Author: admin

ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ರಾಜ್ಯದ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ. ಕುಶಾಲನಗರದ ಗೌಡ ಸಮಾಜದ ಆವರಣದಲ್ಲಿ ಮೈಸೂರು– ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ರಾಜ್ಯ ಸರಕಾರ‌ದ ಗ್ಯಾರಂಟಿ ಯೋಜನೆ ಸರಕಾರದ ಖಜಾನೆ ಖಾಲಿಯಾದ ಅನಂತರ ಬಂದ್‌ ಆಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರದ್ದು ಶಾಶ್ವತ ಯೋಜನೆ ಎಂದರು. ಕಾಂಗ್ರೆಸ್‌ ಅಪಪ್ರಚಾರದ ಆಧಾರದಲ್ಲಿ ಗೆಲುವಿಗೆ ಶತ ಪ್ರಯತ್ನ ಮಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಬಂದಿರುವುದು ಜನರ ದುರ್ದೈವ. ಈ ಬಾರಿಯ ಚುನಾವಣೆ ವಿಭಿನ್ನವಾಗಿದ್ದು, ಜಾತಿ ಲೆಕ್ಕಾಚಾರ ನಡೆಯದು. ಮೋದಿ ಅವರ ಕಾರ್ಯವೈಖರಿ ಜನಪರವಾಗಿದ್ದು, 3ನೇ ಅವಧಿಗೆ ಕೇಂದ್ರದಲ್ಲಿ ಮುಂದುವರೆಸಲು ಅಗತ್ಯ ಬೆಂಬಲ ನೀಡಬೇಕಿದೆ ಎಂದರು. ಈ ಚುನಾವಣೆಯಲ್ಲಿ ದೇಶದ ಬಹಳಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸದ ಕಾಂಗ್ರೆಸ್‌ ನವರು ತಾವೇ ದೇಶದ ಆಳ್ವಿಕೆ ಮಾಡುತ್ತೇವೆ ಎಂದು ಹೇಳಿಕೊಳ್ಳುತ್ತಿರುವುದು ತಮಾಷೆಯ ಸಂಗತಿ ಎಂದು ಲೇವಡಿ ಮಾಡಿದರು.…

Read More

ಮಹಿಳೆಯೊಬ್ಬರು ತನಗೆ ಕಚ್ಚಿದ ಹಾವನ್ನೇ ಕೊಂದು ಬಳಿಕ ಅದನ್ನು ಆಸ್ಪತ್ರೆಗೆ ತೆಗೆದುಕೊಂಡು ಬಂದು ಆಸ್ಪತ್ರೆಗೆ ದಾಖಲಾದ ಘಟನೆಯೊಂದು ಹೈದರಾಬಾದ್ ನ ವೆಂಕಟಾಪುರಂ ನೂಗೂರು ಮಂಡಲದ ಮುಕುನೂರುಪಾಲೆಂ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಶಾಂತಮ್ಮ ಎಂಬಾಕೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾರೆ, ಅದರಂತೆ ಹಳ್ಳಿಯೊಂದರಲ್ಲಿ ಕೆಲಸಕ್ಕೆ ಹೋಗಿದ್ದ ಶಾಂತಮ್ಮಗೆ ಹಾವೊಂದು ಕಚ್ಚಿದೆ. ಕೂಡಲೇ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ. ಆದರೆ ಇದರ ನಡುವೆ ಶಾಂತಮ್ಮ ಅವರಿಗೆ ಒಂದು ಪ್ರಶ್ನೆ ಮೂಡಿದೆ ಆಸ್ಪತ್ರೆಯಲ್ಲಿ ವೈದ್ಯರು ಯಾವ ಹಾವು ಕಚ್ಚಿರುವುದು ಎಂದು ಕೇಳಿದರೆ ಯಾವ ಹಾವು ಎಂದು ಹೇಳುವುದು ಎಂದು ತಿಳಿದ ಅವರು ಕೂಡಲೇ ತನ್ನ ಜೊತೆಗಿದ್ದ ಸಹೋದ್ಯೋಗಿಗಳ ಸಹಾಯದಿಂದ ಹಾವನ್ನು ಕೊಂದು ಅದನ್ನು ಹಿಡಿದುಕೊಂಡು ಆಸ್ಪತ್ರೆಗೆ ಧಾವಿಸಿದ್ದಾರೆ. ಆಸ್ಪತ್ರೆಗೆ ಬಂದ ಮಹಿಳೆಯನ್ನು ಕಂಡ ವೈದ್ಯರು ಒಮ್ಮೆ ಬೆಚ್ಚಿ ಬಿದ್ದಿದ್ದಾರೆ, ಯಾಕೆಂದರೆ ಮಹಿಳೆಯ ಕೈಯಲ್ಲಿ ಹಾವು ಇರುವುದನ್ನು ಕಂಡು ಗಾಬರಿಗೊಂಡ ಆಸ್ಪತ್ರೆ ಸಿಬಂದಿ ಕೂಡಲೇ ಮಹಿಳೆಯ ಚಿಕಿತ್ಸೆಗೆ ಮುಂದಾಗಿದ್ದಾರೆ. ಮಹಿಳೆಯ ಸಮಯಪ್ರಜ್ಞೆ, ವೈದ್ಯರು ನೀಡಿದ ಸೂಕ್ತ ಚಿಕಿತ್ಸೆಯಿಂದ…

Read More

ಪ್ರಧಾನಿ ನರೇಂದ್ರ ಮೋದಿಗೆ ಚೊಂಬು ತೋರಿಸಲು ಯತ್ನಿಸಿದ ಯುವ ಕಾಂಗ್ರೆಸ್ ಮುಖಂಡ ಮೊಹಮದ್‌ ನಲಪಾಡ್ ರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮೋದಿ ಪಾಲ್ಗೊಂಡಿದ್ದರು. ಸಮಾವೇಶದ ಬಳಿಕ ಮೋದಿ ಹಿಂದಿರುಗುತ್ತಿದ್ದರು, ಈ ವೇಳೆ ಮೇಖ್ರಿ ಸರ್ಕಲ್ ಬಳಿ ಚೊಂಬು ಪ್ರದರ್ಶನಕ್ಕೆ ಕಾಂಗ್ರೆಸ್ ಮುಖಂಡರು ಯತ್ನಿಸಿದ್ದರು. ಯುವ ಕಾಂಗ್ರೆಸ್ ಮುಖಂಡ ನಲಪಾಡ್ ನೇತೃತ್ವದಲ್ಲಿ ಮೋದಿಗೆ ಚೊಂಬು ತೋರಿಸುವ ಮೂಲಕ ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ನಲಪಾಡ್ ಸೇರಿದಂತೆ ಇಬ್ಬರು ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ನಲಪಾಡ್‌ ಚೊಂಬು ಪ್ರದರ್ಶನ ಮಾಡೋದು ತಪ್ಪಾ ಅಂತಾ ಆಕ್ರೋಶ ಹೊರಹಾಕಿದ್ರು. ಮೋದಿ ತೆರಳುವ ರಸ್ತೆ ಮಾರ್ಗದಲ್ಲಿ (ಮೇಖ್ರಿ ಸರ್ಕಲ್‌) ಅರ್ಧಗಂಟೆ ಮುಂಚೆಯೇ ಬಂದಿದ್ದ ನಲಪಾಡ್‌ ನಂಬರ್‌ ಇಲ್ಲದ ಕಾರಿನಲ್ಲಿ ಕಾದು ಕುಳಿತಿದ್ದರು. ಕಪ್ಪು ಬಣ್ಣದ ಲ್ಯಾಂಡ್ರೋವರ್ ಡಿಫೆಂಡರ್ ಕಾರಿನಲ್ಲಿ ನಲಪಾಡ್‌ ಜೊತೆಗೆ 8 ಜನ…

Read More

102 ಲೋಕಸಭಾ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಮ್ಮ ಹಕ್ಕು ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಸ್ಥಳೀಯ ಭಾಷೆಗಳಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮನವಿ ಮಾಡಿದರು. ಪ್ರತಿ ಮತ, ಪ್ರತಿ ಧ್ವನಿ ಮುಖ್ಯ. ದಾಖಲೆ ಮತದಾನ ಮಾಡುವಂತೆ ಕೋರಲಾಗಿದೆ ಎಂದರು. ಯುವಕರು ಮತ್ತು ಮೊದಲ ಬಾರಿಗೆ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವಂತೆ ಪ್ರಧಾನಿ ಕೇಳಿಕೊಂಡಿದ್ದಾರೆ. ಪ್ರತಿ ಮತಕ್ಕೂ ಮೌಲ್ಯವಿದೆ ಎಂದು ಪ್ರಧಾನಿ ನೆನಪಿಸಿದರು. ಇದು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬಕ್ಕೆ ನಾಂದಿಯಾಗಿದೆ ಎಂದು ಪ್ರಧಾನಿ ಹೇಳಿದರು. ವಿವಿಧ ಭಾಷೆಗಳಲ್ಲಿ ಮತದಾನ ಮಾಡುವಂತೆ ಪ್ರಧಾನಿ ಕರೆ ನೀಡಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಎಲ್ಲಾ ಮತದಾರರು ತಮ್ಮ ಒಪ್ಪಿಗೆಯ ಹಕ್ಕನ್ನು ಚಲಾಯಿಸುವಂತೆ ಕರೆ ನೀಡಿದರು. ಚುನಾವಣೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಚುನಾವಣೆಗೆ ಎರಡು ವರ್ಷಗಳ ಸಿದ್ಧತೆ ನಡೆಸಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತರು ಸೂಚಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ತುಮಕೂರು: ಜಿಲ್ಲೆಯ ಆಮ್ ಆದ್ಮಿ ಪಾರ್ಟಿಯ ಯಾವೊಬ್ಬ ಪದಾಧಿಕಾರಿಯೂ ಬಿಜೆಪಿ ಸೇರ್ಪಡೆಯಾಗಿಲ್ಲ ಎಂದು ಎಎಪಿ ನಗರಾಧ್ಯಕ್ಷ ಮೊಹಮ್ಮದ್ ಗೌಸ್ ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಆಗಿರುವ ಇಂಡಿಯಾ ಮಹಾ ಘಟ್ ಬಂಧನ್ ಮೈತ್ರಿ ಕೂಟದಲ್ಲಿ ಆಮ್ ಆದ್ಮಿ ಪಾರ್ಟಿ ಕೂಡ ಪ್ರಮುಖ ಪಕ್ಷವಾಗಿದ್ದು, ಈ ಮೈತ್ರಿ ಧರ್ಮದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಆಮ್ ಆದ್ಮಿ ಪಾರ್ಟಿಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಸೋಲಿನ ಭೀತಿಯಲ್ಲಿರುವ ಜಿಲ್ಲಾ ಬಿಜೆಪಿ ಕಳೆದ ಹತ್ತು ವರ್ಷಗಳ ಹಿಂದೆ ನಮ್ಮ ಪಕ್ಷದಲ್ಲಿದ್ದು, ನಂತರ ನಾಪತ್ತೆಯಾಗಿದ್ದ ಮುನಿಯಪ್ಪ ಎಂಬುವರನ್ನು ಹುಡುಕಿ ಜಿಲ್ಲಾ ಎಎಪಿ ಖಜಾಂಚಿ ಬಿಜೆಪಿ ಸೇರ್ಪಡೆ ಆಗಿದ್ದಾರೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದೆ. ಇದು ಸತ್ಯಕ್ಕೆ ದೂರ. ಅಸಲಿ ವಿಷಯವೆಂದರೆ ನಮ್ಮ ಜಿಲ್ಲಾ ಎಎಪಿಯಲ್ಲಿ ಈವರೆಗೆ ಖಜಾಂಚಿ ಹುದ್ದೆಯೇ ಇಲ್ಲ ಎಂದು ಎ ಎ ಪಿ ಮುಖಂಡರು ತಿರುಗೇಟು ನೀಡಿದ್ದಾರೆ. ನಮ್ಮ ಆಮ್ ಆದ್ಮಿ ಪಾರ್ಟಿಯ ಅತ್ಯುನ್ನತ ನಾಯಕರಾದ ಅರವಿಂದ್…

Read More

ಮೈಸೂರು: ಪ್ರತಿಪಕ್ಷಗಳು ನೇಹಾ ಕುಲಕರ್ಣಿ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಕುಲಕರ್ಣಿ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು. ಕೊಲೆಗಾರರನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದರು. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಮಾತನಾಡಿ ಎಲ್ಲಾ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ. ಖಂಡನೀಯ ಎಂದರು. ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳಿಂದ ಸರ್ಕಾರದ ಮೇಲೆ ಪರಿಣಾಮ ಬೀರುವುದಿಲ್ಲ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಬೀದರ್‌: ಬೀದರ್‌ ಜಿಲ್ಲೆಯಲ್ಲೂ ಶುಕ್ರವಾರ ಭರ್ಜರಿ ಮಳೆಯಾಗಿದ್ದು, ತಾಲೂಕಿನ ಬರೂರು ಗ್ರಾಮದಲ್ಲಿ ಜಮೀನಿಗೆ ತೆರಳಿದ್ದ ಓರ್ವ ಮಹಿಳೆ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ನಡೆದಿದೆ. ಪುಷ್ಪಲತಾ(50) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಗುಡುಗು, ಮಿಂಚು ಸಮೇತ ಭಾರೀ ಮಳೆಯಾಗಿದ್ದು, ಕೆಲಸಕ್ಕೆಂದು ಜಮೀನಿಗೆ ಹೋಗಿದ್ದ ಮಹಿಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಮಹಿಳೆಯ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಖಾಲಿ ಚೊಂಬು ಜಾಹಿರಾತಿಗೆ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ತಿರುಗೇಟು ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಕಾಂಗ್ರೆಸ್‌ ಜಾಹೀರತನ್ನು ಪ್ರದರ್ಶಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಗುಣಗಾನ ಮಾಡಿದರು. 2014ರಲ್ಲಿ ಡಾ. ಮನಮೋಹನ್‌ ಸಿಂಗ್‌ ಸರ್ಕಾರ ಖಾಲಿ ಚೊಂಬನ್ನು, ನರೇಂದ್ರ ಮೋದಿ ಅವರಿಗೆ ನೀಡಿತ್ತು. ಆದರೆ ಮೋದಿ ಖಾಲಿ ಚೊಂಬನ್ನೇ ಬಳಸಿಕೊಂಡು ಅಕ್ಷಯ ಪಾತ್ರೆಯನ್ನಾಗಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಲು ಸಾಲು ಹಗರಣಗಳನ್ನು ಮಾಡಿ ಹಣವನ್ನು ಲೂಟಿ ಹೊಡೆದು ನರೇಂದ್ರ ಮೋದಿ ಅವರಿಗೆ ಖಾಲಿ ಚೊಂಬನ್ನು ನೀಡಿತ್ತು. ಹತ್ತು ವರ್ಷ ಖಾಲಿ ಚೊಂಬನ್ನೇ ಅಕ್ಷಯ ಪಾತ್ರೆಯನ್ನಾಗಿಸಿದ ಹೆಗ್ಗಳಿಕೆ ನರೇಂದ್ರ ಮೋದಿಯವರದ್ದಾಗಿದೆ ಎಂದು ಮಾಜಿ ಪ್ರಧಾನಿ ಎಚ್‌ ಡಿಡಿ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನಡೆದ ಎನ್‌ ಡಿಎ ಚುನಾವಣಾ ಪ್ರಚಾರದಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಪ್ರದರ್ಶನ ಮಾಡಿದರು. ರಾಜ್ಯದ ಕಾಂಗ್ರೆಸ್‌ ಸರ್ಕಾರ ಖಾಲಿ ಚೊಂಬನ್ನು ನೀಡಿತ್ತು. ಖಾಲಿ ಚೊಂಬನ್ನು ನೀಡಿದ್ದು ಯಾರು ಎಂದು ದೇವೇಗೌಡ…

Read More

ಕೊರಟಗೆರೆ: ಬಿಜೆಪಿ ಪಕ್ಷವು ದಲಿತ ವಿರೋಧಿಯಾಗಿದ್ದು, ದಲಿತ ನಾಯಕ ಮಂದಕೃಷ್ಣ ಮಾದಿಗರವರನ್ನು ದಾರಿ ತಪ್ಪಿಸಿ ಸುಳ್ಳು ಹೇಳಿಸಿ ದಲಿತರನ್ನು ಒಡೆದು ಆಳುವ ನೀತಿಯನ್ನು ಮಾಡುತ್ತಿದೆ ಎಂದು ಮಾಜಿ ನಗರಸಭಾ ಉಪಾದ್ಯಕ್ಷ ಜಿಲ್ಲಾ ದಲಿತ ಮುಖಂಡ ವಾಲೆ ಚಂದ್ರಯ್ಯ ಹೇಳಿದರು. ಪಟ್ಟಣದ ರಾಜೀವ ಭವನದಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಮಾದಿಗ ಜನಾಂಗದ ರಾಷ್ಟೀಯ ಅಧ್ಯಕ್ಷರಾದ ಮಂದಕೃಷ್ಣ ಮಾದಿಗರವರು ಕಾಂಗ್ರೆಸ್ ಸದಾಶಿವ ಆಯೋಗದ ವಿರೋಧಿ ಎಂದು ಕೆಲವು ಬಿಜೆಪಿ ರಾಜಕಾರಣಿಗಳ ಜೊತೆಗೂಡಿ ಹೇಳಿದ್ದಾರೆ. ಆದರೆ ಬಿಜೆಪಿ ಪಕ್ಷವು ಮೀಸಲಾತಿಯನ್ನೆ ತೆಗೆದು ಹಾಕುವ ಹುನ್ನಾರದಲ್ಲಿದೆ. ಸಂವಿಧಾನದ ವಿರೋಧಿ ಧೋರಣೆಯನ್ನು ಬಿಜೆಪಿ ಪಕ್ಷವು ಮಾಡುತ್ತಿದ್ದು, ದಲಿತರನ್ನು ಒಡೆದು ಅವರನ್ನು ತುಳಿಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಮುಂಬರುವ ದಿನಗಳಲ್ಲಿ ಬಿಜೆಪಿ ಸರ್ಕಾರ ಮೀಸಲಾತಿಯನ್ನೇ ತೆಗೆದು ಹಾಕುವಾಗ ಇನ್ನು ಒಳಮೀಸಲಾತಿ ನೀಡುತ್ತಾರೆ ಎನ್ನುವ ಮಂದಕೃಷ್ಣ ಮಾದಿಗರವರ ಹೇಳಿಕೆ ತಪ್ಪು ಗ್ರಹಿಕೆಯಿಂದ ಅವರನ್ನು ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಪಕ್ಷ ಮಾಡಿದೆ. ದಲಿತರ ಮೀಸಲಾತಿಗೆ ಮತ್ತು ಒಳಮೀಸಲಾತಿಗೆ ಪಕ್ಷದ…

Read More

ಸರಗೂರು: ತಾಲ್ಲೂಕಿನ ನರಸೀಪುರ ಗ್ರಾಮದ ಜಿಪಂ ಮಾಜಿ ಸದಸ್ಯ ಪಿ. ರವಿ ರವರ ತೋಟದ ಮನೆಯಲ್ಲಿ ಸಮಾಜ ಕಲ್ಯಾಣ ಸಚಿವ ಹಾಗೂ ಮೈಸೂರು ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ರವರ ಹುಟ್ಟು ಹಬ್ಬವನ್ನು ಶಾಸಕ ಅನಿಲ್ ಚಿಕ್ಕಮಾದು ರವರು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಎಚ್.ಸಿ. ಮಂಜುನಾಥ್, ರವಿ, ನಂದಿನಿ ಚಂದ್ರಶೇಖರ, ಬಸವರಾಜು, ಸಿದ್ದರಾಜು, ಮಹೇಶ್ ಶಂಭುಲಿಂಗನಾಯಕ, ಚಿಕ್ಕಣ್ಣ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು. ವರದಿ: ಚಂದ್ರ ಹಾದನೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More