Author: admin

ಕಲಬುರಗಿ: ಗುಟ್ಕಾ ತಿನ್ನಬೇಡ ಎಂದು ಅಜ್ಜಿ ಬುದ್ಧಿ ಹೇಳಿದ್ದಕ್ಕೆ ಬಾಲಕನೊಬ್ಬ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಶನಿವಾರ ನಡೆದಿದೆ. ರೋಹಿತ್ ಮಣ್ಣಾಂಕಲಗಿ ಆತ್ಮಹತ್ಯೆ ಮಾಡಿಕೊಂಡ ಬಾಲಕ. ಅಫಜಲಪುರ ತಾಲೂಕಿನ ಕರ್ಜಗಿ ಗ್ರಾಮದ ರೋಹಿತ್ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ದಮಯಂತಿ ಎಂಬ ಅಜ್ಜಿ ತನ್ನ ಮೊಮ್ಮಗನನ್ನು ಕಳೆದ ಏಳೆಂಟು ವರ್ಷಗಳಿಂದ ಸಾಕಿ ಸಲುಹಿ, ವಿದ್ಯಾಭ್ಯಾಸ ಕೊಡಿಸುತ್ತಿದ್ದಳು. ಅಜ್ಜಿಗೆ ಮೊಮ್ಮಗ ಗುಟ್ಕಾ ತಿನ್ನುವ ವಿಚಾರ ಆತನ ಸ್ನೇಹಿತರಿಂದ ಗೊತ್ತಾಗಿದ್ದು, ತಿನ್ನಬೇಡಾ ಎಂಬ ಬುದ್ಧಿಮಾತುಗಳನ್ನು ಹೇಳಿದ್ದಾರೆ.  ಬುದ್ಧಿವಾದದ ಮಾತುಗಳನ್ನು ಹೇಳಿದ ಒಂದೇ ಕಾರಣಕ್ಕಾಗಿ, ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಅಫಜಲಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ನಟ ದರ್ಶನ್ ಅವರ ಡೆವಿಲ್ ಸಿನಿಮಾದ `ಇದ್ರೆ ನೆಮ್ದಿಯಾಗ್ ಇರ್ಬೇಕ್‌ʼ ಹಾಡು ಇಂದು ಬಿಡುಗಡೆಯಾಗಿದ್ದು, ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಈ ಹಾಡಿನ ಬಿಡುಗಡೆಗೆ ದರ್ಶನ್ ಅಭಿಮಾನಿಗಳು ಹಲವು ದಿನಗಳಿಂದ ಕಾಯುತ್ತಿದ್ದರು. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನದಲ್ಲಿ ದೀಪಕ್ ಬ್ಲೂ ಹಾಡಿಗೆ ಧ್ವನಿಯಾಗಿದ್ದಾರೆ. ಆಗಸ್ಟ್ 15ರಂದು ಈ ಹಾಡು ಬಿಡುಗಡೆ ಆಗಬೇಕಿತ್ತು. ಆದ್ರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದ ಕಾರಣದಿಂದಾಗಿ, ಆಗಸ್ಟ್ 14ರಂದು ದರ್ಶನ್ ಮತ್ತೆ ಜೈಲುಪಾಲಾದರು. ಇಂದು ಈ ಹಾಡನ್ನು ರಿಲೀಸ್‌ ಮಾಡಲಾಗಿದೆ. ಚಿತ್ರದ ನಿರ್ದೇಶಕ ಪ್ರಕಾಶ್ ವೀರ್, ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ದರ್ಶನ್ ಜೊತೆ ಚರ್ಚಿಸಿ ಇಂದು ಹಾಡನ್ನು ಬಿಡುಗಡೆ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಎಂಬ RSS ಗೀತೆಯ ಮೊದಲ ಕೆಲವು ಸಾಲುಗಳನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸದನದಲ್ಲಿ ಹಾಡಿದ ನಂತರ, ಆಡಳಿತಾರೂಢ ಕಾಂಗ್ರೆಸ್ ಶಾಸಕ ಎಚ್‌.ಡಿ.ರಂಗನಾಥ್ ಕೂಡ ಭಾನುವಾರ RSS ಗೀತೆಯ ಆರಂಭಿಕ ಸಾಲುಗಳನ್ನು ಹಾಡಿ ಹೊಗಳಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್‌ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಂಗನಾಥ್, RSS ಗೀತೆ ‘ನಮಸ್ತೆ ಸದಾ ವತ್ಸಲೇ’ದ ಆರಂಭಿಕ ಸಾಲುಗಳನ್ನು ಹಾಡಿದರು. ಈ ಗೀತೆ ‘ತುಂಬಾ ಒಳ್ಳೆಯ ಹಾಡು’. ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಅದನ್ನು ಹಾಡಿದ ನಂತರ ನಾನು ಅದನ್ನು ಕೇಳಿದೆ’ ಎಂದು ಹೇಳಿದರು. ‘ನಾನು ಅದರ ಅರ್ಥವನ್ನು ಓದಿದ್ದೇನೆ. ನಾವು ಹುಟ್ಟಿದ ಭೂಮಿಗೆ ನಮಸ್ಕರಿಸಬೇಕು ಎಂದು ಅದು ಹೇಳುತ್ತದೆ. ಅದರಲ್ಲಿ ನನಗೆ ಯಾವುದೇ ತಪ್ಪಿಲ್ಲ. ನಮ್ಮದು ಜಾತ್ಯತೀತ ಪಕ್ಷ ಮತ್ತು ನಾವು ಇತರರಿಂದ ಒಳ್ಳೆಯದನ್ನು ಸ್ವೀಕರಿಸಬೇಕು’ ಎಂದು ಹೇಳಿದರು. ಬಿಜೆಪಿಯನ್ನು ಟೀಕಿಸಿದ ಅವರು, ಬಲಪಂಥೀಯರು ಜಾತಿ ಮತ್ತು ಧರ್ಮವನ್ನು ವಿಭಜಿಸಲು ಒತ್ತಾಯಿಸುತ್ತಾರೆ. ಅದನ್ನು ನಾವು ವಿರೋಧಿಸುತ್ತೇವೆ. ಅವರ ಸಿದ್ಧಾಂತವು ನಮ್ಮ ಸಿದ್ಧಾಂತಕ್ಕೆ…

Read More

ತುಮಕೂರು: ಚೆನ್ನೈ–ಬೆಂಗಳೂರು ರಸ್ತೆ ಕಾರಿಡಾರ್‌ ನಂತೆ ತುಮಕೂರು–ಬೆಂಗಳೂರು ರೈಲ್ವೆ ಕಾರಿಡಾರ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಶನಿವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು–ಬೆಂಗಳೂರು ನಡುವೆ ನಾಲ್ಕು ಪಥದ ರೈಲ್ವೆ ಹಳಿ ನಿರ್ಮಾಣಕ್ಕೆ ಸರ್ವೆ ಆಗಿದ್ದು, ಡಿಪಿಆ‌ ಆಗಬೇಕಾಗಿದೆ ಎಂದು ಹೇಳಿದರು. ನಗರದ ಹೊರವಲಯದ ತಿಮ್ಮರಾಜನಹಳ್ಳಿ ಬಳಿ ಬೃಹತ್ ರೈಲ್ವೆ ಗೋದಾಮು ನಿರ್ಮಾಣ ಸಂಬಂಧ ಕೆಐಎಡಿಬಿ ಅಧಿಕಾರಿಗಳೊಂದಿಗೆ ಈಗಾಗಲೇ ಚರ್ಚೆ ನಡೆಸಲಾಗಿದೆ. ಪಾವಗಡ-ಮಡಕಶಿರಾ-ಮಧುಗಿರಿ ಮಾರ್ಗದ ರೈಲು ಮಾರ್ಗದ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ. ಹಾಗೆಯೇ ತುಮಕೂರು-ಊರುಕೆರೆ, ಸಿರಾ- ತಾವರೆಕೆರೆ ಮಾರ್ಗದ ರೈಲು ಮಾರ್ಗ ಕಾಮಗಾರಿಗೆ ಈಗಾಗಲೇ ಟೆಂಡರ್ ಆಗಿದೆ. ಮು೦ದಿನ 10-15 ವರ್ಷ ಗಳಲ್ಲಿ ತುಮಕೂರು ಬೆಂಗಳೂರಿಗೆ ಸರಿಸಮನಾಗಿ ಬೆಳವಣಿಗೆಯಾಗುತ್ತದೆ. ಇದಕ್ಕೆ ಅಗತ್ಯ ಇರುವ ಎಲ್ಲ ರೀತಿಯ ಅಭಿವೃದ್ಧಿ ಕಾರ್ಯ ಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ರೂ. 4,500 ಕೋಟಿ ವೆಚ್ಚದ ಹಾಸನ, ತಿಪಟೂರು, ಚಿಕ್ಕನಾಯಕನಹಳ್ಳಿ, ಹಿರಿಯೂರು ಎಕ್ಸ್‌ಪ್ರೆಸ್…

Read More

ಸರಗೂರು:  ಮಹಿಳೆಯರ ಬದುಕನ್ನು ಬೆಳಗಿಸುವ ವಿಶೇಷ ಯೋಜನೆಯೇ ಜ್ಞಾನ ವಿಕಾಸ ಕಾರ್ಯಕ್ರಮ’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಳ್ಳೂರು ವಲಯದ ಮೇಲ್ವಿಚಾರಕ ನರಸಿಂಹಮೂರ್ತಿ ತಿಳಿಸಿದರು. ತಾಲೂಕಿನ  ಮುಳ್ಳೂರು ವಲಯದ ಹೊಸಕಡಜಟ್ಟಿ ಕಾರ್ಯಕ್ಷೇತ್ರದಲ್ಲಿ ಪ್ರಕ್ರತಿ ಜ್ಞಾನ ವಿಕಾಸ 5 ವರ್ಷದ ವಾರ್ಷಿಕೋತ್ಸವ ಶನಿವಾರ ಹಮ್ಮಿಕೊಂಡಿದ್ದು, ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಜಾತಿ, ಮತ, ಭೇದ ಇಲ್ಲದೆ ಪ್ರತಿಯೊಂದು ಕುಟುಂಬವೂ ಸಂಸ್ಕಾರಯುತ ಕುಟುಂಬವಾಗಿಸುವತ್ತ ಜ್ಞಾನ ವಿಕಾಸ ಕೇಂದ್ರದ ಮೂಲಕ ಆರೋಗ್ಯ, ಕಾನೂನು, ತರಬೇತಿ ಸೇರಿದಂತೆ ಇತರೆ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು. 4 ವರ್ಷಗಳ ಹಿಂದೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಪಾದಾರ್ಪಣೆ ಮಾಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕಿನಾದ್ಯಂತ ಸಹಸ್ರಾರು ಸಂಘಗಳನ್ನು ಸ್ಥಾಪಿಸಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಕೇವಲ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಿ ಅವರನ್ನು ಸಾಲದ ಸುಳಿಯಲ್ಲಿ ಸಿಲುಕಿಸುವ ಗುರಿ ನಮ್ಮದಲ್ಲ ಮಹಿಳೆಯರಲ್ಲಿ ಉಳಿತಾಯ ಮನೋಭಾವನೆ, ಕುಟುಂಬ ನಿರ್ವಹಣೆ, ಮಹಿಳಾ ಸಬಲೀಕರಣ, ಶಿಕ್ಷಣ, ಆರೋಗ್ಯ ಸೇರಿದಂತೆ ಎಲ್ಲಾ ವಿಭಾಗಗಳಲ್ಲೂ…

Read More

ಬೀದರ್: ಜಿಲ್ಲೆಯ ಹೀರಾಲಾಲ್ ಮತ್ತು ಪನ್ನಾಲಾಲ್  ಪದವಿಪೂರ್ವ ಕಾಲೇಜಿನ ಪ್ರಥಮ ದ್ವಿತೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ಪೋಷಕತ್ವ ಯೋಜನೆ ಕುರಿತು ಮಾಹಿತಿ ನೀಡಲಾಯಿತು. ಪೋಷಕತ್ವ ಯೋಜನೆ ಅಡಿಯಲ್ಲಿ ಮಗುವಿನ ಪಾಲನೆ, ಘೋಷಣೆ, ರಕ್ಷಣೆಗಾಗಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮತ್ತು ಬೋಸ್ಕೋ ಬೆಂಗಳೂರು ಮತ್ತು ಡಾನ್ ಬಾಸ್ಕೋ ಬೀದರ್ ಇವರ ಆದೇಶದ ಮೇರೆಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪೂಜ್ಯ ಪೋಷಕತ್ವ ಯೋಜನೆ ಎಂದರೆ, ಜೈವಿಕ ಕುಟುಂಬವಲ್ಲದ ಬೇರೊಂದು ಕುಟುಂಬಕ್ಕೆ ತಾತ್ಕಾಲಿಕ ಅಥವಾ ವಿಸ್ತರಿಸಲ್ಪಟ್ಟ ಅವಧಿಯವರೆಗೆ 2 ವರ್ಷಕ್ಕೆ ಮೀರದ ಅವಧಿಯವರೆಗೆ ಬಾಲ ನ್ಯಾಯ ಕಾಯ್ದೆ 2005ರ ಕಲಂ 44ರ ಪ್ರಕಾರ ಮಗುವನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ಪೋಷಕತ್ವ ಯೋಜನೆಯ ಬೀದರ್ ಜಿಲ್ಲೆಯ ಸಂಯೋಜಕರಾದ ರಮೇಶ್ ಅವರು ತಿಳಿಸಿದರು. ಕಾಲೇಜಿನ ವಿದ್ಯಾರ್ಥಿಗಳಿಗೆ ದತ್ತು ಮತ್ತು ಪೋಷಕತ್ವ ಯೋಜನೆ ಕುರಿತು ಅರಿವು ಮೂಡಿಸಿದರು. ಪೋಷಕತ್ವ  ಎಂದರೆ ಕಾನೂನು ಪ್ರಕಾರ ಅನಾಥವಾಗಿರುವ ಮಕ್ಕಳಿಗೆ ಲಾಲನೆ ಪಾಲನೆ ಪೋಷಣೆ ಇಂದ…

Read More

ಸರಗೂರು:  ಎಚ್‌.ಡಿ.ಕೋಟೆ ಕ್ಷೇತ್ರದ ಶಾಸಕ ಅರಣ್ಯ ಮತ್ತು ವಸತಿ ವಿಹಾರಧಾಮ ಸಂಸ್ಥೆಗಳ ಅಧ್ಯಕ್ಷ ಅನಿಲ್ ಚಿಕ್ಕಮಾದು ಅವರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಚಿವ ಸ್ಥಾನ ನೀಡಬೇಕೆಂದು  ಯೂತ್ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಮಸಹಳ್ಳಿ ನವೀನ್ ಒತ್ತಾಯಿಸಿದ್ದಾರೆ. ಕ್ಷೇತ್ರದಲ್ಲಿ ಎರಡು ಬಾರಿ ಸತತವಾಗಿ ಗೆಲುವು ಸಾಧಿಸಿ, ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ. ಇಂಥವರಿಗೆ ಸಚಿವ ಸ್ಥಾನ ನೀಡಿದರೆ, ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟೆಯನ್ನು ತೊಲಗಿಸಲು ಸಹಾಯಕವಾಗಬಹುದು. ಸಂಪುಟ ಸಭೆಯಲ್ಲಿ ರಾಜಣ್ಣ ಅವರ ರಾಜೀನಾಮೆಯಿಂದ ತೆರವಾದ ಸ್ಥಾನವನ್ನು ಅನಿಲ್ ಚಿಕ್ಕಮಾಧು ಅವರಿಗೆ ನೀಡಲು ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದರು. ಮೈಸೂರು ಮತ್ತು ಚಾಮರಾಜನಗರ ವ್ಯಾಪ್ತಿಯ ನಾಯಕ ಸಮುದಾಯದ ಪ್ರಭಾವಿ ಮುಖಂಡರು ಹಾಗೂ ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಬೇಕೆಂದು  ಸರ್ಕಾರವನ್ನು ಒತ್ತಾಯಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಪಕ್ಷದ ವರಿಷ್ಠರು ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ಕೆಲಸ ಮಾಡುತ್ತಿರುವುದನ್ನು ಮನಗಂಡು ಸಚಿವ…

Read More

ಕೊರಟಗೆರೆ: ರಾಷ್ಟ್ರೀಯ ಲೋಕಾ ಅದಾಲತ್ ವರ್ಷಕ್ಕೆ 4 ಬಾರಿ ನಡೆಸಲಾಗುತ್ತದೆ. ಸೆ.13ರಂದು ನಡೆಯುತ್ತಿರುವ ರಾಷ್ಟ್ರೀಯ ಲೋಕಾ ಅದಾಲತ್ 2025ರ ಮೂರನೇ ಅದಾಲತ್ ಆಗಿದೆ, ಈ ಅದಾಲತ್ ತುಮಕೂರಿನಲ್ಲಿ ಮಾತ್ರವಲ್ಲ ರಾಷ್ಟ್ರ ವ್ಯಾಪ್ತಿಯಲ್ಲಿ ನಡೆಯುತ್ತದೆ ಎಂದು ತುಮಕೂರಿನ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸ ತಿಳಿಸಿದರು. ಪಟ್ಟಣದ ಜೆಎಂಎಫ್‌ ಸಿ ನ್ಯಾಯಾಲಯದಲ್ಲಿ ತುಮಕೂರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಲೋಕ ಅದಾಲತ್, ಮಧ್ಯಸ್ಥಿಕೆ ಖಾಯಂ ಜನತಾ ನ್ಯಾಯಲಯ ವ್ಯವಸ್ಥೆ ಮೂಲಕ ವ್ಯಾಜ್ಯ ಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಸಂಧಾನದ ಮೂಲಕ ತ್ವರಿತವಾಗಿ ಇತ್ಯರ್ಥ ಮಾಡಿಕೊಳ್ಳಬಹುದು ಎಂದರು. ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಉದ್ಯೋಗ, ವಿದ್ಯುತ್, ಕಳ್ಳತನ, ರಾಜಿ ಆಗಬಲ್ಲ ಅಪರಾಧ, ವೈವಾಹಿಕ, ಸಿವಿಲ್, ರಿಯಲ್ ಎಸ್ಟೇಟ್ ಹಾಗೂ ಜಿಲ್ಲಾ ಗ್ರಾಹಕರ ಪ್ರಕರಣಗಳನ್ನು ಅದಾಲತ್‌ ನಲ್ಲಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ತಿಳಿಸಿದರು. ‘ಅದಾಲತ್‌ನಿಂದ ನ್ಯಾಯಾಲಯದ…

Read More

ಬೀದರ್ : ಮನೆ ಬೀಗ ಮುರಿದು 6.80 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನಗೈದಿರುವ ಘಟನೆ ಬೀದರ್ ನಗರದ ಶಿವನಗರ ಬಡಾವಣೆಯಲ್ಲಿ ನಡೆದಿದೆ. ಮೂಲತಃ ಆಂಧ್ರ ಪ್ರದೇಶದ ಒಡ್ದುಪಾಲಂ ಗ್ರಾಮದ ನಿವಾಸಿ ಶ್ರೀನಿವಾಸಲು ಅವರು ಕುಟುಂಬದೊಂದಿಗೆ ಸುಮಾರು 10 ವರ್ಷದಿಂದ ಶಿವನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಆ.16ರಂದು ಆಂಧ್ರ ಪ್ರದೇಶಕ್ಕೆ ಹೋದಾಗ ಶಿವನಗರದ ಬಾಡಿಗೆ ಮನೆಯ ಬಾಗಿಲು ಒಡೆದು 6. 84 ಲಕ್ಷ ಸಾವಿರ ರೂ. ಮೌಲ್ಯದ 76 ಚಿನ್ನದ ಆಭರಣಗಳು ಮತ್ತು 2 ಸಾವಿರ ರೂ. ನಗದು ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಗರದ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಸರಗೂರು: ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ಅವಕಾಶ ನೀಡಿದರೆ ಸಹಕಾರ ಸಂಘಗಳ ಬಾಗಿಲನ್ನು ಮುಚ್ಚಬೇಕಾಗುತ್ತದೆ ಎಂದು ಹೇಳಿರುವ ಶಾಸಕ ಜಿ.ಟಿ.ದೇವೇಗೌಡರ ಹೇಳಿಕೆಯನ್ನು  ಮಾಜಿ ಎಪಿಎಂಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ  ದೇವಲಾಪುರ ಸಿದ್ದರಾಜು ಖಂಡಿಸುತ್ತೇವೆ ಎಂದರು. ವಿಧಾನಸಭೆಯಲ್ಲಿ ಸೋಮವಾರ ಮಂಡಿಸಲಾದ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ–2025ರ ಮೇಲಿನ ಚರ್ಚೆಯ ವೇಳೆ ಜೆಡಿಎಸ್‌ ನ ಜಿ.ಟಿ.ದೇವೇಗೌಡ ಅವರು, ‘ಸಹಕಾರ ಸಂಘಗಳ ನಿರ್ದೇಶಕರ ಹುದ್ದೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಮೀಸಲಾತಿ ಅಡಿ ನಾಮನಿರ್ದೇಶನ ಮಾಡುವ ಕ್ರಮ ಸರಿಯಲ್ಲ. ಇದರಿಂದ ಸಹಕಾರ ಸಂಘಗಳನ್ನು ಮುಚ್ಚುವ ಸ್ಥಿತಿ ಬರುತ್ತದೆ’ ಎಂದಿದ್ದಾರೆ.ಅದರೆ ಜಿಟಿ ದೇವೇಗೌಡ ಎಸ್ಸಿ ಎಸ್ಟಿ ಸಮುದಾಯದಗಳಿಂದ ಮತಗಳಿಂದ ಇವರು ವಿಧಾನಸಭಾ ಸೇರಿರುವುದು ಜಿಟಿ ದೇವೇಗೌಡ ರವರಿಗೆ ಆತ್ಮ ಸಾಕ್ಷಿ ಎಂಬಂತೆ ಮಾತನಾಡಿರುವುದು ಸರಿಯಲ್ಲ ಎಂದರು. ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ನಾಮ ನಿರ್ದೇಶಿತ ಸದಸ್ಯರ ಸ್ಥಾನ ನೀಡುವುದು ಸರಿಯಲ್ಲ ಎಂಬ ಹೇಳಿಕೆ ಖಂಡನೀಯ  ‘ಜಿ.ಟಿ.ದೇವೇಗೌಡ ಅವರ ಮಾತುಗಳು…

Read More