Subscribe to Updates
Get the latest creative news from FooBar about art, design and business.
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
- ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ
- ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
Author: admin
ಗುಬ್ಬಿ: ತಾಲೂಕಿನ ಕಸಬಾ ಹೋಬಳಿಯ ಹೊದಲೂರು ಗ್ರಾಮದ ಶ್ರೀ ಕೆಂಪಮ್ಮ ದೇವಿ ಮತ್ತು ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿದ್ದು ಅಗ್ನಿಕೊಂಡವನ್ನ ಹಾಯುವ ಮೂಲಕ ಭಕ್ತರು ತಮ್ಮ ಹರಕೆಯನ್ನು ಆಚರಿಸಿಕೊಂಡರು. ಜಾತ್ರಾ ಮಹೋತ್ಸವಕ್ಕೆ ಸಾವಿರಾರು ಭಕ್ತರು ಜಿಲ್ಲೆಯ ಹಲವು ಭಾಗಗಳಿಂದ ಆಗಮಿಸಿ ತಾಯಿಯ ದರ್ಶನವನ್ನು ಪಡೆದರು. ಮಂಗಳವಾರ ಮಧ್ಯರಾತ್ರಿಯವರೆಗೆ ಮೆರವಣಿಗೆ ನಡೆದಿದ್ದು ಸೋಮನ ಕುಣಿತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎಲ್ಲಾ ದೇವರ ಉತ್ಸವ ನಡೆದಿದ್ದು ಬುದುವಾರ ಬೆಳಗಿನ ಜಾವ ಅಗ್ನಿಕೊಂಡ ತುಳಿಯುವ ಮೂಲಕ ಸಾವಿರಾರು ಭಕ್ತರು ಹರಕೆ ತೀರಿಸಿದರು. ನಂತರ ಆರತಿ ಮೆರವಣಿಗೆ ನೂರಾರು ಮಹಿಳೆಯರು ಬಾಯಿ ಬೀಗಹಾಕಿಕೊಂಡು ಮೆರವಣಿಗೆ ಮೂಲಕ ಊರಿನ ಬೀದಿಗಳಲ್ಲಿ ಆರತಿಹೊತ್ತು ದೇವರಿಗೆ ಅರ್ಪಣೆ ಮಾಡಿದರು. ಗುಬ್ಬಿ ಹೊದಲೂರು ಗ್ರಾಮದಲ್ಲಿ ಶ್ರೀ ಕೆಂಪಮ್ಮ ದೇವಿ ಜಾತ್ರಾ ಮಹೋತ್ಸವ ನಡೆಯಿತು. ವರದಿ: ಚೇತನ್ ಗೌಡ, ಗುಬ್ಬಿ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ತುಮಕೂರು: 2.4 ಎಕರೆ ಜಮೀನನ್ನು ತಂದೆಯಿಂದ ತಮ್ಮ ಹೆಸರಿಗೆ ಬರೆಯಿಸಿ ಕೊಂಡು ನಂತರ ತಂದೆ ತಾಯಿಯನ್ನು ಆರೈಕೆ ಮಾಡದೇ, ಅಮಾನವೀಯತೆ ಮೆರೆದಿದ್ದ ಪುತ್ರಿಯರಿಗೆ ಇದೀಗ ಪೋಷಕರು ಕಾನೂನಿನ ಮೂಲಕ ಬಿಸಿಮುಟ್ಟಿಸಿದ್ದು, ಇದೀಗ ಪೋಷಕರು ನೀಡಿದ್ದ ಗಿಫ್ಟ್ ಡೀಡ್ ಆಸ್ತಿಯನ್ನು ಹೈಕೋರ್ಟ್ ಪೋಷಕರಿಗೆ ಮರಳಿಸಿದೆ. 2.4 ಎಕರೆ ಜಮೀನನ್ನು ಇಬ್ಬರು ಪುತ್ರಿಯರು ತಮ್ಮ ಹೆಸರಿಗೆ ಬರೆದ ನಂತರ ತಮ್ಮನ್ನು ನಿರ್ಲಕ್ಷಿಸಿರುವ ಬಗ್ಗೆ ತುಮಕೂರು ತಾಲ್ಲೂಕಿನ ಹೆಬ್ಬೂರು ಹೋಬಳಿಯ ವೆಂಕಟಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕ ಸದಸ್ಯ ಪೀಠ 2007ರ ಹಿರಿಯ ನಾಗರಿಕರ ಮತ್ತು ಪೋಷಕರ ನಿರ್ವಹಣೆ ಹಾಗೂ ಕಲ್ಯಾಣ ಕಾಯ್ದೆಯನ್ನು ಅನ್ವಯಿಸಿ, ಕೃಷಿ ಭೂಮಿಯನ್ನು ಪುತ್ರಿಯರ ಹೆಸರಿಗೆ ಮಾಡಿಕೊಟ್ಟಿದ್ದ ಗಿಫ್ಟ್ ಡೀಡ್ ನ್ನು ರದ್ದುಗೊಳಿಸಿದೆ. ಜೊತೆಗೆ ಹಿರಿಯ ನಾಗರಿಕರಿಗೆ ಅವರ ವೃದ್ಧಾಪ್ಯದಲ್ಲಿ ಆರೈಕೆ ಮಾಡದೆ, ಅವರ ಜೀವನ ನಿರ್ವಹಣೆಗೆ ನೆರವಾಗದೆ ಇದ್ದರೆ ಅಂತಹ ಸಂದರ್ಭದಲ್ಲಿ ನ್ಯಾಯಾಲಯ ಅವರ ರಕ್ಷಣೆಗೆ ಧಾವಿಸಿ ಅವರ ಆಸ್ತಿಯನ್ನು ರಕ್ಷಿಸಿ, ಅವರ…
ಮಧುಗಿರಿ / ಕೋಡಿಗೇನಹಳ್ಳಿ: ರಾಜಣ್ಣ ನಿನಗೆ ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ ಅದನ್ನು ಜನರು ಹೇಳುತ್ತಾರೆ. ಸಹಕಾರಿ ಕ್ಷೇತ್ರದಲ್ಲಿ ಬಡವರ ಪರವಾಗಿ, ಬೀದಿ ಬದಿ ವ್ಯಾಪಾರಿಗಳ ಪರವಾಗಿ ಸಾಲ ಸೌಲಭ್ಯಗಳನ್ನು ನೀಡುವುದರ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಬದಲಾವಣೆ ತರುವಲ್ಲಿ ಪ್ರಮುಖ ಪಾತ್ರ ನಿನ್ನದಾಗಿದೆ ಅಂತ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಕಿವಿಮಾತು ಹೇಳಿದರು. ತಾಲೂಕಿನ ಕೋಡಿಗೇನಹಳ್ಳಿ ಗ್ರಾಮದಲ್ಲಿನ ಬೆಸ್ಕಾಂ ಕಚೇರಿ, ಪಟ್ಟಣದಲ್ಲಿ 36 ನೂತನ ಕಟ್ಟಡ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ನೂತನ ಪೊಲೀಸ್ ಠಾಣೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಪರಮೇಶ್ವರ್, ಕೆ.ಎನ್.ರಾಜಣ್ಣ ಪರಿಶಿಷ್ಟ ಜಾತಿ, ಪಂಗಡ ಹಾಗೂ ಶೋಷಿತ ಸಮುದಾಯದವರಿಗೆ ಸಹಕಾರಿ ಕ್ಷೇತ್ರದಲ್ಲಿ ಮೀಸಲಾತಿ ಜಾರಿ ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಏಕೈಕ ವ್ಯಕ್ತಿಯಾಗಿದ್ದಾರೆ ಎಂದರು. ತಳ ಸಮುದಾಯದವರಿಗೆ ಈ ಹಿಂದೆ ಸಹಕಾರಿ ಸಂಘಗಳ ಮೆಟ್ಟಿಲುಗಳ ಬಳಿ ಬಲಿಷ್ಠರು ಸುಳಿಯಲು ಬಿಡುತ್ತಿರಲಿಲ್ಲ. ಸಹಕಾರಿ ಸಚಿವರಾಗಿದ್ದ ರಾಜಣ್ಣನವರ ಅವಧಿಯಲ್ಲಿ…
ಕುಣಿಗಲ್: ನನ್ನ ಗಂಡ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ, ತಲೆ ಬುರುಡೆಗೆ ಗಾಯವಾಗಿ ವೈದ್ಯರು ನಾಲ್ಕು ಹೊಲಿಗೆ ಹಾಕಿದ್ದಾರೆ, ಆದರೆ ನನಗೆ ಪೊಲೀಸ್ ಠಾಣೆಯಲ್ಲಿ ನ್ಯಾಯ ಸಿಗುತ್ತಿಲ್ಲ ಎಂದು ಮಹಿಳೆಯೊಬ್ಬರು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಕಾಲಿಗೆ ಬಿದ್ದು ನ್ಯಾಯ ಕೇಳಿದ ಘಟನೆ ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಿತು. ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ, ಮಂಗಳವಾರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಕುಣಿಗಲ್ ಬಿಬಿಎಂಪಿ ನೌಕರನ ಪತ್ನಿ ಸುಧಾ ಹಾಗೂ ಸಂತೆ ಮಾವತ್ತೂರು ಗ್ರಾಮದ ಸುಮಿತ್ರಾ ನಮಗೆ ನಮ್ಮ ಗಂಡಂದಿರು ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಮಾರಣಾಂತಿಕ ಹಲ್ಲೆ ಮಾಡಿ ತಲೆ ಬುರುಡೆ ಗಾಯವಾಗಿ ಹಲವು ಬಾರಿ ವೈದ್ಯರು ಬುರುಡೆಗೆ ಹೊಲಿಗೆ ಹಾಕಿದ್ದಾರೆ. ನಾನು ಪೊಲೀಸ್ ಠಾಣೆಗೆ ದೂರು ನೀಡಿದರೆ ನನಗೆ ಪೊಲೀಸರು ನ್ಯಾಯ ಕೊಡುತ್ತಿಲ್ಲ. ನನ್ನ ಗಂಡನ ವಿರುದ್ಧ ಕ್ರಮಕೈಗೊಂಡಿಲ್ಲ. ನಾವು ಯಾರ ಬಳಿ ಹೋಗಿ ನ್ಯಾಯ ಕೇಳಬೇಕು…
ತುಮಕೂರು: ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಮೂರ್ತಿ ಎಲ್. ಅವರು ಫೆಬ್ರವರಿ 17 ಮತ್ತು 18, ರಂದು ತುಮಕೂರು ಜಿಲ್ಲೆಗೆ ಭೇಟಿ ನೀಡಿ, ವಿವಿಧ ಇಲಾಖಾವಾರು ಪರಿಶೀಲನೆ ಹಾಗೂ ಸಂವಾದ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳಿಂದ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಿದ್ಧತೆ ಕೈಗೊಳ್ಳುವಂತೆ ಸೂಚಿಸಲಾಗಿದೆ. ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಸಿಟಿ ಕಾರ್ಪೊರೇಷನ್, ನಗರಸಭೆ, ಪುರಸಭೆಗಳಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಯೋಜನೆಗಳ ವಿವರ ಮತ್ತು ತೆರಿಗೆ ಹಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಾಂಗದ ಅಭಿವೃದ್ಧಿಗೆ ವಿನಿಯೋಗಿಸುತ್ತಿರುವ ವಿವರಗಳ ಮಾಹಿತಿ ಕುರಿತು 18 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿರುವ ಸಭೆಯಲ್ಲಿ ಪರಿಶೀಲನೆ ನಡೆಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಜಿಲ್ಲಾ ದಲಿತ–ಪ್ರಗತಿಪರ ಸಂಘಟನೆಗಳ ಒಕ್ಕೂಟ ಮತ್ತು ಸಾರ್ವತ್ರಿಕ ಆರೋಗ್ಯ ಆಂದೋಲನ–ಕರ್ನಾಟಕ ವತಿಯಿಂದ ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳನ್ನು ಸರ್ಕಾರ ಪಿಪಿಪಿ ಮಾದರಿಯಲ್ಲಿ ಕೇಂದ್ರದ ನೀತಿ ಆಯೋಗದ ಅವೈಜ್ಞಾನಿಕ ಧೋರಣೆಯಿಂದ ಕಾರ್ಪೊರೇಟ್ ಕಂಪನಿಗಳಿಗೆ ಸರ್ಕಾರಿ ಒಡೆತನದ ಸಾರ್ವಜನಿಕ ಆಸ್ಪತ್ರೆಗಳನ್ನು ಗುತ್ತಿಗೆ ನೀಡುವ ಸಂವಿಧಾನ ವಿರೋಧಿ ನಡೆಯನ್ನು ಖಂಡಿಸಿ, ರಾಜ್ಯದ 28 ಜಿಲ್ಲೆಗಳಲ್ಲಿ ಜಾಥಾ ಅಂಗವಾಗಿ ತುಮಕೂರು ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಪ್ರತಿಭಟನೆ ಮೂಲಕ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಸಂಚಾಲಕರಾದ ಡಾ.ಕೆ.ಬಿ. ಓಬಳೇಶ್ ಮಾತನಾಡಿ ರಾಜ್ಯ ಸರ್ಕಾರ ಬಡವರ ಪರ, ದಲಿತರ ಪರ, ಅಲ್ಪಸಂಖ್ಯಾತರ ಪರ ಎಂದು 5 ಗ್ಯಾರಂಟಿಗಳನ್ನು ಕೊಟ್ಟು ಮತ್ತೊಂದು ಕಡೆ ಬಡವರ ಮೇಲೆ ದುಬಾರಿ ಬೆಲೆಗಳ ಭಾರಿ ಬರೆಯನ್ನು ಹಾಕುವುದು ಒಂದು ಕಡೆಯಾದರೆ ರಾಜ್ಯದಲ್ಲಿ 8 ಜಿಲ್ಲೆಗಳ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಕಂಪನಿಗಳ ಮಾಲೀಕತ್ವಕ್ಕೆ ನೀಡಲು ಮುಂದಾಗಿರುವುದು ಜನವಿರೋಧಿ ನಡೆಯಾಗಿದೆ. ಕೂಡಲೇ ಪಿಪಿಪಿ ಮಾದರಿಯ ಖಾಸಗೀಕರಣವನ್ನು ಸರ್ಕಾರ ಕೈಬಿಡಬೇಕು. ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಹಾಗೂ…
ತುಮಕೂರು: ಹಿರೇಹಳ್ಳಿ ಎಸ್.ಬಿ.ಐ. ಗ್ರಾಮೀಣ ಸ್ವ–ಉದ್ಯೋಗ ತರಬೇತಿ ಸಂಸ್ಥೆಯು ಫೆಬ್ರವರಿ 16ರಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವತಿಯರಿಗಾಗಿ ಉಚಿತ ಊಟ ವಸತಿಯೊಂದಿಗೆ 30 ದಿನಗಳ ಮಹಿಳಾ ಟೈಲರಿಂಗ್ ತರಬೇತಿ ನೀಡಲು ಉದ್ದೇಶಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದ ಕನ್ನಡ ಓದಲು ಹಾಗೂ ಬರೆಯಲು ಬರುವ 18 ರಿಂದ 50 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸಿಂಗನಹಳ್ಳಿ ಕಾಲೋನಿ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ(ತುಮಕೂರು ನಿರ್ಮಿತಿ ಕೇಂದ್ರದ ಹತ್ತಿರ), ತುಮಕೂರು-572104 ಇವರಿಗೆ ಮುದ್ದಾಗಿ ಅಥವಾ ಅಂಚೆ ಮೂಲಕ ಫೆಬ್ರವರಿ 15ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 9738351048, 9663680001ನ್ನು ಸಂಪರ್ಕಿಸಬೇಕೆಂದು ಸಂಸ್ಥೆಯ ನಿರ್ದೇಶಕ ವಾದಿರಾಜ ಕೆ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುರುವೇಕೆರೆ: ಜೆಡಿಎಸ್ ಪಕ್ಷದಿಂದ ದೊಡ್ಡಘಟ್ಟ ಚಂದ್ರೇಶ್ ಟಿಕೆಟ್ ಕೇಳಲಿ ಅಭ್ಯಂತರವಿಲ್ಲ, ಅದನ್ನು ಬಿಟ್ಟು ಕಾರ್ಯಕ್ರಮದ ನೆಪದಲ್ಲಿ ಕಾರ್ಯಕರ್ತರ ನಡುವೆ ಜೆಡಿಎಸ್ ನಲ್ಲಿ ಗುಂಪುಗಾರಿಕೆ ಮಾಡಬಾರದು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ ನೀಡಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಪಕ್ಷದಿಂದ ಆಯೋಜಿಸಿದ್ದ ಜೆ.ಡಿ.ಎಸ್ ಕಾರ್ಯಕರ್ತರ ಸಭೆ ಹಾಗೂ ಎಸ್ ಬಿಆರ್ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ನಾನು ಜೆಡಿಎಸ್ ಪಕ್ಷಕ್ಕೆ ಬಂದಾಗ ತಾಲೂಕಿನಲ್ಲಿ 7 ಸಾವಿರ ಮತಗಳು ಪಕ್ಷಕ್ಕೆ ಬಂದಿದ್ದವು. ಸುಮಾರು ವರ್ಷಗಳ ಕಾಲ ಪಕ್ಷ ಸಂಘಟನೆ ಮಾಡಿ ಈಗ 70 ಸಾವಿರಕ್ಕೂ ಹೆಚ್ಚು ಮತಗಳು ಬರುವ ಹಾಗೆ ಸಂಘಟನೆ ಮಾಡಿದ್ದೇನೆ. ಜೆಡಿಎಸ್ ಪಕ್ಷದಿಂದ ನಾಲ್ಕು ಬಾರಿ ಶಾಸಕನಾಗಿ, ಮೂರು ಬಾರಿ ಸೋತಿದ್ದೇನೆ. ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್ ಹಾಲಿ ಶಾಸಕರಿಗೆ ಮುಂದಿನ ವಿಧಾನ ಸಭಾ ಚುನಾವಣೆಗೆ ಟಿಕೆಟ್ ನೀಡುವಂತೆ ಮಾತುಕತೆಯಾಗಿದೆ. ಚುನಾವಣೆ ಇನ್ನೂ 2 ವರ್ಷ ಇದೆ, ಅಭ್ಯರ್ಥಿ ವಿಚಾರ ಅಪ್ರಸ್ತುತ. ಆದರೂ ತಾಲೂಕಿನಲ್ಲಿ ಚಂದ್ರೇಶ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ ಎಂಬ…
ತುಮಕೂರು: ಜನಸಂಖ್ಯೆ ಆಧಾರದಲ್ಲಿ ಪರಿಶಿಷ್ಟ ಜಾತಿಗೆ ಇದ್ದ ಶೇ.15 ಮೀಸಲನ್ನು ಶೇ.17ಕ್ಕೆ ಹಾಗೂ ಪ.ಪಂಗಡಗಳಿಗೆ ಇದ್ದ ಶೇ.3ರ ಮೀಸಲು ಪ್ರಮಾಣವನ್ನು ಶೇ.7ಕ್ಕೆ ಏರಿಕೆ ಮಾಡಿ ಮೂರುವರೆ ವರ್ಷಗಳೇ ಕಳೆದಿದ್ದರೂ, ಕೇಂದ್ರ ಸರ್ಕಾರ ಸಂವಿಧಾನದ ಷೆಡ್ಯೂಲ್ ಗೆ ಸೇರಿಸದ ಪರಿಣಾಮ ಈವರೆಗೆ ಜಾರಿಯಾಗಿಲ್ಲ. ಹಾಗಾಗಿ ಸಿಎಂ, ಕೇಂದ್ರ ಸಚಿವರು, ಸಂಸದರು ಈ ವಿಷಯವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಪ್ರಯತ್ನವನ್ನು ಗಂಭೀರವಾಗಿ ಮಾಡಬೇಕು ಎಂದು ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷ ಹಾಗೂ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಒತ್ತಾಯಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2022ರಲ್ಲಿ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ನ್ಯಾ. ನಾಗಮೋಹನ್ ದಾಸ್ ಅವರ ವರದಿಯನ್ವಯ ಮೀಸಲು ಪ್ರಮಾಣವನ್ನು ಹೆಚ್ಚಳ ಮಾಡಿ ಆದೇಶ ಮಾಡಿದ್ದರು. ಇದರ ಜಾರಿ ಸಂಬಂಧ 2023ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದು, ಈಗ ಮೀಸಲು ಪ್ರಮಾಣ ಹೆಚ್ಚಳದ ಚೆಂಡು ಕೇಂದ್ರದ ಅಂಗಳದಲ್ಲಿದೆ. ಸಂವಿಧಾನದ ಷೆಡ್ಯೂಲ್ 9ಕ್ಕೆ ಮೀಸಲು ಹೆಚ್ಚಳವನ್ನು ಸೇರಿಸದ…
ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣ ಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನ ಪತ್ರ (ಲೈನೇಜ್/ಸಂಭಾವನೆ/ಕಮಿಷನ್ ಪಡೆದಿರುವ ದಾಖಲೆ) ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟ್ ಮೆಂಟ್ ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್‌ಪಾಸ್ ಮಂಜೂರು ಮಾಡಲಾಗುತ್ತದೆ. ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು”…