Subscribe to Updates
Get the latest creative news from FooBar about art, design and business.
- ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
- ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
- ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್ ಬುಕ್ ವಿತರಣೆ
- ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ
- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
- ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
- 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
- ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ
Author: admin
ಸರಗೂರು: ತಾಲ್ಲೂಕಿನ ಸಾಗರೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಅಂಬೇಡ್ಕರ್ ಜಯಂತಿ ಆಚರಣೆ ಹಿನ್ನೆಲೆ ಸಾಗರೆ ಗ್ರಾಮದಲ್ಲಿ ಸಡಗರ ಸಂಭ್ರಮ ನೆಲೆಸಿದ್ದು, ಎಲ್ಲೆಲ್ಲೂ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಅಂಬೇಡ್ಕರ್ ಅವರ ಭಾವ ಚಿತ್ರವನ್ನು ಬೆಳ್ಳಿ ರಥದಲ್ಲಿ ಕೂರಿಸಿ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಮನೆ ಮುಂಭಾಗದಲ್ಲಿ ರಂಗೋಲಿ ಹಾಗೂ ಮನೆಯ ಮುಂಭಾಗದಲ್ಲಿ ನೀಲಿ ಬಾವುಟವನ್ನು ಕಟ್ಟಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಭಾನುವಾರ ಬೆಳಿಗ್ಗೆಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ನಂತರ ಕಬಿನಿ ಬಲದಂಡೆ ನಾಲೆಯಿಂದ ಪೂಜೆ ಸಲ್ಲಿಸಿ, ನಂತರ ವಿವಿಧ ಕಲಾ ತಂಡಗಳಿಂದ ಹಾಗೂ ವಾದ್ಯಗೋಷ್ಠಿ ಮೂಲಕ ಮೆರವಣಿಗೆಯಲ್ಲಿ ಸಾಗಿ ಭವನ ಹತ್ತಿರದಲ್ಲಿರುವ ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಮೆರವಣಿಗೆಯಲ್ಲಿ ಶಾಲೆಯ ಮಕ್ಕಳು ಗ್ರಾಮದ ಯಜಮಾನರು ಹಾಗೂ ಮಹಿಳೆಯರು ಭಾಗಿಯಾಗಿದರು. ಮೆರವಣಿಗೆ ಮುನ್ನ ಗ್ರಾಮದಲ್ಲಿ ಅನ್ನದಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಯಜಮಾನರು ಹಾಗೂ ಸಂಘದ ಅಧ್ಯಕ್ಷ ಮತ್ತು ಸದಸ್ಯರು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಕೂಡಾ ಭಾಗವಹಿಸಿದ್ದರು. ವರದಿ:…
ಕೊರಟಗೆರೆ : ಮಕ್ಕಳ ಬೇಸಿಗೆ ರಜೆಯ ದಿನಗಳನ್ನು ಕಳೆಯಲು ಮಕ್ಕಳ ಪ್ರತಿಭೆಯನ್ನ ಹೆಚ್ಚಿಸಲು ಇಂದೇ ನಿಮ್ಮ ಮಕ್ಕಳನ್ನ ಕೊರಟಗೆರೆಯ ಆರ್ ಆರ್ ಸಮ್ಮರ್ ಕ್ಯಾಂಪ್ ಗೆ ಸೇರಿಸಿ ಎಂದು ಟ್ರೈನಿಂಗ್ ಸ್ಕೂಲ್ ಶಿಕ್ಷಕಿ ವಿಜಯಲಕ್ಷ್ಮೀ ಸಲಹೆ ನೀಡಿದರು. ನಿಮ್ಮ ಮಕ್ಕಳಿಗೆ ಕರಾಟೆ, ಭರತನಾಟ್ಯ, ಭಗವದ್ಗೀತೆ ಶ್ಲೋಕ, ಯೋಗ, ಸ್ವಿಮ್ಮಿಂಗ್, ಸಂಗೀತ, ಡ್ಯಾನ್ಸ್, ಡ್ರಾಯಿಂಗ್ ಸೇರಿದಂತೆ ಇನ್ನು ಮುಂತಾದ ತರಬೇತಿಗಳನ್ನ ಈ ಶಾಲೆಯಲ್ಲಿ ನೀಡಲಾಗುತ್ತದೆ. ಮಕ್ಕಳಿಗೆ ಪ್ರತಿದಿನ ಒಂದೊಂದು ಸ್ಪರ್ಧೆಯನ್ನು ಏರ್ಪಡಿಸುತ್ತಾರೆ , ಮಕ್ಕಳಲ್ಲಿರುವ ಕಲೆಗಳನ್ನು ಹೊರತಂದು ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸುತ್ತಾರೆ ಎಂದು ಅವರು ಹೇಳಿದರು. ಮಕ್ಕಳ ಬುದ್ಧಿವಂತಿಕೆ, ಮಕ್ಕಳ ಕ್ರಿಯಾಶೀಲತೆ, ಚುರುಕುತನ ಒಳ್ಳೆಯ ವಾತಾವರಣದಲ್ಲಿ ಮಕ್ಕಳು ಆಟಗಳ ಜೊತೆ ಸಂಸ್ಕಾರವನ್ನ ಕಲಿಯುತ್ತಾರೆ. ಆದ್ದರಿಂದ ಕಡಿಮೆ ವೆಚ್ಚದಲ್ಲಿ ನಿಮ್ಮ ಮಕ್ಕಳಿಗೆ ಉತ್ತಮ ಕಲಿಕೆಗಳನ್ನ ಇಲ್ಲಿ ಕಲಿಸಿಕೊಡಲಾಗುವುದು ವಯೋಮಿತಿ 4 ರಿಂದ 15 ವರ್ಷದ ಒಳಗಿನ ಮಕ್ಕಳಿಗೆ ಏಪ್ರಿಲ್ 5 ರಿಂದ ಮೇ 10ರ ತನಕ ನಮ್ಮ ಕರಾಟೆ ಶಾಲೆಗೆ…
ಪಾವಗಡ: ಇತ್ತೀಚೆಗೆ ಪ್ರಕಟಗೊಂಡ ದ್ವಿತೀಯ ಪಿಯು ಫಲಿತಾಂಶದಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಶೇಕಡಾ 92% ರಷ್ಟು ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನಗಳಿಸಿದ ಶಾಂತಿ ನಗರದ ಮಾಧವಿ ರವರನ್ನು ಇಂದು ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಮತ್ತು ಬಳಗದವರು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್, ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿರುವುದು ಅತೀ ಹೆಚ್ಚು ಸಂತೋಷ ಮತ್ತು ಹೆಮ್ಮೆ ಪಡುವ ವಿಚಾರ. ಇಂತಹ ಮಕ್ಕಳಿಗೆ ಮುಂದಿನ ಶಿಕ್ಷಣಕ್ಕೆ ನೆರವು ನೀಡಲು ನಮ್ಮ ಸಂಸ್ಥೆ ಒಂದು ಹೆಜ್ಜೆ ಮುಂದಿರುತ್ತದೆ ಎಂದು ತಿಳಿಸಿದರಲ್ಲದೇ ಮಾಧವಿ ರವರಿಗೆ ಶುಭಕೋರಿ ಅಭಿನಂದಿಸಿದರು. ಈ ವೇಳೆ ಸನ್ಮಾನ ಸ್ವೀಕರಿಸಿ ಮಾತನಾಡಿದ ಮಾಧವಿ, ಫಲಿತಾಂಶವನ್ನು ಗುರುತಿಸಿ ಶುಭಕೋರಿ ಅಭಿನಂದಿಸಿದ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಅವರಿಗೆ ಮತ್ತು ಬಳಗದವರಿಗೆ ಧನ್ಯವಾದವುಗಳು ಎಂದರು. ಈ ಸಂದರ್ಭದಲ್ಲಿ…
ಸರಗೂರು: ತಾಲ್ಲೂಕಿನ ಪಟ್ಟಣಕ್ಕೆ ಚಾಮರಾಜನಗರ ಮೀಸಲು ಕ್ಷೇತ್ರದ ಲೋಕಸಭಾ ಅಭ್ಯರ್ಥಿಯಾದ ಬಾಲರಾಜು ಅವರ ಪುತ್ರ ಯೋಗಾಂಶು ಇಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿ ಮತಯಾಚನೆ ಮಾಡಿದರು. ನಂತರ ಮಾತನಾಡಿದ ಅವರು, ಕಳೆದ ಐದು ವರ್ಷದಲ್ಲಿ ಪ್ರಧಾನ ಮಂತ್ರಿಯವರು ರಾಷ್ಟ್ರ ಹಾಗೂ ರಾಜ್ಯ ಅಭಿವೃದ್ಧಿಗಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ಈ ಬಾರಿ ಕೂಡಾ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಇನ್ನೂ ಅಭಿವೃದ್ಧಿ ಮಾಡುವ ಕನಸು ಕಂಡಿದ್ದಾರೆ ಎಂದರು. ಅದೇ ರೀತಿ ನಮ್ಮ ತಂದೆಯಾದ ಬಾಲರಾಜು ರವರನ್ನು ಗೆಲ್ಲಿಸಿಕೊಟ್ಟರೆ ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ಗ್ರಾಮಗಳನ್ನು ಅಭಿವೃದ್ಧಿ ಪಡಿಸಲು ಅನುಕೂಲವಾಗುತ್ತದೆ ಎಂದು ಮನವಿ ಮಾಡಿಕೊಂಡರು. ಸಂಸದ ವಿ.ಶ್ರೀನಿವಾಸ ಪ್ರಸಾದ್ ರವರು ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಶ್ರಮಿಸಿದ್ದಾರೆ. ನೀರಾವರಿ, ಕುಡಿಯುವ ನೀರು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯಗಳನ್ನು ಒದಗಿಸಿದ್ದಾರೆ. ಕ್ಷೇತ್ರದ ಅಭಿವೃದ್ದಿಗಾಗಿ ಏ.26 ರಂದು ನಡೆಯುವ ಚುನಾವಣೆಯಲ್ಲಿ ನಮ್ಮ ಬಾಲರಾಜುರವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಈ…
ಕೊರಟಗೆರೆ : ಕರ್ನಾಟಕದ 28 ಲೋಕಸಭಾ ಕ್ಷೇತ್ರದಲ್ಲೂ ನಮ್ಮ ಮೈತ್ರಿ ಅಭ್ಯರ್ಥಿಗಳೇ ಗೆಲ್ತಾರೇ. ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಗೆಲ್ಲಿಸಿ ಪಾರ್ಲಿಮೆಂಟ್ ಕಳಿಸಿಕೊಡುವ ಶಕ್ತಿ ಇನ್ನೂ ಇದೆ. ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಆಗುವ ಅರ್ಹತೆ ಯಾರಿಗೇ ಇದೇ ಹೇಳಿ. ತುಮಕೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಗೆದ್ದರೇ ನಿಮ್ಮ ದೇವೇಗೌಡರೇ ಗೆದ್ದಂತೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು. ಕೊರಟಗೆರೆ ಪಟ್ಟಣದ ಊರ್ಡಿಗೆರೆ ಸಮೀಪದ ಖಾಸಗಿ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾಪಾರ್ಟಿ ಮತ್ತು ಜಾತ್ಯಾತೀತ ಜನತಾದಳ ಪಕ್ಷದಿಂದ ಸೋಮವಾರ ಏರ್ಪಡಿಸಲಾಗಿದ್ದ ಕಾರ್ಯಕರ್ತರ ಬೃಹತ್ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾನು ಕಾವೇರಿ ವಿಚಾರದಲ್ಲಿ ಮೋದಿಯನ್ನು ನಂಬಿದ್ದೇನೆ. 1962ರಿಂದ ನಾನು ಕಾವೇರಿ ನೀರಿಗಾಗಿ ಹೋರಾಟ ಮಾಡಿದ್ದೇನೆ. ವಿ.ಸೋಮಣ್ಣ ಗೆದ್ರೇ ತಲೆ ಎತ್ತಿ ನಾನು ಮೋದಿಗೆ ಕಾವೇರಿ ನೀರು ಮತ್ತು ಮೇಕೆದಾಟಿನ ಬಗ್ಗೆ ಪ್ರಶ್ನೆ ಮಾಡ್ತಿನಿ. ತಮಿಳುನಾಡಿನ ಸ್ಟಾಲಿನ್ ನೀರಿನ ವೈರತ್ವದ ಬಗ್ಗೆ ಪ್ರಧಾನಿ ಮೋದಿಗೂ ಅರ್ಥ ಆಗಿದೆ. ನಾನು 2019ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ ಆದರೇ…
ಟ್ರಕ್ಗೆ ಕಾರೊಂದು ಡಿಕ್ಕಿ ಹೊಡೆದ ತೀವ್ರತೆಗೆ ಬೆಂಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದ 7 ಮಂದಿ ಸಜೀವ ದಹನವಾಗಿರುವ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ. ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಏಳು ಜನರು ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಉತ್ತರ ಪ್ರದೇಶದ ಮೀರತ್ ನಿವಾಸಿಗಳಾಗಿದ್ದಾರೆ. ರಾಜಸ್ಥಾನದ ಸಲಾಸರ್‌ನಲ್ಲಿರುವ ಸಲಾಸರ್ ಬಾಲಾಜಿ ದೇವಸ್ಥಾನಕ್ಕೆ ಹೋಗಿ ಹಿಂದಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮೃತರನ್ನು ನೀಲಂ ಗೋಯಲ್ (55), ಅಶುತೋಷ್ ಗೋಯಲ್ (35), ಮಂಜು ಬಿಂದಾಲ್ (58), ಹಾರ್ದಿಕ್ ಬಿಂದಾಲ್ (37), ಸ್ವಾತಿ ಬಿಂದಾಲ್ (32) ಮತ್ತು ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದರು ಆದರೆ ಬೆಂಕಿಯನ್ನು ನಿಯಂತ್ರಣಕ್ಕೆ ತರುವಷ್ಟರಲ್ಲಿ ಕಾರಿನಲ್ಲಿದ್ದವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಕೊರಟಗೆರೆ : ತುಮಕೂರಿನ ಹೊಳವನಹಳ್ಳಿ ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಬಾಬು ಜಗಜೀವನ್ ರಾಂ ಹಾಗೂ ಡಾ.ಬಿ.ಅರ್. ಅಂಬೇಡ್ಕರ್ ಅವರ 137ನೇ ಜಯಂತಿಯನ್ನು ಆಚರಿಸಲಾಗಿತ್ತು. ಈ ದೇಶದಲ್ಲಿ ಅಸ್ಪೃಶ್ಯತೆ ಮತ್ತು ಅಸಮಾನತೆಯ ಆಂದೋಲನ ಪ್ರಾರಂಭಿಸಿ ಶೋಷಿತ ವರ್ಗಕ್ಕೆ ನ್ಯಾಯ ಒದಗಿಸಲು ಮಹಾನ್ ಹೋರಾಟ ನಡೆಸಿದ ದೇಶದ ಮಹಾನಾಯಕ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಎಂದು ವಕೀಲ ನರಸಿಂಹರಾಜು ತಿಳಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ಒಂದು ಜಾತಿಗೆ ಸಿಮೀತರಲ್ಲ, ಈ ದೇಶದ ಪ್ರತಿಯೊಂದು ಜಾತಿ ಜನಾಂಗದವರು ನೆಮ್ಮದಿಯಿಂದ ಜೀವನ ನಡೆಸಬೇಕು ಎನ್ನವ ಉದ್ದೇಶದಿಂದ ಈ ದೇಶಕ್ಕೆ ಬಹು ದೊಡ್ಡ ಗ್ರಂಥವಾಗಿರುವ ಸಂವಿಧಾನ ನೀಡಿದ್ದಾರೆ. ಇಂತಹ ಮಹಾನ್ ವ್ಯಕ್ತಿಯನ್ನ ಪ್ರತಿಯೊಬ್ಬರು ಗೌರವಿಸಬೇಕು. ಅವರ ಆದರ್ಶವನ್ನ ಪಾಲಿಸಿದಾಗ ಮಾತ್ರ ಅವರ ಜಯಂತಿ ಆಚರಣೆ ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮುಖಂಡ ಜಯರಾಮ್ ಮಾತನಾಡಿ ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ವಿಚಾರ, ಅಭಿವ್ಯಕ್ತಿ ನಂಬಿಕೆ ಶ್ರದ್ದೆ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನ ಸ್ಥಾನಮಾನ ಮತ್ತು…
ಲೋಕಸಭೆ ಚುನಾವಣೆ ಮತಾನದಕ್ಕೆ ಕೆಲವೇ ದಿನ ಬಾಕಿ ಇರುವಾಗ ಕೈ ಪಡೆಗೆ ಮತ್ತೊಂದು ಶಾಕ್ ಎದುರಾಗಿದೆ. ತುಮಕೂರಿನ ತಿಪಟೂರಿನ ಕಾಂಗ್ರೆಸ್ ಮುಖಂಡ ಲೋಕೇಶ್ವರ್ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಮಾಡಿದ ಬಳಿಕ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ತಮ್ಮ ನೂರಾರು ಬೆಂಬಲಿಗರಿಗೆ ಮೈತ್ರಿ ಅಭ್ಯರ್ಥಿ ಸೋಮಣ್ಣ ಪರ ಕೆಲಸ ಮಾಡಲು ಲೋಕೇಶ್ವರ್ ಸೂಚನೆಯನ್ನು ನೀಡಿದ್ದಾರೆ. ಇನ್ನುಕಾಂಗ್ರೆಸ್ ಶಾಸಕ ಷಡಕ್ಷರಿ ವಿರುದ್ಧ ಲೋಕೇಶ್ವರ್ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಪಾವಗಡ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೊಡುವ ಒಂದೊಂದು ಮತವೂ ಆರ್ಥಿಕ ದಿವಾಳಿತನ, ಭ್ರಷ್ಟಾಚಾರ, ದೇಶದ ಅಭದ್ರತೆಗೆ ಕೊಡುವ ಮತ ಆಗುತ್ತೆ ಎಂದು ಪಾವಗಡ ತಾಲ್ಲೂಕಿನಲ್ಲಿ ಲೋಕಸಭಾ ಚುನಾವಣಾ ಪ್ರಚಾರ ನಡೆಸಿದ ಚಿತ್ರದುರ್ಗ ಲೋಕಸಭಾ ಬಿಜೆಪಿ ಕಾರಜೋಳ ಪರವಾಗಿ ಜನಾರ್ಧನ ಸ್ವಾಮಿ ಜೆಡಿಎಸ್ ಪಕ್ಷದ ಮುಖಂಡರು ಬಿಜೆಪಿ ಪಕ್ಷದ ಮುಖಂಡರು ಸಭೆ ಸೇರಿ ಮತದಾರರಲ್ಲಿ ಮನವಿ ಮಾಡಿದರು. ಪಾವಗಡ ತಾಲೂಕಿನ ಬಿ ಜೆ ಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಮಾಡದೆ ಹಣ ಖಾಲಿ ಮಾಡಿಕೊಂಡಿದೆ, ನಂತರ ಕೇಂದ್ರ ಸರ್ಕಾರದ ಮುಂದೆ ಭಿಕ್ಷಾ ಪಾತ್ರೆ ಹಿಡಿದುಕೊಂಡು ನಿಂತಿದೆ. ಇವರು ಬಂದಾಗೆಲ್ಲ ಬರಗಾಲ ಬರುತ್ತದೆ. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಅಧಿಕ ಮಳೆಯಾಗಿತ್ತು ಎಂದರು. ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ರಂಗಣ್ಣ ,ಮಾಜಿ ಅಧ್ಯಕ್ಷ ಜಿ.ಟಿ. ಗಿರೀಶ್, ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ, ಬಲರಾಮರೆಡ್ಡಿ ,ಸೂರ್ಯನಾರಾಯಣ, ಗೋವಿಂದಪ್ಪ, ಆಲ್ಕುಂದರಾಜ್, ರಘು ಸೇರಿದಂತೆ ಬಿಜೆಪಿ…
ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೇಯಸ್ ಪಟೇಲ್ ಅವರ ಪರ ತಾಯಿ ಅನುಪಮಾ ಅವರು ಇಂದು ಮತ ಯಾಚನೆ ಮಾಡಿದರು. ಶ್ರವಣೂರು ಗ್ರಾಮದ ಗ್ರಾಮ ದೇವರಾದ ಶ್ರೀ ಗರಡಾಳೇಶ್ವರ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಶ್ರವಣೂರು ಸೇರಿದಂತೆ ಗ್ರಾಮದ ಸುತ್ತ ಮುತ್ತಲ್ಲಿನ ಹಳ್ಳಿಗಳಲ್ಲಿ ಶ್ರೇಯಸ್ ಪಟೇಲ್ ಪರ ಮತ ಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಹೊನ್ನಿ ಕೊಪ್ಪಲು ಮಂಜು ಶ್ರೀದರ್. ಶ್ರವಣೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ.ಎಚ್.ಮಹೇಂದ್ರ. ರಾಮು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ವರದಿ :- ಮಂಜು ಶ್ರವಣೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA