Author: admin

ಪ್ರಧಾನಿ ನರೇಂದ್ರ ಮೋದಿ ಜನರಿಗೆ ಸಿಹಿ ಸುದ್ದಿ ನೀಡಿದ್ದಾರೆ. ‘ಪಿಎಂ ಸೂರ್ಯ ಘರ್: ಮುಫ್ತ್ ಬಿಜಲಿ ಯೋಜನೆಯ ಮೂಲಕ ದೇಶದ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉತ್ಪಾದಿಸುವ ಸೌರ ಫಲಕಗಳನ್ನು ಅಳವಡಿಸಲಾಗುವುದು ಎಂದು ಅವರು ಘೋಷಿಸಿದ್ದಾರೆ. ಮನೆಗಳ ಮೇಲ್ಛಾವಣಿಯ ಮೇಲೆ ಸೌರ ಫಲಕಗಳನ್ನು ಅಳವಡಿಸಲು ಕೇಂದ್ರ ಸರ್ಕಾರವು ಹೆಚ್ಚಿನ ಅನುದಾನವನ್ನು ನೀಡುತ್ತದೆ. ಈ ಹಿಂದೆ ನೀಡಿದ್ದ ಶೇ.40 ರಷ್ಟು ಸಬ್ಸಿಡಿಯನ್ನ ಈಗ ಶೇ.60 ಕ್ಕೆ ಹೆಚ್ಚಿಸಲಾಗಿದೆ. ಉಳಿದ 40 ಪ್ರತಿಶತ ಮೊತ್ತವನ್ನು ಜನರು ಸಾಲ ರೂಪದಲ್ಲಿ ಪಡೆಯಬಹುದಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಇತ್ತೀಚಿನ ಬಜೆಟ್ ‌ನಲ್ಲಿ ರೂಫ್‌ ಟಾಪ್ ಸೋಲಾರ್ ಪ್ಯಾನಲ್ ಯೋಜನೆಯನ್ನು ಘೋಷಿಸಿದ್ದಾರೆ. ಈ ಮೂಲಕ ಕೋಟ್ಯಾಂತರ ಜನರಿಗೆ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು. ಪ್ರಧಾನ ಮಂತ್ರಿ ಸೂರ್ಯೋ ಘರ್ ಯೋಜನೆಯಡಿ ಈ ಪ್ರಯೋಜನ ಪಡೆಯಬಹುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು. ಈ ಯೋಜನೆಯ ಮೂಲಕ ಜನರು…

Read More

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ರಂಗೇರಿದೆ. ದಿನದಿಂದ ದಿನಕ್ಕೆ ಪ್ರಚಾರದ ಅಬ್ಬರ ಜೋರಾಗುತ್ತಿದೆ. ಬಿಜೆಪಿ-ಜೆಡಿಎಸ್ ಕಾಂಗ್ರೆಸ್ ಪಕ್ಷಗಳು ಗೆಲುವಿಗಾಗಿ ತಂತ್ರದ ಮೇಲೆ ತಂತ್ರ ಹೆಣೆಯುತ್ತಿವೆ. ಈ ನಡುವೆ ಭಾರೀ ಅಚ್ಚರಿ ಹಾಗೂ ವಿಚಿತ್ರ ಘಟನೆಯೊಂದು ನಡೆದಿದ್ದು, ಬಿಜೆಪಿ ನಾಯಕರೊಬ್ಬರು RSS ಗಣವೇಶದಲ್ಲಿಯೇ ಬಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಗದಗ ಜಿಲ್ಲೆಯ ನರಗುಂದದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಆರ್​ ಎಸ್​ ಎಸ್​ ಸ್ವಯಂ ಸೇವಕ ಹಾಗೂ ಬಿಜೆಪಿ ನಾಯಕರಾದ ರೋಣ ತಾಲೂಕಿನ ಮೆಣಸಗಿ ಗ್ರಾಮದ ನಿಂಗಬಸಪ್ಪ ಬಾಣದ್ ಎನ್ನುವವರು, ತಮ್ಮ ಮಾತೃ ಸಂಸ್ಥೆ RSS ನ ಗಣವೇಶದಲ್ಲಿಯೇ ಬಂದು ಕಾಂಗ್ರೆಸ್​ ಸೇರ್ಪಡೆಯಾದರು. ಮೂವತ್ತು ವರ್ಷದಿಂದ ಆರ್​ ಎಸ್ ​ಎಸ್ ಸಕ್ರಿಯ ಕಾರ್ಯಕರ್ತರಾಗಿರುವ ಬಾಣದ್ ಅವರು ಗಣವೇಷದಲ್ಲೇ ಕಾಂಗ್ರೆಸ್​​ ಶಾಲು ಹಾಕಿಸಿಕೊಂಡಿರುವುದು ವಿಶೇಷ ಎನ್ನಲಾಗಿದೆ. ಅಂದಹಾಗೆ, ಮಾಜಿ ಶಾಸಕ ಎಸ್ ​ಜಿ ನಂಜಯ್ಯನಮಠ ಸಮ್ಮುಖದದಲ್ಲಿ ನಿಂಗಬಸಪ್ಪ ಬಾಣದ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ಇನ್ನು ಸಚಿವ ಶಿವಾನಂದ ಪಾಟೀಲ, ಮಾಜಿ ಸಚಿವ ಬಿಆರ್ ಯಾವಗಲ್…

Read More

ಪಾವಗಡ: ಪಟ್ಟಣದ ಸ್ವಾಮಿ ವಿವೇಕಾನಂದ ಪಿ.ಯು. ಕಾಲೇಜಿನ ವಿದ್ಯಾರ್ಥಿ ಪ್ರಭಾಸ್ ಯಾದವ್  ವಿಜ್ಙಾನ ವಿಭಾಗದಲ್ಲಿ ದ್ವಿತೀಯ ಪಿಯುಸಿಯಲ್ಲಿ 579 ಅಂಕಗಳಿಸುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾನೆ. ಕಲಾ ವಿಭಾಗದಲ್ಲಿ ರಜಿತಾ ಎನ್ 503 ಅಂಕಗಳನ್ನು ಪಡೆಯುವ ಮೂಲಕ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ವಾಣಿಜ್ಯ ವಿಭಾಗದಲ್ಲಿ ಸಮೀರಾ ಬೇಗಂ 566 ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಉಳಿದಂತೆ ವಿಜ್ಞಾನ ವಿಭಾಗದಲ್ಲಿ ಅನುಷಾ ಆರ್ 565, ನಿಖಿಲ್ ಸಾಯಿ 565, ವಾಣಿಜ್ಯ ವಿಭಾಗದಲ್ಲಿ ಸಿಂಚನ 564, ರಕ್ಷಿತಾ 549 ಕಲಾ ವಿಭಾಗದಲ್ಲಿ ಶ್ವೇತಾ 493, ಶೋಭಾ 491 ಅಂಕಗಳನ್ನು ಪಡೆಯುವ ಮೂಲಕ ಕ್ರಮವಾಗಿ ಕಾಲೇಜಿನಲ್ಲಿ ಅತ್ಯುತ್ತಮ ಸ್ಥಾನವನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿವೇಕಾನಂದ ಪಿಯು ಕಾಲೇಜಿಗೆ ಎಲ್ಲಾ ವಿಭಾಗಗಳಿಂದ ಶೇ. 82.46 ಫಲಿತಾಂಶ ಲಭ್ಯವಾಗಿದ್ದು ಉನ್ನತ ದರ್ಜೆ 27, ಪಸ್ಟ್ ಕ್ಲಾಸ್ 145, ಸೆಕೆಂಡ್ ಕ್ಲಾಸ್ 36, ಪಾಸ್ ಕ್ಲಾಸ್ 13 ಪಡೆದು ಉತ್ತೀರ್ಣರಾಗಿ ಕಾಲೇಜಿಗೆ…

Read More

ಬೆಂಗಳೂರು: ದೇವೇಗೌಡರಿಗೆ ಈ ಗತಿ ಬರಬಾರದಿತ್ತು ಎಂದು ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಸಿದ್ಧಾಂತವನ್ನೇ ಮಾರಿಕೊಂಡು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಸ್ಥಿತಿ ಜೆಡಿಎಸ್ ಗೆ ಬರಬಾರದಿತ್ತು ಎಂದ ಡಿ.ಕೆ. ಶಿವಕುಮಾರ್, ಗೌಡರ ಮನೆ ಅಳಿಯನಿಗೆ ಜೆಡಿಎಸ್ ನಿಂದ ಟಿಕೆಟ್ ಕೊಡಲಾಗದೆ ಬಿಜೆಪಿಯಿಂದ ನಿಲ್ಲಿಸುವ ಪರಿಸ್ಥಿತಿ ದೇವೇಗೌಡರಿಗೆ ಬರಬಾರದಿತ್ತು ಎಂದರು. ಮಾಜಿ ಪ್ರಧಾನಿಗಳ ಈ ಸ್ಥಿತಿ ನೋಡುತ್ತಿದ್ದರೆ ನನಗೆ ಬೇಸರವಾಗುತ್ತಿದೆ ಎಂದು ಡಿಕೆಶಿ ಹೇಳಿದ್ದಾರೆ. ಜೆಡಿಎಸ್ ನವರು ಮೂರು ಸೀಟ್ ಗೆದ್ದೇ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ ಜೆಡಿಎಸ್ ಬಿಜೆಪಿ ಅಭ್ಯರ್ಥಿಗಳೆಲ್ಲರೂ ಠೇವಣಿ ಕಳೆದುಕೊಳ್ಳೋದು ಗ್ಯಾರೆಂಟಿ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ನಮಗೆ ಇನ್ನೂ ನಾಲ್ಕುವರೆ ವರ್ಷ ಆಡಳಿತ ಅವಧಿ ಇದೆ ಅದಾದ ನಂತರ ಮುಂದಿನ ಐದು ವರ್ಷವೂ ಕಾಂಗ್ರೆಸ್ ಸರ್ಕಾರವೇ ಬರಲಿದೆ ಎಂದು ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಪಾವಗಡ: ತಾಲ್ಲೂಕಿನ ವೈ.ಎನ್. ಹೊಸಕೋಟೆ ಹೋಬಳಿಯ ಜೋಡಿಅಚ್ಚಮ್ಮನಹಳ್ಳಿ ಗ್ರಾಮದಲ್ಲಿ ಯುಗಾದಿ ಹಬ್ಬದ ಅಂಗವಾಗಿ, ಶ್ರೀ ಚೌಡೇಶ್ವರಿ ಅಮ್ಮನವರ 54ನೇ ಜ್ಯೋತಿ ಉತ್ಸವವನ್ನು ಬುಧವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾದ ಉತ್ಸವ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿ ಮಧ್ಯಾಹ್ನ 2ಗಂಟೆಯ ವೇಳೆ ದೇವಾಲಯದಲ್ಲಿ ಕೊನೆಗೊಂಡಿತು. ಉತ್ಸವದ ಉದ್ದಕ್ಕೂ ಹರಕೆ ಹೊತ್ತ ಭಕ್ತಾಧಿಗಳು ನಾರದ ಹಾಕಿಸಿಕೊಂಡು ಹರಕೆ ತೀರಿಸಿದರು. ಗ್ರಾಮಕ್ಕೆ ದುಷ್ಠಶಕ್ತಿಗಳ ಹಾವಳಿ ಬಾರದಿರಲೆಂದು ಪೂಜಾನ್ನವನ್ನು ಹಾಕಲಾಯಿತು. ಮೆರವಣಿಗೆಯಲ್ಲಿ ತೊಗಟವೀರ ಸಮುದಾಯ ಆನಂದ ಪದಗಳನ್ನು ಹಾಡುತ್ತ ದೇವಿಯ ಮೂರ್ತಿಗೆ ಶಕ್ತಿ ತುಂಬಿದರು. ಹಬ್ಬದ ಅಂಗವಾಗಿ ಮೂಲ ದೇವತಾ ಮೂರ್ತಿಗೆ ‘ಅರಶಿಣ ಕುಂಕುಮ’ದ ಅಲಂಕಾರ ಮಾಡಲಾಗಿತ್ತು. ವರದಿ: ನಂದೀಶ್ ನಾಯ್ಕ ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊರಟಗೆರೆ: 850 ವರ್ಷಗಳ ಇತಿಹಾಸವುಳ್ಳ ವಡ್ಡಗೆರೆ ವೀರನಾಗಮ್ಮ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆರೆವೇರಿತು. ಪ್ರತಿ ವರ್ಷ ಯುಗಾದಿ ಹಬ್ಬ ಆದ ಮಾರನೇ ದಿನ ನಡೆಯುವ ವಿಶೇಷ ಜಾತ್ರಾ ಮಹೋತ್ಸವ ಸಡಗರ ಸಂಭ್ರಮದಿಂದ ಆಚರಿಸಲ್ಪಡುತ್ತಿದೆ. ಈ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಲೋಕಸಭಾ ಅಭ್ಯರ್ಥಿ ವಿ. ಸೋಮಣ್ಣ ಶ್ರೀ ವೀರನಾಗಮ್ಮ ತಾಯಿಯ ಆಶೀರ್ವಾದ ಪಡೆದರು. ಈ ಬಾರಿ ಉತ್ತಮ ಮಳೆಯಾಗಿ ದೇಶದ ಎಲ್ಲ ಜನರಿಗೆ ಸಮೃದ್ಧಿ ಸಿಗಲಿ ಎಂದು ಯುಗಾದಿ ಹಬ್ಬದ ಶುಭ ಹಾರೈಸಿದ ವಿ. ಸೋಮಣ್ಣ ಪ್ರಸಾದ ಬಡಿಸುವ ಸ್ಥಳಕ್ಕೆ ತೆರಲಿ, ಭಕ್ತಾದಿಗಳಿಗೆ ಪ್ರಸಾದ ಬಡಿಸಿದರು. ಮುಂದಿನ ದಿನಗಳಲ್ಲಿ ದೇವಸ್ಥಾನ ಹಾಗೂ ಗ್ರಾಮಗಳಲ್ಲಿ ಅಭಿವೃದ್ಧಿಯ ಕೆಲಸಗಳನ್ನ ಮಾಡೋಣ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಎಲ್ಲ ಮುಖಂಡರು ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು . ವರದಿ: ಮಂಜುಸ್ವಾಮಿ ಎಂ. ಎನ್., ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ವೆಲ್ಲೂರು: ಡಿಎಂಕೆ ತಮಿಳುನಾಡನ್ನು ಹಳೆಯ ಯೋಚನೆ, ಹಳೆಯ ರಾಜಕಾರಣದಲ್ಲಿ ಹಿಡಿದಿಡಲು ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು. ತಮಿಳುನಾಡಿನ ವೆಲ್ಲೂರಿನಲ್ಲಿ ಬುಧವಾರ ರಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಮಿಳುನಾಡಿನ ಆಡಳಿತಾರೂಢ ಡಿಎಂಕೆ ನೇತೃತ್ವದ ಮೈತ್ರಿಕೂಟದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಡಿಎಂಕೆ ಜನರನ್ನು ಪ್ರದೇಶ, ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಹೋರಾಡುವಂತೆ ಮಾಡುತ್ತದೆ. ಜನರು ಒಡೆದು ಆಳುವ ರಾಜಕೀಯವನ್ನು ಅರ್ಥಮಾಡಿಕೊಳ್ಳುವ ದಿನ ಪಕ್ಷಕ್ಕೆ ಒಂದೇ ಒಂದು ಮತವೂ ಬರುವುದಿಲ್ಲ ಎಂದು ಪ್ರಾದೇಶಿಕ ಪಕ್ಷಕ್ಕೆ ತಿಳಿದಿದೆ ಎಂದು ಹೇಳಿದ ಅವರು, ಡಿಎಂಕೆ ಸಂಪೂರ್ಣ ಒಬ್ಬ ಶಾಸಕನ ಕಂಪೆನಿಯಾಗಿದೆ ಎಂದರು. ಡಿಎಂಕೆ ಕುಟುಂಬ ರಾಜಕಾರಣದಿಂದ ತಮಿಳುನಾಡಿನ ಯುವಕರಿಗೆ ಮುಂದೆ ಹೋಗಲು ಅವಕಾಶವೇ ಸಿಗುತ್ತಿಲ್ಲ. ಡಿಎಂಕೆ ಯಲ್ಲಿ ಚುನಾವಣೆಗೆ ನಿಲ್ಲಲು ಹಾಗೂ ಅದರಲ್ಲಿ ಮುಂದುವರಿಯಲು ಕುಟುಂಬ ರಾಜಕಾರಣ, ಭ್ರಷ್ಟಾಚಾರ ಮತ್ತು ತಮಿಳು ಸಂಸ್ಕೃತಿ ವಿರೋಧಿ ಗುಣ ಹೊಂದಿರುವುದು ಅಗತ್ಯ ಎಂದು ಆರೋಪಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ- ಯಲ್ಲಾಪುರ ರಸ್ತೆಯ ಪಂಚವಟಿ ಕ್ರಾಸ್‌ ಬಳಿ ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬೈಕ್ ಬಿದ್ದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಹೊಂದಿದ್ದು, ಇನ್ನೋರ್ವ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಸಂದೀಪ ಛಲವಾದಿ(24) ಮೃತ ಬೈಕ್ ಸವಾರನಾಗಿದ್ದು, ಸುಭಾಷ್ ದೇವಾಡಿಗ(26) ಗಂಭೀರ ಗಾಯಗೊಂಡವನಾಗಿದ್ದಾನೆ. ಯಲ್ಲಾಪುರದ ಭರತ್ನಳ್ಳಿ ಗ್ರಾಮದ ಈ ಯುವಕರು ಸ್ನೇಹಿತನನ್ನು ಶಿರಸಿ ಬಸ್‌ ನಿಲ್ದಾಣಕ್ಕೆ ಬಿಟ್ಟು ವಾಪಸ್ಸಾಗುವಾಗ, ಇಳಿಜಾರಿನ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಬೈಕ್ ಸುಮಾರು 20 ಅಡಿ ಆಳದ ರಾಜಕಾಲುವೆಗೆ ಬಿದ್ದು, ಅಪಘಾತ ನಡೆದಿದೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊಪ್ಪಳ: ಕೊಪ್ಪಳ ತಾಲೂಕಿನ ಬುಡಶೆಟ್ನಾಳ ಗ್ರಾಮದಲ್ಲಿ ಪತ್ನಿಯನ್ನು ಹೊಡೆದು ಕೊಲೆ ಮಾಡಿದ ಪತಿ ಕೊಲೆಯ ನಂತರ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪತ್ನಿ ಲಕ್ಷ್ಮವ್ವ(40) ಪತಿಯಿಂದ ಕೊಲೆಯಾದ ಪತ್ನಿಯಾಗಿದ್ದಾರೆ. ಬುಡಶೆಟ್ನಾಳದ ನಿಂಗಪ್ಪ(45) ಪತ್ನಿಯನ್ನು  ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಆರೋಪಿ ಪತಿಯಾಗಿದ್ದಾನೆ. ಹೊಲದಲ್ಲೇ ಘಟನೆ ನಡೆದಿದ್ದು, ಹೊಲದಲ್ಲೇ ಹೆಂಡತಿಯನ್ನು ಕೊಂದು ಹಾಕಿದ ಈತ, ಅಲ್ಲೇ ಇದ್ದ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಪರೀತ ಕುಡಿತದ ಚಟವನ್ನು ಹೊಂದಿದ್ದ ನಿಂಗಪ್ಪ, ಯಾವಾಗಲೂ ಮದ್ಯ ಸೇವಿಸಿ ಬಂದು ಪತ್ನಿಯ ಜೊತೆಗೆ ವಿನಾಕಾರಣ ಜಗಳ ತೆಗೆಯುತ್ತಿದ್ದ ಎಂದು ನೆರೆಕರೆಯವರು ತಿಳಿಸಿದ್ದಾರೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದ್ದು, ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚಾಮರಾಜನಗರ: ಭಕ್ತರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಮಹಿಳೆಯೋರ್ವಳು ಸಾವನ್ನಪ್ಪಿದ ಘಟನೆ ಮಹದೇಶ್ವರ ಬೆಟ್ಟದ ಆನೆತಲೆದಿಂಬದ ಬಳಿ ನಡೆದಿದೆ. ಮಳವಳ್ಳಿ ತಾಲೂಕು ಹೊನ್ನೇನಹಳ್ಳಿಯ ಲಕ್ಷ್ಮಿ(40) ಮೃತ ದುರ್ದೈವಿಯಾಗಿದ್ದಾರೆ. ಇವರು ಇತರ ಮೂವರು ಭಕ್ತರ ಜೊತೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದರು. ಈ ವೇಳೆ ಪಾದಯಾತ್ರಿಗಳ ಮೇಲೆ ಕಾಡಾನೆ ಹಠಾತ್ ದಾಳಿ ನಡೆಸಿದ್ದು, ಈ ಕುರಿತು ಮಲೆ ಮಹದೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More