Subscribe to Updates
Get the latest creative news from FooBar about art, design and business.
- ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
- ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
- ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್ ಬುಕ್ ವಿತರಣೆ
- ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ
- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
- ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
- 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
- ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ
Author: admin
ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡು ಹಾರಿಸಿದ ಆರೋಪಿಗಳಾದ ಬಿಹಾರ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಅವರನ್ನು ಗುಜರಾತ್‌ನಿಂದ ಬಂಧಿಸಲಾಗಿದೆ. ಅವರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಗೆ ಸಂಬಂಧಿಸಿದವರು ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ತಿಂಗಳ 14ರಂದು ಶೂಟಿಂಗ್ ನಡೆದಿತ್ತು. ಬೈಕ್ ನಲ್ಲಿ ಬಂದ ಅಪರಿಚಿತರು ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ರಾಮ ನವಮಿಯ ಆಚರಣೆಯ ಕಾರಣದಿಂದ ಬುಧವಾರ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ. ರಾಮನವಮಿನಯ ಕಾರಣ ಮಾಂಸ ಮಾರಾಣ, ಪ್ರಾಣಿ ಹತ್ಯೆಯನ್ನು ನಿಷೇಧ ಮಾಡಲಾಗಿದ್ದು, ಈ ಕುರಿತು ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ಆದೇಶ ಹೊರಡಿಸಿದೆ. ಚೈತ್ರ ನವರಾತ್ರಿ ರಾಮ ನವಮಿಯೊಂದಿಗೆ ಕೊನೆಗೊಳ್ಳುವ ಕಾರಣ ರಾಮನವಮಿಯಂದು ಶ್ರೀರಾಮನ ವಿಶೇಷ ಪೂಜೆ ಮಾಡಲಾಗುವುದು. ನವಮಿ ತಿಥಿ ಎಪ್ರಿಲ್ 17 ರಂದು ಮಧ್ಯಾಹ್ನ 3.15 ಕ್ಕೆ ಕೊನೆಗೊಳ್ಳುತ್ತದೆ. ಧಾರ್ಮಿಕ ನಂಬಿಕೆಯ ಅನುಸಾರ, ವಿಷ್ಣು ತನ್ನ ಏಳನೇ ಅವತಾರವಾಗಿ ರಾಮನಾಗಿ ಜನಿಸಿದ್ದು, ಅಯೋಧ್ಯೆಯ ರಾಜ ದಶರಥನ ಹಿರಿಯ ಮಗನಾಗಿ ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಜನಿಸಿರುವುದಾಗಿ ಹೇಳಿಕೆ ಇದೆ. ಈ ಕಾರಣದಿಂದ ಪ್ರತಿ ವರ್ಷ ರಾಮನವಮಿ ಹಬ್ಬವನ್ನು ಭಗವಾನ್ ರಾಮನ ಜನ್ಮದಿನವನ್ನಾಗಿ ಆಚರಿಸಲಾಗುವುದು. ರಾಮ ನವಮಿಯ ಕಾರಣ ನಗರದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ಹತ್ಯೆಯನ್ನು ನಿಷೇಧಿಸಲಾಗಿದೆ ಎಂದು ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ…
ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ಹಿರಿಯ ನಟ ನಿರ್ಮಾಪಕ ದ್ವಾರಕೀಶ್ ಇಂದು ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದ ದ್ವಾರಕೀಶ್ ಅವರ ನಿಧನ ಚಿತ್ರರಂಗಕ್ಕೆ ಆಘಾತವನ್ನುಂಟು ಮಾಡಿದೆ. ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಮಲಗಿದವರಿಗೆ ಹೃದಯಾಘಾತ ಆಗಿದೆ ಎಂದು ದ್ವಾರಕೀಶ್ ಪುತ್ರ ಯೋಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ದ್ವಾರಕೀಶ್ ಅವರ ನಿಧನದ ಸುದ್ದಿ ಕೇಳಿ ಕನ್ನಡ ಚಿತ್ರರಂಗದ ಗಣ್ಯರು ಅವರ ಮನೆಯತ್ತ ಧಾವಿಸಿದ್ದಾರೆ. ಹಿರಿಯ ನಟನ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಏ.24ಕ್ಕೆ ವೀರಾಂಜನೇಯ ಸ್ವಾಮಿಯ ಬ್ರಹ್ಮರಥೋತ್ಸವ ಕಾರ್ಯಕ್ರಮವು ಅದ್ದೂರಿಯಾಗಿ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಶ್ರೀಕ್ಷೇತ್ರ ಸೀಗೇಪಾಳ್ಯದಲ್ಲಿ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು ಸಾವಿರಾರು ಭಕ್ತರು ಸೇರುವ ನಿರೀಕ್ಷೆ ಇದೆ. ಇದಕ್ಕೂ ಮೊದಲು ಏ.23ಕ್ಕೆ ಮಂಗಳವಾರ ಗೋಧೂಳಿ ಲಗ್ನದಲ್ಲಿ ಗಣಪತಿ ಪೂಜೆ, ಗಂಗೆಪೂಜೆ, ರುದ್ರಾಭಿಷೇಕ ಹೋಮ, ಪೂರ್ಣಾಹುತಿ, ಶ್ರೀ ಸ್ವಾಮಿಯವರ ವಿಶೇಷ ಅಲಂಕಾರ, ಮಹಾ ಮಂಗಳಾರತಿ ಪ್ರಸಾದ ವಿನಿಯೋಗ ನಡೆಯಲಿದೆ. ರಾತ್ರಿ 10.30ಕ್ಕೆ ಶ್ರೀ ಸ್ವಾಮಿಯವರ ‘ಮೊಗ್ಗಿನ ಪಲ್ಲಕ್ಕಿ ಉತ್ಸವ’ ನಡೆಯಲಿದೆ. ಬಳಿಕ ಮ್ಯೂಸಿಕ್ ಕಿಂಗ್ ರಂಗಮುತ್ತು ಜಕ್ಕೇನಹಳ್ಳಿ , ತಬಲ ಮಾರುತಿ , ಕ್ಯಾಶಿಯೋ ಗಣೇಶ್ ತಂಡದವರಿಂದ ‘ಶ್ರೀ ಮಾರುತಿ ವಿಜಯ’ ಪೌರಾಣಿಕ ಹರಿಕಥೆ ಏರ್ಪಡಿಸಲಾಗಿದೆ. ಏ.24ಕ್ಕೆ ಬೆಳಗ್ಗೆ ಏಳು ಗಂಟೆಯಿಂದ ಗ್ರಾಮಸ್ಥರಿಂದ ಆರತಿ ಸೇವೆ, ಪೂಜಾ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗೆ 11 ರಿಂದ 12ರ ತನಕ ಶ್ರೀ ದೇವಾನ್ ದೇವತೆಗಳ ಕುಟೀರ ಹಾಗೂ ಶ್ರೀ ಶಿವಲಿಂಗಸಮೇತ ವಜ್ರಾಯುಧದ ವೀರಾಂಜನೇಯ ಸ್ವಾಮಿಯ ಎಂಟನೇ ವರ್ಷದ ಬ್ರಹ್ಮರಥೋತ್ಸವವನ್ನು ಏರ್ಪಡಿಸಲಾಗಿದೆ.…
ಪತ್ನಿಗೆ ಇಂಗ್ಲಿಷ್ ಬರಲ್ಲ ಎಂಬ ಕಾರಣಕ್ಕಾಗಿ ಪತಿ ಮಡದಿಯನ್ನೇ ಬೇಡ ಎಂದು ಹಠ ಹಿಡಿದಿದ್ದಾರೆ. ಇವರದ್ದು ಪ್ರೇಮವಿವಾಹ. ಅದೂ ಮೂರು ತಿಂಗಳ ಹಿಂದಷ್ಟೇ ಸಪ್ತಪದಿ ತುಳಿದಿದ್ದರು ಎನ್ನಲಾಗಿದೆ. ಮೂರು ತಿಂಗಳ ಹಿಂದಷ್ಟೇ ಪ್ರೀತಿಸಿ ವಿವಾಹವಾದ ಜೋಡಿ ಇದೀಗ ಇಲ್ಲಿನ ಕೌಟುಂಬಿಕ ಸಲಹಾ ಕೇಂದ್ರದ ಮೆಟ್ಟಿಲೇರಿದ್ದಾರೆ. ಇಬ್ಬರ ಮಧ್ಯೆ ಅಂತ ದೊಡ್ಡ ಸಮಸ್ಯೆಯೇನೂ ಇಲ್ಲದಿದ್ದರೂ ಸಂವಹನ ನಡೆಸಲು ಬೇಕಾದ ಭಾಷೆಯೇ ಇವರಿಗೆ ಅಡ್ಡಿಯಾಗಿದೆ. ಪತ್ನಿ ಹಿಂದಿಯಲ್ಲಿ ಪಂಟರ್. ಪತಿಗೆ ಆಕೆ ಇಂಗ್ಲಿಷ್ ನಲ್ಲೇ ಮಾತನಾಡಬೇಕು ಎಂಬ ಹಠ. ಇದೊಂದೇ ಕಾರಣ, ನವದಂಪತಿ ನಡುವೆ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ. ಪ್ರೀತಿಯ ದ್ಯೋತಕ ತಾಜ್ ಮಹಲ್ ಇರುವ ಆಗ್ರಾದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಪ್ರೀತಿಸಿ ವಿವಾಹವಾಗಿದ್ದ ದಂಪತಿ ನಡುವೆ ಭಾಷೆ ಅಂತರ ಮೂಡಲು ಕಾರಣವಾಗಿದೆ. ಖಾಸಗಿ ಬ್ಯಾಂಕ್ ನ ಉದ್ಯೋಗಿಯಾದ ಆತ, ತರಬೇತಿಗಾಗಿ ಆಗ್ರಾಕ್ಕೆ ಬಂದಾಗ ಯುವತಿ ಜೊತೆ ಪ್ರೇಮಾಂಕುರವಾಗಿತ್ತು. ಬಳಿಕ ಇಬ್ಬರೂ ಕುಟುಂಬಸ್ಥರನ್ನು ಒಪ್ಪಿಸಿ ಸಪ್ತಪದಿ ತುಳಿದಿದ್ದರು. ಸದ್ಯ ಭಾಷಾ ವಿವಾದದಿಂದ ಬೇಸತ್ತ…
ಹಣ, ಚಿನ್ನಾಭರಣ, ಬೆಳ್ಳಿ ಕಳ್ಳತನದ ಬಗ್ಗೆ ಕೇಳಿರುತ್ತೀರಾ. ಆದರೆ ಇಲ್ಲೊಬ್ಬಳು ಯುವತಿ ಕಬಾಬ್ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾಳೆ. ಸ್ಟೈಲ್ ಆಗಿ ಡ್ರೆಸ್ ಮಾಡಿಕೊಂಡು ದುಬಾರಿ ಅಂಗಡಿಗಳನ್ನೇ ಹುಡುಕಿ ಶಾಪಿಂಗ್ ಮಾಡುತ್ತಿದ್ದ ಯುವತಿಯನ್ನು ಏಕಾಏಕಿ ಒಂದು ಅಂಗಡಿಯೊಳಗೆ ಒಬ್ಬ ವ್ಯಕ್ತಿ ಬಂದು ಲಾಕ್ ಮಾಡಿದ್ದಾನೆ. ಆಕೆ ಎಷ್ಟೇ ಕಿರುಚಾಡಿದರೂ ಕೂಗಾಡಿದರೂ ಸಹ ಬಾಗಿಲು ತೆರೆಯದೇ ಆಕೆ ಹಾಗೂ ಆಕೆ ಜೊತೆಗಿರುವವರನ್ನು ಒಳಗಡೆಯೇ ಲಾಕ್ ಮಾಡಿದ್ದಾನೆ. ಆಕೆಯ ವರ್ತನೆ ಹಾಗೂ ಆಕೆಯನ್ನು ಕೂಡಿ ಹಾಕಿರುವುದನ್ನು ಕಂಡು ಸ್ಥಳದಲ್ಲಿದ್ದವರು ಅಚ್ಚರಿಗೊಂಡಿದ್ದಾರೆ. ಹಾಗೂ ನಡೆದ ಅಸಲಿ ಸಂಗತಿಯನ್ನು ವಿಚಾರಿಸಿದ್ದಾರೆ ಎನ್ನಲಾಗಿದೆ.ಅಷ್ಟು ಸ್ಟೈಲಿಶ್ ಆಗಿದ್ದ ಯುವತಿಯನ್ನು ಕೂಡಿ ಹಾಕಿರುವುದರ ಹಿಂದಿನ ವಿಚಾರ ತಿಳಿದು ಅಚ್ಚರಿಗೊಂಡರೂ ಸಹ ಕೆಲವರು ಜೋರಾಗಿ ನಕ್ಕು ಅಲ್ಲಿಂದ ಹೊರಟಿದ್ದಾರೆ. ಈ ಯುವತಿ ಮೂಲತಃ ಪಾಕಿಸ್ತಾನದವಳು ಎಂದು ಉಲ್ಲೇಖಿಸಲಾಗಿದೆ. ಪಾಕಿಸ್ತಾನದ ಈ ಯುವತಿ ಲಂಡನ್ ನ ಶಾಪ್ ವೊಂದರಲ್ಲಿ ಚಿಕನ್ ಕಬಾಬ್ ಕಳ್ಳತನ ಮಾಡಿ ಸಿಕ್ಕಿಹಾಕಿಕೊಂಡಿದ್ದಾಳೆ ಎನ್ನಲಾಗಿದೆ. ಲಂಡನ್ ನಲ್ಲಿನ ಅಂಗಡಿಯೊಂದರಲ್ಲಿ ಪಾಕಿಸ್ತಾನದ ಯುವತಿಯರು ವಸ್ತುಗಳನ್ನು…
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಮ್ಮ ಪುತ್ರ ಕೆ.ಇ.ಕಾಂತೇಶ್ ಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ನಿರಾಕರಿಸಿದ್ದರಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದು, ಇದೀಗ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಪಕ್ಷೇತ್ತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಬಿಎಸ್ ವೈ ಕುಟುಂಬದಿಂದ ಬಿಜೆಪಿಯನ್ನು ಮುಕ್ತಗೊಳಿಸಬೇಕು ಎಂದು ಪಣತೊಟ್ಟಿರುವ ಈಶ್ವರಪ್ಪ ಕಳೆದ ವಾರ ತಮ್ಮ ನಾಮಪತ್ರವನ್ನೂ ಸಲ್ಲಿಕೆ ಮಾಡಿದ್ದರು. ಇದರ ಬೆನ್ನಲ್ಲೇ ಬಿ.ವೈ.ರಾಘವೇಂದ್ರ ಮುಂದಿನ ದಿನಗಳಲ್ಲಿ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬ್ರಹ್ಮನೇ ಬಂದು ಹೇಳಿದರೂ ನಾನು ನಾಮಪತ್ರ ವಾಪಸ್ ಪಡೆಯುವುದಿಲ್ಲ ಎಂದು ಹೇಳಿದ್ದಾರೆ. ಈ ಹಿಂದೆ ಈಶ್ವರಪ್ಪರಿಗೆ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿತ್ತು. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈಶ್ವರಪ್ಪರ ಭೇಟಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಬೇಸರದಿಂದ ಬಂದಿದ್ದ ಈಶ್ವರಪ್ಪ ನಂತರ ನಾನು ಶಿವಮೊಗ್ಗದಿಂದ ಸ್ಪರ್ಧಿಸೇ ತೀರುತ್ತೇನೆ ಎಂದು ಹಠ ತೊಟ್ಟಿದ್ದಾರೆ. ಇನ್ನು ಈಶ್ವರಪ್ಪ ಮನವೊಲಿಕೆ ಮಾಡುವ…
ಕೊಡಗಿನಲ್ಲಿ ಕಾಡುಪ್ರಾಣಿಗಳ ದಾಳಿ ಹೆಚ್ಚಾಗುತ್ತಿದೆ. ಇತ್ತೀಚೆಗೆ ಹುಲಿ ಸೆರೆಹಿಡಿಯಲು ಹೋಗಿದ್ದಾಗ ಕಾರ್ಯಾಚರಣೆಗೆ ಬಂದಿದ್ದ ಆನೆ ಭೀಮ ಮತ್ತು ಸಿಬ್ಬಂದಿ ಮೇಲೆ ಹೆಜ್ಜೇನು ದಾಳಿ ನಡೆಸಿತ್ತು. ನೆನ್ನೆ ಕೊಡಗಿನಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ನಡೆಸಿದ ದಾಳಿಯಿಂದ ವಾಕಿಂಗ್ ಹೋಗಿದ್ದ ವ್ಯಕ್ತಿಯೊಬ್ಬರು ಕೊನೆಯುಸಿರೆಳೆದಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಬೀರುಗ ಗ್ರಾಮದ ಚಾಮುಂಡಿಕೊಲ್ಲಿ ರಸ್ತೆಯಲ್ಲಿ ಘಟನೆ ನಡೆದಿದೆ. ಅಯ್ಯಮಾಡ ಮಾದಯ್ಯ (63) ಕಾಡಾನೆ ಕಾಲ್ತುಳಿತಕ್ಕೆ ಸಿಕ್ಕಿ ಸಾವನ್ನಪ್ಪಿದ್ದಾರೆ. ಇವರು ಮುಂಜಾನೆ ಎಂದಿನಂತೆ ರಸ್ತೆಯಲ್ಲಿ ವಾಕಿಂಗ್ ಹೋಗುತ್ತಿದ್ದಾಗ, ಕಾಫಿ ತೋಟದ ನಡುವಿನಿಂದ ನುಗ್ಗಿಬಂದ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದಾರೆ. ಗ್ರಾಮ ಹಾಗೂ ಸುತ್ತಮುತ್ತಲಲ್ಲಿ ಆನೆಗಳ ಹಿಂಡು ಸಂಚಾರ ಮಾಡುತ್ತಿದೆ. ಇದರಿಂದ ಮನೆಯಿಂದ ಹೊರಬೀಳಲೂ ಭಯವಾಗುತ್ತಿದೆ. ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡು ಬಿಟ್ಟಿದ್ದು, ತೋಟದ ಕೆಲಸ ಮಾಡಲು ಕೂಲಿ ಕಾರ್ಮಿಕರು ಭಯಭೀತಿಯಿಂದಾಗಿ ಬರುತ್ತಿಲ್ಲ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಯನ್ನು ಆಗ್ರಹಿಸಿದ್ದಾರೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ…
ಬೆಳಗಾವಿ: ನೂರಕ್ಕೂ ಹೆಚ್ಚು ಗೂಂಡಾಗಳ ಮೂಲಕ ನನ್ನ ಹತ್ಯೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಬೆಂಬಲಿಗರ ವಿರುದ್ಧ ಮಾಜಿ ಶಾಸಕ ಸಂಜಯ್ ಪಾಟೀಲ್ ಬೆಳಗಾವಿ ಶಹಾಪೂರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅವಾಚ್ಛ ಶಬ್ಧಗಳಿಂದ ನಿಂದಿಸಿದ್ದು, ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಗಾಜಿನ ಬಾಟಲ್, ಕಲ್ಲುಗಳನ್ನು ಹಿಡಿದು ಮನೆಯೊಳಗೆ ನುಗ್ಗಲು ಯತ್ನಿಸಿದ್ದು, ಬೆಲೆಬಾಳುವ ವಸ್ತುಗಳನ್ನು ನಾಶ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದು, ಇದಕ್ಕೆಲ್ಲ ನೇರವಾಗಿ ಅವರೇ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ನಮ್ಮ ಸಿಬ್ಬಂದಿ ಮೇಲೂ ಹಲ್ಲೆ ಮಾಡಿದ್ದಾರೆ. ಹೀಗಾಗಿ ಪ್ರಚೋದನೆ ನೀಡಿದವರು ಮತ್ತು ನನ್ನ ಕೊಲೆಗೆ ಯತ್ನಿಸಿದವರು ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆಯಿಷಾ ಸನದಿ, ಸುಜಯ್ ಜಾಧವ್, ಜಯಶ್ರೀ ಸೂರ್ಯವಂಶಿ, ಪ್ರಭಾವತಿ ಮಾಸ್ತಮರಡಿ, ರೋಹಿಣಿಬಾಬ್ಟೆ, ಮುಷ್ತಾಕ್ ಮುಲ್ಲಾ, ಸದ್ದಾಂ, ಶಂಕರಗೌಡ ಪಾಟೀಲ, ಸಂಗನಗೌಡ ಪಾಟೀಲ್, ಭಾರತಿ ಸೇರಿ ನೂರಕ್ಕೂ ಅಧಿಕ…
ಚರ್ಚ್ ಒಂದರಲ್ಲಿ ಧರ್ಮೋಪದೇಶ ಸಮಾರಂಭ ನಡೆಯುತ್ತಿದ್ದಾಗ ಉಪದೇಶ ಮಾಡುತ್ತಿದ್ದ ಬಿಷಪ್ ಮೇಲೆ ಏಕಾಏಕಿ ಕಿಡಿಗೇಡಿಗಳು ಚೂರಿಯಿಂದ ದಾಳಿ ನಡೆಸಿದ್ದಾರೆ. ಸ್ಥಳದಲ್ಲಿ ಹಲವರಿಗೆ ಕಿಡಿಗೇಡಿಗಳು ಇರಿದಿದ್ದಾರೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ. ಸೋಮವಾರ ರಾತ್ರಿ ಈ ಘಟನೆ ಸಿಡ್ನಿಯಲ್ಲಿ ನಡೆದಿದೆ. ಘಟನೆ ಸಂಬಂಧ ಓರ್ವನನ್ನು ಬಂಧಿಸಲಾಗಿದ್ದು, ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಬಗ್ಗೆ ವರದಿಯಾಗಿಲ್ಲ. ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೇಕ್ಲಿಯಲ್ಲಿರುವ ಕ್ರೈಸ್ಟ್ ದಿ ಗುಡ್ ಶೆಫರ್ಡ್ ಚರ್ಚ್‌ನಲ್ಲಿ ಬಿಷಪ್ ಲೈವ್ ನಲ್ಲಿ ಧರ್ಮೋಪದೇಶ ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆದಿದ್ದು, ಇದರ ವಿಡಿಯೋ ಈಗ ವೈರಲ್ ಆಗಿದೆ. ಬಿಷಪ್ ಆರೋಗ್ಯ ಸ್ಥಿತಿ ಗಂಭೀರವಿದ್ದು, ಗಾಯಗೊಂಡವರಲ್ಲಿ 60, 50, 30 ಮತ್ತು 20 ವರ್ಷ ವಯಸ್ಸಿನ ನಾಲ್ವರು ಪುರುಷರಾಗಿದ್ದು, ಅವರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಸಿಡ್ನಿಯ ವೆಸ್ಟ್‌ಫೀಲ್ಡ್ ಬೋಂಡಿ ಜಂಕ್ಷನ್ ಶಾಪಿಂಗ್ ಸೆಂಟರ್‌ನಲ್ಲಿ ಆರು ಮಂದಿಯನ್ನು ಇರಿದು ಕೊಂದ ಮೂರು ದಿನಗಳ ಅಂತರದಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…