Author: admin

ಬೆಂಗಳೂರು: ಲೋಕಸಭೆ ಚುನಾವಣೆ ಎರಡನೇ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದೆ. 2ನೇ ಹಂತದಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಲೋಕಸಭಾ ಕ್ಷೇತ್ರಗಳೂ ಸೇರಿವೆ. ಚುನಾವಣೆ ಹಿನ್ನೆಲೆಯಲ್ಲಿ ಎರಡು ದಿನ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಚುನಾವಣಾ ಆಯೋಗವು 2,100 ಕೆಎಸ್ ಆರ್ ಟಿಸಿ ಹಾಗೂ 1,700 ಬಿಎಂಟಿಸಿ ಬಸ್ ಗಳನ್ನು ಬುಕ್ ಮಾಡಿಕೊಂಡಿದ್ದು, ಸರ್ಕಾರಿ ಬಸ್ ಗಳಿಗೆ ಕಿ.ಮೀ. 57 ರೂ. ದರ ನಿಗದಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರದಲ್ಲಿ ಎರಡು ದಿನ ವ್ಯತ್ಯಯವಾಗುವ ಸಾಧ್ಯತೆ ಇದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಗುಜರಾತ್ ನಾಡಿಯಾಡ್ ಬಳಿ ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನೆಗಾಗಿ 100 ಮೀಟರ್ ಉದ್ದದ ಎರಡನೇ ಉಕ್ಕಿನ ಸೇತುವೆಯನ್ನು ಪ್ರಾರಂಭಿಸಲಾಗಿದೆ. ಭುಜ್ ಜಿಲ್ಲೆಯಲ್ಲಿರುವ ಕಾರ್ಯಾಗಾರದಲ್ಲಿ 1486 ಮೆಟ್ರಿಕ್ ಟನ್ ಉಕ್ಕಿನ ಸೇತುವೆಯನ್ನು ನಿರ್ಮಿಸಲಾಗಿದೆ. ಈ ಸೇತುವೆಯನ್ನು ನೆಲದಿಂದ 15.5 ಮೀಟರ್ ಎತ್ತರದಲ್ಲಿ ನಿರ್ಮಿಸಲಾಗಿದೆ. ಭಾರತೀಯ ರೈಲ್ವೆ ಮಾರ್ಗದ ವಿದ್ಯುತ್ ಬ್ಲಾಕ್ ಮತ್ತು ಸಂಚಾರ ಯೋಜನೆಯನ್ನು ಗಮನದಲ್ಲಿಟ್ಟುಕೊಂಡು ಈ ಸೇತುವೆಯನ್ನು ನಿರ್ಮಿಸಲಾಗಿದೆ. ರೈಲ್ವೆ ಮಾರ್ಗಗಳು, ಎಕ್ಸ್ ಪ್ರೆಸ್ ವೇಗಳು ಮತ್ತು ಹೆದ್ದಾರಿಗಳನ್ನು ದಾಟಲು ಉಕ್ಕಿನ ಸೇತುವೆಗಳು ಸೂಕ್ತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಂಟೆಗೆ 100-160 ಕಿ.ಮೀ ವೇಗದಲ್ಲಿ ಚಲಿಸಬಲ್ಲ ರೈಲುಗಳಿಗೆ ಉಕ್ಕಿನ ಸೇತುವೆಗಳನ್ನು ನಿರ್ಮಿಸುವ ಪರಿಣತಿಯನ್ನು ಭಾರತ ಹೊಂದಿದೆ. ಈಗ ಅದೇ ಪರಿಣತಿಯನ್ನು 320 ಕಿ.ಮೀ ವೇಗದ ಎಂಎಎಚ್‌ಎಸ್‌ಆರ್ಸಿ  ಗೆ ಅನ್ವಯಿಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಮದುವೆ ಮೆರವಣಿಗೆ ವೇಳೆ ಮಾಜಿ ಪ್ರಿಯತಮೆಯೊಬ್ಬಳು ವರನ ಮೇಲೆ ಆಯಸಿಡ್​​ ಎರಚಿದ ಘಟನೆ ನಡೆದಿದೆ. ಪರಿಣಾಮ ಈ ದಾಳಿಯಿಂದ ವರನಿಗೆ ಸುಟ್ಟ ಗಾಯಗಳಾಗಿವೆ. ವರನ ಹತ್ತಿರವಿದ್ದ ಮೂವರು ಮಹಿಳೆಯರಿಗೂ ಕೂಡ ಇದರಿಂದ ಗಾಯಗಳಾಗಿವೆ.‌ ಬಲ್ಲಿಯಾದಲ್ಲಿರುವ ದುಮರಿ ಗ್ರಾಮದಲ್ಲಿ ರಾಕೇಶ್​ ಬಿಂದ್​ ಎಂಬ ವರನ ಮದುವೆ ಮೆರವಣೆಗೆ ನಡೆಯುತ್ತಿದ್ದ ವೇಳೆ, ಆತನ ಮಾಜಿ ಪ್ರಿಯತಮೆ​ ವರನ ಬಳಿ ಬಂದು ತನ್ನ ಕೈಯಲ್ಲಿದ್ದ ಆಯಸಿಡ್​ ಬಾಟಲಿಯಿಂದ ಆತನ ಮೇಲೆ ದಾಳಿ ನಡೆಸಿದ್ದಾಳೆ. ಯುವತಿಯನ್ನು ಕೂಡಲೇ ಬಂಧಿಸಿದ ರಾಕೇಶ್​​ ಸಂಬಂಧಿಕರು ಆಕೆಗೆ ಸರಿಯಾಗಿ ಥಳಿಸಿದ್ದಾರೆ. ಆಯಸಿಡ್​​ ದಾಳಿಯಿಂದ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ನಂತರ ವರನು ಮದುವೆ ಮನೆಗೆ ತೆರಳಿ ವಧುವಿಗೆ ತಾಳಿ ಕಟ್ಟಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನಟಿ ಅಮೂಲ್ಯವ ಅವರ ಮಾವನ ಮನೆ ಮೇಲೆ ಚುನಾವಣಾಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ ಘಟನೆಯೊಂದು ನಡೆದಿದೆ. ಆರ್‌.ಆರ್‌. ನಗರದಲ್ಲಿರುವ ಮನೆ ಮೇಲೆ ಅಧಿಕಾರಿಗಳು ಶೋಧ ಮಾಡಿದ್ದಾರೆ. ಈ ಸಮಯದಲ್ಲಿ ರಾಮಚಂದ್ರಪ್ಪ ಅವರ ಮನೆಯಲ್ಲಿ ಯಾವುದೇ ಬೆಲೆಬಾಳುವ ವಸ್ತು ಅಥವಾ ಹಣ ಪತ್ತೆಯಾಗಿಲ್ಲ. ಮನೆಯಲ್ಲಿ ಫಂಕ್ಷನ್‌ ಎಂದು ಸಂಗ್ರಹಿಸಿದ್ದ 31 ಲೀಟರ್‌ ಮದ್ಯವನ್ನು ಅಧಿಕಾರಿಗಳು ವಶಪಡಿಸಿದ್ದಾರೆ. ಕಾಂಗ್ರೆಸ್ ‌ನವರು ಈ ಭಾಗದಲ್ಲಿ ಹಣ ಹಂಚಿಕೆ ಮಾಡುತ್ತಿದ್ದರು. ಅದಕ್ಕೆ ನಾವು ಅಡ್ಡಿಪಡಿಸುತ್ತೇವೆ ಎಂದು ನಮ್ಮ ಮನೆ ಮೇಲೆ ದಾಳಿ ಮಾಡಿದ್ದಾರೆ. ದಾಳಿ ಸಂದರ್ಭ ಆರ್‌ಓ ಗೆ ಪದೇ ಪದೇ ಫೋನ್‌ ಬರ್ತಾನೆ ಇತ್ತು. ಎರಡು ದಿನಕ್ಕಾದರೂ ಒಳಕ್ಕೆ ಹಾಕಿಸಿ, ಏನೋ ದೊಡ್ಡದಾಗಿ ಸಿಗುತ್ತೆ, ಕೂಲ್‌ ಆಗುತ್ತೆ ಅಂತಾ ಬಂದರು, ಹಾಟ್‌ ಆಗಿ ಹೋದರು ಎಂದು ಬಿಜೆಪಿ ಮುಖಂಡ ರಾಮಚಂದ್ರ ಹೇಳಿದ್ದಾರೆ. ಮೊಮ್ಮಕ್ಕಳ ಹುಟ್ಟುಹಬ್ಬಕ್ಕೆಂದು ಲಿಕ್ಕರ್‌ ತರಿಸಿದ್ದೆ. ಚುನಾವಣಾ ಮಟ್ಟದಲ್ಲಿ ಹುಟ್ಟುಹಬ್ಬ ಮಾಡಬಾರದು ಎಂದು ಸುಮ್ಮನಿದ್ದೆವು. ಈಗ ಅದನ್ನ ವಶಕ್ಕೆ ಪಡೆದಿದ್ದಾರೆ. ಬಿಜೆಪಿಗೆ ಲೀಡ್‌…

Read More

ಬೆಂಗಳೂರು: ಬೆಂಗಳೂರು ಕರಗ ಮೆರವಣಿಗೆಯ ವೇಳೆ ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಯುವಕ ಡಿ.ಸಾರದಿ ಕೊಲೆಯಾದ ಯುವಕನಾಗಿದ್ದಾನೆ. ಏ.24ರಂದು ಮುಂಜಾನೆ 3.30ರ ಸುಮಾರಿಗೆ ಅಣ್ಣಮ್ಮ ದೇಗುಲದ ಮುಂದೆಯೇ ಯುವಕನನ್ನು ಕೊಲೆ ಮಾಡಲಾಗಿದೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಒಬ್ಬ ವ್ಯಕ್ತಿ ಸಾರದಿ ಮತ್ತು ಸ್ನೇಹಿತರನ್ನು ಟಚ್ ಮಾಡಿದ್ದಾನೆ. ಟಚ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮೂರ್ನಾಲ್ಕು ಹುಡುಗರಿಂದ ಸಾರದಿ ಮೇಲೆ ಮಾರಣಾಂತಿಕವಾಗಿ ಹಲ್ಲೆಯಾಗಿದೆ. ತಕ್ಷಣವೇ ಸಾರದಿಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಆದರೆ  ಚಿಕಿತ್ಸೆ ಫಲಕಾರಿಯಾಗದೆ ಸಾರದಿ ಮೃತಪಟ್ಟಿದ್ದಾನೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಗನ್‌ ತೋರಿಸಿ 40 ಲಕ್ಷ ರೂಪಾಯಿ ದರೋಡೆ ಮಾಡಿದ ಘಟನೆ ಸಿಲಿಕಾನ್‌ ಸಿಟಿಯಲ್ಲಿ ನಡೆದಿದೆ. ರಾತ್ರಿ 8 ಗಂಟೆ ಸುಮಾರಿಗೆ ವರ್ನಾ ಕಾರಿನಲ್ಲಿ ಬಂದಿದ್ದ ದರೋಡೆಕೋರರು, ಇದ್ದಕ್ಕಿದ್ದಂತೆ ಮನೆಗೆ ನುಗ್ಗಿದ್ದಾರೆ. ಬಳಿಕ ಗನ್‌ ತೋರಿಸಿ, ಹೆದರಿಸಿ ಕಳ್ಳತನ ಮಾಡಿದ್ದಾರೆ. ಕೊಡಿಗೆಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಸಹಕಾರ ನಗರದಲ್ಲಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಘಟನೆ ನಡೆದ ಅಕ್ಕ ಪಕ್ಕ ಸಿಸಿ ಕ್ಯಾಮರಾಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಪತ್ನಿ ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ಆಘಾತಕ್ಕೊಳಗಾದ ಪತಿಯೂ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಯೋಗೇಶ್‌ ಕುಮಾರ್‌(36) ಹಾಗೂ ಮಣಿಕರ್ಣಿಕಾ ಕುಮಾರಿ(28) ಮೃತ ದುರ್ದೈವಿಗಳಾಗಿದ್ದಾರೆ. ಅವರು 6 ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಏಪ್ರಿಲ್‌ 22 ರಂದು ಮಣಿಕರ್ಣಿಕಾ ಅವರು ತಡಿಯಾವಾಣ ಆರೋಗ್ಯ ಕೇಂದ್ರಕ್ಕೆ ಹೋಗುವಾಗ ಅಪರಿಚಿತ ವಾಹನವೊಂದು ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಈ ವೇಳೆ ಮಣಿಕರ್ಣಿಕಾ ಮೃತಪಟ್ಟಿದ್ದರು. ಗುರುತಿನ ಚೀಟಿ ಆಧಾರದ ಮೇಲೆ ಮಣಿಕರ್ಣಿಕಾ ಸಾವಿನ ಸುದ್ದಿಯನ್ನು ಪತಿ ಯೋಗೇಶ್‌ ಗೆ ತಿಳಿಸಲಾಗಿದ್ದು, ಪತ್ನಿ ಸಾವಿನಿಂದ ನೊಂದ ಪತಿ, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಡೆತ್‌ ನೋಟ್‌ ಪತ್ತೆಯಾಗಿದ್ದು, “ನಾವು ಇದ್ದರೂ ಜತೆಯಾಗಿಯೇ, ಸತ್ತರೂ ಜತೆಯಾಗಿಯೇ” ಎಂದು ಬರೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬ್ಲಾಕ್ ಟೀ ಕುಡಿಯುವುದು ಒಳ್ಳೇದಾ ಕೆಟ್ಟದ್ದಾ?: ಬೆಳಗ್ಗೆ ತಿಂಡಿ ತಿನ್ನುವ ಮುಂಚೆ ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಇನ್ನು ಕೆಲವರಿಗೆ ಬ್ಲ್ಯಾಕ್ ಟೀ ತುಂಬಾ ಇಷ್ಟ ಆಗುತ್ತೆ.. ಇದು ಆರೋಗ್ಯಕ್ಕೂ ಒಳ್ಳೆಯದೂ ಎಂಬ ಮಾತು ಇದೆ. ಆದರೆ ಬೆಳಗಿನ ಸಮಯದಲ್ಲಿ ಬ್ಲ್ಯಾಕ್ ಟೀ ಕುಡಿಯುವುದು ಅಷ್ಟು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. ಏಕೆಂದರೆ ಇದು ಹಲವು ಕಾಯಿಲೆಗಳನ್ನು ತರುತ್ತದೆ ಎಂದು ಹೇಳಲಾಗುತ್ತದೆ. ತಜ್ಞರ ಲೆಕ್ಕಾಚಾರದಲ್ಲಿ ಬ್ಲ್ಯಾಕ್ ಟೀ ತುಂಬಾ ಆಮ್ಮಿಯ ಪ್ರಭಾವವನ್ನು ಹೊಂದಿದ್ದು, ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ದೂರ ಸರಿಯುವುದು ಉತ್ತಮ. ಸೀತಾಫಲ ಹಣ್ಣಿಂದ ಇರೋ ಪ್ರಯೋಜನ ಒಂದೆರೆಡಲ್ಲ: ಸೀತಾಫಲವು ಕಣ್ಣುಗಳಿಗೆ ತುಂಬಾ ಒಳ್ಳೆಯದು. ಇದರಲ್ಲಿರುವ ಲುಟೀನ್ ಶಕ್ತಿಯುತವಾದ ಉತ್ಕರ್ಷಣ ನಿರೋಧಕವಾಗಿದೆ. ಇದು ಕಣ್ಣುಗಳಲ್ಲಿ ಕಂಡುಬರುತ್ತದೆ. ಇದನ್ನು ತಿನ್ನುವುದರಿಂದ ನಿಮ್ಮ ಕಣ್ಣುಗಳನ್ನು ರಾಡಿಕಲ್ ಹಾನಿಯಿಂದ ರಕ್ಷಿಸುತ್ತದೆ. ಸೀತಾಫಲ ತಿನ್ನುವುದರಿಂದ ದೇಹದಲ್ಲಿ ವಿಟಮಿನ್ ಸಿ ಕೊರತೆಯನ್ನು ಪೂರೈಸುತ್ತದೆ. ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ಹಣ್ಣುಗಳು ಸ್ನಾಯು ನೋವನ್ನು ನಿವಾರಿಸುತ್ತದೆ. ಮೂಳೆಗಳನ್ನು…

Read More

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ರಾಜಧಾನಿ ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, 23 ವರ್ಷದ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಐವರು ಕಾಮುಕರು ಯುವತಿನ್ನು ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿದ್ದಾರೆ. ಸದ್ಯ ಸಂತ್ರಸ್ತೆ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಹೈಗ್ರೌಂಡ್ಸ್ ಪೊಲೀಸರು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ರೈಲಿಗೆ ಸಿಲುಕಿ 25 ವರ್ಷದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಆಂಧ್ರಪ್ರದೇಶದ ಮೂಲದ ಚಿತ್ತೂರಿನ ಮೂವರು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಮೃತರನ್ನು ಶಶಿಕುಮಾರ್ (23), ಲೋಕೇಶ್ (25) ಮೃತ ದುರ್ದೈವಿಗಳು. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ಆಗಮಿಸಿದ ಬೈಯಪ್ಪನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ, ಇನ್ನೂ ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ ಅ‍ಷ್ಟೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More