Author: admin

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕೊಟ್ಟನಹಳ್ಳಿಯಲ್ಲಿ ಪತಿಯೊಬ್ಬ ಮದ್ಯ ಸೇವಿಸಲು ಹಣ ಕೊಟ್ಟಿಲ್ಲವೆಂಬ ಕಾರಣಕ್ಕೆ, ಪತ್ನಿ ಮೇಲೆ ಹಲ್ಲೆ ನಡೆಸಿದ್ದು, ಪತ್ನಿ ಹಾಗೂ ಮಕ್ಕಳಿದ್ದ ಮನೆಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಪತಿ ಬೆಂಕಿ ಹಚ್ಚುತ್ತಿದ್ದಂತಯೇ ಪತ್ನಿ ಹಾಗೂ ಮಕ್ಕಳು ಹೊರಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಈ ಘಟನೆಯಲ್ಲಿ ಪತ್ನಿ ಆಶಾಗೆ ಗಾಯವಾಗಿದ್ದು ಸೋಲದೇವನಹಳ್ಳಿಯ ಲೀಲಾವತಿ ಆಸ್ಪತ್ರೆಯಲ್ಲಿ ಪತ್ನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಕಿಯಿಂದ ಮಕ್ಕಳ ಶಾಲಾ ಪುಸ್ತಕ, ಟಿವಿ, ಬಟ್ಟೆ ಸೇರಿ ಗೃಹ ಉಪಯೋಗಿ ವಸ್ತುಗಳು ಸುಟ್ಟು ಭಸ್ಮವಾಗಿವೆ. ಪತ್ನಿ ನೀಡಿದ ದೂರಿನ ಮೇರೆಗೆ ಇದೀಗ ಕಿರಣ್ ಕುಮಾರ್(31)ನನ್ನು ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಹೈದರಾಬಾದ್‌: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗಳು ತನ್ನ ಪ್ರಿಯಕರನ ಜೊತೆ ಇರುವುದನ್ನು ಪ್ರತ್ಯಕ್ಷವಾಗಿ ಕಂಡ ತಾಯಿ, ಕುಪಿತಗೊಂಡು ಮಗಳನ್ನೇ ಕತ್ತು ಹಿಸುಕಿ ಕೊಂದಿದ್ದಾಳೆ. ಹೈದರಾಬಾದ್‌ ನ ಇಬ್ರಾಹಿಂಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಭಾರ್ಗವಿ (19) ಮೃತ ಮಗಳಾಗಿದ್ದರೆ, ಜಂಗಮ್ಮ ಮಗಳನ್ನೇ ಕೊಂದ ತಾಯಿಯಾಗಿದ್ದಾರೆ. ಬೆಳಗ್ಗೆ ತಾಯಿ ಜಂಗಮ್ಮ ಕೆಲಸಕ್ಕೆ ಹೋಗಿದ್ದು, ಕೆಲಸ ಮುಗಿಸಿ ಮನೆಗೆ ಊಟಕ್ಕೆ ಬಂದಿದ್ದಳು. ಈ ಸಂದರ್ಭದಲ್ಲಿ ಮಗಳು ತನ್ನ ಪ್ರಿಯಕರ​ನ ಜೊತೆಯಲ್ಲಿದ್ದದ್ದನ್ನು ತಾಯಿಯಾದ ಜಂಗಮ್ಮ ಕಂಡಿದ್ದಾಳೆ. ಜೊತೆ ಇದ್ದ ಆ ಹುಡುಗನನ್ನು ಬೈದು ಮನೆಯಿಂದ ಹೊರಗೆ ಕಳುಹಿಸಿದ್ದಾಳೆ. ಇದಾದ ಬಳಿಕ, ಮಗಳಿಗೆ ಹೊಡೆದಿದ್ದಲ್ಲದೇ, ಕತ್ತು ಹಿಸುಕಿ ಕೊಂದಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಜಂಗಮ್ಮ ಕೊಲೆ ಮಾಡಿರುವುದನ್ನು ಸ್ವತಃ ಅವರ ಮಗ ನೋಡಿದ್ದು, ಅಮ್ಮ ಅಕ್ಕನನ್ನು ಕೊಲೆ ಮಾಡಿದ್ದನ್ನು ನಾನು ನೋಡಿದ್ದೇನೆ ಎಂದು ತಾಯಿ ಜಂಗಮ್ಮ ವಿರುದ್ಧ ಇಬ್ರಾಹಿಂಪಟ್ಟಣ ಪೊಲೀಸ್​ ಠಾಣೆಗೆ ದೂರು ನೀಡಿದ್ದಾನೆ. ಯುವತಿಯ ಅಪ್ರಾಪ್ತ ಸಹೋದರ, ತಾನು ಕೊಲೆಯನ್ನು ನೋಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ತನ್ನ…

Read More

ಚಾಮರಾಜನಗರದ ಹನೂರು ತಾಲೂಕಿನ ಕತ್ತೆಕಾಲು ಪೋಡು ಗ್ರಾಮದಲ್ಲಿ ಆನೆ ದಾಳಿಯಿಂದ ಯುವಕನೊಬ್ಬ ಮೃತಪಟ್ಟ ಧಾರುಣ ಘಟನೆ ನಡೆದಿದೆ. ಮಾದ(23) ಮೃತ ದುರ್ದೈವಿಯಾಗಿದ್ದಾನೆ. ಹಿರಿಯಂಬಲ ಗ್ರಾಮಕ್ಕೆ ಹೋಗಿ ವಾಪಸಾಗುತ್ತಿದ್ದ ಮಾದನ ಮೇಲೆ ಬಿಆರ್‌ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವಲಯದಲ್ಲಿ ಆನೆ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಗದಗ:  ಇತ್ತೀಚಿನ ದಿನಗಳಲ್ಲಿ ಜೀವ ಕೊಡಬೇಕಾದ ತಾಯಿಯೇ ಜೀವ ತೆಗೆಯುವ ನೀಚ ಕೃತ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂತಹದ್ದೇ  ಕೃತ್ಯವೊಂದು ಬೆಳಕಿಗೆ ಬಂದಿದ್ದು, ಸಾರ್ವಜನಿಕ ಶೌಚಾಲಯದಲ್ಲಿ ಹೆಣ್ಣು ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಹೆತ್ತ ತಾಯಿಯೇ ತನ್ನ ನವಜಾತ ಶಿಶುವೊಂದನ್ನು ಶೌಚಾಲಯದಲ್ಲಿ ಎಸೆದು ಜಾಗ ಖಾಲಿ ಮಾಡಿದ ಅಮಾನವೀಯ ಕೃತ್ಯ ನಡೆದಿದೆ. ಗದಗದ ಬೆಟಗೇರಿಯ ಹುಯಿಲಗೋಳ ರಸ್ತೆಯ ವೆಂಕಟೇಶ್ವರ ಕಲ್ಯಾಣ ಮಂಟಪ ಬಳಿ ಇರುವ ಸಾರ್ವಜನಿಕ ಶೌಚಾಲಯದಲ್ಲಿ ಘಟನೆ ನಡೆದಿದೆ. ರಾತ್ರಿ ಹೆರಿಗೆ ಆದ ಮೇಲೆ ಶೌಚಾಲಯದಲ್ಲೇ ಮಾಂಸದ ಮುದ್ದೆ ಸಮೇತ ನವಜಾತ ಶಿಶುವನ್ನು ಬಿಟ್ಟು ಹೋಗಿದ್ದಾಳೆ. ನವಜಾತ ಶಿಶುವಿನ ದೇಹದ ತುಂಬೆಲ್ಲ ಇರುವೆಗಳು ಮೆತ್ತಿಕೊಂಡು ಮೃತ ಸ್ಥಿತಿಯಲ್ಲಿ ಶಿಶು ಪತ್ತೆಯಾಗಿದೆ. ಗುರುವಾರ ಬೆಳಗ್ಗೆ ಸಾರ್ವಜನಿಕರು ಬಂದು ನೋಡಿದಾಗ ಕೃತ್ಯ ಬಯಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೆಟಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನವಜಾತ ಶಿಶುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಗದಗದ ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More

ಬೆಂಗಳೂರು: ಫುಡ್ ಡೆಲಿವರಿ ಬಾಯ್‌ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ತಡವಾಗಿ ಬೆಳಕಿಗೆ ಬಂದಿದೆ. ಡೆಲಿವರಿ ಬಾಯ್ ಬಿ.ಆಕಾಶ್ ಆರೋಪಿಯಾಗಿದ್ದಾನೆ. ಡೆಲಿವರಿ ಬಾಯ್ ಆಕಾಶ್ ಬಿ ಎಂಬುವಾತ ಕುಡಿಯಲು ನೀರು ಕೇಳಿ ಮನೆಗೆ ನುಗ್ಗಿ ಯುವತಿಯ ಕೈಹಿಡಿದು ಎಳೆದಾಡಿ ದೌರ್ಜನ್ಯ ಎಸಗಿದ್ದಾನೆ. ಇಲ್ಲಿನ ಹೆಚ್‌ ಎಎಲ್ ಪೊಲೀಸ್ ಠಾಣೆಯಲ್ಲಿ ಡೆಲಿವರಿ ಬಾಯ್ ಬಿ.ಆಕಾಶ್ ವಿರುದ್ಧ ದೂರು ದಾಖಲಾಗಿದೆ. ನೀರು ಕುಡಿಯುವ ನೆಪದಲ್ಲಿ ಮನೆ ಒಳಗಡೆ ಎಂಟ್ರಿ ಕೊಟ್ಟಿದ್ದಾನೆ. ಆಕೆ ನೀರು ತರಲು ಒಳಗೆ ಹೋದಾಗ ತಾನೂ ಹಿಂಬಾಲಿಸಿ ಹೋಗಿದ್ದಾನೆ. ನಂತರ ಯುವತಿಯ ಕೈ ಹಿಡಿದು ಎಳೆದಾಡಿದ್ದಾನೆ, ಅನುಚಿತವಾಗಿ ವರ್ತಿಸಿದ್ದಾನೆ. ಘಟನೆ ಸಂಬಂಧ ಯುವತಿ ಹೆಚ್‌ಎಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಯುವತಿ ನೀಡಿದ ದೂರಿನ ಅನ್ವಯ ಪೊಲೀಸರು ಐಪಿಸಿ ಸೆಕ್ಷನ್ 354-ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕೊಡಗಾನೂರು ಕ್ರಾಸ್ ಬಳಿ ಸಾರಿಗೆ ಬಸ್ ಏಕಾಏಕಿ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ. ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಮಾರು 20 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಜೇಂದ್ರಗಡದಿಂದ ಗದಗ ಕಡೆಗೆ ಬಸ್‌ ಹೊರಟಿತ್ತು. ಇದೇ ವೇಳೆ ಗದಗನಿಂದ ಬರುತ್ತಿದ್ದ ಮತ್ತೊಂದು ಬಸ್‌ ಗೆ ದಾರಿ ಬಿಡುವಾಗ ಆಯತಪ್ಪಿ ಕಂದಕಕ್ಕೆ ಬಿದ್ದಿದೆ. ಬಸ್ ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯರು ರಕ್ಷಿಸಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಗಜೇಂದ್ರಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನೈಸರ್ಗಿಕವಾಗಿ ದೊರೆಯುವ ಕಬ್ಬಿನ ಹಾಲು ಎಂದರೆ ಅನೇಕರಿಗೆ ಬಲು ಇಷ್ಟ. ಪಟ್ಟಣ ಅಥವಾ ನಗರಗಳಿಗೆ ಹೋದಾಗ ತಪ್ಪದೆ ಕುಡಿದು ಬರುತ್ತಾರೆ. ಆದರೂ ಕೂಡ ಕೆಲವರು ಕಬ್ಬಿನ ಹಾಲು ಕುಡಿಯಬಾರದೆಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಯಾವ ಕೆಮಿಕಲ್ ಗಳಿಲ್ಲದೆ ನಾಲಗೆಗೆ ರುಚಿ ನೀಡೋ ಕಾರ್ಬೋಹೈಡ್ರೇಟ್‌ ಗಳು, ಕ್ಯಾಲ್ಸಿಯಂ, ಕಬ್ಬಿಣ, ಸತು, ಮೆಗ್ನೀಸಿಯಮ್, ಪೊಟ್ಯಾಸಿಯಮ್‌ ನಂತಹ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ಇದು ದೇಹವನ್ನು ತಂಪಾಗಿಸುತ್ತದೆ. ದೇಹದಲ್ಲಿ ನೀರಿನಂಶವನ್ನು ಕಾಪಾಡುವುದರೊಂದಿಗೆ ಅನೇಕ ಪ್ರಯೋಜನಗಳನ್ನು ಉಂಟುಮಾಡುತ್ತದೆ. ಆದರೂ ಕೂಡ ಇಂಥವರು ಕಬ್ಬಿನ ಹಾಲು ಕುಡಿದರೆ ಅಪಾಯ ಕಟ್ಟಿಟ್ಟ ಬುತ್ತಿಯಂತೆ !! ಹಾಗಿದ್ರೆ ಯಾರು ಹೆಚ್ಚಾಗಿ ಕಬ್ಬಿನ ಹಾಲು ಕುಡಿಯಬಾರದು ಗೊತ್ತಾ? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್. ನಿದ್ರಾಹೀನತೆಯ ಸಮಸ್ಯೆ ಹೊಂದಿರುವವರು: ನೀವು ನಿದ್ರಾಹೀನತೆಯಿಂದ ಬಳಲುತ್ತಿದ್ದರೆ ನೀವು ಕಬ್ಬಿನ ರಸವನ್ನು ಕುಡಿಯಬಾರದು. ಇದರಲ್ಲಿರುವ ಪೋಲಿಕೋಸನಾಲ್ ನಿದ್ರೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ಬೊಜ್ಜು ಸಮಸ್ಯೆ ಇರುವವರು: ಸ್ಥೂಲಕಾಯತೆಯಿಂದ ಬಳಲುತ್ತಿರುವವರು ಕಬ್ಬಿನ ರಸವನ್ನು ಸೇವಿಸಬಾರದು. ಇದು ಹೆಚ್ಚಿನ ಕ್ಯಾಲೋರಿ…

Read More

ಮಂಡ್ಯ ಕ್ಷೇತ್ರಕ್ಕೆ ಜೆಡಿಎಸ್ ಪಟ್ಟು ಹಿನ್ನೆಲೆ ಹಾಲಿ ಸಂಸದೆ ಸುಮಲತಾ ಅಂಬರೀಶ್ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆಂಬ ಸುದ್ದಿ ಹರಡಿದ ಹಿನ್ನೆಲೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಅಂಬರೀಶ್ ಅವರೇ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿಗೆ ವಾಪಸ್ ಆದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿರುವ ಸಂಸದೆ ಸುಮಲತಾ ಅಂಬರೀಶ್, ನನ್ನ ರಾಜಕೀಯ ಏನಿದ್ರೂ ಮಂಡ್ಯದಲ್ಲಿ ಮಾತ್ರ. ನಾನು ಏನೇ ರಾಜಕೀಯ ಮಾಡಿದ್ರೂ ಅದು ಮಂಡ್ಯದಲ್ಲಿ ಮಾತ್ರ.  ಇದನ್ನೇ ವರಿಷ್ಠರಿಗೆ ಹೇಳಿ ಬಂದಿದ್ದೇನೆ. ವರಿಷ್ಠರಿಂದ ಪಾಸಿಟಿವ್ ರೆಸ್ಪಾನ್ಸ್ ಬಂದಿದೆ.  ನೀವು ಬಿಜೆಪಿಯಲ್ಲೇ ಇರಬೇಕು ಎಂದಿದ್ದಾರೆ ಎಂದರು. ಬೆಂಗಳೂರು ಉತ್ತರಕ್ಕೆ ನಾನು ಹೋಗಿಲ್ಲ ಇನ್ನೂ ಚಿಕ್ಕಬಳ್ಳಾಪುರಕ್ಕೆ  ಹೋಗ್ತೀನಾ..? ಮಂಡ್ಯ ಲೋಕಸಭಾ ಕ್ಷೇತ್ರ ಬಿಟ್ಟು ಬೇರೆಲ್ಲೂ ಸ್ಪರ್ಧೆ ಮಾಡಲ್ಲ. ಮಂಡ್ಯ ಬಿಟ್ಟು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಏಕೆ ಹೋಗಬೇಕು ಎಂದು ಸುಮಲತಾ ಅಂಬರೀಶ್ ‍ಪ್ರಶ್ನಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಏಪ್ರಿಲ್‌ 19 ಮತ್ತು ಏಪ್ರಿಲ್‌ 26 ರಂದು ನಿಗದಿಯಾಗಿದ್ದ ಚುನಾವಣಾ ದಿನಾಂಕವನ್ನು ಬದಲಾಯಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಮುಸ್ಲಿಂ ಸಂಘಟನೆಗಳು ಮನವಿ ಮಾಡಿವೆ ಎನ್ನಲಾಗಿದೆ. ಮೊದಲ ಮತ್ತು ಎರಡನೇ ಹಂತದ ಚುನಾವಣೆ ದಿನವಾಗಿರುವ ಏ.19 ಮತ್ತು ಏ.26 ಶುಕ್ರವಾರ ಬರುತ್ತದೆ. ಇಸ್ಲಾಮಿಕ್ ಸಮುದಾಯವರು ಶುಕ್ರವಾರದಂದು ಪ್ರಾರ್ಥನೆಗಾಗಿ ಮಸೀದಿಗಳಿಗೆ ಹೋಗುತ್ತಾರೆ. ಶುಕ್ರವಾರ ನಡೆಯುವ ಮತದಾನವು ಮತದಾರರಿಗೆ ಮತ್ತು ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಿಗೆ ಅನಾನುಕೂಲವಾಗಲಿದೆ. ಹೀಗಾಗಿ ಈ ಎರಡು ದಿನಾಂಕವನ್ನು ಬದಲಾವಣೆ ಮಾಡಬೇಕೆಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಜೊತೆ ರಾಜ್ಯದ ರಾಜ್ಯದ ಉಲಾಮಾ ಒಕ್ಕೂಟವೂ ಮನವಿ ಮಾಡಿದೆ. ಚುನಾವಣಾ ದಿನಾಂಕ ಬದಲಾವಣೆಗೆ ಮುಸ್ಲಿಂ ಸಂಘಟನೆಗಳ ಮನವಿ ವಿಚಾರದ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿ, ನಮಗೆ ಮನವಿ ಮಾಡಿದರೆ ನಾವು ಚುನಾವಣಾ ಆಯೋಗದ ಗಮನಕ್ಕೆ ತರುತ್ತೇವೆ. ಬದಲಾವಣೆ ಮಾಡಲು ಸಾಧ್ಯತೆ ಇದೆಯಾ ಎಂಬುದನ್ನು ಚುನಾವಣಾ ಆಯೋಗ ನಿರ್ಧಾರ ಮಾಡುತ್ತದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಒಬ್ಬ ವ್ಯಕ್ತಿಯು ತನ್ನ ಒಂದು ವರ್ಷದ ಮಗುವನ್ನು ಆಕಸ್ಮಿಕವಾಗಿ ಮಡಿಲಿನಿಂದ ಬೀಳಿಸಿದ ಪರಿಣಾಮ ಸ್ಥಳದಲ್ಲಿಯೇ ಮಗು ಸಾವನ್ನಪ್ಪಿದೆ ಎಂದು ವರದಿ ತಿಳಿಸಿದೆ. ಈ ಘಟನೆ ಛತ್ತೀಸ್ ಗಡದ ರಾಯ್‌ ಪುರದ ಜನಪ್ರಿಯ ಮಾಲ್‌ ನಲ್ಲಿ ಬೆಳಕಿಗೆ ಬಂದಿದೆ. ಈ ಘಟನೆ ರಾತ್ರಿ 7:30 ರಿಂದ 8 ಗಂಟೆಯ ನಡುವೆ ನಡೆದಿದೆ ಎಂದು ವರದಿ ತಿಳಿಸಿದೆ. ಕುಟುಂಬವೊಂದು ಸಿಟಿ ಸೆಂಟರ್ ಮಾಲ್‌ ಗೆ ಭೇಟಿ ನೀಡಲು ಹೋಗಿದೆ. ಇದೇ ವೇಳೆ ವ್ಯಕ್ತಿಯೋರ್ವರು ತನ್ನ ಒಂದು ವರ್ಷದ ಮಗುವನ್ನು ಮಡಿಲಲ್ಲಿಟ್ಟುಕೊಂಡು ಮೂರನೇ ಮಹಡಿಯಲ್ಲಿ ಎಸ್ಕಲೇಟರ್ ಹತ್ತುತ್ತಿದ್ದಾಗ ಎರಡನೇ ಮಗುವನ್ನು ಎಸ್ಕಲೇಟರ್ ಮೇಲೆ ಕರೆದುಕೊಂಡು ಹೋಗಲು ಕೈ ಚಾಚಿದಾಗ ಮಡಿಲಲ್ಲಿದ್ದ ಮಗು ಎತ್ತರದಿಂದ ಕೈಯಿಂದ ಜಾರಿ ಕೆಳಗೆ ಬಿದ್ದಿದೆ ಎನ್ನಲಾಗಿದೆ. ಈ ವ್ಯಕ್ತಿ ಮಾಲ್ ‌ನಲ್ಲಿ ಮಕ್ಕಳ ಜೊತೆ ತಿರುಗಾಡುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸ್ಪಷ್ಟವಾಗಿ ಕಂಡುಬಂದಿದ್ದು, ಮಡಿಲಲ್ಲೊಂದು ಮಗುವಿದೆ. ಇನ್ನೊಂದು ಮಗು ಎಸ್ಕಲೇಟರ್ ಹತ್ತಲು ಸಹಾಯ ಮಾಡಲು ಆ ವ್ಯಕ್ತಿ ಕೈ ಚಾಚಿದ್ದಾರೆ. ಈ ವೇಳೆ…

Read More