬದಲಾವಣೆಗಳನ್ನು ತರಲು ತೀರ್ಮಾನಿಸಿದ್ದು, ಇನ್ಮುಂದೆ ಡ್ರೈವಿಂಗ್ ಲೈಸೆನ್ಸ್ ಪಡೆದುಕೊಳ್ಳಲು ಆರ್ ಟಿಓ ಆಫೀಸ್ ಬಳಿಯೇ ಹೋಗಬೇಕಿಲ್ಲ, ಬದಲಿಗೆ ಯಾವುದಾದರೂ ಖಾಸಗಿ ಸಂಸ್ಥೆಯಲ್ಲಿ ಡ್ರೈವ್ ಟೆಸ್ಟ್ ಮಾಡಿಸಿ ಸರ್ಟಿಫಿಕೇಟ್ ಪಡೆದುಕೊಳ್ಳಬಹುದು. ಈ ಹೊಸ ನಿಯಮವನ್ನು ಜೂನ್ 1ನೇ ತಾರೀಕು 2024ರಂದು ಸರ್ಕಾರ ಜಾರಿಗೆ ತರಲಿದ್ದು, ಅದಾಗಲೇ ಇದರ ನೋಟಿಸನ್ನು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಬ್ರೋಕರ್ ಗಳ ಕಾಟವೂ ತಪ್ಪಲಿದೆ ಜೊತೆಗೆ ಪದೇ ಪದೇ RTO ಆಫೀಸ್ ಗೆ ಅಲೆಯುವ…
ಪಶ್ಚಿಮ ಬಂಗಾಳದ ರಾಜ್ಯಪಾಲ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ರಾಜಭವನದ ಮಹಿಳಾ ಸಿಬ್ಬಂದಿ ರಾಜ್ಯಪಾಲರು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಆರೋಪ ಮಾಡಿರುವ ಮಹಿಳೆ 2019 ರಿಂದ ರಾಜಭವನದಲ್ಲಿ ತಾತ್ಕಾಲಿಕ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗುರುವಾರದಂದು ರಾಜ್ಯಪಾಲರು ತಮ್ಮನ್ನು ಭೇಟಿ ಮಾಡಿ ತಮ್ಮ ಪದೋನ್ನತಿ ಬಗ್ಗೆ ಚರ್ಚೆ ಮಾಡಿದ್ದರು. ಈ ವೇಳೆ ತಮಗೆ ಅಹಿತಕರ ಅನುಭವವಾಗಿದೆ ಎಂದು ಹೇಳಿದ್ದಾರೆ. ದೂರಿನ ಪ್ರಕಾರ, ಒಂದು ವಾರದ ಹಿಂದೆ ರಾಜ್ಯಪಾಲರು ತಮ್ಮನ್ನು ಅನುಚಿತವಾಗಿ ಸ್ಪರ್ಶಿಸಿದ್ದರು ಎಂದು ಹೇಳಿದ್ದಾರೆ. ಹರೇ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದಕ್ಕೂ ಮೊದಲು ಮಹಿಳೆ ರಾಜಭವನ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದರು ಎಂದು ತಿಳಿದುಬಂದಿದೆ. ದೂರನ್ನು ಸ್ವೀಕರಿಸಿ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. “ನಾವು ದೂರು ಸ್ವೀಕರಿಸಿದ್ದೇವೆ, ತನಿಖೆ ನಡೆಸುತ್ತಿದ್ದೇವೆ. ನಾವು ಕಾನೂನು ಇಲಾಖೆಯ ಸಾಂವಿಧಾನಿಕ ತಜ್ಞರೊಂದಿಗೆ ಈ ವಿಷಯದ ಬಗ್ಗೆ ಸಮಾಲೋಚಿಸುತ್ತಿದ್ದೇವೆ. ಮಹಿಳೆಯ ಆರೋಪದ ಪ್ರಕಾರ, ರಾಜಭವನದಲ್ಲಿ…
ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣನನ್ನು ಅರೆಸ್ಟ್ ಮಾಡುವುದು ಕಷ್ಟವೇನಲ್ಲ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಮಲೈ..!
ಖಾಸಗಿ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವುದರಿಂದ, ಅವರನ್ನು ಬಂಧಿಸಿ ಕರೆತರಲು ಕೇಂದ್ರ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶ ಮಾಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ಮಾಜಿ ಐಪಿಎಸ್ ಅಧಿಕಾರಿ, ತಮಿಳನಾಡು ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಅಣ್ಣಮಲೈ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾರ್ಯವಿಧಾನದ ಪ್ರಕಾರ, ಎಸ್ಐಟಿ ಅಥವಾ ಸಿಐಡಿ ಸಿಬಿಐಗೆ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ. ವಿದೇಶಕ್ಕೆ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲು ಅಥವಾ ಇಂಟರ್ಪೋಲ್ ನೆರವು ಪಡೆಯಲು ರಾಜ್ಯ ಸರ್ಕಾರ ಸಿಬಿಐ ನಿರ್ದೇಶಕರಿಗೆ ಪತ್ರ ಬರೆಯಬೇಕು. ಬಳಿಕ ರೆಡ್ ಕಾರ್ನರ್ ಜಾರಿಗೊಳಿಸಲಾಗುತ್ತದೆ. ಆಗ ಆರೋಪಿ ಯಾವುದೇ ವಿಮಾನ ನಿಲ್ದಾಣಕ್ಕೆ ಬಂದರೆ ಕೂಡಲೆ ಅವನನ್ನು ಅಲ್ಲಿನ ಪೊಲೀಸರು ಬಂಧಿಸುತ್ತಾರೆ. ಬಳಿಕ ಆರೋಪಿ ಬೇಕಾಗಿರುವ ಠಾಣೆಗೆ ಮಾಹಿತಿ ನೀಡುತ್ತಾರೆ. ನಾನು ಕರ್ನಾಟಕದ ಸೇವೆ ಸಲ್ಲಿಸುತ್ತಿರುವಾಗ ಭೂಗತ ಪಾತಕಿ ಬನ್ನಂಜೆ ರಾಜನನ್ನು ಮೊರಾಕೊದಿಂದ ಪ್ರಧಾನಿಗೆ ಯಾವುದೇ ಪತ್ರ ಬರೆಯದೆ ಬಂಧಿಸಿ ಕರೆತಂದೆವು ಎಂದರು. ದೇಶದ…