Author: admin

ಕೊರಟಗೆರೆ: “ಭಾರತೀಯ ಸಂಸ್ಕೃತಿಯಲ್ಲಿ ಪುಟ್ಟ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವುದು ಕೇವಲ ಶಿಕ್ಷಣದ ಆರಂಭವಲ್ಲ, ಅದು ಜ್ಞಾನ, ಸಂಸ್ಕಾರ ಮತ್ತು ಸತ್ಪ್ರವೃತ್ತಿಯ ಬದುಕಿನತ್ತ ಇಡುವ ಮೊದಲ ಹೆಜ್ಜೆಯಾಗಿದೆ. ಅದರಲ್ಲೂ ದೇವಾಲಯದ ಪವಿತ್ರ ವಾತಾವರಣದಲ್ಲಿ ಗುರುಗಳ ಸಮ್ಮುಖದಲ್ಲಿ ಅಕ್ಷರಾಭ್ಯಾಸ ಮಾಡಿಸುವುದು ಮಕ್ಕಳ ಭವಿಷ್ಯಕ್ಕೆ ಅತ್ಯಂತ ಶುಭಾರಂಭವನ್ನು ನೀಡುತ್ತದೆ,” ಎಂದು ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಡಾ.ಹನುಮಂತನಾಥ ಸ್ವಾಮೀಜಿ ಹೇಳಿದರು. ತಾಲೂಕಿನ ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಬುಧವಾರದಂದು ಕೊರಟಗೆರೆ ಪಟ್ಟಣದ ಕನ್ನಿಕಾ ವಿದ್ಯಾಪೀಠ ಶಾಲೆಯ ಪೂರ್ವಪ್ರಾಥಮಿಕ ವಿಭಾಗದ ಪುಟಾಣಿ ಮಕ್ಕಳಿಗಾಗಿ ಆಯೋಜಿಸಿದ್ದ ವಿಶೇಷ ಅಕ್ಷರಾಭ್ಯಾಸ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. “ಮಕ್ಕಳ ಶಿಕ್ಷಣವು ಉತ್ತಮ ಸಂಸ್ಕಾರ, ನೈತಿಕ ಮೌಲ್ಯಗಳು ಹಾಗೂ ಭಾರತೀಯ ಪರಂಪರೆಯೊಂದಿಗೆ ಆರಂಭವಾದಾಗ ಮಾತ್ರ ಅವರ ವ್ಯಕ್ತಿತ್ವವು ಸದೃಢವಾಗಿ ರೂಪುಗೊಳ್ಳಲು ಸಾಧ್ಯ. ಅಕ್ಷರಾಭ್ಯಾಸವು ಮಗುವಿನ ಜೀವನದ ಮಹತ್ವದ ಸಂಸ್ಕಾರಗಳಲ್ಲಿ ಒಂದಾಗಿದ್ದು, ದೇವರ ಸನ್ನಿಧಿಯಲ್ಲಿ ‘ಓಂ’, ‘ಶ್ರೀ’ ಮತ್ತು ಮೊದಲ ಅಕ್ಷರಗಳನ್ನು…

Read More

ಸರಗೂರು: ತಾಲೂಕಿನ ಪ್ರಸಿದ್ಧ ಬೇಲದಕುಪ್ಪೆ ಶ್ರೀ ಮಹದೇಶ್ವರ ದೇವಸ್ಥಾನಕ್ಕೆ ಆಷಾಢ ಅಮಾವಾಸ್ಯೆ ವಿಶೇಷ ಪೂಜೆಗಾಗಿ ಆಗಮಿಸಿದ್ದ ಸಾವಿರಾರು ಭಕ್ತರು ಬಸ್ ವ್ಯವಸ್ಥೆ ಇಲ್ಲದೆ ತೀವ್ರ ತೊಂದರೆ ಅನುಭವಿಸಿದ ಘಟನೆ ನಡೆದಿದೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಕೊರತೆಯಿಂದಾಗಿ ವೃದ್ಧರು, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಅಸಂಖ್ಯಾತ ಭಕ್ತರು ಕಾಡಿನ ಮಧ್ಯದ ರಸ್ತೆಯಲ್ಲಿ ಹಲವು ಕಿಲೋಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲೇ ದೇವಸ್ಥಾನದತ್ತ ತೆರಳಬೇಕಾದ ಪರಿಸ್ಥಿತಿ ಎದುರಾಯಿತು. ತಾಲೂಕಿನ ಬೇಲದಕುಪ್ಪೆ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಅಂಗವಾಗಿ ಮಂಗಳವಾರದಂದು ವಿಶೇಷ ಪೂಜೆ, ಅಭಿಷೇಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ಮುಂಜಾನೆಯಿಂದಲೇ ದೇವರ ದರ್ಶನ ಪಡೆಯಲು ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಪ್ರವೇಶಕ್ಕೆ ನಿರ್ಬಂಧ ಹೇರಿದ್ದರಿಂದ ಭಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ದೇವರ ದರ್ಶನಕ್ಕೆ ಅವಕಾಶ ನೀಡದೆ ತಡೆದ ಕ್ರಮವನ್ನು ಖಂಡಿಸಿದ ಭಕ್ತರು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ತಕ್ಷಣವೇ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು. ಪ್ರತಿ ವರ್ಷ…

Read More

ಕೊರಟಗೆರೆ: ತಾಲ್ಲೂಕಿನ ಹೊಳವನಹಳ್ಳಿ ಬೆಸ್ಕಾಂ ಶಾಖೆಯಲ್ಲಿ ಸುಮಾರು 8 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ ಸಹಾಯಕ ಇಂಜಿನಿಯರ್ (AE) ಯೋಗೇಶ್ ಅವರಿಗೆ ಬೆಸ್ಕಾಂ ಇಲಾಖೆಯ ಸಿಬ್ಬಂದಿ ಹಾಗೂ ಅಧಿಕಾರಿಗಳಿಂದ ಆತ್ಮೀಯ ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೊರಟಗೆರೆ ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (AEE) ಪ್ರಸನ್ನ ಕುಮಾರ್ ಅವರು ಯೋಗೇಶ್ ಅವರ ಸೇವೆಯನ್ನು ಶ್ಲಾಘಿಸಿ, “ಸಹಾಯಕ ಇಂಜಿನಿಯರ್ ಯೋಗೇಶ್ ಅವರು ಕಳೆದ 8 ವರ್ಷಗಳಿಂದ ಬೆಸ್ಕಾಂ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ, ಸಾರ್ವಜನಿಕರಿಂದ ಸಾಕಷ್ಟು ಜನಮನ್ನಣೆ ಗಳಿಸಿದ್ದಾರೆ. ಇಂತಹ ಪ್ರಾಮಾಣಿಕ ಅಧಿಕಾರಿಯನ್ನು ಕಳುಹಿಸಿಕೊಡುತ್ತಿರುವುದು ಇಲಾಖೆಗೆ ನೋವಿನ ಸಂಗತಿಯಾಗಿದೆ. ಮುಂದಿನ ದಿನಗಳಲ್ಲೂ ಅವರ ಸೇವೆ ಕೊರಟಗೆರೆ ಜನರಿಗೆ ದೊರೆಯುವಂತಾಗಲಿ” ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಹಾಯಕ ಇಂಜಿನಿಯರ್ ಯೋಗೇಶ್,  “ಕೊರಟಗೆರೆ ಹಾಗೂ ಹೊಳವನಹಳ್ಳಿ ಹೋಬಳಿಯ ಜನರು ತುಂಬಾ ಸಹೃದಯರಾಗಿದ್ದಾರೆ. ನಾನು ಇಲ್ಲಿಗೆ ಬಂದು 8 ವರ್ಷಗಳೇ ಕಳೆದರೂ, ಇಲ್ಲಿನ ಜನ ನನ್ನನ್ನು ಪ್ರೀತಿ, ವಿಶ್ವಾಸ ಹಾಗೂ ಸ್ನೇಹದಿಂದ ನೋಡಿಕೊಂಡಿದ್ದಾರೆ. ಈ…

Read More

ಕೊರಟಗೆರೆ: ಇತಿಹಾಸ ಪ್ರಸಿದ್ದ ಪುಣ್ಯ ಕ್ಷೇತ್ರವಾದ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯ ರಾಜಗೋಪುರದ ಕಟ್ಟಡ ಕಾಮಗಾರಿ ಭರದಿಂದ ಸಾಗುತ್ತಿದ್ದು, ಆಂಧ್ರ ಪ್ರದೇಶದ ಉದ್ಯಮಿ ವೆಂಕಟೇಶ್ ಅವರು ಗೋಪುರ ನಿರ್ಮಾಣಕ್ಕೆ 5 ಲಕ್ಷ ದೇಣಿಗೆ ನೀಡಿದ್ದಾರೆ. ಇದೇ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಶ್ವಥ ನಾರಾಯಣ್ ಮಾತನಾಡಿ, ನಮ್ಮ ಕೋಡ್ಲಹಳ್ಳಿ ಗ್ರಾಮದ ವಾಸಿಯಾದ ಕೋಟೆ ವೆಂಕಟಚಲಪ್ಪ ಅವರ ಹೆಸರಿನಲ್ಲಿ ಆಂಧ್ರ ಪ್ರದೇಶದಲ್ಲಿ ಉದ್ಯಮಿಯಾಗಿರುವ ವೆಂಕಟೇಶ್ ಅವರು ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ ನೀಡಿದ್ದು, ಅವರ ಕುಟುಂಬಕ್ಕೆ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ಸದಾ ಒಳಿತನ ಮಾಡಲಿ ಎಂದು ತಿಳಿಸಿದರು. ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ಅಭಿವೃದ್ಧಿ ಸೇವಾ ಸಮಿತಿ ಅಧ್ಯಕ್ಷ ರಾಮಮೂರ್ತಿ ಮಾತನಾಡಿ, ಸಾವಿರಾರು ವರ್ಷಗಳ ಪುರಾತನ ದೇವಾಲಯವನ್ನ ಅಭಿವೃದ್ಧಿ ಪಡಿಸಲು ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ಅಭಿವೃದ್ಧಿ ಸೇವಾ ಸಮಿತಿಯನ್ನ ರಚನೆ ಮಾಡಲಾಗಿದ್ದು, ಆಂಧ್ರ ಪ್ರದೇಶದ ಉದ್ಯಮಿ ವೆಂಕಟೇಶ್ ಅವರು ಗೋಪುರ ನಿರ್ಮಾಣಕ್ಕೆ 5 ಲಕ್ಷ ದೇಣಿಗೆ ನೀಡಿದ್ದಾರೆ. ಈಗಾಗಲೇ ದೇವಸ್ಥಾನದ ರಾಜಗೋಪುರ ಕಾಮಗಾರಿ…

Read More

ಸರಗೂರು: ತಾಲ್ಲೂಕಿನ ಕಾಡುಬೆಗೂರು ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ದಲಿತ ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದ್ದು, ಗ್ರಾಮದಲ್ಲಿ ಸದ್ಯ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಬಿ. ಮಟಕರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಬೆಗೂರು ಗ್ರಾಮದ ನಿವಾಸಿ ಸುಮಾ ಎಂಬುವವರೇ ಹಲ್ಲೆಗೊಳಗಾದ ದಲಿತ ಮಹಿಳೆ. ಅವರು ಎಂದಿನಂತೆ ತಮ್ಮ ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ, ಅದೇ ಗ್ರಾಮದ ನಾಮಧಾರಿ ಸಮಾಜದ ದಾಸಪ್ಪ ಎಂಬುವರ ಮಕ್ಕಳಾದ ವಕೀಲ ಜಯಶಂಕರ್, ಸ್ವಾಮಿ ಹಾಗೂ ಇತರ ಕೆಲವು ವ್ಯಕ್ತಿಗಳು ಅಲ್ಲಿಗೆ ಆಗಮಿಸಿದ್ದಾರೆ. ಈ ವೇಳೆ ಜಮೀನಿನ ವಿಷಯವಾಗಿ ಮಾತಿನ ಚಕಮಕಿ ನಡೆದಿದ್ದು, ಆರೋಪಿಗಳು ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬಳಿಕ ಅವರ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆಯ ಪರಿಣಾಮವಾಗಿ ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ತಕ್ಷಣವೇ ಚಿಕಿತ್ಸೆಗಾಗಿ ಎಚ್.ಡಿ. ಕೋಟೆಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ದಲಿತ ಮಹಿಳೆಯ ಮೇಲಿನ ಈ ದೌರ್ಜನ್ಯವನ್ನು ಖಂಡಿಸಿ ಕಾಡುಬೆಗೂರು ಗ್ರಾಮಸ್ಥರು ಹಾಗೂ ಸ್ಥಳೀಯರು ತೀವ್ರ ಆಕ್ರೋಶ…

Read More

ಸರಗೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬೆಟ್ಟದ ತಾಯಿ ಚಿಕ್ಕ ದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ಅಂಗವಾಗಿ ಮಂಗಳವಾರದಂದು ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಅತ್ಯಂತ ಭಕ್ತಿಭಾವದಿಂದ ನೆರವೇರಿದವು. ಆಷಾಢ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಬೆಟ್ಟದ ತಾಯಿ ಚಿಕ್ಕ ದೇವಮ್ಮನ ದರ್ಶನ ಪಡೆದರೆ ಕಷ್ಟಗಳು ನಿವಾರಣೆಯಾಗುತ್ತವೆ ಎಂಬ ದೃಢ ನಂಬಿಕೆಯಿಂದಾಗಿ, ಬೆಳಗ್ಗೆಯಿಂದಲೇ ದೇವಾಲಯಕ್ಕೆ ಸಹಸ್ರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಮಹಿಳೆಯರು, ಯುವಕರು ಹಾಗೂ ಕುಟುಂಬ ಸಮೇತ ಬಂದಿದ್ದ ಭಕ್ತಾದಿಗಳು ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ತಮ್ಮ ಇಷ್ಟಾರ್ಥಗಳ ಸಿದ್ಧಿಗಾಗಿ ಪ್ರಾರ್ಥಿಸಿದರು. ದೇವಾಲಯದ ಅರ್ಚಕರು ದೇವಿಗೆ ವಿಶೇಷ ಅಭಿಷೇಕ, ಅಲಂಕಾರ ಹಾಗೂ ಮಹಾಮಂಗಳಾರತಿ ನೆರವೇರಿಸಿದರು. ಪೂಜಾ ಕಾರ್ಯಕ್ರಮಗಳ ಬಳಿಕ ಭಕ್ತರಿಗೆ ತೀರ್ಥ-ಪ್ರಸಾದ ವಿತರಣೆ ಮಾಡಲಾಯಿತು. ದಿನವಿಡೀ ಭಕ್ತರ ದಟ್ಟಣೆ ಹೆಚ್ಚಾಗಿದ್ದರಿಂದ, ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಚಿಕ್ಕದೇವಮ್ಮ ದೇವಸ್ಥಾನದ ಪಾರುಪತ್ತೇದಾರ ಮಹದೇವಸ್ವಾಮಿ, ಮುಖಂಡರಾದ…

Read More

ತುಮಕೂರು: ವಿಶ್ವವಿದ್ಯಾನಿಲಯಗಳು ಸಂಖ್ಯೆಯಲ್ಲಿ ವಿಸ್ತರಣೆಯಾಗದೆ ಗುಣಮಟ್ಟದಲ್ಲಿ ಬೆಳೆಯಬೇಕಿದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದರು. ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್‌ನ ಬಿದರಕಟ್ಟೆಯಲ್ಲಿ ಸೋಮವಾರ ನಡೆದ ವಿವಿಧ ಕಟ್ಟಡಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶದಲ್ಲಿ 1200 ವಿಶ್ವವಿದ್ಯಾನಿಲಯಗಳು ಇದ್ದು, 43,000 ಕಾಲೇಜುಗಳು ಹಾಗೂ 43 ದಶಲಕ್ಷ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದು ದೇಶದ ಬಹುದೊಡ್ಡ ಪರಿವರ್ತನೆ. ಆದರೆ ಜಾಗತಿಕವಾಗಿ ಉದ್ಯಮ ಮತ್ತು ಶಿಕ್ಷಣದ ನಡುವೆ ಅಂತರವಿದ್ದು, ತಾವು ಕೊಡುವ ಶಿಕ್ಷಣ ಉದ್ಯಮಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳುವಂತಾಗಬೇಕು. ಈ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯಗಳ ಅನುದಾನ ಆಯೋಗ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಬೇಕು. ಇದಕ್ಕಾಗಿ ಬೋಧಕರ ಕೊರತೆ ನೀಗಿಸಬೇಕು ಹಾಗೂ ಪ್ರಾದೇಶಿಕವಾಗಿ ಸಮಾನಾಂತರ ಬೋಧನೆಗೆ ವ್ಯವಸ್ಥೆ ಕಲ್ಪಿಸಬೇಕು. ಈ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಅವಶ್ಯಕತೆಯಿದೆ ಎಂದು ತಿಳಿಸಿದರು. ಭಾರತದ ಇತಿಹಾಸದಲ್ಲಿ ಮೊದಲಿನಿಂದಲೂ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ…

Read More

ತುಮಕೂರು: ಶುದ್ಧಿ ಚಾರಿಟಬಲ್ ಆಂಡ್ ಎಜುಕೇಷನಲ್ ಟ್ರಸ್ಟ್, ಪತಂಜಲಿ ಯೋಗ ಶಿಕ್ಷಣ ಸಮಿತಿ ಸಹಯೋಗದೊಂದಿಗೆ ನಗರದ ಬೆಳಗುಂಬದ ಕೆಂಪೇಗೌಡ ಬಡಾವಣೆಯ ಶ್ರೀ ಚಂದ್ರ ಯೋಗ ಮಂದಿರದಲ್ಲಿ ಜುಲೈ 15ರಿಂದ ಉಚಿತ ಯೋಗಾಸನ ಪ್ರಾಣಾಯಾಮ, ಧ್ಯಾನ ಹಾಗೂ ಪವರ್ ಯೋಗ ತರಬೇತಿ ಹಮ್ಮಿಕೊಳ್ಳಲಾಗಿದೆ. ಯೋಗವೆಂಬುದು ಒಂದು ಸಾಧನೆ. ಯೋಗ ಬಲ್ಲವನಿಗೆ ರೋಗವಿಲ್ಲ, ಯೋಗದಿಂದ ಬೊಜ್ಜು ದೇಹ, ಮಾನಸಿಕ ಒತ್ತಡ, ಹೃದಯ ಸಂಬಂಧಿ ಕಾಯಿಲೆ, ಸಕ್ಕರೆ ಕಾಯಿಲೆ, ಬಿ.ಪಿ., ಮಂಡಿನೋವು, ಸೊಂಟನೋವು, ಸ್ತ್ರೀಯರ ಮಾಸಿಕ ದೋಷ ಹಾಗೂ ಇತರೆ ಎಲ್ಲಾ ರೋಗಗಳನ್ನು ನಿಯಂತ್ರಣದಲ್ಲಿಡಲು ಮತ್ತು ಮನಸ್ಸಿಗೆ ಶಾಂತಿ ತಂದು ಕೊಡಲು ಯೋಗ ಅತಿ ಮುಖ್ಯ. ಇಂತಹ ಯೋಗ ಅಭ್ಯಾಸಗಳನ್ನು ಪರಿಣತ ಶಿಕ್ಷಕಿಯರಿಂದ ಪಡೆದು ನಿತ್ಯ ಅಭ್ಯಾಸ ಮಾಡಿದಲ್ಲಿ ನಿಮ್ಮ ಆರೋಗ್ಯವು ಉತ್ತಮವಾಗುತ್ತದೆ ಎಂದು ಯೋಗ ಗುರುಗಳೂ ಆದ ನಿವೃತ್ತ ಪ್ರಾಂಶುಪಾಲ ಪ್ರೊ. ಕೆ. ಚಂದ್ರಣ್ಣ ತಿಳಿಸಿದ್ದಾರೆ. ಬೆಳಗುಂಬದ ಚಂದ್ರ ಯೋಗ ಮಂದಿರದಲ್ಲಿ ಯೋಗ ತರಗತಿಗಳು ಆರಂಭವಾಗಲಿವೆ. ಪವರ್ ಯೋಗ, ಫೇಸ್ ಯೋಗ, ಪ್ರಾಣಾಯಾಮ ಮತ್ತು…

Read More

ತಿಪಟೂರು: ನಗರದ ರೈಲ್ವೆ ನಿಲ್ದಾಣವನ್ನು ಸುಮಾರು 23 ಕೋಟಿ ರೂ. ವೆಚ್ಚದಲ್ಲಿ ಅಮೃತ ಭಾರತ್ ಸ್ಟೇಷನ್ ಯೋಜನೆಯಡಿ ಸಮಗ್ರವಾಗಿ ಪುನರ್ ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. ಅವರು ನಗರದ ರೈಲ್ವೆ ನಿಲ್ದಾಣದಲ್ಲಿ ನೈರುತ್ಯ ರೈಲ್ವೆ ಮೈಸೂರು ವಿಭಾಗದಿಂದ, ನೂತನ ಮೆಮು ವಿಶೇಷ ರೈಲಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು. ನಿಲ್ದಾಣದ ಕಟ್ಟಡದ ವಿಸ್ತರಣೆ, ಹೊಸ ಪ್ಲಾಟ್ ಫಾರ್ಮ್ ಶೆಡ್‌ಗಳ ನಿರ್ಮಾಣ, ಮೂರು ಲಿಫ್ಟ್‌ಗಳು ಸೇರಿದಂತೆ, ಎರಡು ಎಸ್ಕಲೇಟರ್‌ಗಳು, 12 ಮೀಟರ್ ಅಗಲದ ಪಾದಚಾರಿ ಮೇಲ್ಸೇತುವೆ ಸೇರಿದಂತೆ ರೈಲ್ವೆ ನಿಲ್ದಾಣಕ್ಕೆ ಮೂಲಭೂತ ಸೌಕರ್ಯಗಳ ಮೂಲಕ ಹೈಟೆಕ್ ಸ್ಪರ್ಶ ನೀಡುತ್ತಿದ್ದೇವೆ. ಈ ಭಾಗದ ಸಾರ್ವಜನಿಕರ ಬಹು ಬೇಡಿಕೆಯಾದ ಮಧ್ಯಾಹ್ನದ ಸಮಯದಲ್ಲಿ ರೈಲು ಅವಶ್ಯಕತೆ ಇದ್ದು, ನೂತನವಾಗಿ ವಿಶೇಷ ಮೆಮು ರೈಲಿಗೆ ಹಸಿರು ನಿಶಾನೆ ತೋರಿಸಿದೆ ಎಂದು ತಿಳಿಸಿದರು. ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ (ಹೆಬ್ಬಾಕ), ದಿಶಾ ಸಮಿತಿ ಸದಸ್ಯ ಆಯರಹಳ್ಳಿ…

Read More

ಗುಬ್ಬಿ: ಓದುವಂತಹ ಸಂದರ್ಭದಲ್ಲಿ ಯಾವುದೇ ಮಾದಕ ವ್ಯಸನಗಳಿಗೆ ನೀವು ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್ ಹೇಳಿದರು. ಅವರು ಪಟ್ಟಣದ ಚಿದಂಬರ ಆಶ್ರಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಸಮಾಜ ನಿರ್ಮಾಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದಂತ ಚಿಕಿತ್ಸಕಿ ಡಾ.ಪ್ರಕೃತಿ ಮಾತನಾಡಿ, ಯಾವುದೇ ದುಶ್ಚಟಗಳು ಮೊದಲಿಗೆ ಆಹ್ಲಾದಕರವನ್ನು, ಮನೋರಂಜನೆಯನ್ನು ನೀಡಬಹುದು. ನಂತರದ ದಿನದಲ್ಲಿ ಅವುಗಳು ನಿಮಗೆ ಚಟವಾಗುತ್ತವೆ, ನೀವು ಬಿಡುತ್ತೇವೆ ಎಂದರೂ ಅವು ನಿಮ್ಮನ್ನು ಬಿಡದಂತೆ ಕಾಡುತ್ತವೆ. ಓದುವಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ವ್ಯಕ್ತಿತ್ವದ ಮೌಲ್ಯ ಶಿಕ್ಷಣವನ್ನು ಕಲಿಯಬೇಕು ಎಂದು ಹೇಳಿದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಪ್ರಸನ್ನ ದೊಡ್ಡಗುಣಿ, ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ವಿದ್ಯಾರ್ಥಿಗಳು, ಧರ್ಮಸ್ಥಳ ಸಂಸ್ಥೆಯ ವಲಯ ಆನಂದ್ ಸೇರಿದಂತೆ ಇನ್ನಿತರರಿದ್ದರು. ಇತ್ತೀಚಿನ ದಿನಗಳಲ್ಲಿ ಹಳ್ಳಿಯಿಂದ ನಗರದವರೆಗೂ ಕೂಡ ಮಾದಕ ವಸ್ತುಗಳು ಕೈಗೆ ಸಿಗುವಂತಾಗಿರುವುದು ನಿಜವಾಗಿಯೂ…

Read More