Author: admin

ಕೊರಟಗೆರೆ: ಪ್ರಧಾನಿ ನರೇಂದ್ರ ಮೋದಿಯವರು ರೈತರ ಸಾಲ ಮನ್ನಾ ಮಾಡದೆ, ಅದಾನಿ, ಅಂಬಾನಿಯವರಂತಹ ಶ್ರೀಮಂತರ ಸಾಲ ಮನ್ನಾ ಮಾಡ್ತಾರೆ. ಈ ದೇಶದ ರೈತರು ಮೋದಿ ಅವರ ಕಣ್ಣಿಗೆ ಕಾಣಲ್ಲ ಎಂದು ಬಿಜೆಪಿ ಪಕ್ಷದ ವಿರುದ್ಧ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಪುರವರ, ವಡ್ಡಗೆರೆ, ಹೊಳವನಹಳ್ಳಿ, ಕೋಳಾಲ, ತೋವಿನಕೆರೆ ಸೇರಿದಂತೆ ಕೋರ ಹೋಬಳಿಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುದ್ದಹನುಮೇಗೌಡರ ಪರ ಪ್ರಚಾರ ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮಣ್ಣ ನರೇಂದ್ರ ಮೋದಿಯವರ ಹೆಸರು ಹೇಳಿಕೊಂಡು ಮತ ಕೇಳುತ್ತಿದ್ದಾರೆ. ಸರಿಯಾದ ಕ್ಷೇತ್ರ ಸಿಗದೇ ರಾಜ್ಯಾದ್ಯಂತ ಓಡಾಡುತ್ತಿದ್ದಾರೆ. ಆದರೆ ಮುದ್ದಹನುಮೇಗೌಡರು ಇಲ್ಲೇ ಹುಟ್ಟಿ ಬೆಳೆದು ನ್ಯಾಯಾಧೀಶರಾಗಿ ಕೆಲಸ ಮಾಡಿ, ನಿಮ್ಮಗಳ ಸೇವೆ ಮಾಡುತ್ತಿದ್ದಾರೆ. ಈ ಹಿಂದೆ ಮುದ್ದ ಹನುಮೇಗೌಡರಿಗೆ 35,000 ಮತಗಳ ಅಂತರದಿಂದ ಗೆಲ್ಲಿಸಿದ್ರಿ. ತುಮಕೂರು ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಮುದ್ದಹನುಮೇಗೌಡರನ್ನು ಮತ್ತೊಮ್ಮೆ ಗೆಲ್ಲಿಸಬೇಕಾಗಿದೆ. ಲೋಕಸಭೆಯಲ್ಲಿ 5 ಬಾರಿ ಗೆದ್ದಂತಹ ಜಿಎಸ್ ಬಸವರಾಜು…

Read More

ಕೋಲಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೋಲಾರ ಜಿಲ್ಲೆಯ ಅಂಗನವಾಡಿಗಳಲ್ಲಿ ಖಾಲಿ ಇರುವ ಬರೋಬ್ಬರಿ 513 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಇದು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಾಗಿದ್ದು, ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಏಪ್ರಿಲ್‌ 19 ಎಂದು ತಿಳಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ- 120, ಅಂಗನವಾಡಿ ಸಹಾಯಕಿ- 393 ಹುದ್ದೆಗಳಿವೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಪಿಯುಸಿ ತೇರ್ಗಡೆಯಾಗಿರಬೇಕು. ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಧ್ಯಯನ ಮಾಡಿರಬೇಕು. ಜತೆಗೆ ಡಿ.ಎಸ್‌.ಇ.ಆರ್‌.ಟಿ.ಯಿಂದ ಇ.ಸಿ.ಸಿ.ಇ. ಡಿಪ್ಲೋಮಾ ಕೋರ್ಸ್‌, ಜೆ.ಒ.ಸಿ. ಕೋರ್ಸ್‌, ಎನ್‌.ಟಿ.ಟಿ. ಕೋರ್ಸ್‌ ಮತ್ತು ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದ ಡಿಪ್ಲೋಮಾ ನ್ಯೂಟ್ರಿಶಿಯನ್‌, ಹೋಂ ಸೈನ್ಸ್‌ ಸರ್ಟಿಫಿಕೆಟ್‌ ಕೋರ್ಸ್‌, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿರುವವರಿಗೆ ಆದ್ಯತೆ ಲಭಿಸಲಿದೆ. ಅಂಗನವಾಡಿ…

Read More

ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆವಿ ಗೌತಮ್ ಪರ ಪ್ರಚಾರ ನಡೆಸಿದ ರಾಹುಲ್ ಗಾಂಧಿ, ಸಂವಿಧಾನಕ್ಕೆ ಧಕ್ಕೆ ಉಂಟಾಗಿದ್ದು, ಇಂಡಿಯಾ ಮೈತ್ರಿಕೂಟವನ್ನು ಅಧಿಕಾರಕ್ಕೆ ತರದಿದ್ದರೆ ಜನತೆ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದಿದ್ದಾರೆ.  ಜತೆಗೆ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಷ್ಟ್ರವ್ಯಾಪಿ ಜಾತಿ ಗಣತಿ ನಡೆಸಲಾಗುವುದು. ಇದರಿಂದ ಅಗತ್ಯವಿರುವವರಿಗೆ ಪ್ರಯೋಜನವಾಗಲಿದೆ ಎಂದು ಭರವಸೆ ನೀಡಿದ್ದಾರೆ. ತಮ್ಮ ಅಜ್ಜಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರೊಂದಿಗೆ ಕೋಲಾರದ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್‌ ಗೆ (ಬಿಜಿಎಂಎಲ್) ಭೇಟಿ ನೀಡಿದ್ದನ್ನು ಅವರು ನೆನಪಿಸಿಕೊಂಡಿದ್ದಾರೆ. ದೇಶದಲ್ಲಿ ಪಕ್ಷಪಾತ ತಾಂಡವವಾಡುತ್ತಿದ್ದು, ಎನ್‌ಡಿಎ ಸರ್ಕಾರದಲ್ಲಿ ಕೇವಲ 20 ಉದ್ಯಮಿಗಳು 70 ಕೋಟಿ ಜನರ ಸಂಪತ್ತನ್ನು ಸಂಗ್ರಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೋದಿ ಸರಕಾರ ಆಯ್ದ ಉದ್ಯಮಿಗಳ 16 ಲಕ್ಷ ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಿದೆ. ಬೆರಳೆಣಿಕೆಯಷ್ಟು ಬಂಡವಾಳಶಾಹಿಗಳಿಗೆ ಸಹಾಯ ಮಾಡಲು ಪ್ರಧಾನಿ ನರೇಂದ್ರ ಮೋದಿ ಯಾವುದೇ ಹಂತಕ್ಕೂ ಹೋಗುತ್ತಾರೆ ಎಂದು ಅವರು ಟೀಕಿಸಿದ್ದಾರೆ. ಪ್ರಭಾವಿ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡಲು ಇಡಿ,…

Read More

ಬೆಂಗಳೂರು: 9 ವರ್ಷದ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ, ಅವರ ಪೋಷಕರಿಂದ ತಮ್ಮ ಹೆಸರಲ್ಲಿ ಆಸ್ತಿ ಬರೆಸಿಕೊಂಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧ ಆರೋಪ ಹೊರಿಸಿದ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ವಿರುದ್ಧ ಸಂಸದ ಡಿ.ಕೆ. ಸುರೇಶ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಡಿ.ಕೆ. ಸುರೇಶ್, ಅಪಹರಿಸಿ ಆಸ್ತಿ ಬರೆಸುವ ಪರಿಸ್ಥಿತಿ ನಮಗೆ ಬಂದಿಲ್ಲ. ಕ್ಷುಲ್ಲಕ ರಾಜಕಾರಣದಲ್ಲಿ ದೇವೇಗೌಡರು ಹೆಸರುವಾಸಿ. ಅವರು ಹಿರಿಯರು, ಹಾಗಾಗಿ ಹೆಚ್ಚು ಮಾತನಾಡಲ್ಲ. ಅವರ ಆರೋಪಕ್ಕೆ ಮುಂದಿನ ದಿನಗಳಲ್ಲಿ ಉತ್ತರಿಸುತ್ತೇವೆ ಎಂದು ಹೇಳಿದ್ದಾರೆ. ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸುತ್ತಾ ಹಳೆ ವಿಚಾರವೊಂದನ್ನು ಬಯಲಿಗೆ ತಂದ ಹೆಚ್‌ ಡಿಡಿ, ಅಮೆರಿಕದಲ್ಲಿ ಹಣ ಸಂಪಾದನೆ ಮಾಡಿ ಸ್ವದೇಶಕ್ಕೆ ವಾಪಸಾದ ವ್ಯಕ್ತಿಯೊಬ್ಬರ ಜಮೀನನ್ನು ಕಬಳಿಸಲು ಡಿ.ಕೆ. ಶಿವಕುಮಾರ್‌ ಅವರ 9 ವರ್ಷದ ಮಗಳನ್ನು ಅಪಹರಿಸಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಸ್ಯಾಂಡಲ್‌ ವುಡ್ ‌ನ ನಟ-ನಿರ್ದೇಶಕ ನಿರೂಪಕ ಮಾಸ್ಟರ್‌ ಆನಂದ್‌ ಅವರ ಮಗಳ ಮೊದಲ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇದು ಮಕ್ಕಳ ಸಿನಿಮಾ ಅಲ್ಲ. ಹಾರರ್‌ ಕಥಾಹಂದರವಿರುವ ಸಿನಿಮಾ. ಈ ಸಿನಿಮಾದಲ್ಲಿ ಹೊಸಬರು ಸೇರಿದಂತೆ ಖ್ಯಾತ ನಟಿ ರಚನಾ ಇಂದರ್‌ ಅವರು ಇದ್ದಾರೆ. ಯುವ ನಟ ಗೌತಮ್‌ ಆರ್‌ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹಾರರ್‌ ಥ್ರಿಲ್ಲರ್‌ ಕಥಾಹಂದರ ಹೊಂದಿರುವ ನಾಲ್ಕನೇ ಆಯಾಮ ಸಿನಿಮಾಗೆ ಅರ್ಜುನ್‌ ಜನ್ಯ ಸಂಗೀತ ನೀಡಿದ್ದಾರೆ. ಅರುಣ್‌ ಛಾಯಾಗ್ರಹಣ, ಉಗ್ರಂ ಶ್ರೀಕಾಂತ್‌ ಸಂಕಲನವಿದೆ. ಟ್ರೇಲರ್‌ ಹಾಡುಗಳ ಮೂಲಕ ಭಾರೀ ನಿರೀಕ್ಷೆಯನ್ನು ಮೂಡಿಸಿರುವ ಈ ಸಿನಿಮಾ ರಾಜ್ಯಾದ್ಯಂತ ಎ.19 ರಂದು ಬಿಡುಗಡೆಯಾಗಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮಂಡ್ಯ: ಐಸ್ ಕ್ರೀಂ ತಿಂದ ಬಳಿಕ ಅವಳಿ ಕಂದಮ್ಮಗಳು ಸಾವನ್ನಪ್ಪಿದ ದಾರುಣ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಒಂದೂವರೆ ವರ್ಷದ ತ್ರಿಶುಲ್ ಹಾಗೂ ತ್ರಿಶಾ ಸಾವನ್ನಪ್ಪಿದ ಮಕ್ಕಳಾಗಿದ್ದಾರೆ. ಮಧ್ಯಾಹ್ನ ಹೊತ್ತಿನಲ್ಲಿ ತಳ್ಳುವ ಗಾಡಿಯಲ್ಲಿ ಐಸ್ ಕ್ರೀಂ ತೆಗೆದುಕೊಂಡು ತಾಯಿ ಪೂಜಾ ಸೇರಿದಂತೆ ಇಬ್ಬರು ಮಕ್ಕಳು ಕೂಡ ಸೇವಿಸಿದ್ದಾರೆ. ಆ ನಂತರ ಮಕ್ಕಳು ಅಸ್ವಸ್ಥವಾಗಿದ್ದರು ಎಂದು ಆರೋಪಿಸಲಾಗಿದೆ. ಇನ್ನು ಗ್ರಾಮದಲ್ಲಿ ಬೇರೆ ಮಕ್ಕಳು ಕೂಡ ಅದೇ ಐಸ್ ಕ್ರೀಂ ತಿಂದಿದ್ದರು. ಆದರೆ, ಬೇರೆ ಯಾರಿಗೂ ತೊಂದರೆ ಆಗಿಲ್ಲ. ಕಂದಮ್ಮಗಳ ಸಾವಿಗೆ ಇದುವರೆಗೂ ನಿಖರ ಕಾರಣ ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿದು ಬರಬೇಕಿದೆ. ಸದ್ಯ ಮಿಮ್ಸ್ ಆಸ್ಪತ್ರೆಗೆ ಮೃತದೇಹಗಳನ್ನು ರವಾನೆ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ರಾಮ ನವಮಿಯಂದು ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 45 ಜನರು ಅಸ್ವಸ್ಥರಾದ ಘಟನೆ ನಡೆದಿದೆ. ನಿನ್ನೆ(ಏ.17) ರಾಮ ನವಮಿಯಂದು ಸುಬ್ರಹ್ಮಣ್ಯ ದೇಗುಲದಲ್ಲಿ ಮಜ್ಜಿಗೆ, ಪಾನಕವನ್ನ ಗ್ರಾಮಸ್ಥರು ಸೇವಿಸಿದ್ದರು. ಬಳಿಕ ಮಧ್ಯರಾತ್ರಿಯಿಂದ ವಾಂತಿ-ಭೇದಿ ಶುರುವಾಗಿದ್ದು, ಬೆಳಗ್ಗೆ ಎಡೆಯೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು. ಆದರೆ, ಆರೋಗ್ಯ ಸುಧಾರಿಸದ ಹಿನ್ನೆಲೆ ಕುಣಿಗಲ್ ತಾಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ದೃಷ್ಟಿ ಸುಧಾರಿಸಲು ಸಹಾಯ ಮಾಡುತ್ತೆ ಮಾವಿನ ಕಾಯಿ ಮಾವಿನ ಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಹಿಮೋಫಿಲಿಯಾ ಮತ್ತು ರಕ್ತಹೀನತೆಯ ಅಪಾಯವನ್ನು ಕಡಿಮೆ ಮಾಡುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ವೈದ್ಯರು ಹೇಳುತ್ತಾರೆ. ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ. ಮಾವಿನ ಕಾಯಿ ಕ್ಯಾರೊಟಿನಾಯ್ಡ್ಗಳಲ್ಲಿ ಸಮೃದ್ಧವಾಗಿವೆ, ಇದು ದೃಷ್ಟಿ ಸುಧಾರಿಸಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಮಾವಿನ ಕಾಯಿ ತಿನ್ನುವುದರಿಂದ ನಿರ್ಜಲೀಕರಣವನ್ನು ತಡೆಯಬಹುದು ಎನ್ನುತ್ತಾರೆ ವೈದ್ಯರು. ಈ ಹಣ್ಣು ಸೇವನೆ ಮಾಡಿದರೆ ತೂಕ ಕಡಿಮೆ ಮಾಡಿಕೊಳ್ಳಬಹುದು! ಸಪೋಟಾದಲ್ಲಿರುವ ಕ್ಯಾಲ್ಸಿಯಂ ಮತ್ತು ಫಾಸ್ಪರಸ್ ಮೂಳೆಗಳನ್ನು ಬಲಪಡಿಸುತ್ತದೆ. ಈ ಹಣ್ಣುಗಳು ನಮ್ಮ ಜೀರ್ಣಕ್ರಿಯೆಯನ್ನು ಸುಲಭಗೊಳಿಸಲು ಸಹಾಯ ಮಾಡುತ್ತದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಇರುವವರು ವೈದ್ಯರ ಸಲಹೆಯಂತೆ ಆಹಾರದಲ್ಲಿ ಸಪೋಟಾ ಹಣ್ಣನ್ನು ಸೇರಿಸಿಕೊಳ್ಳಬಹುದು. ಇತರ ಹಣ್ಣುಗಳಿಗೆ ಹೋಲಿಸಿದರೆ ಸಪೋಟಾ ಹಣ್ಣಿನಲ್ಲಿ ಕ್ಯಾಲೋರಿ ಕಡಿಮೆ. ಇದರೊಂದಿಗೆ ನೀವು ರುಚಿಯನ್ನು ಆನಂದಿಸುತ್ತಾ ಸುಲಭವಾಗಿ ತೂಕವನ್ನು ಕಳೆದುಕೊಳ್ಳಬಹುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಹಾಸನ:  ಸಾಕಷ್ಟು ಜನರ ಮೇಲೆ ದಾಳಿ ಮಾಡಿದ್ದ ನರ ಹಂತಕ ಕಾಡಾನೆ ಕರಡಿ ಕಡೆಗೂ ಸೆರೆ ಆಗಿದೆ. ಬೇಲೂರು ತಾಲ್ಲೂಕಿನ ವಾಟೇಹಳ್ಳಿಯ ಐಬಿಸಿ ಕಾಫಿ ತೋಟದಲ್ಲಿ ಅಭಿಮನ್ಯು ನೇತೃತ್ವದಲ್ಲಿ ಅರಣ್ಯ ಇಲಾಖೆ ತಂಡ ಹಂತಕ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅಭಿಮನ್ಯು, ಪ್ರಶಾಂತ, ಸುಗ್ರೀವ, ಕರ್ನಾಟಕ ಭೀಮ, ಅಶ್ವತ್ಥಾಮ, ಮಹೇಂದ್ರ ಸೇರಿ ಎಂಟು ಆನೆಗಳಿಂದ ಭರ್ಜರಿ ಕಾರ್ಯಾಚರಣೆ ಮೂಲಕ ಕಾಡಾನೆ ಕರಡಿಯನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಬೇಲೂರು ತಾಲ್ಲೂಕಿನ ಮತ್ತಾವರ ಬಳಿ, ಜನವರಿ 4 ರಂದು ಕಾರ್ಮಿಕ ವಸಂತ್ ​ನನ್ನು ಕರಡಿ ಕಾಡಾನೆ ದಾಳಿ ಮಾಡಿ ಕೊಂದಿದ್ದು, ಬಳಿಕ ಬೇಲೂರು ಸಕಲೇಶಪುರ ಭಾಗದಲ್ಲಿ ಹಲವರ ಮೇಲೆ‌ ದಾಳಿ‌ ಮಾಡಿ ಈ ಒಂಟಿಸಲಗ ಆತಂಕ ಸೃಷ್ಟಿ ಮಾಡಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬಾಗಲಕೋಟೆ: ಅಣ್ಣನೊಬ್ಬ, ಮಲಗಿದ್ದ ತಮ್ಮನ ಮುಖಕ್ಕೆ ಕೊಡಲಿಯಿಂದ ಹೊಡೆದು ಕೊಲೆ‌ ಮಾಡಿರುವ ಘಟನೆ ಜಿಲ್ಲೆಯ ಮುಧೋಳ್​ ನಗರದ ಗಾಂಧಿ ಚೌಕ್​ ನಲ್ಲಿ ನಡೆದಿದೆ. ಸುನಿಲ್ ರಜಪೂತ(24) ಮೃತ ದುರ್ದೈವಿಯಾಗಿದ್ದಾರೆ. ಅಣ್ಣ ಸುಖೇನ್ ಸಿಂಗ್ ರಜಪೂತ್ ಆರೋಪಿಯಾಗಿದ್ದಾರೆ. ಆರೋಪಿ ಅಣ್ಣ ಸುಖೇನ್ ಸಿಂಗ್ ರಜಪೂತ್​ ತಮ್ಮ ಸುನಿಲ್ ರಾತ್ರಿ ನಿದ್ದೆಯಲ್ಲಿದ್ದಾಗ ಕೊಲೆ ಮಾಡಿದ್ದಾನೆ. ಬಳಿಕ ಅಲ್ಲಿಂದ ಸುಖೇನ್ ಸಿಂಗ್, ಸ್ಮಶಾನಕ್ಕೆ ಹೋಗಿ ಪಕ್ಕದಲ್ಲಿನ ಘಟಪ್ರಭಾ ನದಿಯಲ್ಲಿ ಸ್ನಾನ ಮಾಡಿದ್ದಾನೆ. ಅಷ್ಟು ಮಾತ್ರ ವಲ್ಲದೆ ಹಣೆಗೆ ಭಸ್ಮ ಹಾಕಿಕೊಂಡು ಚೇಷ್ಟೆ ಮಾಡಿದ್ದಾನೆ. ಅಷ್ಟೇ ಅಲ್ಲ, ಅಲ್ಲಿನ ಕೆಲಸಗಾರರಿಗೆ ನನ್ನ ತಮ್ಮನ ಮೃತದೇಹ ಬರುತ್ತದೆ ಎಂದು ಹೇಳಿದ್ದಾನೆ. ಸುಖೇನ್ ಸಿಂಗ್ ರಜಪೂತ್​ ಹಾಗೂ ಸುನಿಲ್ ಇಬ್ಬರು ಅಣ್ಣ-ತಮ್ಮಂದಿರು, ಸುಖೇನ್ ಕಳೆದ ಐದಾರು ವರ್ಷದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಮನೆಯಲ್ಲಿ ಕೆಲಸ ಮಾಡದೆ ಹುಚ್ಚುನಂತೆ ವರ್ತನೆ ತೋರುತ್ತಿದ್ದ‌. ತಂದೆ-ತಾಯಿ ಆತನಿಗೆ ಬೈದು ಬುದ್ದಿ ಹೇಳುತ್ತಿದ್ದರು. ಇನ್ನು ತಂದೆ-ತಾಯಿ, ಅಜ್ಜಿ ಎಲ್ಲರೂ ತೊಟ್ಟಿಲು ಕಾರ್ಯಕ್ಕೆ ಎಂದು ಎಪ್ರಿಲ್ 15 ರಂದು ರಾಯಚೂರಿಗೆ…

Read More