Author: admin

ಬೆಂಗಳೂರು: ಅಭಿಮಾನ್‌ ಸ್ಟುಡಿಯೋವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ಅರಣ್ಯ ಇಲಾಖೆಯು, ಬೆಂಗಳೂರುನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ. ಕಳೆದ ಆ.22ರಂದು ಅರಣ್ಯ ಇಲಾಖೆಯ ಉಪಸಂರಕ್ಷಣಾಧಿಕಾರಿ ರವೀಂದ್ರಕುಮಾರ್‌ ಅವರು, ಬೆಂಗಳೂರುನಗರ ಜಿಲ್ಲಾಧಿಕಾರಿ ಜಗದೀಶ್‌ ಅವರಿಗೆ ಪತ್ರ ಬರೆದಿದ್ದು, ನಿಯಮ ಉಲ್ಲಂಘನೆ ಮಾಡಿರುವ ಅಭಿಮಾನ್‌ ಸ್ಟುಡಿಯೋವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ನಿರ್ದೇಶನ ಮಾಡಿದ್ದಾರೆ. ನಟ ಬಾಲಕೃಷ್ಣ ಅವರಿಗೆ 1970ರಲ್ಲಿ ಸ್ಟುಡಿಯೋ ನಿರ್ಮಾಣದ ಉದ್ದೇಶಕ್ಕೆ 20 ಎಕರೆ ಭೂಮಿಯನ್ನು 20 ವರ್ಷ ಲೀಸ್‌‍ ಗೆ ನೀಡಾಗಿತ್ತು. ನಂತರ ಭೋಗ್ಯದ ಅವಧಿ ವಿಸ್ತರಣೆ ಮಾಡಿಕೊಳ್ಳಲಾಗಿತ್ತು. 2004ರಲ್ಲಿ ಆರ್ಥಿಕ ಸಂಕಷ್ಟದ ನೆಪ ಹೇಳಿ ಬಾಲಕೃಷ್ಣ ಅವರ ಮಕ್ಕಳಾದ ಶ್ರೀನಿವಾಸ್‌‍ ಹಾಗೂ ಗಣೇಶ್‌ ಜಿಲ್ಲಾಧಿಕಾರಿಗಳ ಬಳಿ 10 ಎಕರೆ ಮಾರಲು ಒಪ್ಪಿಗೆ ಕೇಳಿದ್ದರು ಎನ್ನಲಾಗಿದೆ. ಜಿಲ್ಲಾಧಿಕಾರಿಗಳ ವಿಶೇಷ ಅಧಿಕಾರ ಬಳಸಿ ಇದ್ದನ್ನು ಮಾರಾಟ ಮಾಡಲಾಗಿದೆ. ಮಾರಾಟದಿಂದ ಬಂದ ಹಣವನ್ನು ಸ್ಟುಡಿಯೋ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಿಕೊಳ್ಳುವುದಾಗಿ ಸರ್ಕಾರಕ್ಕೆ ತಿಳಿಸಿದ್ದರೆಂದು ತಿಳಿದುಬಂದಿದೆ. ಆದರೆ ಈವರೆಗೆ ಸ್ಟುಡಿಯೋ ಯಥಾಸ್ಥಿತಿಯಲ್ಲೇ ಇದೆ. ಇದರ ಅಭಿವೃದ್ಧಿಯಾಗಿಲ್ಲ. ಈಗ ಬಾಲಕೃಷ್ಣ ಮೊಮಗ…

Read More

ಬೆಂಗಳೂರು:  ಕುಡುಕರ ಗುಂಪೊಂದು ಪಿಎಸ್‍ಐ ಮೇಲೆ ಕಾರು ಹತ್ತಿಸಲು ಯತ್ನಿಸಿದ ಘಟನೆ ರಾಜಗೋಪಾಲ ನಗರದಲ್ಲಿ ನಡೆದಿದೆ. ರಾಜಗೋಪಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ ಒಂದರ ಬಳಿ ರಾಜಗೋಪಾಲನಗರ ಸಬ್ ಇನ್ಸ್‌ಪೆಕ್ಟರ್ ಮುರಳಿ ಗಸ್ತು ತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಮುರಳಿ ಅವರ ಕೈಗೆ ಗಾಯವಾಗಿದೆ. ಸ್ಕಾರ್ಪಿಯೋ ಕಾರಿನಲ್ಲಿ ನಾಲ್ಕೈದು ಜನ ಮದ್ಯಪಾನ ಮಾಡುತ್ತಿದ್ದರು. ಬಾರ್ ಕ್ಲೋಸ್ ಆಗಿದ್ದರೂ ಸಹ, ಕೈನಲ್ಲಿ ಗ್ಲಾಸ್ ಹಿಡಿದು ಪುಂಡ ಮದ್ಯ ಸೇವಿಸುತ್ತಿದ್ದರು.  ಕಾರಿನ ವಿಂಡೋ ಗ್ಲಾಸ್ ಇಳಿಸುವಂತೆ ಪಿಎಸ್‍ ಐ ಹೇಳಿದ್ದಾರೆ. ಈ ವೇಳೆ, ಏಕಾಏಕಿ ಕಾರನ್ನು ರಿವರ್ಸ್ ತೆಗೆದು ವೇಗವಾಗಿ ಚಲಾಯಿಸಿಕೊಂಡು ಪರಾರಿಯಾಗಿದ್ದಾರೆ. ಈ ವೇಳೆ ಪಿಎಸ್‍ ಐ ಕೈಗೆ ಗಾಯವಾಗಿದೆ. ಕಾರು ಜಾನ್ಸನ್ ಎಂಬವನಿಗೆ ಸೇರಿರುವುದು ಎಂದು ತಿಳಿದು ಬಂದಿದೆ. ಪೊಲೀಸರು ಪುಂಡರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಹಾಸನ: ಒಂಟಿ ಸಲಗವೊಂದು ಮರವನ್ನು ರಸ್ತೆಗೆ ಬೀಳಿಸಿದ ಪರಿಣಾಮ ವಾಹನ ಸವಾರರು ಪರದಾಡಿರುವ ಘಟನೆ  ಸಕಲೇಶಪುರದ ಹಳ್ಳಿಬೈಲು ಗ್ರಾಮದ ಬಳಿಯಲ್ಲಿ ನಡೆದಿದೆ. ಗುರುವಾರ ರಾತ್ರಿ ಒಂಟಿಸಲಗ ಬೈನೆ ಮರವನ್ನು ನೆಲಕ್ಕುರುಳಿಸಿ, ಆರಾಮವಾಗಿ ತಿನ್ನುತ್ತಾ ನಿಂತಿದೆ. ಇದರಿಂದಾಗಿ  ವಾಹನ ಸವಾರರು ಪರದಾಡಿದ್ದು, ರಸ್ತೆಯುದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿತ್ತು. ಬಳಿಕ ವಿಡಿಯೋ ಮಾಡಿ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಬರುವಂತೆ ಚಾಲಕರು ಒತ್ತಾಯಿಸಿದ್ದರು. ಸ್ಥಳಕ್ಕೆ ಇಟಿಎಫ್ ಸಿಬ್ಬಂದಿ ಬಂದು ಪಟಾಕಿ ಸಿಡಿಸಿ ಸಲಗವನ್ನು ಕಾಡಿಗೆ ಓಡಿಸಿದ್ದಾರೆ. ಬಳಿಕ ಸುರಿಯುತ್ತಿರುವ ಮಳೆಯಲ್ಲಿಯೇ ಮರವನ್ನು ಅರಣ್ಯ ಇಲಾಖೆ ಸಿಬ್ಬಂದಿ ತೆರವು ಮಾಡಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಹಿರಿಯ ನಟ ಹರೀಶ್ ರಾಯ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇದೇ ಸಂದರ್ಭದಲ್ಲಿ  ನಟ ಧ್ರುವ ಸರ್ಜಾ ಹಿರಿಯ ನಟನಿಗೆ ಸಹಾಯ ನೀಡಲು ಮುಂದಾಗಿದ್ದಾರೆ. ನಟ ಹರೀಶ್ ರಾಯ್ ಅವರ ಆಸ್ಪತ್ರೆಯ ಖರ್ಚನ್ನ ಭರಿಸುವುದಾಗಿ ಧ್ರುವ ಹೇಳಿದ್ದಾರೆ. ಈ ಬಗ್ಗೆ ವಿಡಿಯೋ ಮೂಲಕ ನಟ ಧ್ರುವ ಸರ್ಜಾ ಅವರಿಗೆ ಹರೀಶ್ ರಾಯ್ ಧನ್ಯವಾದವನ್ನ ಹೇಳಿದ್ದಾರೆ. ಹರೀಶ್ ರಾಯ್ ಅವರಿಗೆ ಥೈರಾಯ್ಡ್ ಕ್ಯಾನ್ಸರ್ ಹೊಟ್ಟೆಗೆ ಹರಡಿ ಈಗ ಹೊಟ್ಟೆಯಲ್ಲಿ ನೀರು ತುಂಬಿಕೊಂಡಿದೆ. ಇದಕ್ಕೆ ಸೂಕ್ತ ಚಿಕಿತ್ಸೆ ನೀಡಿದ್ರೆ ವಾಸಿಯಾಗುವ ಭರವಸೆಯನ್ನ ವೈದ್ಯರು ನೀಡಿದ್ದಾರೆ.   ಹರೀಶ್ ರಾಯ್ ಅವರಿಗೆ ನೀಡಬೇಕಾದ ಚಿಕಿತ್ಸೆ ದುಬಾರಿಯಾಗಿದ್ದು, ಒಂದೊಂದು ಇಂಜೆಕ್ಷನ್ ಬೆಲೆ ಮೂರುವರೆ ಲಕ್ಷ ರೂಪಾಯಿಗಳದ್ದು ಎಂದು ವರದಿಗಳಿಂದ ತಿಳಿದು ಬಂದಿದೆ. ಹರೀಶ್ ರಾಯ್ ಅವರಿಗೆ ತುರ್ತಾಗಿ ಚಿಕಿತ್ಸೆ ಕೂಡಾ ಪ್ರಾರಂಭಿಸಬೇಕಿದೆ ಎಂದು ವೈದ್ಯರು ಸಲಹೆಯನ್ನ ನೀಡಿದ್ದಾರಂತೆ. ಹೀಗಾಗಿ ಚಿತ್ರರಂಗದವರ ನೆರವನ್ನ ಹರೀಶ್ ರಾಯ್ ಕೇಳಿದ್ದರು.ಹರೀಶ್ ರಾಯ್ ಕಷ್ಟದ ಈ ಸಂದರ್ಭಕ್ಕೆ ನಟ ಧ್ರುವ ಸರ್ಜಾ ಮಿಡಿದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಕೊರಟಗೆರೆ: ಸನಾತನ ಧರ್ಮ, ಸಂಸ್ಕೃತಿ, ಆಚಾರ ವಿಚಾರಗಳು ಉಳಿಯಬೇಕಾದರೆ ಪ್ರತಿಯೊಂದು ಗ್ರಾಮದಲ್ಲಿ ದೇವಾಲಯ, ಧಾರ್ಮಿಕ ಕ್ಷೇತ್ರಗಳು ನಿರ್ಮಾಣಗೊಳ್ಳಬೇಕು. ವರ್ಣರಹಿತವಾಗಿ ಬದುಕು ಕಟ್ಟಿಕೊಳ್ಳಬೇಕಾದರೆ ಇಂತಹ ಹಬ್ಬಗಳು, ಜಾತ್ರೆಗಳು ಅವಕಾಶ ಮಾಡಿಕೊಡುತ್ತವೆ ಎಂದು ಎಲೆರಾಂಪುರ ನರಸಿಂಹಗಿರಿ ಸುಕ್ಷೇತ್ರ ಶ್ರೀಮಠದ ಡಾ.ಹನುಮಂತನಾಥ ಸ್ವಾಮೀಜಿ ತಿಳಿಸಿದರು. ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿ ಕರಿದುಗ್ಗನಹಳ್ಳಿ ಮತ್ತು ಹನುಮಂತಯ್ಯನಪಾಳ್ಯ ಗ್ರಾಮದೇವತೆ ಶ್ರೀದೊಡ್ಡಮ್ಮ ದೇವಿ ದೇವಾಲಯದ ಆವರಣದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, 1 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣವಾದ ಶ್ರೀದೊಡ್ಡಮ್ಮ ದೇವಿಯ ಸ್ಥಿರಬಿಂಬ ಪ್ರತಿಷ್ಠಾಪನಾ ಕುಂಭಾಭಿಷೇಕ ಮಹೋತ್ಸವ ಹಾಗೂ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮವು ಆ.29 ರಿಂದ 31ರವರೆಗೆ ನಡೆಯಲಿದೆ ಎಂದು ಹೇಳಿದರು. ದೇವಾಲಯದ ಧಾರ್ಮಿಕ ಕಾರ್ಯಕ್ರಮ ಸಿಂಹಪಾಲು ಉದ್ಯಮಿ ನಿಲೇಶ್‌ ಗೆ ಸಲ್ಲಬೇಕು. ರಸ್ತೆ ಮತ್ತು ಮೂಲಭೂತ ಸೌಕರ್ಯದಿಂದ ವಂಚಿತಗೊಂಡ ಈ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಿದ್ದಾರೆ. ಆ.31ಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ರವರು ಆಗಮಿಸಲಿದ್ದು, ತುಮಕೂರಿನ ಸಿದ್ದಗಂಗಾ ಮಠದ ಶ್ರೀಗಳು…

Read More

ತುಮಕೂರು: ಮಧುಗಿರಿ ಶಾಸಕ ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವುದರ ವಿರುದ್ಧ ಬೆಂಬಲಿಗರು ವ್ಯಾಪಕ ಪ್ರತಿಭಟನೆಗೆ ಮುಂದಾಗಿದ್ದಾರೆ. ರಾಜಣ್ಣ ಅಭಿಮಾನಿಗಳು ದೆಹಲಿಗೆ ಹೋಗಿ ಜಂತರ್ ಮಂತರ್ ನಲ್ಲಿ ಅರೆಬೆತ್ತಲೆ ಮತ್ತು ಉಪವಾಸ ಸತ್ಯಾಗ್ರಹ ಮಾಡಲು ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 8ರಿಂದ 10 ಸಾವಿರ ಅಭಿಮಾನಿಗಳು ದೆಹಲಿಗೆ ತೆರಳಿ ಪ್ರತಿಭಟನೆ ನಡೆಸುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ನ ಗಮನ ಸೆಳೆಯಲು ಮುಂದಾಗಿದ್ದಾರೆ. ಕೆ.ಎನ್.ರಾಜಣ್ಣ ಅವರನ್ನ ಸಂಪುಟದಿಂದ ವಜಾಗೊಳಿಸಿರುವುದು ಅನ್ಯಾಯ ಎಂದಿರುವ ಅಭಿಮಾನಿಗಳು, ಡಿ.ಕೆ.ಶಿವಕುಮಾರ್ ಅವರು ಆರ್ ಎಸ್ ಎಸ್ ನ್ನು ಹೊಗಳಿದರೂ, ಬಿ.ಎಲ್.ಸಂತೋಷ್ ಅವರ ಪರ ವಹಿಸಿ ಮಾತನಾಡಿದರೂ ಕ್ರಮಕೈಗೊಳ್ಳಲಾಗಿಲ್ಲ. ಆದರೆ ರಾಜಣ್ಣ ಅವರಿಗೆ ಕನಿಷ್ಠ ನೋಟಿಸ್ ಕೂಡ ನೀಡದೇ ಏಕಾಏಕಿ ವಜಾಗೊಳಿಸಿರುವುದು ಅಸಮಾನತೆಯ ಕ್ರಮವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಮೈಸೂರು: ಚಾಮುಂಡಿಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆ ನಿಜಕ್ಕೂ ಹಾಸ್ಯಾಸ್ಪದ. ಗೌರಿ ಹಬ್ಬ ಆಚರಿಸುವ ವೇಳೆ ಹಿಂದೂ ಭಾವನೆಗೆ ಧಕ್ಕೆ ತರುವ ವಿಚಾರ ಇದು ಎಂದು ಮೈಸೂರು–ಕೊಡಗು ಸಂಸದ ಯದುವೀರ್‌ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು , ಸಾವಿರಾರು ವರ್ಷಗಳ ಹಿಂದೆ ಮರ್ಕಂಡೇಯ ತಪಸ್ಸು ಮಾಡಿದ್ದ ಸ್ಥಳ ಅದು. ಸಾವಿರಾರು ವರ್ಷಗಳಿಂದ ಚಾಮುಂಡಿ ಇರುವುದು ಕೂಡ ಉಲ್ಲೇಖ ಇದೆ. ಚಾಮುಂಡಿಬೆಟ್ಟಕ್ಕೆ ಎಲ್ಲರಿಗೂ ಪ್ರವೇಶವಿದೆ. ಅದು ಧಾರ್ಮಿಕ ಸ್ಥಳವಾಗಿರುವ ಕಾರಣ ಎಲ್ಲರೂ ಹೋಗಬಹುದು. ಆಧುನಿಕ ಕಾಲಘಟ್ಟದಲ್ಲಿ ಜಾತ್ಯಾತೀತ ದೃಷ್ಟಿಕೋನದಿಂದ ನೋಡಬಹುದು. ಲಕ್ಷಾಂತರ ಜನರ ಭಾವನೆಗೆ ಧಕ್ಕೆ ಉಂಟಾಗಿದೆ. ಧರ್ಮ ಉಳಿಸುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತೇವೆ. ಜತೆಗೆ ಕಾನೂನು ಚೌಕಟ್ಟಿನಲ್ಲೂ ಹೋರಾಡುತ್ತೇವೆ. ನಾವು ಎಲ್ಲ ಧರ್ಮ ಒಪ್ಪಿಕೊಳ್ತೀವಿ. ಹಾಗಂತ ಒಂದು ಧರ್ಮದ ಓಲೈಕೆಗೆ ಮುಂದಾಗಬಾರದು ಎಂದು ಅವರು ಹೇಲಿದರು. ಚಾಮುಂಡಿಬೆಟ್ಟ ಟಾರ್ಗೆಟ್‌ ಆಗಿದೆಯೇ ಎಂಬ ಪ್ರಶ್ನೆಗೆ, ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದು ಇದೇ ಕಾಂಗ್ರೆಸ್‌‍ ಸರ್ಕಾರ. ಬೆಟ್ಟವನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವುದು…

Read More

ಬೆಂಗಳೂರು: ನಟಿ ಹಾಗೂ ಆ್ಯಂಕರ್‌ ಅನುಶ್ರೀ ಹಾಗೂ ರೋಷನ್‌ ಅವರ ಕಲ್ಯಾಣ ಮಹೋತ್ಸವವು ಕಗ್ಗಲಿಪುರದ ಬೈಸ್ವಾನ್‌ ಲೈನ್‌ ಸ್ಟುಡಿಯೋಸ್‌‍ ತಿಟ್ಟಹಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿದೆ. ಅನುಶ್ರೀ ಅವರ ವಿವಾಹ ಮಹೋತ್ಸವಕ್ಕೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಆಗಮಿಸಿ ಶುಭ ಹಾರೈಸಿದ್ದಾರೆ. ಕೊನೆಗೂ ಅನುಶ್ರೀ ಅವರ ಮದುವೆಯ ಬಗ್ಗೆ ಇದ್ದ ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಅನುಶ್ರೀ– ರೋಷನ್‌ ಅವರ ಮನೆಗಳವರು ಒಪ್ಪಿ ಅದ್ದೂರಿಯಾಗಿ ಮದುವೆ ಮಾಡಿದ್ದಾರೆ. ನಿನ್ನೆಯಿಂದಾನೂ ಅರಿಶಿನ ಶಾಸ್ತ್ರ, ಬಳೆ ಶಾಸ್ತ್ರದಲ್ಲಿ ಅನುಶ್ರೀ ಮಿಂದೆದ್ದಿದ್ದಾರೆ. ರೋಷನ್‌ ಮೂಲತಃ ಕೊಡಗಿನವರು. ಬೆಂಗಳೂರಿನಲ್ಲಿಯೇ ಉದ್ಯಮಿಯಾಗಿದ್ದಾರೆ. ಇಂದು ಬೆಳಗ್ಗೆ 10.56ಕ್ಕೆ ರೋಷನ್‌, ಅನುಶ್ರೀ ಅವರಿಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೀದರ್: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಮನವಿ ಮಾಡಿದ್ದಾರೆ. ಸಾರ್ವಜನಿಕರು ನದಿ, ಹಳ್ಳ, ಕೆರೆಗಳು ದಾಟಬಾರದು. ಹಾಗೆಯೇ ಜಾನುವಾರುಗಳನ್ನು ನದಿ ದಂಡೆ ಅಥವಾ ಹಳ್ಳದ ತಟಕ್ಕೆ ಬಿಡಬಾರದು. ಮಕ್ಕಳು, ವಯೋವೃದ್ಧರ ಸುರಕ್ಷತೆಗಾಗಿ ವಿಶೇಷ ಗಮನ ಹರಿಸಬೇಕು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಈ ವಿಷಯದ ಬಗ್ಗೆ ಅಧಿಕಾರಿಗಳಿಗೂ ಕೂಡ ನಿರ್ದೇಶನ ನೀಡಿದ್ದು, ಅವರು ತಮ್ಮ ತಮ್ಮ ಪ್ರದೇಶಗಳಲ್ಲಿ ಸತತವಾಗಿ ಹಾಜರಿದ್ದು, ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರಬೇಕು. ಸಾರ್ವಜನಿಕರ ಜೀವ ಮತ್ತು ಆಸ್ತಿ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೀದರ್: ಜಿಲ್ಲೆಯ ಔರಾದ್ ತಾಲ್ಲೂಕಿನ ಹಾಗೂ ಕಮಲನಗರ ತಾಲೂಕಿನಲ್ಲಿ ಬುಧವಾರ ಹಾಗೂ ಗುರುವಾರ ಭಾರೀ ಮಳೆಗೆ ಸೇತುವೆಗಳು ಕೊಚ್ಚಿ ಹೋದ ಘಟನೆ ನಡೆದಿದೆ. ಜಿಲ್ಲಾದ್ಯಂತ ಅಧಿಕ ಮಳೆಯಿಂದ ರೈತರು ಬೆಳೆದ ಬೆಳೆಗಳು ಹಾಳಾಗಿದೆ. ಔರಾದ್ ತಾಲ್ಲೂಕು ಹಾಗೂ ಕಮಲನಗರ ತಾಲೂಕಿನ ಭಾರೀ ಮಳೆಯಿಂದಾಗಿ ಹತ್ತಿ, ಉದ್ದು ಮತ್ತು ತೊಗರಿ, ಸೋಯಾ ಬೆಳೆಗೆ ಹೆಚ್ಚಿನ ಹಾನಿಯಾಗಿದೆ. ಇದರಿಂದಾಗಿ  ರೈತರು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಶೀಘ್ರದಲ್ಲಿ ಬೆಳೆ ಹಾನಿ ಪರಿಹಾರ ಘೋಷಿಸಬೇಕೆಂದು ರೈತರು ಆಗ್ರಹಿಸಿದ್ದಾರೆ. ತಾಲೂಕಿನ ಬೆಳಕುಣಿ (ಚೌದ್ರಿ) ಸಮೀಪದ ಸೇತುವೆ ಮಳೆಗೆ ಕುಸಿದಿದೆ ಗ್ರಾಮಕ್ಕೆ ಗ್ರಾಮಲೆಕ್ಕ ಅಧಿಕಾರಿ ಪಂಡಿತ್ ಸಿಂಧೆ ಭೇಟಿ ನೀಡಿದರು. ಔರಾದ್ ತಾಲ್ಲೂಕಿನ ಗ್ರಾಮಗಳ ಮನೆಗಳಿಗೆ  ಹಾನಿಯಾಗಿದೆ ಹಾಗೂ ಸೇತುವೆಗಳು ಮುಳುಗಿ, ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಹಾನಿಯಾಗಿರುವ ಗ್ರಾಮಗಳಿಗೆ ತಹಶೀಲ್ದಾರ್ ಮಹೇಶ್ ಪಾಟೀಲ್ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ…

Read More