Subscribe to Updates
Get the latest creative news from FooBar about art, design and business.
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
- ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ
- ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ
- ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ
- ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ
- ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವುದಕ್ಕೆ ಕೇಂದ್ರದ ಪ್ರಯತ್ನ: ಡಾ.ಜಿ.ಪರಮೇಶ್ವರ
- ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
Author: admin
ರಾಯಗಢ: ಶಿವಸೇನೆ ಉಪನಾಯಕಿ ಸುಷಾ ಅಂಧಾರೆಯನ್ನು ಕರೆದುಕೊಂಡು ಬರಲು ಹೊರಟಿದ್ದ ಖಾಸಗಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹಠಾತ್ ಅಪಘಾತಕ್ಕೀಡಾಗಿ, ಪತನಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ನಡೆದಿದೆ. ಪರಿಣಾಮ ಇಬ್ಬರು ಪೈಲಟ್ ಗಳು ಗಾಯಗೊಂಡಿದ್ದಾರೆ. ಹೆಲಿಕಾಪ್ಟರ್ ನ ಪೈಲಟ್ ಅದೃಷ್ಟವಶಾತ್ ಹೆಲಿಕಾಪ್ಟರ್ ನಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ತನಿಖೆಗಾಗಿ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಮೈದಾನವು ಸಮತಟ್ಟಾಗಿರದ ಕಾರಣ ಘಟನೆ ಸಂಭವಿಸಿದೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ದುಬೈನಲ್ಲಿ ದುಬೈ ಇಂಟರ್ನ್ಯಾಷನಲ್ ಏರ್ಪೋರ್ಟ್ (ಡಿಎಕ್ಸ್ಬಿ) ಮತ್ತು ಅಲ್ಮಖ್ತೂಮ್ ಏರ್ಪೋರ್ಟ್ ಎಂಬ ಎರಡು ಏರ್ಪೋರ್ಟ್ ಗಳಿವೆ. ವಿಶ್ವದ ಅತ್ಯಂತ ಬ್ಯುಸಿ ಏರ್ಪೋರ್ಟ್ ಗಳಲ್ಲಿ ದುಬೈ ವಿಮಾನ ನಿಲ್ದಾಣ ಒಂದು. ಇಲ್ಲಿ ಸುಮಾರು 9 ಕೋಟಿ ಜನರು ವರ್ಷದಲ್ಲಿ ಬಂದು ಹೋಗುತ್ತಾರೆ. ಈ ಏರ್ಪೋರ್ಟ್ ನಿಂದ 45 ಕಿಮೀ ದಕ್ಷಿಣಕ್ಕೆ ಅಲ್ಮಖ್ತೂನ್ ಏರ್ಪೋರ್ಟ್ ಇದೆ. 2010ಕ್ಕೆ ಆರಂಭವಾದ ಇದರಲ್ಲಿ ಸದ್ಯ ಒಂದು ಟರ್ಮಿನಲ್ ಮತ್ತು ಎರಡು ರನ್ ವೇ ಗಳಿವೆ. ಈಗ ಇರುವ ಯೋಜನೆಯಲ್ಲಿ ಅಲ್ಮಖ್ತೂನ್ ಏರ್ಪೋರ್ಟ್ ನಲ್ಲಿ ಹೊಸ ಟರ್ಮಿನಲ್ ಸಿದ್ಧಗೊಳಿಸಲಾಗುತ್ತಿದೆ. ಇದು ವಿಶ್ವದಲ್ಲೇ ಅತಿದೊಡ್ಡ ಟರ್ಮಿನಲ್ ಆಗುತ್ತದೆ. 400 ವಿಮಾನ ಗೇಟ್ ಗಳು ಇರಲಿವೆ. ಐದು ಪರ್ಯಾಯ ರನ್ವೇಗಳನ್ನು ನಿರ್ಮಿಸಲಾಗುತ್ತಿದೆ. ಇದು ಪೂರ್ಣವಾಗಿ ಸಿದ್ಧಗೊಂಡರೆ ದುಬೈ ಇಂಟರ್ ನ್ಯಾಷನಲ್ ಏರ್ಪೋರ್ಟ್ ಏನಿದೆ ಅದಕ್ಕಿಂತ ಐದು ಪಟ್ಟು ಬೃಹತ್ತಾಗಿರಲಿದೆ ಹೊಸ ಎರ್ಪೋರ್ಟ್. ಎರಡೂವರೆ ಕೋಟಿಗಿಂತಲೂ ಹೆಚ್ಚು ಪ್ರಯಾಣಿಕರಿಗೆ ಸೇವೆ ನೀಡುವಷ್ಟು ಬೃಹತ್ತಾಗಿರಲಿದೆ ಇದು. ಈ ಏರ್ಪೋರ್ಟ್ ನಿರ್ಮಾಣದಲ್ಲಿ ವಿಶ್ವದಲ್ಲೇ ಮೊದಲ ಬಾರಿಗೆ…
ಬೀಜಿಂಗ್: ಭಾರೀ ಮಳೆಯಿಂದಾಗಿ ದಕ್ಷಿಣ ಚೀನಾದ ಗುವಾಂಗ್ ಡಾಂಗ್ ಪ್ರಾಂತ್ಯದಲ್ಲಿ ಹೆದ್ದಾರಿ ಕುಸಿತದಿಂದ 48 ಮಂದಿ ಮೃತಪಟ್ಟ ಘಟನೆ ನಡೆದಿದೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ದಟ್ಟವಾದ ಜನನಿಬಿಡ ಕೈಗಾರಿಕಾ ಶಕ್ತಿ ಕೇಂದ್ರವಾದ ಗುವಾಂಗ್ ಡಾಂಗ್, ಇತ್ತೀಚಿನ ವಾರಗಳಲ್ಲಿ ಹವಾಮಾನ ವೈಪರೀತ್ಯಗಳಿಂದಾಗಿ ಸಂಭವಿಸಿದ ವಿಪತ್ತುಗಳ ಸರಮಾಲೆಯಿಂದ ಹಾನಿಗೊಳಗಾಗಿದೆ. ಚಂಡಮಾರುತಗಳು ವರ್ಷದಲ್ಲಿ ನಿರೀಕ್ಷೆಗಿಂತ ಹೆಚ್ಚು ಭಾರೀ ಪ್ರಮಾಣದಲ್ಲಾಗಿವೆ. ಹವಾಮಾನ ಬದಲಾವಣೆಗೆ ಸಂಭವಿಸುತ್ತಿವೆ. ಗುರುವಾರ ಬೆಳಗ್ಗೆ ಹೆದ್ದಾರಿ ಕುಸಿತದಿಂದ 36 ಮಂದಿ ಮೃತಪಟ್ಟಿದ್ದರು. ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಮೃತರ ಸಂಖ್ಯೆ 48 ಕ್ಕೆ ಏರಿದೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನವದೆಹಲಿ: ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡುವ ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಅವರ ಫೋಟೋ ಕಂಡು ಬರುತ್ತಿತ್ತು. ಆದರೆ, ಇದೀಗ ಪ್ರಧಾನಿ ಮೋದಿ ಅವರ ಫೋಟೋ ಮಾಯವಾಗಿದೆ. ‘ಭಾರತೀಯರು ಎಲ್ಲರೂ ಒಟ್ಟಾಗಿ ಕೋವಿಡ್ – 19’ ಮಣಿಸೋಣ ಎಂಬ ಆಶಯ ಹಾಗೂ ಘೋಷ ವಾಕ್ಯ ಹೊಂದಿರುವ ಕೋವಿನ್ ಆಪ್ ನಲ್ಲಿ ಲಸಿಕೆ ಪಡೆದವರು ತಮ್ಮ ಪ್ರಮಾಣ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳುವ ಅವಕಾಶ ಇತ್ತು. ಈ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಅವರ ಫೋಟೋ ಇತ್ತು. ಆದರೆ ಇದೀಗ ಘೋಷ ವಾಕ್ಯ ಮಾತ್ರ ಇದೆ. ಪ್ರಧಾನಿ ಮೋದಿ ಅವರ ಫೋಟೋ ತೆಗೆಯಲಾಗಿದೆ. ಕೋವಿಡ್ ಲಸಿಕಾ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಅವರ ಫೋಟೋ ಮಾಯವಾದ ಕೂಡಲೇ ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತಾದ ಚರ್ಚೆ ಶುರುವಾಗಿತ್ತು. ಆಸ್ಟ್ರಾಜೆನಿಕಾ ಹಾಗೂ ಆಕ್ಸ್‌ಫರ್ಡ್ ವಿಶ್ವ ವಿದ್ಯಾಲಯದ ಸಹಯೋಗದಲ್ಲಿ ತಯಾರಿಸಲಾದ ಕೋವಿಡ್ ಲಸಿಕೆ ಫಾರ್ಮುಲಾವನ್ನೇ ಭಾರತದಲ್ಲಿ ಕೋವಿಶೀಲ್ಡ್ ಹೆಸರಿನಲ್ಲಿ…
ಮೇಡಗು, ರಾಕಥಾನ್ ನಂತಹ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿ ಸೈ ಅನಿಸಿಕೊಂಡಿದ್ದು, ಸಂಗೀತ ಪ್ರಿಯರನ್ನು ರಂಜಿಸಿದ್ದ ತಮಿಳಿನ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನರಾಗಿದ್ದಾರೆ. ಇವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆರೋಗ್ಯ ಕೈ ಕೊಟ್ಟ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಖಾಸಗಿ ಆಸ್ಪತ್ರೆಯ ನಂತರ ಅವರನ್ನು ಓಮಂದೂರರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಅವರು ನಿಧನರಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಒಂದೆಡೆ ಲುಕೌಟ್ ನೋಟಿಸ್ ಮತ್ತೊಂದೆಡೆ ಅತ್ಯಾಚಾರ ಕೇಸ್ ದಾಖಲಾಗಿದ್ದು, ಪ್ರಜ್ವಲ್ ರೇವಣ್ಣ ಮತ್ತೆ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಕೊನೆಗೂ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ 164 ಅಡಿಯಲ್ಲಿ ಕೊಟ್ಟ ಹೇಳಿಕೆ ಆಧರಿಸಿ ಎಫ್‍ಐಆರ್ ದಾಖಲಿಸಿದ್ದಾರೆ. ಈಗಾಗಲೇ ಪ್ರಜ್ವಲ್ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ಎಲ್ಲೇ ಕಾಣಿಸಿಕೊಂಡರೂ ಅರೆಸ್ಟ್ ಆಗುವುದು ಖಚಿತವಾಗಿದೆ. ಇತ್ತ ಪ್ರಜ್ವಲ್ ರೇವಣ್ಣ ಕೂಡ ಕಾನೂನು ಸಮರ ಸಾಧ್ಯತೆ ಇದೆ. ಜೊತೆಗೆ ಇದೀಗ ಎಸ್ ಐಟಿ ಅಧಿಕಾರಿಗಳು ಶೀಘ್ರವೇ ವಿಚಾರಣೆಗೆ ಹಾಜರಾಗುವಂತೆ ಇಂದು ಮತ್ತೆ ನೋಟಿಸ್ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕನಿಷ್ಟ ವಿದ್ಯಾರ್ಥಿಗಳ ಸಂಖ್ಯೆಯ ನೆಪವೊಡ್ಡಿ ಅನುದಾನಿತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ವೇತನ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ ಎಂದು ರೂಪ್ಸ ಕರ್ನಾಟಕ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ತಿಳಿಸಿದರು. ಅವರು ನಗರದಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಒಂದು ತರಗತಿಗೆ ಕನಿಷ್ಠ 40 ವಿದ್ಯಾರ್ಥಿಗಳಿರಬೇಕೆಂಬ ನಿಯಮವನ್ನು ಮಾಡಿ, 40ಕ್ಕಿಂತ ಕಡಿಮೆ ಸಂಖ್ಯೆಯಲ್ಲಿರುವ ವಿದ್ಯಾರ್ಥಿಗಳನ್ನೊಳಗೊಂಡ ಕಾಲೇಜುಗಳ ಮಾನ್ಯತೆ ನವೀಕರಣ ತಿರಸ್ಕರಿಸಿ, ನೋಟಿಸ್ ಜಾರಿ ಮಾಡಿದೆ. ಇದೇ ಕಾರಣಕ್ಕಾಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಎರಡು ತಿಂಗಳಿನಿಂದ ವೇತನ ತಡೆ ಹಿಡಿಯಲಾಗಿದೆ. ಸರ್ಕಾರದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅವೈಜ್ಞಾನಿಕ ನೀತಿಯಿಂದಾಗಿ, ಇಂದು ಉಪನ್ಯಾಸಕರ ಕುಟುಂಬ ವರ್ಗ ಸಂಕಷ್ಟಕ್ಕೆ ಸಿಲುಕಿರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಮನಸ್ಸು ಇಚ್ಛೆ ಕಾಲೇಜುಗಳನ್ನು ಪ್ರಾರಂಭಿಸಲು ಅನುಮತಿ ನೀಡಿದ ಫಲವಾಗಿ, ಇಂದು ರಾಜ್ಯದಾದ್ಯಂತ ಸಾವಿರಾರು ಖಾಸಗಿ ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ…
ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ಹೆಸರುವಾಸಿಯಾಗಿದ್ದ ಅರ್ಜುನನ ಸಮಾಧಿ ಕುರಿತಂತೆ ನಟ ದರ್ಶನ್ ನಿನ್ನೆಯಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಧ್ವನಿ ಎತ್ತಿದ್ದಾರೆ. ಸಮಾಧಿ ಸಲ್ಲಬೇಕಾದ ಗೌರವ ನೀಡಿ ಎಂದು ಬರೆದುಕೊಂಡಿದ್ದರು. ನಟನ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ದರ್ಶನ್ ಅವರ ಪ್ರಾಣಿ ಪ್ರೀತಿಗೆ ಅಭಿಮಾನಿಗಳು ಮತ್ತು ಪ್ರಾಣಿ ಪ್ರಿಯರು ಜೈ ಹೋ ಎಂದಿದ್ದಾರೆ. ಅರ್ಜುನ್ ಗೆ ಸಿಗಬೇಕಾದ ಗೌರವವನ್ನು ಕೂಡಲೇ ಸಲ್ಲಿಸಬೇಕು ಎಂದು ದರ್ಶನ್ ಮನವಿ ಮಾಡಿಕೊಂಡಿದ್ದಾರೆ. ಸ್ವತಃ ಪ್ರಾಣಿ ಪ್ರಿಯರೂ ಆಗಿರುವ ದರ್ಶನ್, ಮೈಸೂರು ಮೃಗಾಲಯ ಸೇರಿದಂತೆ ನಾನಾ ಮೃಗಾಲಯದಲ್ಲಿರುವ ಪ್ರಾಣಿಗಳನ್ನು ಅವರು ದತ್ತು ಪಡೆದಿದ್ದಾರೆ. ಜೊತೆಗೆ ಮನೆಯಲ್ಲೂ ಹಲವು ರೀತಿಯ ಪ್ರಾಣಿ ಪಕ್ಷಿಗಳನ್ನು ಸಾಕಿದ್ದಾರೆ. ಅದರಲ್ಲೂ ಆನೆಗಳೆಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಹಾಗಾಗಿಯೇ ತಮ್ಮ ಕಾಟೇರ ಸಿನಿಮಾವನ್ನು ಹುತಾತ್ಮ ಆನೆ ಅರ್ಜುನ್ ಗೆ ಅರ್ಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…
ಮಡಿಕೇರಿ: ಅತ್ತೆಯನ್ನು ಕೊಲೆಗೈದು ಬಳಿಕ ಸಹಜ ಸಾವು ಎಂದು ಬಿಂಬಿಸಿದ್ದ ಸೊಸೆಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಡಿಕೇರಿ ತಾಲೂಕಿನ ಮರಗೋಡಿನ ನಿವಾಸಿ ಪೂವಮ್ಮ(73) ಕೊಲೆಯಾದ ಅತ್ತೆಯಾಗಿದ್ದು, ಸೊಸೆ ಬಿಂದು(26) ಕೊಲೆಗೈದ ಬಂಧಿತ ಆರೋಪಿಯಾಗಿದ್ದಾರೆ. ಅತ್ತೆ-ಸೊಸೆ ನಡುವೆ ಹಲವು ವರ್ಷಗಳಿಂದ ಮನಸ್ತಾಪ ಇದ್ದು, ಇಬ್ಬರ ನಡುವೆ ಯಾವಾಗಲೂ ಕಲಹ ನಡೆಯುತ್ತಿತ್ತು ಎನ್ನಲಾಗಿದೆ. ಏ.15 ರಂದು ಪತಿ ಮೌಲ್ಯಮಾಪನ ಕರ್ತವ್ಯಕ್ಕಾಗಿ ಮಡಿಕೇರಿಗೆ ತೆರಳಿದ್ದ ಸಂದರ್ಭ ಪೂವಮ್ಮ ಕುಸಿದು ಬಿದ್ದಿರುವುದಾಗಿ ಪತಿ ಪ್ರಸನ್ನ ಅವರಿಗೆ ಬೆಳಗ್ಗೆ ಬಿಂದು ಕರೆ ಮಾಡಿ ತಿಳಿಸಿದ್ದಾಳೆ. ಅವರು ಬಂದು ನೋಡುವಷ್ಟರಲ್ಲಿ ಮೃತಪಟ್ಟಿರುವುದು ದೃಢಪಟ್ಟಿದೆ. ಪೂವಮ್ಮ ಹೃದ್ರೋಗ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆ ಆ ಕ್ಷಣದಲ್ಲಿ ಸಾವಿನ ಕುರಿತು ಹೆಚ್ಚಿನ ಅನುಮಾನವೂ ಕುಟುಂಬಸ್ಥರಲ್ಲಿ ಮೂಡಿರಲಿಲ್ಲ. ಅಂತ್ಯಸಂಸ್ಕಾರದ ಬಳಿಕ ಗ್ರಾಮದಲ್ಲಿ ಸಾವಿನ ಕುರಿತು ಊಹಾಪೋಹಗಳು ಕೇಳಿ ಬರುತ್ತಿದ್ದವು. ದಿನಕಳೆದಂತೆ ಪೂವಮ್ಮ ಸಾವಿನ ಬಗ್ಗೆ ಕುಟುಂಬಸ್ಥರಿಗೆ ತೀವ್ರ ಅನುಮಾನ ಮೂಡಿದೆ. ಅದರಲ್ಲೂ ಪತಿ ಪ್ರಸನ್ನ ಅವರಿಗೆ ಘಟನೆ ನಡೆದ ಸ್ಥಳ, ದಿಂಬಿನ ಕವರ್,…
ಕೋಲಾರ: ಕೋಲಾರ ತಾಲೂಕಿನ ನಾಗನಾಳ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಕಸ್ಮಿಕವಾಗಿ ಮುಳುಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದ್ದು, ಮೈಸೂರಿನ ರಾಘವೇಂದ್ರ ನಗರ ನಿವಾಸಿ ಗೌತಮ್ ಗೌಡ (26) ಮೃತ ದುರ್ದೈವಿಯಾಗಿದ್ದಾರೆ. ಗೌತಮ್ ತನ್ನ ಕುಟುಂಬದವರೊಂದಿಗೆ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದು, ಗೌತಮ್ ಕೃಷಿ ಹೊಂಡಕ್ಕೆ ಜಿಗಿದು ಈಜುತ್ತಿದ್ದ. ಈ ವೇಳೆ ನೀರಿನಲ್ಲಿ ಉಸಿರುಗಟ್ಟಿ ಪ್ರಾಣಬಿಟ್ಟಿದ್ದಾನೆ. ಸರಿಯಾಗಿ ಈಜು ಬಾರದಿದ್ದರು ಈಜಲು ಹೋಗಿ ನೀರುಪಾಲಾಗಿದ್ದಾನೆ. ಸದ್ಯ ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296