Subscribe to Updates
Get the latest creative news from FooBar about art, design and business.
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
- ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ
- ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
Author: admin
ಬೆಂಗಳೂರು: ಹಿರಿಯ ಪತ್ರಕರ್ತ ಹಾಗು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ (93)ಅವರು ಇಂದು ನಿಧನರಾಗಿದ್ದಾರೆ . ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ.ರಾಮಯ್ಯ ಅವರು ವಿವಿಧ ಅಂಗಾಂಗ ವೈಫಲ್ಯದಿಂದಾಗಿ ಇಂದು ರಾತ್ರಿ 9 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಅಸುನೀಗಿದರು ಎಂದು ಅವರ ಪುತ್ರ ಡಾ.ಬಾಲಜಿ ತಿಳಿಸಿದ್ದಾರೆ . 1933 ಸೆಪ್ಟೆಂಬರ್ 12 ರಂದು ಜನಿಸಿದ ರಾಮಯ್ಯ ಅವರು ಇಬ್ಬರು ಪುತ್ರರು , ಓರ್ವ ಪುತ್ರಿ ಹಾಗು ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. “ದಿ ಹಿಂದೂ ” ಪತ್ರಿಕೆಯಲ್ಲಿ ಐದು ದಶಕಗಳ ಕಾಲ ವಿವಿಧ ಹುದ್ದೆಗಳಲ್ಲಿ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸಿದ್ದ ರಾಮಯ್ಯ ಅವರು ವಿಧಾನ ಪರಿಷತ್ತಿನ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ , ಕೆಯುಡಬ್ಲ್ಯೂಜೆ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು ಪತ್ರಿಕಾ ಅಕಾಡೆಮಿ ಹಾಗು ವಿವಿಧ ಪತ್ರಕರ್ತ ಕಲ್ಯಾಣ ಸಮಿತಿ ಸದಸ್ಯರಾಗಿದ್ದರು. ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ…
ಕೊರಟಗೆರೆ : ಸಿದ್ದರಬೆಟ್ಟದಲ್ಲಿ ಈ ಇದೇ ಮೊದಲ ಬಾರಿಗೆ ಶಿವರಾತ್ರಿ ಹಬ್ಬದ ಜಾಗರಣೆಯನ್ನ ಧರ್ಮ ಪ್ರಚಾರ, ಧರ್ಮದ ಜಾಗೃತಿ, ಹಾಗೂ ಜನರಿಗೆ ಆಧ್ಯಾತ್ಮಿಕ ಚಿಂತನೆಯನ್ನ ಮೂಡಿಸಬೇಕು ಎಂದು ಸಿದ್ದರಬೆಟ್ಟದಲ್ಲಿ ಅದ್ದೂರಿ ಜಾಗರಣೆ ಮಹೋತ್ಸವ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆ ಹೊನ್ನೂರು ಖಾಸಾಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ಸಿ.ಎನ್.ದುರ್ಗ ಹೋಬಳಿಯ ಸಿದ್ದರಬೆಟ್ಟ ಶ್ರೀ ಕ್ಷೇತ್ರದ ಬಾಳೆ ಹೊನ್ನೂರು ಖಾಸಾ ಶಾಖಾ ಮಠದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನಮ್ಮ ಗ್ರಾಮೀಣ ಭಾಗದಲ್ಲಿ ಇದೇ ಪ್ರಥಮ ಬಾರಿಗೆ ಶ್ರೀ ಮಠದಲ್ಲಿ ಶಿವರಾತ್ರಿ ಹಬ್ಬದಂದು ಜಾಗರಣೆ ಮಾಡುವ ವಿಶೇಷ ಕಾರ್ಯಕ್ರಮಗಳನ್ನ ಎಲೆರಾಂಪುರ ಶ್ರೀಗಳು ಮಾರ್ಗದರ್ಶನ ಹಾಗೂ ಯುವ ಉದ್ಯಮಿ ಹಾಗೂ ಪರ್ವ ಗ್ರೂಪ್ ನ ಅಧ್ಯಕ್ಷರಾದ ನಿಲೇಶ್ ಅವರ ನೇತೃತ್ವದಲ್ಲಿ ಈ ಜಾಗರಣಾ ಮಹೋತ್ಸವವನ್ನ ಏರ್ಪಡಿಸಲಾಗಿದ್ದು, ಹಬ್ಬದ ದಿನದಂದು ಸಂಜೆ 6 ಗಂಟೆಗೆ ಪ್ರಾರಂಭವಾದ ಕಾರ್ಯಕ್ರಮ ಬೆಳಗಿನ ಜಾವದವರೆಗೂ ನಡೆಯಲಿದೆ. ಶಿವರಾತ್ರಿ ಹಬ್ಬದಂದು ಜಾಗರಣೆಗೆ…
ತಿಪಟೂರು: ಸಮಾಜದ ಕಟ್ಟಕಡೆಯ ನಿರ್ಗತಿಕರಿಗೂ ನೆರವಾಗುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹತ್ವದ ಹೆಜ್ಜೆ ಇರಿಸಿದೆ. ತಿಪಟೂರು ನಗರ ಹಾಗೂ ಗ್ರಾಮಾಂತರ ತಾಲೂಕಿನ ಒಟ್ಟು 201 ನಿರ್ಗತಿಕ ಫಲಾನುಭವಿಗಳಿಗೆ ಪ್ರತಿ ತಿಂಗಳು 1000 ರೂ.ಗಳಂತೆ ಜೀವನ ನಿರ್ವಹಣಾ ಮಾಶಾಸನ ನೀಡಲಾಗುತ್ತಿದೆ. ಇದರೊಂದಿಗೆ, ಯೋಜನೆಯಡಿ ಈಗಾಗಲೇ ಈ ಎರಡು ತಾಲೂಕುಗಳಲ್ಲಿ 10 ‘ವಾತ್ಸಲ್ಯ ಮನೆ’ಗಳನ್ನು ನಿರ್ಮಿಸಲಾಗಿದ್ದು, 2 ಮನೆಗಳ ದುರಸ್ತಿ ಕಾರ್ಯ ಪೂರ್ಣಗೊಂಡಿದೆ. ಅಲ್ಲದೆ, ಮೂವರು ಫಲಾನುಭವಿಗಳಿಗೆ ಸೋಲಾರ್ ಸೌಲಭ್ಯ ಹಾಗೂ ಒಬ್ಬರಿಗೆ ಶೌಚಾಲಯ ನಿರ್ಮಾಣ ಮಾಡಿಕೊಡುವ ಮೂಲಕ ಮೂಲಸೌಕರ್ಯ ಒದಗಿಸಲಾಗಿದೆ. ವಾತ್ಸಲ್ಯ ಕಿಟ್ ವಿತರಣೆ: ಇಂದು ನಡೆದ ವಿಶೇಷ ಕಾರ್ಯಕ್ರಮದಲ್ಲಿ, ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಅವರು ಮಂಜೂರು ಮಾಡಿರುವ ‘ವಾತ್ಸಲ್ಯ ಕಿಟ್’ಗಳನ್ನು 40 ಮಂದಿ ಮಾಶಾಸನ ಫಲಾನುಭವಿಗಳಿಗೆ ವಿತರಿಸಲಾಯಿತು. ಕಿಟ್ ನಲ್ಲಿರುವ ಸಾಮಗ್ರಿಗಳು: ದಿನಬಳಕೆಗೆ ಅಗತ್ಯವಾದ ಪಾತ್ರೆಗಳು, ಸೀರೆ, ಲಂಗ, ಹೊದಿಕೆ, ದಿಂಬು, ಚಾಪೆ,…
ಮಧುಗಿರಿ : ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳ ನಿರ್ಲಕ್ಷಕ್ಕೆ ಬೇಸತ್ತಿರುವ ಶಾಸಕ ಕೆ.ಎನ್.ರಾಜಣ್ಣ ಕೆಡಿಪಿ ಸಭೆಯಲ್ಲಿ ಡಿಸಿ ಶುಭ ಕಲ್ಯಾಣ್ ಎದುರೇ ಹರಿ ಹಾಯ್ದಿದ್ದು ನಮ್ಮಲಿರುವ ಅಧಿಕಾರಿಗಳು ಯುಸ್ ಲೆಸ್ ಅಧಿಕಾರಿಗಳು. ನಿಮ್ಮ ನಡವಳಿಕೆ ಹೀಗೆ ಮುಂದುವರೆದರೇ ಎಲ್ಲರನ್ನು ಮಾರ್ಚ್ ನಲ್ಲಿ ವರ್ಗಾವಣೆ ಮಾಡಿಸುತ್ತೇನೆ ಎಂದು ಗುಡುಗಿದರು. ಅಧಿಕಾರಿಗಳ ಉದಾಸೀನ ವರ್ತನೆ: ಪಟ್ಟಣದ ತಾ.ಪಂ. ಕಛೇರಿಯಲ್ಲಿ ನಡೆದ ಕೆ.ಡಿ.ಪಿ ಸಭೆಯಲ್ಲಿ ಅಧಿಕಾರಿಗಳ ಉದಾಸೀನ ವರ್ತನೆಗೆ ಆಕ್ರೋಶಗೊಂಡು, ಒಬ್ಬ ರೈತ ಲಂಚವಿಲ್ಲ ಎಂದು ಮೂಲಂಗಿ ತಂದು ಪ್ರತಿಭಟನೆ ಮಾಡುತ್ತಾನೆ ಎಂದರೆ ಯಾರಿಗೆ ಅಪಮಾನ. ಇಂತಹ ವರ್ತನೆ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳು ಕೇವಲ ಪತ್ರ ವ್ಯವಹಾರದಲ್ಲೇ ವರ್ಷಾನುಗಟ್ಟಲೆ ಸಮಯವನ್ನು ಹಾಳು ಮಾಡುತ್ತಾ ಹಣವಿದ್ದರೂ ಕೆಲಸ ಮಾಡಲು ಉದಾಸೀನ ಮಾಡುತ್ತಿದ್ದೀರಾ, ಅಂತಹವರನ್ನು ಕ್ಷೇತ್ರದಿಂದ ಆಚೆ ಕಳಿಸುವುದಾಗಿ ಎಚ್ಚರಿಸಿ, ಲೋಕೋಪಯೋಗಿ ಇಲಾಖೆಯ ರಸ್ತೆಯಲ್ಲಿ ಅಕ್ರಮವಾಗಿ ಇಟ್ಟುಕೊಂಡಿರುವ ಗೂಡಂಗಡಿಗಳನ್ನು ಕಡ್ಡಾಯವಾಗಿ ತೆರವುಗೊಳಿಸಬೇಕು. ಅವರಗಲ್ಲು ರಸ್ತೆಯ ಅಭಿವೃದ್ಧಿ ಕಾರ್ಯಕ್ಕೆ ಇನ್ನು ಮೀನಾ ಮೇಷ…
ಕೊರಟಗೆರೆ: ಕಳೆದ ಕೆಲವು ತಿಂಗಳಿಂದ ಕಾವಲುಬೀಳು ಗ್ರಾಮಸ್ಥರಿಗೆ ನಿದ್ದೆಗೆಡಿಸಿದ ಚಿರತೆ ಅರಣ್ಯ ಅಧಿಕಾರಿಗಳು ಇಟ್ಟ ಬೋನಿಗೆ ಸೋಮವಾರ ಬಿದ್ದಿದೆ. ಕೊರಟಗೆರೆ ಪಟ್ಟಣದ ಹೊರವಲಯದ ಕಾವಲುಬೀಳು ಗ್ರಾಮದ ಜನತೆಗೆ ಬೆಚ್ಚಿಬೀಳುಸುತ್ತಿದ್ದ ಚಿರತೆಗಳ ಹಾವಳಿಂದಾಗಿ ಅಲ್ಲಿನ ರೈತರು ಹಾಗೂ ಸಾರ್ವಜನಿಕರ ಭಯದ ವಾತಾವರಣ ನಿರ್ಮಾಣವಾಗಿತ್ತು. ಕಳೆದ ಕೆಲವು ದಿನಗಳ ಹಿಂದೆ ಮನೆ ಮುಂದೆ ಇದ್ದ ಸಾಕು ನಾಯಿನ ಹೋತ್ತುಕೊಂಡು ಹೋಗಲು ಬಂದಿದ್ದ ಎರಡು ಚಿರತೆಯನ್ನ ಕಂಡ ಮನೆಯವರು ಜೋರಾಗಿ ಶಬ್ದ ಮಾಡಿದ ಕಾರಣ ಓಡಿ ಹೋಗಿತ್ತು. ನಂತರ ಅರಣ್ಯ ಅಧಿಕಾರಿಗಳು ಬೋನನ್ನ ಇಟ್ಟು ಒಂದು ಚಿರತೆಯನ್ನ ಹಿಡಿದು ಹೊರಗಡೆ ಬಿಡಲಾಗಿತ್ತು. ಮತ್ತೆ ಇನ್ನೊಂದು ಚಿರತೆಯ ಸೆರೆಗಾಗಿ ಬೋನ್ ಇಡಲಾಗಿತ್ತು. ಮತ್ತೆ ಸುಮಾರು 4 ವರ್ಷದ ಚಿರತೆ ಅರಣ್ಯ ಅಧಿಕಾರಿಗಳು ಇಟ್ಟ ಬೋನಿಗೆ ಬಿದ್ದಿದ್ದು, ಇಲ್ಲಿನ ರೈತರ ಹಾಗೂ ಸಾರ್ವಜನಿಕರಿಗೆ ಸಂತಸ ತಂದಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಬೇಟಿ ನೀಡಿ ಚಿರತೆಯನ್ನ ಬೇರೆಡೆ ಅರಣ್ಯಕ್ಕೆ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕೊರಟಗೆರೆ ಪಟ್ಟಣದ ಹೊರವಲಯದ ಕಾವಲುಬೀಳು…
ಕೊರಟಗೆರೆ: ಕೇಂದ್ರ ಸರ್ಕಾರ ನರೇಗಾ ಯೋಜನೆ, ವಿಕಸಿತ್ ಭಾರತ್ ರೋಜಗಾರ್ ಮತ್ತು ಅಜೀವಕಾ ಮಿಷನ್ ಕಾಯ್ದೆ 2025 ಎಂದು ಬದಲಾಯಿಸಿ ಹೊಸ ಕಾಯ್ದೆಗಳನ್ನ ಜಾರಿಗೆ ತಂದಿರುವುದರ ವಿರುದ್ದ ಫೆ.12 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ರಂಗಹನುಮಯ್ಯ ತಿಳಿಸಿದರು. ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ರೈತ ಸಂಘ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಕುರಿತಾಗಿ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಿದರು. ಕೇಂದ್ರದಲ್ಲಿ ಮೂರು ಬಾರಿ ಅಧಿಕಾರ ಹಿಡಿದಿರುವ ನರೇಂದ್ರ ಮೋದಿ ಸರ್ಕಾರ ೨೦೨೫ರಲ್ಲಿ ನವಂಬರ್‌ನಲ್ಲಿ ೪ ಕಾರ್ಮಿಕ ವಿರೋಧಿ ಕಾಯ್ದೆಗಳನ್ನ ಜಾರಿಗೆ ತಂದಿದ್ದು, ಇದರ ಜೊತೆಗೆ ನರೇಗಾ ಯೋಜನೆ ಮತ್ತೆ ಚಾಲನೆ ನೀಡುವುದು, ಭೂ ಸ್ವಾಧೀನ ಕಾಯ್ದೆಯನ್ನ ಹಿಂಪಡೆಯಬೇಕು, ಎಪಿಎಂಸಿ ಕಾಯ್ದೆ, ಜಾನುವಾರು ಸಂರಕ್ಷಣಾ ತಿದ್ದುಪಡಿ, ವಿದ್ಯುತ್ ಖಾಸಗಿಕರಣ ಕೈ ಬಿಡಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರ ಹಮ್ಮಿಕೊಂಡಿದ್ದು ಸಾರ್ವಜನಿಕರ…
ಗುಬ್ಬಿ: ಸಿಎಂ ಬದಲಾವಣೆ ಮಾಡೋದು ಬಿಡೋದು ಹೈಕಮಾಂಡ್ ಬಿಟ್ಟ ವಿಚಾರ ಆದರೆ ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು. ಗುಬ್ಬಿ ತಾಲೂಕಿನ ಬಿದರೆ, ಕಾಶಿ ಮಠ ನಿಂಬೆ ಕಟ್ಟೆ ಹಾಗೂ ಮಾರನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಪಕ್ಷದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಹುಸೇನ್ ಇಕ್ಬಾಲ್ ಹಾಗೂ ಯತೀಂದ್ರ ಅವರ ವೈಯಕ್ತಿಕವಾಗಿ ಹೇಳಿದಾರೆ. ಆದರೆ ಯಾರು ಏನೇ ಹೇಳಿದರೂ ಸಿಎಂ ಬದಲಾವಣೆ ಮಾಡೋದು ಬಿಡೋದು ಹೈಕಮಾಂಡ್ ಬಿಟ್ಟ ವಿಚಾರ, ಆದರೆ ಅವರ ಹೇಳಿಕೆಗಳನ್ನು ಅವರು ಹೇಳಿಕೊಂಡಿದ್ದಾರೆ ಎಂದು ಯತೀಂದ್ರ ಹಾಗೂ ಹುಸೇನ್ ಇಕ್ಬಾಲ್ ಅವರನ್ನು ಸಮರ್ಥಿಸಿಕೊಂಡರು. ಅಧಿವೇಶನದಲ್ಲಿ ಶಿವಲಿಂಗೇಗೌಡರು ಹಿರಿಯ ರಾಜಕಾರಣಿ, ಆದರೆ ಒಂದು ವರ್ಷದಿಂದಲೂ ಶಿವಲಿಂಗೇಗೌಡರ ಬಗ್ಗೆ ಅಧಿವೇಶದಲ್ಲಿ ಕೊಬ್ಬರಿ ಕಳ್ಳ ಅಂತ ಹೇಳಿದ್ದರು. ಮಂಗಳೂರು ಕಡೆಯವರು ಮೂರು ನಾಲ್ಕು ಜನ ಶಾಸಕರು ಹೊಸದಾಗಿ ಗೆದ್ದಿದ್ದಾರೆ ಅವರು ಶಿವಲಿಂಗೇಗೌಡರನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದಾರೆ . ಅದಕ್ಕೆ ಶಿವಗಂಗೆ…
ಕೊರಟಗೆರೆ: ಹಿಂದೂ ಎನ್ನುವುದು ಕೇವಲ ಒಂದು ಧರ್ಮವಲ್ಲ; ಅದು ಜೀವನ ದರ್ಶನ, ಬದುಕುವ ಸಂಸ್ಕೃತಿ ಎಂದು ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಹಿಂದೂ ಸಮಾಜೋತ್ಸವದ ಭವ್ಯ ಮೆರವಣಿಗೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಮಾನವೀಯತೆ, ಸಹಜತೆ, ಸಹಬಾಳ್ವೆ, ಧರ್ಮಪಾಲನೆ ಈ ಎಲ್ಲವೂ ಹಿಂದೂ ಜೀವನ ಪದ್ಧತಿಯ ಮೂಲಭೂತ ಮೌಲ್ಯಗಳು. ಧರ್ಮವನ್ನು ನಾವು ರಕ್ಷಿಸಿದರೆ, ಧರ್ಮವು ನಮ್ಮನ್ನು ರಕ್ಷಿಸುತ್ತದೆ ಎಂಬ ಸನಾತನ ಸತ್ಯವನ್ನು ಹಿಂದೂ ಧರ್ಮ ಸಾರುತ್ತದೆ. ಇಂದಿನ ಕಾಲಘಟ್ಟದಲ್ಲಿ ಹಿಂದೂ ಸಮಾಜವು ಒಗ್ಗಟ್ಟಾಗಿ ನಿಲ್ಲುವ ಅಗತ್ಯ ಬಹಳವಾಗಿದೆ. ಜಾತಿ ಪಂಥಗಳ ಭೇದ ಮರೆತು, ಹಿಂದೂಗಳೆಲ್ಲೂ ಒಂದೇ ಕುಟುಂಬ ಎಂಬ ಭಾವನೆಯೊಂದಿಗೆ ಧರ್ಮರಕ್ಷಣೆಗಾಗಿ ಪಣತೊಟ್ಟು ನಿಲ್ಲಬೇಕು. ಧರ್ಮರಕ್ಷಣೆ ನಮ್ಮ ಉಸಿರಾಗಬೇಕು, ನಮ್ಮ ದೇಹದ ಭಾಗವಾಗಬೇಕು ಎಂದು ಅವರು ಹೇಳಿದರು. ಹಿರಿಯ ಪ್ರಾಧ್ಯಾಪಕ ಕೊಟ್ಟೇಶ್ ಮಾತನಾಡಿ, ಹಿಂದೂ ಧರ್ಮವು ಸಾವಿರಾರು ವರ್ಷಗಳಿಂದ ಮಾನವ ಬದುಕಿಗೆ ದಿಕ್ಕು ದೆಶೆ ತೋರಿದೆ. ಸಂಸ್ಕೃತಿ, ಸಹಿಷ್ಣುತೆ, ಸಮನ್ವಯ, ಸರ್ವಧರ್ಮ ಸಮಭಾವನೆ ಹಿಂದೂ ಧರ್ಮದ ಆತ್ಮ.…
ತುಮಕೂರು: ಈಗ ಭೂಮಿಯ ಬೆಲೆ ಚಿನ್ನದ ಬೆಲೆಯಾಗಿದೆ. ರೈತರು ತಮ್ಮ ಜಮೀನು ಮಾರಾಟ ಮಾಡಿಕೊಳ್ಳಬೇಡಿ, ಮಕ್ಕಳ ಮದುವೆ ಅಥವಾ ಸಂಸಾರದ ಸಮಸ್ಯೆಗಳಿಗೆಂದು ಜಮೀನು ಮಾರಿಕೊಂಡರೆ ಮತ್ತೆ ಗಳಿಸುವುದು ಕಷ್ಟವಾಗುತ್ತದೆ ಎಂದು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್ ಗೌಡ ರೈತರಿಗೆ ಕಿವಿಮಾತು ಹೇಳಿದರು. ಕ್ಷೇತ್ರದ ನಾಗವಲ್ಲಿಯಲ್ಲಿ ಕೊಳವೆ ಬಾವಿ ಕೊರೆಸಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ಸಣ್ಣ ನೀರಾವರಿ ಇಲಾಖೆಯಿಂದ ಪಂಪು, ಮೋಟಾರ್ ವಿತರಣೆ ಮಾಡಿ ಮಾತನಾಡಿದ ಶಾಸಕರು, ಈ ಭಾಗದಲ್ಲಿ ಬಹುತೇಕ ಕೆರೆಗಳು ತುಂಬಿ ಅಂತರ್ಜಲ ಮಟ್ಟದ ಹೆಚ್ಚಾಗಿದೆ. ರೈತರು ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಯಾವುದೇ ಕಾರಣಕ್ಕೂ ತಮ್ಮ ಜಮೀನು ಮಾರದೆ ಉಳಿಸಿಕೊಂಡು ವ್ಯವಸಾಯ ಮುಂದುವರೆಸಿ ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದರೂ ತಮ್ಮ ಕ್ಷೇತ್ರಕ್ಕೆ ಬೇಕಾದ ಅನುದಾನ ತರಲು ಪರಿಶ್ರಮ ಪಡುತ್ತಿದ್ದೇನೆ. ಕೇಂದ್ರ ಸಚಿವ ವಿ.ಸೋಮಣ್ಣ, ರಾಜ್ಯದ ಸಣ್ಣ ನೀರಾವರಿ ಖಾತೆ ಸಚಿವ ಬೋಸರಾಜು ಅವರು ಸಹಕಾರದಿಂದ ಕ್ಷೇತ್ರದ ಫಲಾನುಭವಿಗಳಿಗೆ ಪಂಪು, ಮೋಟಾರ್ ಮಂಜೂರು…
ತುರುವೇಕೆರೆ: ಸಮಾಜ ಸೇವೆಗೆ ಜಾತಿ ಮುಖ್ಯವಾಗಬಾರದು, ನಾವು ಮಾಡುವ ಸೇವೆ ಮುಖ್ಯವಾಗಬೇಕು ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು. ಗುರು ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನೋಳಂಬ ಲಿಂಗಾಯತ ಉಪ ಸಮಿತಿ ವತಿಯಿಂದ ಹಾಗೂ ಶಾಸಕ ಅನುದಾನ ಸುಮಾರು 35 ಲಕ್ಷ ರೂ. ವೆಚ್ಚದಲ್ಲಿ ನೂತನ ಗಣಪತಿ ಆಲಯ ಮತ್ತು ಶೌಚಾಲಯ ನಿರ್ಮಾಣಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಸಮುದಾಯ ಭವನಗಳಲ್ಲಿ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಉತ್ತಮವಾದ ಹೈಟೆಕ್ ಶೌಚಾಲಯ ನಿರ್ಮಾಣ ಮಾಡಿ. ದಂಡಿನಶಿವಪ್ಪ ರಸ್ತೆಯ ಸಾರಿಗೆಹಳ್ಳಿ ಕೆರೆಕೋಡಿಗೆ ಸುಮಾರು 4 ಕೋಟಿ 50 ಲಕ್ಷ ರೂ. ವೆಚ್ಚದಲ್ಲಿ ಬ್ರಿಡ್ಜ್ ನಿರ್ಮಾಣ ಮಾಡಲು ಅನುದಾನ ನೀಡಲಾಗಿದೆ. ಆದರೆ ಕೆಲವು ತಾಂತ್ರಿಕ ತೊಡಕುಗಳಿಂದ ಕಾಮಗಾರಿ ತಡವಾಗಿದ್ದು, ಸದ್ಯದಲ್ಲಿಯೇ ಪ್ರಾರಂಭವಾಗಲಿದೆ ಎಂದರು. ಈ ಸಂದರ್ಭದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಬಿ.ಧರಣೇಶ್ ಹಾಗೂ ಪಿಎಲ್.ಡಿ ಬ್ಯಾಂಕ್ ನಿರ್ದೇಶಕ ಮಾಚೇನಹಳ್ಳಿ ಲೋಕೇಶ್ ರನ್ನು ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಅಧ್ಯಕ್ಷತೆಯನ್ನು ನೋಳಂಬ ಲಿಂಗಾಯತ…