Author: admin

ಬೆಂಗಳೂರು: ಬಿಎಂಟಿಸಿ ಬಸ್‌ ಗಳಿಂದ ಅಪಘಾತ ಹಾಗೂ ಸಾವುಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಇದೀಗ  ಸಾರಿಗೆ ಸಂಸ್ಥೆ ಅಪಘಾತ ತಡೆಗೆ ಕ್ರಮಕೈಗೊಳ್ಳಲು ಮುಂದಾಗಿದೆ. ಇದರಂತೆ ಚಾಲಕರ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಬಸ್ ನಿಗಮವು ಸುಮಾರು 3,000 ಬಿಎಂಟಿಸಿ ಬಸ್ ಮಾರ್ಗಗಳ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದೆ. ಅಪಘಾತಗಳಿಗೆ ಒತ್ತಡ ಕೂಡ ಒಂದು ಪ್ರಮುಖ ಅಂಶ ಹೇಳಲಾಗುತ್ತಿದೆ. ಕೆಲಸದ ಸಮಯದಲ್ಲಿ ಬದಲಾವಣೆ ಇಲ್ಲದಿರುವುದು ಮತ್ತು ಕರ್ತವ್ಯದ ಸಮಯ ಮೀರಿ ಕೆಲಸ ಮಾಡುತ್ತಿರುವುದು ಚಾಲಕರಿಗೆ ಒತ್ತಡ ಹೆಚ್ಚಾಗುವಂತೆ ಮಾಡಿದೆ ಎಂದು ಚಾಲಕರು ಹಾಗೂ ಕಾರ್ಮಿಕ ಸಂಘಟನೆಗಳು ಹೇಳುತ್ತಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಮಧುಗಿರಿ: ಅಬಕಾರಿ ವಿಭಾಗ ವ್ಯಾಪ್ತಿಯ ಮಧುಗಿರಿ ಹಾಗೂ ಕೊರಟಗೆರೆಯಲ್ಲಿ ದಾಖಲಾದ ವಿವಿಧ ಪ್ರಕರಣಗಳಲ್ಲಿ ಜಪ್ತಾಗಿರುವ ಮದ್ಯ ಹಾಗೂ ಸೆಂದಿಯನ್ನು ಪರಿಸರಕ್ಕೆ ಹಾನಿಯಾಗದಂತೆ ನಾಶಪಡಿಸಲಾಗಿದೆ ಎಂದು ಡಿವೈಎಸ್ ಪಿ ದೀಪಕ್ ಎಸ್.ತಿಳಿಸಿದರು. ತಾಲ್ಲೂಕಿನ ಕಸಬಾ ವ್ಯಾಪ್ತಿಯ ಮಾಡಗನಹಟ್ಟಿ ಬಳಿ ಇರುವ ಪುರಸಭೆಯ ಕಸ ವಿಲೇವಾರಿ ಘಟಕದಲ್ಲಿ ಗುರುವಾರ ಅಧಿಕಾರಿಗಳ ಸಮ್ಮುಖದಲ್ಲಿ ಮದ್ಯ ಹಾಗೂ ಸೆಂದಿ ನಾಶಪಡಿಸಿ ಮಾತನಾಡಿದ ಅವರು, ಅಬಕಾರಿ ಉಪಯುಕ್ತರ ಆದೇಶದಂತೆ ಮಧುಗಿರಿ ವಲಯ ವ್ಯಾಪ್ತಿಯಲ್ಲಿ ಪೊಲೀಸ್ ಹಾಗೂ ಅಬಕಾರಿಯಲ್ಲಿ ವಿವಿಧ 14 ಪ್ರಕರಣಗಳಲ್ಲಿ ಜಪ್ತಾದಂತ 1110 ಲೀಟರ್‌ ಸೆಂದಿ 36 ಲೀಟರ್ ಐಎಂಎಲ್, 32 ಲೀ ಬಿಯರ್ ಅದೇ ರೀತಿ ಕೊರಟಗೆರೆ ವಲಯ ವ್ಯಾಪ್ತಿಯಲ್ಲಿ ದಾಖಲಾದ 3 ಪ್ರಕರಣಗಳಲ್ಲಿ 147 ಲೀಟರ್  ಬಿಯರ್ ಹಾಗೂ 3 ಲೀಟರ್ ಐಎಂಎಲ್ ಅಕ್ರಮ ಮದ್ಯ ನಾಶಪಡಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ  ಅಬಕಾರಿ ನಿರೀಕ್ಷಕರಾದ  ನಾಗರಾಜು ಹೆಚ್.ಕೆ. ಶ್ರೀಲತಾ ಬಿ., ಕೆ.ಎಸ್.ಬಿ.ಸಿ.ಎಲ್. ಡಿಪೋ ಮ್ಯಾನೇಜರ್‌ ವೀರರೆಡ್ಡಿ, ಅಬಕಾರಿ ಉಪ ನಿರೀಕ್ಷಕರಾದ ಮನು ಬಿ.ಜೆ., ಪ್ರಭಾಕರ್,…

Read More

ಸರಗೂರು:   ಮೈಸೂರು ವಿಭಾಗದ ನಾಯಕ ಸಮುದಾಯದ ಪ್ರಭಾವಿ ನಾಯಕರು, ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದುರವರಿಗೆ ಸಚಿವ ಸ್ಥಾನ ನೀಡಬೇಕೆಂದು ರಾಜ್ಯದ ಕಾಂಗ್ರೆಸ್ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರನ್ನು ಹಾದನೂರು ಗ್ರಾಮ ಪಂಚಾಯಿತಿ ಸದಸ್ಯೆ ಹಾಗೂ ಗ್ಯಾರಂಟಿ ಯೋಜನೆ ಸಮಿತಿ ಸದಸ್ಯೆ ಭಾಗ್ಯಕೇಂಪಸಿದ್ದ ಒತ್ತಾಯಿಸಿದ್ದಾರೆ. ಹೆಚ್‌.ಡಿ.ಕೋಟೆಕ್ಷೇತ್ರದಲ್ಲಿ ಅತ್ಯಧಿಕ ಮತಗಳಿಂದ ಸತತ ಎರಡನೇ ಬಾರಿ ಭರ್ಜರಿ ಜಯಗಳಿಸಿ ಜನ ಸಾಮಾನ್ಯರೊಡನೆ ಬೆರೆತು, ಕ್ಷೇತ್ರದ ಅಭಿವೃದ್ಧಿಗಾಗಿ 7 ವರ್ಷಗಳಿಂದ ಶ್ರಮಿಸಿ ಕ್ಷೇತ್ರದ ಮನೆ ಮಗನಾಗಿದ್ದಾರೆ. ತಾಲ್ಲೂಕಿನ ಹಳ್ಳಿ-ಹಳ್ಳಿಗಳನ್ನೂ ಸುತ್ತಿ, ಕಾಡಂಚಿನ ಕಟ್ಟಕಡೆಯ ಗ್ರಾಮಗಳ ಜನರ ಕುಂದುಕೊರತೆಗಳನ್ನೂ ಆಲಿಸಿ, ಅವುಗಳನ್ನು ವಿಧಾನಸಭೆ ಕಲಾಪಗಳಲ್ಲಿ ಪ್ರಸ್ತಾಪಿಸಿ, ಚರ್ಚಿಸಿ, ಸರ್ಕಾರದ ಗಮನಕ್ಕೆ ತಂದು ಸರ್ಕಾರದಿಂದ ಹೆಚ್ಚು ಅನುದಾನ ತಂದು ತಾಲ್ಲೂಕಿನ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡು, ಪ್ರತಿಯೊಂದು ಚುನಾವಣೆಯಲ್ಲೂ ಗೆಲುವು ಸಾಧಿಸಿ ಕೋಟೆಯನ್ನು ಕಾಂಗ್ರೆಸ್ ಪಕ್ಷದ ಭದ್ರಕೋಟೆಯನ್ನಾಗಿ ರೂಪಿಸಿದ್ದಾರೆ. ಆದ್ದರಿಂದ ಹಿಂದುಳಿದ ತಾಲ್ಲೂಕಾಗಿರುವ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕಾದರೆ ಅನಿಲ್‌ ಅವರಿಗೆ ಸಚಿವ…

Read More

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಆರ್ ಎಸ್ ಎಸ್  ಗೀತೆ ಹಾಡಿದ್ದು ತಪ್ಪು. ಆದರೆ, ಕ್ಷಮೆ ಕೇಳಿರುವುದರಿಂದ ಎಲ್ಲವೂ ಮುಗಿದಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಹಾಗೆ ಹೇಳಬಾರದಿತ್ತು ಹೇಳಿದ್ದಾರೆ. ಆರ್‌ ಎಸ್‌ ಎಸ್‌ ಗೀತೆ ಹೇಳಿದೆ ಮೇಲೆ ಅವರು ಕ್ಷಮೆ ಕೇಳಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿಯಿತು. ಕ್ಷಮೆ ಕೇಳಿದ ಮೇಲೆ ಮುಗೀತು. ಪದೇ ಪದೇ ಅದನ್ನ ಎತ್ತಿ ಹಿಡಿಯೋದು ಬೇಡ. ಇದೀಗ ಅದು ಮುಗಿದ ಅಧ್ಯಾಯ. ಮತ್ತೆ ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಮುಂದೆ ಯಾರೂ ಹೀಗೆ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. ವಿಧಾನಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಆರ್‌ ಎಸ್‌ ಎಸ್‌ ನ ಗೀತೆಯ ಕೆಲವು ಸಾಲುಗಳನ್ನು ಹಾಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಬೆಂಗಳೂರು: ನಾಡಧ್ವಜ, ನಾಡದೇವಿ, ರಾಷ್ಟ್ರಧ್ವಜ ಹಾಗೂ ದೇವರಿಗೆ ಜಾತಿ, ಧರ್ಮ ಬಣ್ಣದ ರಾಜಕೀಯ ಲೇಪನ‌ ಮಾಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯ ವಿರೋಧ ಹಾಗೂ ಸಂಸದ ಯದುವೀರ್ ಅವರ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು. ಯದುವೀರ್ ಅವರು ಈಗ ಬಿಜೆಪಿ ಜೊತೆ ಸೇರಿಕೊಂಡು ಬಿಟ್ಟಿದ್ದಾರಲ್ಲ, ಆದ ಕಾರಣಕ್ಕೆ ಇತಿಹಾಸ ಮರೆತು ಬಿಟ್ಟಿದ್ದಾರೆ ಎಂದು ಡಿಕೆಶಿ ಟೀಕಿಸಿದರು. ಚಾಮುಂಡೇಶ್ವರಿ ಎಲ್ಲಾ ಧರ್ಮದವರಿಗೂ ಆಶೀರ್ವಾದ ಮಾಡುವಂತಹ ದೇವರು.‌ ರಾಜ ವಂಶಸ್ಥರು ಹಾಗೂ ನಂತರ ಬಂದ ಸರ್ಕಾರಗಳು ಚಾಮುಂಡಿ ತಾಯಿಯನ್ನು ನಾಡದೇವಿ ಎಂದು ಕರೆದಿವೆ. ಈ ದೇಗುಲ ಸಾರ್ವಜನಿಕರ ಆಸ್ತಿ. ನಾಡಧ್ವಜ, ನಾಡದೇವಿ, ರಾಷ್ಟ್ರಧ್ವಜ ಹಾಗೂ ದೇವರಿಗೆ ಜಾತಿ, ಧರ್ಮ ಬಣ್ಣದ ರಾಜಕೀಯ ಲೇಪನ‌ ಮಾಡುವ ಅಗತ್ಯವಿಲ್ಲ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ನವದೆಹಲಿ: ಮೈಸೂರು ಚಾಮುಂಡಿ ಬೆಟ್ಟದ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯೊಂದನ್ನು ನಡೆಸಿ ಕರ್ನಾಟಕ ಸರ್ಕಾರವನ್ನು ಅದರಲ್ಲೂ ನಿರ್ದಿಷ್ಟವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಚಾಮುಂಡಿಬೆಟ್ಟ ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಎಂದು ಶಿವಕುಮಾರ್ ಹೇಳುತ್ತಾರೆ. ಇತ್ತೀಚೆಗೆ ಅವರು ವಿಧಾನಸಭಾ ಆಧಿವೇಶನದಲ್ಲಿ ಆರೆಸ್ಸೆಸ್ ಪ್ರಾರ್ಥನಾ ಗೀತೆಯನ್ನು ಹಾಡಿ ವಿವಾದ ಸೃಷ್ಟಿಸಿದ್ದರು, ಆದರೆ ಅವರು ಹಾಗೆ ಮಾಡಿದ್ದು ದೆಹಲಿಯಲ್ಲಿರುವ ವರಿಷ್ಠರನನ್ನು ಕೆರಳಿಸಿತ್ತು ಎಂದು ಹೇಳಿದರು. ಹೈಕಮಾಂಡ್ ಗಮನ ಆ ವಿಷಯದಿಂದ ಬೇರೆಡೆ ಸೆಳೆಯಲು ಶಿವಕುಮಾರ್ ಚಾಮುಂಡಿ ಬೆಟ್ಟ ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಅಂತ ಹೇಳಿದ್ದಾರೆ, ಅವರ ಮಾತಿನ ಅರ್ಥವೇನು ಎಂದು ಕಿಡಿಕಾರಿದ್ದಾರೆ. ಚಾಮುಂಡಿ ತಾಯಿ ಈ ನಾಡಿನ ಹಿಂದೂಗಳ ಪಾಲಿನ ಅಧಿದೇವತೆ, ಪೂಜನೀಯಳು, ದಸರಾ ಸಮಯದಲ್ಲಿ ಚಾಮುಂಡಿಗೆ ಪೂಜೆ ಮಾಡಿಯೇ ಮುನ್ನುಡಿ ಇಡಲಾಗುತ್ತದೆ. ತಮ್ಮ ಹೈಕಮಾಂಡ್ ನ್ನು ಸಮಾಧಾನಗೊಳಿಸಲು, ಖುಷಿಪಡಿಸಲು ಡಿ ಕೆ ಶಿವಕುಮಾರ್ ಈ ರೀತಿ ಹೇಳಿಕೆ ನೀಡಿದ್ದಾರೆ…

Read More

ಬೆಂಗಳೂರು:  ಚಾಮುಂಡೇಶ್ವರಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ನಾಡಿನ ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ ಯಾರೂ ಬೇಡ ಅನ್ನಲು ಆಗುವುದಿಲ್ಲ. ಇದೇ ನನ್ನ ಮಾತಿನ ಸತ್ವ. ವಿವಾದ ಮಾಡೋದು ಬಿಜೆಪಿ ತತ್ವ! ಎಂದು ಬಿಜೆಪಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರು ದಸರಾ ಉದ್ಘಾಟನೆ ವಿಚಾರದಲ್ಲಿ ಬಿಜೆಪಿಯ ವಿರೋಧಗಳ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮ, ಸಮಾಜದವರಿಗೂ ಪ್ರವೇಶವಿದೆ. ಎಲ್ಲರೂ ಬೆಟ್ಟಕ್ಕೆ ಹೋಗುತ್ತಾರೆ. ದೇವಿಯ ಪ್ರಾರ್ಥನೆ ಮಾಡುತ್ತಾರೆ. ಎಲ್ಲರ ನೋವನ್ನು ದೂರ ಮಾಡುವಳು ನಮ್ಮ ದುರ್ಗಾ ದೇವಿ ಎಂದಿದ್ದಾರೆ. ನಾಡ ಹಬ್ಬ ದಸರಾವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಜನ ಬರುತ್ತಾರೆ. ಇದಕ್ಕೆ ನಮ್ಮ ರಾಜ ವಂಶಸ್ಥರೇ ಅನುಮತಿ ನೀಡಿ…

Read More

ದಾವಣಗೆರೆ: ಕೋಳಿಯೊಂದು ನೀಲಿ ಬಣ್ಣದ ಮೊಟ್ಟೆ ಇಟ್ಟು ಅಚ್ಚರಿ ಮೂಡಿಸಿದ ಘಟನೆ ಚನ್ನಗಿರಿಯ ನಲ್ಲೂರ ಗ್ರಾಮದಲ್ಲಿ ನಡೆದಿದೆ. ಸೈಯದ್ ನೂರ್ ಎಂಬವರಿಗೆ ಸೇರಿದ ನಾಟಿ ಕೋಳಿ ನೀಲಿ ಬಣ್ಣದ ಮೊಟ್ಟೆ ಇಟ್ಟಿದೆ. ಸೈಯದ್ ಮನೆಯಲ್ಲಿ ಹತ್ತು ಕೋಳಿಗಳಿವೆ. ಇದರಲ್ಲಿ ಒಂದು ಕೋಳಿ ಇದ್ದಕ್ಕಿದ್ದಂತೆ ನೀಲಿ ಬಣ್ಣದ ಮೊಟ್ಟೆ ಇಟ್ಟಿದೆ. ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಮೊಟ್ಟೆಯನ್ನು ನೋಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.  ಈ ಬಗ್ಗೆ ಪ್ರತಿಕ್ರಿಯಿಸಿರುವ ಚನ್ನಗಿರಿ ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಅಶೋಕ, ಮೆದೊಜೀರಕಾಂಗದಲ್ಲಿ ಬಿಲಿವರ್ಡಿನ್ ಎಂಬ ವರ್ಣ ದ್ರವ್ಯದ ಕಾರಣಕ್ಕೆ ನೀಲಿ ಬಣ್ಣ ಬಂದಿರುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮೊಟ್ಟೆಯ ಮೇಲ್ಭಾಗ ಮಾತ್ರ ನೀಲಿ. ಉಳಿದಂತೆ ಮೊಟ್ಟೆ ಮಾಮೂಲಾಗಿ ಇರುತ್ತದೆ. ಹೀಗೆ ನಿರಂತರವಾಗಿ ನೀಲಿ ಮೊಟ್ಟೆ ಹಾಕಿದ್ದರೇ ವೈಜ್ಞಾನಿಕವಾಗಿ ಪರಿಶೀಲನೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಹಾಸನ: ದಸರಾ ಉದ್ಘಾಟನೆಗೆ ಚಾಮುಂಡೇಶ್ವರಿ ತಾಯಿ ನನ್ನನ್ನು ಕರೆಸಿಕೊಳ್ಳುತ್ತಿದ್ದಾರೆ ಎಂದು ಸಾಹಿತಿ ಬಾನು ಮುಷ್ತಾಕ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ತಾಯಿ ನನ್ನನ್ನು ಕರೆಸಿಕೊಳ್ಳುತ್ತಿದ್ದಾರೆ. ನಾನು ರಾಜ್ಯದ ಜನತೆ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದರು. ಸಂಸದ ಯದುವೀರ ಅವರು ಸ್ವಾಗತ ಮಾಡಿದ್ದಾರೆ. ಅವರಂತಹ ಸಂಸದರು ಹೆಚ್ಚಾಗಲಿಯೆಂದು ಆಶಿಸುತ್ತೇನೆ. ಬಿಜೆಪಿಯವರು ಮಾಡುವ ಟೀಕೆಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಅವರ ಟೀಕೆಗಳ ಬಗ್ಗೆ ನಾನು ಬೇಜಾರು ಮಾಡಿಕೊಳ್ಳುವುದಿಲ್ಲ. ಯಾವುದಕ್ಕೆ ಟೀಕೆ ಮಾಡಬೇಕು, ಮಾಡಬಾರದೆಂಬ ತಿಳುವಳಿಕೆ ಕಾಂಗ್ರೆಸ್–ಬಿಜೆಪಿ ಪಕ್ಷದವರಿಗೆ ಇರಬೇಕು ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ಕೇಸರಿ ಶಾಲು ಧರಿಸಿದ್ದಕ್ಕೆ ಟ್ರಾವಲ್ಸ್ ನ ಕೂಲಿ ಕಾರ್ಮಿಕ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಮೂವರು ಕಿಡಿಗೇಡಿಗಳನ್ನು ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲಾಸಿಪಾಳ್ಯ ಬಸ್‌‍ ನಿಲ್ದಾಣದ ಎ.ವಿ ರಸ್ತೆಯ ರಾಯಲ್‌ ಟ್ರಾವಲ್ಸ್ ಕಚೇರಿ ಬಳಿ ಕಳೆದ ರಾತ್ರಿ 9.30ರಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಗುರಪ್ಪನಪಾಳ್ಯದ ಅಜೀತ್‌ಖಾನ್‌ (37), ನಾಗವಾರಪಾಳ್ಯದ ತಬ್ರೇಜ್‌ (30) ಹಾಗೂ ಬನಶಂಕರಿಯ ಇಬ್ರಾನ್‌ ಖಾನ್‌(36) ಎಂಬುವವರನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಟ್ರಾವಲ್ಸ್ ಸಿಬ್ಬಂದಿ ಹರಿಕೃಷ್ಣ ಮತ್ತು ಕೂಲಿ ಕಾರ್ಮಿಕ ಸ್ಲಿಂಧರ್‌ ಕುಮಾರ್‌ ಎಂಬುವವರ ಮೇಲೆ ಹಲ್ಲೆ ನಡೆಸಿ ಆರೋಪಿಗಳು ಬೆದರಿಕೆ ಹಾಕಿ ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ರಾತ್ರಿ ಟ್ರಾವಲ್ಸ್ ಬಳಿ ಬಿಹಾರ ಮೂಲದ ಸ್ಲಿಂಧರ್‌ ಕುಮಾರ್‌ ಕೇಸರಿ ಶಾಲು ಹಾಕಿಕೊಂಡು ಕೆಲಸ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಆರೋಪಿಗಳು ನೀನು ಕೇಸರಿ ಶಾಲು ಹಾಕಿಕೊಂಡಿರುವುದು ಏಕೆ. ಅದನ್ನು ತೆಗೆದುಹಾಕು ಎಂದು ಬೆದರಿಸಿದ್ದಾರೆ. ಈ ವೇಳೆ ಮಾತಿನ ಚಕಮಕಿ…

Read More