Author: admin

ಪ್ರಧಾನಿ ನರೇಂದ್ರ ಮೋದಿ ಹಲವು ಬಾರಿ ಉತ್ತರ ಕರ್ನಾಟಕದ ಭಾಗಕ್ಕೆ ಹಲವು ಬಾರಿ ಭೇಟಿ ನೀಡಿದ್ದಾರೆ. ಆದರೆ ಅವರ ಕೊಡುಗೆ ಏನೂ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು. ಶುಕ್ರವಾರ ಕಲಬುರಗಿಯಲ್ಲಿ ನಡೆದ ಬೃಹತ್‌ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಇಲ್ಲಿರುವ ಕಾರ್ಖಾನೆ, ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಮೋದಿ ಸ್ಥಗಿತಗೊಳಿಸಿದ್ದಾರೆ ಎಂದು ಟೀಕಿಸಿದರು. ದೆಹಲಿಯಂತೆ ಇಲ್ಲಿಯೂ ಒಂದು ಏಮ್ಸ್‌ ನಿರ್ಮಿಸುವಂತೆ ನಾನು ಪ್ರಧಾನಿಯವರಿಗೆ ಕೇಳಿದ್ದೆ. ಆದರೆ ಪ್ರಧಾನಿಯವರು ನಿರಾಕರಿಸಿದರು. ಸ್ವತಃ ನಾನು ಇಲ್ಲಿ ಇಎಸ್‌ಐ ಆಸ್ಪತ್ರೆ ಮಾಡಿಸಿದ್ದೇನೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಒಂದೇ ಒಂದು ಕೆಲಸ ಹೈದ್ರಾಬಾದ್‌ ಕರ್ನಾಟಕಕ್ಕಾಗಲೀ, ಕಲ್ಯಾಣ ಕರ್ನಾಟಕಕ್ಕಾಗಲೀ ಮಾಡಿಲ್ಲ ಎಂದು ಹೇಳಿದರು. ನಾವು ಹೇಳಿದ್ದ ಐದು ಗ್ಯಾರೆಂಟಿ ಯೋಜನೆಗಳನ್ನು ನಾವು ನೀಡಿದ್ದೇವೆ. ಆದರೆ ಪ್ರಧಾನಿ ಮೋದಿ ಹೋದಲ್ಲಿ ಬಂದಲ್ಲಿ ಮೋದಿಜಿ ಗ್ಯಾರೆಂಟಿ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ನಾವು ನೀಡಿದ್ದ ಗ್ಯಾರೆಂಟಿಗಳು ಜನರನ್ನು ಮುಟ್ಟುತ್ತಿದೆ. ಆದರೆ ಪ್ರಧಾನಿ ಗ್ಯಾರೆಂಟಿ ಯಾವುದಾದರೂ ಜಾರಿಯಾಗಿದೆಯೇ ಎಂದು ಖರ್ಗೆ…

Read More

ಸೀಮೆ ಬದನೆಕಾಯಿ ತಿನ್ನಿ.. ಒಳ್ಳೆಯ ಆರೋಗ್ಯ ಪಡೆಯಿರಿ: ಸೀಮೆ ಬದನೆಕಾಯಿಯಲ್ಲಿರುವ ಫೈಟೊಕೆಮಿಕಲ್ ‌ಗಳು ರಕ್ತದ ಹರಿವನ್ನು ಸುಧಾರಿಸುತ್ತದೆ ಮತ್ತು ರಕ್ತದೊತ್ತಡದ ಮಟ್ಟವನ್ನು ಕಡಿಮೆ ಮಾಡುತ್ತದೆ. ಸೀಮೆಬದನೆಕಾಯಿಯಲ್ಲಿ ಮೈರಿಸೆಟಿನ್ ಸೇರಿದಂತೆ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದ್ದು, ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ಉರಿಯೂತವನ್ನು ಕಡಿಮೆ ಮಾಡಲು ಮತ್ತು ಹೃದ್ರೋಗ ಮತ್ತು ಕ್ಯಾನ್ಸರ್‌ ನಂತಹ ಕೆಲವು ಕಾಯಿಲೆಗಳ ಅಭಿವೃದ್ಧಿ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬೆಳ್ಳುಳ್ಳಿಯಿಂದ ಇರೋ ಲಾಭ ಒಂದೆರೆಡಲ್ಲ! ಬೆಳ್ಳುಳ್ಳಿ ಸೇವನೆಯಿಂದ ಅಸ್ತಮಾ ದಾಳಿಗಳು ನಿಯಂತ್ರಣಕ್ಕೆ ಬರುತ್ತವೆ. ಪ್ರತಿದಿನ ರಾತ್ರಿ ಮಲಗುವ ಮುನ್ನ ಒಂದು ಲೋಟ ಹಾಲಿನೊಂದಿಗೆ ಮೂರು ಎಸಳು ಬೆಳ್ಳುಳ್ಳಿಯನ್ನು ಸೇವಿಸಿದರೆ ಅಸ್ತಮಾ ನಿವಾರಣೆಯಾಗುತ್ತದೆ. ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಕರುಳಿನ ಮತ್ತು ಹೊಟ್ಟೆಯ ಕ್ಯಾನ್ಸರ್ ನಿಂದ ಮುಕ್ತಿ ಪಡೆಯಬಹುದು. ಇದು ಕ್ಯಾನ್ಸ‌ರ್ ವಿರುದ್ಧ ಹೋರಾಡಲು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಬೆಳ್ಳುಳ್ಳಿ ತಿಂದರೆ ಕರುಳಿನ ಸಮಸ್ಯೆ ನಿವಾರಣೆಯಾಗುತ್ತದೆ. ಬೆಳ್ಳುಳ್ಳಿ ಕಣ್ಣಿನ ಆರೋಗ್ಯಕ್ಕೂ ಒಳ್ಳೆಯದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಮಥುರಾ: ಚುನಾವಣಾ ಪ್ರಚಾರದ ವೇಳೆ ಸಂಸದೆ ಹಾಗೂ ನಟಿ ಹೇಮಾ ಮಾಲಿನಿ ಅವರು ರೈತರ ಜೊತೆಗೂಡಿ ಸುಡು ಬಿಸಿಲಿನಲ್ಲಿ ಗದ್ದೆಗೆ ತೆರಳಿ ಗೋಧಿ ಬೆಳೆ ಕಟಾವು ಮಾಡಿದ್ದಾರೆ. ಬೆಳೆ ಕಟಾವು ಮಾಡುತ್ತಿರುವ ಚಿತ್ರ ಹಾಗೂ ಅಲ್ಲಿ ರೈತ ಮಹಿಳೆಯರೊಂದಿಗೆ ತೆಗೆದ ಫೋಟೊಗಳನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿರುವ ಹೇಮಾ ಮಾಲಿನಿ ಅವರು, “ನಾನು ಕಳೆದ ಹತ್ತು ವರ್ಷಗಳಿಂದ ಈ ಗ್ರಾಮಕ್ಕೆ ಬರುತ್ತಿದ್ದೇನೆ, ರೈತರೊಂದಿಗೆ ಮಾತನಾಡಲು ಅವಕಾಶ ಸಿಕ್ಕಿರುವುದು ಸಂತಸ ತಂದಿದೆ” ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ತುಮಕೂರು: ತುಮಕೂರು ನಗರದ ನೃಪತುಂಗ ವಾರ್ಡ್ ನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಾಣವಾದ ವಿಶ್ರಾಂತಿ ವನವನ್ನು ಅಧಿಕಾರಿಗಳು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲವೆಂದು ಸಾರ್ವಜನಿಕರು ಹರಿಹಾಯ್ದಿದ್ದಾರೆ. ಪಾರ್ಕ್ ನಲ್ಲಿ ಅವಶ್ಯಕವಿರುವ ಮೂಲಭೂತ ಸೌಕರ್ಯ ಒದಗಿಸುವಲ್ಲಿ ನಗರ ಪಾಲಿಕೆ ವಿಫಲವಾಗಿದೆ ಎನ್ನುತ್ತಿದ್ದಾರೆ. ಸಾರ್ವಜನಿಕ ಶೌಚಾಲಯಕ್ಕೆ, ಕುಡಿಯಲು, ಗಿಡ – ಮರ ಗಳಿಗೆ ನೀರು ಪೂರೈಸುವಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಾಣವಾದ ಪಾರ್ಕ್ ಅನೈತಿಕ ಚಟುವಟಿಕೆಗಳ ತಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನಾದರೂ, ಸಂಬಂಧ ಪಟ್ಟ ನಗರ ಪಾಲಿಕೆ ನಿದ್ದೆಯಿಂದ ಎಚ್ಚೆತ್ತು, ನಗರದ ಎಲ್ಲ ಪಾರ್ಕ್ ಗಳ ಸ್ವಚ್ಛತೆ ಮತ್ತು ಭದ್ರತೆ ಒದಗಿಸಬೇಕೆಂದು ಕಾಳಜಿ ಫೌಂಡೇಶನ್ ಸದಸ್ಯರು ನಗರದ ಸಾರ್ವಜನಿಕರ ಪರವಾಗಿ ಆಗ್ರಹಿಸುತ್ತದೆ… ವರದಿ: ಮಂಜುಸ್ವಾಮಿ ಎಂ ಎನ್ ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಫ್ರಿಡ್ಜ್ ವಾಟರ್ ಕುಡಿಯೋ ಮುನ್ನ ಎಚ್ಚರವಿರಲಿ! ರೆಫ್ರಿಜರೇಟರ್‌ ನಿಂದ ನೇರವಾಗಿ ತಣ್ಣೀರು ಕುಡಿಯುವುದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ರೆಫ್ರಿಜರೇಟರ್‌ ನಿಂದ ತಣ್ಣೀರು ಕುಡಿಯುವುದರಿಂದ ಬೊಜ್ಜು ಹೆಚ್ಚಾಗುವುದು ಮಾತ್ರವಲ್ಲದೆ ಅನೇಕ ರೋಗಗಳಿಗೆ ಕಾರಣವಾಗುತ್ತದೆ. ತಣ್ಣೀರು ಕುಡಿಯುವುದರಿಂದ ಹೃದಯಕ್ಕೆ ಗಂಭೀರ ಹಾನಿ ಉಂಟಾಗುತ್ತದೆ. ಪರಿಣಾಮವಾಗಿ, ರಕ್ತನಾಳಗಳು ಸಂಕುಚಿತಗೊಳ್ಳಲು ಪ್ರಾರಂಭವಾಗುತ್ತದೆ ಮತ್ತು ರಕ್ತದ ಹರಿವು ನಿಧಾನಗೊಳ್ಳುತ್ತದೆ. ಕ್ಯಾರೆಟ್ ತಿನ್ನುವುದರಿಂದ ಆಗುವ ಪ್ರಯೋಜನಗಳು: ಕ್ಯಾರೆಟ್ ತಿನ್ನುವುದು ತೂಕ ನಷ್ಟಕ್ಕೆ ಸಹಕಾರಿಯಾಗಿದೆ. ಇದನ್ನು ಸೇವಿಸುವುದರಿಂದ ಸೇಬು ಸೇವನೆಗಿಂತ ಹೆಚ್ಚಿನ ಪ್ರಯೋಜನವನ್ನು ಪಡೆಯಬಹುದಂತೆ. ಸೇಬಿನಲ್ಲಿ ಫೈಬ‌ರ್ ಸಮೃದ್ಧವಾಗಿದೆ. ಆದರೆ ಕ್ಯಾರೆಟ್ ನಲ್ಲಿ ಕರಗದ ಮತ್ತು ಕರಗಬಲ್ಲ ಪ್ರೋಟೀನ್ ಇದೆ. ಕ್ಯಾರೆಟ್ ನಲ್ಲಿ ಸೇಬಿಗಿಂತ 3 ಪಟ್ಟು ಹೆಚ್ಚು ಕ್ಯಾಲ್ಸಿಯಂ ಇದೆ. ಹಾಗಾಗಿ ಕ್ಯಾರೆಟ್ ಸೇವಿಸುವುದರಿಂದ ಮೂಳೆಗಳು ಬಲಗೊಳ್ಳುತ್ತದೆ. ಕ್ಯಾರೆಟ್ ನಲ್ಲಿ ಕಬ್ಬಿಣಾಂಶ ಮತ್ತು ಪೊಟ್ಯಾಶಿಯಂ ಉತ್ತಮವಾಗಿದೆ ಇದರಿಂದ ರಕ್ತಹೀನತೆ ಸಮಸ್ಯೆ ಕಾಡುವುದಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಬೆಂಗಳೂರು: ನವವಿವಾಹಿತನೊಬ್ಬ ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಲಹಂಕ ಮೂಲದ ನವೀನ್ ಮೃತ ದುರ್ದೈವಿಯಾಗಿದ್ದಾನೆ. ಈತ ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ನವೀನ್‌ ಸ್ಕೂಟರ್‌ ಅನ್ನು ಫ್ಲೈಓವರ್ ಮೇಲೆ ಪಾರ್ಕಿಂಗ್ ಮಾಡಿ ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ದೌಡಾಯಿಸಿದ್ದು, ಹೆಚ್ಚಿನ ವಿವರ ಕಲೆಹಾಕುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತಿದೆ. ನವೀನ್‌ ಕರ್ನಾಟಕ ವಿದ್ಯುತ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ. ಶುಕ್ರವಾರ ಬೆಳಗ್ಗೆ ಡ್ಯೂಟಿಗೆ ಹೋಗುತ್ತೇನೆ ಎಂದು ಮನೆಯಿಂದ ಹೊರಟಿದ್ದ ನವೀನ್‌ ನಾಯಂಡಹಳ್ಳಿ ಫ್ಲೈಓವರ್‌ ಮೇಲಿಂದ ಕೆಳಗೆ ಜಿಗಿದಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದ ಪೊಲೀಸ್ ಕ್ವಾಟ್ರಸ್‌ನಲ್ಲಿ ಪೊಲೀಸ್ ಹೆಡ್ ಕಾನ್ಸ್‌ ಟೇಬಲ್‌ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಾಗರಾಜ್ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಹೆಡ್‌ ಕಾನ್ಸ್‌ ಟೇಬಲ್‌ ಆಗಿದ್ದಾರೆ. ಡಿ.ಎ.ಆರ್‌ ನಲ್ಲಿ ಪೊಲೀಸ್ ಹೆಡ್ ಕಾನ್ಸ್‌ಟೇಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜ್‌, ಅವರು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಫ್ಯಾನ್‌ ಗೆ ನೇಣಿಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹಕ್ಕೆ ಬೇಸತ್ತುಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ನಾಗರಾಜ್‌ ಬರೆದಿದ್ದ ಡೆತ್‌ ನೋಟ್ ಸಿಕ್ಕಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯದಲ್ಲಿ ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆದೇಶಿಸಿದ್ದಾರೆ. ‘ರಾಜ್ಯದಲ್ಲಿ ಪತಂಜಲಿ ಆಯುರ್ವೇದ ಲಿಮಿಟೆಡ್‌ ನಿಂದ ಬರುವ ಎಲ್ಲ ಉತ್ಪನ್ನಗಳ ಗುಣಮಟ್ಟ ಪರಿಶೀಲನೆ ನಡೆಸಲಾಗುತ್ತದೆ. “ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ಔಷದ ನಿಯಂತ್ರಣ ಇಲಾಖೆ ಮತ್ತು ಆಯುಷ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹೇಳಿದ್ದಾರೆ. ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿರುವ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀ ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಈ ವಿಷಯವನ್ನು ಯಾವುದೇ ಕಾರಣಕ್ಕೂ ಲಘುವಾಗಿ ತೆಗೆದುಕೊಳ್ಳುವಂತಿಲ್ಲ ಎಂದಿದೆ. ಇದಾದ ಬಳಿಕ ದಿನೇಶ್ ಗುಂಡೂರಾವ್ ಈ ಕ್ರಮ ಕೈಗೊಂಡಿದ್ದಾರೆ. ಬಾಬಾ ರಾಮದೇವ್ ಆಯುರ್ವೇದ ಮತ್ತು…

Read More

ಲೋಕಸಭಾ ಕ್ಷೇತ್ರದ ಬಹುಜನ ಸಮಾಜವಾದಿ ಪಕ್ಷ(ಬಿ.ಎಸ್.ಪಿ.) ಅಭ್ಯರ್ಥಿ ಚಿನ್ನಪ್ಪ ವೈ. ಚಿಕ್ಕಹಾಗಡೆ ನಾಮಪತ್ರ ವಾಪಸ್ ಪಡೆದುಕೊಂಡಿದ್ದು, ಡಿ.ಕೆ. ಸಹೋದರರ ದಬ್ಬಾಳಿಕೆ ಮತ್ತು ಧಮ್ಕಿಗೆ ಹೆದರಿ ನಾಮಪತ್ರ ವಾಪಸ್ ಪಡೆಯಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಆರೋಪಿಸಿದ್ದಾರೆ. ಕರ್ನಾಟಕದ ಪ್ರಮುಖ ಹೈವೋಲ್ಟೇಜ್ ಕ್ಷೇತ್ರವಾದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವು ಈ ಸಾರಿ ಪ್ರಮುಖ ಆಕರ್ಷಣೀಯವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ತೆಕ್ಕೆಗೆ ಪಡೆದ ಏಕೈಕ ಕ್ಷೇತ್ರ ಇದು. ಅದರಲ್ಲೂ ನಾಡಿನ ಪ್ರಬಲ ನಾಯಕರಾದ ಡಿಕೆ ಬ್ರದರ್ಸ್ ಕಣ್ಣಿಟ್ಟ, ಅವರ ಕಪಿಮುಷ್ಟಿಯಲ್ಲಿ ಇರುವ ಏಕೈಕ ಕ್ಷೇತ್ರ. ಹೀಗಾಗಿ ಪ್ರತಿಷ್ಠೆಯ ಅಖಾಡವೂ ಇದಾಗಿದೆ. ಆದರೆ ಈ ಸಲ ಬಿಜೆಪಿ ಡಿ.ಕೆ. ಸುರೇಶ್ ಅವರಷ್ಟೇ ಪ್ರಬಲವಾಗಿರುವ ಡಾ.ಸಿ.ಎನ್. ಮಂಜುನಾಥ್ ಅವರನ್ನು ಕಣಕ್ಕಿಳಿಸಿದ್ದು, ಈ ಸಲ ಕಾಂಗ್ರೆಸ್ ಗೆಲುವು ಅಷ್ಟು ಸುಲಭದ್ದಲ್ಲ. ಹೀಗಾಗಿ ಹೇಗಾದರೂ ಮಾಡಿ ಈ ಸಲವೂ ಬೆಂಗಳೂರು ಗ್ರಾಮಾಂತರವನ್ನು ಗೆಲ್ಲಬೇಕು ಎಂದು ಪಣತೊಟ್ಟಿರುವ ಡಿಕೆ ಬ್ರದರ್ಸ್ ಭಾರೀ ಕಸರತ್ತು ನಡೆಸುತ್ತಿದ್ದಾರೆ. ಹೀಗಾಗಿ…

Read More

ಮೈಸೂರು: ಮೈಸೂರಿನ ತಿ. ನರಸೀಪುರ ತಾಲೂಕಿನ ಮರಡೀಪುರ ಗ್ರಾಮದಲ್ಲಿ ನೀರಿನಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ರಾಹುಲ್ (17) ಮೃತ ದುರ್ದೈವಿಯಾಗಿದ್ದಾರೆ. ಸ್ನೇಹಿತರ ಜತೆ ಕಾವೇರಿ ನದಿಯಲ್ಲಿ ಈಜಲು ತೆರಳಿದ ರಾಹುಲ್‌ ನೀರಿನಿಂದ ಹೊರಬರಲು ಆಗದೆ ಮುಳುಗಿ ಮೃತಪಟ್ಟಿದ್ದಾನೆ. ಜತೆಯಲ್ಲಿದ್ದ ಸ್ನೇಹಿತರು ರಕ್ಷಣೆಗೆ ತೆರಳಿದ್ದಾರೆ. ಆದರೆ ನೀರಿನ ಸೆಳೆತಕ್ಕೆ ಸಿಲುಕಿದ ರಾಹುಲ್‌ ಕಾವೇರಿ ನದಿಯಲ್ಲಿ ಕೊಚ್ಚಿ ಹೋಗಿದ್ದಾನೆ. ಮಹದೇಶ್ವರ ದೇವಸ್ಥಾನದ ಬಳಿ ಇರುವ ಹೊಳೆಯಲ್ಲಿ ನೀರಿಗೆ ಇಳಿದು ಆಟ ಆಡುವಾಗ ನೀರಿನಲ್ಲಿ ಮುಳುಗಿದ್ದು, ವಿಷಯ ತಿಳಿದ ಕೂಡಲೇ ಹೊಳೆ ಬಳಿ ಬಂದ ಪೋಷಕರು ನೀರಿನಿಂದ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಸ್ಥಳಕ್ಕೆ ತಲಕಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More