Subscribe to Updates
Get the latest creative news from FooBar about art, design and business.
- ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ
- ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು
- ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ
- ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್
- ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ
- ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ
- ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!
- ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ
Author: admin
RCB ಸೋಲಿಗೆ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಅವರೇ ಕಾರಣ ಎನ್ನುವಂತೆ ಅಸಭ್ಯ ಪದ ಬಳಸಿ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ದೂರು ದಾಖಲಾದರೂ ಭಾರೀ ಆಕ್ರೋಶ ಕೇಳಿಬರುತ್ತಿದೆ. ಸಿನಿಮಾ ರಂಗದ ಅನೇಕರು ಪೋಸ್ಟ್ ವಿರುದ್ಧ ಧ್ವನಿ ಎತ್ತಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಕೂಡ ಕಠಿಣ ಕ್ರಮದ ಮಾತುಗಳನ್ನು ಆಡಿದ್ದಾರೆ. ಈ ಬೆನ್ನಲ್ಲೇ ಪೋಸ್ಟ್ ವಿಚಾರವಾಗಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಮೊದಲ ಸಲ ಪ್ರತಿಕ್ರಿಯೆ ನೀಡಿದ್ದಾರೆ. ಹೌದು, ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಅವಹೇಳನಕಾರಿ ಪೋಸ್ಟ್ ಬಗ್ಗೆ ಇದೀಗ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಪ್ರತಿಕ್ರಿಯಿಸಿದ್ದಾರೆ. “ಬೇರೆ ಆಯ್ಕೆ ಇಲ್ಲ. ಜೀವನ ಸಾಗಲೇಬೇಕು. ಎರಡನ್ನೂ ಸಮಾನವಾಗಿ ಸ್ವೀಕರಿಸುತ್ತೇನೆ” ಎಂದು ಹೇಳಿದ್ದಾರೆ. ಏನಿದು ಪ್ರಕರಣ?: ಕಳೆದ ಮಾರ್ಚ್ ತಿಂಗಳು 19ನೇ ತಾರೀಕಿನಂದು ಬೆಂಗಳೂರಿನ ಆರ್ ಸಿಬಿ ಅನ್ ಬಾಕ್ಸ್ ಇವೆಂಟ್ ನಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್…
ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಚೆನ್ನೈಗೆ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಚೆನ್ನೈ ಪಾಂಡಿ ಬಜಾರ್ ನಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಚೆನ್ನೈ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತಮಿಳಿಸೈ ಸೌಂದರ್ ರಾಜನ್ ಮತ್ತು ಕೇಂದ್ರ ಕ್ಷೇತ್ರದ ಅಭ್ಯರ್ಥಿ ವಿನೋಜ್ ಪಿ ಸೆಲ್ವಂ ಅವರಿಗಾಗಿ ರೋಡ್ ಶೋ ಆಯೋಜಿಸಲಾಗಿದೆ. ನಾಳೆ ಬೆಳಗ್ಗೆ ವೆಲುರಿನಲ್ಲಿ ನಡೆಯಲಿರುವ ಸಾಮಾನ್ಯ ಸಭೆಯಲ್ಲಿ ವೆಲೂರು ಕ್ಷೇತ್ರದ ಅಭ್ಯರ್ಥಿ ಎಸಿ ಷಣ್ಮುಗಂ ಮತ್ತು ಧರ್ಮಪುರಿ ಕ್ಷೇತ್ರದ ಪಿಎಂಕೆ ಅಭ್ಯರ್ಥಿ ಸೌಮ್ಯ ಅನ್ಪುಮಣಿ ಪರ ಪ್ರಧಾನಿ ಮತ ಯಾಚನೆ ಮಾಡಲಿದ್ದಾರೆ. ನರೇಂದ್ರ ಮೋದಿ ಅವರು ಮಧ್ಯಾಹ್ನ ಮೇಟುಪಾಳ್ಯಂನಲ್ಲಿ ರ್ಯಾಲಿ ಮತ್ತು ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕೊಯಮತ್ತೂರು ಅಭ್ಯರ್ಥಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ,ಕೇಂದ್ರ ಸಚಿವ ಹಾಗೂ ನೀಲಗಿರಿ ಕ್ಷೇತ್ರದ ಅಭ್ಯರ್ಥಿ ಎಲ್.ಮುರುಗನ್, ಪೊಲ್ಲಾಚಿ ಅಭ್ಯರ್ಥಿ ಕೆ. ವಸಂತರಾಜನ್ ಅವರಿಗೆ ಪ್ರಧಾನಿ ಮತ ಯಾಚಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಕೊರಟಗೆರೆ: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಅಪರಾಧ ಪ್ರಕರಣಗಳ ಹಿನ್ನೆಲೆಯುಳ್ಳ ಓರ್ವ ರೌಡಿ ಶೀಟರ್ ನನ್ನು ಕೊರಟಗೆರೆ ತಾಲೂಕಿನಿಂದ ಗಡಿಪಾರು ಮಾಡಿರುವ ಪ್ರಕರಣ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ರವರ ಆದೇಶದ ಮೇರೆಗೆ ರೌಡಿ ಶೀಟರ್ ಪುನೀತ್ ನನ್ನು ಕೊರಟಗೆರೆ ತಾಲೂಕಿನಿಂದ ತುರುವೇಕೆರೆ ತಾಲೂಕಿಗೆ ಕೊರಟಗೆರೆ ಸಿಪಿಐ ಆರ್.ಪಿ.ಅನಿಲ್ ಗಡಿಪಾರು ಮಾಡಿದ್ದಾರೆ. ಹಾಗೂ ಪ್ರತಿನಿತ್ಯ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಹಾಜರಾಗಿ ಸಹಿ ಹಾಕುವಂತೆ ಆದೇಶಿಸಿದ್ದಾರೆ. ಕೊರಟಗೆರೆ ತಾಲೂಕು ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೋರ್ಗಾನಹಳ್ಳಿ ನಿವಾಸಿಯಾಗಿರುವ ಪುನೀತ್ ನ ಮೇಲೆ 3 ಪ್ರಕರಣಗಳು ದಾಖಲಾಗಿದ್ದು, ರೌಡಿ ಶೀಟರ್ ತೆರೆಯಲಾಗಿತ್ತು, ಮತ್ತೊಂದು ಪ್ರಕರಣವು ದಾಖಲಾದ ಹಿನ್ನೆಲೆಯಲ್ಲಿ ಹಾಗೂ ಲೋಕಸಭಾ ಚುನಾವಣೆ ನಡೆಯುತ್ತಿರುವುದರಿಂದ ಗಡಿಪಾರು ಆದೇಶ ಹೊರಡಿಸಿದ್ದಾರೆ. ಜೂಜು ಆಡದಂತೆ ಎಚ್ಚರಿಕೆ: ಯುಗಾದಿ ಹಬ್ಬದ ಹಿನ್ನಲೆಯಲ್ಲಿ ಕಳೆದ ಬಾರಿ ಕೆಲವು ಕಡೆ ಜೂಜು ಪ್ರಕರಣಗಳು ಕಂಡು ಬಂದಿದ್ದು…
ನಿಮ್ಮ ಚರ್ಮದ ರಕ್ಷಣೆಗೆ ಬೆಲ್ಲ ಬಳಸಿ: ಹೇಗೆ ಗೊತ್ತಾ? ಬೆಲ್ಲದಲ್ಲಿ ಆಂಟಿ ಆಕ್ಸಿಡೆಂಟ್, ಸತು ಹಾಗೂ ಸೆಲೆನಿಯಂನಂತ ಖನಿಜಗಳಿದ್ದು, ಇದು ಚರ್ಮದ ರಕ್ಷಣೆಯನ್ನು ಮಾಡುತ್ತದೆ. 2 ಚಮಚ ಜೇನುತುಪ್ಪ, 1 ಚಮಚ ನಿಂಬೆ ರಸ ಹಾಗೂ 2 ಚಮಚ ಬೆಲ್ಲ ತೆಗೆದುಕೊಂಡು ಚೆನ್ನಾಗಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. 10 ನಿಮಿಷಗಳ ಕಾಲ ಮಸಾಜ್ ಮಾಡಿ. ನಂತರ ತಣ್ಣೀರಿನಿಂದ ತೊಳೆಯಿರಿ. 1 ಚಮಚ ಬೆಲ್ಲದ ಪುಡಿಗೆ ಟೊಮೆಟೋ ರಸವನ್ನು ಬೆರೆಸಿ ಕೆಲ ಹನಿ ನಿಂಬೆ ರಸ ಹಾಗೂ ಅರಶಿನ ಪುಡಿಯನ್ನು ಮಿಕ್ಸ್ ಮಾಡಿ, ಮುಖಕ್ಕೆ ಹಚ್ಚಿ. 15 ನಿಮಿಷಗಳ ಬಳಿಕ ತಣ್ಣೀರಿನಿಂದ ತೊಳೆಯಿರಿ. ಪ್ರತಿದಿನ ಈ ಕಾಫಿ ಕುಡಿಯುವುದರಿಂದ ಹಲವು ಪ್ರಯೋಜನಗಳು: ಉತ್ಕರ್ಷಣ ನಿರೋಧಕ ಸಮೃದ್ಧವಾಗಿರುವ ಬ್ಲ್ಯಾಕ್ ಕಾಫಿ ಕುಡಿದರೆ ಕ್ಯಾನ್ಸರ್ ತಡೆಗಟ್ಟಬಹುದು. ಬ್ಲ್ಯಾಕ್ ಕಾಫಿ ಕುಡಿಯುವುದರಿಂದ ದೇಹದಲ್ಲಿ ಚಯಾಪಚಯ ಕ್ರಿಯೆ ಸರಾಗವಾಗಿ ನಡೆಯುವಂತೆ ನೋಡಿಕೊಳ್ಳುತ್ತದೆ. ಬ್ಲ್ಯಾಕ್ ಕಾಫಿಯನ್ನು ನಿಯಮಿತವಾಗಿ ಸೇವಿಸುತ್ತಾ ಬಂದರೆ ಕ್ಲೋರೊಜೆನಿಕ್ ಆಮ್ಲ ತೂಕ ಇಳಿಕೆಗೆ ಸಹಾಯ ಮಾಡುತ್ತದೆ.…
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ಬಸವನಗುಡಿಯ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಟ ರಮೇಶ್ ಅರವಿಂದ ಅವರು, ನಾವೆಲ್ಲರೂ ಒಟ್ಟಾಗಿ ಪ್ರಜಾಪ್ರಭುತ್ವಕ್ಕೆ ಹೆಲೋ ಎಂದಾಗ ಒಟ್ಟಾಗಿ ಶೇ. 100 ರಷ್ಟು ಮತ ಚಲಾಯಿಸಿದಾಗ ಮಾತ್ರ ನಾವು ಉತ್ತಮ ಪ್ರಜಾಪ್ರಭುತ್ವವನ್ನು ಕಟ್ಟಲು ಸಾಧ್ಯ ಎಂದು ಹೇಳಿದರು. “ಯಾರದ್ದೋ ಮಾತು ಕೇಳಿ ಅಭ್ಯರ್ಥಿಗೆ ಮತ ಹಾಕಬೇಡಿ, ಕೂಲಂಕುಶವಾಗಿ ಪರಿಶೀಲಿಸಿ, ಗೂಗಲ್ ನಲ್ಲಿ ನಿಮ್ಮ ಕ್ಚೇತ್ರದ ಅಭ್ಯರ್ಥಿ ಬಗ್ಗೆ ಮಾಹಿತಿ ಪಡೆಯಿರಿ. ಏನೇನು ಕೆಲಸ ಮಾಡಿದ್ದಾರೆ, ಕಳೆದ 5 ವರ್ಷದಲ್ಲಿ ಯಾವೆಲ್ಲ ಕೆಲಸ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಪಡೆದುಕೊಂಡು ಸೂಕ್ತ ವ್ಯಕ್ತಿಗೆ ಮತ ಹಾಕಿ, ನೀವೆಲ್ಲರೂ ಯುವ ಮತದಾರರಾಗಿದ್ದು, ತಮ್ಮ ಸ್ವಯಿಚ್ಛೆಯಿಂದ ಮತದಾನ ಮಾಡಲು” ಸಲಹೆ ನೀಡಿದರು. ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಕಾಂತರಾಜು ರವರು ಮಾತನಾಡಿ, ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಯುವ ಮತದಾರರು ಏಪ್ರಿಲ್ 26ರಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ…
ಬೆಂಗಳೂರು: ತೇಜಸ್ವಿ ಸೂರ್ಯನನ್ನ ‘ಅಮಾವಸ್ಯೆ’ ಎಂದು ಕರೆಯುವ ಎಂಬ ಸಿಎಂ ಸಿದ್ದರಾಮಯ್ಯ ಮಾತಿಗೆ ತೇಜಸ್ವಿ ಸೂರ್ಯ ಪ್ರತಿಕ್ರಿಯೆ ನೀಡಿದ್ದು, “ಅವರು ಏನೇ ಎಂದರೂ ನನಗೆ ಆಶೀರ್ವಾದವೇ” ಎಂದು ಹೇಳಿದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಕೈಗೊಂಡ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ‘ನನ್ನ ತಂದೆ ಸಿದ್ದರಾಮಯ್ಯ ಅವರ ಜೊತೆ ಅಧಿಕಾರಿಯಾಗಿ ಕೆಲಸ ಮಾಡಿದ್ದಾರೆ ಅವರೊಬ್ಬ ಒಳ್ಳೆಯ ಮುಖ್ಯಮಂತ್ರಿ, ವೈಯಕ್ತಿಕವಾಗಿ ಪ್ರಾಮಾಣಿಕರು ಎಂದು ಹೇಳುತ್ತಿದ್ದರು. ಸಿದ್ದರಾಮಯ್ಯ ವಯಸ್ಸಿನಲ್ಲಿ ನನ್ನ ತಾತನ ಪ್ರಾಯದವರು, ‘ಅವರು ಅಮವಾಸ್ಯೆ ಏನೇ ಹೇಳಲಿ ನನಗೆ ಆಶೀರ್ವಾದದ ಸಮಾನ ‘ ಎಂದು ಸಿದ್ದರಾಮಯ್ಯ ಹೇಳಿಕೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ಪ್ರಚಾರ ಕೈಗೊಂಡಿದ್ದು, ಈ ವೇಳೆ ತೇಜಸ್ವಿ ಸೂರ್ಯ ವಿರುದ್ಧ ಸಿಎಂ ಹರಿಹಾಯ್ದಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೊರಟಗೆರೆ: ಕುಡಿಯಲು ನೀರಿಲ್ಲದೆ ಜನರು ಪರದಾಡುತ್ತಿರುವ ಸಂದರ್ಭದಲ್ಲಿ ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ನೀರು ನಿರಂತರವಾಗಿ ಪೋಲಾಗುತ್ತಿರುವ ಘಟನೆ ನಡೆದಿದೆ. ಬೈಚಾಪುರ ಗ್ರಾಮದ ಜನರಿಗೆ ಕುಡಿಯಲು ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲೂ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲೇ ನೀರು ಪೋಲಾಗುತ್ತಿದ್ದು, ಗ್ರಾ.ಪಂ. ಪಿಡಿಓ ಹಾಗೂ ವಾಟರ್ ಮ್ಯಾನ್ ಗೆ ಕುಡಿಯುವ ನೀರಿನ ಬೆಲೆಯೇ ಗೊತ್ತಿಲ್ವ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬರಗಾಲದ ನಡುವೆಯು ನೀರನ್ನು ವ್ಯರ್ಥವಾಗಿ ಹರಿದು ಬಿಟ್ಟಿರುವ ಗ್ರಾಮ ಪಂಚಾಯತ್ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚಾಲಕನ ನಿಯಂತ್ರಣ ತಪ್ಪಿ, ಖಾಸಗಿ ಬಸ್ ವೊಂದು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕೊರಕೋಡು ಕ್ರಾಸ್ ಬಳಿ ಕೆರೆಗೆ ಇಳಿದಿದೆ. ಕೆರೆಯಲ್ಲಿ ನೀರು ಇಲ್ಲದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖಾಸಗಿ ಬಸ್ ಆನವಟ್ಟಿಯಿಂದ ಸೊರಬಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಬಸ್ ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಅಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ರಸ್ತೆ ತಿರುವು ಇದ್ದ ಕಾರಣ ಚಾಲಕ ನಿಯಂತ್ರಣ ತಪ್ಪಿದ್ದು, ನೇರವಾಗಿ ಕೆರೆಗೆ ಇಳಿದಿದೆ. ಬಸ್ ನ ಮುಂಭಾಗ ಹಾನಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಸಿಸಿಬಿ ಮಾದಕವಸ್ತುಗಳ ನಿಗ್ರಹದಳ ಕಾರ್ಯಚರಣೆ ನಡೆಸಿ ನಿಷೇಧಿತ ಡ್ರಗ್ ಗಳನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿಗಳು ಬಂಧಿಸಿದ್ದಾರೆ. ಸ್ಟೂಡೆಂಟ್ ವೀಸಾದಡಿ ಭಾರತಕ್ಕೆ ಬಂದಿದ್ದ ನೈಜೀರಿಯಾ ಮೂಲದ ವಿದೇಶಿ ಪ್ರಜೆ ಹೆನ್ರಿ ಚುಕ್ ವ್ಯುಮೆಕ್, ವೀಸಾ ಅವಧಿ ಮುಗಿದಿದ್ದರು ಸಹ ಅಕ್ರಮವಾಗಿ ನಗರದಲ್ಲಿ ನೆಲಸಿದ್ದ ಆರೋಪಿಗಳಾಗಿದ್ದಾರೆ. ವಿದೇಶದಲ್ಲಿನ ಪರಿಚಯಸ್ಥ ಪೆಡ್ಲರ್ ಗಳಿಂದ ಡ್ರಗ್ ತರಿಸಿಕೊಂಡು ಹೆಚ್ಚಿನ ಬೆಲೆ ನಗರದಲ್ಲಿರುವ ವಿದ್ಯಾರ್ಥಿಗಳಿಗೆ, ಪರಿಚಯಸ್ಥರಿಗೆ, ಐಟಿ/ಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಕುರಿತು ಬಾಗಲಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ಖಚಿತ ಮಾಹಿತಿ ಮೇರೆಗೆ ಸಿಸಿಬಿ ಮಾದಕವಸ್ತುಗಳ ನಿಗ್ರಹದಳ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಬಂಧಿತನಿಂದ ನಾಲ್ಕು ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟೆಲ್ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಕೆಆರ್ ಪುರದ ಗಣೇಶ ದೇವಸ್ಥಾನದ ಬಳಿ ಶೋಭಾ ಕರಂದ್ಲಾಜೆ ಕಾರಿಗೆ ದ್ವಿಚಕ್ರವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೆಆರ್ ಪುರ ನಿವಾಸಿ ಪ್ರಕಾಶ್(35) ಸಾವಿಗೀಡಾದ ಬೈಕ್ ಸವಾರನಾಗಿದ್ದಾನೆ. ಕೆಆರ್ ಪುರದ ಗಣೇಶ ದೇವಸ್ಥಾನದ ಬಳಿ ನಿಂತಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರು ಡೋರ್ ತೆಗೆದು ನಿಂತಿದ್ದು, ಈ ವೇಳೆ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಕೂಡಲೆ ಕೆಆರ್ ಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೇ, ಚಿಕಿತ್ಸೆ ಫಲಕಾರಿಯಾಗದೇ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296