Subscribe to Updates
Get the latest creative news from FooBar about art, design and business.
- ಹಿಂದೂಗಳ ಮೇಲಿನ ದೌರ್ಜನ್ಯ ಸಹಿಸಲ್ಲ: ಬಾಂಗ್ಲಾ ವಿರುದ್ಧ ಗುಡುಗಿದ ದೊಡ್ಡಹಳ್ಳಿ ಅಶೋಕ್
- ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ: ಪದಾಧಿಕಾರಿಗಳ ಆಯ್ಕೆ
- ತುಮಕೂರು | ಅದ್ದೂರಿ ಕನ್ನಡ ರಾಜ್ಯೋತ್ಸವ, ಉಚಿತ ಆರೋಗ್ಯ ತಪಾಸಣಾ ಶಿಬಿರ
- ಡಿ.29ರಿಂದ ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ: ಏನೇನು ಕಾರ್ಯಕ್ರಮಗಳು ಇರಲಿವೆ?
- ತುರುವೇಕೆರೆ: ಡಿ.30: ಸಂಪಿಗೆಯಲ್ಲಿ ವೈಕುಂಠ ಏಕಾದಶಿ ಮಹೋತ್ಸವ
- ಕುಣಿಗಲ್: ಡಿ.29ರಿಂದ ವೆಂಕಟರಮಣ ಸ್ವಾಮಿ ಪೂಜೋತ್ಸವ
- ತುರುವೇಕೆರೆ: ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ತೀರ್ಮಾನ
- ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ
Author: admin
ಪಾವಗಡ: ಪವಿತ್ರ ಕ್ಷೇತ್ರವಾದ ಧರ್ಮಸ್ಥಳವನ್ನು ಅಪವಿತ್ರಗೊಳಿಸಲು ಮುಂದಾಗುತ್ತಿದ್ದಾರೆ ಇದನ್ನು ಹಿಂದೂ ಸಮಾಜ ತೀವ್ರವಾಗಿ ಖಂಡಿಸಬೇಕೆಂದು ಮಾಜಿ ಸಚಿವ ವೆಂಕಟರಮಣಪ್ಪ ತಿಳಿಸಿದ್ದಾರೆ. ಸೋಮವಾರ ಪಟ್ಟಣದಲ್ಲಿ ಶ್ರೀಧರ್ಮಸ್ಥಳ ಭಕ್ತಾಭಿಮಾನಿಗಳ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಗೆ ಚಾಲನೆ ನೀಡಿದ ನಂತರ ಅವರು ಮಾತನಾಡಿ, ಧರ್ಮಸ್ಥಳದ ವೀರೇಂದ್ರ ಹೆಗಡೆಯವರು, ಧರ್ಮಸ್ಥಳ ಸಂಘವನ್ನು ಸ್ಥಾಪಿಸಿ ಗ್ರಾಮೀಣ ಭಾಗದ ಅದೆಷ್ಟು ಲಕ್ಷಾಂತರ ಜನ ಬಡ ಹೆಣ್ಣು ಮಕ್ಕಳಿಗೆ ದಾರಿ ದೀಪವಾಗಿದ್ದಾರೆ. ಅಂತಹ ವ್ಯಕ್ತಿಗಳ ವಿರುದ್ಧ ಈ ರೀತಿ ಇಲ್ಲಸಲ್ಲದ ಆರೋಪಗಳನ್ನು ಮಾಡಿ ತೇಜೋವಧೆ ಮಾಡುವುದು ಸರಿಯಲ್ಲ ಎಂದರು. ಪ್ರತಿಭಟನೆಯು ಗುರುಭವನ ಮೈದಾನದಿಂದ ಪ್ರಾರಂಭಗೊಂಡು ಬಳ್ಳಾರಿ ರಸ್ತೆಯ ಮೂಲಕ ಶನಿಮಹಾತ್ಮ ವೃತ್ತದಲ್ಲಿ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ತಿಮರೋಡಿ, ಜಯಂತ್ ಟಿ., ಸಮೀರ್ ವಿರುದ್ಧ ಧಿಕ್ಕಾರಕ್ಕೆ ಕೂಗಿದ್ರು. ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಅಂಜನಪ್ಪ, ಬಿಜೆಪಿ ಹಿರಿಯ ಮುಖಂಡ ಡಾ.ಜಿ.ವೆಂಕಟರಾಮಯ್ಯ, ಮಂಡಲಾಧ್ಯಕ್ಷ ದೊಡ್ಡಹಳ್ಳಿ ಅಶೋಕ್, ಎಸ್ ಎಸ್ ಕೆ ಸಂಘದ ನಿರ್ದೇಶಕ ಎನ್.ಆರ್.ಅಶ್ವತ್ ಕುಮಾರ್,…
ತಿಪಟೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಿಪಟೂರು ತಾಲೂಕಿನ ರಂಗಾಪುರ ವಲಯದ ಹುಲ್ಲೇಕೆರೆ ಗ್ರಾಮದ ಮಾಶಾಸನ ಸದಸ್ಯರಾದ ಸಣ್ಣಮ್ಮರವರಿಗೆ ವಾತ್ಸಲ್ಯ ಕಾರ್ಯಕ್ರಮದಲ್ಲಿ ವಾತ್ಸಲ್ಯ ಮನೆ ರಚನೆ ಮಾಡಿದ್ದು, ಈ ದಿನ ತುಮಕೂರು ಜಿಲ್ಲೆಯ ನಿರ್ದೇಶಕರಾದ ಸತೀಶ್ ಸುವರ್ಣ ಅವರು ಮನೆ ಹಸ್ತಾಂತರ ಮಾಡಿದರು. ಬಳಿಕ ಮಾತನಾಡಿ ಅವರು, ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ 800 ವರ್ಷದ ಇತಿಹಾಸವಿದೆ, ಶ್ರೀ ಕ್ಷೇತ್ರದಲ್ಲಿ ಚತುರ್ಧಾನದಲ್ಲಿ ಅನ್ನದಾನ, ವಿದ್ಯಾದಾನ, ಔಷಧ ದಾನ, ಅಭಯದಾನ ನಡೆಯುತ್ತಿದೆ. ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಾತೃಶ್ರೀ ಹೇಮಾವತಿ ಅಮ್ಮನವರ ಕಲ್ಪನೆಯಲ್ಲಿ ಮೂಡಿ ಬಂದಿರುವ ವಾತ್ಸಲ್ಯ ಕಾರ್ಯಕ್ರಮದಲ್ಲಿ ತಿಪಟೂರು ತಾಲೂಕಿನಲ್ಲಿ ಒಟ್ಟು 9 ವಾತ್ಸಲ್ಯ ಮನೆ ರಚನೆ ಆಗಿದೆ ಎಂದರು. ಇದರ ಜೊತೆಗೆ ಮಾಶಾಸನ ಫಲಾನುಭವಿರವರಿಗೆ ವಾತ್ಸಲ್ಯ ಕಿಟ್ ಅಂದರೆ ಬಟ್ಟೆ ಚಾಪೆ, ದಿಂಬು, ಹೊದಿಕೆ, ಪಾತ್ರೆ ನೀಡಲಾಗುತ್ತಿದೆ. ಹಾಗೆ ವಾತ್ಸಲ್ಯ ಮಿಕ್ಸ್ ವಿತರಣೆ ಮಾಡಲಾಗುತ್ತದೆ, ಹಾಗೆ ಪ್ರತಿ ತಿಂಗಳು 1000 ದಿಂದ 3000/-ದಂತೆ ಮಾಶಾಸನ ನೀಡಲಾಗುತ್ತಿದೆ ಎಂದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಹರೀಶ್…
ಬೀದರ್ : ನಗರದ ಗಾಂಧಿ ಗಂಜ್ ಪೊಲೀಸ್ ಠಾಣೆ ಹಾಗೂ ನೂತನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 94 ಲಕ್ಷ ರೂ.ಗಿಂತ ಅಧಿಕ ಮೌಲ್ಯದ ತಂಬಾಕು ವಸ್ತುಗಳು ಸೇರಿದಂತೆ ಕೃತ್ಯಕ್ಕೆ ಬಳಸಿದ ಒಂದು ಈಚರ್ ಲಾರಿ ಜಪ್ತಿ ಮಾಡಲಾಗಿದ್ದು, 8 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಗರದ ಚಿದ್ರಿಯಲ್ಲಿರುವ ಬುತ್ತಿ ಬಸವಣ್ಣ ಹತ್ತಿರದ ಬಾಡಿಗೆ ಮನೆಯೊಂದರಲ್ಲಿ ಅಕ್ರಮವಾಗಿ ತಂಬಾಕು ವಸ್ತುಗಳ ಕಲಬೆರಕೆ ಗುಟಕಾ ಸಾಮಗ್ರಿ, ಪಾನ್ ಮಸಾಲಾ ಸಂಗ್ರಹಿಸಿಟ್ಟು, ಲಾರಿಯೊಂದರಲ್ಲಿ ಲೋಡ್ ಮಾಡುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, 1,51,59,775 ರೂ. ಮೌಲ್ಯದ ಗುಟಕಾ ತಯಾರಿಸುವ ವಿವಿಧ ಸಾಮಗ್ರಿಗಳು ಹಾಗೂ 25 ಲಕ್ಷ ರೂ. ಮೌಲ್ಯದ ಈಚರ್ ಲಾರಿ ಜಪ್ತಿ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ 8 ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ…
ಮೈಸೂರು: ಹಾಸ್ಯನಟ ಚಿಕ್ಕಣ್ಣ ಸದ್ದಿಲ್ಲದೇ ಖುಷಿ ಸುದ್ದಿ ನೀಡಿದ್ದು, ಹಸಮಣೆ ಏರಲು ಸಜ್ಜಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿಯ ಜೊತೆ ಚಿಕ್ಕಣ್ಣ ಹಸಮಣೆ ಏರಲಿದ್ದಾರೆ. ಮಹದೇವಪುರ ಗ್ರಾಮದ ಪಾವನಾ ಎಂಬ ಯುವತಿಯ ಜೊತೆ ಚಿಕ್ಕಣ್ಣ ಮದುವೆ ನಿಶ್ಚಯವಾಗಿದೆ. ಈಗಾಗಲೇ ಹೂ ಮುಡಿಸುವ ಶಾಸ್ತ್ರವನ್ನು ಎರಡು ಕುಟುಂಬಗಳು ನೇರವೇರಿಸಿರಿವೆ. ನಿಶ್ಚಿತಾರ್ಥ ಮತ್ತು ಮದುವೆ ದಿನಾಂಕ ಮುಂದಿನ ವಾರ ನಿಗದಿಯಾಗಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಮಂಗಳೂರು: ಮಂಜುನಾಥ–ಅಣ್ಣಪ್ಪ ಸ್ವಾಮಿಯಿಂದ ದುಷ್ಟರ ಸಂಹಾರ ಗ್ಯಾರಂಟಿ ಅಂತ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಜೆಡಿಎಸ್ ಸತ್ಯಯಾತ್ರೆ ಸಮಾವೇಶದಲ್ಲಿ ಮಾತನಾಡಿದ ನಿಖಿಲ್, ಇಲ್ಲಿ ರಾಜಕೀಯ ಲಾಭದ ಲೆಕ್ಕಾಚಾರವೂ ಇಲ್ಲ. ಇಲ್ಲಿಗೆ ಯಾರೂ ರಾಜಕೀಯ ನಾಯಕರು-ಕಾರ್ಯಕರ್ತರಾಗಿ ಬಂದಿಲ್ಲ, ಎಲ್ಲರೂ ಭಕ್ತರಾಗಿ ಬಂದಿದ್ದೇವೆ ಎಂದರು. ಧರ್ಮಸ್ಥಳ ಮಂಜುನಾಥ ಸ್ವಾಮಿ ಮುಂದೆ ಯಾವ ದುಷ್ಟ ಶಕ್ತಿಯೂ ಉಳಿಯಲ್ಲ. ಕ್ಷೇತ್ರದ ಆವರಣದ ಸುತ್ತಮುತ್ತ ಅಪಪ್ರಚಾರ-ಅನುಮಾನ ರೀತಿ ಬಿಂಬಿಸಿದ್ದಾರೆ. ತಾಳ್ಮೆಗೂ ಒಂದು ಮಿತಿ ಇದೆ, ನಾವು ಇನ್ನು ಕೈಕಟ್ಟಿ ಕೂರಲು ಆಗಲ್ಲ. ಖಾವಂದರಿಂದಾದ ಸಮಾಜ ಮುಖಿ ಕಾರ್ಯ ಸೂರ್ಯ-ಚಂದ್ರ ಇರುವರೆಗೂ ಅಜರಾಮರ. ಕ್ಷೇತ್ರದ ಮೇಲೆ ನಿರಂತರ ಅಪಪ್ರಚಾರ, ನಿಂದನೆ, ಹುನ್ನಾರ ನಡೆದಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ವಿಜಯಪುರ: ಧರ್ಮಸ್ಥಳ ವಿಚಾರದಲ್ಲಿ ವಿಜಯೇಂದ್ರ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ ನಡೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರಗೆ ಬೇರೆ ಬಂಡವಾಳವಿಲ್ಲ, ಧರ್ಮಸ್ಥಳ ವಿಚಾರದಲ್ಲಿ ನಾವು ಮೊದಲು ಎಸ್ ಐಟಿ (SIT) ರಚಿಸಿದಾಗ ಬಿಜೆಪಿಯವರು (BJP) ಸ್ವಾಗತ ಮಾಡಿದ್ದರು. ಆದರೆ ಮುಸುಕುಧಾರಿ ತೋರಿಸಿದ ಜಾಗದಲ್ಲಿ ಏನೂ ಸಿಗದೇ ಇದ್ದ ಕಾರಣ ಇದೀಗ ತಿರುಗಿ ಬಿದ್ದಿದ್ದಾರೆ. ವಿಜಯೇಂದ್ರನಿಗೆ ಬೇರೆ ಬಂಡವಾಳ ಇಲ್ಲ. ಅಪಪ್ರಚಾರ ಮಾಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದ್ದಾನೆ ಎಂದರು. ನಮ್ಮ ಜಾಗದಲ್ಲಿ ಬಿಜೆಪಿಯವರೇನಾದರೂ ಇದ್ದರೆ ಅವರೂ ಎಸ್‌ಐಟಿ ರಚಿಸುತ್ತಿದ್ದರು. ಆದರೆ ಇದೀಗ ದುರುಪಯೋಗಪಡಿಸಿಕೊಳ್ಳಲು ಹೊರಟಿದ್ದಾರೆ. ನಾವು ಎಸ್ ಐಟಿ ರಚನೆ ಮಾಡುವ ಮೂಲಕ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ಸನ್ನಿಧಾನ ಹಾಗೂ ಧರ್ಮದರ್ಶಿಗಳ ಮೇಲೆ ಇದ್ದಂತಹ ಕಳಂಕವನ್ನು ತೆಗೆದುಹಾಕಿದ್ದೇವೆ. ಜನರ ನಂಬಿಕೆಯನ್ನು ಹೆಚ್ಚಿಸಿದ್ದೇವೆ. ಎಸ್ ಐಟಿ ಅವರು ಈಗಲೂ ಪಾರದರ್ಶಕವಾಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ದೆಹಲಿಗೆ ಹೋಗಿ ಯಾರೆಲ್ಲ ಇದ್ದಾರೆ ಎನ್ನುವ ತನಿಖೆ ಮಾಡ್ತಿದೆ ಎಂದು ಹೇಳಿದರು.…
ಬೆಂಗಳೂರು: ಯತ್ನಾಳ್ ಬಿಜೆಪಿಯಿಂದ ಯಾಕೆ ಉಚ್ಛಾಟನೆ ಆದ್ರು ಅಂತ ತಿಳಿದುಕೊಳ್ಳಲಿ, ಆ ಮೇಲೆ ನಮ್ಮ ಪಕ್ಷ, ನಮ್ಮ ಅಧ್ಯಕ್ಷರು, ನಮ್ಮ ಸಿಎಂ ಬಗ್ಗೆ ಮಾತಾಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಡಿ.ಕೆ ಶಿವಕುಮಾರ್ ಬಿಜೆಪಿ ಹೋಗೋಕೆ ಸಿದ್ಧತೆ ಮಾಡಿದ್ರು ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ತಿರುಗೇಟು ನೀಡಿದ ಅವರು, ಬಿಜೆಪಿಯಲ್ಲಿರುವವರಿಗೆ ಸ್ವಂತಕ್ಕೆ ಅಸೆಸ್ ಮೆಂಟ್ ಮಾಡೋಕೆ ಆಗಿಲ್ಲ. ಅವರು ಬಿಜೆಪಿಯಲ್ಲಿ ಉಳಿತಾರೋ ಇಲ್ಲವೋ ಅವರಿಗೇ ಗೊತ್ತಿಲ್ಲ. ಅವರು ನಮ್ಮ ಅಧ್ಯಕ್ಷರ ಬಗ್ಗೆ ವಿಮರ್ಶೆ ಮಾಡ್ತಾರಾ ಎಂದು ಪ್ರಶ್ನಿಸಿದ್ದಾರೆ. ಯತ್ನಾಳ್ ಯಾಕೆ ಹೊರಗೆ ಹೋಗಿದ್ದಾರೆ ಅಂತ ಇನ್ನು ಅವರಿಗೆ ಗೊತ್ತಿಲ್ಲ. ಬಿಜೆಪಿಯಲ್ಲಿ ಯಾರು ಹೊರಗೆ ಹೋಗ್ತಾರೆ, ಒಳಗೆ ಬರ್ತಾರೆ ಅಂತ ಅವರಿಗೆ ಗೊತ್ತಾಗುತ್ತಾ? ಅವರು ಸೆಲ್ಫ್ ಅಸೆಸ್‌ಮೆಂಟ್ ಅಲ್ಲೇ ವಿಫಲರಾಗಿದ್ದಾರೆ. ಇವರೆಲ್ಲ ನಮ್ಮ ಪಕ್ಷ, ಸಿಎಂ ಹಾಗೂ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಅಸೆಸ್ ಮಾಡ್ತಾರಾ ಎಂದು ಕಿಡಿಕಾರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಹೆಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ ಪೋಸ್ಟ್ ನಲ್ಲಿ ಚಾಮರಾಜನಗರ ಲೋಕಸಭೆಯ ಸಂಸದ ಸುನೀಲ್ ಬೋಸ್ ಅವರ ಜನ್ಮದಿನದ ಹ್ಯಾಂಡ್ ಪೋಸ್ಟ್ ಸರ್ಕಲ್ ನಲ್ಲಿ ಕೆಕ್ ಕಟ್ ಮಾಡಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಕಾಂಗ್ರೆಸ್ ಯುವ ಮುಖಂಡ ಡಾ.ಎಸ್.ಮರಿದೇವಯ್ಯ ಅವರ ನೇತೃತ್ವದಲ್ಲಿ ಹಮ್ಮಿಕೊಂಡು ಆಚರಣೆ ಮಾಡಲಾಯಿತು. ನಂತರ ಮಾತನಾಡಿದ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಡಾ.ಎಸ್.ಮರಿದೇವಯ್ಯ, ಸಂಸದ ಸುನೀಲ್ ಬೋಸ್ ಉತ್ತಮ ವ್ಯಕ್ತಿಯಾಗಿರುವ ಹಿನ್ನೆಲೆಯಲ್ಲಿ ಜನರು ಅವರನ್ನು ಮೊದಲ ಬಾರಿಗೆ ಸಂಸದರನ್ನಾಗಿ ಆಯ್ಕೆ ಮಾಡಿದ್ದಾರೆ. ಚಾಮರಾಜನಗರ ಲೋಕಸಭಾ ವ್ಯಾಪ್ತಿಯ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕೇಂದ್ರದಲ್ಲಿ ವಿವಿಧ ಯೋಜನೆಗಳ ಬಗ್ಗೆ ಸಂಸತ್ತಿನಲ್ಲಿ ಮಾಡಿದ್ದಾರೆ. ದಕ್ಷಿಣ ಬಹುಭಾಗವನ್ನು ಒಳಗೊಂಡಿದೆ. ಅವುಗಳನ್ನು ಅಭಿವೃದ್ಧಿಗೊಳಿಸಲು ಅನುದಾನವನ್ನು ಬಿಡುಗಡೆ ಮಾಡಬೇಕು ಸಂಸತ್ತಿನಲ್ಲಿ ಒತ್ತಾಯ ಮಾಡಿದ್ದಾರೆ ಎಂದರು. ಈ ಸಂದರ್ಭದಲ್ಲಿ ಪುರಸಭೆಯ ಸದಸ್ಯ ಪ್ರೇಮ್ ಸಾಗರ್, ಜಿಲ್ಲಾ ಯಂಗ್ ಬ್ರಿಗೇಡ್ ಉಪಾಧ್ಯಕ್ಷ ಮಾನವೀಯಾಕರ್, ಕನ್ನೇನಹಳ್ಳಿ ಅವಿನಾಶ್, ಸ್ಟುಡಿಯೋ ಮಧು, ಅನಿಲ್ ಕುಮಾರ್, ಜೆ.ಎಸ್.ಮರಿಸ್ವಾಮಿ, ಮಂಜು ಹೈರಿಗೆ, ಪ್ರತಾಪ್, ನರಸಿಂಹಮೂರ್ತಿ, ಶಿವರಾಜ್, ಸಂತೋಷ್ ಇನ್ನು…
ಚಿಕ್ಕಬಳ್ಳಾಪುರ: ಗಣೇಶ ವಿಸರ್ಜನೆ ವೇಳೆ ಡಾನ್ಸ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಿಪತಿ (40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿ ನಿನ್ನೆ ರಾತ್ರಿ ಗಣೇಶೋತ್ಸವ ಮೆರವಣಿಗೆ ನಡೆಯುತ್ತಿದ್ದ ವೇಳೆ ನಾಗವಲ್ಲಿ ಹಾಡಿಗೆ ಇವರು ಎಲ್ಲರ ಜೊತೆಗೆ ಡಾನ್ಸ್ ಮಾಡುತ್ತಿದ್ದರು. ಡಾನ್ಸ್ ಮಾಡುತ್ತಿದ್ದಂತೆಯೇ ಸುಸ್ತಾದ ಲಕ್ಷ್ಮೀಪತಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಕೃಷಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಲಕ್ಷ್ಮೀಪತಿ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಕೆ.ಎನ್.ರಾಜಣ್ಣ ಸಚಿವ ಸಂಪುಟದಿಂದ ವಜಾಗೊಂಡ ಹಿನ್ನೆಲೆ ಇದೀಗ ಮಹತ್ವದ ಬೆಳವಣಿಗೆಯಾಗಿದ್ದು, ರಾಜಣ್ಣನ ಬೆನ್ನಿಗೆ ವಿವಿಧ ಮಠಗಳ ಸ್ವಾಮೀಜಿಗಳು ನಿಂತು ಬೆಂಬಲ ಸೂಚಿಸಿದ್ದಾರೆ. ತುಮಕೂರಿನ ಕ್ಯಾತ್ಸಂದ್ರ ರಾಜಣ್ಣನ ನಿವಾಸಕ್ಕೆ ಬಂದ ಚಿತ್ರದುರ್ಗದ ಶ್ರೀ ಜಗದ್ಗುರು ಅಖಿಲ ಕುಂಚಿಟಿಗ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮಿಗಳು, ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಹೊಸದುರ್ಗದ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ, ಚಿತ್ರದುರ್ಗದ ಜಗದ್ಗುರು ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಮಹಾಸ್ವಾಮಿಗಳು, ದಾವಣಗೆರೆಯ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳು, ಸ್ವಾಮೀಜಿಗಳು ರಾಜಣ್ಣನವರನ್ನು ಭೇಟಿಯಾದರು. ಬಳಿಕ ಒಂದು ಗಂಟೆಗೂ ಅಧಿಕ ಕಾಲ ರಾಜಣ್ಣನ ಜೊತೆ ಚರ್ಚೆ ನಡೆಸಿದ 15ಕ್ಕೂ ಹೆಚ್ಚು ಸ್ವಾಮಿಜಿಗಳು ಸಚಿವ ಸ್ಥಾನದಿಂದ ತೆರವು ವಿಚಾರಕ್ಕೆ ಬೇಸರ ವ್ಯಕ್ತಪಡಿಸುವುದರ ಜೊತೆಗೆ ನಿಮ್ಮ ಜೊತೆ ನಾವಿದ್ದೇವೆ ಎಂಬ ಮಾತುಗಳನ್ನಾಡಿದರು. ಆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜಣ್ಣನ ಸಚಿವ ಸ್ಥಾನದಿಂದ ಕೈ ಬಿಟ್ಟಿರೋದು ಆಘಾತಕಾರಿ ವಿಚಾರ. ಇದು ರಾಜಣ್ಣನವರಿಗೆ…