Author: admin

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಜೋಸೈಮನ್  ನಿಧನರಾಗಿದ್ದಾರೆ. ಹೃದಯಾಘಾತದಿಂದ  ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ  ಜೋಸೈಮನ್ ಕೊನೆಯುಸಿರೆಳೆದಿದ್ದಾರೆ. ಫಿಲ್ಮ್ ಚೇಂಬರ್‌ನಲ್ಲಿ ಇದ್ದಾಗಲೇ ಜೋಸೈಮನ್‌ ಗೆ ಹೃದಯಾಘಾತವಾಗಿದೆ. ಕೂಡಲೆೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಜೋಸೈಮನ್ ನಿಧನರಾಗಿದ್ದಾರೆ. ವಿಷ್ಣುವರ್ಧನ್‌ ಗೆ ‘ಸಾಹಸಸಿಂಹ’ ಬಿರುದು ನೀಡಿದ್ದ ಜೋಸೈಮನ್, ವಿಷ್ಣು, ಅಂಬರೀಶ್ ಸೇರಿದಂತೆ ಹಲವು ಖ್ಯಾತ ನಟರ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದರು. ನಿರ್ದೇಶಕ, ನಟ ಹಾಗೂ ಗೀತರಚನೆಕಾರರಾಗಿ ಅವರು ಸುಮಾರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸೇವೆ ಸಲ್ಲಿಸಿ, ತಮ್ಮದೇ ವಿಶಿಷ್ಟ ಛಾಪು ಮೂಡಿಸಿದ್ದರು. 1977ರಲ್ಲಿ ‘ಒಂದು ಪ್ರೇಮದ ಕತೆ’ ಚಿತ್ರದ ಮೂಲಕ ಜೋ ಸೈಮನ್ ನಿರ್ದೇಶನ ಕ್ಷೇತ್ರಕ್ಕೆ ಕಾಲಿಟ್ಟರು. ಮೊದಲ ಚಿತ್ರವೇ ಪ್ರೇಕ್ಷಕರ ಗಮನ ಸೆಳೆದಿದ್ದು, ನಂತರ ಅವರು ಆಕ್ಷನ್ ಹಾಗೂ ಪ್ರೇಮಕತೆಗಳ ಮೂಲಕ ಜನಪ್ರಿಯತೆ ಗಳಿಸಿದರು. ವಿಶೇಷವಾಗಿ ಆಕ್ಷನ್ ಶೈಲಿಯ ಚಿತ್ರಗಳಲ್ಲಿ ಅವರದೇ ಆದ ಸ್ಟೈಲ್ ಕಂಡುಬರುತ್ತಿತ್ತು. ಸಹೋದರರ ಸವಾಲ್(1977), ಒಂದು ಪ್ರೇಮದ ಕಥೆ(1977), ಬಂಗಾರದ ಗುಡಿ(1976) ಮೊದಲಾದವು. ಸಾಹಸಸಿಂಹ, ನ್ಯಾಯ…

Read More

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ದಾಖಲೆಗಳು ಮತ್ತು ಸುಳ್ಳು ಸುದ್ದಿಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನಾವು ಸಕಾರಾತ್ಮಕ ಟೀಕೆಗಳಿಗೆ ಯಾವಾಗಲೂ ಮುಕ್ತರಾಗಿದ್ದೇವೆ, ಆದರೆ ಸುಳ್ಳು ಸುದ್ದಿಗಳ ಮೂಲಕ ನಡೆಯುವ ಅಪಪ್ರಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ” ಎಂದು ಅವರು ಕಡಕ್ ಎಚ್ಚರಿಕೆ ನೀಡಿದ್ದಾರೆ. ಘಟನೆಯ ಹಿನ್ನೆಲೆ: ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ. ಕೆ. ಮೋಹನ್ ಅವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ ಎಂಬ ನಕಲಿ ಅಧಿಕೃತ ಟಿಪ್ಪಣಿಯೊಂದು ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಮುಖ್ಯಮಂತ್ರಿಗಳ ಕಚೇರಿಯ ಹೆಸರಿನಲ್ಲೇ ಈ ನಕಲಿ ಪತ್ರವನ್ನು ಸೃಷ್ಟಿಸಲಾಗಿತ್ತು. ಸಿಎಂ ಪ್ರತಿಕ್ರಿಯೆ: ಈ ಕುರಿತು ಎಕ್ಸ್ (ಟ್ವಿಟರ್) ಮೂಲಕ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, “ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯನ್ನು ಸೃಷ್ಟಿಸಿ ಅಪಪ್ರಚಾರ ಮಾಡುತ್ತಿದ್ದಾರೆ. ಇದು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ. ಈ ಬಗ್ಗೆ ಈಗಾಗಲೇ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು,…

Read More

ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ ಗಡಿಗಳನ್ನು ಗುರುತಿಸುವುದಿಲ್ಲ, ಆದ್ದರಿಂದ ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ಕೂಡ ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು” ಎಂದು ಅವರು ಪ್ರತಿಪಾದಿಸಿದ್ದಾರೆ. ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (IISc) ಆಯೋಜಿಸಲಾಗಿದ್ದ ‘ಅಂತರರಾಷ್ಟ್ರೀಯ ಅಣೆಕಟ್ಟು ಸುರಕ್ಷತೆ ಸಮ್ಮೇಳನ-2026’ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಭದ್ರತೆಯ ಭಾಗ: ಅಣೆಕಟ್ಟುಗಳ ಸುರಕ್ಷತೆಯು ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ, ಅದು ರಾಷ್ಟ್ರೀಯ ಭದ್ರತೆಯ ಅವಿಭಾಜ್ಯ ಅಂಗವಾಗಿದೆ. ಹವಾಮಾನ ಬದಲಾವಣೆ, ಭೂಕಂಪನ ಮತ್ತು ಹೂಳು ತುಂಬುವಿಕೆಯಂತಹ ಸವಾಲುಗಳನ್ನು ನಾವು ಎದುರಿಸುತ್ತಿದ್ದೇವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಹಳೆಯ ಅಣೆಕಟ್ಟುಗಳ ಸವಾಲು: ಭಾರತವು ವಿಶ್ವದ ಮೂರನೇ ಅತಿದೊಡ್ಡ ಅಣೆಕಟ್ಟುಗಳನ್ನು ಹೊಂದಿರುವ ದೇಶವಾಗಿದ್ದು, ಒಟ್ಟು 6,628 ಅಣೆಕಟ್ಟುಗಳಿವೆ. ಕರ್ನಾಟಕದಲ್ಲಿ 231 ಅಣೆಕಟ್ಟುಗಳಿದ್ದು, ದೇಶದಲ್ಲೇ 6ನೇ ಸ್ಥಾನದಲ್ಲಿದೆ. ವಿಶೇಷವೆಂದರೆ, ಈ ಪೈಕಿ ಶೇ. 70 ರಷ್ಟು ಅಣೆಕಟ್ಟುಗಳು 25 ವರ್ಷಗಳಿಗಿಂತ ಹಳೆಯದಾಗಿದ್ದು, ಇವುಗಳ ಆಧುನೀಕರಣ ಮತ್ತು…

Read More

ಸರಗೂರು:  ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸ್ವಾಮಿ ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದುರವರ 38 ನೇ ಹುಟ್ಟುಹಬ್ಬದ ಅಂಗವಾಗಿ ವೀರಶೈವ ಲಿಂಗಾಯತ ಕಾಂಗ್ರೆಸ್ ಬಳಗ ಸರಗೂರು ಘಟಕದ ವತಿಯಿಂದ ಗುರುವಾರದಂದು ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮನುಗನಹಳ್ಳಿ ಮಾದಪ್ಪ, ಅಣ್ಣಯ್ಯ ಸ್ವಾಮಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಪ್ರಭುಸ್ವಾಮಿ ಮಾತನಾಡಿದರು. ಮುಖಂಡರಾದ ಅಣ್ಣಯ್ಯ ಸ್ವಾಮಿ, ಡಿ.ಸಿ.ಸಿದ್ದಪ್ಪ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮಾದಪ್ಪ, ಗುರುಸ್ವಾಮಿ, ನಂಜಪ್ಪ, ಜಯಕುಮಾರ್, ಪ್ರಭುಸ್ವಾಮಿ, ಬಸವರಾಜು, ಚನ್ನಮಲಪ್ಪ, ಮಹೇಶ್, ಮಣಿ, ಕೆಂಡಗಣ್ಣಸ್ವಾಮಿ, ಮಾದಪ್ಪ ಬಿ., ಗುರುಸ್ವಾಮಿ ಎಂ., ಯೋಗೇಶ, ಮಂಜುನಾಥ್, ಮಂಜಣ್ಣ, ಎಂ.ಮುತ್ತಣ್ಣ, ಬ್ರಮಣ್ಣ,  ನೀಲಕಂಠ, ಸಿದ್ದಪ್ಪ, ಮಹೇಶ್, ಸುರೇಶ್, ನಂದೀಶ್, ಬಸವರಾಜ್ ಎಂ.ಎನ್., ವಿಕೇಶ್, ಗಿರೀಶ್, ಷಬೇಂದ್ರಪ್ಪ, ಪ್ರತಾಪ್, ಮಲ್ಲು, ಮಹೇಶ್, ರಾಜಶೇಖರ್, ಸ್ವಾಮಿ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು. ವರದಿ: ಹಾದನೂರು ಚಂದ್ರ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಗುಬ್ಬಿ: ರೈತರು ಕೃಷಿಯ ಜೊತೆಗೆ ಹೈನುಗಾರಿಕೆ ಸೇರಿದಂತೆ ಉಪ ಕಸುಬುಗಳಲ್ಲಿ ತೊಡಗಿಸಿಕೊಂಡಾಗ ಆರ್ಥಿಕವಾಗಿ ಸದೃಢವಾಗಲು ಸಾಧ್ಯವಾಗುತ್ತದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು. ತಾಲ್ಲೂಕಿನ ಕಡಬ ಹೋಬಳಿಯ ಲಿಂಗಮ್ಮನಹಳ್ಳಿ ಗ್ರಾಮದಲ್ಲಿ 150 ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘ ಉದ್ಘಾಟನೆ ಮಾಡಿ ಮಾತನಾಡಿದ ಅವರು,  ಹೈನು ಹೈನುಗಾರಿಕೆ ಉದ್ಯಮ ಕುಟುಂಬದ ವ್ಯಕ್ತಿಗತ ಆದಾಯವನ್ನು ಹೆಚ್ಚಿಸುವುದರ ಜೊತೆಗೆ ಆರ್ಥಿಕ ಭದ್ರತೆ ಒದಗಿಸುತ್ತದೆ. ಈ ನಿಟ್ಟಿನಲ್ಲಿ  ರೈತರು ಉಪ ಕಸುಬುಗಳನ್ನು ಮಾಡುವ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕು ಎಂದರು. ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್ ಮಾತನಾಡಿ, ಲಿಂಗಮ್ಮನಹಳ್ಳಿಯಲ್ಲಿ  150 ನೇ ಹಾಲು ಉತ್ಪಾದಕರ ಸಹಕಾರ ಸಂಘ ಪ್ರಾರಂಭವಾಗಿರುವುದು ಒಂದು ಮೈಲಿಗಲ್ಲು ಆಗಿದೆ. ಹೈನುಗಾರಿಕೆ ರೈತರಿಗೆ ಆರ್ಥಿಕವಾಗಿ ಅಭಿವೃದ್ಧಿ ಹೋಂದಲು ಸಹಕಾರಿಯಾಗಿದೆ. ರೈತರು ಖಾಸಗಿ ಡೈರಿಗಳಿಗೆ ಹಾಲು ಹಾಕದೆ ನಂದಿನಿ ಡೈರಿಗಳಿಗೆ ಹಾಲು ಹಾಕಿದರೆ ಹೆಚ್ಚಿನ ಲಾಭ ಪಡೆಯಲು ಸಾಧ್ಯವಾಗುತ್ತದೆ. ಎಂದು ತಿಳಿಸಿದರು. ಮೇ ತಿಂಗಳಿನಿಂದ ಕೆಲವು ತಿಂಗಳುಗಳಿಗೆ ಮಾತ್ರ ಹಾಲು ಉತ್ಪಾದಕರಿಗೆ ಒಂದು ರೂಪಾಯಿ…

Read More

ತುಮಕೂರು: ಹೆತ್ತ ತಾಯಿಯನ್ನೇ ಮಗಳೊಬ್ಬಳು ಉಸಿರುಗಟ್ಟಿಸಿ ಕೊಲೆ ಮಾಡಿ, ನಂತರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕಥೆ ಕಟ್ಟಿ ಅಂತ್ಯಕ್ರಿಯೆಗೆ ಮುಂದಾಗಿದ್ದ ಭೀಕರ ಘಟನೆ ತುಮಕೂರು ನಗರದ ಶ್ರೀನಗರದಲ್ಲಿ ಬೆಳಕಿಗೆ ಬಂದಿದೆ. ಏನಿದು ಘಟನೆ? ತುಮಕೂರು ನಗರದ ಶ್ರೀನಗರ ನಿವಾಸಿ ಪುಷ್ಪಲತಾ ಎಂಬುವವರು ಮಗಳು ಸುಚಿತ್ರಾ ಮತ್ತು ಅಳಿಯ ಸುರೇಶ್ ಜೊತೆ ವಾಸವಿದ್ದರು. ಕಳೆದ ಫೆಬ್ರವರಿ 11ರಂದು ರಾತ್ರಿ ಪುಷ್ಪಲತಾ ನಿಗೂಢವಾಗಿ ಸಾವನ್ನಪ್ಪಿದ್ದರು. ತಾಯಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ನಂಬಿಸಿದ ಸುಚಿತ್ರಾ, ರಾತ್ರೋರಾತ್ರಿ ಶವವನ್ನು ಸಂಬಂಧಿಕರ ಮನೆಗೆ ಸಾಗಿಸಿ ಅಂತ್ಯಕ್ರಿಯೆ ಮಾಡಲು ತರಾತುರಿ ನಡೆಸಿದ್ದಳು. ಕೊಲೆಗೆ ಕಾರಣವೇನು?  ಪೊಲೀಸರ ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಸತ್ಯಗಳು ಹೊರಬಂದಿವೆ. ಒಂದು ವರ್ಷದ ಹಿಂದೆ ಸುಚಿತ್ರಾ ತಂದೆ ಬಾಬು ನಾಯಕ್ ಮೃತಪಟ್ಟಿದ್ದರು. ತಂದೆಯ ಸಾವಿನ ಬಗ್ಗೆ ಜ್ಯೋತಿಷಿಯೊಬ್ಬರನ್ನು ವಿಚಾರಿಸಿದಾಗ, “ನಿಮ್ಮ ತಂದೆಯ ಸಾವಿಗೆ ತಾಯಿಯೇ ಕಾರಣ, ಆಕೆ ಮಾಟಮಂತ್ರ ಮಾಡಿಸಿದ್ದಾರೆ. ನಿನಗೂ ಅವರಿಂದ ಅಪಾಯವಿದೆ” ಎಂದು ಜ್ಯೋತಿಷಿ ಹೇಳಿದ್ದ ಎನ್ನಲಾಗಿದೆ. ಇದರಿಂದ ಭಯಗೊಂಡ ಸುಚಿತ್ರಾ, ತಾಯಿಯನ್ನು ದಿಂಬಿನಿಂದ…

Read More

ತುರುವೇಕೆರೆ: ಮುಂಬರುವ 2028ರ ವಿಧಾನಸಭೆ ಚುನಾವಣೆಗೆ ನಾನೂ ಸಹ ತುರುವೇಕೆರೆ ಕ್ಷೇತ್ರದಿಂದ ಸ್ಪರ್ಧಾಕಾಂಕ್ಷಿಯಾಗಿದ್ದೇನೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ದೊಡ್ಡಘಟ್ಟ ಚಂದ್ರೇಶ್ ಹೇಳಿಕೆ ನೀಡಿದ್ದು, ಈ ಮೂಲಕ ತುರುವೇಕೆರೆ ಕ್ಷೇತ್ರದಲ್ಲಿ ಹಾಲಿ ಶಾಸಕ ಎಂ.ಟಿ.ಕೃಷ್ಣಪ್ಪ ಅವರಿಗೆ ಪ್ರತಿಸ್ಪರ್ಧೆ ಸ್ವಪಕ್ಷದಲ್ಲೇ ಸೃಷ್ಟಿಯಾಗಿದೆ. ತುರುವೇಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಕೇಂದ್ರ ರೈಲ್ವೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಕೃಪಾಶೀರ್ವಾದ ಹಾಗೂ ಅವರ ಮಾರ್ಗದರ್ಶನದೊಂದಿಗೆ ಈ ಕ್ಷೇತ್ರದಲ್ಲಿ ಜನಪರ ಸೇವಾಕಾರ್ಯಗಳನ್ನು ಮಾಡುವ ಮೂಲಕ ತಾಲ್ಲೂಕಿನ ಜನಮನ್ನಣೆಯನ್ನು ಗಳಿಸಿದ್ದೇನೆ. ಸುಮಾರು ದಶಕಗಳಿಂದ ತಾಲ್ಲೂಕಿನಲ್ಲಿ ಜನಸೇವೆ ಮಾಡುತ್ತಾ ಜೆಡಿಎಸ್ ಪಕ್ಷವನ್ನು ಸಂಘಟಿಸುತ್ತಾ ಬಂದಿದ್ದೇನೆ. ಇದೀಗ ತಾಲ್ಲೂಕಿನ ಜನರ ಅಪೇಕ್ಷೆಯಂತೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ನಾನೂ ಸಹಾ ಆಕಾಂಕ್ಷಿಯಾಗಿದ್ದೇನೆ ಎಂದು ಅವರು ಘೋಷಿಸಿದ್ದಾರೆ. ಎಂ.ಟಿ.ಕೃಷ್ಣಪ್ಪ ಹೇಳಿಕೆಗೆ ಬೇಸರ: ನಮ್ಮ ಹಿರಿಯ ನಾಯಕರಾದ ಎಂ.ಟಿ.ಕೃಷ್ಣಪ್ಪನವರು ನಾಲ್ಕು ಬಾರಿ ಶಾಸಕರಾಗಿದ್ದು ನನ್ನ ಹೆಸರನ್ನು ಜೆಡಿಎಸ್ ಕಾರ್ಯಕರ್ತರ…

Read More

ತಿಪಟೂರು: ಪ್ರತಿ ಕ್ವಿಂಟಾಲ್‌ ಗೆ 4,886ರೂ. ಗಳ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಮಾಡಲಾಗುತ್ತಿದೆ. ಖರೀದಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಲಾಗಿದ್ದು, ಫಲಾನುಭವಿ ರೈತರು ಸ್ವತಃ ಖರೀದಿ ಕೇಂದ್ರಕ್ಕೆ ಬಂದು ಬಯೋಮೆಟ್ರಿಕ್ (ಬೆರಳುಚ್ಚು) ನೀಡುವ ಮೂಲಕ ರಾಗಿ ಮಾರಾಟ ಮಾಡಬೇಕು ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದ್ದಾರೆ. ಸರ್ಕಾರ ಪ್ರತಿ ಚೀಲಕ್ಕೆ 50 ಕೆ.ಜಿ. 600 ಗ್ರಾಂ ತೂಕ ನಿಗದಿಪಡಿಸಿದ್ದು, ಯಾವುದೇ ಕಾರಣಕ್ಕೂ ಹೆಚ್ಚುವರಿ ರಾಗಿ ನೀಡಬಾರದು ಎಂದು ಸೂಚಿಸಿ, ನೋಂದಣಿ ಆಧಾರದ ಮೇಲೆ ಜೇಷ್ಠತಾ ಪಟ್ಟಿ ತಯಾರಿಸಿ ಮಾರುಕಟ್ಟೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು. ರೈತರು ತಮಗೆ ನಿಗದಿಪಡಿಸಿದ ದಿನಾಂಕದಂದು ಮಾತ್ರ ರಾಗಿ ಮಾರಾಟ ಮಾಡಬೇಕು. ಮಾರಾಟ ಮಾಡಿದ ರೈತರಿಗೆ ನಿಗದಿಪಡಿಸಿದ ಅವಧಿಯೊಳಗೆ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಖರೀದಿ ಕೇಂದ್ರದಲ್ಲಿ ಯಾವುದೇ ಅವ್ಯವಹಾರ ನಡೆದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ತುಮಕೂರು: ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಜರುಗಿದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗೆ ಅನುಮತಿ ಸೇರಿದಂತೆ ಕುಣಿಗಲ್ ಸ್ಟಡ್‌ಫಾರಂನ 110 ಎಕರೆ ಪ್ರದೇಶವನ್ನು ಬೆಂಗಳೂರು ಟರ್ಫ್ ಕ್ಲಬ್‌ಗೆ ಹಸ್ತಾಂತರಿಸಿ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಕುದುರೆ ರೇಸ್ ಅನ್ನು ಇನ್ನೆರಡು ವರ್ಷಗಳಲ್ಲಿ ಸಂಪೂರ್ಣ ಕುಣಿಗಲ್‌ಗೆ ಸ್ಥಳಾಂತರಿಸಲು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಸಂಪುಟ ಸಭೆ ಬಳಿಕ ಕಾನೂನು ಸಚಿವ ಎಚ್.ಕೆ.ಪಾಟೀಲ್ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದು, ಆರ್‌ ಸಿಬಿ ಕಾಲ್ತುಳಿತ ಪ್ರಕರಣದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ನಿಷೇಧ ಹೇರಲಾಗಿತ್ತು. ನ್ಯಾ. ಕುನ್ನಾ ವರದಿ ಆಧಾರದಲ್ಲಿ ಷರತ್ತು ಪೂರೈಸಿದಲ್ಲಿ ಮಾತ್ರ ಪಂದ್ಯಾವಳಿಗೆ ಅನುಮತಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿತ್ತು. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆರ್‌ ಸಿಬಿ, ಗೃಹ ಸಚಿವಾಲಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಚಿವ ಡಾ.ಜಿ.ಪರಮೇಶ್ವರ್ ಸಮಾಲೋಚಿಸಿ ಅನುಮತಿ ಕುರಿತಂತೆ ಸಂಪುಟದ ತೀರ್ಮಾನಕ್ಕೆ ಬಿಡಲಾಗಿತ್ತು. ಅದರಂತೆ ಕ್ಯಾಬಿನೆಟ್ ಚರ್ಚೆಗೊಳಪಟ್ಟು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್…

Read More

ತುಮಕೂರು: ಕೃಷಿ ಕೂಲಿ ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿ ಜಾರಿಗೆ ತರುತ್ತಿರುವ ಜನ ವಿರೋಧಿ ನೀತಿಗಳನ್ನು ಹಾಗೂ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ಅಖಿಲ ಭಾರತ ಮುಷ್ಕರದ ಅಂಗವಾಗಿ ತುಮಕೂರುನಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾದವು. ಕಾರ್ಮಿಕ ವಿರೋಧಿಯಾಗಿರುವ 4 ಸಂಹಿತೆಗಳನ್ನು ಜಾರಿಗೊಳಿಸುವುದನ್ನು ವಿರೋಧಿಸಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಪುನರ್ ಸ್ಥಾಪಿಸಿ, ಎಲ್ಲಾ ಗುತ್ತಿಗೆ ಕಾರ್ಮಿಕರಿಗೆ ಸೇವೆಗಳನ್ನು ಖಾಯಂ ಮಾಡಿ, 12 ಗಂಟೆಯ ದುಡಿಮೆ ಕಾನೂನು ಹಿಂಪಡೆಯಿರಿ, ಕನಿಷ್ಠ ವೇತನ ಮಾಸಿಕ 41 ಸಾವಿರ ನಿಗದಿ ಮಾಡಿ, ನಿಗದಿತ ಕಾಲಾವಧಿ ದುಡಿಮೆ ಅವಕಾಶ ನೀಡಿ, ಖಾಯಂ ಕೆಲಸಗಳೇ ಇಲ್ಲದಂತೆ ಮಾಡುವುದನ್ನು ವಿರೋಧಿಸಿ. ವಿದ್ಯುತ್ ಬಳಕೆದಾರರಿಗೆ ವಿಪರೀತ ಬೆಲೆ ಏರಿಕೆಗೆ ಕಾರಣವಾಗುವ ವಿದ್ಯುತ್ ಖಾಸಗೀಕರಣಕ್ಕೆ ದಾರಿ ಮಾಡುವ ವಿದ್ಯುತ್ ಕಾಯ್ದೆ ವಿರೋಧಿಸಿ. ರೈತರ ಸ್ವಾವಲಂಬನೆಗೆ ಕುತ್ತು ತರುವ ಬೀಜ ಮಸೂದೆ ವಿರೋಧಿಸಿ, ಬಲವಂತದ ಭೂಸ್ವಾಧೀನ, ಬಗರ್ ಹುಕುಂ ಸಾಗುವಳಿದಾರರ ಪ್ರಶ್ನೆ ಇತ್ಯರ್ಥಕ್ಕೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮತ್ತು ಸಂಯುಕ್ತ…

Read More