Subscribe to Updates
Get the latest creative news from FooBar about art, design and business.
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
- ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ
- ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ
- ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ
- ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ
- ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವುದಕ್ಕೆ ಕೇಂದ್ರದ ಪ್ರಯತ್ನ: ಡಾ.ಜಿ.ಪರಮೇಶ್ವರ
- ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
Author: admin
ನಡು ರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಪತ್ನಿಯನ್ನ ಕೊಲೆ ಮಾಡಿದ ಭೀಕರ ಘಟನೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಪತಿ ಸೆಲ್ವಿನ್ ಫ್ರಾನ್ಸಿಸ್ ಹಾಗೂ ಮೃತ ಪತ್ನಿ ಇಂದು ಇಬ್ಬರ ನಡುವಿನ ಭಿನ್ನಾಭಿಪ್ರಾಯದಿಂದ 6 ತಿಂಗಳಿಂದ ದೂರವಾಗಿದ್ದರು. ನೆನ್ನೆ ಪತ್ನಿ ಜೊತೆ ಜಗಳ ತೆಗೆದು ಡಿಸಿಪಿ ಕಚೇರಿಯ ಪಕ್ಕದ ರಸ್ತೆಯಲ್ಲಿ ಇರಿದು ಕೊಂದಿದ್ದಾನೆ. ಸ್ಥಳಕ್ಕೆ ಕೋರಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಲ ತಿಂಗಳಿಂದ ಗಂಡನಿಂದ ದೂರವಿದ್ದರೂ, ತಾನು ಕೆಲಸ ಮಾಡುವ ಸ್ಥಳದಲ್ಲಿ ಸಮಸ್ಯೆ ಮಾಡುತ್ತಿದ್ದಾನೆಂದು ಪತಿ ವಿರುದ್ಧ ಕೋರಮಂಗಲ ಠಾಣೆಗೆ ನಿನ್ನೆ ಮಧ್ಯಾಹ್ನ ಬಂದು ಪತ್ನಿ ದೂರು ನೀಡಿದ್ದಾರೆ. ದೂರು ಹಿನ್ನೆಲೆ ಪತಿ ಸೆಲ್ವಿನ್ ಫ್ರಾನ್ಸಿಸ್ ಗೆ ಕೋರಮಂಗಲ ಠಾಣೆಯಿಂದ ಕರೆ ಬಂದಿದೆ. ಈ ವೇಳೆ ನಾನು ದೂರದಲ್ಲಿದ್ದೇನೆ ಎಂದು ಪೊಲೀಸರಿಗೆ ಹೇಳಿ, ಠಾಣೆ ಬಳಿಯೇ ಸೆಲ್ವಿನ್ ಬಂದಿದ್ದಾನೆ. ಪತ್ನಿ ಠಾಣೆಯಿಂದ ಹೊರ ಬರುವುದನ್ನೇ ಕಾದು ಕುಳಿತಿದ್ದ ಆತ, ಪತ್ನಿ ಹೊರ ಬರುತ್ತಿದ್ದಂತೆ ಮಾತನಾಡಿ…
ಜನಸಾಮಾನ್ಯರು ಆಧಾರ್ ಕಾರ್ಡ್ ಗಳನ್ನು ಕಡ್ಡಾಯವಾಗಿ ಹೊಂದಿರಲೇಬೇಕು ಎಂಬ ನಿಯಮ ದೇಶದಾದ್ಯಂತ ಇದೆ. ಇದೀಗ ನಾಯಿಗಳು ಆಧಾರ್ ಕಾರ್ಡ್ ಹೊಂದಿರಬೇಕು ಎಂಬ ನಿಯಮ ದೆಹಲಿಯಲ್ಲಿ ಜಾರಿಗೆ ಬಂದಿರುವುದು ವಿಚಿತ್ರವಾಗಿದೆ. ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ನಾಯಿಗಳಿಗೂ ಆಧಾರ್ ಕಾರ್ಡ್ ಅನ್ನು ನೀಡಲಾಗಿದೆ. ದಾರಿತಪ್ಪಿದ ನಾಯಿಗಳನ್ನು ರಕ್ಷಿಸಲು ಮತ್ತು ಅವುಗಳನ್ನು ಸ್ಥಳಾಂತರ ಮಾಡಲು ಎನ್ ಜಿಓ ಈ ಕ್ರಮಗಳನ್ನು ಜಾರಿಗೆ ತಂದಿದೆ. ಈಗಾಗಲೇ ದೆಹಲಿಯಲ್ಲಿ 100 ನಾಯಿಗಳಿಗೆ ತಮ್ಮದೇ ಆದ ಆಧಾರ್ ಕಾರ್ಡ್ ಅನ್ನು ನೀಡಲಾಗಿದೆ ಎಂಬುದಾಗಿ ತಿಳಿದುಬಂದಿದೆ. ವರದಿ ಪ್ರಕಾರ ಈ 100 ನಾಯಿಗಳು ದೆಹಲಿಯ ಟರ್ಮಿನಲ್ 1 ವಿಮಾನ ನಿಲ್ದಾಣ, ಇಂಡಿಯಾ ಗೇಟ್ ಮತ್ತು ಪ್ರಾಣಿ ಕಾರ್ಯಕರ್ತೆ ಮಾನವಿ ರೈ ನಡೆಸುತ್ತಿರುವ ದೆಹಲಿಯ ನಾಯಿ ಆಶ್ರಯ ಸೇರಿದಂತೆ ವಿವಿಧ ಸ್ಥಳಗಳಿಗೆ ಸೇರಿವೆ ಎನ್ನಲಾಗಿದೆ. ಏಪ್ರಿಲ್ 27ರಂದು ನಾಯಿಗಳಿಗೆ ಆಧಾರ್ ಕಾರ್ಡ್ ನೀಡುವ ಕ್ರಮಕ್ಕೆ ಚಾಲನೆ ನೀಡಿದ್ದು, ಇದಕ್ಕೆ ಸಂಬಂಧಪಟ್ಟ ನಾಯಿಗಳಿಗೆ ಆಧಾರ್ ಕಾರ್ಡ್ ಟ್ಯಾಗ್ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ಪ್ರಾಣಿ…
ವಿವಾಹಿತೆಯನ್ನು ಮದುವೆ ಆಗು ಅಂತ ಪಾಗಲ್ ಪ್ರೇಮಿ ಪೀಡಿಸಿದ್ದು, ಮದುವೆ ಆಗೋದಿಲ್ಲ ಅಂದಿದ್ದಕ್ಕೆ ಆಕೆಯ ಮನೆಗೆ ಬೆಂಕಿ ಇಟ್ಟಿರುವಂತಹ ಘಟನೆ ಬೆಂಗಳೂರಿನ ಸಾರಾಯಿಪಾಳ್ಯದಲ್ಲಿ ನಡೆದಿದೆ. ಅರ್ಬಾಜ್ ಮಹಿಳೆ ಮನೆಗೆ ಬೆಂಕಿ ಇಟ್ಟ ಪಾಗಲ್ ಪ್ರೇಮಿಯಾಗಿದ್ದಾರೆ. ಮಹಿಳೆಯ ದೂರದ ಸಂಬಂಧಿಯಾಗಿದ್ದ ಅರ್ಬಾಜ್, ಮದುವೆ ಆಗು ಎಂದು ಮಹಿಳೆ ಹಿಂದೆ ಬಿದ್ದಿದ್ದ. ಈ ಬಗ್ಗೆ 2 ಕುಟುಂಬದ ಹಿರಿಯರು ಬುದ್ಧಿ ಹೇಳಿದ್ದರು. ಹಿರಿಯರ ಬುದ್ಧಿಮಾತಿಗೂ ಬಗ್ಗದ ಅರ್ಬಾಜ್, ಮುಂಜಾನೆ 4 ಗಂಟೆ ಸುಮಾರಿಗೆ ಮಹಿಳೆ ಮನೆಗೆ ಬೆಂಕಿ ಹಚ್ಚಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದಿದ್ದಕ್ಕೆ ಭಾರೀ ಅನಾಹುತ ತಪ್ಪಿದೆ. ಬೆಂಕಿ ಇಟ್ಟಿದ್ದರಿಂದ ಮನೆಯಲ್ಲಿದ್ದ ಬಟ್ಟೆಗಳು, ಟಿವಿ, ಫ್ರಿಡ್ಜ್ ವಸ್ತುಗಳು ಬೆಂಕಿಗಾಹುತಿ ಆಗಿವೆ ಎನ್ನಲಾಗಿದೆ. ಕೇಸ್ ದಾಖಲಿಸಿಕೊಂಡು ಅರ್ಬಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ವಾರಣಾಸಿ: ಜಿಮ್ ನಲ್ಲಿ ವರ್ಕ್ ಔಟ್ ಮಾಡಿ ಕುಳಿತ್ತಿದ್ದ ವ್ಯಕ್ತಿಯೊಬ್ಬರು ಇದ್ದಕಿದ್ದಂತೆ ಕುಸಿದುಬಿದ್ದು ಮೃತಪಟ್ಟ ಆಘಾತಕಾರಿ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನೆನ್ನೆ ವರದಿಯಾಗಿದೆ. ಮೃತ ವ್ಯಕ್ತಿಯನ್ನು ದೀಪಕ್ ಗುಪ್ತ(32) ಎಂದು ಗುರುತಿಸಲಾಗಿದ್ದು, ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದೀಪಕ್ ಗುಪ್ತಾ ಜಿಮ್ ನಲ್ಲಿ ವ್ಯಾಯಾಮ ಮಾಡಿ ಬಳಿಕ ಅಲ್ಲೇ ಕುಳಿತ್ತಿದ್ದರು ಈ ವೇಳೆ ಇದ್ದಕಿದ್ದಂತೆ ಕುಸಿದು ಬಿದ್ದಿದ್ದಾರೆ ಈ ಸಮಯದಲ್ಲಿ ಅಲ್ಲಿದ್ದ ಇತರ ಸಹದ್ಯೋಗಿಗಳು ಸಹಾಯಕ್ಕೆ ಧಾವಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಪರಿಶೀಲಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಪರೀಕ್ಷೆ ನಡೆಸಿದ ವೈದ್ಯರು ದೀಪಕ್ ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಅಲ್ಲದೆ ಜಿಮ್ ನಲ್ಲಿರುವ ಸಿಸಿ ಕ್ಯಾಮೆರಾದಲ್ಲಿ ದೀಪಕ್ ತಲೆಗೆ ಕೈ ಹಿಡಿದುಕೊಂಡಿರುವುದು ಕಾಣಿಸಿಕೊಂಡಿದೆ. ಇತ್ತೀಚೆಗೆ ಕೋವಿಶೀಲ್ಡ್ ತೆಗೆದುಕೊಂಡವರಿಗೂ ಇಂತಹ ಲಕ್ಷಣಗಳಿರುವ ಬಗ್ಗೆ ಕಂಪನಿಯೇ ಒಪ್ಪಿಕೊಂಡಿತ್ತು. ಸದ್ಯ ಪ್ರಕರಣ ದಾಖಲಾಗಿದ್ದು ದೀಪಕ್ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ವರದಿ ಎಂದು ತಿಳಿಸಿದೆ. ನಮ್ಮತುಮಕೂರಿನ ಕ್ಷಣ…
ಚಲಿಸುತ್ತಿರುವ ರೈಲಿನಲ್ಲಿ ಪತಿಯೊಬ್ಬ ತನ್ನ ಪತ್ನಿಗೆ ತ್ರಿವಳಿ ತಲಾಖ್ ಹೇಳಿ ಶಾಕ್ ನೀಡಿದ್ದಾನೆ. ಇದಕ್ಕೆ ಪತ್ನಿ ವಿರೋಧ ವ್ಯಕ್ತಪಡಿಸಿದಾಗ ಆಕೆಯ ಕೂದಲು ಹಿಡಿದು ಥಳಿಸಿ, ಓಡಿ ಹೋಗಿದ್ದಾನೆ ಎನ್ನಲಾಗಿದೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಈ ವಿಚಿತ್ರ ಘಟನೆ ವರದಿಯಾಗಿದೆ. ಸಂತ್ರಸ್ತೆ ತನಗೆ ನ್ಯಾಯ ಕೊಡಿಸುವಂತೆ ಸಿಎಂ ಯೋಗಿ ಆದಿತ್ಯನಾಥ್ ಗೆ ಮನವಿ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ಭೋಗನಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಮತ್ತು ವರದಕ್ಷಿಣೆ ಕಿರುಕುಳಕ್ಕೆ ಒಳಗಾದ ಅತ್ತೆಯಂದಿರಿಂದ ರಕ್ಷಣೆ ನೀಡುವಂತೆ ಒತ್ತಾಯಿಸಿ ಸಂತ್ರಸ್ತೆ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಅರ್ಷದ್ ಎನ್ನುವ ವ್ಯಕ್ತಿ ಉತ್ತರ ಪ್ರದೇಶದ ಕಾನ್ಪುರ ಕೊಟ್ವಾಲಿ ಪ್ರದೇಶದ ಪುಖ್ರಾಯ ಪಟ್ಟಣದಿಂದ ಬಂದವರು ಮತ್ತು ರಾಜಸ್ಥಾನದ ಕೋಟಾದಲ್ಲಿ ಮಹೀಂದ್ರಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಕೆಲವು ಸಮಯದಿಂದ ಭೋಪಾಲ್‌ನಲ್ಲಿ ಮನೆಯಿಂದಲೇ ಕೆಲಸ ಮಾಡುತ್ತಿದ್ದನು. ಅರ್ಷದ್…
ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳು ಮೀಸೆ, ಗಡ್ಡ ಬಿಟ್ಟಿದ್ದಾರೆ ಎಂಬ ನೆಪ ಹೇಳಿ ಎಲ್ಲರನ್ನೂ ಹೊರಗೆ ಕಳುಹಿಸಿ ಕೆಲಸದಿಂದ ವಜಾಗೊಳಿಸಿದ ಘಟನೆ ಹಿಮಾಚಲ ಪ್ರದೇಶದ ಪರ್ವಾನೂ ಇಂಡಸ್ಟ್ರಿಯಲ್ ಏರಿಯಾದ ಕಂಪನಿಯೊಂದಲ್ಲಿ ನಡೆದಿದೆ. ಕಂಪನಿಗಳಲ್ಲಿ ಉದ್ಯೋಗಿಗಳನ್ನು ವಜಾಗೊಳಿಸುವುದರ ಹಿಂದೆ ಬಲವಾದ ಕಾರಣವಿರುತ್ತದೆ. ಆದರೆ ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಕಂಪನಿಯೊಂದು ವಿಚಿತ್ರ ಕಾರಣ ನೀಡಿ 80 ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿದೆ. ಹಿಮಾಚಲ ಪ್ರದೇಶದ ಪರ್ವಾನೂ ಇಂಡಸ್ಟ್ರಿಯಲ್ ಏರಿಯಾದ ಕಂಪನಿಯೊಂದು ಕೆಲವು ವರ್ಷಗಳ ಹಿಂದೆ 80 ಕಾರ್ಮಿಕರನ್ನು ವಜಾಗೊಳಿಸಿತ್ತು. ಇದು ಬಹಳ ತಡವಾಗಿ ಬೆಳಕಿಗೆ ಬಂದಿದೆ. ತನ್ನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳು ಮೀಸೆ, ಗಡ್ಡ ಬಿಟ್ಟಿದ್ದಾರೆ ಎಂಬ ನೆಪ ಹೇಳಿ ಎಲ್ಲರನ್ನೂ ಹೊರಗೆ ಕಳುಹಿಸಿದ್ದರು. ಕಾರ್ಮಿಕರು ಆಡಳಿತ ಮಂಡಳಿಯೊಂದಿಗೆ ಮಾತನಾಡಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಇದರಿಂದ ಕಾರ್ಮಿಕರು ಕಂಪನಿ ಎದುರು ಧರಣಿ ನಡೆಸಿದರು. ಈ ಹಿನ್ನೆಲೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿತು. ಗಡ್ಡ, ಮೀಸೆ ತೆಗೆದರೆ ಮಾತ್ರ ಡ್ಯೂಟಿಗೆ ಸೇರಿಸಲಾಗುವುದು,…
ಮಳೆ ಆಗದೆ ನೀರಿಗಾಗಿ ಎಲ್ಲಿಲ್ಲದ ಸಂಕಷ್ಟ ಎದುರಾಗುತ್ತಿದ್ದು, ಜನರು ಮಳೆಗಾಗಿ ಅವರ ಸಂಪ್ರದಾಯದಂತೆ ಮೈಸೂರಿನ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಪ್ಪೆಗಳಿಗೆ ಮದುವೆ ಮಾಡಿದ್ದಾರೆ. ರಾಜ್ಯಾದ್ಯಂತ ಇನ್ನೆರಡು ದಿನಗಳು ಒಣಹವೆ ಇರುವ ಸಾಧ್ಯತೆ ಇದೆ. ಏ.2–3ರಂದು ಶುಷ್ಕ ವಾತಾವರಣ ಇದ್ದರೆ, ಏಪ್ರಿಲ್ 4ರಂದು ಚಾಮರಾಜನಗರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಇವೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿವೆ. ಮುಂದಿನ 5 ದಿನಗಳವರೆಗೆ ಕರ್ನಾಟಕದ ಉತ್ತರ ಒಳಭಾಗದಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಸಿಲ ತಾಪಕ್ಕೆ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ರಾಯಚೂರು: ರಾಜ್ಯದಲ್ಲಿ ಬಿರು ಬಿಸಿಲಿನ ತಾಪಕ್ಕೆ ರೈತನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಯಚೂರಲ್ಲಿ ನಡೆದಿದೆ. ರಾಯಚೂರು ತಾಲೂಕಿನ ಜಾಲಿಬೆಂಚಿ ಗ್ರಾಮದ ಹನುಮಂತು(45) ಎಂಬ ರೈತ, ಹೊಲದಲ್ಲಿ ಕೆಲಸಕ್ಕೆಂದು ತೆರಳಿದ್ದರು. ಹೊಲದಿಂದ ಬಣವೆ ಕೆಲಸ ಮುಗಿಸಿಕೊಂಡು ಮನೆಗೆ ವಾಪಾಸ್ ಆದ ಬಳಿಕ, ನೀರು ಕುಡಿಯುತ್ತಿದ್ದಂತೆ ಕುಸಿದು ಬಿದ್ದು, ಸಾವನ್ನಪ್ಪಿದ್ದಾರೆ. ರೈತ ಹನುಮಂತು ಬಿಸಿಲ ತಾಪಕ್ಕೆ ಬಸವಳಿದು ಕುಸಿದು ಬಿದ್ದು ಸಾವನ್ನಪ್ಪಿರೋದಾಗಿ ಹೇಳಲಾಗುತ್ತಿದೆ. ಈ ಹಠಾತ್ ರೈತ ಹನುಮಂತು ಸಾವಿನಿಂದಾಗಿ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಅಲ್ಲದೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬಾದಾಮಿ: ಉದ್ಯೋಗ ಖಾತ್ರಿ ಯೋಜನೆಯ ವೈಫಲ್ಯದಿಂದಾಗಿ ಬಾದಾಮಿ ತಾಲೂಕಿನ ಕೊನೆಯ ಸೀಮೆಯಲ್ಲಿನ ಬೆಟ್ಟದ ಮೇಲಿರುವ ಅನಂತಗಿರಿ ತಾಂಡೆಯಲ್ಲಿನ ಜನರು ತಮ್ಮ ಮನೆಗಳಿಗೆ ಬೀಗ ಹಾಕಿ ಗುಳೆ ಹೋಗಿರುವ ಬಗ್ಗೆ ವರದಿಯಾಗಿದೆ. ಖಾತ್ರಿ ಯೋಜನೆಯಲ್ಲಿ ಸರಿಯಾಗಿ ಕೆಲಸ ಸಿಗುತ್ತಿಲ್ಲ ಒಂದು ವೇಳೆ ಕೆಲಸ ಸಿಕ್ಕರೂ ಸರಿಯಾಗಿ ಸಂಬಳ ಸಿಗುತ್ತಿಲ್ಲ, ಹೀಗಾಗಿ ತಾಂಡೆಯಲ್ಲಿನ 20ಕ್ಕೂ ಅಧಿಕ ಕುಟುಂಬಗಳು ಜನರು ಕೆಲಸವನ್ನು ಅರಸಿಕೊಂಡು ಮಂಗಳೂರು, ಉಡುಪಿ, ಗೋವಾ, ಶಿವಮೊಗ್ಗಾ ಮೊದಲಾದ ಕಡೆಗೆ ಗುಳೆ ಹೋಗಿದ್ದಾರೆ ಎಂದು ಹೇಳಲಾಗಿದೆ. ಮನೆಯಲ್ಲಿ ವಯಸ್ಸಾದ ಪೋಷಕರನ್ನು ಬಿಟ್ಟು ಕಾರ್ಮಿಕರು ಮನೆ ಬಿಟ್ಟು ಕೆಲಸಕ್ಕೆ ಹೋಗಿದ್ದಾರೆ. ನೆರೆ ಹೊರೆಯವರ ಸಹಕಾರದೊಂದಿಗೆ ವೃದ್ಧರು ಬದುಕುವಂತಾಗಿದೆ. ಇಲ್ಲೇ ಉತ್ತಮ ಪಗಾರ ಕೊಟ್ರೆ ಊರಲ್ಲೇ ಕೆಲಸ ಮಾಡುತ್ತಾರೆ, ತಿಂಗಳಲ್ಲಿ ವಾರದವರೆಗೆ ಕೆಲಸ ಕೊಡುತ್ತಾರೆ ಮತ್ತೆ ಕೆಲಸ ಇರುವುದಿಲ್ಲ, ದುಡಿಯುವ ಜನ ಏನು ತಿನ್ನಬೇಕು ಎಂದು ಗ್ರಾಮದ ಮಹಿಳೆಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಬಾಗಲಕೋಟೆ/ರಬಕವಿ ಬನಹಟ್ಟಿ: ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಬಾರಿ ಬಿಸಿಲಿನ ಪ್ರಮಾಣ ಹೆಚ್ಚಿದ್ದರಿಂದ ಇಲ್ಲಿನ ಮಂಗಳವಾರ ಪೇಟೆಯಲ್ಲಿ ಹೂವಿನ ವ್ಯಾಪಾರಿಗಳು ಅವುಗಳ ರಕ್ಷಣೆಗಾಗಿ ಪ್ಲಾಸ್ಟಿಕ್ ಹೊದಿಕೆಗಳ ಮೂಲಕ ತಮ್ಮ ರಕ್ಷಣೆಗೆ ಮುಂದಾಗಿದ್ದಾರೆ. ‘ಒಂದು ತಿಂಗಳಿಗಿಂತ ಹೆಚ್ಚು ಕಾಲ ಬಿಸಿಲಿನ ಬೇಗೆಯಿರುವುದರಿಂದ ಹೂ ಮತ್ತು ಹೂಮಾಲೆಗಳ ವ್ಯಾಪಾರ ಮಾಡುವುದು ಸಮಸ್ಯೆಯಾಗಿದೆ. ಇದರಿಂದ ಬಹಳಷ್ಟು ಹಾನಿಯನ್ನು ಕೂಡಾ ಅನುಭವಿಸುತ್ತಿದ್ದೇವೆ. ಅಧಿಕ ಬಿಸಿಲಿನ ಪ್ರಮಾಣದಿಂದಾಗಿ ಸಾಕಷ್ಟು ಹಾನಿಯನ್ನು ಕೂಡಾ ಅನುಭವಿಸುತ್ತಿದ್ದೇವೆ ಎನ್ನುವುದು ಹೂ ವ್ಯಾಪಾರಿಗಳ ಅಳಲಾಗಿದೆ. ಹೂ ಮಾಲೆಗಳು ಬಾಡುತ್ತಿವೆ. ಆದ್ದರಿಂದ ಅಂಗಡಿಗಳ ಮೇಲ್ಭಾಗದಲ್ಲಿ ಪ್ಲಾಸ್ಟಿಕ್ ಹೊದಿಕೆಗಳನ್ನು ಹಾಕಿದ್ದೇವೆ. ದಾವಣಗೇರಿ ಮತ್ತು ಬೆಂಗಳೂರುಗಳಿಂದ ಹೂ ಮತ್ತು ಹೂಮಾಲೆಗಳನ್ನು ತರಿಸಿಕೊಳ್ಳುತ್ತಿದ್ಧೇವೆ’ ಎನ್ನುತ್ತಾರೆ ಹೂ ವ್ಯಾಪಾರಸ್ಥರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA