Subscribe to Updates
Get the latest creative news from FooBar about art, design and business.
- ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
- ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
- ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
Author: admin
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪುತ್ತಿದ್ದಂತೆ, ತನ್ನ ಸಾಮಾಜಿಕ ಜಾಲತಾಣದಲ್ಲಿ ಅನಂತ್ ಕುಮಾರ್ ಹೆಗ್ಡೆ ಅವರು ಪ್ರಕಟ ಮಾಡಿದ ಕೃತಜ್ಞತಾ ಪತ್ರ ಭಾರೀ ವೈರ್ ಆಗಿದೆ. ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು, ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವಾಗಿಸುವ, ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು. ಆದರೆ, ಆರಂಭ ಎಲ್ಲಿಂದ ತಿಳಿದಿರಲಿಲ್ಲ. ಜ್ಞಾನಿಗಳು, ಹಣವಂತರು, ಅಧಿಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಧಿಗಳಿಲ್ಲದ ನಾನು ಈ ಪೂಜೆಯನ್ನು ಎಲ್ಲಿಂದ, ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ. ಈ ಮಧ್ಯದಲ್ಲಿ ಆರಂಭಗೊಂಡಿದ್ದು ಜನತಾ ಜನಾರ್ದನ ಆರಾಧನೆ. ಸರಿ ಸುಮಾರು ಮೂವತ್ತು ವರ್ಷಗಳ ತಮ್ಮೆಲ್ಲರ ಅಪೂರ್ವ ಒಡನಾಟ, ತಾವುಗಳು ತೋರಿದ ಸ್ನೇಹ, ಪ್ರೀತಿ, ವಾತ್ಸಲ್ಯ ನಿಜಕ್ಕೂ ಭಾಷೆಗೆ ನಿಲುಕದ್ದು, ಅದು ಅದಮ್ಯ. ಯಾವುದೇ ಪೂಜೆ,…
ಪಾಕ್ ಆಕ್ರಮಿತ ಪ್ರದೇಶವು ಭಾರತಕ್ಕೆ ಸೇರಬೇಕೆಂಬ ಭಾರತೀಯರ ಹಲವು ವರ್ಷಗಳ ಕನಸು ಇದೀಗ ನೆರವೇರುವ ಕಾಲ ಹತ್ತಿರವಾಗಿದೆ. ಈ ಕುರಿತು ಶೀಘ್ರವೇ ಪಾಕ್ ಆಕ್ರಮಿತ ಕಾಶ್ಮೀರ ಭಾರತದೊಂದಿಗೆ ವಿಲೀನವಾಗುತ್ತದೆ ಎಂದು ದೇಶದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೊಸ ಘೋಷಣೆ ಮಾಡಿದ್ದಾರೆ. ಕಾಶ್ಮೀರದ ಬಗ್ಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಇತ್ತೀಚಿನ ಟೀಕೆಗಳ ಬಗ್ಗೆ ಮಾತನಾಡಿದ ರಾಜನಾಥ್ ಸಿಂಗ್ ಅವರು, ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಜನರು ತವರು ಭಾರತದೊಂದಿಗೆ ವಿಲೀನದ ಬೇಡಿಕೆಯನ್ನು ಎತ್ತುತ್ತಿದ್ದು, ಅಲ್ಲಿನ ಜನ ಖಂಡಿತಾ ಭಾರತದೊಂದಿಗೆ ವಿಲೀನಗೊಳ್ಳುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಶೆಹಬಾಜ್ ಬಗ್ಗೆ ಪ್ರತಿಕ್ರಿಯಿಸಿದ ಸಿಂಗ್ ಅವರು ಶೆಹಬಾಜ್ ಎಂದಾದರೂ ಕಾಶ್ಮೀರವನ್ನು ತೆಗೆದುಕೊಳ್ಳಬಹುದೇ? ಅವರು ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಚಿಂತಿಸಬೇಕು. ಸುಮಾರು ಒಂದೂವರೆ ವರ್ಷಗಳ ಹಿಂದೆಯೇ, ನಾವು ದಾಳಿ ಮಾಡಿ ಆಕ್ರಮಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದ್ದೆ. ಏಕೆಂದರೆ ಅಲ್ಲಿ ಪರಿಸ್ಥಿತಿ ಬದಲಾಗುತ್ತಿದೆ. ಪಿಒಕೆ ಜನರೇ ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸುತ್ತಿದ್ದಾರೆ. ಹೀಗಾಗಿ…
ಚಂದ್ರಯಾನ 3 ಚಂದ್ರನ ಲ್ಯಾಂಡಿಂಗ್ ಸೈಟ್ ಗಾಗಿ ಭಾರತದ ಶಿವಶಕ್ತಿ ಪಾಯಿಂಟ್ ಗೆ ಅಂತರರಾಷ್ಟ್ರೀಯ ಮನ್ನಣೆ. ಭಾರತದ ಹೆಮ್ಮೆಯ ಚಂದ್ರಯಾನ-3 ಚಂದ್ರನ ಲ್ಯಾಂಡಿಂಗ್ ಸೈಟ್ ಗೆ ದೇಶವು ನೀಡಿದ ‘ಶಿವ ಶಕ್ತಿ ಪಾಯಿಂಟ್’ ಹೆಸರನ್ನು ಅಂತರರಾಷ್ಟ್ರೀಯ ಖಗೋಳ ಒಕ್ಕೂಟ (IAU) ಒಪ್ಪಿಕೊಂಡಿದೆ. ಚಂದ್ರಯಾನ 3 ಆಗಸ್ಟ್ 23 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಮೃದುವಾಗಿ ಇಳಿಯಿತು. 26ರಂದು ಮೋದಿ ಹೆಸರನ್ನು ಘೋಷಿಸಿದರು. IAU ಈ ತಿಂಗಳ 19 ರಂದು ಇದೆ. ಈ ಹೆಸರನ್ನು ಅನುಮೋದಿಸಲಾಗಿದೆ. ಗ್ರಹಗಳ ಮೇಲ್ಮೈಗಳನ್ನು ಹೆಸರಿಸಲು ಅಂತರಾಷ್ಟ್ರೀಯವಾಗಿ ಗುರುತಿಸಲ್ಪಟ್ಟಿರುವ ಪ್ರಾಧಿಕಾರವಾದ IAU, ಗ್ರಹಗಳು ಮತ್ತು ಚಂದ್ರಗಳ ಮೇಲ್ಮೈ ಲಕ್ಷಣಗಳನ್ನು ಗುರುತಿಸುತ್ತದೆ. IAU ಗ್ರಹಗಳ ವ್ಯವಸ್ಥೆಯ ನಾಮಕರಣದ ಕುರಿತಾದ IAU ನ ಕಾರ್ಯಕಾರಿ ಗುಂಪು ಶಿವಶಕ್ತಿ ಪಾಯಿಂಟ್ ಎಂಬ ಹೆಸರನ್ನು ಅನುಮೋದಿಸಿದೆ ಎಂದು ಸಂಸ್ಥೆಯು ಅಧಿಕೃತವಾಗಿ ಘೋಷಿಸಿತು. ಈಗ ಈ ಹೆಸರನ್ನು ಯಾವುದೇ ವಿಜ್ಞಾನ-ಸಂಬಂಧಿತ ವೇದಿಕೆ ಮತ್ತು ಪ್ರಕಟಣೆಗಳಲ್ಲಿ ಬಳಸಬಹುದು. ಭಾರತೀಯ ತತ್ತ್ವಶಾಸ್ತ್ರದ ಪ್ರಕಾರ, ಶಿವ ಪುರುಷ ಮತ್ತು ಶಕ್ತಿ…
ಸಂಸದ, ಕೇಂದ್ರ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಅವರು ನಾನು ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದು, ರಾಜಕರಾಣದಿಂದ ದೂರ ಉಳಿದಿಲ್ಲ ಎಂಬ ಮಾತನ್ನು ಹೇಳಿದ್ದಾರೆ. ರಾಜಕೀಯ ಶುದ್ಧೀಕರಣದ ಕೆಲಸ ನಾ ಮಾಡುವೆ. ನನ್ನೊಂದಿಗೆ ಕೈ ಜೋಡಿಸುವ ಸಮಾನ ಮನಸ್ಕರಿಗೆ ಸ್ವಾಗತವಿದೆ ಎಂದು ಅವರು ಭಾನುವಾರ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಸುದ್ದಿಗಾರರೊಂದಿಗೆ ಹೇಳಿದರು. ಗುಂಪುಗಾರಿಕೆಯ ಕಾರಣದಿಂದ ಬಿಜೆಪಿ ಕಳೆದ ಬಾರಿ ಅಧಿಕಾರ ಕಳೆದುಕೊಂಡಿತ್ತು. ನಾನು ಗುಂಪುಗಾರಿಕೆ ರಾಜಕಾರಣ ಮಾಡುವುದಿಲ್ಲ. ನನ್ನದು ಬಿಜೆಪಿ ಗುಂಪು ಮಾತ್ರ ಎಂದು ಹೇಳಿದರು. ಮೋದಿ ಅವರು ಕಳೆದ ಹತ್ತು ವರ್ಷದಿಂದ ಸ್ವಾರ್ಥರಹಿತ ರಾಜಕಾರಣ ಮಾಡಿದ್ದಾರೆ. ಮುಕ್ತ, ಭ್ರಷ್ಟಾಚಾರ ಮುಕ್ತ, ಜಾತಿವಾದ ಮುಕ್ತ, ರಾಜನೀತಿಯ ಪರಿಕಲ್ಪನೆ ಇದು ಮೋದಿ ವಾಕ್ಯ. ಇದು ಸಾಕಾರಗೊಳ್ಳಲೇ ಬೇಕು. ಈ ಬಾರಿಯ ಚುನಾವಣೆಯಲ್ಲಿ ಅದು ಆಗಬೇಕು. ನನ್ನ ಪ್ರಾಮಾಣಿಕತನ, ಸಚ್ಚಾರಿತ್ರ್ಯಕ್ಕೆ ನನಗೆ ಯಾರದ್ದೂ ಸರ್ಟಿಫಿಕೇಟ್ ಬೇಕಿಲ್ಲ. ಕರ್ನಾಟಕದಲ್ಲಿ ಪ್ರಾಮಾಣಿಕತೆ, ಸಚ್ಚಾರಿತ್ರ್ಯ ಅರ್ಥ ಕಳೆದುಕೊಳ್ಳುವ ರಾಜನೀತಿ ಇದೆ.…
ಬಣ್ಣಗಳ ಹಬ್ಬ ಹೋಳಿಯನ್ನು ಇಂದು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಧಾರ್ಮಿಕ ನಗರಿ ಅಯೋಧ್ಯೆಯಲ್ಲಿ ಹಲವು ದಿನಗಳಿಂದ ಹಬ್ಬದ ವಾತಾವರಣವಿದೆ. ಯಾಕೆಂದರೆ ಈ ಬಾರಿಯ ಹೋಳಿ ವಿಶೇಷ. ಅಯೋಧ್ಯೆಯ ಜೊತೆಗೆ, ದೇಶ ಮತ್ತು ಪ್ರಪಂಚದಾದ್ಯಂತ ಎಲ್ಲಾ ಕಡೆ ಇರುವ ರಾಮ ಭಕ್ತರಿಗೆ ಈ ಬಾರಿಯ ಹೋಳಿ ವಿಶೇಷವಾಗಿದೆ. ಎಲ್ಲರೂ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈ ಬಾರಿಯ ಹೋಳಿಗೆ ವ್ಯಾಪಕ ವ್ಯವಸ್ಥೆ ಮಾಡಿದೆ. ಮತ್ತೊಂದೆಡೆ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ರಾಮಲಲ್ಲ ಅವರಿಗೆ ವಿಶೇಷ ಹರ್ಬಲ್ ಗುಲಾಲ್ ಕಳುಹಿಸಿದ್ದಾರೆ. ಬಾಲಕ ರಾಮನಿಗೆ ಇದು ಮೊದಲ ಹೋಳಿಯಾಗಿದ್ದು, ಫಾಲ್ಗುಣ ಶುಕ್ಲಾ ಏಕಾದಶಿ ಅಥವಾ ರಂಗಭಾರಿ ಏಕಾದಶಿ ನಿಮಿತ್ತ ಹೋಳಿಯ ಬಣ್ಣಗಳನ್ನು ಹಚ್ಚಿ ಪೂಜೆ ಮಾಡಲಾಗಿದೆ. ಭಕ್ತರು ಕೂಡಾ ಹೋಳಿಯ ಬಣ್ಣದಿಂದ ಅಲಂಕೃತಗೊಂಡ ಬಾಲಕ ರಾಮನ ದರ್ಶನ ಪಡೆದು ಖುಷಿಗೊಂಡಿದ್ದಾರೆ. ಕಳೆದ ಬುಧವಾರ, ರಂಗಭಾರಿ ಏಕಾದಶಿಯಂದು, ರಾಮನಗರಿಯ ಋಷಿಗಳು ಮತ್ತು ಸಂತರು ತಮ್ಮ ನೆಚ್ಚಿನ ದೇವರಾದ ಭಗವಾನ್ ರಾಮ ಮತ್ತು ಅವರ ಪರಮ…
ಪಾವಗಡ: ತಾಲ್ಲೂಕು ವೈ.ಎನ್.ಹೊಸಕೋಟೆ ಹೋಬಳಿಯಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಮಾರ್ಚ್ 25ರಂದು ಆರಂಭವಾಗಲಿದ್ದು, ಸಿದ್ಧತೆ ಪೂರ್ಣಗೊಂಡಿದೆ. ಹೋಬಳಿಯಲ್ಲಿ ಒಟ್ಟು 33 ಪ್ರೌಢ ಶಾಲೆಗಳಿದ್ದು, 1252 ಜನ 10ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 5 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ವೈ.ಎನ್.ಹೊಸಕೋಟೆ ಹೋಬಳಿ ಕೇಂದ್ರದ ವಾಸವಿ ವಿದ್ಯಾನಿಕೇತನ, ದೊಡ್ಡಹಳ್ಳಿಯ ಸರ್ಕಾರಿ ಪ್ರೌಢಶಾಲೆ ಮತ್ತು ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ, ಲಿಂಗದಹಳ್ಳಿ ದಿ ನ್ಯೂ ಎಂಪ್ರೆಸ್ ಪ್ರೌಢಶಾಲೆ ಹಾಗೂ ಕೋಟಗುಡ್ಡದ ಕರ್ನಾಟಕ ಪಬ್ಲಿಕ್ ಶಾಲೆಗಳು ಪರೀಕ್ಷಾ ಕೇಂದ್ರಗಳಾಗಿದ್ದು, ದೊಡ್ಡಹಳ್ಳಿಯ ಸರ್ಕಾರಿ ಪ್ರೌಢಶಾಲ ಕೇಂದ್ರವನ್ನು ಸೂಕ್ಷ್ಮ ಪರೀಕ್ಷ ಕೇಂದ್ರ ಎಂದು ಗುರುತಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದ ಕೊಠಡಿಗಳಲ್ಲಿ ಸಿಸಿ ಟಿ.ವಿ ಅಳವಳಿಸಲಾಗಿದ್ದು, ಯಾವುದೇ ರೀತಿಯಲ್ಲಿ ನಕಲು ನಡೆಯದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನೋಡಲ್ ಅಧಿಕಾರಿ ಶಿವಮೂರ್ತಿ ನಾಯ್ಕ ತಿಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಹೋಬಳಿಯ ತೊಗರಿಗಟ್ಟ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದುದ್ದು, ಬೆಂಕಿ ನಂದಿಸಲು ಅರಣ್ಯ ಪ್ರದೇಶದಲ್ಲಿ ಭೂಮಿ ಮತ್ತು ವಸತಿ ವಂಚಿತರ ಕುಟುಂಬದ ಮಹಿಳೆಯರು ಹರಸಾಹಸ ಪಡುತ್ತಿದ್ದಾರೆ. ಮೊದಲು ಜನವಸತಿ ಪ್ರದೇಶದಲ್ಲಿ ಬೆಂಕಿ ನಂದಿಸುವ ಕಾರ್ಯ ಮಾಡಬೇಕಿದ್ದ ಅಗ್ನಿಶಾಮಕದಳದ ಸಿಬ್ಬಂದಿ ಇಲ್ಲಿನ ಖಾಸಗಿ ಕೋಳಿ ಫಾರಂ ಮುಂದೆ ಬೆಂಕಿ ನಂದಿಸಲು ಮುಂದಾಗಿದ್ದಾರೆ ಎಂದು ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರು ಜನವಸತಿ ಪ್ರದೇಶದಲ್ಲಿ ಬೆಂಕಿ ನಂದಿಸಿ ಎಂದು ಮನವಿ ಮಾಡಿದರೆ, ವಾಹನದಲ್ಲಿ ನೀರು ಖಾಲಿಯಾಗಿದೆ ಎಂದು ಸಬೂಬು ನೀಡಿ ಅಗ್ನಿಶಾಮಕದಳದ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನುವ ಆಕ್ರೋಶ ಕೇಳಿ ಬಂದಿದೆ. ಅಗ್ನಿಶಾಮಕದಳದ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಅರಣ್ಯ ಸುಟ್ಟು ಭಸ್ಮವಾಗಿದೆ. ಬೆಂಕಿ ಹೊತ್ತಿ ಉರಿಯುತ್ತಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದೇ ನಿರ್ಲಕ್ಷ್ಯವಹಿಸಿದ್ದಾರೆ ಎನ್ನುವ ಆಕ್ರೋಶ ಕೇಳಿ ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿಯ ಕೆಲ ನಾಯಕರನ್ನು ಶಾಸಕ ಮುನಿರತ್ನ ಅವರು ಕಳುಹಿಸಿ ಕೊಡುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ಮುನಿರತ್ನ ಅವರು ಡಿ.ಕೆ.ಶಿವಕುಮಾರ್ ಕುರಿತು ಹೊಸ ಬಾಂಬ್ ಸಿಡಿಸಿದ್ದಾರೆ. ಹೌದು, ಖಾಸಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಮುನಿರತ್ನ ಅವರು, ಕೆಲ ನಾಯಕರನ್ನು ನಾನೇ ಕಾಂಗ್ರೆಸ್ ಗೆ ಕಳುಹಿಸಿ ಕೊಡುತ್ತಿದ್ದೇನೆ ಎಂಬ ಗಂಭೀರ ಆರೋಪವಿದೆ. ಆದರೆ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪ್ರಬಲ ನಾಯಕ ಡಿ.ಕೆ.ಶಿವಕುಮಾರ್ ಅವರು 40 ಶಾಸಕರೊಂದಿಗೆ ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು ಡಿಕೆಶಿ ಅವರು 40 ಶಾಸಕರನ್ನು ಇಟ್ಟುಕೊಂಡು ನಮ್ಮೊಂದಿಗೆ ಬರಲು ಕಾಯುತ್ತಿದ್ದಾರೆ. ನಾವು ಬಾಗಿಲು ತೆರೆದರೆ 40 ಜನರೊಂದಿಗೆ ಈಗಲೇ ಬಂದು ಬಿಡುತ್ತಾರೆ. ಆದರೆ ನಾವು ಬಾಗಿಲು ತೆಗೆಯೋದಿಲ್ಲ. ನಮ್ಮ ಪಕ್ಷದಿಂದ ಯಾರನ್ನೂ ಕಳಿಸುವುದೂ ಇಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಯಾಕೆ ಡಿಕೆಶಿ ಅವರು ಹೀಗೆ ಮಾಡುತ್ತಾರೆ, ಬಲವಾದ ಕಾರಣ ಏನು ಎಂದು ಮಾಧ್ಯಮಗಳು ಪ್ರಶ್ನಿಸಿದ್ದಕ್ಕೆ…
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 46 ಅಭ್ಯರ್ಥಿಗಳ 4ನೇ ಪಟ್ಟಿಯನ್ನು ಶನಿವಾರ ರಾತ್ರಿ ಬಿಡುಗಡೆ ಮಾಡಿದೆ. ಈ ಪಟ್ಟಿಯ ವಿಶೇಷ ಏನೆಂದರೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಗೆ ಕಾಂಗ್ರೆಸ್ಸ್ ನಿಂದ ಟಿಕೆಟ್ ದೊರಕಿದೆ. ಕಳೆದ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ವಾರ್ ರೂಂ ನಿರ್ವಹಿಸಿ ಕಾಂಗ್ರೆಸ್ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಸಸಿಕಾಂತ್ ಸೆಂಥಿಲ್ ಇದೀಗ ತಮಿಳುನಾಡಿನ ತಿರುವಳ್ಳೂರಿನಿಂದ ಟಿಕೆಟ್ ಪಡೆದು ತಮ್ಮ ಚುನಾವಣಾ ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ಉತ್ತರ ಪ್ರದೇಶದಲ್ಲಿ ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಮತ್ತೊಮ್ಮೆ ಸ್ಪರ್ಧೆ ಮಾಡಲಿದ್ದಾರೆ. ಈ ಹಿಂದೆ ಪ್ರಧಾನಿ ಮೋದಿ ಅವರ ಎದುರು ಎರಡು ಬಾರಿ ಸ್ಪರ್ಧಿಸಿ ಅವರು ಸೋಲು ಅನುಭವಿಸಿದ್ದರು. ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಪಿ ಚಿದಂಬರಂ ಅವರಿಗೆ ತಮಿಳುನಾಡಿನ ಶಿವಗಂಗಾ ಕ್ಷೇತ್ರದ ಟಿಕೆಟ್ ಸಿಕ್ಕಿದೆ. ಆದರೆ ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್ಬರೇಲಿಗೆ ಈ ಲಿಸ್ಟ್ನಲ್ಲಿ…
ಆಡಳಿತ ಪಕ್ಷದ ಏಜೆಂಟ್ ರಂತೆ ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅವರನ್ನ ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ದೂರು ನೀಡಿದ್ದಾರೆ. ಹೆಚ್.ಡಿ ದೇವೇಗೌಡರ ದೂರು ಆಧರಿಸಿ ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಅವರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ ಎನ್ನಲಾಗಿದೆ. ಹಾಸನ ಡಿಸಿ ಸತ್ಯಭಾಮ ಅವರು ಜಿಲ್ಲಾ ಉಸ್ತುವಾರಿ ಸಚಿವರ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ. ಆಡಳಿತ ಪಕ್ಷದ ಏಜೆಂಟ್ ರೀತಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿಎಂ ಕಾರ್ಯಕ್ರಮಕ್ಕೆ ಇಲಾಖೆಗಳಿಂದ ಹಣ ಸಂಗ್ರಹಣೆ ಮಾಡಿ ಜನರಿಗೆ ಹಂಚಿದ್ದಾರೆ. ಹಾಸನ ಜಿಲ್ಲೆಯಲ್ಲಿ ಬರಗಾಲವಿದ್ದರೂ ನಿರ್ವಹಣೆ ಮಾಡುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಮುಕ್ತ ನ್ಯಾಯ ಸಮ್ಮತ ಚುನಾವನೆ ನಡೆಸಲು ಡಿಸಿ ಸತ್ಯಭಾಮ ಅವರನ್ನ ವರ್ಗಾವಣೆ ಮಾಡುವಂತೆ ಹೆಚ್.ಡಿ ದೇವೇಗೌಡರು ದೂರು ನೀಡಿದ್ದರು. ಇನ್ನು ಹೆಚ್.ಡಿ ದೇವೇಗೌಡರ ಆರೋಪಕ್ಕೆ ಸ್ಪಷ್ಟನೆ ನೀಡುವಂತೆ ಹಾಸನ ಡಿಸಿ ಸತ್ಯಭಾಮ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…