Subscribe to Updates
Get the latest creative news from FooBar about art, design and business.
- ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
- ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
- ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
- ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
- ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
- ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
- ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್ ಕಾರಣ ಆಗ್ತಾ ಇದೆಯೇ?
- ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
Author: admin
ತುಮಕೂರು: ಜಿಲ್ಲೆಯಾದ್ಯಂತ ಯುಗಾದಿ ಹಬ್ಬದ ದಿನ ಹಾಗೂ ಮಾರನೆಯ ದಿನ ಆದೇಶ ಹೊರಡಿಸಿದ್ದರು ಸಹ ಆದೇಶವನ್ನು ಉಲ್ಲಂಘಿಸಿರುವ 291 ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಅವರಿಂದ ಪಣಕ್ಕೆ ಇಟ್ಟಿದ್ದ 3,21,895 ರೂಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಯುಗಾದಿಯ ಹೊಸ ವರ್ಷದ ದಿನ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸ್ ರಿಂದ ದಾಳಿ ಮಾಡಲಾಗಿದೆ. ಜೂಜಾಟದಲ್ಲಿ ತೊಡಗಿದ್ದ ಜೂಜು ಅಡ್ಡಗಳ ಮೇಲೆ ತುಮಕೂರು ಜಿಲ್ಲಾ ಉಪವಿಭಾಗದ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ಪ್ರಕರಣವನ್ನು ದಾಖಲಿಸಿರುತ್ತಾರೆ. ತುಮಕೂರು ನಗರ ಉಪವಿಭಾಗದಿಂದ 15 ಪ್ರಕರಣಗಳು, 77 ಜನರನ್ನು ದಸ್ತಗಿರಿ ಮಾಡಿ ಜೂಜಾಟದಲ್ಲಿ ಪಣಕ್ಕೆ ಇಟ್ಟಿದ್ದ ಹಣ 1,15,350 ವಶಪಡಿಸಕೊಳ್ಳಲಾಗಿದೆ. ತಿಪಟೂರು ಉಪವಿಭಾಗದಿಂದ 11 ಪ್ರಕರಣಗಳು, 63 ಜನರನ್ನು ದಸ್ತಗಿರಿ ಮಾಡಿ ಜೂಜಾಟದಲ್ಲಿ ಪಣಕ್ಕೆ ಇಟ್ಟಿದ್ದ ಹಣ 94095 ವಶಪಡಿಸಿಕೊಂಡಿದ್ದಾರೆ. ಶಿರಾ ಉಪವಿಭಾಗದಿಂದ 20 ಪ್ರಕರಣಗಳು, 108 ಜನರನ್ನು ದಸ್ತಗಿರಿ ಮಾಡಿ ಜೂಜಾಟದಲ್ಲಿ ಪಣಕ್ಕೆ ಇಟ್ಟಿದ್ದ ಹಣ 83050 ವಶಪಡಿಸಿಕೊಳ್ಳಲಾಗಿದೆ. ಮಧುಗಿರಿ ಉಪವಿಭಾಗದಿಂದ 07 ಪ್ರಕರಣಗಳು, 43 ಜನರನ್ನು ದಸ್ತಗಿರಿ…
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೇವಲ 2 ವರ್ಷಗಳ ಕಾಲ ಮಾತ್ರ ಪ್ರಧಾನಿ ಆಗಿರುತ್ತಾರೆ. ಅವರ ಜಾತಕದಲ್ಲಿ 12 ವರ್ಷ ಪ್ರಧಾನಿ ಆಗುವ ಯೋಗ ಇರುವುದರಿಂದ ಇದು ಸಂಭವಿಸಲಿದೆ ಎಂದು ಬ್ರಹಾಂಡ ಗುರೂಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ನರೇಂದ್ರ ಮೋದಿಯವರು ದೇಶ ಕಂಡಂತಹ ಹೆಮ್ಮೆಯ ಪ್ರಧಾನಮಂತ್ರಿಯಾಗಿದ್ದಾರೆ. 2014ರಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಇದೀಗ 2024ರ ತನಕ ಅಂದರೆ ಸುದೀರ್ಘ 10 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ದೇಶದ ಸ್ಥಾನನಮಾನವನ್ನು ವಿಶ್ವಮಟ್ಟದಲ್ಲಿ ಎತ್ತರಕ್ಕೆ ಏರಿಸಿದ್ದಾರೆ. ಅಷ್ಟೇ ಅಲ್ಲದೆ ಪ್ರಪಂಚದ ಪ್ರಭಾವಿ ಪ್ರಧಾನಿಗಳ, ನಾಯಕರ ಪಟ್ಟಿಯಲ್ಲಿ ನರೇಂದ್ರ ಮೋದಿಯವರೇ ಮೊದಲಿಗರು. ಅವರ ವರ್ಚಸ್ಸು, ಮಾತು, ಆಡಳಿತ ವೈಖರಿ ಯಾರಿಗೂ ಬರಲಾರದೇನೋ. ಒಟ್ಟಿನಲ್ಲಿ ಸದ್ಯಕ್ಕೆ ಅವರಿಗೆ ಪರ್ಯಾಯವಾಗಿ ಯಾವುದೇ ವ್ಯಕ್ತಿ ಇಲ್ಲ ಎಂದೆನಿಸುತ್ತದೆ. ಈ ಸಲದ ಲೋಕಸಭಾ ಚುನಾವಣೆಯಲ್ಲೂ NDA ಮೈತ್ರಿ ಕೂಟ ಭರ್ಜರಿ ಗೆಲವು ಸಾಧಿಸಿ, ಮೋದಿ ಮತ್ತೊಮ್ಮೆ ಪ್ರಧಾನಿ ಆಗಿ ಹ್ಯಾಟ್ರಿಕ್ ಭಾರಿಸಲಿದ್ದಾರೆ ಎಂದು ಸಮೀಕ್ಷೆಗಳು ತಿಳಿಸಿವೆ. ಅಂತೆಯೇ ಬಿಜೆಪಿ…
ಪಾಳುಬಿದ್ದ ಬಾವಿಯಿಂದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ಅಹಮದ್ ನಗರದಲ್ಲಿ ನಡೆದಿದೆ. ಪಾಳು ಬಾವಿಯನ್ನು ಜೈವಿಕ ಅನಿಲ ಅಳವಡಿಸಲಾಗಿತ್ತು. ಬೆಕ್ಕನ್ನು ರಕ್ಷಿಸುವ ಪ್ರಯತ್ನದಲ್ಲಿ ಐವರು ಒಬ್ಬರ ನಂತರ ಒಬ್ಬರು ಬಾವಿಗೆ ಹಾರಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಬಾವಿಗೆ ಇಳಿದಿದ್ದ ಓರ್ವನನ್ನು ಪೊಲೀಸರ ತಂಡ ರಕ್ಷಿಸಿದೆ. ಬಳಿಕ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಕುರಿತು ಪ್ರತಿಕ್ರಿಯಿಸಿದ ಹಿರಿಯ ಪೊಲೀಸ್ ಅಧಿಕಾರಿ ಧನಂಜಯ್ ಜಾಧವ್, ಒಬ್ಬರ ನಂತರ ಒಬ್ಬರಂತೆ ಪಾಳು ಬಾವಿಗೆ ಹಾರಿದ್ದಾರೆ. ಆರು ಜನರ ಪೈಕಿ ಐವರ ಮೃತ ದೇಹಗಳನ್ನು ರಕ್ಷಣಾ ತಂಡವು ಹೊರತೆಗೆದಿದೆ ಎಂದು ಹೇಳಿದ್ದಾರೆ. ಬಹಳ ದಿನಗಳಿಂದ ಈ ಬಾವಿಯನ್ನು ಮುಚ್ಚಲಾಗಿತ್ತು, ಅಲ್ಲಿ ಕಸ ಸುರಿಯಲಾಗುತ್ತಿತ್ತು. ಬೆಕ್ಕನ್ನು ರಕ್ಷಿಸಲು ಇಳಿದಿದ್ದ ಜನರು ವಿಷಾನಿಲದಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಒಮ್ಮೊಮ್ಮೆ ನಮ್ಮ ಜನ ಹೊಟ್ಟೆಗೆ ಅನ್ನ ತಿಂತಾರಾ..? ಅಥವಾ ಇನ್ನೇನಾದರೂ ತಿಂತಾರಾ ಅನ್ನೋದೇ ಗೊತ್ತಾಗಲ್ಲ. ರಸ್ತೆಯ ಎಲ್ಲೆಂದರಲ್ಲಿ ಕಸ ಬಿಸಾಡೋದು, ಕೊಳತೆ ವಸ್ತುಗಳನ್ನು ರಾತ್ರೋ ರಾತ್ರಿ ಬಿಸಾಕಿ ಓಡೋದನ್ನು ರೂಢಿ ಮಾಡಿಕೊಂಡಿದ್ದಾರೆ. ಕೆಲವರು ಮಾಡುವ ಈ ಅವಿವೇಕಿತನಕ್ಕೆ ಇಡೀ ಪರಿಸರವೇ ನಾಶವಾಗುತ್ತಿದೆ. ಅದರಲ್ಲೂ ವಿದ್ಯಾವಂತರೇ ರಸ್ತೆ ಬದಿಯಲ್ಲಿ ಕಸಗಳನ್ನು ಎಸೆದು ಹೋಗುತ್ತಿರುವುದು ದೊಡ್ಡ ದುರಂತವೇ ಸರಿ. ಅಂತಹುದೇ ಒಂದು ಅವಿವೇಕಿತನ ಇದೀಗ ಸುಬ್ರಹ್ಮಣ್ಯ -ಜಾಲ್ಸೂರು ರಾಜ್ಯ ಹೆದ್ದಾರಿಯ ರಸ್ತೆ ಬದಿಯಲ್ಲಿ ಕಾಣಸಿಗುತ್ತಿದೆ. ಸೋಣಂಗೇರಿಯಿಂದ 1 ಕಿ.ಮೀ. ದೂರದಲ್ಲಿರುವ ಕುಕ್ಕಂದೂರು ತಮಿಳು ಪುನರ್ವಸತಿ ಗೃಹದ ಪಕ್ಕದಲ್ಲಿ ಹಾದು ಹೋಗುವ ಸುಬ್ರಹ್ಮಣ್ಯ -ಜಾಲ್ಸೂರು ರಾಜ್ಯ ಹೆದ್ದಾರಿಯಲ್ಲಿ ಭಾರಿ ಕಸದ ರಾಶಿ ಬಿದ್ದಿದೆ. ಇಷ್ಟೊಂದು ಕಸ ರಾಶಿ ಬಿದ್ದರೂ ಈ ಕಡೆ ಯಾರೂ ಗಮನ ಕೊಡುತ್ತಿಲ್ಲ ಅನ್ನುವ ಕೂಗು ಕೇಳಿ ಬರುತ್ತಿದೆ. ಆದಷ್ಟು ಬೇಗ ಸ್ಥಳೀಯಾಡಳಿತ ಇದನ್ನು ತೆರವುಗೊಳಿಸಬೇಕೆಂದು ಸುತ್ತಮುತ್ತಲಿನ ಜನ ಒತ್ತಾಯಿಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಭಾರತ ಮಾತೆ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವ್ಯಕ್ತಿಯ ವಿರುದ್ಧ ಗಣೇಶ್ ಎಂಬುವರು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಫೋಟೋ ಹರಿಬಿಟ್ಟ ವಿಲ್ಪ್ರೇಡ್ ಎಂಬುವವನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. 2024ರ ಜನವರಿ 22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿತು. ಈ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ತಾಜುದ್ದೀನ್ ದಫೇದಾರ್ ಎಂಬ ಯುವಕನೊಬ್ಬ ಅಯೋಧ್ಯೆ ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾರಿಸಿರುವಂತೆ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದನು. ಇದನ್ನು ಕಂಡ ಹಿಂದೂಪರ ಸಂಘಟನೆಗಳ ಮುಖಂಡರು ಆಕ್ರೋಶ ಹೊರ ಹಾಕಿದರು. ಗಜೇಂದ್ರಗಡ ಪೊಲೀಸರು ಆರೋಪಿ ತಾಜುದ್ದೀನ್ ದಫೇದಾರ್ನನ್ನು ಬಂಧಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಸಾಮಾಜಿಕ ಸ್ವಾಸ್ಥ್ಯ ಕೆಡಿಸುವ ಕೆಲಸಗಳು ಆಗಾಗ ನಡೆಯುತ್ತಿದ್ದು, ಈ ಬಗ್ಗೆ ಸೂಕ್ತ ನಿಯಮಗಳನ್ನು ಜಾರಿಗೊಳಿಸುವ ಅಗತ್ಯವಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಬಾಳೆಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ವಿಟಮಿನ್ ಎ, ವಿಟಮಿನ್ ಬಿ6, ವಿಟಮಿನ್ ಸಿ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಬಾಳೆಹಣ್ಣು ದೇಹದಲ್ಲಿರುವ ಹಲವಾರು ರೋಗಗಳನ್ನು ತಡೆಗಟ್ಟಿ ನಮ್ಮನ್ನು ಆರೋಗ್ಯವಾಗಿರಿಸುತ್ತದೆ. ಮಾರ್ಷ್ಮ್ಯಾಲೋ, ರುಸ್ತಾಲಿ, ಬಾವನ್ ಹಣ್ಣು, ಹಳ್ಳಿಗಾಡಿನ ಹಣ್ಣು, ಹಸಿರು ಹಣ್ಣು ಹೀಗೆ ಹಲವು ಬಗೆಯ ಬಾಳೆಹಣ್ಣುಗಳಿವೆ. ಇವೆಲ್ಲವೂ ಆರೋಗ್ಯಕರ ಪೋಷಕಾಂಶಗಳಿಂದ ಕೂಡಿದೆ. ಹಲವರಿಗೆ ಊಟದ ನಂತರ ಬಾಳೆಹಣ್ಣು ತಿನ್ನುವ ಅಭ್ಯಾಸವಿದೆ. ಪ್ರತಿದಿನ ಬಾಳೆಹಣ್ಣು ತಿನ್ನುವುದರಿಂದ ಎಲ್ಲಾ ವಯಸ್ಸಿನವರೂ ಆರೋಗ್ಯವಾಗಿರುತ್ತಾರೆ ಎಂದು ಹೇಳಲಾಗುತ್ತದೆ. ಏಕೆಂದರೆ ಇದು ನಮ್ಮ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ಅದರಲ್ಲೂ ಬೇಸಿಗೆಯಲ್ಲಿ ನಮ್ಮ ದೈನಂದಿನ ಆಹಾರದಲ್ಲಿ ಬಾಳೆಹಣ್ಣನ್ನು ಸೇರಿಸಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡುತ್ತಾರೆ. ಆದರೆ, ಬೇಸಿಗೆಯಲ್ಲಿ ಬಾಳೆಹಣ್ಣು ಯಾವಾಗ ತಿನ್ನಬೇಕು ಎಂದು ತಿಳಿಯೋಣ. ಬಾಳೆಹಣ್ಣು ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಉತ್ತಮ ಮೂಲವಾಗಿದೆ. ಮಧ್ಯಮ ಬಾಳೆಹಣ್ಣು ಸುಮಾರು 3 ಗ್ರಾಂ ಫೈಬರ್ ಅನ್ನು ಹೊಂದಿರುತ್ತದೆ. ಬಾಳೆಹಣ್ಣಿನಲ್ಲಿ ನೈಸರ್ಗಿಕ ಸಕ್ಕರೆಗಳು ಅಧಿಕವಾಗಿದ್ದು ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದು. ಹೈಪೋಥೈರಾಯ್ಡಿಸಮ್…
ಪ್ರಧಾನಿ ನರೇಂದ್ರ ಮೋದಿ ಜನರಿಗೆ ಸಿಹಿ ಸುದ್ದಿ ನೀಡಿದ್ದಾರೆ. ‘ಪಿಎಂ ಸೂರ್ಯ ಘರ್: ಮುಫ್ತ್ ಬಿಜಲಿ ಯೋಜನೆಯ ಮೂಲಕ ದೇಶದ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉತ್ಪಾದಿಸುವ ಸೌರ ಫಲಕಗಳನ್ನು ಅಳವಡಿಸಲಾಗುವುದು ಎಂದು ಅವರು ಘೋಷಿಸಿದ್ದಾರೆ. ಮನೆಗಳ ಮೇಲ್ಛಾವಣಿಯ ಮೇಲೆ ಸೌರ ಫಲಕಗಳನ್ನು ಅಳವಡಿಸಲು ಕೇಂದ್ರ ಸರ್ಕಾರವು ಹೆಚ್ಚಿನ ಅನುದಾನವನ್ನು ನೀಡುತ್ತದೆ. ಈ ಹಿಂದೆ ನೀಡಿದ್ದ ಶೇ.40 ರಷ್ಟು ಸಬ್ಸಿಡಿಯನ್ನ ಈಗ ಶೇ.60 ಕ್ಕೆ ಹೆಚ್ಚಿಸಲಾಗಿದೆ. ಉಳಿದ 40 ಪ್ರತಿಶತ ಮೊತ್ತವನ್ನು ಜನರು ಸಾಲ ರೂಪದಲ್ಲಿ ಪಡೆಯಬಹುದಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಇತ್ತೀಚಿನ ಬಜೆಟ್ ನಲ್ಲಿ ರೂಫ್ ಟಾಪ್ ಸೋಲಾರ್ ಪ್ಯಾನಲ್ ಯೋಜನೆಯನ್ನು ಘೋಷಿಸಿದ್ದಾರೆ. ಈ ಮೂಲಕ ಕೋಟ್ಯಾಂತರ ಜನರಿಗೆ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು. ಪ್ರಧಾನ ಮಂತ್ರಿ ಸೂರ್ಯೋ ಘರ್ ಯೋಜನೆಯಡಿ ಈ ಪ್ರಯೋಜನ ಪಡೆಯಬಹುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು. ಈ ಯೋಜನೆಯ ಮೂಲಕ ಜನರು…
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ರಂಗೇರಿದೆ. ದಿನದಿಂದ ದಿನಕ್ಕೆ ಪ್ರಚಾರದ ಅಬ್ಬರ ಜೋರಾಗುತ್ತಿದೆ. ಬಿಜೆಪಿ-ಜೆಡಿಎಸ್ ಕಾಂಗ್ರೆಸ್ ಪಕ್ಷಗಳು ಗೆಲುವಿಗಾಗಿ ತಂತ್ರದ ಮೇಲೆ ತಂತ್ರ ಹೆಣೆಯುತ್ತಿವೆ. ಈ ನಡುವೆ ಭಾರೀ ಅಚ್ಚರಿ ಹಾಗೂ ವಿಚಿತ್ರ ಘಟನೆಯೊಂದು ನಡೆದಿದ್ದು, ಬಿಜೆಪಿ ನಾಯಕರೊಬ್ಬರು RSS ಗಣವೇಶದಲ್ಲಿಯೇ ಬಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಗದಗ ಜಿಲ್ಲೆಯ ನರಗುಂದದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಆರ್ ಎಸ್ ಎಸ್ ಸ್ವಯಂ ಸೇವಕ ಹಾಗೂ ಬಿಜೆಪಿ ನಾಯಕರಾದ ರೋಣ ತಾಲೂಕಿನ ಮೆಣಸಗಿ ಗ್ರಾಮದ ನಿಂಗಬಸಪ್ಪ ಬಾಣದ್ ಎನ್ನುವವರು, ತಮ್ಮ ಮಾತೃ ಸಂಸ್ಥೆ RSS ನ ಗಣವೇಶದಲ್ಲಿಯೇ ಬಂದು ಕಾಂಗ್ರೆಸ್ ಸೇರ್ಪಡೆಯಾದರು. ಮೂವತ್ತು ವರ್ಷದಿಂದ ಆರ್ ಎಸ್ ಎಸ್ ಸಕ್ರಿಯ ಕಾರ್ಯಕರ್ತರಾಗಿರುವ ಬಾಣದ್ ಅವರು ಗಣವೇಷದಲ್ಲೇ ಕಾಂಗ್ರೆಸ್ ಶಾಲು ಹಾಕಿಸಿಕೊಂಡಿರುವುದು ವಿಶೇಷ ಎನ್ನಲಾಗಿದೆ. ಅಂದಹಾಗೆ, ಮಾಜಿ ಶಾಸಕ ಎಸ್ ಜಿ ನಂಜಯ್ಯನಮಠ ಸಮ್ಮುಖದದಲ್ಲಿ ನಿಂಗಬಸಪ್ಪ ಬಾಣದ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ಇನ್ನು ಸಚಿವ ಶಿವಾನಂದ ಪಾಟೀಲ, ಮಾಜಿ ಸಚಿವ ಬಿಆರ್ ಯಾವಗಲ್…
ಪಾವಗಡ: ಪಟ್ಟಣದ ಸ್ವಾಮಿ ವಿವೇಕಾನಂದ ಪಿ.ಯು. ಕಾಲೇಜಿನ ವಿದ್ಯಾರ್ಥಿ ಪ್ರಭಾಸ್ ಯಾದವ್ ವಿಜ್ಙಾನ ವಿಭಾಗದಲ್ಲಿ ದ್ವಿತೀಯ ಪಿಯುಸಿಯಲ್ಲಿ 579 ಅಂಕಗಳಿಸುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾನೆ. ಕಲಾ ವಿಭಾಗದಲ್ಲಿ ರಜಿತಾ ಎನ್ 503 ಅಂಕಗಳನ್ನು ಪಡೆಯುವ ಮೂಲಕ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ವಾಣಿಜ್ಯ ವಿಭಾಗದಲ್ಲಿ ಸಮೀರಾ ಬೇಗಂ 566 ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಉಳಿದಂತೆ ವಿಜ್ಞಾನ ವಿಭಾಗದಲ್ಲಿ ಅನುಷಾ ಆರ್ 565, ನಿಖಿಲ್ ಸಾಯಿ 565, ವಾಣಿಜ್ಯ ವಿಭಾಗದಲ್ಲಿ ಸಿಂಚನ 564, ರಕ್ಷಿತಾ 549 ಕಲಾ ವಿಭಾಗದಲ್ಲಿ ಶ್ವೇತಾ 493, ಶೋಭಾ 491 ಅಂಕಗಳನ್ನು ಪಡೆಯುವ ಮೂಲಕ ಕ್ರಮವಾಗಿ ಕಾಲೇಜಿನಲ್ಲಿ ಅತ್ಯುತ್ತಮ ಸ್ಥಾನವನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿವೇಕಾನಂದ ಪಿಯು ಕಾಲೇಜಿಗೆ ಎಲ್ಲಾ ವಿಭಾಗಗಳಿಂದ ಶೇ. 82.46 ಫಲಿತಾಂಶ ಲಭ್ಯವಾಗಿದ್ದು ಉನ್ನತ ದರ್ಜೆ 27, ಪಸ್ಟ್ ಕ್ಲಾಸ್ 145, ಸೆಕೆಂಡ್ ಕ್ಲಾಸ್ 36, ಪಾಸ್ ಕ್ಲಾಸ್ 13 ಪಡೆದು ಉತ್ತೀರ್ಣರಾಗಿ ಕಾಲೇಜಿಗೆ…
ಬೆಂಗಳೂರು: ದೇವೇಗೌಡರಿಗೆ ಈ ಗತಿ ಬರಬಾರದಿತ್ತು ಎಂದು ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಸಿದ್ಧಾಂತವನ್ನೇ ಮಾರಿಕೊಂಡು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಸ್ಥಿತಿ ಜೆಡಿಎಸ್ ಗೆ ಬರಬಾರದಿತ್ತು ಎಂದ ಡಿ.ಕೆ. ಶಿವಕುಮಾರ್, ಗೌಡರ ಮನೆ ಅಳಿಯನಿಗೆ ಜೆಡಿಎಸ್ ನಿಂದ ಟಿಕೆಟ್ ಕೊಡಲಾಗದೆ ಬಿಜೆಪಿಯಿಂದ ನಿಲ್ಲಿಸುವ ಪರಿಸ್ಥಿತಿ ದೇವೇಗೌಡರಿಗೆ ಬರಬಾರದಿತ್ತು ಎಂದರು. ಮಾಜಿ ಪ್ರಧಾನಿಗಳ ಈ ಸ್ಥಿತಿ ನೋಡುತ್ತಿದ್ದರೆ ನನಗೆ ಬೇಸರವಾಗುತ್ತಿದೆ ಎಂದು ಡಿಕೆಶಿ ಹೇಳಿದ್ದಾರೆ. ಜೆಡಿಎಸ್ ನವರು ಮೂರು ಸೀಟ್ ಗೆದ್ದೇ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ ಜೆಡಿಎಸ್ ಬಿಜೆಪಿ ಅಭ್ಯರ್ಥಿಗಳೆಲ್ಲರೂ ಠೇವಣಿ ಕಳೆದುಕೊಳ್ಳೋದು ಗ್ಯಾರೆಂಟಿ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ನಮಗೆ ಇನ್ನೂ ನಾಲ್ಕುವರೆ ವರ್ಷ ಆಡಳಿತ ಅವಧಿ ಇದೆ ಅದಾದ ನಂತರ ಮುಂದಿನ ಐದು ವರ್ಷವೂ ಕಾಂಗ್ರೆಸ್ ಸರ್ಕಾರವೇ ಬರಲಿದೆ ಎಂದು ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296