Subscribe to Updates
Get the latest creative news from FooBar about art, design and business.
- ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
- ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
- ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್ ಬುಕ್ ವಿತರಣೆ
- ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ
- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
- ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
- 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
- ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ
Author: admin
ಸರಗೂರು: ಎಲ್ಲಾ ಸಮುದಾಯದ ನಾಯಕರಿಗೆ ಸಮಾನತೆ ನೀಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ನಮ್ಮ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಸರ್ಕಾರ ನುಡಿದಂತೆ ನಡೆದಿದ್ದೇವೆ ಎಂದು ಶಾಸಕ ಅನಿಲ್ ಚಿಕ್ಕಮಾದು, ಸುನೀಲ್ ಬೋಸ್ ಪರವಾಗಿ ಮತಯಾಚನೆ ಮಾಡಿದರು. ತಾಲ್ಲೂಕಿನ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹಂಚೀಪುರ ಬಿ ಮಟಕೆರೆ, ಹೆಗ್ಗನೂರು, ಸಾಗರೆ, ಬಿದರಹಳ್ಳಿ, ಕೊತ್ತೇಗಾಲ ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಶನಿವಾರ ದಂದು ಮತಯಾಚನೆಯಲ್ಲಿ ಮಾತನಾಡಿದರು. ನಮ್ಮ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು. ಬಡಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯೋಜನೆ ಜಾರಿಗೊಳಿಸಿದ್ದಾರೆ. ಇದರಿಂದ ಅದನ್ನು ಮನದಲ್ಲಿ ಇಟ್ಟುಕೊಂಡು ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರಿಗೆ ಮತ ನೀಡಿ ಎಂದು ತಿಳಿಸಿದರು. ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿಗಳನ್ನು ಕೊಡಲಾಗುವುದು. ಮತ್ತು ರೈತರು ಸಾಲವನ್ನು ಮನ್ನಾ ಮಾಡಲಾಗುತ್ತದೆ. ಕಾಂಗ್ರೆಸ್ ಸರ್ಕಾರ ಇರುವುದು ಬಡವರಿಗೆ ಪೂರಕವಾಗಿರುತ್ತದೆ. ಅದರೆ…
ನಾವು ಬೆಳಿಗ್ಗೆ ಎದ್ದ ತಕ್ಷಣ ತೋಟ ಹಾಗೂ ಹೊಲ-ಗದ್ದೆಗಳಿಗೆ ಹೋದ ಸಂದರ್ಭದಲ್ಲಿ ಅಥವಾ ಮನೆಯ ಅಕ್ಕ-ಪಕ್ಕದಲ್ಲಿಯೇ ಹೆಚ್ಚಾಗಿ ನವಿಲುಗಳನ್ನು ನೋಡುತ್ತೇವೆ. ಇದರಿಂದ ನಮಗೆ ಶುಭವೋ ಅಶುಭವೋ ನೋಡೋಣ. ಕೆಲವು ಪ್ರಾಣಿ ಪಕ್ಷಿಗಳನ್ನು ಕಂಡಾಗ ಏನಾದ್ರೂ ಆಗುತ್ತದೆ, ಇದು ಶುಭ, ಅಶುಭ ಎಂದು ಕೆಲವರು ಹೇಳುವುದುಂಟು. ಆದರೆ ಹೆಚ್ಚಿನವರು ಬೆಳ್ಳಂಬೆಳಗ್ಗೆ ನವಿಲುಗಳನ್ನು ನೋಡುತ್ತಾರೆ ಎಂದು ಹೇಳುವುದುನ್ನು ನಾವು ಕೇಳಿದ್ದೇವೆ. ಇದರಿಂದ ಏನದಾರು ಒಳಿತುಂಟಾಗುವುದೇ ಎಂಬುದು ಹಲವರ ಪ್ರಶ್ನೆ. ಎಸ್ ಖಂಡಿತವಾಗಿಯು ಇದು ನಮಗೆ ಶುಭವನ್ನು ತರುತ್ತದೆ. ಹಿಂದೂ ಧರ್ಮದಲ್ಲಿ ನವಿಲನ್ನು ಬಹಳ ಮಂಗಳಕರವೆಂದು ಪರಿಗಣಿಸಲಾಗಿದೆ. ನವಿಲನ್ನು ನೋಡುವುದು ನಮಗೆ ಅನೇಕ ರೀತಿಯ ಸೂಚನೆಗಳನ್ನ ನೀಡುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಅಂತೆಯೇ ಒಬ್ಬ ವ್ಯಕ್ತಿಯು ಬೆಳಿಗ್ಗೆ ಅಚಾನಕ್ ಆಗಿ ನವಿಲನ್ನು ನೋಡಿದರೆ, ಅದನ್ನು ಬಹಳ ಶುಭ ಸಂಕೇತವೆಂದು ಹೇಳಲಾಗುತ್ತೆ. ಆ ದಿನ ನಿಮಗೆ ಎಲ್ಲವೂ ಒಳ್ಳೆಯದೇ ನಡೆಯುತ್ತೆ. ಮುಂಜಾನೆ ನೀವು ನವಿಲು ನೋಡಿದರೆ ನಿಮ್ಮ ಕೆಲಸದ ಸ್ಥಳದಲ್ಲಿಯೂ ಅನೇಕ ಪ್ರಯೋಜನಗಳನ್ನು ಪಡೆಯುತ್ತೀರಿ. ಇಡೀ ದಿನವು…
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದ್ದು, ಭಟ್ಕಳದಲ್ಲಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು, ಬೋಟ್ ನಲ್ಲಿದ್ದ ನಾಲ್ಕು ಜನ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಘಟನೆಯಿಂದ ಲಕ್ಷಾಂತರ ರೂ. ಹಾನಿ ಸಂಭವಿಸಿದೆ. ಕರಾವಳಿ ಭಾಗದ ಕಾರವಾರ, ಅಂಕೋಲ, ಕುಮಟಾ, ಭಟ್ಕಳ ಭಾಗದಲ್ಲಿ ಗುಡುಗು ಸಹಿತ ಮಳೆ ಪ್ರಾರಂಭವಾಗಿದ್ದು, ಕರಾವಳಿಯಲ್ಲಿ ಬಿಸಿಲಿನ ಅಬ್ಬರಕ್ಕೆ ಸ್ವಲ್ಪ ಶಮನ ಸಿಕ್ಕಿದಂತಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಹಾರಾಷ್ಟ್ರ: ಗಗನ್ ಯಾನ್ ಯೋಜನೆಯತ್ತ ಇಡೀ ದೇಶದ ಚಿತ್ತವೇ ನೆಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಾರಾಷ್ಟ್ರದ ಪರ್ಭಾನಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮೋದಿ, ಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವುದು ಈ ಬಾರಿಯ ಚುನಾವಣೆಯ ಅಜೆಂಡಾ ಎಂದರು. ನಮ್ಮ ಸರ್ಕಾರ ಜನಪರ ಕೆಲಸಗಳನ್ನು ಮಾಡುತ್ತಾ ಬಂದಿದ್ದು, ಕೊರೋನಾ ಸಮಯದಲ್ಲಿ ಶಕ್ತಿ ಮೀರಿ ದೇಶದ ಹಿತಕ್ಕಾಗಿ ದುಡಿದಿದ್ದೇವೆ. ಆ ಮುಖಾಂತರ ಇದೇ ವಿಶ್ವವೇ ನಮ್ಮನ್ನು ಒಂದು ಸ್ವಾವಲಂಬಿ ದೇಶವೆಂದು ನೋಡಲಾರಂಭಿಸಿದೆ. ಇದಷ್ಟೇ ಅಲ್ಲದೆ ನಾವು ಚಂದ್ರಯಾನವನ್ನು ಯಶಸ್ವಿಗೊಳಿಸಿ ಇದೀಗ ಗಗನಯಾನದ ಯಶಸ್ಸಿನತ್ತ ಶ್ರಮಿಸುತ್ತಿದ್ದೇವೆ. ಕೇವಲ ಹತ್ತು ವರ್ಷಗಳಲ್ಲಿ ದೇಶ ಅಭಿವೃದ್ಧಿಯಲ್ಲಿ ಪಥದಲ್ಲಿ ದಾಪುಗಾಲಿಟ್ಟು ಮುನ್ನುಗ್ಗುತ್ತಿದೆ ಎಂದ ಮೋದಿ, ತಾವು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾಗ ಮಾಧ್ಯಮಗಳಲ್ಲಿ ಪ್ರತಿದಿನ ಉಗ್ರರ ದಾಳಿ, ಬಾಂಬ್ ಸ್ಫೋಟದ ಸುದ್ದಿ ಬರುತ್ತಿತ್ತು. ಆದರೆ, 2019ರಿಂದ ಗಡಿಯಾಚೆಯಿಂದ ಭಯೋತ್ಪಾದಕರ ಒಳನುಸುಳುವಿಕೆ ಕೂಡ ಸ್ಥಗಿತಗೊಂಡಿದೆ. ಸರ್ಜುಕಲ್ ಸ್ಟ್ರೈಕ್ ಮುಖಾಂತರ ಅವೆಲ್ಲದಕ್ಕೂ ಉತ್ತರ ಕೊಟ್ಟಿದ್ದೇವೆ ಎಂದು ತಮ್ಮ ಜರ್ನಿಯ ಬಗ್ಗೆ…
ಬೆಂಗಳೂರು: ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಬಿವೈ ವಿಜಯೇಂದ್ರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಧರ್ಮ, ಭಾಷೆ ಜಾತಿ, ಸೌಹಾರ್ದ್ಯತೆ ವಿಚಾರದಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದಾರೆ ಎಂದು ಆರೋಪಿಸಿ ದೂರು ದಾಖಲಾದ ಹಿನ್ನೆಲೆ ಬಿ.ವೈ. ವಿಜಯೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಶಿಕಾರಿಪುರ ವಿಧಾನಸಭಾಕ್ಷೇತ್ರದ ಶಾಸಕರು ಆಗಿರುವ ವಿಜಯೇಂದ್ರ ಹಾಗೂ ಬಿಜೆಪಿ ಎಕ್ಸ್ ಖಾತೆ ಉಸ್ತುವಾರಿ ವಹಿಸಿಕೊಂಡಿರುವವರ ವಿರುದ್ಧ ಗಾಂಧಿನಗರದ ಚುನಾವಣಾ ನೊಡೆಲ್ ಅಧಿಕಾರಿ ಅರ್ಜುನ್ ಆಯೂರ್ ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕಾಂತಾರ ಸಿನಿಮಾ ಸೂಪರ್ ಹಿಟ್ ಆಗಿದ್ದು ಎಲ್ಲರಿಗೂ ಗೊತ್ತಿದೆ. ಭರ್ಜರಿಯಾಗಿ ಸದ್ದು ಮಾಡಿದ್ದ ಸಿನಿಮಾದ ಎರಡನೇ ಭಾಗವೂ ಆದಷ್ಟು ಬೇಗ ತೆರೆಗೆ ಬರುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈ ನಡುವೆ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಹೊರ ಬಿದ್ದ ಫಸ್ಟ್ ಲುಕ್ ಪೋಸ್ಟರ್ ದೇಶದ ಗಮನ ಸೆಳೆದಿತ್ತು. ಇದನ್ನೂ ಹೊಂಬಾಳೆ ಫಿಲ್ಮ್ಸ್ ನಿರ್ಮಿಸಲಿದ್ದು, ಅಂದಾಜು 125 ಕೋಟಿ ರೂ. ಬಜೆಟ್ ನಲ್ಲಿ ತಯಾರಾಗುತ್ತಿದೆ ಎನ್ನಲಾಗಿದೆ. ಈಗ ರಿಷಬ್ ಶೆಟ್ಟಿ ಅವರು ಮಲಯಾಳಂನ ಖ್ಯಾತ ನಟ ಮೋಹನ್ ಲಾಲ್ ಅವರನ್ನು ಭೇಟಿ ಮಾಡಿದ್ದಾರೆ. ‘ಕಾಂತಾರ 2’ ಸಿನಿಮಾದಲ್ಲಿ ಮೋಹನ್ ಲಾಲ್ ನಟಿಸಲಿದ್ದಾರಾ ಎಂಬ ಕುತೂಹಲ ಸಿನಿ ರಸಿಕರಲ್ಲಿ ಹೆಚ್ಚಾಗಿದೆ. “ಲೆಜೆಂಡರಿ ಮೋಹನ್ ಲಾಲ್ ಅವರನ್ನು ಭೇಟಿ ಮಾಡಿದ್ದು ಖುಷಿ ಇದೆ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ. ಸದ್ಯ ಈ ಫೋಟೋ ವೈರಲ್ ಆಗುತ್ತಿದೆ. ಈ ಮೊದಲು ರಿಷಬ್ ಶೆಟ್ಟಿ ಅವರು ಮಲಯಾಳಂ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ವರದಿ ಆಗಿತ್ತು. ಇದಕ್ಕೆ ರಿಷಬ್…
ಪಾವಗಡ ಸುದ್ದಿ: ಪಾವಗಡ ಪಟ್ಟಣದಲ್ಲಿರುವ ಪಕ್ಷದ ಕಚೇರಿಗೆ ಇಂದು, ಕರ್ನಾಟಕ ಸರ್ಕಾರದ ಗೃಹಮಂತ್ರಿಗಳಾದ ಡಾ.ಜಿ. ಪರಮೇಶ್ವರ್ ರವರು ಭೇಟಿ ನೀಡಿದರು. ಮಾನ್ಯ ಶಾಸಕರಾದ ಹೆಚ್.ವಿ. ವೆಂಕಟೇಶ್ ರವರು, ಮಾಜಿ ಸಚಿವರಾದ ವೆಂಕಟರಮಣಪ್ಪ ನವರನ್ನು ಭೇಟಿ ಮಾಡಿ, ಚುನಾವಣಾ ತಯಾರಿಯ ಬಗ್ಗೆ ಮಾಹಿತಿ ಪಡೆದರು. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಚಂದ್ರಪ್ಪ ನವರಿಗೆ ಈ ತಾಲ್ಲೂಕಿನಿಂದ ಅತೀ ಹೆಚ್ಚು ಮತಗಳನ್ನು ಕೊಡಿಸಿ ಗೆಲ್ಲಿಸಿಕೊಂಡು ಬರಬೇಕೆಂದು ಮಾನ್ಯ ಶಾಸಕರಲ್ಲಿ ಮನವಿ ಮಾಡಿದರು. ಈ ವೇಳೆ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಗೌಡ ರವರು, ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ನವರು, ವಕ್ತಾರರಾದ ನಿಕೇತ್ ರಾಜ್ ಮೌರ್ಯ ರವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಸುದೇಶ್ ಬಾಬು ರವರು, ರಾಮಾಂಜಿನಪ್ಪ ನವರು, ಮಾಜಿ ಜಿ.ಪಂ. ಸದಸ್ಯರಾದ ಫಜುಲುಲ್ಲ ಸಾಬ್ ರವರು, ಪುರಸಭಾ ಮಾಜಿ ಅಧ್ಯಕ್ಷರಾದ ಗುರ್ರಪ್ಪ ನವರು, ಕೆಪಿಸಿಸಿ ಸದಸ್ಯರಾದ ಕೆ.ಎಸ್. ಪಾಪಣ್ಣ ನವರು, ಶಂಕರ್ ರೆಡ್ಡಿ ರವರು, ಸದಸ್ಯರಾದ ರವಿ ರವರು ಸೇರಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು. ವರದಿ:…
ಬೇತುಲ್: ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯದ ನಂತರ ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿದ್ದು, 21 ಪೊಲೀಸರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಗಾಯಗೊಂಡ ಘಟನೆ ನಡೆದಿದೆ. ಐವರು ಪೊಲೀಸರು ಮತ್ತು ಉಳಿದ ಗೃಹರಕ್ಷಕರು ಸೇರಿದಂತೆ ಒಟ್ಟು 40 ಸಿಬ್ಬಂದಿ ಹೊತ್ತ ಬಸ್ ಛಿಂದ್ವಾರಾದಲ್ಲಿ ಚುನಾವಣಾ ಕರ್ತವ್ಯದ ನಂತರ ರಾಜ್ ಗಢಕ್ಕೆ ತೆರಳುತ್ತಿದ್ದಾಗ ಭೋಪಾಲ್-ಬೇತುಲ್ ಹೆದ್ದಾರಿಯ ಬರೇತಾ ಘಾಟ್ ಬಳಿ ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿರುವ ಎಂಟು ಸಿಬ್ಬಂದಿಗೆ ಬೆತುಲ್ ನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಣ್ಣಪುಟ್ಟ ಗಾಯಗೊಂಡವರಿಗೆ ಶಾಹಪುರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಹೆಚ್ಚಿನ ಸಿನಿಮಾ ನಟಿಯರು ಬ್ಲೌಸ್ ಇಲ್ಲದೆ ಫೋಟೋವನ್ನು ತೆಗೆಸುತ್ತಾರೆ. ಸೊಂಟದ ಮೇಲೆ ಕೈ ಅಡ್ಡ ಹಿಡಿದೋ, ಬಾಯಲ್ಲಿ ಬಟ್ಟಿ ಕಚ್ಚಿಕೊಂಡೋ ಹೀಗೆ ಹೊಸ ಹೊಸ ಅವತಾರಗಳಲ್ಲಿ ವಿವಿಧ ನಮೂನೆಯ ಪೋಟೋಗಳನ್ನು ಹರಿಬಿಡುತ್ತಾರೆ. ಇಂದು ಇದು ಹೊಸ ಟ್ರೆಂಡೇ ಆಗಿ ಹೋಗಿದೆ. ಅತಿಯಾಗಿ ಬೋಲ್ಡ್ ಆಗಿ ಕಾಣುವ ಆಸೆಯಿಂದಾಗಿ ಈ ಫ್ಯಾಷನ್ ಶುರುವಾಗಿದೆ ಎನ್ನಬಹುದು. ಅಂತೆಯೇ ಇದೀಗ, ಕನ್ನಡದ ನಟಿ ರೂಪ ರಾಯಪ್ಪ ಕೂಡ ಇದೇ ದಾರಿ ಹಿಡಿದಿದ್ದಾರೆ. ಹೌದು, ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ ರೂಪ ಕೆಜಿಎಫ್’ (KGF) ಚಿತ್ರದಲ್ಲಿ ಪುಟ್ಟ ಪಾತ್ರದ ಮೂಲಕ ಗಮನ ಸೆಳೆದಿದ್ದರು. ಇದೀಗ ಹಾಟ್ ಆಗಿ ಕಾಣಿಸಿಕೊಂಡಿರುವ ನಟಿ ಮೈ ಮೇಲೆ ಪ್ಲ್ಯಾಸ್ಟಿಕ್ ಚಿಟ್ಟೆ ಅಂಟಿಸಿಕೊಂಡು ಟಾಪ್ ಲೆಸ್ ಆಗಿ ರೂಪಾ ಕಾಣಿಸಿಕೊಂಡಿದ್ದಾರೆ. ರೂಪಾಳ ಫೋಟೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದಂತೆ ಆಕೆಯ ಲುಕ್ ಅನ್ನು ಬಾಲಿವುಡ್ ಬೆಡಗಿ ಉರ್ಫಿಗೆ ಹೋಲಿಸಿ ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. ಒಟ್ಟಿನಲ್ಲಿ ಇದೀಗ ‘ಕೆಜಿಎಫ್’ ಬ್ಯೂಟಿ ರೂಪಾ ರಾಯಪ್ಪ…
ಸರಗೂರು: ಬಿ. ಮಟಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಮಟಕೆರೆ ಗ್ರಾಮದ ಕ್ರೈಸ್ತ ಧರ್ಮದ ಮುಖಂಡರನ್ನು ಮುಸ್ಲಿಂ ಸಮುದಾಯದ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ತಾಲ್ಲೂಕು ಅಧ್ಯಕ್ಷ ಜಲೀಲ್, ಇಬ್ರಾಹಿಂ, ಅಬುಲಾರ್ಕ್, ರವಿ, ಮುತ್ತಫ್, ಅಬ್ದುಲ್ ವಾಹದ್, ಬಾಷಾ, ರವಿಕುಮಾರ್, ರಾಜನಾಯಕ, ಶಿವಣ್ಣನಾಯಕ, ಮಹದೇವನಾಯಕ ಮತ್ತಿತರರಿದ್ದರು. ವರದಿ: ಹಾದನೂರು ಚಂದ್ರ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296