Author: admin

ಮಧುಗಿರಿ: ಮಧುಗಿರಿ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, “ಮಧುಗಿರಿಗೂ ದೇವೇಗೌಡರ ಕುಟುಂಬಕ್ಕೂ ಯಾವುದೊ ಒಂದು ಜನ್ಮದ ಋಣಾನುಬಂದ ಇದೆ” ಎಂದು ಹೇಳಿದರು. “ದೇಶದ ಹಲವಾರು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕೊಡುವ ಸಾಮರ್ಥ್ಯ ಉಳ್ಳವರು ಮೋದಿಯವರು ಅಂತಾ ಎಲ್ಲರೂ ನಂಬಿದ್ದಾರೆ. ತುಮಕೂರಿನಲ್ಲಿ 6ನೆ ವಿಧಾನಸಭಾ ಕ್ಷೇತ್ರ ಮಧುಗಿರಿಗೆ ನಾನು ಬಂದಿದ್ದೇನೆ. ಕಳೆದ ಬಾರಿ ದೇವೇಗೌಡರು ಇಲ್ಲಿ ಚುನಾವಣೆ ನಿಂತಾಗ ಏನೇನಾಯ್ತು ಅನ್ನೋದನ್ನ ನಾನು ಚರ್ಚೆ ಮಾಡೋಕೆ ಹೋಗೋದಿಲ್ಲ. ಮಧುಗಿರಿಯಲ್ಲಿ ನೀರಿನ ಸಮಸ್ಯೆ ಇದೆ.  2004ರಿಂದ ಜೆಡಿಎಸ್ ಸ್ವತಂತ್ರವಾಗಿ ಆಡಳಿತಕ್ಕೆ ತರಬೇಕು ಅಂತಾ ಪ್ರಯತ್ನ ಪಟ್ಟಿದ್ದೇವೆ. ಆದರೆ ದುರದೃಷ್ಟವಶಾತ್ ಅದು ಸಾಧ್ಯವಾಗಲಿಲ್ಲ. 2006ರಲ್ಲಿ ಬಿಜೆಪಿ- ಜೆಡಿಎಸ್ ಸೇರಿ ಸರ್ಕಾರ ಮಾಡಿತು. ಇಡೀ ದೇಶದಲ್ಲಿ ಜನಪರವಾದ ಸರ್ಕಾರ ಅಂದ್ರೆ ಅದು ಕುಮಾರಸ್ವಾಮಿ ನೇತೃತ್ವದ ಸರ್ಕಾರ ಎಂಬ ಭಾವನೆ ಇತ್ತು. ನಾನು ಆ ಸಂದರ್ಭದಲ್ಲಿ ಹೇಗೆ ಕೆಲಸ ಮಾಡಿದ್ದೇನೆ ಅನ್ನೋದನ್ನ ನೀವು ನೋಡಿದ್ದೀರಿ. ಬಿಜೆಪಿಯ ಜೊತೆ ಮಾಡಿದ ಸರ್ಕಾರದಲ್ಲಿ ಹಲವರು ಕಾರ್ಯಕ್ರಮಗಳನ್ನ ಕೊಟ್ಟಿದ್ದೇವೆ. ವಿಧವೆಯರಿಗೆ…

Read More

ಹಾಸನ: ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್ ಪರವಾಗಿ ನಡೆದ ಬೃಹತ್ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು. ನಾವು ಕೇವಲ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ಬಕ್ರಾ ಮಾಡುವುದಿಲ್ಲ. ನಿಮ್ಮ ಬದುಕಿನ ಸಂಕಷ್ಟಗಳ ಜತೆಗೆ ನಿಲ್ಲುತ್ತೇವೆ ಎಂದರು. ರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಏಕೆ ಎಂದು ಸಿ.ಎಂ ಪ್ರಶ್ನಿಸಿದರು. ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಕೊಡುವುದಾಗಿ ಬಜೆಟ್ ನಲ್ಲಿ ಘೋಷಿಸಿದರು. ಆದರೆ ಇದುವರೆಗೂ ಒಂದೇ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡದೆ ವಂಚಿಸಿದ್ದಾರೆ. ಈ ವಂಚನೆಯನ್ನು ಪ್ರಶ್ನಿಸುವುದನ್ನು ಬಿಟ್ಟ ಜೆಡಿಎಸ್ ನವರು ಹೋಗಿ ಬಿಜೆಪಿ ಜತೆಗೇ ಜಮೆಯಾಗಿದ್ದಾರೆ. ಇದು ಪ್ರಜ್ವಲ್ ರೇವಣ್ಣ ಅವರು ತಮಗೆ ಮತ ಹಾಕಿದವರಿಗೆ ಮಾಡಿದ ದ್ರೋಹ…

Read More

ಹಾವೇರಿ: “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಶೇ 43 ರಷ್ಟು ಹೆಚ್ಚಳವಾಗಿವೆ” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ರಾಜ್ಯ ಸರ್ಕಾರ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಗೂಂಡಾ ರಾಜ್ಯವಾಗಿದೆ. ಪೊಲೀಸರು ಆರೋಪಿಗಳನ್ನು ಹಿಡಿದರೂ ಅವರನ್ಮು ರಾಜಕೀಯ ಪ್ರಭಾವ ಬಳಸಿ ಬಿಡುಗಡೆ ಮಾಡಿಸುತ್ತಿದ್ದಾರೆ. ಹಪ್ತಾ ವಸೂಲಿ ಹೆಚ್ಚಾಗಿದೆ. ಪೊಲಿಸ್ ಸ್ಟೇಷನ್ ಗಳು ಸೆಟಲ್ ಮೆಂಟ್‌ ಕೇಂದ್ರಗಳಾಗಿವೆ ಎಂದು ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಕಾಲೇಜು ಆವರಣದಲ್ಲಿಯೇ ಒಬ್ಬ ಯುವಕ ಯುವತಿಗೆ ಒಂಬತ್ತು ಬಾರಿ ಇರಿದು ಓಡಿ ಹೋಗುತ್ತಾನೆ ಎಂದರೆ ಅವನ ಹಿಂದೆ ಯಾವ ಶಕ್ತಿ ಇದೆ. ಗೃಹ ಸಚಿವರು ಅದೊಂದು ಪ್ರೇಮ ಪಕ್ರರಣ ಇಷ್ಟು ಹಗುರ ಹೇಳಿಕೆ ಕೊಟ್ಟರೆ ಅಪರಾಧಿಗಳಿಗೆ ಪುಷ್ಟಿ ಬರದೇ ಇನ್ನೇನಾಗುತ್ತದೆ. ಕಾಲೇಜ್ ಕ್ಯಾಂಪಸ್ ನಲ್ಲಿ ಈ ರೀತಿ ಪ್ರಕರಣ ನಡೆಯದೆ…

Read More

ಕೊರಟಗೆರೆ: ಅಡಿಕೆತಟ್ಟೆ ತಯಾರಿಸುವ ಫ್ಯಾಕ್ಟರಿ ಪರವಾನಗಿ ಮಾಡಿಕೊಡಲು 20 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಎಲೆರಾಂಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರಯ್ಯ, ಪಿಡಿಒ ಕಿಶೋರ್ ಲಾಲ್ ಸಿಂಗ್ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದಾರೆ. ಪರವಾನಗಿ ಮಾಡಿಕೊಡಲು ಎಲೆ ರಾಂಪುರ ಗ್ರಾಮದ ಆರ್. ನಾಗೇಶ್ ಎಂಬವರ ಬಳಿಯಲ್ಲಿ ಅಧ್ಯಕ್ಷ ಹಾಗೂ ಪಿಡಿಒ 20 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಮಾಹಿತಿ ಪಡೆದ ಲೋಕಾಯುಕ್ತ ಎಸ್.ಪಿ. ವಲಿಬಾಷ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ತಂಡ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಡಿವೈಎಸ್ಪಿ ಉಮಶಂಕರ್, ಇನ್ಸ್ಪೆಕ್ಟರ್ ಕೆ.ಸುರೇಶ್, ಗಿರೀಶ್, ಮಹಮದ್ ಸಲಿಂ, ಶಿವರುದ್ರಪ್ಪ ಮೇಟಿ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು. ವರದಿ: ಟೈಗರ್ ನಾಗ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕಾರವಾರ: ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಬೆಳಕೆಯ ಕಟಗೇರಿಯಲ್ಲಿ ಯುವತಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದೀಕ್ಷಾ ನಾಯ್ಕ(22) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ದೀಕ್ಷಾ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದು, ಎಂದಿನಂತೆ ಬೆಳಗ್ಗೆ ಕಾಲೇಜಿಗೆ ಹೋಗಿ ಮನೆಗೆ ಬಂದಿದ್ದಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗಳು ಕಾಣದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದು, ಕೊನೆಗೆ ಅನುಮಾನಗೊಂಡು ಬಾವಿಯಲ್ಲಿ ನೋಡಿದಾಗ ಮೃತದೇಹವು ಪತ್ತೆಯಾಗಿದೆ. ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ರಾಯಚೂರು: ರಾಯಚೂರಿನ ಸಿಂಧನೂರು ತಾಲೂಕಿನ ದಿದ್ದಿಗಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಗಂಡ-ಹೆಂಡತಿ ನಡುವೆ ನಡೆದ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ. ಸಿಟ್ಟಿನಿಂದ ಪತ್ನಿಯನ್ನು ಕೊಂದು ಪತಿಯೂ ನೇಣಿಗೆ ಶರಣಾಗಿದ್ದಾನೆ. ಕವಿತಾ(26) ಕೊಲೆಯಾದವಳು. ಭೀಮಣ್ಣ(28) ಎಂಬಾತ ಪತ್ನಿಯನ್ನು ಕೊಂದು ನೇಣಿಗೆ ಶರಣಾದ ಆರೋಪಿ ಪತಿಯಾಗಿದ್ದಾನೆ. ಕವಿತಾ ಹಾಗೂ ಭೀಮಣ್ಣ ಇಬ್ಬರಿಗೂ ಮದುವೆಯಾಗಿ ಒಂದು ವರ್ಷ ಆಗಿತ್ತು. ಈ ದಂಪತಿ ಮೊದಲು ಖುಷಿಯಾಗಿಯೇ ಇದ್ದರು. ಆದರೆ ಇತ್ತೀಚೆಗೆ ಭೀಮಣ್ಣನಿಗೆ ಕವಿತಾಳ ಮೇಲೆ ಅನುಮಾನದ ಭೂತ ಅಂಟಿಕೊಂಡಿತ್ತು. ಆಕೆಯ ಶೀಲವನ್ನು ಶಂಕಿಸಿ ಪತ್ನಿ ಜತೆ ಜಗಳ ಮಾಡುತ್ತಿದ್ದ. ಇದೇ ವಿಚಾರಕ್ಕೆ ಗುರುವಾರ ಗಲಾಟೆ ನಡೆದಿದ್ದು, ಕುಪಿತಗೊಂಡು ಭೀಮಣ್ಣನ ಕಲ್ಲಿನಿಂದ ಕವಿತಾಳನ್ನು ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಆಕೆ ಮೃತಪಟ್ಟ ಕೂಡಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಳಗಾನೂರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಲಂಡನ್:‌ ಭಾರತ ಮೂಲದ ಇಬ್ಬರು ವಿದ್ಯಾರ್ಥಿಗಳು ಟ್ರಕ್ಕಿಂಗ್‌ ಹೋದ ಸಂದರ್ಭ ಜಲಪಾತವೊಂದರಲ್ಲಿ ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಸ್ಕಾಟ್ಲೆಂಡ್‌ ನಲ್ಲಿ ನಡೆದಿದೆ. ಜಿತೇಂದ್ರನಾಥ್ ಜಿತು ಕರುತುರಿ (26) ಮತ್ತು ಚಾನ್ಹಕ್ಯ ಬೋಲಿಸೆಟ್ಟಿ (22) ಮೃತ ವಿದ್ಯಾರ್ಥಿಗಳಾಗಿದ್ದಾರೆ. ವಿದ್ಯಾರ್ಥಿಗಳು ಸ್ಕಾಟ್ಲೆಂಡ್ ‌ನ ಡುಂಡಿ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದು, ಡೇಟಾ ಸೈನ್ಸ್ ಮತ್ತು ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿಗಳನ್ನು ಪಡೆಯುತ್ತಿದ್ದರು. ಈ ವಿದ್ಯಾರ್ಥಿಗಳು ಜಲಪಾತದ ಬಳಿ ಸ್ನೇಹಿತರೊಂದಿಗೆ ಟ್ರಕ್ಕಿಂಗ್‌ ಹೋಗಿದ್ದರು. ಈ ವೇಳೆ ಸೆಲ್ಫಿ ತೆಗೆಯಲು ಮುಂದಾದಾಗ ಇಬ್ಬರು ವಿದ್ಯಾರ್ಥಿಗಳು ಜಲಪಾತದಲ್ಲಿ ಜಾರಿ ಬಿದ್ದು, ದುರಂತ ಅಂತ್ಯ ಕಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಹೇಳಿಕೆ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿವಾದ ಸೃಷ್ಟಿಸಿದ್ದರು. ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ನೋಟೀಸ್ ಜಾರಿ ಮಾಡಿದ್ದರು. ಮಹಿಳೆಯರ ಘನತೆ ಹಾಗೂ ಚಾರಿತ್ರ್ಯಕ್ಕೆ ಧಕ್ಕೆಯುಂಟುಮಾಡುವಂತಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ 7 ದಿನಗಳ ಒಳಗಾಗಿ ಮಹಿಳಾ ಆಯೋಗದ ಮುಂದೆ ಖುದ್ದು ಹಾಜರಾಗಿ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟೀಕರಣ, ವಿವರಣೆ ನೀಡುವಂತೆ ಸೂಚಿಸಿದ್ದರು. ಇದನ್ನು ಪ್ರಶ್ನಿಸಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಮಹಿಳಾ ಆಯೋಗ ನೀಡಿದ್ದ ನೋಟೀಸ್ ಗೆ ತಡೆಯಾಜ್ಞೆ ನೀಡಿದೆ. ಅಲ್ಲದೇ ದೂರುಗಳಿಲ್ಲದೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಮಹಿಳಾ ಆಯೋಗದ ಅಧ್ಯಕ್ಷೆ ಸ್ವತಃ ಸ್ಪಷ್ಟೀಕರಣ ಕೇಳಿ ನೋಟೀಸ್…

Read More

ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಈಗಾಗಲೇ ಮತದಾರರ ಪಟ್ಟಿಯನ್ನು ಸಿದ್ಧಗೊಳಿಸಿದೆ. 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾನ ಮಾಡಲು ಅರ್ಹರಾಗಿದ್ದು, ನೀವು ಮತದಾನ ಮಾಡಬೇಕೆಂದರೆ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಕಡ್ಡಾಯ. ಮತದಾನ ಮಾಡುವುದು ನಮ್ಮ ಹಕ್ಕು ಮಾತ್ರವಲ್ಲದೆ ನಮ್ಮ ಜವಾಬ್ದಾರಿಯು ಹೌದು. ಚುನಾವಣಾ ಆಯೋಗವು ಕ್ಷೇತ್ರವಾರು ಮತದಾರರ ಪಟ್ಟಿಯನ್ನು ಸಿದ್ಧಪಡಿಸುತ್ತದೆ, ಇದರಲ್ಲಿ ಮತ ಚಲಾಯಿಸಲು ಅರ್ಹರಾಗಿರುವ ಎಲ್ಲಾ ವ್ಯಕ್ತಿಗಳನ್ನು ಪಟ್ಟಿಮಾಡಲಾಗಿರುತ್ತದೆ. ಮತದಾರರು ತಮ್ಮ ವಿವರಗಳ ಪರಿಶೀಲನೆಯನ್ನು ಖಚಿತಪಡಿಸಲು ಮತ್ತು ಅವರು ಯಾವ ಚುನಾವಣಾ ಜಿಲ್ಲೆ ಅಥವಾ ಮತಗಟ್ಟೆಗೆ ನಿಯೋಜಿಸಲಾಗಿದೆ ಎಂಬುದನ್ನು ಪರಿಶೀಲಿಸಲು ಮತದಾರರ ಪಟ್ಟಿ ಡೌನ್‌ ಲೋಡ್ ಮಾಡಿಕೊಳ್ಳಬಹುದು. ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ತಿಳಿಯಲು ಈ ಕೆಳಗಿನ ಹಂತಗಳನ್ನು ಅನುಸರಿಸಿ: ಮೊದಲ ಹಂತದಲ್ಲಿ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ತಿಳಿಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/Dist_List.aspx  ಎರಡನೇ ಹಂತದಲ್ಲಿ ನೀವು…

Read More

ತುಮಕೂರು: ವಿರಾಜಪೇಟೆ ಭಾಗದಲ್ಲಿ ಮೂರು ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಗಾಯಗೊಂಡವರನ್ನು ಮೈಸೂರು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.  ಕಾಂಗ್ರೆಸ್ ಗೆ ಈ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಮಧುಗಿರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈ ಮೂಲಕ ಈ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದರು. ರಾಮನ ಹೆಸರನ್ನು ಹೇಳುವವರ ಮೇಲೆ ಹಲ್ಲೆ ಮಾಡುವುದು, ತೆಂಗಿನ ತೋಟಕ್ಕೆ ಬೆಂಕಿ ಇಡುವುದು ಇಂತಹ ಹಳೆ ಚಾಳಿ ಕೆಲಸಗಳನ್ನು ಕಾಂಗ್ರೆಸ್ ಪ್ರಾರಂಭ ಮಾಡಿದೆ ಎಂದು ದೂರಿದರು. ಜಾಹೀರಾತುಗಳಲ್ಲಿ ಕಾಂಗ್ರೆಸ್ ಪಕ್ಷವು ಕೀಳು ಅಭಿರುಚಿಯೊಂದಿಗೆ ಚೊಂಬಿನ ಚಿತ್ರಗಳನ್ನು ತೋರಿಸುತ್ತಿದೆ. ಆದರೆ ಅವರು ರಾಜ್ಯವನ್ನು ಲೂಟಿ ಮಾಡುತ್ತಿರುವುದನ್ನು ಕೂಡ ತೋರಿಸಲಿ ಎಂದು ಟೀಕಿಸಿದರು. ಕರ್ನಾಟಕದಲ್ಲಿ ರಾಜ್ಯದ ಜನರು ಕಟ್ಟಿರುವ ತೆರಿಗೆ ಹಣವನ್ನು ಕಾಂಗ್ರೆಸ್ ನವರು ಲೂಟಿ ಮಾಡುತ್ತಿದ್ದಾರೆ ಅಂತಹ ವ್ಯಂಗ್ಯ ಚಿತ್ರವನ್ನು ತೋರಿಸಲಿ ಎಂದು ಹೇಳಿದರು.…

Read More