Author: admin

ಭದ್ರತಾಪಡೆ ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ ನಕ್ಸಲ್ ನಾಯಕ ಶಂಕರ್ ರಾವ್ ಸೇರಿದಂತೆ ಹಲವು ನಕ್ಸಲರ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಘಟನೆ ಛತ್ತೀಸ್ ‍ಗಢದ ಕಂಕೇರ್ ಜಿಲ್ಲೆಯಲ್ಲಿ ನಡೆದಿದೆ. ಮಾದ್ ಪ್ರದೇಶದಲ್ಲಿ ಭದ್ರತಾಪಡೆ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಮೂವರು ಯೋಧರು ಗಾಯಗೊಂಡಿದ್ದಾರೆ. ಇದುವರೆಗೆ 18 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಇನ್ನೂ ಎನ್‍ಕೌಂಟರ್ ಕಾರ್ಯಾಚರಣೆ ನಡೆಯುತ್ತಿದೆ ಎನ್ನಲಾಗಿದ್ದು. ಸ್ಥಳದಲ್ಲಿ ಹಲವು ಸ್ಫೋಟಕ ವಸ್ತುಗಳು ಸೇರಿದಂತೆ ಎಕೆ 47 ಬಂದೂಕನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದಿನಿಂದ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ ಸುಮಲತಾ ಅಂಬರೀಷ್ ಪರ ಪ್ರಚಾರ ಮಾಡಿ ಗೆಲುವಿಗೆ ಕಾರಣವಾಗಿದ್ದ ನಟ ದರ್ಶನ್ ತಾನೆಂದಿಗೂ ಸುಮಲತಾ ಪರ ಎಂದಿದ್ದರು. ಅವರ ಪ್ರತಿಯೊಂದು ನಡೆಯನ್ನೂ ಬೆಂಬಲಿಸಿತ್ತು ಬೆಂಗಾವಲಾಗಿ ನಿಂತಿದ್ದರು. ಅವರು ಇತ್ತೀಚೆಗೆ ಬಿಜೆಪಿ ಸೇರಿದಾಗಲು ಅವರ ನಿರ್ಧಾರವೇ ನನ್ನ ನಿರ್ಧಾರ ಎಂದಿದ್ದರು. ಹೀಗಾಗಿ ಮಂಡ್ಯ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರ ದರ್ಶನ್ ಪ್ರಚಾರಕ್ಕೆ ಬರುತ್ತಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಅಚ್ಚರಿ ಎಂಬಂತೆ ಅವರು ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರವಾಗಿ ಪ್ರಚಾರ ನಡೆಸಲಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಸುಮಲತಾ ಹಾಗೂ ಅವರ ಆಪ್ತ ಇಂಡವಾಳು ಸಚ್ಚಿದಾನಂದ ಬಿಜೆಪಿಯಲ್ಲಿದ್ದರೂ ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ್ ಪ್ರಚಾರ ನಡೆಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಒಟ್ಟಿನಲ್ಲಿ ಇದು ಸುಮಲತಾ ಅಂಬರೀಷ್ ಗೆ ತಿಳಿದು ಮಾಡುತ್ತಿರುವ ಕೆಲಸವೋ ಎಂದು…

Read More

ಈ ಸಲದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಸದ್ಯ ರಾಜ್ಯ ಸರ್ಕಾರ ನೀಡುತ್ತಿರುವ ಗೃಹಲಕ್ಷ್ಮೀ ದುಡ್ಡಿನ 24 ಸಾವಿರಕ್ಕೆ 1 ಲಕ್ಷ ರೂ. ಸೇರಿಸಿ 1 ಲಕ್ಷದ 24 ಸಾವಿರ ರೂಪಾಯಿ ನೀಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಬುಧವಾರ ಭರವಸೆ ನೀಡಿದ್ದಾರೆ. ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾದ ಬಳಿಕ, ಮೊದಲ ಬಾರಿಗೆ ರಾಜ್ಯಕ್ಕೆ ಮತ ಬೇಟೆಗೆಂದು ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, ಮಂಡ್ಯ ಹಾಗೂ ಕೋಲಾರ ಜಿಲ್ಲೆಯ ಕಾಂಗ್ರೆಸ್ ಪ್ರಜಾಧ್ವನಿ- 0.2 ಸಮಾವೇಶದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು ರಾಜ್ಯದ 24 ಸಾವಿರದ ಜೊತೆಗೆ ಕೇಂದ್ರದಿಂದ ವರ್ಷಕ್ಕೆ 1.24 ಲಕ್ಷ ರೂ. ಹಣವನ್ನು ಮಹಿಳೆಯರ ಖಾತೆಗೆ ಜಮೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಮಹಿಳೆಯರಿಗೆ ಭರ್ಜರಿ ಘೋಷಣೆ ಮಾಡಿದ ರಾಹುಲ್ ಅವರು ರೈತರಿಗೂ ಗುಡ್ ನ್ಯೂಸ್ ಕೊಟ್ಟಿದ್ದು ರೈತರ ಸಾಲಮನ್ನಾ, ಕನಿಷ್ಠ ಬೆಂಬಲ ಬೆಲೆಯ ಗ್ಯಾರಂಟಿಯನ್ನು ಕೂಡ ನೀಡಿದ್ದಾರೆ. ರಾಹುಲ್ ಗಾಂಧಿ…

Read More

ಗದಗ: ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಛಬ್ಬಿ ಗ್ರಾಮದ ಬಳಿ‌ ಸ್ಟೇರಿಂಗ್ ಜಾಮ್ ಆಗಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಒಂದು ಪಲ್ಟಿಯಾದ ಘಟನೆ ನಡೆದಿದೆ. ಇದರ ಪರಿಣಾಮ ಬಸ್ ನಲ್ಲಿದ್ದ ಸುಮಾರು 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗಳಾಗಿದೆ. ಬಸ್ ಪಲ್ಟಿಯಾಗುತ್ತಿದ್ದಂತೆ ಪ್ರಯಾಣಿಕರ ಕೂಗಾಟ, ಚೀರಾಟ ಕೇಳಿ ಗ್ರಾಮಸ್ಥರು ಓಡಿ ಬಂದಿದ್ದು, ಬಸ್‌ ನ ಮುಂದಿನ ಗ್ಲಾಸ್ ಒಡೆದು ಪ್ರಯಾಣಿಕರನ್ನುರಕ್ಷಿಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಸುಸ್ಥಿತಿಯಲ್ಲಿಲ್ಲದ ಬಸ್ ಗಳು ರಸ್ತೆಗೆ ಇಳಿಸಿದ್ದೇ ದುರಂತಕ್ಕೆ ಕಾರಣ ಅಂತ ಗ್ರಾಮಸ್ಥರು ಆರೋಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಬಿಜೆಪಿ ಕಾಂಗ್ರೆಸ್‌ ನಾಯಕರನ್ನೆಲ್ಲಾ ಹೆದರಿಸಿ ಬೆದರಿಸಿ ಚುನಾವಣೆ ಗೆಲ್ಲುವ ತಂತ್ರ ಹೂಡಿದೆ, ಅವರ ಪಕ್ಷದವರೆಲ್ಲ ಏನು ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ? ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಪತ್ರಿಕಾಭವನದಲ್ಲಿ ಸುದ್ದಿಘೋಷ್ಟಿ ನಡೆಸಿ ಮಾತನಾಡಿದ ಅವರು, ಇಡಿ, ಸಿಬಿಐ, ಆದಾಯ ತೆರಿಗೆ ಇಲಾಖೆ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಕಾಂಗ್ರೆಸ್‌ ನಾಯಕರ ಮೇಲೆ ದಾಳಿ ನಡೆಸಿ ಅವರನ್ನು ಹೆದರಿಸಿ ಚುನಾವಣೆ ಗೆಲ್ಲುವ ಪ್ರಯತ್ನ ಮಾಡುತ್ತಿದೆ. ನಮಗೂ ಎನ್‌ ಡಿಎ ನಾಯಕರು ಏನೇನು ಮಾಡುತ್ತಿದ್ದಾರೆ ಗೊತ್ತಿದೆ, ಏನೇ ಇದ್ದರೂ ಜನರ ತೀರ್ಮಾನವೇ ಅಂತಿಮ ಎಂದು ಡಿಕೆಶಿ ಹೇಳಿದರು. ಗೆದ್ದೇ ಗೆಲ್ತೀವಿ ಅನ್ನೊರಿಗೆ ಮಹಾರಾಷ್ಟ್ರದಲ್ಲಿ, ಕರ್ನಾಟಕದಲ್ಲಿ ಪಕ್ಷಗಳನ್ನು ಬೇರೆ ಬೇರೆ ರಾಜ್ಯಗಳಲ್ಲಿ ಮುಖ್ಯಮಂತ್ರಿಗಳನ್ನು ಹುಡುಕಿ ಹುಡುಕಿ ಕರೆದುಕೊಳ್ಳುತ್ತಿರುವುದೇಕೆ? ಇದೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿಗೆ ಬಂದ ಪ್ರಧಾನಿ ಜನತಾದಳದ ಬಗ್ಗೆ ಏನು ಹೇಳಿದ್ರಿ ನೆನಪಿದೆಯಾ? ಆಗ ಸರಿಯಿಲ್ಲದವರು ಈಗ ಸರಿಯಾದರಾ? ಅದು ಹೋಗಲಿ ಬಿಜೆಪಿ ಆಡಳಿತಾವಧಿಯಲ್ಲಿ ನೀವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೀರಾ?…

Read More

ಸರಗೂರು: ಯಾರ ಕೈಯಲ್ಲಿ ಕೂಡ ಸಂವಿಧಾನವನ್ನು ಬದಲಾವಣೆ ಮಾಡಲು ಸಾದ್ಯವಿಲ್ಲ. ಏಕೆಂದರೆ ಸಂವಿಧಾನ ಎಂದರೆ ನಮ್ಮ ಪ್ರಾಣ ಮುಟ್ಟಲು ಯಾರ ಕೈಯಲೂ ಸಾಧ್ಯವಿಲ್ಲ ಎಂದು ಸಂವಿಧಾನ ಬಗ್ಗೆ ಮಾತನಾಡುವವರಿಗೆ ಟೌನ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ನಾಗರಾಜು ಎಚ್ಚರಿಕೆ ನೀಡಿದರು. ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಬುಧವಾರದಂದು ಟೌನ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ನಾಗರಾಜು ಮಾತನಾಡಿ, “ಈ ಭಾಗದಲ್ಲಿ ದಿ ಮಾಜಿ ಆರ್ ಧ್ರುವನಾರಾಯಣ್ ಹಾಗೂ ಮಾಜಿ ಶಾಸಕ ಎಸ್ ಚಿಕ್ಕಮಾದು ರವರು ಶಾಸಕರಾಗಿದ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ತಾಲೂಕು” ಎಂದು ಘೋಷಣೆ ಮಾಡಿದರು ಎಂದರು. ಎಚ್ ಸಿ ಮಹದೇವಪ್ಪ ರವರು ಲೋಕೋಪಯೋಗಿ ಸಚಿವರಾಗಿದ್ದ ಸಮಯದಲ್ಲಿ, ರಸ್ತೆಗಳಲ್ಲಿ ತುಂಬಾ ಸಮಸ್ಯೆಗಳು ಇದ್ದವು. ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದ ರಸ್ತೆಯಲ್ಲಿ ಒಬ್ಭ ವ್ಯಕ್ತಿ ಬೈಕ್ ನಲ್ಲಿ ತಿರುಗಾಡಲು ಸಾಧ್ಯವಾಗುತ್ತಿರಲಿಲ್ಲ. ಹಾದನೂರು ಎಂಸಿ ತಳಲು ಬಿ ಮಟಕೆರೆ ದೇವಲಾಪುರ ಹಾಗೂ ಇತರ ಗ್ರಾಮಗಳಿಗೆ ರಸ್ತೆ ಇರಲಿಲ್ಲ. ಎಚ್ ಡಿ ಕೋಟೆ ಮತ್ತು ಸರಗೂರು ತಾಲೂಕು…

Read More

ಬೆಳಗಾವಿ: ಕರಡಿ ಸಂಗಣ್ಣ ಅವರು ಕಾಂಗ್ರೆಸ್‌ಗೆ ಸೇರಿರುವುದು ಅವರ ವೈಯಕ್ತಿಕ ನಿರ್ಧಾರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ತಿಳಿಸಿದರು. ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಇಂದು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರಡಿ ಸಂಗಣ್ಣ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಕ್ಕೆ ಪ್ರತಿಕ್ರಿಯಿಸಿದರು. ಅದು ಅವರ ವೈಯಕ್ತಿಕ ನಿರ್ಧಾರ, ತಮ್ಮೊಂದಿಗೆ ಮಾತಾಡುವಂತೆ ಹೇಳಿದ್ದೆ. ಆದರೆ ಅವರು ಬಿಜೆಪಿ ಒದಗಿಸಿದ ವಿಪುಲ ಅವಕಾಶಗಳ ಹೊರತಾಗಿಯೂ ಕಾಂಗ್ರೆಸ್ ಸೇರಿದ್ದಾರೆ. ಇದೆಲ್ಲ ಸ್ವಾಭಾವಿಕ, ಯಾರೇನೂ ಮಾಡಲಾಗದು ಎಂದು ಹೇಳಿದರು. ಎಲ್ಲೆಡೆ ಬಿಜೆಪಿಗೆ ಅನುಕೂಲಕಾರವಾದ ವಾತಾವರಣವಿದೆ. ಎಲ್ಲ 28 ಸ್ಥಾನಗಳನ್ನು ಗೆಲ್ಲುವ ಪ್ರಯತ್ನದಲ್ಲಿ ಯಶ ಕಾಣಲಿದ್ದೇವೆ. ಕಾಂಗ್ರೆಸ್ ಪಕ್ಷದವರು ಲಿಂಗಾಯತ ಕಾರ್ಡ್ ಪ್ಲೇ ಮಾಡಿ ವೋಟು ಗಿಟ್ಟಿಸುವ ಪ್ರಯತ್ನ ಮಾಡುತ್ತಿದ್ದರೆ ತಮ್ಮದೇನೂ ಅಭ್ಯಂತರವಿಲ್ಲ, ಆದರೆ ಬಿಜೆಪಿಗೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲ ಸಮುದಾಯದವರು ಬೇಕು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಶಿವಮೊಗ್ಗ: ಬಿಜೆಪಿಯಿಂದ ಎಸ್.‌ ಬಂಗಾರಪ್ಪ ಸಂಸದರಾಗಿ ಗೆದ್ದಿದ್ದು ಅಂತ ಹಾಲಿ ಸಂಸದರು ಹೇಳುತ್ತಾರೆ. ಆದರೆ ಬಿವೈ ರಾಘವೇಂದ್ರರಿಗೆ ಮಾನ, ಮರ್ಯಾದೆ ಇದೆಯಾ? ಬಿಜೆಪಿಗೆ ಶಕ್ತಿ ಕೊಟ್ಟಿದ್ದು ಬಂಗಾರಪ್ಪ. ಕೀಳು ಮಟ್ಟದಲ್ಲಿ ಮಾತಾಡಬೇಡಿ. ಈಗ ಆ ರುಚಿ ನೀವು ಕಾಣಲಿದ್ದೀರಿ ಎಂದು ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಳ್ಳು ಪ್ರಚಾರದಿಂದ ಎಲ್ಲವೂ ಹಾಳಾಗುತ್ತದೆ. ನರೇಂದ್ರ ಮೋದಿಯಿಂದ ಇಂಥ ಅನಾಹುತ ನಡೆಯುತ್ತಿದೆ. ಈಗಿನ ಸಂಸದರು ಕೂಡ ಅದನ್ನೇ ಮಾಡಿಕೊಂಡು ಬಂದಿದ್ದಾರೆ. ಅದರಿಂದ ಕ್ಷೇತ್ರಕ್ಕೆ ಹಾನಿಯಾಗುತ್ತಿದೆ ಎಂದು ದೂರಿದ್ದಾರೆ. ಯಡಿಯೂರಪ್ಪ ಸೋತಾಗ ಅವರನ್ನು ಗೆಲ್ಲಿಸಿದ್ದೇ ಬಂಗಾರಪ್ಪ. ಯಡಿಯೂರಪ್ಪಗೆ ಶಕ್ತಿ ತುಂಬಿದ್ದೇ ಬಂಗಾರಪ್ಪ. ನಂತರ ಬಿಜೆಪಿ ಬಿಟ್ಟು ಸಮಾಜವಾದಿ ಪಕ್ಷದಿಂದ ನಿಂತು ಗೆದ್ದರಲ್ಲ, ಮೂರನೇ ಸ್ಥಾನಕ್ಕೆ ಆಗ ಬಿಜೆಪಿ ತಳ್ಳಲ್ಪಟ್ಟಿತ್ತಲ್ಲ, ಆಗ ನಿಮಗೆ ಶಕ್ತಿ ಇರಲಿಲ್ವಾ? ಎಂದು ತರಾಟೆಗೆ ತೆಗೆದುಕೊಂಡರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು HAL ಏರ್ ಪೋರ್ಟ್ ನಲ್ಲಿ ಸ್ವಾಗತಿಸಿ, ಬರಮಾಡಿಕೊಂಡರು. ಅದಾದ ಬಳಿಕ, ಇಬ್ಬರೂ ಒಟ್ಟಿಗೇ ಚುನಾವಣಾ ಪ್ರಚಾರಕ್ಕಾಗಿ ಮಂಡ್ಯಕ್ಕೆ ಪ್ರಯಾಣ ಬೆಳೆಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಸರಗೂರು: ಮಂಗಳವಾರದಂದು ತಾಲ್ಲೂಕಿನ ಹಂಚೀಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಂದೇಗಾಲ ಗ್ರಾಮದಲ್ಲಿ, ಮಹದೇಶ್ವರ ದೇವಸ್ಥಾನದ ಮುಂಭಾಗದಲ್ಲಿ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಂಡಿದ್ದರು. ಸಭೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದುರವರ ನೇತೃತ್ವದಲ್ಲಿ, ಜೆಡಿಎಸ್ ಪಕ್ಷದ ಕಾರ್ಯಕರ್ತ ಹಾಗೂ ಪ್ರಭಾವಿ ನಾಯಕ ಗ್ರಾಪಂ ಉಪಾಧ್ಯಕ್ಷ ನಾಗೇಂದ್ರ ದೇವಲಾಪುರ ಹಾಗೂ ಮಾರಯ್ಯ ರವರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು. ವರದಿ: ಹಾದನೂರು ಚಂದ್ರ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More