Subscribe to Updates
Get the latest creative news from FooBar about art, design and business.
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
- ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ
- ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ
- ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ
- ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ
- ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವುದಕ್ಕೆ ಕೇಂದ್ರದ ಪ್ರಯತ್ನ: ಡಾ.ಜಿ.ಪರಮೇಶ್ವರ
- ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
Author: admin
ಮಾನಸಿಕ ಅಸ್ವಸ್ಥ 15 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದರಿಂದ ಆಕೆ ಗರ್ಭಿಣಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ 44 ವರ್ಷದ ವ್ಯಕ್ತಿಯೊಬ್ಬನಿಗೆ ಕೇರಳ ನ್ಯಾಯಾಲಯವು ಸೋಮವಾರ ವಿವಿಧ ಪ್ರಕರಣಗಳ ಅಡಿಯಲ್ಲಿ ಒಟ್ಟು 106 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ದೇವಿಕುಲಂ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿರಾಜುದ್ದೀನ್ ಪಿ.ಎ. ಅವರು ಸಂತ್ರಸ್ತೆಯ ತಾಯಿಯ ಸ್ನೇಹಿತನಾಗಿದ್ದ ವ್ಯಕ್ತಿಗೆ ಒಟ್ಟು 106 ವರ್ಷಗಳ ಕಾಲ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ವಿವಿಧ ಶಿಕ್ಷೆಗಳನ್ನು ವಿಧಿಸಿದ್ದಾರೆ ಎನ್ನಲಾಗಿದೆ. ಆರೋಪಿಯು ದಂಡವನ್ನು ಪಾವತಿಸಿದರೆ ಇಡುಕ್ಕಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂತ್ರಸ್ತ ಪರಿಹಾರ ಯೋಜನೆಯಿಂದ ಬಾಲಕಿಗೆ ಪರಿಹಾರವಾಗಿ ಪಾವತಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ. 2022ರಲ್ಲಿ ತ್ರಿಶೂರ್ ಮೂಲದ ಆರೋಪಿ ಕೆಲಸದ ನಿಮಿತ್ತ ಅಡಿಮಾಲಿಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ. ಹುಡುಗಿಯ ತಾಯಿಯೊಂದಿಗೆ ಹೊಟೇಲ್ ನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದ ಈತ ಆಕೆಯ ಜೊತೆ ಸ್ನೇಹ ಬೆಳೆಸಿದ ಅನಂತರ ಆಕೆಯ ಮನೆಯಲ್ಲಿಯೇ ಇದ್ದ…
ಚಿಲ್ಲರೆ ಹಣಕ್ಕಾಗಿ ಕರ್ತವ್ಯ ನಿರತ ಮಹಿಳಾ ಕಂಡೆಕ್ಟರ್ ಮೇಲೆ ಯುವಕನೊಬ್ಬ ಹಲ್ಲೆ ನಡೆಸಿದ ಘಟನೆ ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ. ನಗರದ 2ನೇ ಘಟಕದಲ್ಲಿ ನಿರ್ವಾಹಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶೋಭಾ ಗಾಣಗಿ ಎಂಬುವರು ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ. ಬೆಳಗಾವಿ ಹಾಗೂ ಹೊನಗಾ ನಡುವೆ ಸಂಚರಿಸುವ ನಗರ ಸಾರಿಗೆ ಬಸ್ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಯಮನಾಪೂರ ಗ್ರಾಮದಿಂದ ಬಸನಲ್ಲಿ ಸಂಚರಿಸುತ್ತಿದ್ದ ಯುವಕ ಮಹಿಳಾ ನಿರ್ವಾಹಕಿಯೊಂದಿಗೆ ಬಸ್ ನಲ್ಲಿ ಚಿಲ್ಲರೆ ಕೊಡುವ ವಿಚಾರದಲ್ಲಿ ಯುವಕ ಗಲಾಟೆ ನಡೆಸಿದ್ದಾನೆ. ಅಲ್ಲದೇ ಯುವಕ ಅವ್ಯಾಚ್ಛ ಶಬ್ಧಗಳಿಂದ ನಿಂದಿಸುವಾಗ ಯಾರಿಗೆ ಬೈಯುತ್ತಿರುವೆ ಎಂದು ಜೋರು ಮಾಡಿ ಕಂಡಕ್ಟರ್ ಕೇಳಿದ್ದಾರೆ ಅಷ್ಟಕ್ಕೇ ಯುವಕ ಲೇಡಿ ಕಂಡಕ್ಟರ್ ಗೆ ಕಪಾಳಮೋಕ್ಷ ಮಾಡಿದ್ದಾನೆ. ಬಳಿಕ ನಿರ್ವಾಹಕಿಗೆ ಅವ್ಯಾಚ್ಛ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಇತ್ತೀಚೆಗಷ್ಟೇ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳ ಶವ ಅನುಮಾನಾಸ್ಪದವಾಗಿ ಮನೆಯ ಬೆಡ್ ರೂಮ್ ನಲ್ಲಿ ಪತ್ತೆಯಾಗಿರುವ ಘಟನೆ ರಾಯಚೂರು ತಾಲ್ಲೂಕಿನ ಯರಮರಸ್ ಬಳಿಯ ದಂಡ್ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಸುನೀತಾ (26) ಎಂದು ಗುರುತಿಸಲಾಗಿದ್ದು, ಯುವತಿಯ ಶವ ರೂಮ್ ನಲ್ಲಿ ರಕ್ತ ಸಿಕ್ತವಾಗಿ ಪತ್ತೆಯಾಗಿದ್ದು, ಯುವತಿ ದೇಹದ ಮೇಲೆ ಚಾಕುವಿನಿಂದ ಹಲ್ಲೆಯಾದ ಗುರುತುಗಳು ಕಂಡು ಬಂದಿದೆ. ಯುವತಿಯ ಸಾವು ಕೊಲೆ ಎಂಬ ಸಂಶಯ ವ್ಯಕ್ತಪಡಿಸಿ ಆಕೆಯ ಅಕ್ಕ ದೂರು ದಾಖಲಿಸಿದ್ದಾರೆ. ಇತ್ತೀಚೆಗಷ್ಟೇ ಯುವತಿಯ ನಿಶ್ಚಿತಾರ್ಥವಾಗಿತ್ತು. ಒಲ್ಲದ ಮನಸ್ಸಿನಿಂದ ಯುವತಿ ಮದುವೆಗೆ ಒಪ್ಪಿಕೊಂಡಿದ್ದಳು ಎನ್ನಲಾಗಿದೆ. ಮನೆಯವರ ಮದುವೆ ಪ್ರಸ್ತಾಪಕ್ಕೆ ಯುವತಿ ಮನನೊಂದಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಆದರೆ ಸಾವಿನ ರೀತಿ ಬೇರೆಯೇ ಕಥೆ ಹೇಳುವಂತಿತ್ತು. ಈ ಸಂಬಂಧ ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…
ಮತದಾನ ಮಾಡಲು ಗಲ್ಫ್ ರಾಷ್ಟ್ರದ ಮುಸ್ಲಿಂ ಮತದಾರರಿಗೆ ಭಟ್ಕಳ ಜಮಾಯತ್ ಗಳು ಗಾಳ ಹಾಕುತ್ತಿರುವ ವಿಚಾರವೊಂದು ವರದಿಯಾಗಿದೆ. ವಿದೇಶದಲ್ಲಿ ಇರುವ ಮುಸ್ಲಿಂ ಮತದಾರರಿಗೆ ವಿಮಾನ ಟಿಕೆಟ್ ಆಫರ್ ನೀಡಲಾಗುತ್ತಿದೆ ಎಂಬ ಆರೋಪವೊಂದು ಕೇಳಿಬಂದಿದೆ. ಗಲ್ಫ್ ನಲ್ಲಿ ಭಟ್ಕಳದ 1250 ಕ್ಕೂ ಹೆಚ್ಚು ಮತದಾರರು ಇದ್ದಾರೆ. ಮುಸ್ಲಿಂ ಮತದಾನದ ಸಂಖ್ಯೆ ಹೆಚ್ಚಳವಾಗಬೇಕು. ಜಾತ್ಯಾತೀತ ವ್ಯಕ್ತಿಗಳು ಆಯ್ಕೆಯಾಗಬೇಕು ಎಂಬ ಉದ್ದೇಶದಿಂದ ಈ ಆಫರ್ ನೀಡಲಾಗುತ್ತಿದೆ ಎನ್ನಲಾಗಿದೆ. ಜಮಾಯತ್ ಈಗಾಗಲೇ ಸೌದಿ ಅರೇಬಿಯಾದಲ್ಲಿ ತಮ್ಮ ಸದಸ್ಯರು ಮತದಾನ ಮಾಡುವಂತೆ ಮನವಿ ಮಾಡುವ ಮೂಲಕ ಪ್ರಕಟಣೆ ಹೊರಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಇಡೀ ಕುಟುಂಬ ಮದುವೆಯ ಸಡಗರದಲ್ಲಿ ಸಂಭ್ರಮಿಸುತ್ತಿದ್ದರೆ, ಆ ಕುಟುಂಬಕ್ಕೆ ನೇಣು ಹಾಕಿಕೊಂಡು ಶಾಕ್ ನೀಡಿದ್ದರು ಖ್ಯಾತ ಭೋಜಪುರಿ ನಟಿ ಅಮೃತಾ ಪಾಂಡೆ. ಮುಂಬೈನಲ್ಲಿ ವಾಸವಿದ್ದ ಅಮೃತಾ, ಮನೆಯಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾಗಲ್ಪುರಕ್ಕೆ ಬಂದಿದ್ದರು. ಈ ಸಮಯದಲ್ಲಿ ಅಪಾರ್ಟ್‍ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಇಂಥದ್ದೇ ಕಾರಣ ಎಂದು ತಿಳಿದು ಬಂದಿಲ್ಲ. ಆದರೆ, ಸಾವಿಗೂ ಮುನ್ನ ಅವರು ವಾಟ್ಸಪ್ ಸ್ಟೇಟಸ್ ಹಾಕಿದ್ದು, ಅದು ಅನುಮಾನ ಮೂಡಿಸುವಂತಿತ್ತು. ಸ್ಟೇಟಸ್ ಹಾಕಿ ಒಂದು ಗಂಟೆ ನಂತರ ಅಮೃತಾ ಶವವಾಗಿ ಪತ್ತೆಯಾಗಿದ್ದರು. ಈ ವಾಟ್ಸ್ ಅಪ್ ಸ್ಟೇಟಸ್ ನಲ್ಲಿ ದೋಣಿಯ ಕುರಿತಾದ ಬರಹವಿತ್ತು. ಅವನ ಜೀವನ 2 ದೋಣಿಯಲ್ಲಿ ನಡೆಯುತ್ತಿದೆ. ನಾನು ನನ್ನ ದೋಣಿಯನ್ನು ಮುಳುಗಿಸಿಕೊಳ್ಳುವ ಮೂಲಕ, ಅವನ ದೋಣಿಗೆ ಸುಗಮ ದಾರಿ ಮಾಡಿಕೊಡುವೆ ಎಂದು ಬರೆದುಕೊಂಡಿದ್ದರು. ಈ ದೋಣಿಯ ಅರ್ಥ ಅವರ ಪತಿ ಎಂದು ಹೇಳಲಾಗುತ್ತಿದೆ. ನಟಿಯ ಪತಿಗೆ ಮತ್ತೊಂದು ಸಂಬಂಧವಿತ್ತಾ? ಇದೇ ಕಾರಣಕ್ಕೆ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ…
ಸೂಪರ್ ಪವರ್ ಆಗಲು ಭಾರತ ಕನಸು ಕಾಣುತ್ತಿರುವ ಹೊತ್ತಲ್ಲಿ ಪಾಕಿಸ್ತಾನವು ದಿವಾಳಿತನದಿಂದ ತಪ್ಪಿಸಿಕೊಳ್ಳಲು ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ ಬೇಸರ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಾತನಾಡಿ, ಭಾರತ ಮತ್ತು ನಮ್ಮನ್ನು ಹೋಲಿಸಿ ನೋಡಿ. ಎರಡೂ ದೇಶಗಳಿಗೆ ಸ್ವಾತಂತ್ರ್ಯ ಸಿಕ್ಕಿದ್ದು ಒಂದೇ ದಿನ. ಆದರೆ ಇಂದು ಅವರು (ಭಾರತ) ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ದಾರೆ. ನಾವು ದಿವಾಳಿತನವನ್ನು ತಪ್ಪಿಸಲು ಭಿಕ್ಷೆ ಬೇಡುತ್ತಿದ್ದೇವೆ ಎಂದಿದ್ದಾರೆ. ನಿರ್ಧಾರಗಳನ್ನು ಬೇರೆಯವರು ಮಾಡುತ್ತಾರೆ. ಆದರೆ ಸಮಸ್ಯೆಗಳಿಗೆ ರಾಜಕಾರಣಿಗಳೇ ಕಾರಣ. ನಾವು ಇಸ್ಲಾಂ ಹೆಸರಿನಲ್ಲಿ ದೇಶವನ್ನು ಪಡೆದುಕೊಂಡಿದ್ದೇವೆ. ಆದರೆ ಇಂದು ಜಾತ್ಯತೀತ ರಾಜ್ಯವಾಗಿದೆ. 1973ರಿಂದ ಸಿಐಐನ ಒಂದೇ ಒಂದು ಶಿಫಾರಸನ್ನೂ ಜಾರಿಗೆ ತಂದಿಲ್ಲ. ನಾವು ಇಸ್ಲಾಮಿಕ್ ದೇಶವಾಗುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್…
ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ವಿರುದ್ಧ ಸಹೋದರ ಕುಮಾರ್ ಬಂಗಾರಪ್ಪ ವಾಗ್ದಾಳಿ ನಡೆಸಿದ್ದು, ಗ್ರಾಮ ಪಂಚಾಯ್ತಿ ಚುನಾವಣೆಗೆ ನಿಂತ್ರೂ ಗೀತಾ ಗೆಲ್ಲಲ್ಲ ಎಂದು ಗುಡುಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ಪರ ಮತಯಾಚಿಸಿ ಮಾತನಾಡಿದ ಅವರು, ಗೀತಾ ಗ್ರಾಮ ಪಂಚಾಯ್ತಿ ಚುನಾವಣೆಗೆ ನಿಂತ್ರೂ ಗೆಲ್ಲಲ್ಲ ಅಂತ ವ್ಯಂಗ್ಯವಾಡಿದರು. ಡಾ. ರಾಜಕುಮಾರ್ ರವರಿಗೆ ರಾಜಕೀಯದ ಮೇಲೆ ಆಸೆ ಇತ್ತು. ಅದಕ್ಕೆ ಅವರ ಸೊಸೆಯನ್ನು ನಾವು ರಾಜಕೀಯಕ್ಕೆ ತಂದಿದ್ದೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಡಾ. ರಾಜ್ ಕುಮಾರ್ ಅವರಿಗೆ ಈ ರೀತಿಯ ಆಸೆ ಇರಲಿಲ್ಲ ಅಂತ ಕುಮಾರ್ ಬಂಗಾರಪ್ಪ ಹೇಳಿದ್ದಾರೆ. ಕಾಂಗ್ರೆಸ್ ಅವರು ತಂದಿದ್ದು ಬರಗಾಲ. ಚುನಾವಣೆಗೆ ನಿಲ್ಲುವವರ ಮತವೇ ಇಲ್ಲಿ ಇಲ್ಲ. ಚುನಾವಣೆಗೆ ನಿಲ್ಲಬೇಕು ಎಂದು ಗೊತ್ತಿತ್ತು ಅಲ್ವಾ? ಆಗಲಾದರೂ ಸಹ ತಮ್ಮ ಮತವನ್ನು ಬದಲಾಯಿಸಲಿಲ್ಲ. ಈಗ ಅವರ ಮತ ಇಲ್ಲಿ ಇಲ್ಲ, ಇನ್ನೂ ನಮ್ಮ ಮತ ಹೇಗೆ ಬರುತ್ತದೆ ಎಂದು ಕುಮಾರ್ ಬಂಗಾರಪ್ಪ ಪ್ರಶ್ನಿಸಿದರು.…
ಹಾವೇರಿ: ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ರೋಡ್ ಬ್ಯಾಡಗಿಯಲ್ಲಿ ಶೋದಲ್ಲಿ ಭಾಗವಹಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ ಮತ್ತು ಕಮಿಷನ್ ಎಂದರ್ಥ ಎಂದು ಲೇವಡಿ ಮಾಡಿದ ಅವರು, ಕುಟುಂಬ ರಾಜಕಾರಣ ಮತ್ತು ಭ್ರಷ್ಟರನ್ನು ರಕ್ಷಿಸಲು INDIA ಮೈತ್ರಿಕೂಟ ಮಾಡಿಕೊಳ್ಳಲಾಗಿದೆ ಎಂದು ಆರೋಪ ಮಾಡಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ ನಮ್ಮ ನಾಯಕ ಮೋದಿ ಪ್ರಧಾನಿಯಾಗುತ್ತಾರೆ ಎಂದು ನಾವು ಹೇಳುತ್ತೇವೆ. ಒಂದು ವೇಳೆ ವಿರೋಧ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ಐದು ಪ್ರಧಾನಿಗಳು ಇರಲಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು. ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿ ಯಾರು? ಅವರಿಗೆ ಕೋವಿಡ್ ನಂತಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿದ ನರೇಂದ್ರ ಮೋದಿ ಅವರಂತಹ ನಾಯಕರಿದ್ದಾರೆಯೇ? ಎಂದು ಪ್ರಶ್ನಿಸಿದ ಜೆಪಿ ನಡ್ಡಾ, ವಿಪಕ್ಷಗಳ ಮೈತ್ರಿಕೂಟ ಕೇವಲ ಅಧಿಕಾರಕ್ಕಾಗಿ, ಅವರು ನಿಮ್ಮೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ. ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರ ರಕ್ಷಿಸುವ…
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ಕೇಸ್ ಗೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಹಾಗೂ ಕುಮಾರಸ್ವಾಮಿ ನಡುವೆ ಮಾತಿನ ಯುದ್ಧ ಮುಂದುವರಿದಿದೆ. ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ನೂರಾರು ಮಹಿಳೆಯರ ಜೊತೆ ರಾಸಲೀಲೆ ನಡೆಸಿರುವ ವಿಡಿಯೋಗಳ ಹಿಂದೆ ಡಿಕೆಶಿ ಕೈವಾಡ ಇದೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದು, ಈ ಆರೋಪಕ್ಕೆ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಮಹಿಳೆಯರ ಬಗ್ಗೆ ಅಪಾರ ಗೌರವ ಇದೆ, ಇಂಥ ಚಿಲ್ಲರೆ ಕೆಲಸಗಳನ್ನು ಯಾವತ್ತೂ ಮಾಡಲ್ಲ. ಪೆನ್ ಡ್ರೈವ್ ಇದೆ ಎಂದು ಹೆದರಿಸಲ್ಲ. ನಾವು ಚುನಾವಣೆಯನ್ನ ಎದುರಿಸುತ್ತೇವೆ. ನೇರವಾಗಿ ಅಸಂಬ್ಲಿಯಲ್ಲಿ ಚರ್ಚೆ ಮಾಡುತ್ತೇವೆ. ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ. ಇಂಥವರನ್ನ ಭಗವಂತನೂ ಕ್ಷಮಿಸಲ್ಲ. ಕುಮಾರಸ್ವಾಮಿ ಅವರಿಗೆ ನನ್ನನ್ನು ನೆನಪಿಸಿಕೊಂಡಿಲ್ಲ ಅಂದ್ರೆ ನಿದ್ರೆ ಬರಲ್ಲ. ಪ್ರಜ್ವಲ್ ರೇವಣ್ಣ ಅವರ ಪ್ರಕರಣದ ಬಗ್ಗೆ ಎಸ್ ಐಟಿ ತನಿಖೆ ನಡೆಯುತ್ತಿದೆ. ಕಾನೂನು ಪ್ರಕಾರ ಏನು ಆಗಬೇಕೋ, ಅದು ಆಗುತ್ತದೆ. ಹಾಗೆಯೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವಾಗ…
ತುರುವೇಕೆರೆ: ಅಂತರ್ಜಲ ಮಟ್ಟ ಕುಸಿಯುತ್ತಿದ್ದರೂ ಅಕ್ರಮ ಮಣ್ಣು ಮತ್ತು ಮರಳು ಗಣಿಗಾರಿಕೆ ನಡೆಯುತ್ತಿರುವ ಘಟನೆ ತುರುವೇಕೆರೆ ತಾಲೂಕಿನ ಸೂಳೆಕೆರೆ ಕೆರೆಯಲ್ಲಿ ನಡೆಯುತ್ತಿದೆ. ಹಾಡಹಗಲೇ ಮಣ್ಣು ಗಣಿಗಾರಿಕೆ ನಡೆಯುತ್ತಿದ್ದು, ಇದಕ್ಕಾಗಿ ಹತ್ತಾರು ಇಟಾಚಿ, 50ಕ್ಕೂ ಹೆಚ್ಚು ಜೆಸಿಬಿ, ನೂರಾರು ಟ್ರ್ಯಾಕ್ಟರ್ ಗಳನ್ನು ಬಳಸಲಾಗುತ್ತಿದೆ. ಅಧಿಕಾರಿಗಳ ಕಣ್ಣ ಮುಂದೆಯೇ ಇಷ್ಟೆಲ್ಲ ಘಟನೆಗಳು ನಡೆದರೂ ಸಂಬಂಧಪಟ್ಟ ತಾಲೂಕು ಆಡಳಿತ ಮತ್ತು ಹೇಮಾವತಿ ಇಲಾಖೆಯ ಅಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಹೆಸರಿನಲ್ಲಿ ನಡೆಯುತ್ತಿರುವ ಈ ಗಣಿಗಾರಿಕೆಯ ದಂಧೆಯಲ್ಲಿ ಅಧಿಕಾರಿಗಳು ಕಮಿಷನ್ ಪಡೆಯುತ್ತಿದ್ದಾರೋ ಎಂಬ ಅನುಮಾನದ ಸಾರ್ವಜನಿಕ ವಲಯದಲ್ಲಿ ಮೂಡಿದೆ . ಸಾರ್ವಜನಿಕರು ಹೇಳುವಂತೆ ತುರುವೇಕೆರೆ ತಾಲೂಕಿಗೆ ಮಾತ್ರವಲ್ಲದೆ ಬೇರೆ ತಾಲೂಕಿಗೂ ಟಿಪ್ಪರ್ ಲಾರಿಗಳ ಮುಖಾಂತರ ಮಣ್ಣು ರವಾನೆಯಾಗುತ್ತಿರುವ ಬಗ್ಗೆ ಅನುಮಾನವ್ಯಕ್ತಪಡಿಸಿದ್ದಾರೆ. ಇನ್ನಾದರೂ ಈ ಗಣಿಕಾರಿಕೆಗೆ ಸಂಬಂಧಪಟ್ಟ ಅಧಿಕಾರಗಳು ಸೂಳೆಕೆರೆಯತ್ತ ಗಮನಹರಿಸಿ ಕೆರೆಯ ಒಡಲನ್ನು ಉಳಿಸಬೇಕಾಗಿದೆ. ವರದಿ: ಸುರೇಶ್ ಬಾಬು ಎಂ., ತುರುವೇಕೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…