Author: admin

ಎಲ್ಲೆಂದರಲ್ಲಿ ಬೇಕಾ ಬಿಟ್ಟಿಯಾಗಿ ನೀರು, ರೆಡಿ ಜ್ಯೂಸುಗಳನ್ನು ಬಾಯಾರಿಕೆಗಳಾಗಿ ಕುಡಿದು ಎಲ್ಲೆಂದರಲ್ಲಿ ಬಿಸಾಡಿ ಮಾರ್ಗದ ಬದಿ ಪೇಟೆ ಪಟ್ಟಣಗಳನ್ನು ಗಲೀಜು ಮಾಡಿ ಅದಕ್ಕೊಂದು ಸೂಕ್ತ ವ್ಯವಸ್ಥೆ ನೀಡಿ ಮಾದರಿಯಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮ ಪಂಚಾಯತ್ ಮುಳ್ಳೇರಿಯ ಪೇಟೆಯಲ್ಲಿ ಬಾಟಲ್ ತರಹ ದೊಡ್ಡ ಗಾತ್ರದಲ್ಲಿ ತಂತಿ ಬಲೆಯಲ್ಲಿ ನಿರ್ಮಿಸಿ ಅದರಲ್ಲಿ ಸಾರ್ವಜನಿಕರು ಕುಡಿದ ಬಾಟಲುಗಳನ್ನು ತುಂಬಿಸುವಂತೆ ಮಾಡಿದ್ದಾರೆ. ಎಲ್ಲೆಂದರಲ್ಲಿ  ಬಿಸಾಡಿ ಪರಿಸರ ನೈರ್ಮಲ್ಯ ಮಾಡುವುದಲ್ಲದೆ ಇದನ್ನು ಗುಜುರಿಯವರಿಗೆ ಮಾರಾಟ ಮಾಡುವುದರಿಂದಲೂ ಸ್ವಲ್ಪಮಟ್ಟಿನ ಹಣ ಗಳಿಸಬಹುದು ಹೀಗೆ ಹತ್ತಾರು ಕಡೆ ನಿರ್ಮಿಸಿ ಕೊಡುವುದರಿಂದ ಒಬ್ಬೊಬ್ಬರಿಗೆ ನೋಡಿಕೊಳ್ಳುವಂತೆ ಮಾಡುವುದರಿಂದಲೂ ಆದಾಯದ ಜೊತೆಗೆ ಪರಿಸರವೂ ಸುಂದರವಾಗುತ್ತದೆ. ಒಬ್ಬರಿಗೆ ಕೆಲಸವೂ ಆಗುವುದಲ್ಲದೆ ಇದಕ್ಕಾಗಿ ದೊಡ್ಡ ಬಜೆಟ್ ಏನು ಬೇಡ ಕಸದಿಂದ ರಸ ಎಂಬಂತೆ ಮಾಡಿ ಈಗಾಗಲೇ ಕೆಲವು ಕಡೆ ಡಸ್ಟ್ ಬಿನ್ ಗಳನ್ನು ಇಟ್ಟಿದ್ದರು ಇದರಲ್ಲಿ ಹಾಕುವವರಿಲ್ಲ ಅವರನ್ನು ಇದರಲ್ಲಿ ಹಾಕುವಂತೆ ಮಾಡಿದ್ದಾರೆ ಉಸಿರೇ ಉಸಿರೇ ಬಾಳ ಉಸಿರೇ……ಪರಿಸರ ಸ್ವಚ್ಛತೆಯಾಗುತ್ತದೆ. ಬರಹ: ಕುಮಾರ ಪೆರ್ನಾಜೆ, ಪುತ್ತೂರು ನಮ್ಮತುಮಕೂರಿನ…

Read More

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪ್ರಯತ್ನಗಳನನು ನಡೆಸುತ್ತಿದ್ದರೆ ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಮಟ್ಟದಲ್ಲಿ ಕನ್ನ ಬೀಳುವ ವಿದ್ಯಮಾನವೊಂದು ತುಮಕೂರು ಜಿಲ್ಲೆಯಲ್ಲಿ  ನಡೆಯುತ್ತಿದೆ. ಇಲ್ಲಿನ ವೈನ್ ಶಾಪ್, ಬಾರ್ ಗಳಲ್ಲಿ ಮದ್ಯದ ಖರೀದಿಯ ಬಿಲ್ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.  ಈ ಬಗ್ಗೆ ಅಬಕಾರಿ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿದಾಗ ಈ ಸಂಗತಿ ತಿಳಿದು ಬಂದಿಲ್ಲ, ಚೆಕ್ ಮಾಡುವುದಾಗಿ ಆರಿಕೆ ಉತ್ತರ ನೀಡುತ್ತಾರೆ. ತುಮಕೂರು ಪಟ್ಟಣದ ಅಂಗಡಿ ಹೆಸರು ಶ್ರೀನಿವಾಸ ವೈನ್ಸ್ Licence no EXE/ML TMK/CLl 2/47 ಸನ್ನದುದಾರರ ಹೆಸರು ಡಿ ಎಸ್ ಕುಮಾರ್ ಬಿನ್ ದಶರಥಯ್ಯ ಎಂಬುವ ಹೆಸರಿನಲ್ಲಿರುವ ವೈನ್ಸ್ ನಲ್ಲಿ ನಿಗದಿತ ಬೆಲೆಗಿಂತ ಹೆಚ್ಚು ಹಣ ಪಡೆಯುತ್ತಿರುವ ವಿಡಿಯೋ ಸಮೇತ ಅಬಕಾರಿ DC ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ,  ತುಮಕೂರು ಜಿಲ್ಲೆಯ ಅಬಕಾರಿ ಅಧಿಕಾರಿಗಳು ಈ ದಂಧೆಯಲ್ಲಿ ಭಾಗಿಯಾಗಿ ಗ್ರಾಹಕರಿಂದ ಹೆಚ್ಚು ಹಣವನ್ನು ಸಂಗ್ರಹಿಸುತ್ತಿದ್ದಾರೆ. ಇದಕ್ಕೆ  ಹಲವು ಸಾಕ್ಷಿ ದಾಖಲೆಗಳು ಇವೆ ಮುಂದಿನಗಳಲ್ಲಿ ಉನ್ನತಮಟ್ಟದಲ್ಲಿ ಸಂವಿಧಾನ…

Read More

ಬೆಂಗಳೂರು: ಪ್ರೊ. ರಾಜೀವ್ ಗೌಡ ಅವರು ಉತ್ತಮ ತಿಳಿವಳಿಕೆ, ಕಾಳಜಿ, ಜನಪರ ಸಿದ್ಧಾಂತ ಹೊಂದಿರುವ ಅರ್ಹ ಅಭ್ಯರ್ಥಿ. ಇವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೆದ್ದೇ ಗೆಲ್ಲುವ ಅವಕಾಶಗಳಿವೆ ಎಂದು ಸಿ.ಎಂ. ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ‌ ಮಹಿಳಾ ಸಮಾವೇಶ ಮತ್ತು ಬೂತ್ ಮುಖಂಡರುಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಿ.ಎಂ. ಸಿದ್ದರಾಮಯ್ಯ ಅವರು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಂದಲೇ ಗೋ-ಬ್ಯಾಕ್ ಅನ್ನಿಸಿಕೊಂಡ ಶೋಭಾ ಕರಂದ್ಲಾಜೆ ಅವರಿಗೆ ಇಲ್ಲಿ ಟಿಕೆಟ್ ಕೊಟ್ಟಿದ್ದಾರೆ. ಉತ್ತರ ಲೋಕಸಭಾ ಕ್ಷೇತ್ರದ ಪ್ರಜ್ಞಾವಂತ ಮತದಾರರು ಶೋಭಾ ಅವರಿಗೆ ಇಲ್ಲಿಂದಲೂ ನೀವು ವಾಪಾಸ್ ಕಳಿಸಿ ಎಂದು ಕರೆ ನೀಡಿದರು. ಶೋಭಾ ಕರಂದ್ಲಾಜೆ ಅವರು ಐದು ವರ್ಷಗಳ ಕಾಲ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ಒಂದೇ ಒಂದು ದಿನವೂ ದ್ವನಿ ಎತ್ತಲಿಲ್ಲ. ಇಂಥವರಿಂದ ನಿಮ್ಮ ಮತಕ್ಕೆ ಬೆಲೆ ಬರುತ್ತದಾ? ನೀತಿ ಆಯೋಗದ ಉಪಾಧ್ಯಕ್ಷರಾಗಿ, ಉನ್ನತ ಶೈಕ್ಷಣಿಕ ಅರ್ಹತೆ ಮತ್ತು ತಿಳಿವಳಿಕೆ ಹೊಂದಿ ರಾಜ್ಯಕ್ಕೆ…

Read More

ಬೆಂಗಳೂರು: ಮೋದಿಯವರ ಎರಡನೇ ಸುತ್ತಿನ ಚುನಾವಣಾ ಪ್ರಚಾರ ಇದಾಗಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಏ.14ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಡಾ.ಕೆ. ಸುಧಾಕರ್ ಸ್ಪರ್ಧಿಸಿರುವ ಚಿಕ್ಕಬಳ್ಳಾಪುರ ಹಾಗೂ ಶೋಭಾ ಕರಂದ್ಲಾಜೆ ಸ್ಪರ್ಧಿಸಿರುವ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಲ್ಲಿ ರೋಡ್ ಶೋ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರದ ದೇವನಹಳ್ಳಿಯಲ್ಲಿ ಸಾರ್ವಜನಿಕ ಸಭೆ ಆಯೋಜನೆಗೆ ಸಿದ್ಧತೆ ನಡೆಸಿದೆ. ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಲ್ಲಿ ಎರಡು ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡು ರೋಡ್ ಶೋ ನಡೆಸಲು ಪಕ್ಷ ಯೋಚಿಸಿದೆ. ಆದರೆ ಪ್ರಧಾನಮಂತ್ರಿ ಕಚೇರಿ ಸೂಚನೆಯನ್ವಯ ಮೋದಿ ಪ್ರವಾಸ, ಪ್ರಚಾರದರೀತಿ, ಸ್ಥಳ ಹಾಗೂ ದಿನಾಂಕ ನಿರ್ಧಾರವಾಗಲಿದೆ ಎಂದು ಮೂಲಗಳು ತಿಳಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಲೋಕಸಭಾ ಚುಣಾವಣೆ ಹಿನ್ನೆಲೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ದೇಶಾದ್ಯಂತ ಬಿಜೆಪಿ ನಾಯಕರು ಟೀಕೆ ಮಾಡುತ್ತಿದ್ದಾರೆ. ಅದರಂತೆ ರಾಜ್ಯ ಬಿಜೆಪಿ ನಾಯಕ ಸಿ. ಟಿ. ರವಿ ಕೂಡ ಟೀಕೆ ಮಾಡಿದ್ದು, “ಕಾಂಗ್ರೆಸ್ ಹೊಸ ಮುಸ್ಲಿಂ ಲೀಗ್” ಎಂದಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ, ಕಾಂಗ್ರೆಸ್ ಹೊಸ ಮುಸ್ಲಿಂ ಲೀಗ್ ಎಂದು ಬರೆದುಕೊಂಡಿದ್ದು, “1936ರ ಮುಸ್ಲಿಂ ಲೀಗ್ ಪ್ರಣಾಳಿಕೆ ಮತ್ತು 2024ರ ಪ್ರಣಾಳಿಕೆಯನ್ನು ಹೋಲಿಕೆ ಮಾಡಿದ್ದಾರೆ. ಮುಸ್ಲಿಂ ಲೀಗ್ ಪ್ರಣಾಳಿಕೆ 1936: ಮುಸ್ಲಿಂ ಲೀಗ್ ಮುಸ್ಲಿಮರ ಷರಿಯಾ ವೈಯಕ್ತಿಕ ಕಾನೂನುಗಳನ್ನು ರಕ್ಷಿಸುತ್ತದೆ. ಮುಸ್ಲಿಂ ಲೀಗ್ ಬಹುಮತದ ವಿರುದ್ಧ ಹೋರಾಡಲಿದೆ. ಮುಸ್ಲಿಮರಿಗೆ ವಿಶೇಷ ವಿದ್ಯಾರ್ಥಿವೇತನ ಮತ್ತು ಉದ್ಯೋಗಕ್ಕಾಗಿ ಹೋರಾಡುತ್ತೇವೆ. ಕಾಂಗ್ರೆಸ್ ಪ್ರಣಾಳಿಕೆ 2024: ಅಲ್ಪಸಂಖ್ಯಾತರಿಗೆ ವೈಯಕ್ತಿಕ ಕಾನೂನುಗಳನ್ನು ಕಾಂಗ್ರೆಸ್ ಖಚಿತಪಡಿಸುತ್ತದೆ. ಭಾರತದಲ್ಲಿ ಬಹುಸಂಖ್ಯಾತವಾದಕ್ಕೆ ಜಾಗವಿಲ್ಲ. ಮುಸ್ಲಿಂ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಅಧ್ಯಯನ ಮಾಡಲು ವಿದ್ಯಾರ್ಥಿವೇತನ ಖಚಿತಪಡಿಸುತ್ತೇವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 …

Read More

ನವದೆಹಲಿ: ದೆಹಲಿ ಸರ್ಕಾರ ಏಪ್ರಿಲ್ ತಿಂಗಳಲ್ಲಿ 5 ದಿನಗಳ ಡ್ರೈ ಡೇ ಘೋಷಿಸಿದೆ. ಅದರ ದಿನಾಂಕಗಳನ್ನೂ ಅಬಕಾರಿ ಇಲಾಖೆ ಪ್ರಕಟಿಸಿದೆ. ಏಪ್ರಿಲ್ ‌ನಲ್ಲಿ ಈ ಐದು ದಿನಗಳ ಕಾಲ ಸರ್ಕಾರ ನಿರ್ಧರಿಸಿದ ದಿನಾಂಕಗಳಲ್ಲಿ ಮದ್ಯದ ಮಾರಾಟ ಸಂಪೂರ್ಣವಾಗಿ ಬಂದ್. ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ದೆಹಲಿ ಸರ್ಕಾರದ ಅಬಕಾರಿ ಇಲಾಖೆಯು ಡ್ರೈ ಡೇ ಕುರಿತು ಆದೇಶವನ್ನು ಹೊರಡಿಸಿದೆ. ಇದರ ಪ್ರಕಾರ, ಏಪ್ರಿಲ್ 11 ರಂದು ಈದ್, ಏಪ್ರಿಲ್ 17 ರಂದು ರಾಮ ನವಮಿ ಮತ್ತು ಏಪ್ರಿಲ್ 21 ರಂದು ಮಹಾವೀರ ಜಯಂತಿಯಂದು ಮದ್ಯದ ಅಂಗಡಿಗಳು ಅಥವಾ ಮಾರಾಟಗಾರರು ತೆರೆಯುವುದಿಲ್ಲ. ಇನ್ನೊಂದೆಡೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿ ಗಡಿಗೆ ಹೊಂದಿಕೊಂಡಿರುವ ಉತ್ತರ ಪ್ರದೇಶದ ಜಿಲ್ಲೆಗಳಲ್ಲೂ ಡ್ರೈ ಡೇ ಘೋಷಿಸಲಾಗಿದೆ. ಅಬಕಾರಿ ಇಲಾಖೆ ಹೊರಡಿಸಿರುವ ಮತ್ತೊಂದು ಆದೇಶದ ಪ್ರಕಾರ, ಉತ್ತರ ಪ್ರದೇಶದ ಗಡಿ ಪ್ರದೇಶಗಳಲ್ಲಿ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿಯಲ್ಲಿ ಏಪ್ರಿಲ್ 24 ರಂದು ಸಂಜೆ 6 ರಿಂದ ಏಪ್ರಿಲ್ 26 ರ…

Read More

ಬೆಂಗಳೂರು: ಚಾಮರಾಜಪೇಟೆಯ ಟಿಆರ್ ಮೀಲ್ ಬಳಿ ಟೈಯರ್ ಅಂಗಡಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಗೋಡೌನ್‌ ನಲ್ಲಿ ಯಾರೂ ಇರಲಿಲ್ಲ. ಶಾರ್ಟ್ ಸರ್ಕ್ಯೂಟ್‌ ನಿಂದ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದೆ. ಮುಂಜಾನೆ 4:30 ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ತಗಲಿರೋ ಕಟ್ಟಡದಲ್ಲಿ ಸುಮಾರು 8 ಟಯರ್ ಅಂಗಡಿಗಳು ಇದ್ದು, ಎಲ್ಲವೂ ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ವಿಜಯನಗರ: ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ನರೇಗಾ ಕಾಮಗಾರಿ ವಿರೋಧಿಸಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರಿಗೆ ಜಾತಿನಿಂದನೆ ಮಾಡಲಾಗಿದ್ದು, ಇದರಿಂದ ಮನನೊಂದ ಮಹಿಳೆಯು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೀದ್ಗಿ ಮೈಲವ್ವ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ   ಪುತ್ರನು ಗ್ರಾಮ ಪಂಚಾಯಿತಿ ಪಿಡಿಒ ಸೇರಿ ಎಂಟು ಜನರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಜಾತಿನಿಂದನೆಯ ದೂರು ದಾಖಲಿಸಿದ್ದಾನೆ. ಹಗರಿಬೊಮ್ಮನಹಳ್ಳಿ ತಾಲೂಕಿನ ಮೋರಿಗೇರಿ ಗ್ರಾಮದಲ್ಲಿ ದೀದ್ಗಿ ಮೈಲವ್ವ ಅವರು ಐದು ಎಕರೆ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡಿದ್ದು, ಕಳೆದ 15-20 ವರ್ಷದಿಂದ ಅವರು ಸಾಗುವಳಿ ಮಾಡುತ್ತಿದ್ದರು ಎನ್ನಲಾಗಿದೆ. ಆದರೆ, ಪಂಚಾಯಿತಿಯಿಂದ ನರೇಗಾ ಕಾಮಗಾರಿ ಕೈಗೊಳ್ಳಲಾಗಿದ್ದು, ದೀದ್ಗಿ ಮೈಲವ್ವ ಅವರು ಸಾಗುವಳಿ ಮಾಡಿದ ಜಮೀನಿನಲ್ಲಿ ಗೋಕಟ್ಟೆ ನಿರ್ಮಿಸಲು ಏಪ್ರಿಲ್‌ 5ರಂದು ಕಾಮಗಾರಿ ಆರಂಭಿಸಿದ್ದನ್ನು ಇವರು ವಿರೋಧಿಸಿದ್ದರು. ಆದರೂ, ಕಾಮಗಾರಿ ಮುಂದುವರಿಸಿದ ಕಾರಣ ನೊಂದ ಮಹಿಳೆಯು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಊಟದ ನಂತರ ಯಾವುದೇ ಕಾರಣಕ್ಕೂ ಹೀಗೆ ಮಾಡ ಬೇಡಿ: ಊಟದ ತಕ್ಷಣ ನಿದ್ರೆಗೆ ಜಾರುವುದರಿಂದ ದುಷ್ಪರಿಣಾಮಗಳುಂಟಾಗಬಹುದು. ಹಾಗಾಗಿ ಈ ಅಭ್ಯಾಸವನ್ನು ಇಂದೇ ಬಿಟ್ಟುಬಿಡಿ. ಏಕೆಂದರೆ ಇದರಿಂದ ನಮ್ಮ ಜೀರ್ಣ ಕ್ರಿಯೆ ಬಹಳಷ್ಟು ತೊಂದರೆ ಆಗುತ್ತದೆ. ತಿಂದ ತಕ್ಷಣ ಮಲಗುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಊಟದ ತಕ್ಷಣ ಮಲಗುವುದರಿಂದ ಜೀರ್ಣಕ್ರಿಯೆಗೆ ಕೆಟ್ಟ ಪರಿಣಾಮ ಬೀರುತ್ತದೆ. ನೀವು ನಿದ್ರೆಗೆ ಜಾರುವುದರಿಂದ ಜೀರ್ಣ ಪ್ರಕ್ರಿಯೆ ನಿಧಾನವಾಗಿ ನಡೆಯುತ್ತದೆ. ಹಾಗಾಗಿ ಸೇವಿಸಿದ ಆಹಾರವು ಸರಿಯಾಗಿ ಜೀರ್ಣವಾಗದೆ ಹೊಟ್ಟೆಯಲ್ಲಿ ಊತ ಮತ್ತು ಅಜೀರ್ಣದಂಥ ಸಮಸ್ಯೆಗಳು ಶುರುವಾಗುತ್ತವೆ. ನೀರು ಕುಡಿಯುವಾಗ ಗಮನವಿರಲಿ, ಈ ತಪ್ಪುಗಳನ್ನ ಮಾಡದಿರಿ: ತಪ್ಪಾದ ರೀತಿಯಲ್ಲಿ ನೀರು ಕುಡಿಯುವುದರಿಂದ ಗಂಟಲು ಕ್ಯಾನ್ಸ‌ರ್ ಉಂಟಾಗುತ್ತದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರು ಕುಡಿಯುವುದನ್ನು ತಪ್ಪಿಸಿ. ಅಧ್ಯಯನದ ಪ್ರಕಾರ, ಪ್ಲಾಸ್ಟಿಕ್ ಬಾಟಲ್ ‌ಗಳಲ್ಲಿ ಮೈಕ್ರೋಪ್ಲಾಸ್ಟಿಕ್ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಅಂಗಾಂಗಕ್ಕೆ ಹಾನಿಯಾಗಬಹುದು. ಒಂದೇ ಬಾರಿಗೆ ಹೆಚ್ಚು ನೀರು ಕುಡಿಯುವುದರಿಂದ ಊತ, ಚಡಪಡಿಕೆ ಹಾಗೂ ಅಮಲು ಉಂಟಾಗುತ್ತದೆ. ಊಟ ಮಾಡುವಾಗ…

Read More

ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಲರಾ ಕಾಯಿಲೆ ಉಲ್ಬಣಗೊಂಡಿದೆ. ಒಂದೆರಡು ಪ್ರಕರಣ ದಾಖಲಾಗುತ್ತದಂತೆ ಶಂಕಿತರ ಮಾದರಿ ಪರೀಕ್ಷೆಗೆ ಮಾಡಲಾಗುತ್ತಿದೆ. ಆಸ್ಪತ್ರೆ ದಾಖಲಾಗುವವರಿ ಸಂಖ್ಯೆ ಹೆಚ್ಚುತ್ತಿದ್ದಂತೆ ಬಿಬಿಎಂಪಿ ಹೈ ಅಲರ್ಟ್ ಆಗಿದೆ. ಬಿಬಿಎಂಪಿ ಆರೋಗ್ಯ ತಂಡದಿಂದ ಶಂಕಿತ ಮಹಿಳೆಯು ವಾಸವಾಗಿರುವ ಸ್ಥಳದಿಂದ ಸುತ್ತಲಿನ 165 ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಿದೆ. ರೋಗ ಹರಡುವ ವಿಧಾನಗಳು, ಶುದ್ಧ ನೀರಿನ ಬಳಕೆ ನೈರ್ಮಲ್ಯದ ಬಗ್ಗೆ ಅರಿವು ಮೂಡಿಸಿ ಆರೋಗ್ಯ ಶಿಕ್ಷಣ ನೀಡಲಾಗಿದೆ. ಕಾಲರಾ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಮಾರ್ಗಸೂಚಿ ಬಿಡುಗಡೆ: ಬಿಸಿಲಿನ ತಾಪ, ಬಿಸಿಗಾಳಿ, ಕಾಲರಾ ಬಗ್ಗೆ ಕಟ್ಟೆಚ್ಚರ ವಹಿಸಲು ಸುತ್ತೋಲೆ ಹೊರಡಿಸಿದ್ದು, ಸಾಂಕ್ರಾಮಿಕ ರೋಗಿಗಳ ಡೇಟಾ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ತಿಳಿಸಿದರು. ಕಲಬುರಗಿ, ಬಾಗಲಕೋಟೆ ಜಿಲ್ಲೆಯಲ್ಲಿ ತಲಾ ಇಬ್ಬರು ಮೃತಪಟ್ಟಿದ್ದು, ಬಿಸಿಲಿನ ತಾಪದಿಂದ ಮೃತಪಟ್ಟಿಲ್ಲ ಎಂಬ ಮಾಹಿತಿ ಬಂದಿದೆ. ಇತರೆ ರೋಗಗಳಿಂದ ಬಳಲುತ್ತಿದ್ದ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಬಿಸಿಲಿ ತಾಪವೂ ಇದಕ್ಕೆ ಕಾರಣ ಅನ್ನೋ…

Read More