Author: admin

ಕೋಲಾರ: ಪ್ರಧಾನಿ ಮೋದಿ ಅವರು ಈ ಕರ್ನಾಟಕ ರಾಜ್ಯಕ್ಕೆ ಏನು ಕೊಟ್ಟಿದ್ದಾರೆ ಅನ್ನೋದನ್ನು ಮೊದಲು ಹೇಳಲಿ, ಕಾಂಗ್ರೆಸ್‌ಗೆ ಬೈದಿದ್ದೇ ಅವರ ಕೊಡುಗೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಮಾಲೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ ಈ ಲೋಕಸಭಾ ಚುನಾವಣೆಯನ್ನು ಸಾಮಾನ್ಯ ಎಂದು ಭಾವಿಸಬೇಡಿ. ಬಿಜೆಪಿಯನ್ನು ಸೋಲಿಸಿದ ಬಳಿಕ 2024ರ ಈ ಚುನಾವಣೆ ಎಷ್ಟು ಮಹತ್ವದ್ದಾಗಿದೆ ಎಂಬುದು ತಿಳಿದು ಬರಲಿದೆ.’ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮೊನ್ನೆ ಮೈಸೂರಿಗೆ ಬಂದಾಗ ಮಾತನಾಡಿದ 30 ನಿಮಿಷದಲ್ಲಿ 10 ನಿಮಿಷ ತಮ್ಮ ಬಗ್ಗೆ ಹೇಳಿಕೊಂಡಿದ್ದಾರೆ ಇನ್ನು 20 ನಿಮಿಷ ಕಾಂಗ್ರೆಸ್‌ ಗೆ ಬೈದಿದ್ದಾರೆ. ಈ ರಾಜ್ಯಕ್ಕೆ ಅವರು ಏನು ಕೊಟ್ಟಿದ್ದಾರೆ ಮೊದಲು ಹೇಳಲಿ. ಯಾರೇ ಬಿಜೆಪಿ ಮುಖಂಡ ಬಂದು ಮತ ಕೇಳಿದಾಗ ನೀವು ಅವರನ್ನು ಪ್ರಶ್ನಿಸಬೇಕು. ನರೇಗಾ ಹಣ ಕೊಟ್ಟಿದ್ದೀರಾ? ಬರಗಾಲದ ಪರಿಹಾರ ನೀಡಿದ್ದೀರಾ? ತೆರಿಗೆ ಹಣ ನೀಡಿದ್ದೀರಾ? ಎಂದು ಅವರನ್ನು ಪ್ರಶ್ನೆ ಮಾಡಬೇಕು ಎಂದು ಖರ್ಗೆ…

Read More

ಅಹಮದಾಬಾದ್: ಕಾರು ಟ್ರೇಲರ್ ಟ್ರಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಜನರು ಸಾವನ್ನಪ್ಪಿದ್ದರೆ, ಕೆಲವರು ಗಾಯಗೊಂಡಿರುವ ಘಟನೆ ಅಹಮದಾಬಾದ್-ವಡೋದರಾ ಎಕ್ಸ್ ಪ್ರೆಸ್ ವೇಯಲ್ಲಿ ನಡೆದಿದೆ. ವಡೋದರಾದಿಂದ ಅಹಮದಾಬಾದ್ ಗೆ ತೆರಳುತ್ತಿದ್ದ ಕಾರು ಟ್ರೈಲರ್ ಟ್ರಕ್’ನ ಹಿಂದೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾದ ಪರಿಣಾಮ ಈ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಎಲ್ಲಾ 10 ಜನರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅವರಲ್ಲಿ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಇನ್ನೋರ್ವ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತುಮಕೂರು ಮೈತ್ರಿ ಪಕ್ಷದ ಬಿಜೆಪಿ ಅಭ್ಯರ್ಥಿಯಿಂದ ಭರ್ಜರಿ ಮತ ಬೇಟೆ ನಡೆಯಿತು. ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ರೋಡ್ ಶೋ ಮೂಲಕ ವಿ. ಸೋಮಣ್ಣ ಮತದಾರರ ಮನಸೆಳೆದರು. ಬಳಿಕ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪ್ರತಿ ಪಂಚಾಯತಿಯಲ್ಲೂ ಕಾರ್ಯಕರ್ತರೊಂದಿಗೆ ಮತದಾರರ ಬಳಿ ಮತಯಾಚನೆ ಮಾಡಿದರು. ಹೊಳವನಹಳ್ಳಿ ಗ್ರಾಮದಲ್ಲಿ ಶ್ರೀ ರಾಮನವಮಿಯ ಹಬ್ಬದ ಪ್ರಯುಕ್ತ ಭಕ್ತಾದಿಗಳು ಮಾಡಿದಂತಹ ಶ್ರೀ ರಾಮನ ಪ್ರಸಾದ ವಿ.ಸೋಮಣ್ಣ ರವರು ಸವಿದರು. ಮೈತ್ರಿ ಪಕ್ಷದ ಅಭ್ಯರ್ಥಿ ವಿ. ಸೋಮಣ್ಣನಿಗೆ ಜೆಡಿಎಸ್ ಬಿಜೆಪಿ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಮತದಾರರಿಂದ ಭರ್ಜರಿ ಸ್ವಾಗತ ದೊರಕಿತು. ಕಾರ್ಯಕರ್ತರು ಸಿಡಿ ಮದ್ದುಗಳನ್ನು ಸಿಡಿಸಿ, ಬೃಹತ್ ಹಾರಗಳನ್ನು ಹಾಕುವ ಮುಖೇನ ನೆಚ್ಚಿನ ನಾಯಕನಿಗೆ ಸ್ವಾಗತ ಕೋರಿದರು. ಮೈತ್ರಿ ಪಕ್ಷದ ಲೋಕಸಭಾ ಅಭ್ಯರ್ಥಿ ವಿ. ಸೋಮಣ್ಣನಿಗೆ ಪಿ.ಆರ್. ಸುಧಾಕರ್ ಲಾಲ್ ಮತ್ತು ಬಿ.ಹೆಚ್. ಅನಿಲ್ ಕುಮಾರ್ ಸಾತ್ ಕೊಟ್ಟರು. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಶ್ರೀ ರಾಮನವಮಿಯ ಅಂಗವಾಗಿ ಎಲ್ಲಿ ನೋಡಿದರೂ, ಯಾವ ದೇವಸ್ಥಾನದಲ್ಲಿ ನೋಡಿದರೂ ಶ್ರೀರಾಮನಿಗೆ ವಿಶೇಷ ಹೂವಿನ ಅಲಂಕಾರದೊಂದಿಗೆ ಪೂಜೆ ಪುರಸ್ಕಾರಗಳು ಕಂಡು ಬಂದಿದೆ. ಸುಮಾರು 40 ವರ್ಷದಿಂದ ಪ್ರತಿ ಹಬ್ಬದಲ್ಲೂ ವಿಶೇಷ ಪೂಜೆ ಪುರಸ್ಕಾರಗಳನ್ನ ಸಲ್ಲಿಸುತ್ತಾ ಬಂದಿರುವ ಸುರಕ್ಷಾ ಚಾರಿಟೇಬಲ್ ಟ್ರಸ್ಟ್ ಇವರ ವತಿಯಿಂದ, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ರಾಮ ನವಮಿ ಆಚರಣೆ ಮಾಡಲಾಯಿತು. ಕೊರಟಗೆರೆ ಪಟ್ಟಣದ ಶ್ರೀ ಗುಂಡಾ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಿದರು. ಭಕ್ತಾದಿಗಳಿಗೆ ಪಾನಕ ಮಜ್ಜಿಗೆ ಕೋಸಂಬರಿ ಹಾಗೂ ವಿಶೇಷ ಪ್ರಸಾದವನ್ನ  ಶ್ರೀ ರಾಮನ ಭಕ್ತರು ವಿತರಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಭಕ್ತಾದಿಗಳು, “ದೇವಸ್ಥಾನದ ಹುಂಡಿಗಳ ಹಣ ತೆಗೆದುಕೊಂಡು ಹೋಗುವ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ, ದೇವಸ್ಥಾನಕ್ಕೆ ಬೇಕಾಗಿರುವ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದಿರಲಿ, ಏನು ಆಗಬೇಕು ಎಂದು  ಕೇಳುವ ಸೌಜನ್ಯವು ಅವರಿಗೆ ಇಲ್ಲ” ಎಂದರು. ಇಡೀ ರಾಜ್ಯದಲ್ಲಿ ಹಿಂದೂ ದೇವಾಲಯಗಳ ಅಭಿವೃದ್ಧಿ ಮರೀಚಿಕೆ ಆಗುತ್ತಿವೆ. ಇತಿಹಾಸ ಪ್ರಸಿದ್ಧ ಹಿಂದೂ ದೇವಾಲಯಗಳು ಕಣ್ಮರೆಯಾಗುತ್ತಿವೆ. ಇದಕ್ಕೆಲ್ಲ…

Read More

ಭಾಗ್ಯ ಲಕ್ಷ್ಮೀ ಧಾರಾವಾಹಿಯಲ್ಲಿ ಧರ್ಮರಾಜ್ ಸೂರ್ಯವಂಶಿ ಮನೆಯಲ್ಲಿ ಯುಗಾದಿ ಹಬ್ಬದ ಸಂಭ್ರಮ ಇನ್ನೂ ಮುಗಿದಿಲ್ಲ. ಕುಸುಮಾ ಮನೆಯೊಳಗೆ ಗೆರೆ ಎಳೆದು ಮನೆಯನ್ನು ಎರಡು ಭಾಗ ಮಾಡಿದ್ದಾಳೆ. ಮನೆ ಬಿಟ್ಟು ಹೋಗು ಎಂದು ಸೊಸೆಗೆ ದುಂಬಾಲು ಬಿದ್ದಿದ್ದ ಮಗ ತಾಂಡವ್ ಗೆ ಕುಸುಮಾ ಪಾಠ ಕಲಿಸಲು ಮುಂದಾಗಿದ್ಧಾಳೆ. ಹಬ್ಬದ ದಿನ ತಾನು ರುಚಿಯಾದ ಊಟ ಮಾಡಲು ತಾಂಡವ್ ಕೇಳಿದಷ್ಟು ಹಣ ಕೊಟ್ಟು ಸೆಲೆಬ್ರಿಟಿ ಶೆಫ್ ರೂಪಾಳನ್ನು ಮನೆಗೆ ಕರೆ ತರುತ್ತಾನೆ. ತಾಂಡವ್ ನನಗೆ ಹೇಳಿದಂತೆ ಇಲ್ಲಿ ಏನೂ ಇಲ್ಲ, ಬೇಕಂತಲೇ ತಾಂಡವ್ ಭಾಗ್ಯಾಳಿಂದ ದೂರ ಇದ್ದಾನೆ. ಮಕ್ಕಳು, ಅಪ್ಪ ಅಮ್ಮನನ್ನೂ ನಿರ್ಲಕ್ಷ್ಯ ಮಾಡುತ್ತಿದ್ದಾನೆ ಎಂದು ತಿಳಿದ ನಂತರ ರೂಪಾ ಕೂಡಾ ತಾಂಡವ್ ಗೆ ಬುದ್ಧಿ ಕಲಿಸಲು ನಿರ್ಧರಿಸುತ್ತಾಳೆ. ಭಾಗ್ಯಾ ಕುಸುಮಾ ಬಳಿ ಬಂದು ಕ್ಷಮೆ ಕೇಳುತ್ತಾಳೆ. ನಿಮ್ಮ ಮಗ ನನ್ನ ಬಳಿ ಬಂದು ಸುಳ್ಳು ಹೇಳಿದರು. ಭಾಗ್ಯಾಳದ್ದೇ ಎಲ್ಲಾ ತಪ್ಪು ಎನ್ನುವಂತೆ ಆರೋಪ ಮಾಡಿದ್ದರು. ಆದರೆ ಈಗ ನನಗೆ ಸತ್ಯ ಏನೆಂದು ಗೊತ್ತಾಗಿದೆ.…

Read More

ಬೆಂಗಳೂರು: ನೀರಿನ ಟ್ಯಾಂಕರ್​ ವಾಹನ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವಾಹನ ಸವಾರನೊಬ್ಬ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದ್ದು ತಡವಾಡಿ ಬೆಳಕಿಗೆ ಬಂದಿದೆ. ಹರೀಶ್​ ಅಪಘಾತದಲ್ಲಿ ಸಾವನ್ನಪ್ಪಿದ್ದು, ಮತ್ತೊಬ್ಬ ವಾಹನ ಸವಾರ ಸುಚಿತ್​ಗೆ ಗಂಭೀರ ಗಾಯಗಳಾಗಿದೆ. ಬೈಕ್ ಸವಾರರು ಭಾನುವಾರ ರಾತ್ರಿ ಮಾಗಡಿ ರಸ್ತೆಯ ಕಾವೇರಿ ಫ್ಯಾಷನ್ಸ್​ ಬಳಿ ಹೋಗುವಾಗ ಎದುರಿಗೆ ಬಂದ ವಾಟರ್​ ಟ್ಯಾಂಕರ್ ವಾಹನ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಹಿಂಬದಿಯ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೊಬ್ಬ ಬೈಕ್​ ಸವಾರನಿಗೆ ಗಂಭೀರ ಗಾಯಗಳಾಗಿದೆ. ಅಪಘಾತದ ಸಂಪೂರ್ಣ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕುಡಿದ ಅಮಲಿನಲ್ಲಿ ಬೈಕ್​ ಸವಾರ, ವಾಹನ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರ ಪೋಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊರಟಗೆರೆ: ಚಿರತೆಯೊಂದು ಸಾಕು ನಾಯಿಯನ್ನು ಬೇಟೆಯಾಡಿದ ಘಟನೆ ಕೊರಟಗೆರೆ ತಾಲೂಕಿನ ಕೂಡ್ಲಹಳ್ಳಿ ಗ್ರಾಮದ ರೈತ ಶಿವಶಂಕರ ಆರಾಧ್ಯ ಅವರ ಜಮೀನಿನಲ್ಲಿ ನಡೆದಿದೆ. ಮಂಗಳವಾರ ಸಂಜೆ ಶಿವಶಂಕರ ಆರಾಧ್ಯ ಜಮೀನಿನಿಂದ ಮನೆ ಕಡೆ ಹಸುಗಳನ್ನು ಹೊಡೆದುಕೊಂಡು ಹೋಗುವ ಸಂದರ್ಭದಲ್ಲಿಈ ಘಟನೆ ನಡೆದಿದೆ. ರೈತ ಶಿವಶಂಕರ ಆರಾಧ್ಯೆಗೆ ಚಿರತೆ ಕಾಣಿಸಿಕೊಂಡಿದ್ದು, ಹಸುಗಳನ್ನು ಮುಂದೆ ಸಾಗಿಸುವಷ್ಟರಲ್ಲಿ ಅವರ ಸಾಕು ನಾಯಿಯನ್ನು ಚಿರತೆ ಎಳೆದೊಯ್ದ ಸ್ಥಳದಿಂದ ಪರಾರಿಯಾಗಿದೆ. ಮರುದಿನ ಬೆಳಗ್ಗೆ ನೋಡಿದಾಗ ರೈತನ ಸಾಕು ನಾಯಿಯ ಕಳೆಬೇರ ಪತ್ತೆಯಾಗಿದೆ. ಮೂರು ದಿನಗಳಿಂದ ಜಮೀನುಗಳಲ್ಲಿ ಆಗಾಗ ಚಿರತೆ ಕಾಣಿಸಿಕೊಳ್ಳುತ್ತಿದ್ದು ಇದರಿಂದ ರೈತರು ಹಾಗೂ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಇನ್ನು ಚಿರತೆಯನ್ನು ಸೆರೆ ಹಿಡಿಯಲು ರೈತ ಶಿವಶಂಕರ್ ಆರಾಧ್ಯ ಹಾಗೂ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ರೈತರು ನೀಡಿದ ದೂರಿನ ಅನ್ವಯ ಜಮೀನಿಗೆ ಭೇಟಿ ಕೊಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯಲು ಬೋನ್ ಇಡುವ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್.…

Read More

ಅಬುಧಾಬಿ: ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಮರುಭೂಮಿ ದೇಶದ ಸುತ್ತಲೂ ವ್ಯಾಪಕವಾದ ಪ್ರವಾಹವನ್ನು ಉಂಟು ಮಾಡಿದೆ. ದುಬೈನ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೀರು ತುಂಬಿದ್ದು ಕೆರೆಯಂತಾಗಿತ್ತು. ನಿಲ್ದಾಣದಲ್ಲೇ ನದಿಯಂತೆ ನೀರು ಹರಿಯುತ್ತಿದ್ದರಿಂದ ವಿಮಾನ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ದುಬೈ ವಿಮಾನ ನಿಲ್ದಾಣದಿಂದ ಭಾರತ, ಪಾಕಿಸ್ತಾನ, ಸೌದಿ ಮತ್ತು ಯುನೈಟೆಡ್ ಕಿಂಗ್‌ ಡಮ್ ಸೇರಿದಂತೆ ಹಲವು ದೇಶಗಳಿಗೆ ಏಪ್ರಿಲ್ 16 ರಂದು ವಿಮಾನಗಳ ಕಾರ್ಯಾಚರಣೆ ವಿಳಂಬವಾಗಿತ್ತು. ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು. ಮರುಭೂಮಿ ರಾಷ್ಟ್ರದಾದ್ಯಂತ ವ್ಯಾಪಕವಾದ ಪ್ರವಾಹ ಉಂಟುಮಾಡಿದ ಭಾರೀ ಮಳೆಯು ಭಾಗಶಃ ಮೋಡ ಬಿತ್ತನೆಯಿಂದ ಉಂಟಾಗಿದೆ. ಯುಎಇ ಮತ್ತು ಬಹ್ರೇನ್‌ನಾದ್ಯಂತ ಪ್ರವಾಹಕ್ಕೆ ಕಾರಣವಾದ ಧಾರಾಕಾರ ಮಳೆಯಿಂದ ಮಧ್ಯಪ್ರಾಚ್ಯದ ಆರ್ಥಿಕ ಕೇಂದ್ರವಾದ ದುಬೈ ನಿಷ್ಕ್ರಿಯಗೊಂಡಿದೆ. ಭಾನುವಾರ ಮತ್ತು ಸೋಮವಾರ ಒಮಾನ್‌ನಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಬೆಂಗಳೂರು: ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಖ್ಯಾತ ಚಲನಚಿತ್ರ ನಟ ನಿರ್ಮಾಪಕ ದಿ. ದ್ವಾರಕೀಶ್ ರವರ ಪ್ರಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಅಪಾರ ಸೇವೆ ಹಾಗೂ ಕೊಡುಗೆ: ಕನ್ನಡ ಚಿತ್ರರಂಗದಕ್ಕೆ ನಟ, ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿ ದ್ವಾರಕೀಶ್ ಅವರು ಅಪಾರ ಕೊಡುಗೆ ಹಾಗೂ ಸೇವೆಯನ್ನು ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಮರೆಯಲು ಸಾಧ್ಯವಿಲ್ಲ. ಹಾಸ್ಯನಟರಾಗಿ ಅಲ್ಲದೆ ನಾಯಕ ನಟರಾಗಿಯೂ ಉತ್ತಮ ಅಭಿನಯ ನೀಡಿದವರು ಅವರು ಎಂದರು. ಡಾ. ರಾಜ್ ಕುಮಾರ್ ಮತ್ತು ಅವರ ಜೋಡಿ ಬಹಳ ಚೆನ್ನಾಗಿತ್ತು. ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರ ಚಿತ್ರಗಳಲ್ಲಿಯೂ ಅಭಿನಯಿಸಿದ್ದರು. ಜೀವನದಲ್ಲಿ ಬಹಳಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಆದರೂ ಕನ್ನಡ ಚಿತ್ರ ನಿರ್ಮಾಣ, ನಟನೆಯನ್ನು ಬಿಟ್ಟಿರಲಿಲ್ಲ. ಕಷ್ಟಗಳನ್ನು ಸಹಿಸಿ ಕನ್ನಡ ಚಿತ್ರರಂಗ ಬೆಳೆಯಲು ಕೊಡುಗೆ ನೀಡಿದ್ದಾರೆ. ಮೈಸೂರಿನ ಹುಣಸೂರಿನಲ್ಲಿ ಹುಟ್ಟಿದವರು. ತವರಿನ ಬಗ್ಗೆ ಬಹಳ ಪ್ರೇಮವಿತ್ತು. ಒಮ್ಮೆ ಮೈಸೂರಿಗೆ…

Read More

ಬೆಂಗಳೂರು: ಇಂದು ಕೊಪ್ಪಳದ ಬಿಜೆಪಿಯ ಮಾಜಿ ಸಂಸದ ಕರಡಿ ಸಂಗಣ್ಣ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಸೋಲಿನ ಭಯದಿಂದಲೇ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕರಡಿ ಸಂಗಣ್ಣ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಕಾರ್ಯಕ್ರಮ ಬಿಜೆಪಿಯನ್ನು ತೊಳೆಯುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಗ್ಯಾರಂಟಿಯ ದೊಡ್ಡ ಅಲೆ ಇದೆ ಬಿಜೆಪಿಯಲ್ಲಿ ಸುಮಾರು ನೂರು ಸಂಸದರಿಗೆ ಟಿಕೆಟ್ ಕೊಟ್ಟಿಲ್ಲ ಸರ್ವೆಯಲ್ಲಿ ಗೆಲ್ಲಲ್ಲ ಅಂತ ಸಂಸದರಿಗೆ ಟಿಕೆಟ್ ನಿರಾಕರಿಸಿದ್ದಾರೆ ಎಂದರು. ಎನ್ ಡಿ ಎ ಪರಿಸ್ಥಿತಿ ಏನು ಅಂತ ಇದರಲ್ಲೇ ಗೊತ್ತಾಗುತ್ತದೆ. ಸಂವಿಧಾನ ಬದಲಾವಣೆ ಸಾಧ್ಯವಿಲ್ಲ ಅಂತ ಮೋದಿ ಹೇಳುತ್ತಾರೆ. ಆದರೆ ಅವರ ಪಕ್ಷಕರು ಸಂವಿಧಾನ ಬದಲಿಸುತ್ತೇವೆ ಎಂದಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More