Subscribe to Updates
Get the latest creative news from FooBar about art, design and business.
- ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
- ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
- ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್ ಬುಕ್ ವಿತರಣೆ
- ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ
- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
- ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
- 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
- ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ
Author: admin
ಬೆಂಗಳೂರು: ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿದ್ದ ಕರ್ನಾಟಕದ ಜನರಿಗೆ ಕೊನೆಗೂ ಸಂತಸವಾಗಿದೆ. ಕರ್ನಾಟಕದಲ್ಲಿ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಶುಕ್ರವಾರ ಮಳೆಯಾಗಿದ್ದು, ಈ ಮಧ್ಯೆ, ಸಿಡಿಲು ಬಡಿದು ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ರೈತರೊಬ್ಬರು ಮೃತಪಟ್ಟಿದ್ದಾರೆ. ರಾಕೇಶ್ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಒಡಿಶಾ: ಒಡಿಶಾ ಮಹಾನದಿಯಲ್ಲಿ ದೋಣಿ ಮಗುಚಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು ಮೂವರು ಮಕ್ಕಳು ಸೇರಿದಂತೆ ಏಳು ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ದೋಣಿಯಲ್ಲಿ 50ಕ್ಕೂ ಹೆಚ್ಚು ಮಂದಿ ಪಯಣ ಮಾಡುತ್ತಿದ್ದ ವೇಳೆ ದೋಣಿ ಏಕಾಏಕಿ ಮಗುಚಿ ಬಿದ್ದು, ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ್ದು ಅವರ ಮೃತದೇಹ ಪತ್ತೆಯಾಗಿದೆ. ಮೂವರು ಮಕ್ಕಳು ಸೇರಿದಂತೆ ನಾಪತ್ತೆಯಾಗಿರುವ ಏಳು ಮಂದಿಯನ್ನು ರಕ್ಷಿಸುವ ಕಾರ್ಯಾಚರಣೆ ಮುಂದುವರಿದಿದೆ. ಇದುವರೆಗೆ 40ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ದೋಚಿ ಮಗುಚಿ ಬಿದ್ದ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು, ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ ಆಗಮಿಸಿ ಕಾರ್ಯಾಚರಣೆಗೆ ಮುಂದಾಗಿದ್ದರು. ನಾವು ಇಲ್ಲಿಯವರೆಗೆ ಸುಮಾರು 47-48 ಜನರನ್ನು ರಕ್ಷಿಸಿದ್ದೇವೆ ಮತ್ತು ಅವರನ್ನು ಅವರ ಗ್ರಾಮಗಳಿಗೆ ಕಳುಹಿಸುತ್ತೇವೆ. 35 ವರ್ಷದ ಮಹಿಳೆಯ ಶವವನ್ನು ವಶಪಡಿಸಿಕೊಳ್ಳಲಾಗಿದೆ. ನಾಲ್ವರು ಮಹಿಳೆಯರು ಮತ್ತು ಮೂವರು ಮಕ್ಕಳು ಕಾಣೆಯಾಗಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು…
ಸಿಎಂ ರ್ಯಾಲಿಯಲ್ಲಿ ತಪ್ಪಿ ಹೋಗಿದ್ದ ಮಗುವನ್ನು ಪೊಲೀಸ್ ಇನ್ಸ್ ಸ್ಪೆಕ್ಟರ್ ಪೋಷಕರಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದ ಘಟನೆ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ಹೊಸಹಳ್ಳಿ ಪೋಲೀಸ್ ಸ್ಟೇಷನ್ ನ ರಾವ್ ಗಣೇಶ್ ಮಗುವನ್ನ ಪೋಷಕರ ಮಡಿಲಿಗೆ ಒಪ್ಪಿಸಿದ್ದಾರೆ. ನಿನ್ನೆ ಚಿಕ್ಕಬಳ್ಳಾಪುರದಲ್ಲಿ ಸಿಎಂ ಸಿದ್ದರಾಮಯ್ಯನವರ ರ್ಯಾಲಿ ನಡೆಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡಿದ್ದರು. ಈ ವೇಳೆ ಭಾಗವಹಿಸಿದ್ದ ಪೋಷಕರ ಕೈಯಿಂದ 3 ವರ್ಷದ ಹೆಣ್ಣು ಮಗು ಅಲ್ಫಾ ತಪ್ಪಿಹೋಗಿತ್ತು. ತಪ್ಪಿ ಹೋದ ಮಗು ಹೊಸಹಳ್ಳಿ ಪೋಲೀಸ್ ಸ್ಟೇಷನ್ ನ ಇನ್ಸ್ಸ್ಪೆಕ್ಟರ್ ರಾವ್ ಗಣೇಶ್ ಕಣ್ಣಿಗೆ ಬಿದ್ದಿತ್ತು. ಜನರ ನಡುವೆ ಕಣ್ಣೀರಿಡುತ್ತಿದ್ದ ಮಗುವನ್ನು ಗಣೇಶ್ ಕಂಡಿದ್ದಾರೆ. ಮಗುವಿಗೆ ಸರಿಯಾಗಿ ಮಾತು ಕೂಡ ಬರುತ್ತಿರಲಿಲ್ಲ. ತಕ್ಷಣವೇ ಮಗುವನ್ನು ಸಂತೈಸಿಕೊಂಡು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. ಬಳಿಕ ಮಗುವಿನ ಬಳಿ ಮಾಹಿತಿ ಕಲೆ ಹಾಕಿ, ರ್ಯಾಲಿ ಮುಗಿದ ನಂತರ ಪೋಷಕರಿಗೆ ಒಪ್ಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಪ್ರಧಾನಿ ನರೇಂದ್ರ ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನೋರ್ವನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ ಆರೋಪವೊಂದು ಕೇಳಿ ಬಂದಿದೆ. ರೋಹಿತ್ ಎಂಬಾತನ ಮೇಲೆ ಇವರು ಹಲ್ಲೆ ಮಾಡಿದ್ದಾರೆ. ಈ ಕುರಿತು ರೋಹಿತ್ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಅಲ್ಲದೇ ಪಾಕಿಸ್ತಾನ ಹಾಗೇ ಅಲ್ಲಾಹ ಪರ ಘೋಷಣೆ ಕೂಗಲು ಒತ್ತಾಯ ಮಾಡಿದ್ದಾರೆ ಎಂದು ಹೇಳಿದ್ದು, “ನರೇಂದ್ರ ಮೋದಿ ಹಾಡು ಮಾಡಿದ್ದೀಯ, ನಿನ್ನ ಸಾಯಿಸುತ್ತೇವೆಂದು” ಬೆದರಿಕೆ ಹಾಕಿರುವ ಕುರಿತು ರೋಹಿತ್ ಆರೋಪ ಮಾಡಿದ್ದಾರೆ. ದುಷ್ಕರ್ಮಿಗಳು ಬೆದರಿಕೆ ಜೊತೆಗೆ ಆತನಿಗೆ ಹಲ್ಲೆ ಮಾಡಿ, ಬಟ್ಟೆ ಹರಿದು ಹಾಕಿದ್ದಾರೆ. ಹಲ್ಲೆಗೊಳಗಾದ ಯುವಕ ನೇರವಾಗಿ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ನಂತರ ಪೊಲೀಸರೇ ಯುವಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕಾಲೇಜು ಕ್ಯಾಂಪಸ್ ನಲ್ಲಿ ಯುವತಿಯೊಬ್ಬಳನ್ನು ಪ್ರೀತಿಸಲು ನಿರಾಕರಣೆ ಮಾಡಿದಳು ಎಂಬ ಕಾರಣಕ್ಕೆ ಮಾಡಿದ ಹತ್ಯೆ ಪ್ರಕರಣ ಖಂಡನೀಯ. ಕೊಲೆ ಎನ್ನುವುದು ಇಸ್ಲಾಂನಲ್ಲಿ ಸಹಜ ಪ್ರಕ್ರಿಯೆಯಾಗಿದೆ. ವಿದ್ಯಾರ್ಥಿನಿಯರಿಗೆ ರಕ್ಷಣೆ ಇಲ್ಲ ಎನ್ನುವಂತಾಗಿದೆ. ಆತ ಐಸಿಸ್ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಆರೋಪಿ ಫಯಾಜ್ ಲವ್ ಮಾಡಿ ಮತಾಂತರ ಮಾಡಲು ಮುಂದಾಗಿದ್ದ. ಲವ್ ಜಿಹಾದ್ ಯಶಸ್ವಿಯಾಗಲಿಲ್ಲವೆಂದು ಈಗ ಕೊಲೆ ಮಾಡಿದ್ದಾನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ಫಯಾಜ್ ಐಸಿಸ್ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಚಾಕು ಹಾಕಲು ಆತ ಎಲ್ಲಿ ತರಬೇತಿ ಪಡೆದಿದ್ದಾನೆ? ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಇದು ಕಾಂಗ್ರೆಸ್ ಬೆಳೆಸಿದ ವಿಷಬೀಜ. ಕಾಂಗ್ರೆಸ್ ಹುಟ್ಟಿದಾಗ ಆ ಪಕ್ಷದ ನಾಯಕರು ಬ್ರಿಟಿಷರ ಪರವಿದ್ದರು. ಈಗ ಮುಸ್ಲಿಮರು, ಕೊಲೆಗಡುಕರ ಪರ ಇದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿಜವಾಗಿ ಕಳಕಳಿ ಇದ್ದರೆ ಕೊಲೆಗಡುಕನನ್ನು ಎನ್ಕೌಂಟರ್ ಮಾಡಿಸಬೇಕು. ಕೊಲೆಗಡುಕನ ಮನೆಗೆ…
ಆಹಾರದಲ್ಲಿ ರುಚಿಯನ್ನು ಪಡೆಯಲು ಒಂದು ಚಿಟಿಕೆ ಉಪ್ಪು ಖಂಡಿತವಾಗಿಯೂ ಸೇರಿಸಬೇಕು. ಉಪ್ಪಿಲ್ಲದೆ ಯಾವುದೇ ರೀತಿಯ ಆಹಾರವನ್ನು ಸೇವಿಸಲು ಸಾಧ್ಯವಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಅದೇ ಉಪ್ಪು ಜಾಸ್ತಿಯಾದರೆ ಅಪಾಯ. ಇದರಿಂದಾಗಿ ಅಧಿಕ ರಕ್ತದೊತ್ತಡ ಮತ್ತು ಹೃದ್ರೋಗ ಬರುವ ಸಾಧ್ಯತೆ ಹೆಚ್ಚು. ಬಿಪಿ ರೋಗಿಗಳು ಉಪ್ಪನ್ನು ಕಡಿಮೆ ಸೇವಿಸಬೇಕು. ಇಂತಹ ಸಮಯದಲ್ಲಿ, ಉಪ್ಪಿನ ಬದಲು ನಾವು ಕಂಡುಕೊಳ್ಳುವ ಪರ್ಯಾಯವೆಂದರೆ ಹಿಮಾಲಯನ್ ಸ್ಪಟಿಕ ಉಪ್ಪು. ಸೈಂಧವ ಲವಣ ವಾಸ್ತವವಾಗಿ ಉಪ್ಪಲ್ಲ. ಇದು ಮೆಗ್ನಿಶಿಯಮ್ ಸ್ಪಟಿಕದಿಂದ ಮಾಡಿದ ಖನಿಜ ಉಪ್ಪು. ಇದು ಹಿಮಾಲಯ ಭಾಗದಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಕಡು ನೀಲಿ, ನೇರಳೆ, ಗುಲಾಬಿ, ಕಿತ್ತಳೆ, ಕೆಂಪು, ಹಳದಿ ಮತ್ತು ಬೂದು ಬಣ್ಣಗಳಲ್ಲಿ ಈ ಉಪ್ಪು ಲಭ್ಯವಿದೆ. ಸೈಂಧವ ಉಪ್ಪು ಇತರ ಲವಣಗಳಿಗಿಂತ ಹೆಚ್ಚು ದುಬಾರಿಯಾಗಿದೆ ಆದರೆ ಶುದ್ಧವಾಗಿದೆ. ಇದರಲ್ಲಿ ಯಾವುದೇ ರಾಸಾಯನಿಕಗಳು ಇರುವುದಿಲ್ಲ. ಅದಕ್ಕಾಗಿಯೇ ತಜ್ಞರು ಇದನ್ನು ಸಾಮಾನ್ಯ ಉಪ್ಪಿಗೆ ಆರೋಗ್ಯಕರ ಪರ್ಯಾಯವಾಗಿ ಸೂಚಿಸುತ್ತಾರೆ. ಇದು ಬಹಳ ಕಡಿಮೆ ಪ್ರಮಾಣದ ಅಯೋಡಿನ್ ಅನ್ನು ಹೊಂದಿರುತ್ತದೆ.…
ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಬಂದ ನಂತರ ಜಿಹಾದಿ ಕರ್ನಾಟಕ ಸೃಷ್ಟಿಯಾಗಿದೆ. ಹಿಂದೂಗಳ ರಕ್ತಕ್ಕೆ ಬೆಲೆಯೇ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ದುರಾಡಳಿತದ ಆರೋಪ ಪಟ್ಟಿಯನ್ನು ಆರ್. ಅಶೋಕ್ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಆರ್. ಅಶೋಕ್, ರಾಜ್ಯದಲ್ಲಿ ಹಿಂದೂಗಳ ಕಗ್ಗೊಲೆ, ಲವ್ ಜಿಹಾದ್, ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ಲವ್ ಜಿಹಾದ್ ಗೆ ಕಾಂಗ್ರೆಸ್ ನವರು ಕೂಡ ಒಳಗಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಲವ್ ಜಿಹಾದ್ ನಲ್ಲಿ ಹಿಂದೂ ಯುವತಿ ಬರ್ಬರ ಕೊಲೆಗೀಡಾಗಿರುವುದನ್ನು ಬಿಜೆಪಿ ಉಗ್ರವಾಗಿ ವಿರೋಧಿಸುತ್ತದೆ. ಕರ್ನಾಟಕವನ್ನು ಡಾನ್ ಗಳು ನಡೆಸುತ್ತಿರುವಂತಹ ಪರಿಸ್ಥಿತಿ ಇದ್ದು, ಸರ್ಕಾರ ಕಾನೂನನ್ನು ಗೂಂಡಾಗಳಿಗೆ ನೀಡಿದೆ ಎಂದರು. ಲವ್ ಪ್ರಕರಣ, ಕುಟುಂಬದ ಸಮಸ್ಯೆ ಎಂದು ಹೇಳುವ ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು. ಇದು ಲವ್ ಜಿಹಾದ್ ಎಂದು ಯುವತಿಯ ತಂದೆ, ಕಾಂಗ್ರೆಸ್ ಕಾರ್ಪೊರೇಟರ್ ಹೇಳುತ್ತಿದ್ದಾರೆ. ಕುಟುಂಬದವರು ಕಣ್ಣೀರು ಹರಿಸುವಾಗ ಕೊಲೆಯಾದ ಯುವತಿಯ ಬಗ್ಗೆ ಹೀನಾಯವಾಗಿ ಮಾತಾಡುತ್ತಿದ್ದಾರೆ.…
ಗುಜರಾತಿನ ಕಚ್ ನಲ್ಲಿ ಪತ್ತೆಯಾದ ಪಳೆಯುಳಿಕೆ ವಿಶ್ವದ ಅತಿದೊಡ್ಡ ಜೀವಂತ ಹಾವಿಗೆ ಸೇರಿದೆ ಎಂದು ಐಐಟಿ ಹೇಳಿದೆ ರೂರ್ಕಿಯ ಸಂಶೋಧಕರು. ವರ್ಷಗಳ ಅಧ್ಯಯನದ ನಂತರ, ಈ ಹಾವು ವಿಶ್ವದ ಅತಿದೊಡ್ಡ ಹಾವು ಎಂದು ದೃಢಪಡಿಸಲಾಗಿದೆ. ಈ ಸುದ್ದಿಯನ್ನು ಎನ್ ಡಿಟಿವಿ ಸೇರಿದಂತೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ಹಾವು ದೈತ್ಯ ಡೈನೋಸಾರ್ ಟೈರನೊಸಾರಸ್ ರೆಕ್ಸ್ ಗಿಂತ ದೊಡ್ಡದಾಗಿದೆ ಎಂದು ಸಂಶೋಧಕರು ನಂಬಿದ್ದಾರೆ. 47 ಮಿಲಿಯನ್ ವರ್ಷಗಳ ಹಿಂದೆ ಬದುಕಿದ್ದ ಈ ಹಾವಿಗೆ ವಾಸುಕಿ ಇಂಡಿಕಸ್ ಎಂದು ಹೆಸರಿಡಲಾಗಿದೆ. ಪುರಾಣಗಳಲ್ಲಿ ವಾಸುಕಿ ಎಂದರೆ ಶಿವನ ಕೊರಳಿನಲ್ಲಿರುವ ಹಾವು. ಇದು ವಿಷರಹಿತ ಹೆಬ್ಬಾವು ಆಗಿರಬೇಕು ಎಂದು ತಿಳಿದುಬಂದಿದೆ. ಅಧ್ಯಯನದ ಪ್ರಕಾರ, ಹಾವು 11 ರಿಂದ 15 ಮೀಟರ್ (ಸುಮಾರು 50 ಅಡಿ) ಉದ್ದ ಮತ್ತು ಸುಮಾರು ಒಂದು ಟನ್ ತೂಕವಿರಬೇಕು ಎಂದು ಹೇಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತುಮಕೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ.(ಪೋಕ್ಸೋ)ವು 10 ವರ್ಷ ಶಿಕ್ಷೆ ಮತ್ತು 2 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ತಿಪಟೂರು ನಗರ ಸರಹದ್ದಿನ ಭೋವಿ ಕಾಲೋನಿ ನಿವಾಸಿ ಸೈಯಸ್ ಗೌಸ್ ಅಲಿಯಾಸ್ ಗೌಸ್ ಪಾಷ(40) ಎಂಬಾತ ವಿವಾಹಿತನಾಗಿದ್ದು 1 ಮಗುವಿನ ತಂದೆಯಾಗಿದ್ದರೂ ಸಹ, ಅಪ್ರಾಪ್ತ ಬಾಲಕಿಯನ್ನು ಪರಿಚಯ ಮಾಡಿಕೊಂಡು 06—05—2017ರಂದು ತನ್ನ ಕಾರಿನಲ್ಲಿ ಅಪಹರಿಸಿ ರಾಜಸ್ಥಾನದ ಅಜ್ಮೀರ್ ಗೆ ತೆರಳಿದ್ದು, ಅಲ್ಲಿ 26—05—2017ರವರೆಗೆ ಬಾಲಕಿಯನ್ನು ಅಕ್ರಮ ಬಂಧನದಲ್ಲಿಟ್ಟುಕೊಂಡು ಪ್ರತಿ ದಿನ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಪ್ರಕರಣದ ತನಿಖೆ ನಡೆಸಿದ ತಿಪಟೂರು ನಗರದ ತನಿಖಾಧಿಕಾರಿ ದೀಪಕ್ ಎಂ. ಅವರು ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯಲ್ಲಿ ಸಲ್ಲಿಸಿದರು. ಪ್ರಕರಣದ ವಿಚಾರಣೆಯಲ್ಲಿ ಸೈಯದ್ ಪಾಷ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ.(ಪೋಕ್ಸೋ)ಯ ನ್ಯಾಯಾಧೀಶರು ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ 2…
ದಾವಣಗೆರೆ: ರಾಜ್ಯದಲ್ಲಿ ಭಯೋತ್ಪಾದಕ ಸರ್ಕಾರ ಅಡಳಿತ ನಡೆಸುತ್ತಿದ್ದು, ಕಾಂಗ್ರೆಸ್ ನಡೆಗೆ ಜನರು ಬೇಸತ್ತಿದ್ದಾರೆ ಎಂದು ಸಚಿವ ಎಂ.ಪಿ. ಪಿಣುಕಾಚಾರ್ಯ ಕಾಂಗ್ರೆಸ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಹತ್ಯೆ ಖಂಡಿಸಿ ತಾಲೂಕಿನಾದ್ಯಂತ ಕೃತ್ಯ ಎಸಗಿದವರನ್ನ ಗುಂಡಿಟ್ಟು ಕೊಲ್ಲಬೇಕು, ನೇಣಿಗೇರಿಸಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಗೃಹ ಸಚಿವರು, ಸಿಎಂ ಅವರು ಇದು ವೈಯಕ್ತಿಕ ಕಾರಣಕ್ಕೆ ನಡೆದ ಕೊಲೆ ಅಂತಾರೆ. ಇಂಥವರಿಗೆ ಚುನಾವಣೆಯಲ್ಲಿ ಎಲ್ಲರೂ ಸೇರಿ ತಕ್ಕ ಪಾಠ ಕಲಿಸಬೇಕು ಎಂದಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ, ಅಲ್ಲದೆ ಕಾಂಗ್ರೆಸ್ ಸರ್ಕಾರದಲ್ಲಿ PFI-SDPI ಕೇಸ್ ಗಳನ್ನ ವಾಪಸ್ ಪಡೆದಿದ್ದಾರೆ. ಕಾನೂನು ಸುವ್ಯವಸ್ಥೆ ಬಿಗಿ ಇದ್ದರೆ ಈ ರೀತಿ ಘಟನೆ ನಡೆಯುತ್ತಿರಲಿಲ್ಲ ಎಂದು ಆಡಳಿತ ಪಕ್ಷದ ವಿರುದ್ಧ ಗುಡುಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296