Subscribe to Updates
Get the latest creative news from FooBar about art, design and business.
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
- ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ
- ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ
- ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ
- ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ
- ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವುದಕ್ಕೆ ಕೇಂದ್ರದ ಪ್ರಯತ್ನ: ಡಾ.ಜಿ.ಪರಮೇಶ್ವರ
- ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
Author: admin
ಬೆಂಗಳೂರು: ಬೆಂಗಳೂರಿನ ನಾಗಶೆಟ್ಟಿಹಳ್ಳಿಯಲ್ಲಿ ರೌಡಿ ಶೀಟರ್ ಒಬ್ಬ ತನ್ನ ಸ್ನೇಹಿತನನ್ನು ಡ್ರ್ಯಾಗರ್ ನಿಂದ ಇರಿದು ಹತ್ಯೆಗೈದ ಘಟನೆ ನಡೆದಿದೆ. ಮೂರ್ತಿ(45) ವರ್ಷ ಕೊಲೆಯಾದ ಆಟೋ ಡ್ರೈವರ್ ಆಗಿದ್ದು, ಶರಣಪ್ಪ ಕೊಲೆ ಮಾಡಿದ ಆರೋಪಿಯಾಗಿದ್ದಾರೆ. ಮೂರ್ತಿಗೆ ರೌಡಿಶೀಟರ್ ಶರಣಪ್ಪ ಕೆಲ ವರ್ಷಗಳಿಂದ ಪರಿಚಯವಿದ್ದ. ನಿನ್ನೆ ಇಬ್ಬರೂ ನಾಗಶೆಟ್ಟಹಳ್ಳಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ನಂತರ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದೆ. ಈ ಜಗಳವು ತಾರಕಕ್ಕೇರಿದ್ದು ರೌಡಿಶೀಟರ್ ಶರಣಪ್ಪ ಮೂರ್ತಿಗೆ ಡ್ಯಾಗರ್ ನಿಂದ ಹಲವು ಬಾರಿ ಇರಿದಿದ್ದು, ತೀವ್ರ ರಕ್ರಸ್ರಾವವಾಗಿ ಮೂರ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬಾಲಿವುಡ್ ನ ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ನಟಿ ಶ್ರೀದೇವಿ ಎಂದರೆ ಎಲ್ಲಿಲ್ಲದ ಅಭಿಮಾನ. ವರ್ಮಾ ಆಗಾಗ ಶ್ರೀದೇವಿ ಅವರನ್ನು ನೆನಪಿಸಿಕೊಳ್ಳುತ್ತಲೇ ಇರುತ್ತಾರೆ. ಶ್ರೀದೇವಿಯ ಸೌಂದರ್ಯವನ್ನು ಸಾಕಷ್ಟು ಬಾರಿ ಹೊಗಳಿದ್ದಾರೆ. ಶ್ರೀದೇವಿ ಮರಣ ಹೊಂದಿದ್ದಾಗ ಕಣ್ಣೀರಿಟ್ಟಿದ್ದ ವರ್ಮಾ ಇದೀಗ ಆಕೆಯನ್ನು ಸ್ವರ್ಗಕ್ಕೆ ಹೋಗಿ ಭೇಟಿ ಮಾಡಿ ಬಂದಿದ್ದಾಗಿ ಹೇಳಿದ್ದಾರೆ. ಶ್ರೀದೇವಿ ರಾಮ್ ಗೋಪಾಲ್ ವರ್ಮಾ ಜೊತೆ ಎರಡು ಸಿನಿಮಾ ಮಾಡಿದ್ದಾರೆ. ಅವರು ವರ್ಮಾ ನಿರ್ದೇಶನದ ಗೋವಿಂದಾ ಗೋವಿಂದಾ ಮತ್ತು ಕ್ಷಣ ಸಂಶಂ ಚಿತ್ರಗಳಲ್ಲಿ ನಟಿಸಿದ್ದಾರೆ. ಈ ಎರಡೂ ಸಿನಿಮಾಗಳು ಸೂಪರ್ ಹಿಟ್ ಆದವು. ಆ ವೇಳೆ ಶ್ರೀದೇವಿಗೆ ತೀರಾ ಹತ್ತಿರವಾದ ವರ್ಮಾ ಅಂದಿನಿಂದ, ಅನೇಕ ಸಂದರ್ಶನಗಳಲ್ಲಿ ಶ್ರೀದೇವಿ ಬಗ್ಗೆ ತಮ್ಮ ಭಾವನೆಗಳನ್ನು ಆರ್ ಜಿವಿ ಬಹಿರಂಗಪಡಿಸಿದ್ದಾರೆ. ಶ್ರೀದೇವಿ ಅಗಲಿಕೆಯ ನಂತರವೂ ನಟಿಯ ಜೊತೆಗಿನ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ ವರ್ಮಾ. ಕಾರಿನಲ್ಲಿ ಡ್ರೈವರ್ ಸೀಟ್ ನಲ್ಲಿ ಶ್ರೀದೇವಿ ಕುಳಿತಿದ್ದು, ಅದರ ಪಕ್ಕದ ಸೀಟಿನಲ್ಲಿ ಸಿಗರೇಟು ಹಿಡಿದುಕೊಂಡು ವರ್ಮಾ ಕೂತಿದ್ದಾರೆ. ಈ ಫೋಟೋವನ್ನು ಅವರು…
ದಿ ರಾಕ್ ಅವರು ‘ನೀರಿನ ಬಾಟಲಿಯಲ್ಲಿ ಮೂತ್ರ ವಿಸರ್ಜನೆ ಮಾಡುತ್ತಾರೆ’ ಎಂದು ಕೆಲವರು ಆರೋಪಿಸಿದ್ದಾರೆ. ಅಮೆರಿಕದ ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಕಟ ಆಗಿದೆ. ಡ್ವೇನ್ ಜಾನ್ಸನ್ ಮೇಲಿನ ಈ ಆರೋಪಗಳನ್ನು ಕೇಳಿ ಎಲ್ಲರಿಗೂ ಶಾಕ್ ಆಗಿದೆ. WWE ಮ್ಯಾಚ್ ಗಳನ್ನು ನೋಡಿ ಎಂಜಾಯ್ ಮಾಡಿದ ಎಲ್ಲರಿಗೂ ದಿ ರಾಕ್ ಅಲಿಯಾಸ್ ಡ್ವೇನ್ ಜಾನ್ಸನ್ ಬಗ್ಗೆ ಗೊತ್ತೇ ಇರುತ್ತದೆ. ಹಾಲಿವುಡ್ ನ ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಸಿನಿಮಾದ ಶೂಟಿಂಗ್ ಸೆಟ್ ಗೆ ಡ್ವೇನ್ ಜಾನ್ಸನ್ ಅವರು ತುಂಬ ತಡವಾಗಿ ಬರುತ್ತಾರೆ ಎನ್ನಲಾಗಿದೆ. ಇದರಿಂದಾಗಿ ನಿರ್ಮಾಪಕರಿಗೆ ನೂರಾರು ಕೋಟಿ ರೂಪಾಯಿ ನಷ್ಟ ಆಗಿದೆ. ಅಷ್ಟೇ ಅಲ್ಲದೇ ಸಹ-ನಟರ ಜೊತೆಗೆ ಡ್ವೇನ್ ಜಾನ್ಸನ್ ಗಲಾಟೆ ಕೂಡ ಮಾಡಿಕೊಂಡಿದ್ದಾರೆ. ಅದಕ್ಕಿಂತಲೂ ಕೆಟ್ಟ ವರ್ತನೆ ಏನೆಂದರೆ, ಅವರು ನೀರಿನ ಬಾಟಲಿಯಲ್ಲಿ ಮೂತ್ರ ಮಾಡಿ, ಅದನ್ನು ಎಸೆಯಲು ಬೇರೆಯವರಿಗೆ ಆದೇಶಿಸುತ್ತಾರೆ ಎಂದು ಹೇಳಲಾಗಿದೆ. ಸಿನಿಮಾದ ಶೂಟಿಂಗ್ ಸೆಟ್ ನಲ್ಲಿ ಕ್ಯಾರವ್ಯಾನ್ ನಿಂದ ದೂರ ಇರುವಾಗ ಡ್ವೇನ್…
ಗಾಜಿಯಾಬಾದ್: ಮಸೀದಿಯಲ್ಲಿ ನಮಾಜ್ ಮಾಡುವ ವೇಳೆ ವೃದ್ಧರೊಬ್ಬರು ಹೃದಯಾಘಾತಕ್ಕೆ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಮುರಾದ್ ನಗರದ ಮಸೀದಿಯಲ್ಲಿ ನಮಾಜ್ ಮಾಡುವ ವೇಳೆ ಈ ಘಟನೆ ನಡೆದಿದೆ. ವೃದ್ಧರೊಬ್ಬರು ದೇವರಿಗೆ ಪ್ರಾರ್ಥನೆ ಸಲಿಸುತ್ತಿದ್ದಾಗ ಹೃದಯಾಘಾತವಾಗಿದೆ. ಅಲ್ಲೇ ವೃದ್ಧ ಸಾವನ್ನಪ್ಪಿದ್ದಾರೆ. ಇನ್ನು ಈ ಆಘಾತಕಾರಿ ದೃಶ್ಯ ಮಸೀದಿ ಒಳಗೆ ಅಳವಡಿಸಿದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ದೃಶ್ಯ ಹರಿದಾಡುತ್ತಿದೆ. ವೃದ್ಧನಿಗೆ ಹೃದಯಾಘಾತವಾಗುವ ದೃಶ್ಯ ಕಂಡು ಮಸೀದಿಯಲ್ಲಿದ್ದವರು ಅವರ ಸಹಾಯಕ್ಕೆ ಬಂದರು. ಆದರೆ ಅಷ್ಟರಲ್ಲಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಇನ್ನು ದೃಶ್ಯದಲ್ಲಿ ಕಂಡುಬಂದತೆ ವೃದ್ಧ ಕುಳಿತು ನಮಾಜ್ ಮಾಡುವ ವೇಳೆ ಹಿಮ್ಮುಖವಾಗಿ ಬೀಳುತ್ತಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಹಾಸ್ಯನಟ ಶ್ಯಾಮ್ ರಂಗೀಲಾ ಘೋಷಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ವೀಡಿಯೋ ಹಂಚಿಕೊಂಡಿರುವ ಅವರು, ವಾರಣಾಸಿಯಿಂದ ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದೇನೆ. ನಿಮ್ಮಲ್ಲರಿಂದ ನನಗೆ ಸಿಗುತ್ತಿರುವ ಪ್ರೀತಿ, ಬೆಂಬಲದಿಂದ ನಾನು ಉತ್ಸುಕನಾಗಿದ್ದೇನೆ. ನಾಮಪತ್ರ ಸಲ್ಲಿಕೆ ಹಾಗೂ ಮುಂದಿನ ಮಾಹಿತಿಗಳ ಬಗ್ಗೆ ವೀಡಿಯೋ ಸಂದೇಶಗಳ ಮೂಲಕ ನಿಮಗೆ ತಿಳಿಸುತ್ತಿರುತ್ತೇನೆ ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2014ರಲ್ಲಿ ನಾನು ಮೋದಿ ಅಭಿಮಾನಿಯಾಗಿದ್ದೆ. ಪ್ರಧಾನಿಗಳನ್ನು ಬೆಂಬಲಿಸುವ ಹಲವು ವೀಡಿಯೋಗಳನ್ನು ಶೇರ್ ಮಾಡಿದ್ದೆ. ರಾಹುಲ್ ಗಾಂಧಿ ಅರವಿಂದ್ ಕೇಜ್ರಿವಾಲ್ ಅವರಿಗೆ ವಿರುದ್ಧವಾದ ವೀಡಿಯೋಗಳನ್ನು ಶೇರ್ ಮಾಡಿದ್ದೆ. ನಾನು ಬಿಜೆಪಿ ಬಿಟ್ಟು ಬೇರೆ ಯಾವುದೇ ಪಕ್ಷಕ್ಕೆ ಮತ ಹಾಕಲ್ಲ ಎಂದು ಶಪಥ ಮಾಡಿದ್ದೆ. ಆದ್ರೆ ಕಳೆದ 10 ವರ್ಷಗಳಲ್ಲಿ ಪರಿಸ್ಥಿತಿ ಬದಲಾಗಿದೆ. ಆದ್ದರಿಂದಲೇ ನಾನು ಈ ಬಾರಿ ವಾರಣಾಸಿಯಿಂದ ಪ್ರಧಾನಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಇದೇ ವಾರ…
ಬೆಂಗಳೂರು: ಇಷ್ಟು ದಿನ ಬಿರು ಬಿಸಿಲಿನಿಂದ ಹೈರಾಣಾಗಿದ್ದ ಸಿಲಿಕಾನ್ ಸಿಟಿ ಮಂದಿಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಬಿಸಿಲಿನ ದಗೆಯಿಂದ ಬೇಸರಗೊಂಡಿದ್ದ ಜನರು ಸದ್ಯ ಮಳೆಯಿಂದ ನಿಟ್ಟುಸಿರು ಬಿಟ್ಟಿದ್ದಾರೆ. ಗುಡುಗು ಸಿಡಿಲು ಸಹಿತ ರಾಜಧಾನಿಯಲ್ಲಿ ಮಳೆಯಾಗಿದೆ. ಮೆಜೆಸ್ಟಿಕ್, ರಾಜಾಜಿನಗರ, ವಿಜಯನಗರ, ರೇಸ್ ಕೋರ್ಸ್, ಟೌನ್ ಹಾಲ್, ಬಸವನಗುಡಿ, ಜಯನಗರ, ರಾಜಾಜಿನಗರ ಸೇರಿದಂತೆ ಸುತ್ತಮುತ್ತ ಭಾರೀ ತುಂತುರು ಮಳೆಯಾಗುತ್ತಿದೆ. ನೆನ್ನೆ ಸಂಜೆ ಬೆಂಗಳೂರಿನ ಹಲವೆಡೆ ಮೋಡ ಕವಿದ ವಾತಾವರಣ ಇತ್ತು. ಹೀಗಾಗಿ ಸಿಲಿಕಾನ್ ಸಿಟಿ ಜನ ಮಳೆ ಬರುತ್ತದೆ ಎಂದು ನಿರೀಕ್ಷಿಸುತ್ತಿದ್ದರು. ಇದೀಗ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟ ಬಳಿಕ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಇದಲ್ಲದೇ ಇಂದು ರಾತ್ರಿ ವೇಳೆಗೆ ಜೋರು ಮಳೆ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ ಇಷ್ಟು ದಿನ ಬಿಸಿಲಿನ ತಾಪದಿಂದ ಬಸವಳಿದ ಬೆಂಗಳೂರಿನ ಜನ ವರುಣನ ಆಗಮನದಿಂದ ಫುಲ್ ಖುಷ್ ಆಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಜೆ.ಕೆ. ಸಿಮೆಂಟ್ ಪ್ಯಾಕ್ಟರಿಯಲ್ಲಿರುವ ಕಾರ್ಮಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಬಾಗಲಕೋಟೆ ಜಿಲ್ಲೆಯ ಲೋಕಾಪೂರದಲ್ಲಿರುವ ಪ್ಯಾಕ್ಟರಿಯ ಕಾರ್ಮಿಕರಿಗೆ ಮತದಾನ ಜಾಗೃತಿ ಮೂಡಿಸಲಾಯಿತು. ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡ ನನ್ನ ಮತ ನನ್ನ ಹಕ್ಕು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯತ ಸಿಇಓ ಆಗಿರುವ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಶಶಿಧರ ಕುರೇರ್, ಮೇ 7 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು, ತಮ್ಮ ಹಾಗೂ ತಮ್ಮ ಕುಟುಂಬ ವರ್ಗದ ಅರ್ಹ ಮತದಾರರು ತಪ್ಪದೇ ತಮ್ಮ ಮತ ಚಲಾಯಿಸಲು ತಿಳಿಸಿದರು. ಸಿಮೆಂಟ್ ಪ್ಯಾಕ್ಟರಿಯ ಸಿಬ್ಬಂದಿಗಳು ಮತದಾನ ಜಾಗೃತಿಯ ಸಂದೇಶವುಳ್ಳ ರಂಗೋಲಿ ಬಿಡಿಸಿರುವುದು ಎಲ್ಲರ ಗಮನ ಸೆಳೆಯಿತು. ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಅರಿವು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಅಮರೇಶ ನಾಯಕ, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಶಶಿಕಾಂತ ಶಿವಪೂರೆ ಸೇರಿದಂತೆ ಜೆಕೆ ಸಿಮೆಂಟ್ ಪ್ಯಾಕ್ಟರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ…
ಪೆನ್ ಡ್ರೈವ್ ವಿಚಾರ ಎಲ್ಲರಿಗಿಂತ ಮುಂಚಿತವಾಗಿ ಗೊತ್ತಿದ್ದದ್ದೇ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ಈ ಪ್ರಕರಣದಿಂದ ನುಣುಚಿಕೊಳ್ಳಲು ಕಾಂಗ್ರೆಸ್ ಹಾಗೂ ಡಿ.ಕೆ. ಶಿವಕುಮಾರ್ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ದೂರಿದ್ದಾರೆ. ಇದೇ ವೇಳೆ ಇದು ಹಾಸನ ಜಿಲ್ಲೆಯಲ್ಲೇ ಬಿಡುಗಡೆಯಾಗಿದ್ದು, ಇದರಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ಕೈವಾಡವೇ ಇರಬಹುದು ಎಂದು ಗಂಭೀರ ಆರೋಪ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಬಹಿರಂಗಗೊಳಿಸಿರುವುದು ಮಹಾನ್ ನಾಯಕ ಡಿ.ಕೆ. ಶಿವಕುಮಾರ್ ಎಂಬ ಕುಮಾರಸ್ವಾಮಿ ಅವರ ಆರೋಪಕ್ಕೆ ತಿರುಗೇಟು ನೀಡಿದರು. ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಡಿ.ಕೆ. ಶಿವಕುಮಾರ್ ಅವರನ್ನು ಸ್ಮರಿಸದಿದ್ದರೆ ತಿಂದ ಅನ್ನ ಜೀರ್ಣವಾಗುವುದಿಲ್ಲ. ನಿದ್ದೆ ಬರುವುದಿಲ್ಲ. ನಾವು ಪೆನ್ ಡ್ರೈವ್ ಬಿಡುಗಡೆ ಮಾಡುವುದಾಗಿದ್ದರೆ ಚುನಾವಣೆಗೆ ವಾರ ಅಥವಾ ಹತ್ತು ದಿನ ಮುಂಚಿತವಾಗಿಯೇ ಬಿಡುಗಡೆ ಮಾಡಬಹುದಾಗಿತ್ತಲ್ಲವೇ. ಈ ವಿಚಾರದಲ್ಲಿ ಎಲ್ಲರಿಗಿಂತ ಮುಂಚಿತವಾಗಿ ಗೊತ್ತಿದ್ದು ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ. ಕಾಂಗ್ರೆಸ್ ಮೇಲೆ ಆರೋಪ ಮಾಡಿ ನುಣುಚಿಕೊಳ್ಳುವ…
ಗೃಹ ಸಚಿವ ಜಿ. ಪರಮೇಶ್ವರ್ ಆಪ್ತ ಹಾಗೂ ಕಾಂಗ್ರೆಸ್ ನಾಯಕರೂ ಆಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ. ವೇಣುಗೋಪಾಲ್ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಬೆಳಗ್ಗೆಯಿಂದ ಸ್ವಲ್ಪವೂ ಬಿಡುವು ಮಾಡಿಕೊಳ್ಳದ ಅಧಿಕಾರಿಗಳು, ಅಲ್ಲಿಗೇ ತಿಂಡಿ ತರಿಸಿಕೊಂಡು ಕೆಲಸ ಮುಂದುವರಿಸಿದ್ದಾರೆ. ವಿವಿಧ ದಾಖಲೆ ಪತ್ರಗಳನ್ನ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಮನೆಯಲ್ಲೇ ಇದ್ದ ವೇಣುಗೋಪಾಲ್ ಅಧಿಕಾರಿಗಳಿಗೆ ಸಹಕರಿಸಿದ್ದಾರೆ. ಬೆಂಗಳೂರಿನ ಜೆ.ಪಿ. ನಗರದಲ್ಲಿರುವ ವೇಣುಗೋಪಾಲ್ ಮನೆ ಮೇಲೆ 15 ಅಧಿಕಾರಿಗಳ ತಂಡ ದಾಳಿ ನಡೆಸಿದೆ. 3 ಇನ್ನೋವಾ ಕಾರಿನಲ್ಲಿ ಬಂದಿದ್ದ ಐಟಿ ಅಧಿಕಾರಿಗಳು ಬೆಳಗ್ಗೆ 6 ಗಂಟೆಯಿಂದಲೇ ದಾಳಿ ನಡೆಸಿ, ವಿವಿಧ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಮೋದಿಗೆ ಕಾಂಗ್ರೆಸ್ ನಲ್ಲಿ ಸರಿಸಮಾನವಾದ ವ್ಯಕ್ತಿ ಇಲ್ಲವೇ ಇಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಸಂಬಂಧ ಗದಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಆ ಪಕ್ಷಕ್ಕೆ ಯಾರೂ ನಾಯಕರಿಲ್ಲ. ಮುಂದಿನ ಪ್ರಧಾನಿ ಅಭ್ಯರ್ಥಿ ಯಾರು ಅಂತ ಅವರ ಕಣ್ಣಮುಂದೆ ಇಲ್ಲ. ಮೋದಿಗೆ ಸರಿಸಮಾನ ವ್ಯಕ್ತಿ ಕಾಂಗ್ರೆಸ್ ನಲ್ಲಿ ಯಾರೂ ಇಲ್ಲ’ ಎಂದು ಹೇಳಿದರು. ರಾಜ್ಯದ 28 ಕ್ಷೇತ್ರಗಳಲ್ಲಿ ಈಗಾಗಲೇ ಪ್ರವಾಸ ಮಾಡಿದ್ದೇನೆ. ರಾಜ್ಯದಲ್ಲಿನ 28 ಕ್ಷೇತ್ರಗಳನ್ನೂ ಗೆಲ್ಲುವ ವಿಶ್ವಾಸ ಇದೆ. ಮೋದಿ ಹೆಸರಿನಲ್ಲಿ ನಾವು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಜನರು ಬಿಜೆಪಿಗೆ ಬೆಂಬಲಿಸುತ್ತಾರೆ. ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಎರಡು ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತಾರೆ’ಎಂದರು. ಬಿಜೆಪಿಗೆ ಮತ ಹಾಕಿದರೆ ಗ್ಯಾರಂಟಿಗಳನ್ನು ರದ್ದು ಮಾಡುತ್ತಾರೆ ಎಂಬ ಶಾಸಕ ರಾಜು ಕಾಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ನಾವು ಅಭಿವೃದ್ಧಿ ಕಡೆಗೆ ವಿಶೇಷ ಗಮನ ನೀಡುತ್ತೇವೆ. ಆದರೆ, ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದ ಮೇಲೆ…