Author: admin

ತುಮಕೂರು: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಭಸ್ಮವಾದ 10 ಗುಡಿಸಲುಗಳಿಗೆ ಎಲೆರಾಮಪುರ ಮಠದ ಶ್ರೀ ಹನುಮಂತನಾಥ ಸ್ವಾಮೀಜಿ ಭೇಟಿ ನೀಡಿ ನೊಂದವರಿಗೆ ಸಾಂತ್ವನ ಹೇಳಿದರು. ಗುಡಿಸಲಿನಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ 10 ಗುಡಿಸಲು ಸುಟ್ಟು ಭಸ್ಮವಾದ ಘಟನೆ ಶುಕ್ರವಾರ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚಿಂಪುಗಾನಹಳ್ಳಿಯಲ್ಲಿ ನಡೆದಿತ್ತು. ಅದೃಷ್ಟವಶಾತ್ ಯಾರಿಗೂ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಗುಡಿಸಲಿನಲ್ಲಿದ್ದ ದಿನಸಿ, ಬಟ್ಟೆ, ಇತರ ವಸ್ತುಗಳು ಭಸ್ಮವಾಗಿದೆ. ಗುಡಿಸಲಿನಲ್ಲಿ ವಾಸ ಮಾಡುತ್ತಿರುವ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಿ ಕೊಡಲು ಸಚಿವ ಪರಮೇಶ್ವರ ಅವರೊಂದಿಗೆ ಮಾತುಕತೆ ನಡೆಸಿರುವುದಾಗಿ ಅವರು ಇದೇ ವೇಳೆ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ನವದೆಹಲಿ: ಕಿರುತೆರೆಯ ಜನಪ್ರಿಯ ಧಾರಾವಾಹಿ ನಟಿ ಕೃಷ್ಣ ಮುಖರ್ಜಿ ಅವರಿಗೆ ಮೇಕಪ್ ರೂಂನಲ್ಲಿ ನಿರ್ಮಾಪಕರು ಕಿರುಕುಳ ನೀಡಿದ್ದಾರೆ ಎಂದು ನೋವನ್ನು ಹಂಚಿಕೊಂಡಿರುವ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ. ನಾಗಿನ್ 3, ಕುಚ್ ತೋ ಹೈ, ನಾಗಿನ್ ಏಕ್ ನಯಾ ರಂಗ್ ಮೇ, ಶುಭ್ ಸೌಗನ್ ಮುಂತಾದ ಕಾರ್ಯಕ್ರಮಗಳು ಮತ್ತು ಧಾರಾವಾಹಿಗಳು ಕೃಷ್ಣ ಮುಖರ್ಜಿಯವರು ಜನಪ್ರಿಯತೆ ಗಳಿಸಿದರು. ಇವರು ಇತ್ತೀಚೆಗೆ ಕಾರ್ಯಕ್ರಮದ ನಿರ್ಮಾಪಕರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ನನ್ನ ಕೊನೆಯ ಕಾರ್ಯಕ್ರಮ “ಶುಭ್ ಶಗುನ್” ಮಾಡಲು ಪ್ರಾರಂಭಿಸಿದಾಗ ನನ್ನ ಕೆಟ್ಟ ಸಮಯ ಪ್ರಾರಂಭವಾಯಿತು. ಅದು ನನ್ನ ಜೀವನದ ಅತ್ಯಂತ ಕೆಟ್ಟ ನಿರ್ಧಾರ. ಆ ಕಾರ್ಯಕ್ರಮ ಮಾಡಲು ನಾನು ಎಂದಿಗೂ ಬಯಸಲಿಲ್ಲ ಆದರೆ ನಾನು ಇತರರ ಮಾತನ್ನು ಕೇಳಿ ಒಪ್ಪಂದಕ್ಕೆ ಸಹಿ ಹಾಕಿದೆ. ಪ್ರೊಡಕ್ಷನ್ ಹೌಸ್ ಮತ್ತು ನಿರ್ಮಾಪಕ ನನಗೆ ಹಲವು ಬಾರಿ ಕಿರುಕುಳ ನೀಡಿದ್ದಾರೆ”ಎಂದು ಅವರು ಪೋಸ್ಟ್ ನಲ್ಲಿ ಬರೆದಿದ್ದಾರೆ. ಕೃಷ್ಣ ಒಂದು ವರ್ಷ ಕಠಿಣ ಸಮಯವನ್ನು…

Read More

ಕಲಬುರಗಿ: ಕೇಂದ್ರ ಸರ್ಕಾರದಿಂದ ಬಿಡುಗಡೆಗೊಂಡಿರುವ ಬರ ಪರಿಹಾರ ಮೊತ್ತ ಬಹಳ ಕಡಿಮೆಯಾಗಿದೆ. ನಾವು ಕೇಳಿದ್ದು 18,172 ಕೋಟಿ ರೂಪಾಯಿ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿನಲ್ಲಿಯೇ ಕೇಳಿದ್ದೆವು. ಕರ್ನಾಟಕದಲ್ಲಿ ಬರದಿಂದ ಆಗಿರುವ ಒಟ್ಟು ಬೆಳೆ ನಷ್ಟ 35 ಸಾವಿರ ಕೋಟಿ ರೂಪಾಯಿಗಳಷ್ಟು. ರಾಜ್ಯದ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಎನ್ ಡಿಆರ್ ಎಫ್ ನಿಯಮ ಪ್ರಕಾರ ನಾವು ಕೇಳಿದಷ್ಟು ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರ ಪರಿಹಾರ ಮೊತ್ತ ಬಿಡುಗಡೆಯ ಬಗ್ಗೆ ಕೇಂದ್ರ ಸಚಿವರುಗಳಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಅವರೆಲ್ಲ ಸುಳ್ಳು ಹೇಳಿದ್ದರು. ಕರ್ನಾಟಕ ಸರ್ಕಾರ ವಿಳಂಬವಾಗಿ ಮನವಿ ಕೊಟ್ಟಿದೆ ಎಂದರು. ನಂತರ ಚುನಾವಣಾ ನೀತಿ ಸಂಹಿತೆ ಜಾರಿಯಾಯಿತು ಎಂದು ಹೇಳಿ ಪರಿಹಾರ ವಿಳಂಬವಾಗುತ್ತಿದೆ ಎಂದು ಸುಳ್ಳು ಹೇಳಿಕೊಂಡು ಬಂದರು. ಬರಗಾಲಕ್ಕೆ ಬದಲು 5 ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಹಣ ಕೇಳುತ್ತಿದ್ದಾರೆ ಎಂದು ಹಣಕಾಸು ಸಚಿವೆ ನಿರ್ಮಲಾ…

Read More

ಚಿತ್ರ ವಿಚಿತ್ರ ಉಡುಗೆ ತೊಟ್ಟು ಸೋಷಿಯಲ್ ಮೀಡಿಯಾದಲ್ಲಿ ಸೆನ್ಷೆಷನ್ ಮೂಡಿಸುವಲ್ಲಿ ಉರ್ಫಿ ಜಾವೇದ್ ಗೆ ಯಾರೂ ಸರಿಸಾಟಿ ಇರಲಿಕ್ಕಿಲ್ಲ. ಇನ್ ಸ್ಟಾಗ್ರಾಂನಲ್ಲಿ ಸದಾ ಭಿನ್ನವಾದ ಫೋಟೋಶೂಟ್, ವಿಡಿಯೋಗಳನ್ನು ಹಂಚಿಕೊಳ್ಳುತ್ತ ಅಭಿಮಾನಿಗಳ ಹೃದಯದಲ್ಲಿ ಉರ್ಫಿ ಕಿಚ್ಚು ಮೂಡಿಸ್ತಾರೆ. ಇದೀಗ ಉರ್ಫಿ ಜಾವೇದ್ ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಒಂದು ಎದೆಗೆ ಹೂವಿನ ಅಲಂಕಾರದ ವಸ್ತ್ರ ಧರಿಸಿದ್ದರೆ, ಇನ್ನೊಂದು ಎದೆಯನ್ನು ಕೈಯಿಂದ ಮುಚ್ಚಿಕೊಂಡು ಉರ್ಫಿ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಈಕೆ ಪ್ರದರ್ಶಿಸಿದ ವಿನೂತನ ಉಡುಗೆಯನ್ನು ಕಾಥಿ ಆಟ್ಲಿಯರ್ ವಿನ್ಯಾಸ ಮಾಡಿದ್ದಾರೆ. ಈಕೆಗೆ ಮೇಕಪ್ ಕುದ್ರಾತನಂದ್ ಸ್ಟೈಲಿಂಗ್ ಮಾಡಿದ್ದಾರೆ. ಕೇಶವಿನ್ಯಾಸ ರಾಣಿಸಾಹು ಮಾಡಿದ್ದಾರೆ. ಮೇಕಪ್ ಸ್ವತಃ ಉರ್ಫಿ ಮಾಡಿದ್ದಾರೆ. ಈ ವಿಡಿಯೋ ನೋಡಿ ನೆಟ್ಟಿಗರು ಬಗೆಬಗೆಯ ಕಾಮೆಂಟ್ ಮಾಡಿದ್ದಾರೆ. ಬಹುತೇಕ ಕಾಮೆಂಟ್ ಗಳು ನೆಗೆಟಿವ್ ಶೇಡ್ ನಲ್ಲೇ ಇವೆ. ಇನ್ನು ಕೆಲವರು ಈಕೆಯ ಫ್ಯಾಷನ್ ಅಭಿರುಚಿಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್…

Read More

ಪ್ರಧಾನಿ ಮೋದಿಯವರಂತೆ ಕಾಣುವ ಈ ವ್ಯಕ್ತಿ ಯಾರು ಗೊತ್ತಾ? ಇವರು ಕೂಡ ಗುಜರಾತ್ ನವರೇ ಆಗಿದ್ದಾರೆ. ಇವರು ಗುಜರಾತ್ ನ ಆನಂದ್ ನಲ್ಲಿ ತುಳಸಿ ಪಾನಿ ಪುರಿ ಸ್ಟಾಲ್ ನಡೆಸಿಕೊಂಡು ಜೀವನ ಸಾಗಿಸುವವರಾಗಿದ್ದಾರೆ. ಈ ವ್ಯಕ್ತಿಯ ಹೆಸರು ಅನಿಲ್ ಭಾಯಿ ಠಕ್ಕರ್. ಠಕ್ಕರ್ 71 ವರ್ಷ ವಯಸ್ಸಿನವರಾಗಿದ್ದಾರೆ. ಅವರನ್ನು ಸ್ಥಳೀಯರು ಪಿಎಂ ಮೋದಿ ಎಂದು ಕರೆಯುತ್ತಾರೆ ಏಕೆಂದರೆ ಅವರ ಸೈಡ್ ಪ್ರೊಫೈಲ್ ಮತ್ತು ನೋಟದಿಂದ ಪ್ರಧಾನಿಯಂತೆಯೇ ಕಾಣುತ್ತಾರೆ. ಅವರ ಹೇರ್ ಸ್ಟೈಲ್ ಮತ್ತು ಬಿಳಿ ಗಡ್ಡ ಕೂಡ ಪ್ರಧಾನಿ ಮೋದಿಯವರನ್ನೇ ಹೋಲುವಂತದಾಗಿದೆ ಎಂದು ಜನ ಹೇಳುತ್ತಾರೆ. ಇವರ ಪೋಟೋ ಲೋಕಸಭೆ ಚುನಾವಣೆಗೆ ಮತದಾನ ಪ್ರಾರಂಭವಾಗುತ್ತಿದ್ದಂತೆ ವೈರಲ್ ಆಗಿದೆ. ಇವರು ಮೂಲತಃ ಜುನಾಗಢ್ ನವರಾಗಿದ್ದಾರೆ. ಅವರು 18 ನೇ ವಯಸ್ಸಿನಿಂದಲೂ ಚಾಟ್ ‘ತುಳಸಿ ಪಾನಿ ಪುರಿ ಸೆಂಟರ್’ ನಲ್ಲಿ ಮಾರಾಟ ಮಾಡುತ್ತಿದ್ದಾರೆ. ಅಂಗಡಿಯನ್ನು ಅವರ ತಾತ ಪ್ರಾರಂಭಿಸಿದರು. ನಂತರ ಠಕ್ಕರ್ ಅಂಗಡಿಯನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ಠಕ್ಕರ್ ಹೇಳುವಂತೆ “ಪ್ರಧಾನಿ ಮೋದಿಯೊಂದಿಗಿನ ನನ್ನ ಹೋಲಿಕೆಯಿಂದಾಗಿ…

Read More

ಬೆಂಗಳೂರು: ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಏ.26ರ ರಾತ್ರಿ 10:30ರ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ. ಮಾರ್ಕೆಟ್ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ಆಂಬ್ಯುಲೆನ್ಸ್ ಚಾಲಕ ಸಮಂತ್ ವೇಗವಾಗಿ ಆ್ಯಂಬುಲೆನ್ಸ್ ಚಲಾಯಿಸಿಕೊಂಡು ಬರುತ್ತಿದ್ದರು. ಈ ಸಂದರ್ಭದಲ್ಲಿ ನಿಯಂತ್ರಣ ಕಳೆದುಕೊಂಡ ಆ್ಯಂಬುಲೆನ್ಸ್ ಇತರ ವಾಹನಗಳಿಗೆ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆ ಸಂಬಂಧ ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು ಗ್ರಾಮಾಂತರ: ಹಾವು ಕಚ್ಚಿದ ಪರಿಣಾಮ 7 ವರ್ಷ ವಯಸ್ಸಿನ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ. ಟಿ.ಹೊಸಹಳ್ಳಿ ಗ್ರಾಮದ ಅನುಷಾ (7) ಮೃತಪಟ್ಟ ಮಗುವಾಗಿದೆ. ಮಗುವಿನ ತಂದೆ ತಾಯಿ ಕೋಳೂರು ಗ್ರಾಮದ ತೋಟದ ಮನೆಯಲ್ಲಿ ಈ ಕುಟುಂಬ ಕೂಲಿ ಕೆಲಸ ಮಾಡಿಕೊಂಡಿತ್ತು. ಇದೇ ತೋಟದಲ್ಲಿ ಆಟವಾಡುತ್ತಿದ್ದ ವೇಳೆ ಮಗುವಿಗೆ ಹಾವು ಕಚ್ಚಿದೆ. ಮಗುವನ್ನು ತಕ್ಷಣವೇ ಕುಟುಂಬಸ್ಥರು ದೊಡ್ಡಬಳ್ಳಾಪುರ ಆಸ್ಪತ್ರೆಗೆ ಸಾಗಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗುವಿನ ಸಾವಿನಿಂದ ಆಘಾತಗೊಂಡ ಪೋಷಕರ ರೋದನೆ ಮುಗಿಲುಮುಟ್ಟಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಯಶಸ್ವಿಯಾಗಿ ನಡೆದರೂ, ರಾಜಧಾನಿ ಬೆಂಗಳೂರಿನಲ್ಲೇ ಕಡಿಮೆ ಮತದಾನವಾಗಿರುವ ಹಿನ್ನೆಲೆ ಸಾರ್ವಜನಿಕರು ಬೆಂಗಳೂರಿನಲ್ಲಿ ಬ್ಯಾನರ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. “ಚುನಾವಣಾ ಆಯೋಗ ಅಷ್ಟೊಂದು ಪ್ರಚಾರ ಮಾಡಿದ ನಂತರವೂ ಮತದಾನದಿಂದ ದೂರ ಉಳಿದು ಬದುಕಿದ್ದರೂ ಸತ್ತಂತೆ ವರ್ತಿಸಿದ ಬೆಂಗಳೂರು ನಗರದ ಸುಶಿಕ್ಷಿತ ಸತ ಪ್ರಜೆಗಳಿಗೆ ನಮ್ಮ ಶ್ರದ್ಧಾಂಜಲಿಗಳು” ಎಂದು ಬ್ಯಾನರ್ ನಲ್ಲಿ ಬರೆಯಲಾಗಿದೆ. ಮತದಾನ ಮಾಡುವ ಹಕ್ಕಿದ್ದರೂ ಮತ ಹಾಕಿಲ್ಲ. ಇವರು ಬದುಕಿದ್ದು ಸತ್ತಂತೆ ಎಂದು ಬ್ಯಾನರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಪ್ರತಿಬಾರಿಯಂತೆ ಈ ಬಾರಿಯೂ ರಾಜಧಾನಿ ಬೆಂಗಳೂರಿನ ಮತದಾರರಲ್ಲಿ ನಿರುತ್ಸಾಹ ಮುಂದುವರೆದಿದ್ದು, ಮತದಾನ ಪ್ರಮಾಣ ನಿರೀಕ್ಷೆಯಂತೆ ಕಡಿಮೆ ಪ್ರಮಾಣದಲ್ಲಾಗಿದೆ. ಬೇರೆ ಕಡೆಗಳಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲೂ ಜನರು ಉತ್ಸಾಹದಿಂದ ಮತಚಲಾಯಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಭಾರತದ 527 ಆಹಾರ ಪದಾರ್ಥಗಳಲ್ಲಿಅಪಾಯಕಾರಿ ಕ್ಯಾನ್ಸರ್ ಕಾರಕ ಎಥಿಲೀನ್ ಆಕ್ಸೆಡ್ ಪತ್ತೆಯಾಗಿರುವುದಾಗಿ ಯುರೋಪಿಯನ್ ಒಕ್ಕೂಟದ ಆಹಾರ ಸುರಕ್ಷತಾ ಪ್ರಾಧಿಕಾರ ತಿಳಿಸಿದೆ. ಇತ್ತೀಚಿಗಷ್ಟೇ ಸಿಂಗಪುರ ಮತ್ತು ಹಾಂಗ್ ಕಾಂಗ್ ಮಾರುಕಟ್ಟೆಗಳಲ್ಲಿ ಭಾರತದ ಆಹಾರ ಪದಾರ್ಥಗಳನ್ನು ಇದೇ ಕಾರಣವೊಡ್ಡಿ ನಿಷೇಧಿಸಲಾಗಿತ್ತು. ಸಂರಕ್ಷಿತ ಆಹಾರ ಪದಾರ್ಥಗಳಲ್ಲಿ ಇಥೈನಾಲ್ ಅಂಶವು ನಿಗದಿತ ಮಟ್ಟಕ್ಕಿಂತ ವಿಪರೀತ ಹೆಚ್ಚಾಗಿ ಬಳಕೆಯಾಗಿರುವುದರಿಂದ ಭಾರತ ಮೂಲದ ಆಹಾರ ಉತ್ಪಾದನಾ ಸಂಸ್ಥೆಗಳಿಗೆ ನಿರ್ಬಂಧದ ಆತಂಕ ಎದುರಾಗಿದೆ. ಈ ಹಿಂದೆ ಭಾರತದಿಂದ ರಫ್ತಾದ ಗಸಗಸೆ ಮತ್ತು ಒಣಹಣ್ಣು ಸಂಸ್ಕರಿತ ಬೀಜಗಳಲ್ಲಿ ವಿಷಕಾರಿ ಅಂಶ ರಾಸಾಯನಿಕಗಳು ಪತ್ತೆಯಾಗಿತ್ತು. ಈ ಕುರಿತು ಭಾರತೀಯ ಆಹಾರ ನಿಯಂತ್ರಣ ಪ್ರಾಧಿಕಾರದ ಅಧಿಕಾರಿಗಳು ಪ್ರತಿಕ್ರಿಯಿಸಿದ್ದು, ಈ ಕೂಡಲೇ ತ್ವರಿತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಭಾರತದಿಂದ ರಫ್ತಾಗುವ ಆಹಾರ ಪದಾರ್ಥಗಳನ್ನು ಗಾಮಾ ರೇ ಟೀಟ್ ಮೆಂಟ್ ರೀತಿಯ ಅತ್ಯುನ್ನತ ವಿಧಾನಗಳಿಂದ ಶುದ್ದೀಕರಿಸಲಾಗುವುದು ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಕಾನ್ಪುರ: ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಯ ಮೊಬೈಲ್ ಸ್ಫೋಟಗೊಂಡು ಮಹಿಳೆ  ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಫರೂಕಾಬಾದ್ ಜಿಲ್ಲೆಯ ನಹ್ರೈಯಾ ಗ್ರಾಮದ ನಿವಾಸಿ ಪೂಜಾ (28) ಮೃತ ಮಹಿಳೆಯಾಗಿದ್ದಾರೆ. ಘಟನೆಯ  ವಿವರ: ಮಹಿಳೆ  ಸ್ಕೂಟಿಯಲ್ಲಿ ಕಾನ್ಪುರಕ್ಕೆ ತೆರಳುತ್ತಿದ್ದರು.ಈ ವೇಳೆಕಾನ್ಪುರ-ಅಲಿಗಢ ಹೆದ್ದಾರಿಯ ಚೌಬೆಪುರ ಪೊಲೀಸ್ ಠಾಣೆ ಪ್ರದೇಶದ ಮನ್ಪುರ್ ಗ್ರಾಮದ ಬಳಿಯ ಅವರ ಮೊಬೈಲ್ ಇದ್ದಕ್ಕಿದ್ದಂತೆ ಸ್ಫೋಟ ಆಗಿದೆ.  ಸ್ಫೋಟ ಸಂಭವಿಸಿದ ತಕ್ಷಣ ಅವರ ಸ್ಕೂಟಿ ನಿಯಂತ್ರಣ ಕಳೆದುಕೊಂಡು ರಸ್ತೆಯ ಮಧ್ಯದಲ್ಲಿದ್ದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಸ್ಕೂಟಿ  ಡಿವೈಡರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಹೆಲ್ಮೆಟ್ ಧರಿಸದ ಕಾರಣ ತಲೆಗೆ ಪೆಟ್ಟುಬಿದ್ದು ಮಹಿಳೆ ಸಾವನ್ನಪ್ಪಿದ್ದಾರೆ  ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More