Author: admin

ಮೈಸೂರು: ಧರ್ಮಾಂಧರು ಮಾತ್ರ ಬಾನು ಮುಷ್ತಾಕ್‌ ಹೆಸರನ್ನ ವಿರೋಧಿಸುತ್ತಾರೆ ಅಂತ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕನ್ನಡಾಂಬೆಯ ಬಗ್ಗೆ ಬಾನು ಮುಷ್ತಾಕ್ ನೀಡಿರುವ ಹಳೇ ಹೇಳಿಕೆಗೂ ಇದಕ್ಕೂ ಏನು ಸಂಬಂಧ? ಬಿಜೆಪಿ ಕುಂಟು ನೆಪ ಹುಡುಕುತ್ತಿದ್ದಾರೆ ಅಷ್ಟೇ. ಯಾವತ್ತೋ ಏನೋ ಹೇಳಿದ್ದಾರೆ ಅಂತ ಅದನ್ನ ಇಲ್ಲಿಗೆ ಲಿಂಕ್ ಮಾಡುವುದು ಎಷ್ಟು ಸರಿ? ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಆಯ್ಕೆಯನ್ನ ವಿರೋಧಿಸುತ್ತಾರೆ ಎಂದು ತಿರುಗೇಟು ನೀಡಿದರು. ಬೆರಳಣಿಕೆಯ ಮಂದಿಗೆ ಮಾತ್ರ ಬೂಕರ್ ಪ್ರಶಸ್ತಿ ಬಂದಿದೆ. ನಾನೇ ಅವರ ಹೆಸರನ್ನ ಆಯ್ಕೆ ಮಾಡಿದ್ದೇನೆ. ಉದ್ಘಾಟಕರು ದನ ತಿನ್ನುವುದನ್ನ ಬಿಜೆಪಿಯವರು ನೋಡಿದ್ದಾರಾ? ಅವರನ್ನ ವಿರೋಧಿಸಲೇಬೇಕೆಂದು ವಿರೋಧ ಮಾಡ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಉಡುಪಿ: 216 ಗಂಟೆಗಳ ಕಾಲ ನಿರಂತರವಾಗಿ ಭರತನಾಟ್ಯ ಪ್ರದರ್ಶಿಸಿದ ಉಡುಪಿಯ ವಿದುಷಿ ದೀಕ್ಷಾ ವಿ. ಅಧಿಕೃತವಾಗಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ಗೆ ಪ್ರವೇಶಿಸಿದ್ದಾರೆ. ದೀಕ್ಷಾ ಅವರ ಭರತನಾಟ್ಯ ಮ್ಯಾರಥಾನ್ ಆಗಸ್ಟ್ 21ರಂದು ಮಧ್ಯಾಹ್ನ 3:30ಕ್ಕೆ ಅಜ್ಜರಕಾಡಿನ ಡಾ. ಜಿ. ಶಂಕರ್ ಮಹಿಳಾ ಕಾಲೇಜಿನ ಸ್ನಾತಕೋತ್ತರ ಸಭಾಂಗಣದಲ್ಲಿ ಪ್ರಾರಂಭವಾಯಿತು. ಆಗಸ್ಟ್ 30 ರಂದು ಅದೇ ಸಮಯದಲ್ಲಿ ಮುಕ್ತಾಯವಾಯಿತು. ಒಂಬತ್ತು ದಿನಗಳ ನಿರಂತರ ನೃತ್ಯ ಪ್ರದರ್ಶನ ನೀಡಲಾಗಿದೆ. ದಾಖಲೆ ನಿರ್ಮಿಸುವ ದೃಢಸಂಕಲ್ಪದಿಂದ ದೀಕ್ಷಾ ಈ ಸವಾಲನ್ನು ಸ್ವೀಕರಿಸಿ ಒಂಬತ್ತು ದಿನಗಳ ಕಾಲ ನೃತ್ಯ ಮಾಡಿದ್ದಾರೆ. ದೀಕ್ಷಾ ಅವರ ಗುರು ಶ್ರೀಧರ್ ಬನ್ನಂಜೆ ಅವರು ತಮ್ಮ ಶಿಷ್ಯೆಯ ಸಮರ್ಪಣೆ ಮನೋಭಾವದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು. ನನ್ನ ಶಿಷ್ಯೆ ದೀಕ್ಷಾ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ದಾಖಲೆಯನ್ನು ಸೃಷ್ಟಿಸುವಲ್ಲಿ ಪ್ರಯತ್ನಿಸಿದ್ದು ಅದರಲ್ಲಿ ಯಶಸ್ವಿಯಾಗಿದ್ದಾರೆ. ಅವರು ಮೊದಲು ನನ್ನನ್ನು ಸಂಪರ್ಕಿಸಿದಾಗ, ನಾನು ಅವರಿಗೆ ವಿದ್ವತ್ ಪರೀಕ್ಷೆಗಳನ್ನು ಪೂರ್ಣಗೊಳಿಸಲು ಮತ್ತು ಸಂಪೂರ್ಣವಾಗಿ ತಯಾರಿ ಮಾಡಿಕೊಳ್ಳಲು ಸಲಹೆ ನೀಡಿದ್ದೇನೆ.…

Read More

ಕಲಬುರಗಿ: ‘ಸಿದ್ರಾಮುಲ್ಲಾಖಾನ್’ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿಯಾಗಿ ವಾಟ್ಸ್ ಆಪ್ ಸ್ಟೇಟಸ್ ಹಾಕಿದ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸುಂಟನೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಪ್ರವೀಣಕುಮಾರ್ ಉಡಗಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್ ಐಆರ್ ದಾಖಲಿಸಲಾಗಿದೆ.  ಪ್ರವೀಣಕುಮಾರ್ ಅವರು ಆಗಸ್ಟ್ 21ರಂದು ‘ಸಿದ್ರಾಮುಲ್ಲಾಖಾನ್’ ಎಂಬ ಬರಹದ ಜೊತೆಗೆ ಸಿದ್ದರಾಮಯ್ಯ ಅವರ ತಲೆಗೆ ಮುಸ್ಲಿಮರು ಧರಿಸುವ ಟೊಪ್ಪಿ ಹಾಕಿರುವಂತೆ ಎಡಿಟ್ ಮಾಡಲಾದ ಚಿತ್ರವನ್ನು ಸ್ಟೇಟಸ್‌ ಇಟ್ಟುಕೊಂಡಿದ್ದನ್ನು ಗಮಿನಿಸಿದ ಸುಂಟನೂರ ಗ್ರಾಮದ ಮುಖಂಡ ಮಲ್ಲಿಕಾರ್ಜುನ ಡಣ್ಣೂರ ಅವರು ಪಿಡಿಒ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಪಿಡಿಒ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಗ್ರಾಮದ ಮುಖಂಡರಾದ ಮಹಾಲಿಂಗಪ್ಪ ಹರವಾಳ, ಆಳಂದ ತಾಲೂಕು ಕುರುಬರ ಸಂಘದ ಯುವ ಘಟಕದ ಅಧ್ಯಕ್ಷ ಬೀರಣ್ಣ ಪೂಜಾರಿ ಸೇರಿ ಪಂಚಾಯಿತಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಕುರಿತು ನಿಂಬರ್ಗಾ ಠಾಣೆಯಲ್ಲಿ ಎಫ್‌ ಐಆರ್ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಸರಗೂರು: ಪಟ್ಟಣ  ಪಂಚಾಯಿತಿ ಮುಂಭಾಗದಲ್ಲಿ ಭಾನುವಾರದಂದು ಚಾಮರಾಜನಗರ ಲೋಕಸಭಾ ಸಂಸದ ಸುನೀಲ್ ಬೋಸ್  ರವರ 44 ನೇ ಹುಟ್ಟು ಹಬ್ಬವನ್ನು ಸುನೀಲ್ ಬೋಸ್ ಅಭಿಮಾನಿಗಳ ಬಳಗದ ವತಿಯಿಂದ ಸರಳವಾಗಿ ಕೇಕ್ ಕಟ್ ಮಾಡುವ ಮೂಲಕ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಚರಿಸಿದರು. ಇದೇ ಸಂದರ್ಭದಲ್ಲಿ ಸಮುದಾಯದ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲುಗಳನ್ನು ನೀಡುವ ಮೂಲಕ ಆಚರಣೆ ಮಾಡಲಾಯಿತು. ನಂತರ ಮಾತನಾಡಿದ ಮಾಜಿ ಎಪಿಎಂಸಿ ಅಧ್ಯಕ್ಷ ಹಾಗೂ ಸುನೀಲ್ ಬೋಸ್ ಅಭಿಮಾನಿಗಳ ಬಳಗದ ಅಧ್ಯಕ್ಷ ದೇವಲಾಪುರ ಸಿದ್ದರಾಜು, ಅವರ ವ್ಯಕ್ತಿತ್ವಕ್ಕೆ ಅನುಗುಣವಾಗಿ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶೋಷಿತರು, ಬಡವರು ಮತ್ತು ನಿರ್ಗತಿಕರ ಪಾಲಿಗೆ ಸುನೀಲ್ ಬೋಸ್ ಸ್ಪಂದಿಸುತ್ತಿದ್ದರು. ಇಂತಹ ಕಾರ್ಯಕ್ರಮಗಳ ಮೂಲಕ ಅವರ ಹುಟ್ಟು ಹಬ್ಬದವನ್ನು ನಿಜವಾದ ಅರ್ಥವನ್ನು ಅಭಿಮಾನಿಗಳು ನೀಡಿದ್ದಾರೆ ಎಂದರು. ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಉಸ್ತುವಾರಿ ಸಚಿವ ಡಾ.ಎಸ್.ಸಿ.ಮಹದೇವಪ್ಪರವರು ಎರಡು ತಾಲ್ಲೂಕು ಅಭಿವೃದ್ಧಿಗೊಳಿಸಲು  ಅವರು ತಾಲೂಕಿನಲ್ಲಿ ಸುಮಾರು ವರ್ಷಗಳ  ಮಂತ್ರಿಯಾಗಿ ಹಲವು ಜನಪ್ರಿಯ ಯೋಜನೆಯಗಳನ್ನು ಅನುಷ್ಠಾನಗೊಳಿಸಿದ್ದಾರೆ.…

Read More

ಬೆಂಗಳೂರು: ಅಭಿಮಾನ್‌ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮಗೊಳಿಸಲಾಗಿದೆ. ಆ ಸಮಾಧಿಯನ್ನು ಮರುಸ್ಥಾಪಿಸಬೇಕು ಮತ್ತು ಅಭಿಮಾನ್‌ ಸ್ಟುಡಿಯೋ ಜಾಗವನ್ನು ಸರ್ಕಾರ ವಾಪಸ್ಸು ಪಡೆಯಬೇಕು ಎಂದು ಡಾ.ವಿಷ್ಣುಸೇನಾ ಸಮತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಅವರಿಗೆ ಮನವಿ ಮಾಡಿದ್ದಾರೆ. ಅರಣ್ಯ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ನೆಲಸಮಗೊಳಿಸಲಾಗಿರುವ ವಿಷ್ಣು ಸಮಾಧಿಯನ್ನು ಮರು ಸ್ಥಾಪಿಸುವಂತೆ ಮನವಿ ಮಾಡಿಕೊಂಡರು. ಇದೇ ಆಗಸ್ಟ್ 7 ರಂದು ರಾತ್ರೋರಾತ್ರಿ ಅಭಿಮಾನ್ ಸ್ಡುಡಿಯೋದಲ್ಲಿದ್ದ ಕನ್ನಡದ ಮೇರುನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸಮಾಧಿಯನ್ನ ಧ್ವಂಸ ಮಾಡಲಾಗಿತ್ತು. ಈ ಕಾರಣಕ್ಕೆ ಭಾರೀ ವಿವಾದಕ್ಕೀಡಾಗಿದ್ದ ಜಾಗವನ್ನ ಇದೀಗ ಸರ್ಕಾರ ವಶಪಡಿಸಿಕೊಳ್ಳುವಂತೆ ಅರಣ್ಯ ಇಲಾಖೆ ಡಿಸಿ ಜಗದೀಶ್ ಅವರಿಗೆ ಪತ್ರ ಬರೆದಿದೆ. ಈ ಮೂಲಕ ಅಭಿಮಾನ್ ಸ್ಟುಡಿಯೋ ಜಾಗ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಮೈಸೂರು: ಮೈಸೂರಿನಲ್ಲಿರುವ ಚಾಮುಂಡಿ ಬೆಟ್ಟಕ್ಕೆ ಕಿಚ್ಚ ಸುದೀಪ್ ಹಾಗೂ ಅವರ ಪತ್ನಿ  ಭೇಟಿ ನೀಡಿದ್ದು, ಚಾಮುಂಡಿ ತಾಯಿಯ ದರ್ಶನ ಪಡೆದರು. ಸುದೀಪ್ ದಂಪತಿ ಜೊತೆ ಬಿಗ್‌ಬಾಸ್ ಸ್ಪರ್ಧಿ ವಿನಯ್ ಗೌಡ ಪತ್ನಿ ಅಕ್ಷತಾ ಹಾಗೂ ಪುತ್ರ, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಇತ್ತೀಚೆಗಷ್ಟೆ ಅಗಲಿದ್ದ ತಾಯಿಯ ಹುಟ್ಟುಹಬ್ಬವನ್ನು ಶನಿವಾರ ಗಿಡ ನೆಡುವ ಮೂಲಕ ಸುದೀಪ್ ವಿಶೇಷವಾಗಿ ಆಚರಿಸಿದ್ದರು. ಅಲ್ಲದೇ ಇದೇ ಸೆಪ್ಟೆಂಬರ್ 2 ರಂದು ಸುದೀಪ್ ಕೂಡ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಸರಗೂರು:  ಮಹಿಳೆಯರು ಮುಂಜಾಗೃತ ಕ್ರಮವಾಗಿ ಗ್ಯಾಸ್ ಸುರಕ್ಷತಾ ಕ್ರಮ ಅನುಸರಿಸಿಕೊಂಡು ಅಡುಗೆ ಮಾಡಬೇಕು ಎಂದು ಸೌಜನ್ಯ ಗ್ಯಾಸ್ ಏಜೆನ್ಸಿಯ ಮಾಲೀಕರು, ಮಾಜಿ ಸಚಿವ ಎಂ.ಶಿವಣ್ಣ ಸಲಹೆ ನೀಡಿದರು. ಪಟ್ಟಣದ ಸೌಜನ್ಯ ಗ್ಯಾಸ್ ಸರ್ವೀಸ್‌ ನಿಂದ ಭಾರತ್ ಗ್ಯಾಸ್ ಏಜೆನ್ಸಿ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಶನಿವಾರ ನಡೆಸಿದ ಗ್ಯಾಸ್ ಬಳಕೆಯ ಮುಂಜಾಗೃತ ಕ್ರಮ, ಗೃಹಿಣಿಯರಿಗೆ ಅಡುಗೆ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮನೆಗಳಲ್ಲಿ ಅಡುಗೆ ಕೋಣೆ ಸ್ವಚ್ಛವಾಗಿಟ್ಟುಕೊಂಡು ಗಾಳಿ, ಬೆಳಕು ಇರಬೇಕು. ಸಿಲಿಂಡರ್, ರೆಗ್ಯುಲೇಟರ್, ಗ್ಯಾಸ್ ಸ್ಟವ್‌ ಗಳಲ್ಲಿ ಲೋಪವಾದರೆ ಶೀಘ್ರದಲ್ಲೆ ಕ್ರಮವಹಿಸಬೇಕು. ಇದಕ್ಕಾಗಿ ಗ್ಯಾಸ್ ವಿತರಕರನ್ನು ಸಂಪರ್ಕಿಸಬೇಕು. ಕೂಡಲೇ ಸರಿಪಡಿಸಲಿದ್ದಾರೆ. ಗ್ರಾಹಕರ ಹಿತ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಗ್ರಾಹಕರು ಮುಂದಾಗಬೇಕು ಎಂದು ಅವರು ತಿಳಿಸಿದರು. ಗ್ರಾಮಾಂತರ ಭಾಗದ ಜನರಿಗೆ ಗ್ಯಾಸ್ ಸೇವೆ ನೀಡುವ ಸಲುವಾಗಿ 25 ವರ್ಷಗಳ ಹಿಂದೆ ಆರಂಭವಾದ ಸೌಜನ್ಯ ಗ್ಯಾಸ್ ಸರ್ವೀಸ್ ಉತ್ತಮ ಸೇವೆ ನೀಡುತ್ತಾ ಬಂದಿದೆ. ಸದ್ಯ 15 ಸಾವಿರ ಗ್ರಾಹಕರನ್ನು…

Read More

ಬೀದರ್: ಅತಿವೃಷ್ಟಿಯಿಂದಾಗಿ ತೀವ್ರ ಹಾನಿಗೊಳಗಾದ ಬೀದರ್ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನ್ಸನ್ ಘೋಡೆ ಮನವಿ ಮಾಡಿದ್ದಾರೆ. ಈ ಕುರಿತು ಅವರು ಬೆಂಗಳೂರಿನಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ  ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರಿಗೆ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಔರಾದ್ ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ಅತಿ ಹೆಚ್ಚು ನಷ್ಟವಾಗಿದೆ. ರೈತರ ಬೆಳೆ, ರಸ್ತೆ, ಸೇತುವೆಗಳು ಸಂಪೂರ್ಣ ಹಾಳಾಗಿವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ರೈತರು, ಕೃಷಿ ಕೂಲಿ ಕಾರ್ಮಿಕರು ಹಾಗೂ ಬಡವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದ್ದಾರೆ. ಖುದ್ದು ಬೀದರ್ ಜಿಲ್ಲೆಗೆ ಭೇಟಿ ನೀಡಿ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಈ ಮೂಲಕ ಜಿಲ್ಲೆಯ ಜನರಿಗೆ ನೆರವಾಗಬೇಕು ಎಂದು ಕೋರಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್  ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ದೊಡ್ಡಬಳ್ಳಾಪುರ: ಗಣೇಶ ವಿಸರ್ಜನೆ ಮೆರವಣಿಗೆಯ ಸಂಭ್ರಮದ ವೇಳೆ ಪಟಾಕಿ ತುಂಬಿದ್ದ ಬಾಕ್ಸ್ ಸ್ಫೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ನಗರದ ಮುತ್ತೂರಿನಲ್ಲಿ ನಡೆದಿದೆ. ತನುಷ್‌ ರಾವ್‌ (15) ಮೃತಪಟ್ಟ ಬಾಲಕ. ತೀವ್ರವಾಗಿ ಗಾಯಗೊಂಡಿದ್ದ ಬಾಲಕನನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ನಿನ್ನೆ ಸಂಜೆ ಮುತ್ತೂರಿನ ಫ್ರೆಂಡ್ಸ್ ವಿನಾಯಕ ಗ್ರೂಪ್‌ ವತಿಯಿಂದ ಗಣೇಶ ವಿಸರ್ಜನೆ ಮೆರವಣಿಗೆಗೆ ತಯಾರಿ ನಡೆಸಲಾಗಿತ್ತು. ಟ್ರಾಕ್ಟರ್‌ ನಲ್ಲಿ ಗಣೇಶ ಮೂರ್ತಿಯನ್ನು ಮೆರವಣಿಗೆ ಮಾಡಲು ಪ್ರತಿಷ್ಠಾಪಿಸಿ, ಹೆಚ್ಚಿನ ಆಕರ್ಷಣೆಗೆ ಪವರ್‌ ಲಿಫ್ಟರ್‌ ವಾಹನ ಕರೆಸಲಾಗಿತ್ತು. ಪವರ್‌ ಲಿಫ್ಟರ್‌ ವಾಹನದ ಇಂಜಿನ್‌ ಮೇಲ್ಭಾಗದಲ್ಲಿ ಇಡಲಾಗಿದ್ದ ಭಾರಿ ಸದ್ದು ಮಾಡುವ ಪಟಾಕಿಗಳ ಬಾಕ್ಸ್ ಏಕಾಏಕಿ ಸ್ಫೋಟಗೊಂಡು ಈ ದುರ್ಘಟನೆ ನಡೆದಿದೆ. ಇದೇ ವೇಳೆ ವಿದ್ಯಾರ್ಥಿಗಳಾದ ಗಣೇಶ್‌, ಯೋಗೇಶ್‌, ಪವರ್‌ ಲಿಫ್ಟರ್‌ ಚಾಲಕ ಮುನಿರಾಜು, ನಾಗರಾಜು ಹಾಗೂ ಚೇತನ್‌ ಶಾವಿ ಸುಟ್ಟ ಗಾಯಗಳಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಅಲ್ಲದೆ ಪಟಾಕಿ ಬಾಕ್‌್ಸ ಸ್ಪೋಟದ ತೀವ್ರತೆಗೆ…

Read More

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ-ದೂರುದಾರ ಚಿನ್ನಯ್ಯನನ್ನು ಸ್ಥಳ ಮಹಜರಿಗಾಗಿ ಎಸ್ ಐಟಿ ಅಧಿಕಾರಿಗಳು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದೆ ಎಂದು ತಿಳಿದು ಬಂದಿದೆ. ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಎಸ್‌ ಐಟಿ ತಂಡವು ಚಿನ್ನಯ್ಯ ನೀಡಿರುವ ಹೇಳಿಕೆಯಲ್ಲಿ ತಿಳಿಸಿರುವ ಸ್ಥಳಗಳಲ್ಲಿ ಮಹಜರು ನಡೆಸಲು ಬಿಗಿ ಭದ್ರತೆಯಲ್ಲಿ ಕರೆದೊಯ್ದಿದೆ. ಚಿನ್ನಯ್ಯನನ್ನು ನಿಖರವಾಗಿ ಎಲ್ಲಿಗೆ ಕರೆದೊಯ್ಯಲಾಯಿತು ಎಂಬುದರ ಕುರಿತು ಯಾವುದೇ ಅಧಿಕೃತ ಮಾಹಿತಿ ಇಲ್ಲ. ಭದ್ರತೆಯ ದೃಷ್ಟಿಯಿಂದ ಈ ಪ್ರಕ್ರಿಯೆಯನ್ನು ಬೆಳಗಿನ ಜಾವ ನಡೆಸಲಾಯಿತು. ಭೇಟಿ ನೀಡಿದ ಸ್ಥಳಗಳು ಮತ್ತು ಪಡೆದುಕೊಂಡ ದಾಖಲೆಗಳ ವಿವರಗಳನ್ನು ಈ ಹಂತದಲ್ಲಿ ಬಹಿರಂಗಪಡಿಸಲು ಆಗುವುದಿಲ್ಲ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More