Author: admin

ಕೊರಟಗೆರೆ : ಬಡವ, ಶ್ರೀಮಂತ ಎನ್ನದೇ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವಿದ್ಯುತ್ ಅವಶ್ಯಕತೆಯಿದೆ. ವಿದ್ಯುತ್‌ನಿಂತ ಉಪಯೋಗವೂ ಇದೆ, ಅಪಾಯವು ಇದೆ. ಇದಕ್ಕೆ ಯಾವುದೇ ಜಾತಿ, ಧರ್ಮ, ಭೇದವಿಲ್ಲ ಎಂದು ಎಲೆರಾಂಪುರ ಶ್ರೀಮಠದ ಪೀಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ ತಿಳಿಸಿದರು. ಕೊರಟಗೆರೆ ಪಟ್ಟಣದ ಬೆಸ್ಕಾಂ ಕಚೇರಿ ಪಕ್ಕದಲ್ಲಿನ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದ ನೂತನ ಕಚೇರಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಗುತ್ತಿಗೆದಾರರ ನಡುವೆ ಉತ್ತಮ ಬಾಂಧವ್ಯ ಇರಬೇಕು, ಗುತ್ತಿಗೆದಾರರು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ತಮ್ಮ ವೃತ್ತಿಯಲ್ಲಿ ಯಶಸ್ವಿಯಾಗಬೇಕಿದೆ ಎಂದರು. ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ವಿದ್ಯುತ್ ಗುತ್ತಿಗೆದಾರರು ಸಂಘಟನೆ ಸ್ಥಾಪನೆ ಮೂಲಕ ಸಾಧಕ ಬಾದಕಗಳಿಗೆ ಪೂರಕವಾಗಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರ ಕೂಡ ವಿದ್ಯುತ್ ಗುತ್ತಿಗೆದಾರರ ಬೇಡಿಗಳನ್ನು ಆದಷ್ಟು ಬೇಗ ಈಡೇರಿಸಬೇಕಿದೆ. ಖಾಸಗಿ ಸ್ಥಳದಲ್ಲಿ ಕಚೇರಿ ತಾತ್ಕಲಿಕವಾಗಿರಲಿದ್ದು ಶಾಸಕರು ಈ ಬಗ್ಗೆ ಗಮನಹರಿಸಿ ಗುತ್ತಿಗೆದಾರರ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ, ಉದ್ಘಾಟನೆ ಮಾಡಬೇಕಿದೆ ಎಂದು ಒತ್ತಾಯ ಮಾಡಿದರು.…

Read More

ಮಂಡ್ಯ: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ರೂಪಿಸಲು ವಿದೇಶಿ ಫಂಡಿಂಗ್ ನಡೆದಿರುವ ಬಗ್ಗೆ ಅನುಮಾನ ಇದೆ. ಇದರ ಬಗ್ಗೆ ಸತ್ಯಾಸತ್ಯತೆ ಹೊರತರಲು NIA ತನಿಖೆ ಅವಶ್ಯಕವಾಗಿದೆ ಎಂದು JDS ಯುವ ಘಟದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಧರ್ಮಸ್ಥಳ ಪಾವಿತ್ರ್ಯತೆಯನ್ನ ಹಾಳು ಮಾಡಲು ಒಳಸಂಚು ರೂಪಿಸಿದ್ದು, ರಾಜ್ಯದ ಜನರಿಗೆ SIT ತನಿಖೆ ಮೇಲೆ ನಿರೀಕ್ಷೆಗಳಿಲ್ಲ. NIA ತನಿಖೆಗೆ ವಹಿಸಿದರೆ ಷಡ್ಯಂತ್ರ ಬಯಲಾಗಲಿದೆ ಎಂದು ಹೇಳಿದರು. ಧರ್ಮಸ್ಥಳ ಯಾತ್ರೆಗೆ ಹಾಸನವನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿದ್ದು, ಮುಖಂಡರು, ಕಾರ್ಯಕರ್ತರು ಹಾಸನಕ್ಕೆ ತೆರಳಲಿದ್ದಾರೆ. ಅಲ್ಲಿ ಉಪಾಹಾರ ವ್ಯವಸ್ಥೆ ಮಾಡಲಾಗಿದೆ. ನಂತರ ಧರ್ಮಸ್ಥಳ ನೇತ್ರಾವತಿಗೆ ತೆರಳಿ, ಅಲ್ಲಿ ಸ್ನಾನ ಮಾಡಿದ ಬಳಿಕ ಅಲ್ಲಿಂದ ಮಂಜುನಾಥಸ್ವಾಮಿ ದೇವಸ್ಥಾನದವರೆಗೆ ಪಾದಯಾತ್ರೆ ಮಾಡುತ್ತೇವೆ. ಈ ಯಾತ್ರೆಯಲ್ಲಿ ಜೆಡಿಎಸ್‌‍ ಲೋಕಸಭಾ ಸದಸ್ಯರು, ಶಾಸಕರು, ಮಾಜಿ ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ಕಾರ್ಯಕರ್ತರು, ಭಕ್ತರು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಲಿದ್ದಾರೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ…

Read More

ತಿಪಟೂರು: ವಿದ್ಯಾರ್ಥಿಗಳು ಉದ್ಯೋಗವನ್ನು ಹುಡುಕದೆ ಸ್ವಂತ ಉದ್ಯಮಿಗಳಾಗಿ ಉದ್ಯೋಗವನ್ನು ಮಾಡಬೇಕು, ಪ್ರತಿಯೊಬ್ಬ ವ್ಯಕ್ತಿಗಳು ದೇಶದ ಅಭಿವೃದ್ಧಿಗೆ ಸೈನಿಕರು, ರೈತರು, ಸ್ವಂತ ಉದ್ಯಮಿಗಳಾಗಿ ಬೆಳೆದು ದೇಶಕ್ಕೆ ಕೊಡಗೆ ನೀಡಬೇಕೆಂದು ಕಾಪರ್ ಇಂಡಸ್ಟ್ರೀಸ್ ಚೇರ್ಮನ್ ಚಂದ್ರಶೇಖರ್ ತಿಳಿಸಿದರು. ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಉದ್ಯಮಶೀಲತೆ ವೃತ್ತಿಗಾಗಿ  ಅವಕಾಶಗಳ ಮಹಾಸಾಗರ ಎಂಬ ಕಾರ್ಯಾಗಾರದಲ್ಲಿ ಮಾತನಾಡಿ, ನಾನು ದೇಶಕ್ಕಾಗಿ ಏನು ಮಾಡಿದೆ ತೆರಿಗೆ ಪಾವತಿಸುವುದರ ಮೂಲಕ ದೇಶದ ಆದಾಯವನ್ನು ಹೆಚ್ಚಿಸಿ ರಾಷ್ಟ್ರವನ್ನು ಅಭಿವೃದ್ಧಿಯತ್ತ ಮುನ್ನಡೆಸಬೇಕು ಎಂದರು. ತುಮಕೂರಿನ ವಿವಿಯ ರಿಜಿಸ್ಟರ್ ಎನ್. ಕೊಟ್ರೇಶ್ ಮಾತನಾಡಿ, ತುಮಕೂರು ವಿವಿ ದೇಶದ ಪ್ರತಿಷ್ಠಿತ ವಿದ್ಯೆ ವಿಶ್ವವಿದ್ಯಾಲಯವಾಗಿದೆ ದೇಶದ 75 ವಿವಿಗಳಲ್ಲಿ ತುಮಕೂರು ಇವತ್ತು 53ನೇ  ಸ್ಥಾನ ಪಡೆದಿರುವುದು ನಮ್ಮೆಲ್ಲರ ಹೆಮ್ಮೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸಿಇಒ ಡಾಕ್ಟರ್ ಸತೀಶ್ ಎಂ. ಬಾವಣ್ಕರ್ ಹಾಗೂ ಕಲ್ಪತರು ವಿದ್ಯಾ ಸಂಸ್ಥೆಯ ಅಧ್ಯಕ್ಷ ಪಿ.ಕೆ.ರುದ್ರಪ್ಪನವರು ಹಾಗೂ ಸಂಸ್ಥೆಯ ಉಪಾಧ್ಯಕ್ಷ ಬಾಗೆಪಲ್ಲಿ ನಟರಾಜ್, ಜಿ.ಪಿ.ದೀಪಕ್, ಎಮ್.ಆರ್.ಸಂಗಮೇಶ್, ಖಜಾಂಚಿ ಶಿವಪ್ರಸಾದ್, ಕೆ.ಏ.ಟಿ.ಪ್ರಾಂಶುಪಾಲ…

Read More

ಸರಗೂರು:  ಧರ್ಮಸ್ಥಳದಲ್ಲಿ ದೇವರ ಹೆಸರಿಗೆ ಕಳಂಕ ತರಲು ಕೆಲವರು ಷಡ್ಯಂತ್ರ ನಡೆಸಿದ್ದು, ಇದರ ಹಿಂದಿರುವವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಪಟ್ಟಣದ ಸಂತೆ ಮಾಸ್ತಮ್ಮ ದೇವಸ್ಥಾನದಿಂದ ಪ.ಪಂ. ಮುಂಭಾಗದವರೆಗೂ ಶನಿವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಸಂರಕ್ಷಣಾ ಅಭಿಯಾನ ಸಮಿತಿವತಿಯಿಂದ ಪ್ರತಿಭಟನೆ ನಡೆಸಲಾಯಿತು. ಭಗವಾಧ್ವಜ ಹಿಡಿದು ಬಂದ ಕಾರ್ಯಕರ್ತರು ಧರ್ಮ ಉಳಿಸಲು ಧರ್ಮ ಯುದ್ಧ ಎಂದು ಘೋಷಣೆ ಕೂಗಿದರು.  ಹಿಂದೂ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಮೈಕ್ ಪ್ರೇಮ್ ಕುಮಾರ್ ಮಾತನಾಡಿ, ಕಾಂಗ್ರೆಸ್‌ ಸರಕಾರ ಹಿಂದೂ ದೇವರ ದೇವಾಲಯಗಳಿಗೆ ಕನ್ನ ಹಾಕುತ್ತಿದೆ. ಇದೀಗ ಅವರ ಮುಖವಾಡ ಬಯಲಾಗಿದೆ. ಧರ್ಮ ಉಳಿಯಬೇಕಾದರೆ ಹಿಂದೂಗಳ ಒಗ್ಗಟ್ಟು ಮುಖ್ಯ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಹಿಂದೂ ದೇವಸ್ಥಾನಗಳ ವಿಷಯದಲ್ಲಿ ವಿಷ ಬೀಜ ಬಿತ್ತುತ್ತಿದ್ದಾರೆ ಎಂದು ಆರೋಪಿಸಿದರು. ಧರ್ಮಸ್ಥಳದಲ್ಲಿ ದೇವರ ಹೆಸರಿಗೆ ಕಳಂಕ ತರುವ ಷಡ್ಯಂತ್ರದ ವಿರುದ್ಧ ಕಾರವಾರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಕಾಂಗ್ರೆಸ್ ಸರ್ಕಾರ ಹಿಂದೂ ದೇವಾಲಯಗಳಿಗೆ ಕನ್ನ ಹಾಕುತ್ತಿದೆ ಎಂದು ಆರೋಪಿಸಿ, ಹಿಂದೂಗಳ ಒಗ್ಗಟ್ಟಿಗೆ ಕರೆ ನೀಡಿದರು.…

Read More

ಸರಗೂರು:  ಜನ ಸಂಪರ್ಕ ಸಭೆ ಅಂದರೆ, ಬರಿ ಆಶ್ವಾಸನೆ ಸಭೆ ಆಗಬಾರದು, ಅದು ಕಾರ್ಯರೂಪಕ್ಕೆ ಬರಬೇಕು ಮತ್ತು ಪ್ರತಿ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ಸಿಗುವ ಸೌಲಭ್ಯಗಳು ಸಿಗಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು. ಪಟ್ಟಣದ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಜನ ಸಂಪರ್ಕ ಸಭೆ ಪೂರ್ವಭಾವಿ ಸಭೆಯನ್ನು ಶುಕ್ರವಾರದಂದು ಶಾಸಕರು ಅನಿಲ್ ಚಿಕ್ಕಮಾದು ಅಧ್ಯಕ್ಷತೆಯಲ್ಲಿ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರ ಸಭೆ ಕರೆದು, ಚರ್ಚಿಸಿ ಮಾತನಾಡಿದರು. ನನಗೆ ಈ ಬಾರಿ ತಾಲ್ಲೂಕಿನಲ್ಲಿ ಶಿಕ್ಷಣ ಇಲಾಖೆವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ಹೆಚ್ಚಿನ ಫಲಿತಾಂಶ ಬರಬೇಕು. ಸರ್ಕಾರದ ಸೌಲಭ್ಯಗಳನ್ನು ಅಳವಡಿಸಿಕೊಂಡು ಉತ್ತಮ ಫಲಿತಾಂಶ ದೊರೆಯುವ ನಿಟ್ಟಿನಲ್ಲಿ ಶಿಕ್ಷಕರು ಕೆಲಸ ಮಾಡಬೇಕು ಎಂದು ಬಿಇಓ ರವರಿಗೆ ಸೂಚನೆ ನೀಡಿದರು. ಸರ್ಕಾರಿ ಶಾಲೆಗಳಲ್ಲಿ ಸರ್ಕಾರಿ ನೌಕರರಾದ ಶಿಕ್ಷಕರು ಮಕ್ಕಳಿಗೆ ಇಲ್ಲಿ ವ್ಯಾಸಂಗ ಮಾಡಬೇಡಿ  ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಎಂದು ಹೇಳಿರುವ ನನ್ನ ಗಮನಕ್ಕೆ ಬಂದಿದೆ ಎಂದು ತರಾಟೆಗೆ ತೆಗೆದುಕೊಂಡರು.…

Read More

ಸರಗೂರು: ಬಡವರು ಮತ್ತು ದಮನಿತರನ್ನು ಬೆಂಬಲಿಸುವಲ್ಲಿ ಅವರು ಕರುಣಾಮಯಿಯಾಗಿದ್ದರು ಮತ್ತು ಆಶ್ರಯ ಅಗತ್ಯವಿರುವ ಸಾವಿರಾರು ಜನರಿಗೆ ಅವಕಾಶಗಳನ್ನು ಒದಗಿಸಿದರು ಎಂದು ಅಖಿವೀಲಿಂ ಮಹಾಸಭಾದ ನಿಕಟಪೂರ್ವ ಅಧ್ಯಕ್ಷ ಹಾಗೂ ರಾಜೇಂದ್ರ ಮಹಾಸ್ವಾಮಿಗಳ ಭಕ್ತ ಬಳಗ ಗೌರವಾಧ್ಯಕ್ಷ ಡಿ.ಜಿ.ಶಿವರಾಜಪ್ಪ ತಿಳಿಸಿದರು. ಪಟ್ಟಣದ ಜೆಎಸ್ಎಸ್ ಶಿವರಾತ್ರಿ ಶಿವಾನುಭವ ಮಂಗಳ ಮಂಟಪದಲ್ಲಿ  ಸೂತ್ತೂರು ಶ್ರೀಗಳ 110 ನೇ ವರ್ಷದ ಹುಟ್ಟು ಹಬ್ಬ ಕಾರ್ಯಕ್ರಮವನ್ನು ಶುಕ್ರವಾರದಂದು ರಾಜೇಂದ್ರ ಮಹಾಸ್ವಾಮಿಗಳ ಬಳಗವತಿಯಿಂದ ಹಮ್ಮಿಕೊಂಡಿದ್ದು ಶ್ರೀಗಳ ಪೋಟೋ ಗೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಅವರು ಮಾತನಾಡಿದರು. ಎಲ್ಲರ ಒಳಿತಿನಲ್ಲಿ ದೃಢ ನಂಬಿಕೆಯುಳ್ಳವರಾಗಿದ್ದ ಅವರು, ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಶ್ರೀಮಠದ ವ್ಯವಹಾರಗಳ ಚುಕ್ಕಾಣಿ ಹಿಡಿದಿದ್ದರು — ಆ ಅವಧಿಯಲ್ಲಿ ಹಲವು ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳು ನಡೆದವು. ಅವರು ಎಲ್ಲರ ಒಳಿತನ್ನು ಹೊರತುಪಡಿಸಿ ಬೇರೇನನ್ನೂ ಬಯಸಲಿಲ್ಲ.  ಅವರಿಗೆ ಕೇವಲ ಹನ್ನೆರಡು ವರ್ಷ ವಯಸ್ಸಾಗಿದ್ದಾಗ ಪವಿತ್ರ ಸ್ಥಾನವನ್ನು ಅಲಂಕರಿಸಿದರು. ಅವರು ತಮ್ಮ ಗುರು ಮಂತ್ರ ಮಹರ್ಷಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಮಹಾಸ್ವಾಮೀಜಿ ಅವರೊಂದಿಗೆ ಶ್ರೀಮಠದ…

Read More

ಸರಗೂರು: ತಾಲೂಕಿನ ಕೊತ್ತೇಗಾಲ ಗ್ರಾಪಂ ವ್ಯಾಪ್ತಿಯ ಜಯನಗರ ಗ್ರಾಮದ ಜಯರಾಜು ರವರಿಗೆ ಸೇರಿದ ತಂಬಾಕು ಬ್ಯಾರನ್ ಗೆ ಗುರುವಾರದಂದು ಸಂಜೆ ಬೆಂಕಿ ತಗಲಿ ಲಕ್ಷಾಂತರ ರೂ. ಹಾನಿಯಾಗಿದೆ. ಸ್ಥಳಕ್ಕೆ ಧಾವಿಸಿದ ಹೆಚ್.ಡಿ.ಕೋಟೆ ಅಗ್ನಿಶಾಮಕ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಿಸಿ ಬ್ಯಾರನ್ ಗೆ ಮತ್ತು ಅಕ್ಕ ಪಕ್ಕದ ಮನೆಗಳಿಗೆ ಆಗುವ ಅನಾಹುತವನ್ನು ತಡೆದಿದ್ದಾರೆ. ಜಯರಾಜು ರವರಿಗೆ ಸೇರಿದ ತಂಬಾಕು ಬ್ಯಾರನ್ ನಲ್ಲಿ ತಂಬಾಕು ಸೊಪ್ಪು, ರಿಪರ್ ಗಳು ಕೋಲು, ಓಲೆ ಸರ ನೆತ್ತಿಸರ, ಮತ್ತು ಪೈಪ್ ಸೆಟ್ ಹಂಚುಗಳು, ಹಾಗೂ ಕಿಟಕಿ ಬಾಗಿಲುಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿಸಿದರು. ಸರಿಯಾದ ಸಮಯಕ್ಕೆ ಬಂದ ಅಗ್ನಿಶಾಮಕ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ಜಯರಾಜುರವರ ಕುಟುಂಬದವರು ಹಾಗೂ ಗ್ರಾಮಸ್ಥರು ಶ್ಲಾಘಿಸಿದ್ದಾರೆ. ಈ ಕಾರ್ಯಚರಣೆಯಲ್ಲಿ ಠಾಣೆಯ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾದ  ಎಮ್.ಜಿ.ಸೋಮಣ್ಣರವರು ಹಾಗೂ ಸಿಬ್ಬಂದಿಗಳಾದ ಮಂಜು ಎಸ್,  ಅರುಣ್ ಕುಮಾರ್, ಪುಂಡಲೀಕ ಲಮಾಣಿ, ಬಾಳಕೃಷ್ಣ ರವಳೋಜೆ, ಹಾಗೂ ಅಗ್ನಿಶಾಮಕ ಚಾಲಕರಾದ ಸುನೀಲ್ ಕುಮಾರ್…

Read More

ಬೆಂಗಳೂರು: ವಿಧಾನಸೌಧದಲ್ಲಿ ನಾಯಿಗಳ ರಕ್ಷಣೆ ಸಂಬಂಧ ಸರ್ಕಾರಕ್ಕೆ ವಿವರವಾದ ಮಾಹಿತಿ ಜೊತೆಗೆ ಪ್ರಸ್ತಾವನೆ ಕಳಿಸಿದ್ದೇವೆ. ಸರ್ಕಾರ ನಮಗೆ ಅನುಮತಿ ಕೊಟ್ಟರೆ ನಾಯಿಗಳಿಗೆ ಪ್ರತ್ಯೇಕ ನಿರ್ವಹಣೆ ಮಾಡೋ ಬಗ್ಗೆ ತೀರ್ಮಾನ  ಮಾಡುವುದಾಗಿ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಧಾನಸೌಧದಲ್ಲಿ 53 ನಾಯಿಗಳು ಇವೆ. ನಾಯಿಗಳು ವಿಧಾನಸೌಧದ ಒಳಗೆ ಬಾರದಂತೆ ತಡೆಯಲು ಗೇಟ್ ವ್ಯವಸ್ಥೆ ಇಲ್ಲ. ಶಾಸಕರು ವಾಕಿಂಗ್ ಮಾಡಬೇಕಾದ್ರೆ, ಜನರು ವಿಸಿಟ್ ಮಾಡಿದಾಗ ತೊಂದರೆ ಆಗ್ತಿದೆ. ಹೀಗಾಗಿ ನಾವು ಅವುಗಳ ರಕ್ಷಣೆಗೆ ಶೆಡ್ ನಿರ್ಮಾಣ ಮಾಡೋ ಪ್ಲ್ಯಾನ್ ಇದೆ ಎಂದಿದ್ದಾರೆ. ಖಾಸಗಿ ಎಸ್‌ ಜಿಒಗೆ ಕೊಟ್ಟು ಇವುಗಳಲ್ಲಿ ಸಾಕುವ ವ್ಯವಸ್ಥೆ ಮಾಡುವ ತೀರ್ಮಾನವಾಗಿ ಚರ್ಚೆ ಆಗಿವೆ. ನಾಯಿಗಳ ರಕ್ಷಣೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನ ಸರ್ಕಾರಕ್ಕೆ ರವಾನೆ ಮಾಡಿದ್ದೇವೆ. ಸರ್ಕಾರ ಅದಕ್ಕೆ ಒಪ್ಪಿಗೆ ಕೊಟ್ಟರೆ ಅನುಷ್ಟಾನ ಮಾಡ್ತೇವೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಟೋಕಿಯೋ(ಜಪಾನ್‌): ಭಾರತವು ರಾಜಕೀಯ ಹಾಗೂ ಆರ್ಥಿಕ ಸ್ಥಿರತೆಗಳಲ್ಲಿ ಪಾರ ದರ್ಶಕತೆ ಹೊಂದಿದ್ದು ವಿಶ್ವದಲ್ಲೇ ಮೂರನೇ ಅತಿದೊಡ್ಡ ಆರ್ಥಿಕ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ನರೇಂದ್ರಮೋದಿ ತಿಳಿಸಿದರು. ಭಾರತ ಮತ್ತು ಜಪಾನ್‌ ನಡುವಿನ ಆರ್ಥಿಕ ವೇದಿಕೆಯಲ್ಲಿ ಮಾತನಾಡಿದ ಅವರು, ದೇಶದ ರಾಜಕೀಯ, ಆರ್ಥಿಕ ಸ್ಥಿರತೆ ನೀತಿಗಳಲ್ಲಿ ಪಾರದರ್ಶಕತೆ ಮತ್ತು ಭವಿಷ್ಯವಾಣಿಯನ್ನು ಹೊಂದಿದೆ. ಭಾರತ ಇಂದು ವಿಶ್ವದಲ್ಲೇ 3ನೇ ಅತಿದೊಡ್ಡ ರಾಷ್ಟ್ರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಂಡವಾಳವು ಕೇವಲ ಬೆಳೆಯುವುದಿಲ್ಲ. ಅದು ಗುಣಿಸುತ್ತದೆ. ಕಳೆದ 12 ವರ್ಷಗಳಲ್ಲಿ ಆಗಿರುವ ಬೆಳವಣಿಗೆ ಮತ್ತು ಪರಿವರ್ತನೆ ಬಗ್ಗೆ ನಿಮಗೆಲ್ಲರಿಗೂ ತಿಳಿದಿದೆ. ನಾವು ಜಾಗತಿಕ ಜಿಡಿಪಿಗೆ ಶೇ.18ರಷ್ಟು ಕೊಡುಗೆ ನೀಡುತ್ತೇವೆ. ಮಾರುಕಟ್ಟೆಗಳು ಬಲವಾದ ಆದಾಯವನ್ನು ನೀಡುತ್ತದೆ. ಸುಧಾರಣೆ, ರೂಪಾಂತರ, ಕಾರ್ಯಕ್ಷಮತೆಯ ನಮ ವಿಧಾನವು ಪ್ರಗತಿಗೆ ಪೂರಕವಾಗಿದೆ ಎಂದು ಅಭಿಪ್ರಾಯಪಟ್ಟರು. ಜೆಟ್ರೊ ಹೇಳುವಂತೆ ಶೇ.80ರಷ್ಟು ಕಂಪನಿಗಳು ಭಾರತದಲ್ಲಿ ವಿಸ್ತರಿಸಲು ಬಯಸುತ್ತಿವೆ. ಶೇ.75ರಷ್ಟು ಕಂಪನಿಗಳು ಲಾಭ ಗಳಿಸುತ್ತಿವೆ. ನಮಲ್ಲಿ ಬಂಡವಾಳ ಹೂಡಿದರೆ ಅದು ಕೇವಲ ಬೆಳೆಯುವುದಲ್ಲ ಗುಣಿಸುತ್ತಾ ಹೋಗುತ್ತದೆ. ಅಂದರೆ ನಿಮ…

Read More

ಬೆಂಗಳೂರು: ಧರ್ಮಸ್ಥಳದ ವಿಚಾರಕ್ಕೆ ಸಂಬಂಧ ಪಟ್ಟಂತೆ ತನಿಖೆ ನಡೆಸಲು ನ್ಯಾಯಾಲಯದ ಅದೇಶದ ಮೇರೆಗೆ ಎಸ್‌‍ ಐಟಿ ರಚನೆ ಮಾಡಲಾಗಿದೆ. ಅದನ್ನು ತಪ್ಪು ಎನ್ನುವುದಾದರೆ, ನ್ಯಾಯಾಲಯದಲ್ಲೇ ಪ್ರಶ್ನೆ ಮಾಡಬೇಕಿತ್ತು ಎಂದು ಲೋಕೋ ಪಯೋಗಿ ಸಚಿವ ಸತೀಶ್‌ ಜಾರಕಿ ಹೊಳಿ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ರಾಜ್ಯಸರ್ಕಾರವನ್ನು ಟೀಕಿಸಲು ಸರಿಯಾದ ವಿಚಾರಗಳಿಲ್ಲ. ಹೀಗಾಗಿ ಅನಗತ್ಯವಾಗಿ ವಿವಾದ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಮೊದಲೆಲ್ಲಾ ಗ್ಯಾರಂಟಿ ಯೋಜನೆಗಳ ವಿರುದ್ದ ಟೀಕೆ ಮಾಡುವ ಪ್ರಯತ್ನ ಮಾಡಿದರು. ಅದನ್ನು ಯಾರೂ ಕೇಳಲಿಲ್ಲ. ಅನಂತರ ಬೇರೆ ಬೇರೆ ವಿಚಾರಗಳನ್ನು ಪ್ರಸ್ತಾಪಿಸಿ ಟೀಕೆ ಮಾಡುವ ಪ್ರಯತ್ನ ಮಾಡಿದರು. ಅದರಿಂದ ಯಾವುದೇ ಪ್ರಯೋಜನವಾಗದಿದ್ದಾಗ, ಈಗ ಧರ್ಮಸ್ಥಳದ ವಿಚಾರ ಹಿಡಿದು ಕೊಂಡಿದ್ದಾರೆ ಎಂದರು. ಇದರಲ್ಲಿ ಕಾಂಗ್ರೆಸ್‌‍ನ ಪಾತ್ರ ಏನೂ ಇಲ್ಲ. ರಾಜ್ಯಸರ್ಕಾರಕ್ಕೆ ಇದರಿಂದ ಲಾಭವೂ ಇಲ್ಲ, ನಷ್ಟವೂ ಇಲ್ಲ. ದೂರು ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯ ಆದೇಶ ನೀಡಿದೆ. ಅದರ ಆಧಾರದ ಮೇಲೆ ಎಸ್‌‍ಐಟಿ ತನಿಖೆ ನಡೆಸಲಾಗುತ್ತಿದೆ. ಬಿಜೆಪಿಯವರು ದಿಕ್ಕು…

Read More