Subscribe to Updates
Get the latest creative news from FooBar about art, design and business.
- ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ
- ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು
- ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು
- ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
- ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!
- ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
- ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ
- ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ
Author: admin
ಮಾಲ್ಡೀವ್ಸ್ ಇದೀಗ ಭಾರತೀಯರನ್ನು ಸೆಳೆಯಲು ಭಾರತದಲ್ಲಿ ರೋಡ್ ಶೋ ನಡೆಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಲಕ್ಷದ್ವೀಪದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿತ್ತು ಮಾಲ್ಡೀವ್ಸ್. ಮಾಲ್ಡೀವ್ಸ್ ನ ಸಚಿವರು “ಲಕ್ಷದ್ವೀಪವನ್ನು ಅಭಿವೃದ್ಧಿ ಮಾಡಿದಾಕ್ಷಣ ಅದು ಮಾಲ್ಡೀವ್ಸ್ ಆಗುವುದಿಲ್ಲ” ಎಂದು ಹೇಳಿಕೆ ನೀಡಿದ್ದರು. ಮಾಲ್ಡೀವ್ಸ್ ನ ಕೆಲವು ಸಚಿವರು ಭಾರತದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಇದಾದ ಬಳಿಕ ಭಾರತದ ಹಲವು ಮಂದಿ ಮಾಲ್ಡೀವ್ಸ್ ಗೆ ಹೋಗಬೇಕೆಂದುಕೊಂಡವರು ಕೂಡ ತಮ್ಮ ತೀರ್ಮಾನ ಬದಲಾಯಿಸಿ ಲಕ್ಷದ್ವೀಪಕ್ಕೆ ತೆರಳಿದ್ದರು. ಮಾಲ್ಡೀವ್ಸ್ ಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಭಾರತದವರೇ ಹೆಚ್ಚಿನವರಾಗಿದ್ದು, ಪ್ರವಾಸೋದ್ಯಮವನ್ನೇ ಮಾಲ್ಡೀವ್ಸ್ ನಂಬಿಕೊಂಡಿತ್ತು. ಹಾಗಾಗಿ ಪ್ರವಾಸಿಗರಿಲ್ಲದೆ ಹೊಡೆತ ಬಿದ್ದಿರುವ ಹಿನ್ನೆಲೆಯಲ್ಲಿ ಭಾರತೀಯರನ್ನು ಸೆಳೆಯಲು ಮುಂದಾಗಿದೆ. ಮಾಲ್ಡೀವ್ಸ್ ಅಸೋಸಿಯೇಷನ್ ಆಫ್ ಟ್ರಾವೆಲ್ ಏಜೆಂಟ್ಸ್ ಆ್ಯಂಡ್ ಟೂರ್ ಆಪರೇಟರ್ಸ್, ಪ್ರಮುಖ ಪ್ರವಾಸೋದ್ಯಮ ಸಂಸ್ಥೆಯು ಈ ಘೋಷಣೆ ಮಾಡಿದೆ. ಆದರೆ ಯಾವ ಯಾವ ನಗರಗಳಲ್ಲಿ ಮತ್ತು ಯಾವಾಗ ರೋಡ್ ಶೋ ನಡೆಯಲಿದೆ…
ಮಧ್ಯಪ್ರದೇಶ: ಆರು ವರ್ಷದ ಬಾಲಕ ಬೋರ್ ವೆಲ್ ಗೆ ಬಿದ್ದಿರುವ ಘಟನೆಯೊಂದು ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಉತ್ತರ ಪ್ರದೇಶದ ಗಡಿ ಸಮೀಪದ ಮಾಣಿಕಾ ಗ್ರಾಮದಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಲಕ ತೆರೆದ ಬೋರ್ ವೆಲ್ ಬಳಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ರೇವಾ ಜಿಲ್ಲಾಧಿಕಾರಿ ಪ್ರತಿಭಾ ಪಾಲ್ ಅವರು ಹೇಳಿರುವ ಪ್ರಕಾರ, ಮಗು ಸುಮಾರು 40 ಅಡಿ ಆಳದಲ್ಲಿ ಸಿಲುಕಿಕೊಂಡಿದೆ. ಘಟನೆಯ ನಂತರ, ರಾಜ್ಯ ವಿಪತ್ತು ತುರ್ತು ನಿರ್ವಹಣಾ ಪಡೆಯ ತಂಡವು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ವಾರಣಾಸಿಯಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು ಕರೆಸಲಾಗಿದೆ. ಬೋರ್ ವೆಲ್ ಸುಮಾರು 70 ಅಡಿ ಆಳವಿದ್ದು, ಮಗುವನ್ನು ರಕ್ಷಿಸಲು ಸಮಾನಾಂತರ ಹೊಂಡವನ್ನು ತೋಡಲಾಗುತ್ತಿದೆ ಎಂದು ಹೇಳಿದ್ದಾರೆ. ಅಧಿಕಾರಿಗಳು ಪೈಪ್ ಮೂಲಕ ಆಮ್ಲಜನಕ ಪೂರೈಕೆ ಮಾಡುತ್ತಿದ್ದಾರೆ. ಹೆಚ್ಚುವರಿಯಾಗಿ, ಬಾಲಕನ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸಿಸಿಟಿವಿ ಕ್ಯಾಮೆರಾವನ್ನು ಸಹ ಇಳಿಸಲಾಗಿದೆ. ಆದರೂ, ಕೆಲವು ಅಡಚಣೆಗಳಿಂದ ಕ್ಯಾಮೆರಾ ಬಾಲಕನನ್ನು ತಲುಪಲು ಸಾಧ್ಯವಾಗಲಿಲ್ಲ ಎಂದು ಹೆಚ್ಚುವರಿ…
ನವದೆಹಲಿ: ವೇಗವಾಗಿ ಬಂದ ಕಾರು, ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ದೆಹಲಿಯ ನೆರೆಯ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಬೈಕ್ ನಲ್ಲಿದ್ದ ಮತ್ತೊಬ್ಬ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಮೃತ ದುರ್ದೈವಿಗಳನ್ನು,ಸುರೇಂದ್ರ ಸಹೋದರಿಯರಾದ ಶೈಲಿ ಮತ್ತು ಅಂಶುಎಂದು ಗುರುತಿಸಲಾಗಿದೆ. ಸುರೇಂದ್ರ ಎಂಬಾತ ತನ್ನ ಸಹೋದರಿಯರೊಂದಿಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ತಡರಾತ್ರಿ ಮನೆಗೆ ಮರಳುತ್ತಿದ್ದಾಗ ಅಪಘಾತವಾಗಿದ್ದು, ವೇಗವಾಗಿ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಗಾಯಾಳುಗಳ ಮೇಲೆ ಹರಿದು ಪರಾರಿಯಾಗಿದೆ. ವ್ಯಕ್ತಿ ಮತ್ತು ಆತನ ಸಹೋದರಿಯರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬೈಕ್ ಗೆ ಡಿಕ್ಕಿ ಹೊಡೆದ ವಾಹನವನ್ನು ಪೊಲೀಸರು ಇನ್ನೂಪತ್ತೆ ಹಚ್ಚಿಲ್ಲ. ವಾಹನವನ್ನು ಪತ್ತೆಹಚ್ಚಲು ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ ಎಂದಿದ್ದಾರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಏರ್ ಗನ್ ಜೊತೆ ಆಟವಾಡುವಾಗ ಮಿಸ್ ಫೈರ್ ಆಗಿ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿ ವರದಿಯಾಗಿದೆ. ಮೃತ ಬಾಲಕನ್ನು ವಿಷ್ಣು (7) ಎಂಬ ಎಂದು ಗುರುತಿಸಲಾಗಿದೆ. ಮಲ್ಲೇನಹಳ್ಳಿ ಗ್ರಾಮದ ಹಕ್ಕಿಪಿಕ್ಕಿ ಜನಾಂಗದ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿ ಏರ್ ಗನ್ ಇಟ್ಟಿದ್ದು, ಮಕ್ಕಳು ಆಟವಾಡು ಗನ್ ತಗೆದುಕೊಂಡ ಸಂದರ್ಭದಲ್ಲಿ ಮಿಸ್ ಫೈರ್ ಆಗಿ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಅಥವಾ ಬೇರೆ ಕಾರಣದಿಂದ ಬಂದೂಕಿನಿಂದ ಫೈರ್ ಆಗಿರಬಹುದೆಂದು ಹೇಳಲಾಗುತ್ತದೆ. ಒಟ್ಟಾರೆ ಮನೆಯವರ ನಿರ್ಲಕ್ಷ್ಯತನದಿಂದ ಬಾಲಕ ಮೃತಪಟ್ಟಿದ್ದು, ಮೃತ ಬಾಲಕನ ಸಂಬಂಧಿ ನೀಡಿರುವ ದೂರಿನ ಆಧಾರದ ಮೇಲೆ ದೂರು ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪಾವಗಡ: ಇಂದಿನಿಂದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ, ಪಾವಗಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ, ವಿಶೇಷ ಚೇತನರಿಗೆ ಮತ್ತು 85 ವರ್ಷ ಮೇಲ್ಪಟ್ಟವರಿಗೆ ಹೋಂ ವೋಟಿಂಗ್ ನಡೆಸಲು ಶನಿವಾರ ಪಾವಗಡ ಪಟ್ಟಣದ ತಾಲೂಕು ಕಚೇರಿಯಿಂದ 7 ತಂಡಗಳು ತೆರಳಿವೆ. ಈ ಬಗ್ಗೆ ಮಾಹಿತಿ ಹಂಚಿಕೊಂಡ ತಹಶೀಲ್ದಾರ್ ಸಂತೋಷ್ ಕುಮಾರ್ ಅವರು, “ಪಾವಗಡ ತಾಲೂಕಿನಾದ್ಯಂತ ಮೂರು ದಿನಗಳ ಕಾಲ ಈ ಹೋಂ ಓಟಿಂಗ್ ನಡೆಯಲಿದ್ದು, ಒಟ್ಟು 7 ತಂಡಗಳನ್ನು ರಚಿಸಲಾಗಿದ್ದು, ಒಂದು ತಂಡದಲ್ಲಿ 6 ಜನ ಸಿಬ್ಬಂದಿ ಇರಲಿದ್ದಾರೆ. ಈಗಾಗಲೇ ಮತದಾನವು ಪ್ರಾರಂಭವಾಗಿದ್ದು, ವಿಶೇಷ ಚೇತನರು ಮತ್ತು 85 ವರ್ಷ ಮೇಲ್ಪಟ್ಟಿರುವ ವೃದ್ಧರು ಹರ್ಷವನ್ನು ವ್ಯಕ್ತಪಡಿಸಿ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ” ಎಂದು ಮಾಹಿತಿಯನ್ನು ಒದಗಿಸಿದ್ದಾರೆ. ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆ ಹೋಬಳಿಯ ವದನಕಲ್ಲು ಗ್ರಾಮದ ಮತಗಟ್ಟೆ ಸಂಖ್ಯೆ 42ರ ವ್ಯಾಪ್ತಿಯ ವೃದ್ಧರೊಬ್ಬರು, ತಮ್ಮ ಮನೆಯ ಬಳಿಯೇ ಮತದಾನವನ್ನು ಮಾಡಿ ಹರ್ಷವನ್ನು ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಯುಐಡಿಎಐ ಇ ಲರ್ನಿಂಗ್ ಪೋರ್ಟಲ್ ಅನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಪ್ರಾರಂಭಿಸಿದೆ. ಈ ಪೋರ್ಟಲ್ ಮೂಲಕ, ಆಧಾರ್ ಕಾರ್ಡ್ ಸಂಬಂಧಿತ ಸೇವೆಗಳನ್ನು ಒದಗಿಸಲು ಬಯಸುವ ದೇಶದ ನಾಗರಿಕರಿಗೆ, ಆಧಾರ್ ಸೇವೆಗಳಿಗೆ ಸಂಬಂಧಿಸಿದ ತರಬೇತಿಯನ್ನು ನೀಡಲಾಗುತ್ತದೆ. ಈ ಪೋರ್ಟಲ್ ಮೂಲಕ ಮೂಲ ಸೇವಾ ಕೇಂದ್ರವನ್ನು ತೆರೆಯಲು ಸಹ ಅರ್ಜಿ ಸಲ್ಲಿಸಬಹುದು. ಹೇಗೆ ಎಂದು ಕಂಡುಹಿಡಿಯೋಣ. ಮನೆಯಲ್ಲಿ ಮಾಹಿತಿ: UIDAI ಯ ಇ-ಲರ್ನಿಂಗ್ ಪೋರ್ಟಲ್ ಮೂಲಕ, ದೇಶದ ನಾಗರಿಕರು ಆಧಾರ್ ಕಾರ್ಡ್ ನೋಂದಣಿ ಮತ್ತು ಎಲ್ಲಾ ಆಧಾರ್ ಕಾರ್ಡ್-ಸಂಬಂಧಿತ ಕಾರ್ಯಗಳ ಮಾಹಿತಿಯನ್ನು ತಮ್ಮ ಮನೆಯ ಸೌಕರ್ಯದಿಂದ ಪಡೆಯಬಹುದು. ಪೋರ್ಟಲ್ ನಲ್ಲಿ ಲಭ್ಯವಿರುವ ಕೋರ್ಸ್‌ಗಳನ್ನು ಮಾಡುವ ಮೂಲಕ ಈ ಮಾಹಿತಿಯನ್ನು ಪಡೆಯಬಹುದು. ಕೋರ್ಸ್ ಮುಗಿದ ನಂತರ, ಪರೀಕ್ಷೆ ಇರುತ್ತದೆ. ಇದರಲ್ಲಿ ಭಾಗವಹಿಸುವ ಮೂಲಕ ನೀವು ಈ ಪೋರ್ಟಲ್ ಮೂಲಕ ಪ್ರಮಾಣಪತ್ರವನ್ನು ಸಹ ಪಡೆಯಬಹುದು. ಈ ಪೋರ್ಟಲ್ ಆಧಾರ್ ಕಾರ್ಡ್ ಪ್ರಮಾಣಪತ್ರವನ್ನು ಸಹ ಒದಗಿಸುತ್ತದೆ. ನೀವು ಬೇಸ್ ಆಪರೇಟರ್, ಬೇಸ್ ಸೂಪರ್ ವೈಸರ್, ಸೂಪರ್ ವೈಸರ್…
ಟ್ರಾಫಿಕ್ ಜಂಕ್ಷನ್ ಗಳಲ್ಲಿ ತೃತೀಯಲಿಂಗಿಗಳು ಪ್ರಯಾಣಿಕರಿಂದ ಬಲವಂತವಾಗಿ ಹಣ ಪಡೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ನಡು ರಸ್ತೆಯಲ್ಲಿ, ಟ್ರಾಫಿಕ್ ನಲ್ಲಿ ಮಂಗಳಮುಖಿಯರು ಪ್ರಯಾಣಿಕರೊಂದಿಗೆ ಹಣವನ್ನು ಕೇಳುತ್ತಾ, ಭಿಕ್ಷೆ ಬೇಡುತ್ತಾ ಬರುತ್ತಾರೆ. ಹಣ ಕೊಡಲಿಲ್ಲ ಎಂದರೆ ಕೆಲವರು ಅಸಭ್ಯವಾಗಿ ವರ್ತಿಸಿ ರಂಪಾಟ ಮಾಡುತ್ತಾರೆ. ಒಮ್ಮೊಮ್ಮೆ ಎಲ್ಲರ ಮುಂದೆ ಬಾಯಿಗೆ ಬಂದಂತೆ ಮಾತನಾಡಿ, ಪುರುಷರ ಮರ್ಯಾದೆಯನ್ನು ಮೂರು ಕಾಸಿಗೆ ಹರಾಜು ಹಾಕಿ, ಮುಜುಗರವನ್ನುಂಟುಮಾಡುತ್ತಾರೆ. ಆದರೆ ಇದನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರದ ಪುಣೆ ಪೋಲೀಸರು ಇದಕ್ಕೆಲ್ಲ ಬ್ರೇಕ್ ಹಾಕಲು ಮುಂದಾಗಿದ್ದಾರೆ. ಮಂಗಳಮುಖಿಯರಲ್ಲಿ ಹೆಚ್ಚಿನವರು ಪ್ರೀತಿ, ಕರುಣೆ, ವಾತ್ಸಲ್ಯ ಹೊಂದಿರುತ್ತಾರೆ. ಜನರ ಕಷ್ಟಗಳನ್ನು ಅರ್ಥೈಸಿಕೊಳ್ಳುತ್ತಾರೆ. ಹಣವಿಲ್ಲ ಎಂದರೆ ಕೆಲವೊಮ್ಮೆ ತಾವೇ ಹಣ ನೀಡಿ ಮಾತೃಹೃದಯಿಗಳಾಗುತ್ತಾರೆ. ಆದರೆ ಕೆಲವರು ಮಾಡುವ ರಂಪಾಟದಿಂದ ಇಂತಹ ಒಳ್ಳೆಯವರಿಗೂ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಇದರ ತಾಪತ್ರಯವೇ ಬೇಡ ಎಂದು ನಿರ್ಧಾರ ಮಾಡಿರುವ ಮಹಾರಾಷ್ಟ್ರದ ಪುಣೆ ಪೊಲೀಸರು ತೃತೀಯ ಲಿಂಗಿಗಳು ಭಿಕ್ಷೆ ಬೇಡುವುದನ್ನು ಬ್ಯಾನ್ ಮಾಡಿದ್ದಾರೆ. ಪುಣೆ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್…
ದಂಗಲ್ ಸಿನಿಮಾ ಖ್ಯಾತಿಯ ನಿತೀಶ್ ತಿವಾರಿ ಅವರು ಬಾಲಿವುಡ್ ನಲ್ಲಿ ʼರಾಮಾಯಣʼ ಸಿನಿಮಾ ಮಾಡುವ ವಿಚಾರ ಎಲ್ಲರಿಗೂ ತಿಳಿದೇ ಇದೆ. ದಂಗಲ್ ಸಿನಿಮಾ ಖ್ಯಾತಿಯ ನಿತೀಶ್ ತಿವಾರಿ ಅವರು ಬಾಲಿವುಡ್ ನಲ್ಲಿ ʼರಾಮಾಯಣʼ ಸಿನಿಮಾ ಮಾಡುವ ವಿಚಾರ ಎಲ್ಲರಿಗೂ ತಿಳಿದೇ ಇದೆ. ಇದರಲ್ಲಿ ರಣಬೀರ್ ಕಪೂರ್, ಸಾಯಿಪಲ್ಲವಿ ಅವರು ರಾಮ-ಸೀತೆ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ರಾಕಿಂಗ್ ಸ್ಟಾರ್ ಯಶ್ ಅವರು ಹಣ ಹಾಕಲಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಬಹುಕೋಟಿ ವೆಚ್ಚದ ಈ ಸಿನಿಮಾಗೆ ಯಶ್ ಕೂಡಾ ನಿರ್ಮಾಪಕ ಎಂದು ಅಧಿಕೃತ ಘೋಷಣೆ ಆಗಿದೆ. ಹನುಮಂತನಾಗಿ ಸನ್ನಿ ಡಿಯೋಲ್ ನಟಿಸಲಿದ್ದಾರೆ. ಕುಂಭಕರ್ಣನ ಪಾತ್ರಕ್ಕೆ ಬಾಬಿಡಿಯೋಲ್ ಅವರನ್ನು ಸಂಪರ್ಕ ಮಾಡಲಾಗಿದೆ ಎಂದು ವರದಿಯೊಂದು ತಿಳಿಸಿದೆ. ವಿಜಯ್ ಸೇತುಪತಿ ರಾವಣನ ಕಿರಿಯ ಸಹೋದರ ವಿಭೀಷಣನ ಪಾತ್ರವನ್ನು ಮಾಡಬಹುದು ಎಂದು ಹೇಳಲಾಗಿದೆ. ಎಪ್ರಿಲ್ 12ರಂದು ಯಶ್ ಅವರ ನಿರ್ಮಾಣ ಸಂಸ್ಥೆ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಜೊತೆ ‘ರಾಮಾಯಣʼ…
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿದ್ದ ಸಂಪಾಜೆಯ ಡಾ.ಟಿ. ಶ್ಯಾಮ್ ಭಟ್ ಅವರನ್ನು ಆಯೋಗದ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇವರು ಜಿಲ್ಲಾಧಿಕಾರಿ, ಸಾರಿಗೆ ಇಲಾಖೆ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು, ಕರ್ನಾಟಕ ಲೋಕಸೇವಾ ಆಯುಕ್ತರು ಮೊದಲಾದ ಉನ್ನತ ಹುದ್ದೆಗಳನ್ನು ಅಲಂಕರಿಸಿದ ಶ್ಯಾಮ್ ಭಟ್ಟರ ಕಲಾಪ್ರೀತಿ ಅನನ್ಯವಾದದ್ದು. ತನ್ನ ಕರ್ತವ್ಯದ ಒಂದು ಭಾಗವೆಂದೇ ಭಾವಿಸಿದ್ದಾರೆ. ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ಮತ್ತು ಸಂಪಾಜೆ ಯಕ್ಷೋತ್ಸವದ ಮುಖಾಂತರ ಅವರು ನಡೆಸಿದ ಕಲಾಸೇವೆ ಅವಿಸ್ಮರಣೀಯ. ಮಾನವ ಹಕ್ಕುಗಳ ಆಯೋಗದ ನೂತನ ಅಧ್ಯಕ್ಷರ ಆಯ್ಕೆಯಾಗುವ ತನಕ ಡಾ.ಟಿ. ಶ್ಯಾಮ್ ಭಟ್ ಅವರು ಹಂಗಾಮಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕೆಲಹೊತ್ತಿನಲ್ಲೇ ಸುಟ್ಟು ಕರಕಲಾದ ಘಟನೆ ತುಮಕೂರು ಜಿಲ್ಲೆ ಶಿರಾ ಹೊರವಲಯಲ್ಲಿ ನಡೆದಿದೆ. ರಸ್ತೆಯ ಪೆಟ್ರೋಲ್ ಬಂಕ್‌ವೊಂದರ ಮುಂಭಾಗ ಶುಕ್ರವಾರ ಮಧ್ಯಾಹ್ನ ಜರುಗಿದೆ. ಕಾರಿನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿ ಕೂಡಲೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಹೊರಗಡೆ ಬಂದಿದ್ದಾರೆ. ಇದಾದ ಬಳಿಕ ಕೆಲ ಹೊತ್ತಿನಲ್ಲೇ ಕಾರು ಸುಟ್ಟು ಕರಕಲಾಗಿದೆ ಎನ್ನಲಾಗಿದೆ. ಘಟನೆಯ ಹಿನ್ನಲೆಯಲ್ಲಿ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಅಷ್ಟರೊಳಗೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ. ಕಾರು ಹೊತ್ತಿ ಉರಿದ ವಿಡಿಯೊ ಇದೀಗ ಸಾಮಾಜಿಕ ಜಾಲಗಳಲ್ಲಿ ವೈರಲ್ ಆಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296