Author: admin

ಇತ್ತೀಚಿನ ದಿನಮಾನದಲ್ಲಿ ಯುವ ಜನಾಂಗಕ್ಕೆ ಕಾಡುತ್ತಿರುವ ಅತಿ ದೊಡ್ಡ ಕಾಯಿಲೆ ಎಂದರೆ ಅದು ನಿದ್ರಾಹೀನತೆ. ಅದು ಎಷ್ಟರ ಮಟ್ಟಿಗೆಂದರೆ ಸ್ವತಃ ತಾಯಿಯೇ ಬಂದು ಲಾಲಿ ಹಾಡಿದರೂ ನಿದ್ದೆ ಮಾತ್ರ ಸಾಧ್ಯವಿಲ್ಲದಂತಾಗಿದೆ. ಇತ್ತೀಚೆಗೆ ಭಾರತದಲ್ಲಿನ ಸರಿಸುಮಾರು ಶೇ.58 ರಷ್ಟು ಜನರು ರಾತ್ರಿ ಹನ್ನೆರಡು ಗಂಟೆಯ ನಂತರ ಮಲಗುತ್ತಿದ್ದಾರೆ. ಈ ರೀತಿ ತಡವಾಗಿ ಮಲಗುವುದರಿಂದ ಬೆಳಗ್ಗೆ ಲೇಟಾಗಿ ಏಳುವುದು, ಎದ್ದಾಗ ನಿಶಕ್ತಿಯ ಭಾವನೆ ಅನುಭವಿಸುತ್ತಿದ್ದಾರೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಇತ್ತೀಚೆಗೆ ವಿಶ್ವ ನಿದ್ರಾ ದಿನದ ಹಿನ್ನೆಯಲ್ಲಿ ಗ್ರೇಟ್ ಇಂಡಿಯನ್ ಸ್ಟೀಪ್ ಸ್ಕೋರ್‌ ಕಾರ್ಡ್, ವರದಿಯೊಂದನ್ನು ಬಿಡುಗಡೆ ಮಾಡಿದ್ದು ಈ ವರದಿಯಲ್ಲಿ ನಿದ್ರಾಹೀನತೆಗೆ ಮುಖ್ಯ ಕಾರಣ ಅತಿಯಾದ ಡಿಜಿಟಲ್ ಸಾಮಗ್ರಿಗಳ ಬಳಕೆ ಹಾಗೂ ಅತಿಯಾದ ಒತ್ತಡ ಕಾರಣ ಎಂದು ತಿಳಿಸಿದೆ. ಈ ಸಮೀಕ್ಷೆಯಲ್ಲಿ ಒಟ್ಟಾರೆ 10,000 ಜನರನ್ನು ಬಳಸಿಕೊಳ್ಳಲಾಗಿದೆ. ಒಟಿಟಿ ಹಾಗೂ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದಾಗಿ ಶೇ.54ರಷ್ಟು ಜನರು ಸರಿಯಾದ ಸಮಯದಲ್ಲಿ ಮಲಗದೆ ಇರುವುದು ಹಾಗೂ ಶೇ.88ರಷ್ಟು ಜನರು ಮಲಗುವುದಕ್ಕೂ ಮುನ್ನ ಮೊಬೈಲ್ ಬಳಕೆ…

Read More

ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಯವರ 117ನೇ ಜನ್ಮ ಜಯಂತಿ ಹಿನ್ನೆಲೆಯಲ್ಲಿ ಇಂದು, ಸಿದ್ದಗಂಗಾ ಮಠಕ್ಕೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಭೇಟಿ ನೀಡಿ ಸ್ವಾಮೀಜಿಯ ಗದ್ದುಗೆ ದರ್ಶನ ಪಡೆದರು. ಇದೇ ವೇಳೆ ಸ್ಥಳೀಯ ಬಿಜೆಪಿ ಮುಖಂಡರು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರುದ್ರೇಶ್ ಸೇರಿದಂತೆ ಬಿಜೆಪಿ ಮುಖಂಡರು ಹಾಜರಿದ್ದರು. ಗದ್ದುಗೆ ದರ್ಶನ ಪಡೆದ ಡಾ ಮಂಜುನಾಥ್ ಅವರು ವಿಶೇಷ ಪೂಜೆಯನ್ನು ಸಲ್ಲಿಸಿದರು. ಇದೇ ವೇಳೆ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಕೂಡ ಅವರೊಂದಿಗೆ ಜೊತೆಗೂಡಿ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದರು. ಅಲ್ಲದೆ, ಇಬ್ಬರು ಬಿಜೆಪಿ ಅಭ್ಯರ್ಥಿಗಳು ಗದ್ದುಗೆಗೆ ವಿಶೇಷ ಪೂಜೆಯನ್ನು ಕೂಡ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕ ಜ್ಯೋತಿ ಗಣೇಶ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು. ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.…

Read More

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರೋ ವಿ. ಸೋಮಣ್ಣ ಇಂದು ಮೊದಲ ಸೆಟ್ ನ ನಾಮಪತ್ರ ಸಲ್ಲಿಸಿದರು. ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ತುಮಕೂರು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯಾಗಿರೋ ಶುಭಕಲ್ಯಾಣ್ ಗೆ ನಾಮಪತ್ರ ಸಲ್ಲಿದರು. ಸೋಮಣ್ಣಗೆ ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ, ಸುರೇಶ್ ಬಾಬು ಮತ್ತು ಮಾಜಿ ಶಾಸಕ ಸುಧಾಕರ್ ಲಾಲ್, ಬಿಜೆಪಿ ಮುಖಂಡ ಅನಿಲ್ ಕುಮಾರ್ ಸಾತ್ ನೀಡಿದರು. ತಮ್ಮ ಆರಾಧ್ಯ ಧೈವವಾಗಿರೋ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಬಳಿಕ ವಿನೋಭಾ ನಗರದ ಅರ್ಧನಾರೀಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ತುಮಕೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ, ಕಾಂಗ್ರೆಸ್ ಪಕ್ಷದಿಂದ ಕುಕ್ಕರ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕ್ರಮಕ್ಕೆ ಒತ್ತಾಯಿಸಿ ಚುನಾವಣಾ ಆಯೋಗಕ್ಕೇ ಪತ್ರ ಬರೆಯಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಡಾಕ್ಟರ್ ಮಂಜುನಾಥ ತಿಳಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ಕೂಡ ದಾಖಲಾಗಿದ್ದು ಸಾಕಷ್ಟು ಪ್ರಚಾರವನ್ನು ಕೂಡ ಮಾಧ್ಯಮಗಳೇ ನೀಡಿವೆ ಎಂದು ಹೇಳಿದರು. ಚುನಾವಣಾ ಆಯೋಗ ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು. ಇವತ್ತು ಮಠಕ್ಕೆ ಭೇಟಿ ನೀಡಿ, ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದೇನೆ. ನಾಳೆ ಸಂಜೆ ಚನ್ನಪಟ್ಟಣದಲ್ಲಿ ಕಾರ್ಯಕ್ರಮ ಇದೆ. ಕಾರ್ಯಕ್ರಮಕ್ಕೆ ಅಮಿತ್ ಷಾ ಆಗಮಿಸಲಿದ್ದಾರೆ ಎಂದರು. ನಾನು 4 ರಂದು ಗುರುವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ಎರಡು ಪಕ್ಷದ ಮುಖಂಡರು ಅಭಿಮಾನಿಗಳು, ಹಿತೈಷಿಗಳು ಬೆಂಬಲಿಗರು ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಲಿದ್ದಾರೆ. ರ್ಯಾಲಿ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಸ್ನೇಹ ಸಂಬಂಧಗಳೇ ಹಾಗೆ. ಏನನ್ನೂ ಮುಚ್ಚಿಡಲು ಸಾಧ್ಯವಾಗುವುದಿಲ್ಲ. ಇಡಬೇಕೆಂದರೂ ಮನಸ್ಸೂ ಒಪ್ಪುವುದಿಲ್ಲ. ಸ್ನೇಹಿತರಲ್ಲೇ ಎಲ್ಲಾ ಸಮಸ್ಯೆ ಹೇಳೋಣ, ಏನಾದರೂ ಒಂದು ಪರಿಹಾರ ದೊರೆಯಬಹುದು, ಇಲ್ಲಾ ಅಟ್ಲೀಸ್ಟ್ ಸಮಾಧಾನ ಆದರೂ ಆಗಬಹುದು ಎಂಬ ನಂಬಿಕೆ. ಆದರೆ ಇದೇ ನಂಬಿಕೆ ಇಲ್ಲೊಬ್ಬಳ ಜೀವವನ್ನೇ ತೆಗೆದಿದೆ. ಆಂಧ್ರದ ವಾರಾಂಗಲ್‌ ಜಿಲ್ಲೆಯಲ್ಲಿ ನಡೆದ ಭಯಾನಕ ಕೃತ್ಯದ ಬಗ್ಗೆ ಕೇಳಿದ್ರೆ ನೀವೇ ಶಾಕ್ ಆಗ್ತೀರಾ. ಮಲ್ಲಂಪಲ್ಲಿ ಮಂಡಲದ ಜಂಗಲಪಲ್ಲಿಯ ಅಕುನೂರಿ ಸುಪ್ರಿಯಾ(27) ಹೈದರಾಬಾದ್ ನಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿರುವ ಶಶಿಕಾಂತ್‌ ಹೈಸ್ಕೂಲ್‌ ನಲ್ಲಿ ಸಹಪಾಠಿಗಳು. ಇಲ್ಲಿ ಅಕುನೂರಿ ಸುಪ್ರಿಯ ಶಶಿಕಾಂತ್ ನನ್ನು ಬಾಲ್ಯ ಸ್ನೇಹಿತನೆಂದು ನಂಬಿ ಎಲ್ಲಾ ಸಮಸ್ಯೆ ಹೇಳಿಕೊಂಡರೆ ತನ್ನನ್ನು ನಂಬಿದ ಆಕೆಯನ್ನು ಈ ಪಾಪಿ ಬರ್ಬರವಾಗಿ ಕೊಂದಿದ್ದಾನೆ. ಅದೂ ತನ್ನ ಗೆಳತಿಯೊಂದಿಗೆ ಸೇರಿ!! ಅಂದಹಾಗೆ ಶಶಿಕಾಂತ್ ಗೆ ಇನ್ನೂ ಮದುವೆಯಾಗಿಲ್ಲ. ಆದರೆ ನಗರದಲ್ಲಿ ಮುಲುಗು ಜಿಲ್ಲೆಯ ಅಜೀರಾ ಶಿರೀಫಾ ಎಂಬ ವಿವಾಹಿತ ಮಹಿಳೆಯೊಂದಿಗೆ ವಾಸವಾಗಿದ್ದಾನೆ. ಇತ್ತ ಸುಪ್ರಿಯಾ ಮೈಸಂಪಲ್ಲಿಯ ವೆಂಗಲ ರಾಜ್…

Read More

ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಯವರ 117ನೇ ಜನ್ಮ ಜಯಂತಿ ಹಿನ್ನೆಲೆಯಲ್ಲಿ, ಇಂದು ಸಿದ್ದಗಂಗಾ ಮಠಕ್ಕೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಭೇಟಿ ನೀಡಿ ಸ್ವಾಮೀಜಿಯ ಗದ್ದುಗೆ ದರ್ಶನ ಪಡೆದರು. ಇದೇ ವೇಳೆ ಸ್ಥಳೀಯ ಬಿಜೆಪಿ ಮುಖಂಡರು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರುದ್ರೇಶ್ ಸೇರಿದಂತೆ ಬಿಜೆಪಿ ಮುಖಂಡರು ಹಾಜರಿದ್ದರು. ಗದ್ದುಗೆ ದರ್ಶನ ಪಡೆದ ಡಾ. ಮಂಜುನಾಥ್ ಅವರು ವಿಶೇಷ ಪೂಜೆಯನ್ನು ಸಲ್ಲಿಸಿದರು. ಇದೇ ವೇಳೆ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಕೂಡ ಅವರೊಂದಿಗೆ ಜೊತೆಗೂಡಿ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದರು. ಅಲ್ಲದೆ ಇಬ್ಬರು ಬಿಜೆಪಿ ಅಭ್ಯರ್ಥಿಗಳು ಗದ್ದುಗೆಗೆ ವಿಶೇಷ ಪೂಜೆಯನ್ನು ಕೂಡ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕ ಜ್ಯೋತಿ ಗಣೇಶ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಎಂಎಲ್‌ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೂರು ದಿನಗಳ ನಂತರ, ಮಾಜಿ ಪತ್ರಕರ್ತೆ ತೇಜಸ್ವಿನಿ ಗೌಡ ಅವರು ಶನಿವಾರ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಪವನ್ ಖೇರಾ ಮತ್ತು ಸಂಸದ ಜೈರಾಮ್ ರಮೇಶ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಮರು ಸೇರ್ಪಡೆಗೊಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕಣಕ್ಕಿಳಿಸದಿದ್ದಕ್ಕೆ ಬೇಸರಗೊಂಡು ಬಿಜೆಪಿ ತೊರೆದಿದ್ದಾರೆ. 2004 ರಿಂದ 2009 ರವರೆಗೆ ಕಾಂಗ್ರೆಸ್‌ ಸಂಸದರಾಗಿದ್ದ ತೇಜಸ್ವಿನಿ ಗೌಡ ಅವರು ಕಾಂಗ್ರೆಸ್‌ನಿಂದ ಪಕ್ಷಾಂತರಗೊಂಡು 2014 ರಲ್ಲಿ ಬಿಜೆಪಿ ಸೇರಿದರು. 2018 ರಲ್ಲಿ ಬಿಜೆಪಿಯಿಂದ ವಿಧಾನ ಸಭಾ ಕ್ಷೇತ್ರದಿಂದ ಪರಿಷತ್ತಿಗೆ ಆಯ್ಕೆಯಾಗಿದ್ದರು. “ಕರ್ನಾಟಕ ರಾಜಕೀಯದಲ್ಲಿ ಸಕ್ರಿಯ ನಾಯಕಿಯಾಗಿರುವ ತೇಜಸ್ವಿನಿ ಗೌಡ ಅವರನ್ನು ನಾವು ಕಾಂಗ್ರೆಸ್‌ಗೆ ಮರಳಿ ಸ್ವಾಗತಿಸುತ್ತೇವೆ. ತೇಜಸ್ವಿನಿ ಅವರು ಮುಂಬರುವ ಚುನಾವಣೆಯಲ್ಲಿ ಸಕ್ರಿಯರಾಗುತ್ತಾರೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ರಮೇಶ್ ಹೇಳಿದರು. ತೇಜಸ್ವಿ ಗೌಡ ತಮ್ಮ ಹೇಳಿಕೆಯಲ್ಲಿ, “ಕಾಂಗ್ರೆಸ್ ಕೇವಲ ಮಾತನ್ನು ನಂಬದೆ ಕ್ರಿಯೆಯನ್ನು ನಂಬುತ್ತದೆ. ಇದು ಉತ್ತಮ ಸಮಯ, ಮತ್ತು ಪ್ರಾಮಾಣಿಕವಾಗಿ, ನಾನು ಪಕ್ಷಕ್ಕಾಗಿ ಕೆಲಸ ಮಾಡಲು…

Read More

ತುಮಕೂರು: ಇಂದು ಶ್ರೀ ಶಿವಕುಮಾರಸ್ವಾಮಿಗಳ 117ನೇ ಜನ್ಮದಿನೋತ್ಸವ ಹಿನ್ನೆಲೆಯಲ್ಲಿ, ಸಿದ್ದಗಂಗಾ ಮಠದಲ್ಲಿ ಶ್ರೀಗಳ ಹುಟ್ಟುಹಬ್ಬ ಆಚರಣೆ ನಡೆಯುತ್ತಿದೆ. ಬೆಳಗ್ಗೆ 5 ಗಂಟೆಯಿಂದಲೇ ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ,ಅಭಿಷೇಕ ನೆರವೇರಿಸಲಾಯಿತು. ಬೆಳಗ್ಗೆ 8 ಗಂಟೆಗೆ ಶ್ರೀಗಳ ಪುತ್ಥಳಿಯನ್ನ ರುದ್ರಾಕ್ಷಿ ಮಂಟಪದಲ್ಲಿಟ್ಟು ವಾದ್ಯಮೇಳ, ಪೂರ್ಣಕುಂಬದೊಂದಿಗೆ ಮೆರವಣಿಗೆ ಮಾಡಲಾಯಿತು. ಹರಗುರುಶರಣರ ನೇತೃತ್ವದಲ್ಲಿ ಸಿದ್ದಗಂಗಾ ಮಠದ ಆವರಣದಲ್ಲಿ ಮೆರವಣಿಗೆ ಮಾಡಲಾಯಿತು. ಮುಖ್ಯವಾಗಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಯನ್ನು ವಿವಿಧ ಹಣ್ಣುಗಳಿಂದ ಅಲಂಕಾರ ಮಾಡಲಾಗಿರುವುದು ವಿಶೇಷವಾಗಿದೆ. ಅದರಲ್ಲೂ ಶಶಿಕುಮಾರ್ ಸ್ವಾಮೀಜಿ ನಿತ್ಯ ಬಳಸುತ್ತಿದ್ದಂತಹ ಪರಂಗಿ ಹಣ್ಣು ಅಲಂಕಾರದಲ್ಲಿ ಬಳಸಲಾಗಿರುವುದು ಗಮನಾರ್ಹ ಅಂಶವಾಗಿದೆ. ಹಲಸಿನ ಹಣ್ಣು, ಕಿತ್ತಳೆ ಹಣ್ಣು, ಮೂಸಂಬಿ, ಪಪ್ಪಾಯ ಸೇರಿದಂತೆ ಹತ್ತಕ್ಕೂ ಹೆಚ್ಚು ಹಣ್ಣುಗಳಿಂದ ಅಲಂಕರಿಸಲಾಗಿದೆ. ಸಾವಿರಾರು ಭಕ್ತರು ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಯ ದರ್ಶನ ಪಡೆಯುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ತರಗತಿಯ ಮಕ್ಕಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ ಮೌಲ್ಯಾಂಕನ ಪರೀಕ್ಷೆ ಕೆಲ ಖಾಸಗಿ ಶಾಲೆಗಳಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ವಿವಿದೆಡೆ ಖಾಸಗಿ ಶಾಲೆಗಳು ಶಾಲಾ ಮಟ್ಟದಲ್ಲಿ ತಮ್ಮದೇ ಆದ ಮತ್ತೊಂದು ಪರೀಕ್ಷೆಯನ್ನು ಮಾಡಲು ತಯಾರಿ ಮಾಡಿಕೊಂಡಿದೆ. ಈ ಕುರಿತು ಮಕ್ಕಳು ಹಾಗೂ ಪೋಷಕರಿಗೆ ಮಾಹಿತಿಯನ್ನು ನೀಡಲಾಗಿದೆ. ಮಕ್ಕಳಿಗೆ ಏ.11 ರಿಂದ ಬೇಸಿಗೆ ರಜೆ ಪ್ರಾರಂಭವಾಗಲಿದ್ದು, ಅಷ್ಟರೊಳಗೆ ಪರೀಕ್ಷೆ ಮುಗಿಸಲು ಶಾಲೆಗಳು ಮುಂದಾಗಿದೆಯೆಂದು ವರದಿಯಾಗಿದೆ. ಈಗಷ್ಟೇ ಪರೀಕ್ಷೆ ಎಲ್ಲಾ ಮುಗಿದು ನಿರಾಳವಾಗಿದ್ದ ಮಕ್ಕಳಿಗೆ ಮತ್ತೊಂದು ಪರೀಕ್ಷೆಯ ಹೊರೆ ಬಿದ್ದಿದೆ. ಇದನ್ನು ತಪ್ಪಿಸಲು ಶಿಕ್ಷಣ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಪೋಷಕರ ವಲಯದಲ್ಲಿ ಮಾತು ಬರುತ್ತಿದೆ. ಬೆಂಗಳೂರಿನ ರಾಜಾಜಿನಗರದ ಶಾಲೆ 5,8,9 ನೇ ತರಗತಿ ಮಕ್ಕಳಿಗೆ ಮತ್ತೊಮ್ಮೆ ಪರೀಕ್ಷೆ ನಡೆಸುವುದಾಗಿ ಪೋಷಕರಿಗೆ ಹೇಳಿದೆ. ತುಮಕೂರಿನ ಸರಸ್ವತಿಪುರಂನ ಪ್ರತಿಷ್ಠಿತ ಶಾಲೆ, ಗುಬ್ಬಿ ಪಟ್ಟಣದಲ್ಲಿ ಇರುವ ಪ್ರಮುಖ ಶಾಲೆಯಲ್ಲಿ ಕೂಡಾ ಸೋಮವಾರ ಪರೀಕ್ಷೆ ಇದ್ದು, ಮಕ್ಕಳು ಬರಲೇಬೇಕೆಂದು…

Read More

ಇನ್‌ ಸ್ಟಾಗ್ರಾಮ್ ರೀಲ್ಸ್‌ ಗಾಗಿ ಜನನಿಬಿಡ ರಸ್ತೆಯಲ್ಲಿ ತನ್ನ ಕಾರನ್ನು ನಿಲ್ಲಿಸಿ ಪೊಲೀಸ್‌ ಬ್ಯಾರಿಕೇಡ್‌ ಗಳಿಗೆ ಬೆಂಕಿ ಹಚ್ಚಿದ ವ್ಯಕ್ತಿಯೊಬ್ಬನಿಗೆ ದೆಹಲಿ ಟ್ರಾಫಿಕ್ ಪೊಲೀಸರು 36,000 ರೂಪಾಯಿ ದಂಡ ವಿಧಿಸಿ ಬಂಧಿಸಿದ್ದಾರೆ. ಪೊಲೀಸರು ವಾಹನವನ್ನು ವಶಪಡಿಸಿಕೊಂಡಿದ್ದು, ಪ್ರದೀಪ್ ಢಾಕಾ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಪ್ರದೀಪ್ ಢಾಕಾ ಎಂಬಾತ ದೆಹಲಿಯ ಪಶ್ಚಿಮ ವಿಹಾರ್‌ ನಲ್ಲಿರುವ ಫ್ಲೈಓವರ್‌ ನಲ್ಲಿ ಜನದಟ್ಟಣೆಯ ಸಮಯದಲ್ಲಿ ಕಾರನ್ನು ನಿಲ್ಲಿಸಿ, ಇನ್ಸ್ಟಾಗ್ರಾಮ್‌ ರೀಲ್ಸ್‌ ಮಾಡಿದ್ದಾನೆ. ಕಾರಿನ ಡೋರ್‌ ತೆರೆದು ವೇಗವಾಗಿ ವಾಹನವನ್ನು ಓಡಿಸಿಕೊಂಡು ಹೋಗಿದ್ದಾರೆ. ಇದಲ್ಲದೆ ಪಶ್ಚಿಮ ವಿಹಾರ್‌ ನಲ್ಲಿನ ಫ್ಲೈಓವರ್‌ ನಲ್ಲಿ ವಾಹನವನ್ನು ನಿಲ್ಲಿಸಿ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಪೊಲೀಸ್‌ ಬ್ಯಾರಿಕೇಡ್‌ ಗಳಿಗೆ ಬೆಂಕಿ ಹಂಚಿ ಅದರ ಮುಂದೆ ಪೋಸ್‌ ನೀಡಿದ್ದಾರೆ. ರೀಲ್ಸ್‌ ಅಪ್ಲೋಡ್‌ ಮಾಡಿದ ಬಳಿಕ ಪೊಲೀಸರು ವಿಡಿಯೋ ಆಧಾರದ ಮೇಲೆ ಕೃತ್ಯವೆಸಗಿದ ಪ್ರದೀಪ್‌ ನನ್ನು ಬಂಧಿಸಿ ಕಾರನ್ನು ಜಪ್ತಿ ಮಾಡಿ, 36,000 ರೂಪಾಯಿಯ ದಂಡವನ್ನು ವಿಧಿಸಿದ್ದಾರೆ. ಪೊಲೀಸರ ಮೇಲೆ ಪ್ರದೀಪ್‌ ಹಲ್ಲೆ ನಡೆಸಿದ್ದಾನೆ…

Read More