Subscribe to Updates
Get the latest creative news from FooBar about art, design and business.
- ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
- ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
- ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
Author: admin
ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಶ್ರೀಕ್ಷೇತ್ರ ವದನಕಲ್ಲು ಗ್ರಾಮದಲ್ಲಿ ನೆಲೆ ನಿಂತಿರುವ ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವವು ಮಾರ್ಚ್ 24ರಿಂದ 31 ರವರೆಗೆ 8 ದಿನಗಳ ಕಾಲ ನೆರವೇರಲಿದೆ. ವದನಕಲ್ಲು ಕ್ಷೇತ್ರವು ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪವಾಡಗೈದ ರಾಜ್ಯದ 7 ಕ್ಷೇತ್ರಗಳಲ್ಲಿ ಒಂದಾಗಿದ್ದು, ಗದ್ದುಗೆಯನ್ನು ಹೊಂದಿರುವ ಸ್ಥಳವಾಗಿದೆ. ನಾಯಕನಹಟ್ಟಿ ಸೇರಿದಂತೆ ರಾಜ್ಯದಾಧ್ಯಂತ ಏಕಕಾಲಕ್ಕೆ 7 ಸ್ಥಳಗಳಲ್ಲಿ ಶ್ರೀಗುರುಗಳ ಜಾತ್ರೆ ಮತ್ತು ರಥೋತ್ಸವ ನೆರವೇರುವುದು ವಿಶೇಷವಾಗಿದೆ. ಅವುಗಳಲ್ಲಿ ವದನಕಲ್ಲು ಒಂದಾಗಿದ್ದು, ಇಲ್ಲಿ ಸುಮಾರು 8 ದಶಕಗಳಿಂದ ಪ್ರತಿ ವರ್ಷ ಜಾತ್ರಾ ಮಹೋತ್ಸವ ನೆರವೇರುತ್ತಾ ಬಂದಿದೆ. ಇಲ್ಲಿನ ರಥೋತ್ಸವದ ಅಂಗವಾಗಿ ದನಗಳ ಜಾತ್ರೆಯೂ ಹಲವು ದಿನಗಳು ಕಾಲ ನಡೆಯುತ್ತಾ ರೈತಾಪಿ ವರ್ಗಕ್ಕೆ ಅನುಕೂಲಕರವಾಗಿದೆ. ಈ ವರ್ಷದ ಜಾತ್ರೆಯ ಭಾಗವಾಗಿ ಮಾರ್ಚ್ 24 ರ ಭಾನುವಾರ ಗಂಗಾಪೂಜೆ, ನಂಧಿದ್ವಜಪೂಜೆ ಧ್ವಜಾರೋಹಣ, ಸೋಮವಾರ ರುದ್ರಾಭಿಷೇಕ ಮತ್ತು ಸಹಸ್ರಬಿಲ್ವಾರ್ಚನೆ, ಮಂಗಳವಾರದ ಚಿತ್ತಾ ನಕ್ಷತ್ರದಲ್ಲಿ ಬ್ರಹ್ಮ ರಥೋತ್ಸವ ಮತ್ತು ಸಂಜೆ ಶ್ರೀ ವೀರ ಬ್ರಹ್ಮೇಂದ್ರಸ್ವಾಮಿ ಚರಿತ್ರೆ…
ಪುತ್ರ ಕಾಂತೇಶ್ ಗೆ ಟಿಕೆಟ್ ಕೈತಪ್ಪಿದ್ದಕ್ಕೆ ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರನ್ನ ಪರೋಕ್ಷವಾಗಿ ಡಮ್ಮಿ ಕ್ಯಾಂಡಿಡೇಟ್ ಎಂದಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಶಿವಮೊಗ್ಗದಲ್ಲಿ ಕಾಂಗ್ರೆಸ್ ಡಮ್ಮಿ ಕ್ಯಾಂಡಿಡೇಟ್ ಹಾಕಿದೆ . ಡಮ್ಮಿ ಕ್ಯಾಂಡಿಡೇಟ್ ಹಾಕಿಸಿಕೊಂಡು ಬಂದಿದ್ದಾರೆ. ಹೀಗಂತ ನಾನು ಹೇಳ್ತಿಲ್ಲ. ಜನರು ಹೇಳ್ತಿದ್ದಾರೆ ಎನ್ನುವ ಮೂಲಕ ಗೀತಾ ಶಿವರಾಜ್ ಕುಮಾರ್ ಡಮ್ಮಿ ಕ್ಯಾಂಡಿಡೇಟ್ ಎಂದರು. ಇನ್ನು ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಚುನಾವಣೆಗೆ ಸ್ಪರ್ಧಿಸುವುದು ಖಚಿತ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಈಗಾಗಲೇ ನಿರ್ಧಾರ ಕೈಗೊಂಡಿರುವೆ. ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೂಡ ಮಾಡಿರುವೆ. ಎಲ್ಲಾ ಕಡೆ ಅಭೂತಪೂರ್ವ ಸ್ವಾಗತ ಸಿಗುತ್ತಿದೆ. ಅದೃಶ್ಯದ ಮತಗಳೆಲ್ಲ ನನಗೆ ಖಂಡಿತ ಸಿಗುತ್ತವೆ. ವಿಶೇಷವಾಗಿ ಜೆಡಿಎಸ್, ಕಾಂಗ್ರೆಸ್, ರಾಷ್ಟ್ರಭಕ್ತ ಮುಸ್ಲಿಂರ ಮತಗಳು ಕೂಡ ನನಗೆ ಸಿಗುತ್ತವೆ. ನಾನು ಗೆದ್ದು ಮತ್ತೆ ಬಿಜೆಪಿಯಲ್ಲಿ ಗುರುತಿಸಿಕೊಂಡು ಮೋದಿಯವರು ಪ್ರಧಾನಿಯಾಗಲು…
ಲೋಕಸಭಾ ಚುನಾವಣೆ ವೇಳೆ ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು, ಶಾಸಕ ತನ್ವೀರ್ ಸೇಠ್ ಸೇರಿ ಐವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಶಾಸಕ ತನ್ವೀರ್ ಸೇಠ್, ಜಿ.ಸಿ.ಚಂದ್ರಶೇಖರ್, ವಿನಯ್ ಕುಲಕರ್ಣೀ, ಮಂಜುನಾಥ ಭಂಡಾರಿ, ವಸಂತ ಕುಮಾರ್ ಅವರನ್ನ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ, ಪ್ರಚಾರ ಸಮಿತಿ ಕೋ ಚೇರ್ಮನ್ ಆಗಿ ಎಲ್.ಹನುಮಂತಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ರಿಜ್ವಾನ್ ಅರ್ಷಾದ್ ರನ್ನು ನೇಮಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಲೋಕಸಭೆ ಚುನಾವಣೆಗೆ ಬಿಜೆಪಿ–ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ, ಹಾಸನ, ಕೋಲಾರ ಕ್ಷೇತ್ರವನ್ನು ಬಿಜೆಪಿಯು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಈ ಸಂಬಂಧ ಇಂದು ಅರಮನೆ ಮೈದಾನದ ಸಭಾಂಗಣದಲ್ಲಿ ಬಿಜೆಪಿ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಲಾರ ಕ್ಷೇತ್ರದ ಟಿಕೆಟ್ ಕೈತಪ್ಪಿರುವ ಕುರಿತು ಮಾತನಾಡಿರುವ ಹಾಲಿ ಸಂಸದ ಮುನಿಸ್ವಾಮಿ, ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷೇತರವಾಗಿ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರ ಗುರಿ ಮತ್ತು ಉದ್ದೇಶ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿಯನ್ನಾಗಿ ನೋಡುವುದು, ಹಿಂದೂ ವಿರೋಧಿ, ಧರ್ಮ ವಿರೋಧಿ, ರಾಷ್ಟ್ರ ವಿರೋಧಿ ಹಾಗೂ ಕೇವಲ ಒಂದು ಸಮುದಾಯನ್ನು ಓಲೈಸುವುದೇ ರಾಜಕಾರಣ ಅಂತ ಭಾವಿಸಿರುವ ಕಾಂಗ್ರೆಸ್ ಪಕ್ಷವನ್ನು ಸೋಲಿಸುವುದಾಗಿದೆ ಎಂದು ಮುನಿಸ್ವಾಮಿ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಬೆಳಗಾವಿ: ಭಾರತ ಚುನಾವಣಾ ಆಯೋಗದಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಪಡಿಸಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯನ್ವಯ ಚುನಾವಣೆಯ ಮಾದರಿ ನೀತಿ ಸಂಹಿತೆಯು ಮಾರ್ಚ್ 16, 2024 ರಿಂದ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ದೂರು ನಿರ್ವಹಣಾ ಕೇಂದ್ರ, ಮಾದರಿ ನೀತಿ ಸಂಹಿತೆ ನಿಯಂತ್ರಣ ಕೊಠಡಿ ಹಾಗೂ C–Vigil ಕೊಠಡಿಯನ್ನು ಸ್ಥಾಪಿಸಲಾಗಿತ್ತು. ಪ್ರಸ್ತುತ ಸದರಿ ನಿಯಂತ್ರಣ ಕೊಠಡಿಗಳನ್ನು ಬೆಳಗಾವಿ ವಿಶ್ವೇಶ್ವರಯ್ಯಾ ನಗರದ ಸ್ಮಾರ್ಟ ಸಿಟಿ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಸಭಾಂಗಣಕ್ಕೆ ಸ್ಥಳಾಂತರಿಸಲಾಗಿದೆ. ದೂರು ನಿರ್ವಹಣಾ ಕೇಂದ್ರ ದೂರವಾಣಿ ಸಂಖ್ಯೆ 0831-2007015, ಮಾದರಿ ನೀತಿ ಸಂಹಿತೆ ಕೊಠಡಿ ಸಂಖ್ಯೆ 0831-2007018, ಸಿವಿಜಿಲ್(C–Vigil) ದೂರವಾಣಿ ಸಂಖ್ಯೆ 0831-2007017 ಗೆ ಸಾರ್ವಜನಿಕರು ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟ 8 ತಿಂಗಳಿನ ಪುಟ್ಟ ಕಂದಮ್ಮ, 4 ರಿಂದ 5 ನಿಮಿಷಗಳ ಫೋಟೋಶೂಟ್ ಮಾಡಿಸಿಕೊಳ್ಳುವ ಮೂಲಕ ತಿಂಗಳಿಗೆ ಲಕ್ಷಗಟ್ಟಲೆ ಹಣ ಸಂಪಾದನೆ ಮಾಡುತ್ತಿದೆ ಅಂದ್ರೆ ನೀವು ನಂಬ್ತೀರಾ? ಹೌದು,ಪುಟ್ಟ ಕಂದಮ್ಮನ ತಿಂಗಳ ಸಂಪಾದನೆಯನ್ನು ಕಂಡು ನೆಟ್ಟಿಗರು ದಂಗಾಗಿದ್ದಾರೆ. ಅಮೇರಿಕಾದಲ್ಲಿನ ಎಂಜೆ ಎಂಬ 8 ತಿಂಗಳಿನ ಮಗು ಮಾಡೆಲಿಂಗ್ ನಿಂದ ತಿಂಗಳಿಗೆ ಲಕ್ಷಗಟ್ಟಲೆ ಸಂಪಾದನೆ ಮಾಡುತ್ತಿದೆ ಎಂದು ವರದಿ ತಿಳಿಸಿದೆ. ಐದೂವರೆ ತಿಂಗಳ ಮಗುವಿದ್ದಾಗಲೇ ಇದು ವಿವಿಧ ಬ್ರಾಂಡ್ ಗಳಿಗೆ ಬೇಬಿ ಮಾಡೆಲ್ ಅಗಿ ಕಾರ್ಯ ನಿರ್ವಹಿಸಲು ಆರಂಭಿಸಿದೆ. ಇದೀಗ ಈ ಮಗು ತನ್ನ ಸಂಪಾದನೆಯ ಮೂಲಕ ಪೋಷಕರಿಗೆ ಆರ್ಥಿಕವಾಗಿ ಬೆಂಬಲವಾಗಿ ನಿಂತಿದೆ. ಕಳೆದ ಎರಡುವರೆ ತಿಂಗಳಲ್ಲಿ ಸುಮಾರು ಮೂರುವರೆ ಲಕ್ಷಕ್ಕೂ ಅಧಿಕ ಹಣ ಸಂಪಾದನೆ ಮಾಡಿದೆ. ಪ್ರಸ್ತುತ ಎಂಟು ತಿಂಗಳ ಮಗುವಾಗಿರುವ ಎಂಜೆ ಜುಲೈ 5, 2023 ರಲ್ಲಿ ಜನನವಾಗಿತ್ತು. ಎಂಜೆ ತಾಯಿ ಸಾರಾ ಲುಟ್ಜ್ಕರ್ ಸಣ್ಣ ವಯಸ್ಸಿನಲ್ಲಿಯೇ ತನ್ನ ಮಗು ವಿವಿಧ ಬ್ರಾಂಡ್ ಗಳಿಗೆ ಮಾಡೆಲ್ ಆಗಿ…
ಯುವಕನೋರ್ವ ಅತೀ ವೇಗವಾಗಿ ಚಲಿಸುವುದರ ಮೂಲಕ ತನ್ನ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ಬಗ್ಗೆ ವರದಿಯಾಗಿದೆ. ಯುವಕನೊಬ್ಬ ಬೈಕ್ ನಲ್ಲಿ ವೇಗವಾಗಿ ಬರುವಾಗ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದ. ಈ ವೇಳೆ ಹಿಂದಿನಿಂದ ಬಂದ ಮೂರ್ನಾಲ್ಕು ವಾಹನಗಳು ಯುವಕನ ಮೇಲೆ ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಬೈಪಾಸ್ ನಲ್ಲಿ ನಡೆದಿದೆ. ರಾಕೇಶ್ ವಿ.ಆರ್. (27) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಹಾಸನ ನಗರದ ಗೌರಿಕೊಪ್ಪಲಿನ ನಿವಾಸಿಯಾದ ರಾಕೇಶ್, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಬೈಕ್ ನಲ್ಲಿ ವೇಗವಾಗಿ ಬರುವಾಗ ನಿಯಂತ್ರಣಕ್ಕೆ ಸಿಗದೆ ಕೆಳಗೆ ಬಿದ್ದಿದ್ದ. ಈ ವೇಳೆ ಇತರೆ ವಾಹನಗಳು ರಾಕೇಶ್ ಮೇಲೆ ಹರಿದಿತ್ತು. ವಾಹನಗಳು ಹರಿದ ರಭಸಕ್ಕೆ ರಾಕೇಶ್ ದೇಹವೇ ಛಿದ್ರ ಛಿದ್ರವಾಗಿತ್ತು. ಇನ್ನು ಅಪಘಾತದಲ್ಲಿ ಸವಾರರು ವಾಹನ ನಿಲ್ಲಿಸದೆ ಪರಾರಿಯಾಗಿದ್ದಾರೆ. ಮತ್ತೊಂದು ಕಡೆ ರಾಕೇಶ್ ಮೇಲೆ ವಾಹನ ಹತ್ತಿಸುವುದನ್ನು ನಿಯಂತ್ರಿಸಲು ಹೋಗಿ ಕಾರೊಂದು ಡಿವೈಡರ್‌ಗೆ ಗುದ್ದಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಪಾಯದಿಂದ…
ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ನಲ್ಲಿ ಖರೀದಿಸೋದು ಟ್ರೆಂಡ್ ಆಗಿ ಬಿಟ್ಟಿದೆ. ಬಯಸುತ್ತಾರೆ. ಆಹಾರದಿಂದ ಹಿಡಿದು ಪೀಠೋಪಕರಣಗಳವರೆಗೆ ಎಲ್ಲವೂ ಕಡಿಮೆ ಬೆಲೆಗೆ ಆನ್ ಲೈನ್ ನಲ್ಲಿ ಲಭ್ಯವಿದೆ. ಒಂದು ಐಟಂ ಅನ್ನು ಆರ್ಡರ್ ಮಾಡಿದರೆ, ಇನ್ನೊಂದು ಐಟಂ ಮನೆಗೆ ಪಾರ್ಸೆಲ್ ನಲ್ಲಿ ಕಾಣಿಸಿಕೊಳ್ಳುತ್ತದೆ. ಅಂತಹ ಒಂದು ಘಟನೆ ಇತ್ತೀಚೆಗೆ ನಡೆದಿದೆ. ಯುವಕನೊಬ್ಬ ಆನ್ ಲೈನ್ ನಲ್ಲಿ ಮೊಬೈಲ್ ಆರ್ಡರ್ ಮಾಡಿದ್ದ. ಮನೆಗೆ ಬಂದಿರುವ ಪಾರ್ಸೆಲ್ ನೋಡಿದಾಗ ಆತನಿಗೆ ಶಾಕ್ ಆಗಿದೆ. ಅಮಾಲಿಕ್ ತುಯ್ಯಬ್ ಎಂಬ ಯುವಕ ಆನ್‌ಲೈನ್ ಇ–ಕಾಮರ್ಸ್ ಸೈಟ್ ಫ್ಲಿಪ್ ಕಾರ್ಟ್‌ನಲ್ಲಿ ನಥಿಂಗ್ ಫೋನ್ (2ಎ) ಅನ್ನು ಆರ್ಡರ್ ಮಾಡಿದ್ದಾನೆ. ಎರಡು ದಿನಗಳ ನಂತರ ಬಂದ ಪಾರ್ಸೆಲ್ ತೆರೆದು ನೋಡಿ ಶಾಕ್ ಆಗಿದ್ದಾನೆ. ಓಪನ್ ಮಾಡಿ ನೋಡಿದಾಗ ಫೋನ್ ಬದಲಿಗೆ ನಕಲಿ ಬ್ರ್ಯಾಂಡೆಡ್ (iKall) ಫೋನ್ ಇರುವುದನ್ನು ನೋಡಿ ಆಶ್ಚರ್ಯಕ್ಕೊಳಗಾಗಿದ್ದಾನೆ. ಹೋಗ್ಲಿ ಇನ್ನೇನು ಮಾಡೋಣ ,ವಾಪಾಸ್ ಮಾಡೋಣ ಅಂತ ಫ್ಲಿಪ್‌ಕಾರ್ಟ್ ಸೇವಾ ಕೇಂದ್ರವನ್ನು ಸಂಪರ್ಕಿಸಿದ್ರೆ, ಯಾವುದೇ ಉತ್ತರ ಬಂದಿಲ್ಲ ಎಂದು…
ಚಂಡೀಗಢ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸಿದರೆ, ಅಲ್ಲಿಂದಲೇ ಸರ್ಕಾರ ನಡೆಸಲು ಜೈಲಿನಲ್ಲಿ ಕಚೇರಿ ಸ್ಥಾಪಿಸಲು ಅನುಮತಿ ಕೋರಿ ನ್ಯಾಯಾಲಯವನ್ನು ಸಂಪರ್ಕಿಸುತ್ತೇವೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಹೇಳಿದ್ದಾರೆ. ಶನಿವಾರ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಅವರ ಸ್ಥಾನವನ್ನು ಯಾರೂ ತುಂಬಲು ಸಾಧ್ಯವಿಲ್ಲ ಎಂದು ಪಂಜಾಬ್ ಸಿಎಂ ಪ್ರತಿಪಾದಿಸಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿಯನ್ನು ಬಂಧಿಸಿರುವ ಬಗ್ಗೆ ಮತ್ತು ಅವರು ಹೇಗೆ ಸರ್ಕಾರ ನಡೆಸುತ್ತಾರೆ? ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಮಾನ್, ಸರ್ಕಾರವನ್ನು ಜೈಲಿನಿಂದ ನಡೆಸಲು ಸಾಧ್ಯವಿಲ್ಲ ಎಂದು ಎಲ್ಲಿಯೂ ಬರೆಯಲಾಗಿಲ್ಲ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೀದರ್: ಜಿಲ್ಲೆಯ ವಿವಿಧೆಡೆಗಳಲ್ಲಿ ದಾಳಿ ನಡೆಸಿರುವ ಪೊಲೀಸರು, ಪ್ರತಿಷ್ಠಿತ ಕಂಪೆನಿಗಳ ಹೆಸರಿನಲ್ಲಿ ಅಕ್ರಮ ಪಾನ್ ಮಸಾಲ ಹಾಗೂ ತಂಬಾಕು ಪದಾರ್ಥಗಳ ತಯಾರಿಕಾ ಘಟಕಕ್ಕೆ ದಾಳಿ ನಡೆಸಿ, ತಂಬಾಕು ಪದಾರ್ಥ ಹಾಗೂ ಇನ್ನಿತರ ವಸ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಬೀದರ ಜಿಲ್ಲೆಯ ಗಾಂಧಿಗಂಜ ಪೊಲೀಸ್ ಠಾಣೆಯ ರೌಡಿ ನಿಗೃಹ ದಳದ ಅಧಿಕಾರಿ ಹನುಮರಡ್ಡೆಪ್ಪ ಪಿ.ಐ ಅವರ ನೇತೃತ್ವದಲ್ಲಿ ರಾಜಕಿರಣ, ರಾಜಕುಮಾರ, ದೀಪಕ ತಂಡದ ಇವರ ತಂಡ, ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ ಮಹೇಶ ಪಾಟೀಲ್ ಇವರ ಸಮಕ್ಷಮದಲ್ಲಿ ಲಾಡಗೇರಿಯಲ್ಲಿ ಗೋದಾಮಿನ ಮೇಲೆ ದಾಳಿ ನಡೆಸಿ, ನಕಲಿ ಪಾನ್ ಮಸಾಲಾ ಮಾಡುವ ಸಾಮಗ್ರಿಗಳು ಮತ್ತು ಕಚ್ಚಾ ಪದಾರ್ಥಗಳು ಹೀಗೆ ಒಟ್ಟು 34,83,147 ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿ ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹುಲಸೂರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಅಂಬೇವಾಡಿ ಚೆಕ್ ಪೊಸ್ಟ್ ಮುಖಾಂತರ ಅಕ್ರಮವಾಗಿ ಪಾನ್ ಮಸಾಲ ಸಾಗಿಸುತ್ತಿದ್ದವರ ಮೇಲೆ ನಾಗೇಂದ್ರ, ಪಿ.ಎಸ್.ಐ ಹುಲಸೂರ ಪೊಲೀಸ್ ಠಾಣೆ ಇವರ ನೇತೃತ್ವದಲ್ಲಿ…